Tag: ರಿತ್ವಿಕ್ ಕಾಯ್ಕಿಣಿ

  • ‘ಕೆಂಡ’ದಿಂದ ಹೊರಬಂತು ತಾಜಾ ಸುದ್ದಿಯ ಲಿರಿಕಲ್ ವೀಡಿಯೋ

    ‘ಕೆಂಡ’ದಿಂದ ಹೊರಬಂತು ತಾಜಾ ಸುದ್ದಿಯ ಲಿರಿಕಲ್ ವೀಡಿಯೋ

    `ಗಂಟುಮೂಟೆ’ ಚಿತ್ರತಂಡದ ಕಡೆಯಿಂದ ರೂಪುಗೊಂಡಿರುವ `ಕೆಂಡ’ (Kenda) ಚಿತ್ರ ಹಂತ ಹಂತವಾಗಿ ಕುತೂಹಲದ ಕಾವೇರಿಸಿಕೊಂಡು ಸಾಗಿ ಬಂದಿತ್ತು. ಇದೀಗ ಕೆಂಡ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಈ ಹೊತ್ತಿನಲ್ಲಿ ಜಯಂತ್‍ಕಾಯ್ಕಣಿ ರಚಿಸಿದ `ತಾಜಾ ತಾಜಾ ಸುದ್ದಿ’ ಗೀತೆಗೆ ಪುತ್ರ ರಿತ್ವಿಕ್‍ಕಾಯ್ಕಣಿ ಪ್ರಥಮ ಬಾರಿ ಸಂಗೀತ ಸಂಯೋಜಿಸಿರುವ ಲಿರಿಕಲ್ ವಿಡಿಯೋ ಹಾಡಿನ ಬಿಡುಗಡೆ ಕಾರ್ಯಕ್ರಮ ಎಸ್‍ಆರ್‍ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ತಂಡಕ್ಕೆ ಶುಭಹಾರೈಸಲು ಯೋಗರಾಜಭಟ್, ಸಂಗೀತ ಸಂಯೋಜಕ ವಿ.ಹರಿಕೃಷ್ಣ, ಡಿ.ಬೀಟ್ಸ್‍ನ ಶೈಲಜಾನಾಗ್ ಮತ್ತು ಜಯಂತ್‍ಕಾಯ್ಕಣಿ ಆಗಮಿಸಿದ್ದರು. ರೂಪಾ ರಾವ್ ಕೆಂಡ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದಾರೆ. ಸಹದೇವ ಕೆಲವಡಿ ಛಾಯಾಗ್ರಹಣ, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲಿಯೂ ಭಾಗಿಯಾಗಿದ್ದಾರೆ.

