Tag: ರಿಚ್ಮಂಡ್ ರಸ್ತೆ

  • ಆಕಸ್ಮಿಕವಾಗಿ ಬೆಂಕಿ ತಗುಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್

    ಆಕಸ್ಮಿಕವಾಗಿ ಬೆಂಕಿ ತಗುಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್

    ಬೆಂಗಳೂರು: ಆಕಸ್ಮಿಕವಾಗಿ ಕಾರಿಗೆ ಬೆಂಕಿ ತಗುಲಿ, ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿ ನಡೆದಿದೆ.

    ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲೇ ಹೋಗ್ತಿದ್ದ ವಾಹನ ಸವಾರರು ಎಚ್ಚರಿಸಿ ವಾಹನ ನಿಲ್ಲಿಸಿದ್ದಾರೆ. ನಂತರ ನಡುರಸ್ತೆಯಲ್ಲೆ ಕಾರು ಹೊತ್ತಿ ಉರಿದಿದ್ದು, ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಆರಿಸಿದ್ದಾರೆ.

    ಇದೇ ವೇಳೆ ಟ್ರಾಫಿಕ್ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಪರದಾಡುವಂತಾಯ್ತು. ಘಟನೆಯಿಂದ ಕಾರಿನ ಮುಂಭಾಗ ಸಂಪೂರ್ಣ ಸುಟ್ಟುಹೋಗಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ.

    ಕಾರ್ ಚಾಲಕ ಎಂಜಿ ರಸ್ತೆಯಿಂದ ಮನೆಗೆ ಹೋಗುವಾಗ ಘಟನೆ ನಡೆದಿದೆ. ಅಶೋಕನಗರ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.