Tag: ರಾಷ್ದ್ರಧ್ವಜ

  • ಧ್ವಜಾರೋಹಣದ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವು, ಓರ್ವನಿಗೆ ಗಾಯ

    ಧ್ವಜಾರೋಹಣದ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಸಾವು, ಓರ್ವನಿಗೆ ಗಾಯ

    ಹೈದರಾಬಾದ್: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಷ್ದ್ರಧ್ವಜ ಹಾರಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಮೃತಪಟ್ಟಿದ್ದು, ಓರ್ವ ಗಾಯಗೊಂಡಿರುವ ಘಟನೆ ತೆಲಂಗಾಣದ ಪಂತಚೇರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ರಾಷ್ದ್ರಧ್ವಜ ಹಾರಿಸುವ ವೇಳೆ ಧ್ವಜ ಕಟ್ಟಿದ ಕಂಬಕ್ಕೆ 11 ಕೆವಿ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಅನಿಲ್ ಕುಮಾರ್ ಗೌಡ್ (40) ಮತ್ತು ತಿರುಪತಿ (42) ಎಂದು ಗುರುತಿಸಲಾಗಿದೆ. ಮತ್ತೋರ್ವ ಧನಂಜಯ್(35)ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ – ಆರೋಪಿ ಅರೆಸ್ಟ್

    ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಸಂಗರೆಡ್ಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಪತಂಚೇರು ಡಿಎಸ್ಪಿ ಭೀಮ್ ರೆಡ್ಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸ್ಥಳೀಯ ಶಾಸಕ ಗುಡೇಂ ಮಹಿಪಾಲ್ ರೆಡ್ಡಿ ಆಸ್ಪತ್ರೆಗೆ ಆಗಮಿಸಿ ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಮಾಹಿತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಸಾವರ್ಕರ್ ಫೋಟೋ ವಿವಾದ – ಎರಡು ಗುಂಪುಗಳ ಮಧ್ಯೆ ಘರ್ಷಣೆ, ಶಿವಮೊಗ್ಗದಲ್ಲಿ ನಿಷೇಧಾಜ್ಞೆ

    ನಿನ್ನೆಯಷ್ಟೇ ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ ತ್ರಿವರ್ಣ ಧ್ವಜ ಕಂಬಕ್ಕೆ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ 36 ವರ್ಷದ ಸ್ಥಳೀಯ ನಗರ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕ ಮೃತಪಟ್ಟಿದ್ದನು.

    Live Tv
    [brid partner=56869869 player=32851 video=960834 autoplay=true]