    ವಿಕಟ ಕವಿ ಯೋಗರಾಜಭಟ್ ಮಾತನಾಡಿ, ಎರಡನೇ ಲಾಕ್‍ಡೌನ್ ಸಂದರ್ಭದಲ್ಲಿ ರಿತ್ವಿಕ್‍ಕಾಯ್ಕಣಿ ಜೊತೆ ದೋಸ್ತಿ ಶುರುವಾಯಿತು. ಸದ್ಯದ ಪರಿಸ್ಥಿತಿಯಲ್ಲಿ ಹಾಡು ಇಲ್ಲದೆ ಸಿನಿಮಾ ಬಿಡುಗಡೆ ಅಂತ ಬಂದಾಗ ಎರಡು ತರದ ಅಪಾಯದಲ್ಲಿ ತಗಲಾಕೊಳ್ತಾರೆ. ಬೆಳಿಗ್ಗೆ ಸ್ನಾನದ ಮನೆಯಲ್ಲಿ ಇರುವಾಗ ನನ್ನ ಹಾಡು ಇಡೀ ಪ್ರಪಂಚ ತಿರುಗಿ ನೋಡುತ್ತೆ ಎನ್ನುವ ಕನಸು. ಹೊರಗೆ ಬಂದಾಗ ಯಾರಿಗೂ ಗೊತ್ತಿಲ್ಲವೆಂಬ ದುಗುಡ. ಒಂದು ವರ್ಷ ಕಷ್ಟಪಟ್ಟು ಚಿತ್ರ ಬಿಡುಗಡೆ ಮಾಡಿದ ನಂತರ, ಚಿತ್ರಮಂದಿರದಿಂದ ಆಚೆ ಬರುವ ಪ್ರೇಕ್ಷಕ ಮುಂದೆ ಯಾವುದು ಅಂತ ಕೇಳುತ್ತಾನೆ. ಆಗ ಅದಕ್ಕಿಂತಲೂ ಉತ್ತಮವಾದುದನ್ನು ಕೊಡಬೇಕು ಎನ್ನುವ ಛಲ ಹುಟ್ಟಿಕೊಳ್ಳುವುದು ಒಂಥರ ಡೇಂಜರ್. ನಾನು ಅಂದುಕೊಂಡಿದ್ದು ಏನು ಇಲ್ಲ. ಹಾಗೆ ನಾಲ್ಕು ಮಂದಿ ತಿರುಗಿ ನೋಡುವಂತೆ ಮಾಡೋದು ತುಂಬ ಕಷ್ಟದ ಕೆಲಸ. ಅಲ್ಲಿ ಸಕ್ಸಸ್ ಕಂಡರೆ, ಇಲ್ಲಿ ವಿರುದ್ಧವಾಗಿರುತ್ತದೆ. ಪ್ರತಿ ಸಿನಿಮಾವು ಇವರೆಡು ಡೇಂಜರ್‍ಗೆ ಬದುಕಬೇಕು. ಇವರೆಡು ಡೇಂಜರ್‍ಗಳ ಮಧ್ಯೆ ಇರೋದು ಸೃಜನಾತ್ಮಕ ಕ್ರಿಯೆ. ಇವೆಲ್ಲವು ನಿಮ್ಮೋಂದಿಗೆ ಸದಾ ಕಾಲ ಕಾಡಲಿ ಎಂದು ಮಾತಿಗೆ ವಿರಾಮ ಹಾಕಿದರು.

    ಹಾಡು ಅನ್ನೋದು ಮಾರ್ಕೆಟ್‍ದಲ್ಲಿ ಎಷ್ಟು ಇದೆ ಅಂದರೆ, ನೂರಾರು ಹಾಡುಗಳ ಮಧ್ಯೆ ನಮ್ಮ ಗೀತೆಯನ್ನು ಹುಡುಕುವುದು ಸವಾಲಿನ ಕೆಲಸ ಆಗಿರುತ್ತದೆ. ಅವುಗಳ ಮಧ್ಯೆ ನಮ್ಮ ಸಾಂಗ್ ಗುರುತಿಸಿಕೊಳ್ಳಬೇಕೆಂಬುದು ಪ್ರತಿಯೊಬ್ಬ ಸಂಗೀತ ನಿರ್ದೇಶಕನ ಆಸೆಯಾಗಿರುತ್ತದೆ. ಬರಹಗಾರನ ಶ್ರಮ ಗೆದ್ದಾಗ ಖುಷಿ ಕೊಡುತ್ತೆ. ಸೋತಾಗ ಜವಬ್ದಾರಿ ಹೆಚ್ದಾಗುತ್ತದೆ. ಇದರಲ್ಲಿರುವ ಮೂರು ಗೀತೆಗಳು ಯಾವುದೇ ಸಂಗೀತದ ಛಾಯೆ ಕಾಣಿಸುವುದಿಲ್ಲ. ಅದೇ ತಂಡದ ಮೊದಲ ಗೆಲುವು ಎನ್ನಬಹದು. ಅದನ್ನು ಆಲಿಸಿದಾಗ ಹೊಸತನ ಕಂಡುಬರುತ್ತದೆ. ಹೀಗೆ ನಿಮ್ಮಗಳ ವಿನೂತನ ಪ್ರಯತ್ನ ಯಶಸ್ವಿಯಾಗಲಿ ಅಂತಾರೆ ವಿ.ಹರಿಕೃಷ್ಣ. ಶೈಲಜಾನಾಗ್ ಹೇಳುವಂತೆ ಪ್ರತಿಯೊಂದು ಸಿನಿಮಾದ ಹಿಂದೆ ಶ್ರಮ ಇದ್ದೇ ಇರುತ್ತದೆ. ಯಾವುದೇ ನಿರ್ಮಾಪಕ ಹಣ ವಾಪಸ್ಸು ಬರಲೆಂದೇ ಬಂಡವಾಳ ಹೂಡುತ್ತಾನೆ. ಸುಮ್ಮನೆ ತಮಾಷೆಗೆ ಮಾಡುವುದಿಲ್ಲ. ಇದು ಕೂಡ ವ್ಯಾಪಾರ. ಬೇರೆ ಭಾಷೆಗಳ ನಡುವೆ ನಮ್ಮ ಚಿತ್ರ ಗುರುತಿಸಿಕೊಳ್ಳುವಂತೆ ಮಾಡಬೇಕಾಗಿದೆ. ಆಗ ಮಾತ್ರ ಎಲ್ಲಾ ಕಡೆ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂಬುದು ಅವರ ಅಭಿಪ್ರಾಯವಾಗಿತ್ತು.

