Tag: ರಾಹುಲ್ ಭಟ್

  • ಕಾಶ್ಮೀರಿ ಪಂಡಿತ ರಾಹುಲ್ ಭಟ್‌ನನ್ನು ಕೊಂದಿದ್ದ ಭಯೋತ್ಪಾದಕನ ಎನ್‌ಕೌಂಟರ್

    ಕಾಶ್ಮೀರಿ ಪಂಡಿತ ರಾಹುಲ್ ಭಟ್‌ನನ್ನು ಕೊಂದಿದ್ದ ಭಯೋತ್ಪಾದಕನ ಎನ್‌ಕೌಂಟರ್

    ಶ್ರೀನಗರ: ಕಾಶ್ಮೀರಿ ಪಂಡಿತ ರಾಹುಲ್ ಭಟ್, ಅಮರೀನ್ ಭಟ್ ಸೇರಿದಂತೆ ಹಲವು ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಲತೀಫ್ ರಾಥರ್ ಮೇಲೆ ಬುಧವಾರ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲತೀಫ್ ರಾಥರ್ ಸೇರಿದಂತೆ ಮೂವರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಗೆದ್ದಿರೋದು 2024ರಲ್ಲಿ ಅಲ್ಲ, ಮೈತ್ರಿ ಮುರಿದ ಬಳಿಕ ಸಿಎಂ ನಿತೀಶ್ ವಾಗ್ದಾಳಿ

    ಮರೆಯಾಗಿದ್ದ ಎಲ್ಲಾ ಮೂವರು ಎಲ್‌ಇಟಿ ಭಯೋತ್ಪಾದಕರ ಮೇಲೆ ಎನ್‌ಕೌಂಟರ್ ಮಾಡಲಾಗಿದೆ. ಸ್ಥಳದಿಂದ ಮೃತದೇಹಗಳನ್ನು ಪಡೆಯಲಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದಿನ ಎನ್‌ಕೌಂಟರ್ ದೊಡ್ಡ ಯಶಸ್ಸನ್ನು ತಂದಿದೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಪಿಎಸ್‌ಸಿ ಪರೀಕ್ಷೆಯಲ್ಲಿ ಒಟ್ಟಿಗೇ ಪಾಸಾದ್ರು ತಾಯಿ, ಮಗ

    ಮೇ ತಿಂಗಳಲ್ಲಿ, ಭಯೋತ್ಪಾದಕರು ಬದ್ಗಾಮ್‌ನಲ್ಲಿ ಕಂದಾಯ ಇಲಾಖೆಯ ಉದ್ಯೋಗಿಯಾಗಿದ್ದ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಮೇಲೆ ಗುಂಡಿನ ದಾಳಿ ನಡೆಸಿ ಕೊಂದಿದ್ದರು. ಘಟನೆಯ ಬಳಿಕ ಕಾಶ್ಮೀರಿ ಪಂಡಿತ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಬಳಿಕ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಜಮ್ಮು-ಕಾಶ್ಮಿರದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಮುಂದುವರಿಯುತ್ತಿದೆ: ಒಮರ್ ಅಬ್ದುಲ್ಲಾ

    ಜಮ್ಮು-ಕಾಶ್ಮಿರದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಮುಂದುವರಿಯುತ್ತಿದೆ: ಒಮರ್ ಅಬ್ದುಲ್ಲಾ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‍ನಲ್ಲಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ನಡೆದಿದೆ. ಈ ಹಿನ್ನೆಲೆ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಖಂಡಿಸಿದ್ದಾರೆ. ಈ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

    Omar Abdullah

    ಟ್ವೀಟ್‍ನಲ್ಲಿ ಒಮರ್ ಅಬ್ದುಲ್ಲಾ ಅವರು, ರಾಹುಲ್ ಭಟ್ ಮೇಲಿನ ಹಂತಕ ಉಗ್ರಗಾಮಿ ದಾಳಿಯನ್ನು ನಾನು ನಿಸ್ಸಂದಿಗ್ಧವಾಗಿ ಖಂಡಿಸುತ್ತೇನೆ. ತಹಸಿಲ್ ಕಚೇರಿಯಲ್ಲಿ ಸರ್ಕಾರಿ ನೌಕರನಾಗಿದ್ದ ರಾಹುಲ್ ಅವರ ಮೇಲೆ ದಾಳಿ ನಡೆಸಲಾಯಿತು. ಈ ಹತ್ಯೆಯನ್ನು ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ. ಇದು ಮುಂದುವರಿಯುತ್ತೆ. ಇದರಿಂದ ಜಮ್ಮು-ಕಾಶ್ಮೀರದಲ್ಲಿ ಭಯದ ಭಾವನೆ ಬೆಳೆಯುತ್ತ ಹೋಗುತ್ತೆ. ರಾಹುಲ್ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಡು ರಸ್ತೆಯಲ್ಲಿ ಉಪನ್ಯಾಸಕನ ಬರ್ಬರ ಹತ್ಯೆ 

    ಭಟ್ ಅವರ ಜೀವನವು ಇಂದು ಕ್ರೂರವಾಗಿ ನಶಿಸಿರುವುದು ದುರಂತ. ರಾಹುಲ್ ಭಟ್ ವಿಶ್ರಾಂತಿ ಪಡೆಯಿರಿ ಎಂದು ಬರೆದುಕೊಂಡಿದ್ದಾರೆ.

    ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಸರ್ಕಾರಿ ನೌಕರಾಗಿದ್ದರು. ಚದೂರ ಪ್ರದೇಶದಲ್ಲಿನ ಅವರ ಕಚೇರಿಯಲ್ಲಿಯೇ ಭಯೋತ್ಪಾದಕರು ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಈ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಫಲಕಾರಿಯಾಗದೆ ಪ್ರಾಣ ಬಿಟ್ಟರು.

    ಪೊಲೀಸರು ಈ ಕುರಿತು ಮಾಹಿತಿ ಕೊಟ್ಟಿದ್ದು, ಭಟ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಶ್ರೀನಗರದ ಎಸ್‍ಎಂಎಚ್‍ಎಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಪ್ರಾಥಮಿಕ ತನಿಖೆಯಿಂದ ಇಬ್ಬರು ಭಯೋತ್ಪಾದಕರು ಈ ಘೋರ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕೃತ್ಯಕ್ಕೆ ಪಿಸ್ತೂಲ್ ಬಳಸಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ:  ಪಾಕ್‍ನಲ್ಲಿ ಹಿಂದೂ ದೇವಾಲಯ ಧ್ವಂಸ ಮಾಡಿದ 22 ಮಂದಿಗೆ 5 ವರ್ಷ ಜೈಲು ಶಿಕ್ಷೆ 

    ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡ ರಾಹುಲ್ ಭಟ್ ಅವರ ಬರ್ಬರ ಹತ್ಯೆಯನ್ನು ಖಂಡಿಸಿದ್ದಾರೆ. ಈ ಹೇಯ ಭಯೋತ್ಪಾದನಾ ದಾಳಿಯ ಹಿಂದಿರುವವರನ್ನು ಶಿಕ್ಷಿಸಲೇ ಬೇಕು. ದುಃಖತಪ್ತ ಕುಟುಂಬದೊಂದಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಒಗ್ಗಟ್ಟಿನಿಂದ ನಿಂತಿದೆ ಎಂದು ಭರವಸೆ ಕೊಟ್ಟರು.