    ಕೆಲವು ಸಲ ಹಾಡು ಬರೆಯುವಾಗ, ಈ ಸಾಲು ಎಲ್ಲೋ ಬಂದಿದೆಯೆಲ್ಲಾ ಅಂತ ಪಕ್ಕಕ್ಕೆ ಇಟ್ಟಿದ್ದುಂಟು. ಆಮೇಲೆ ನಾನೇ ಬರೆದುದಲ್ವ ಅಂತ ಗೊತ್ತಾಗುತ್ತದೆ. ತಂತ್ರಜ್ಞಾನ ಬದಲಾದಂತೆ ಮೂಲ ಹಾಡನ್ನು ಯಾರು ಕೇಳುವುದಿಲ್ಲ. ಕೇವಲ ನಾಲ್ಕು ಸಾಲುಗಳನ್ನು ಆಲಿಸುತ್ತಾರೆ. ಇದರಿಂದ ಕಲೆಯ ಮೇಲೆ ಜವಬ್ದಾರಿ ಮತ್ತು ಚ್ಯಾಲೆಂಜ್ ಬಹಳ ಜಾಸ್ತಿ ಇರುತ್ತದೆ. ಇದಕ್ಕಾಗಿ ತಂಡಕ್ಕೆ ಅಭಿನಂದನೆಗಳನ್ನು ಹೇಳ್ತನೆ. ಮಗ ತನಗೆ ಇಷ್ಟವಾದುದನ್ನು ಮಾಡಿದ್ದರಿಂದ ಖುಷಿಯಾಗಿದೆ. ನಿರ್ದೇಶಕರು ಹಾಡು ಬರೆದುಕೊಡಿ ಎಂದು ಕೇಳಿಕೊಂಡು ಬಂದಾಗ, ನನ್ನ ಹಾಡು ಹಿಟ್ ಆಗಲೆಂದು ಬರೆಯುತ್ತೇನೆ. ಅದರಿಂದ ನಿಮ್ಮ ಚಿತ್ರಕ್ಕೆ ಸಹಾಯವಾಗಲಿ. ಹಾಡು ಚಿತ್ರದ ನಿರೂಪಣೆಯ ಭಾಗವಾಗಿರುತ್ತದೆ. ಇಂತಹ ಹೊಸ ತಲೆಮಾರಿನ ಚಿತ್ರಗಳು ಜನರಿಗೆ ತಲುಪಲಿ ಎಂದು ಜಯಂತ್ ಕಾಯ್ಕಿಣಿ ಹೇಳಿದರು.

    ಬೆಂಗಳೂರಿನಂಥ ಮಹಾನಗರಿಯಲ್ಲಿ ನಿರಾಸೆಗೊಳಗಾದ ಯುವ ಸಮೂಹ. ರಾಜಕೀಯ, ಅಪರಾಧ ಸೇರಿದಂತೆ ಒಂದಷ್ಟು ಸಾಮಾಜಿಕ ಅಂಶಗಳು ಚಿತ್ರದಲ್ಲಿದೆ.   ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಥಾನಾಯಕ ಹೇಗೆ ಈ ವ್ಯವಸ್ಥೆಯ ಚಕ್ರವ್ಯೂಹಕ್ಕೆ ಸಿಲುಕುತ್ತಾನೆ. ಆತನನ್ನು ಪಟ್ಟಭದ್ರರು ಹೇಗೆಲ್ಲಾ ಬಳಸಿಕೊಳ್ಳುತ್ತಾರೆ. ಆ ಕ್ಷಣದೊಂದು ನಿರ್ಧಾರ ಆತನ ಬದುಕನ್ನು ಯಾವ ದಿಕ್ಕಿನತ್ತ ಮುನ್ನಡೆಸುತ್ತೆ ಎಂಬಂತಹ ಸನ್ನಿವೇಶಗಳನ್ನು ತೋರಿಸಲಾಗುತ್ತಿದೆ. ಒಟ್ಟಾರೆಯಾಗಿ ಈ ದಿನಮಾನದ ಮಟ್ಟಿಗೆ ವಿಭಿನ್ನ ಚಿತ್ರವಾಗಲಿದೆಯಂತೆ. ನಾಯಕನಾಗಿ ಬಿ.ವಿ.ಭರತ್, ಪ್ರಣವ್‍ಶ್ರೀಧರ್, ವಿನೋದ್‍ರವೀಂದ್ರನ್, ಗೋಪಾಲ್ ಕೃಷ್ಣ ದೇಶಪಾಂಡೆ ಉಳಿದಂತೆ ಬಹುತೇಕ ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲಾಗಿದೆ.  ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಶಬ್ಧ ಸಂಯೋಜನೆ ಮಾಡಿದ್ದಾರೆ. ಬೆಂಗಳೂರು ಸುತ್ತಮುತ್ತ, ಕೋಲಾರದಲ್ಲಿ ಚಿತ್ರೀಕರಣ ನಡೆಸಲಾಗಿದೆ.

  • ಬೆಳ್ಳಿತೆರೆಗೆ ಕಿಚ್ಚು ಹಚ್ಚಲು ರೆಡಿಯಾಗ್ತಿದ್ದಾರೆ `ಕೆಂಡ’ ಕಲಾವಿದರು

    ಬೆಳ್ಳಿತೆರೆಗೆ ಕಿಚ್ಚು ಹಚ್ಚಲು ರೆಡಿಯಾಗ್ತಿದ್ದಾರೆ `ಕೆಂಡ’ ಕಲಾವಿದರು

    ಕೆಂಡ (Kenda) ಈ ಹೆಸರು ಕೇಳಿದಾಕ್ಷಣ ಕಿವಿ ನೆಟ್ಟಗಾಗುತ್ತವೆ. ಯಾಕಂದ್ರೆ, ಆ ಶೀರ್ಷಿಕೆಯಲ್ಲೇ ಫೈಯರ್ ಪ್ಲಸ್ ಪವರ್ ಎರಡೂ ಇದೆ. ಇಂತಹ ಪವರ್ ಫುಲ್ ಹೆಸರನ್ನಿಟ್ಟುಕೊಂಡು ಕಣಕ್ಕಿಳಿಯುವುದಕ್ಕೆ ಪ್ರತಿಭಾನ್ವಿತರ ತಂಡವೊಂದು ಸಜ್ಜಾಗಿದೆ. ಈಗಾಗಲೇ ನಿಮ್ಮೆಲ್ಲರಿಗೂ ಆ ತಂಡದ ಪರಿಚಯವಿದೆ. ಈ ಹಿಂದೆ ಇದೇ ಬಳಗದ ಸಾರಥಿಗಳಾದ ರೂಪಾ ರಾವ್ (Rupa Rao) ಹಾಗೂ ಸಹದೇವ್ ಕೆಲವಡಿಯವರು (Sahadev Kelavadi) `ಗಂಟುಮೂಟೆ’ ಹೆಸರಿನ ಸಿನಿಮಾದ ಮೂಲಕ ನಿಮ್ಮೆಲ್ಲರನ್ನೂ ಎದುರುಗೊಂಡಿದ್ದರು. ಈಗ `ಕೆಂಡ’ ಸಿನಿಮಾದೊಂದಿಗೆ ಮುಖಾಮುಖಿಯಾಗಲು ಬಯಸಿದ್ದಾರೆ. ಇತ್ತೀಚೆಗಷ್ಟೇ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ನಾವು `ಕೆಂಡ’ದಂತಾ ಸಿನಿಮಾ ಮಾಡಿದ್ದೇವೆ. ನಿಮ್ಮ ಮುಂದೆ ಬರಲು ಸಜ್ಜಾಗುತ್ತಿದ್ದೇವೆ ಎಂದು ಸುಳಿವು ಕೊಟ್ಟಿದ್ದರು. ಈಗ `ಕೆಂಡ’ ಕಲಾವಿದರನ್ನು ಪರಿಚಯಿಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

    ಯಸ್, ಕನ್ನಡ ಸಿನಿಮಾ ಪ್ರೇಕ್ಷಕರಿಗೆ `ಕೆಂಡ’ ಕಲಾವಿದರ ದರ್ಶನವಾಗಿದೆ. ಗಂಟುಮೂಟೆ ಚಿತ್ರ ಬಿಡುಗಡೆಗೊಂಡು 4 ವರ್ಷ ಪೂರೈಸಿದರ ಸಂಭ್ರಮಕ್ಕೆ ಸಾಕ್ಷಿಯಾಗಿ `ಕೆಂಡ’ ಕ್ಯಾರೆಕ್ಟರ್ ಇಂಟ್ರುಡಕ್ಷನ್ ಟೀಸರ್ ಹೊರಬಿದ್ದಿದೆ. ಒಬ್ಬೊಬ್ಬ ಕಲಾವಿದನೂ ಕೂಡ ಬೆಂಕಿನುಂಡೆಯಂತಿದ್ದು, ಬೆಳ್ಳಿತೆರೆಗೆ ಕಿಚ್ಚು ಹಚ್ಚೋದು ಗ್ಯಾರಂಟಿ ಎನ್ನುವ ಸೂಚನೆ ಮೊದಲ ನೋಟದಲ್ಲೇ ಕಾಣಸಿಗ್ತಿದೆ. ಲೋಕೇಶ್ ಹೆಸರಿನ ಪಾತ್ರಕ್ಕೆ ಸಚ್ಚಾ, ಜಯರಾಮ್ ಕ್ಯಾರೆಕ್ಟರ್ ಗೆ ಶರತ್ ಗೌಡ, ವಿನಾಯಕ ರೋಲ್‍ನಲ್ಲಿ ಪ್ರಣವ್ ಶ್ರೀಧರ್, ಕೇಶವನಾಗಿ ಬಿ.ವಿ ಭರತ್ ಅನ್ನೋರು ಬಣ್ಣ ಹಚ್ಚಿದ್ದಾರೆ. ಈ ನಾಲ್ಕು ಕ್ಯಾರೆಕ್ಟರ್ ಕಿಚ್ಚಿಗೆ ಕೆಂಡ ಅಖಾಡ ಧಗಧಗಿಸಿದೆ. ಕಲಾಭಿಮಾನಿಗಳಿಂದ ಸಿಳ್ಳೆ ಚಪ್ಪಾಳೆ ಗಿಟ್ಟಿಸಿಕೊಂಡು ಪಾತ್ರದಿಂದಲೇ ಈ ನಾಲ್ವರು ಕಲಾವಿದರು ಗುರ್ತಿಸಿಕೊಳ್ಳುವ ಭರವಸೆ ಹೆಚ್ಚಿದೆ.

    ವಿಶೇಷ ಅಂದರೆ `ಕೆಂಡ’ ಅಖಾಡ ಹೊಸಬರಿಂದಲೇ ಕೂಡಿದೆ. ರಂಗಭೂಮಿ ಪ್ರತಿಭೆಗಳು ಪ್ರಧಾನ ಪಾತ್ರ ವಹಿಸಿರುವುದರಿಂದ `ಕೆಂಡ’ ಕಣ ರಣರಣ ರಂಗೇರಿದೆ. ಸಚ್ಚಾ, ಶರತ್‍ಗೌಡ, ಪ್ರಣವ್ ಶ್ರೀಧರ್, ಬಿ.ವಿ ಭರತ್, ವಿನೋದ್ ರವೀಂದ್ರನ್, ಗೋಪಾಲ್ ಕೃಷ್ಣ ದೇಶ್ ಪಾಂಡೆ ಜೊತೆಗೆ ಇನ್ನೂ ಅನೇಕ ಪ್ರತಿಭಾನ್ವಿತ ಪಡೆ ಈ ಸಿನಿಮಾಗೆ ಬಣ್ಣ ಹಚ್ಚಿದೆ. ಬೆಂಗಳೂರಿನಂಥಾ ಮಹಾನಗರಿಯಲ್ಲಿ ನಾನಾ ನಿರಾಸೆಗೊಳಗಾದ ಯುವ ಸಮೂಹ ವ್ಯವಸ್ಥೆಯ ವಿಷವ್ಯೂಹಕ್ಕೆ ಸಿಲುಕಿ ಹೇಗೆ ನರಳುತ್ತಿದೆ ಎಂಬುದನ್ನು, ರಾಜಕೀಯ ಹಾಗೂ ಅಪರಾಧದ ತನಿಖೆ ಮೂಲಕ ಜಗತ್ತಿನ ಮುಂದೆ ಹರವಿಡಲು ಸಹದೇವ್ ಕೆಲವರಿಯವರು `ಕೆಂಡ’ ಚಿತ್ರ ಆಯ್ಕೆ ಮಾಡಿಕೊಂಡಿದ್ದಾರೆ.

    ನಿರ್ದೇಶಕ ಸಹದೇವ್ ಕೆಲವಡಿಯವರು ವಿದೇಶಗಳಲ್ಲಿ ಸಿನಿಮಾ ಬಗ್ಗೆ ಅಧ್ಯಯನ ನಡೆಸಿ ಬಂದು, ತನ್ನ ಮಾತೃ ಭಾಷೆಯಲ್ಲಿಯೇ ಸಿನಿಮಾ ಮಾಡಬೇಕೆಂಬ ಬಯಕೆ ಹೊಂದಿದ್ದವರು . ಅದರ ಆರಂಭಿಕ ಹೆಜ್ಜೆಯಾಗಿ  ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರ್ ಹುಟ್ಟುಹಾಕಿದರು. ರೂಪಾ ರಾವ್ ನಿರ್ದೇಶನದ `ಗಂಟುಮೂಟೆ’ ಚಿತ್ರಕ್ಕೆ ಬಂಡವಾಳ ಹೂಡೋದ್ರ ಜೊತೆಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ನಿರ್ವಹಿಸಿದರು. ಆ ಚಿತ್ರ ಇಬ್ಬರಿಗೂ ಹೆಸರು ತಂದುಕೊಟ್ಟಿತ್ತು. ನ್ಯಾಷನಲ್ ಹಾಗೂ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‍ನಲ್ಲಿ ಸ್ಪರ್ಧೆ ಮಾಡಿ ಒಂದಿಷ್ಟು ಅವಾರ್ಡ್‍ಗಳನ್ನು ಮುಡಿಗೇರಿಸಿಕೊಂಡಿತ್ತು. ಆ ಒಂದು ಖುಷಿ ಮತ್ತು ಸಂಭ್ರಮಕ್ಕೆ ಸಾಕ್ಷಿಯೆಂಬಂತೆ ಈ ಇಬ್ಬರು ಜೊತೆಗೂಡಿ `ಕೆಂಡ’ ಚಿತ್ರ ತಯಾರು ಮಾಡಿದ್ದಾರೆ. ಈ ಭಾರಿ ನಿರ್ದೇಶನದ ಹೊಣೆಯನ್ನ ಸಹದೇವ್ ಕೆಲವಡಿಯವರು ಹೊತ್ತಿದ್ದಾರೆ.

    ಹೌದು, ಕೆಂಡದ ಮೂಲಕ ಸಹದೇವ್ ಕೆಲವಡಿ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಇಂಗ್ಲಿಷ್ , ಹಿಂದಿ, ಜರ್ಮನ್ ಹೀಗೆ ಪರಭಾಷೆಯಲ್ಲಿ ಶಾರ್ಟ್‍ಫಿಲ್ಮ್, ಡಾಕ್ಯೂಮೆಂಟರಿ, ವೆಬ್‍ಸೀರೀಸ್‍ಗಳನ್ನು ಮಾಡಿ ಸೈ ಎನಿಸಿಕೊಂಡು `ಗಂಟುಮೂಟೆ’ ಮೂಲಕ ಕನ್ನಡಿಗರಿಂದ ಭೇಷ್ ಎನಿಸಿಕೊಂಡ, ಬೆಂಗಳೂರು ಮೂಲದ ಮಹಿಳಾ ನಿರ್ದೇಶಕಿ ರೂಪಾ ರಾವ್ ಸಹದೇವ್‍ಗೆ ಸಾಥ್ ನೀಡಿದ್ದಾರೆ.  ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಈ ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದಾರೆ.

     

    ಕಥೆಯೊಂದಿಗೇ ಹೊಸೆದುಕೊಂಡಂಥಾ ಎರಡು ಹಾಡುಗಳಿಗೆ ಖುದ್ದು ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಕೆಂಡ ಚಿತ್ರಕ್ಕೆ ಶಬ್ಧ ಸಂಯೋಜನೆ ಮಾಡಿದ್ದಾರೆ. ಈಗಾಗಲೇ ಸದ್ದಿಲ್ಲದೇ ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನಲ್ಲಿ ತೊಡಗಿಸಿಕೊಂಡಿರುವ `ಕೆಂಡ’ ರೂವಾರಿಗಳು, ಆದಷ್ಟು ಬೇಗ ತಮ್ಮ ಕನಸಿನ `ಕೆಂಡ’ ಚಿತ್ರವನ್ನ ಕಲಾಭಿಮಾನಿಗಳ ಕಣ್ಮುಂದೆ ತರಲು ಶ್ರಮಿಸ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕೆಂಡ’ದಂತಹ ಸಿನಿಮಾ ಮಾಡಿದ ಸಹದೇವ್-ರೂಪಾ ರಾವ್

    ‘ಕೆಂಡ’ದಂತಹ ಸಿನಿಮಾ ಮಾಡಿದ ಸಹದೇವ್-ರೂಪಾ ರಾವ್

    ಕೆಂಡ, ಕೆಂಡದಂತಹ ಸಿನಿಮಾ ಮಾಡಬೇಕು, ಬೆಳ್ಳಿಭೂಮಿ ಮೇಲೆ ನಮ್ಮ ಸಿನಿಮಾ ಧಗಧಗಿಸಬೇಕು. ನಮ್ಮ ಮೂವೀ ಹಚ್ಚುವ ಕಿಚ್ಚಿಗೆ ಬಾಕ್ಸ್ ಆಫೀಸ್ ಖಲ್ಲಾಸ್ ಆಗ್ಬೇಕು ಅಂತ ಸಾಕಷ್ಟು ಸಿನಿಮಾಮಂದಿ ಕನಸು ಕಾಣ್ತಾರೆ. ಆದರೆ, ಇಲ್ಲೊಂದು ಚಿತ್ರತಂಡ `ಕೆಂಡ’ (Kenda) ಅಂತಾನೇ ಟೈಟಲ್ ಇಟ್ಕೊಂಡು ಕಣಕ್ಕಿಳಿದಿದೆ. ಬರೀ ಶೀರ್ಷಿಕೆಯಿಂದಲೇ ಕುತೂಹಲ ಕೆರಳಿಸುವಲ್ಲಿ, ಗಾಂಧಿನಗರದ ತುಂಬೆಲ್ಲಾ ಸದ್ದು ಸುದ್ದಿ ಮಾಡುವಲ್ಲಿ ಯಶಸ್ವಿಯಾಗಿದೆ. ಇದಕ್ಕೆ ಮೂಲ ಕಾರಣ `ಕೆಂಡ’ ರೂವಾರಿಗಳಾದ ರೂಪಾ (Roopa Rao) ರಾವ್ ಹಾಗೂ ಸಹದೇವ್ ಕೆಲವಡಿ.

    ರೂಪಾ ರಾವ್ ಹಾಗೂ ಸಹದೇವ್ ಕೆಲವಡಿ (Sahadev Kelavadi) ಜೊತೆಗೂಡಿ ಕನ್ನಡದಲ್ಲಿ `ಗಂಟುಮೂಟೆ’ ಹೆಸರಿನ ಸಿನಿಮಾ ಮಾಡಿದ್ದರು. ನಿರ್ದೇಶನ ಮತ್ತು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದ ರೂಪಾ ರಾವ್ ಜೊತೆ ಸಹದೇವ್ ಕೈ ಜೋಡಿಸಿದ್ದರು. ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಚಿತ್ರಕ್ಕೆ ಬಂಡವಾಳ ಹೂಡುವುದರ ಜೊತೆಗೆ `ಗಂಟುಮೂಟೆ’ಗೆ ಕ್ಯಾಮೆರಾ ಕೈಚಳಕ ತೋರಿದ್ದರು. ಈ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯುವುದರ ಜೊತೆಗೆ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್‍ನಲ್ಲಿ ಬೆಸ್ಟ್ ಸ್ಕ್ರೀನ್ ಪ್ಲೇ ಅವಾರ್ಡ್ ಮುಡಿಗೇರಿಸಿಕೊಂಡಿತ್ತು. ಈಗ ಎರಡನೇ ಪ್ರಯೋಗವೆಂಬಂತೆ ರೂಪಾ ರಾವ್ ಮತ್ತು ಸಹದೇವ್ ಕೆಲವಡಿ `ಕೆಂಡ’ದ ಮೂಲಕ ಅಖಾಡಕ್ಕಿಳಿಯಲು ರೆಡಿಯಾಗಿದ್ದಾರೆ.

    ವಿದೇಶಗಳಲ್ಲಿ ಸಿನಿಮಾ ಬಗ್ಗೆ ಅಧ್ಯಯನ ನಡೆಸಿ ಬಂದು, ತನ್ನ ಮಾತೃ ಭಾಷೆಯಲ್ಲಿಯೇ ಸಿನಿಮಾ ಮಾಡಬೇಕೆಂಬ ಬಯಕೆ ಹೊಂದಿದ್ದವರು ಸಹದೇವ್ ಕೆಲವಡಿ. ಅದರ ಆರಂಭಿಕ ಹೆಜ್ಜೆಯಾಗಿ ರೂಪಾ ರಾವ್ ಅವರ ಜೊತೆಗೂಡಿ ನಿರ್ಮಾಣ ಸಂಸ್ಥೆಗೆ ಚಾಲನೆ ನೀಡಿದ್ದರು. ಇದೀಗ ಅವರೇ ಕೆಂಡದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಇಂಗ್ಲಿಷ್, ಹಿಂದಿ, ಜರ್ಮನ್ ಹೀಗೆ ಪರಭಾಷೆಯಲ್ಲಿ ಶಾರ್ಟ್‍ಫಿಲ್ಮ್, ಡಾಕ್ಯೂಮೆಂಟರಿ, ವೆಬ್‍ಸೀರೀಸ್‍ಗಳನ್ನು ಮಾಡಿ ಸೈ ಎನಿಸಿಕೊಂಡು `ಗಂಟುಮೂಟೆ’ ಮೂಲಕ ಕನ್ನಡಿಗರಿಂದ ಭೇಷ್ ಎನಿಸಿಕೊಂಡ, ಬೆಂಗಳೂರು ಮೂಲದ ಮಹಿಳಾ ನಿರ್ದೇಶಕಿ ರೂಪಾ ರಾವ್ ಸಹದೇವ್‍ಗೆ ಸಾಥ್ ನೀಡಿದ್ದಾರೆ. ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲೇ `ಕೆಂಡ’ ಚಿತ್ರ ತಯ್ಯಾರಾಗಿದ್ದು, ಈಗಾಗಲೇ ಶೂಟಿಂಗ್ ಕಂಪ್ಲೀಟ್ ಆಗಿದೆ. ಗೌರಿ-ಗಣೇಶ ಹಬ್ಬಕ್ಕೆ ಸ್ಪೆಷಲ್ಲಾಗಿ ರಿಲೀಸ್ ಆಗಿರುವ ಮೋಷನ್ ಪೋಸ್ಟರ್ ಸಿನಿಮಾ ಪ್ರೇಮಿಗಳ ಗಮನ ಸೆಳೆಯುತ್ತಿದೆ. ಮತ್ತೊಂದು ಭಿನ್ನ ಕಥಾನಕದ ಚಿತ್ರ ಕನ್ನಡದ ಸಿನಿಮಾ ಪ್ರೇಮಿಗಳ ಮುಂದೆ ಬರಲು ಸಜ್ಜಾಗಿ ನಿಂತಿದೆ.

    ಬೆಂಗಳೂರಿನಂಥಾ ಮಹಾನಗರಿಯಲ್ಲಿ ನಾನಾ ನಿರಾಸೆಗೊಳಗಾದ ಯುವ ಸಮೂಹ, ರಾಜಕೀಯ, ಅಪರಾಧ ಸೇರಿದಂತೆ ಒಂದಷ್ಟು ಸಾಮಾಜಿಕ ಅಂಶಗಳನ್ನಿಟ್ಟುಕೊಂಡು ಈ ಚಿತ್ರ ತಯಾರುಗೊಂಡಿದೆ. ಫೌಂಡ್ರಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಹೇಗೆ ಈ ವ್ಯವಸ್ಥೆಯ ವಿಷ ವ್ಯೂಹಕ್ಕೆ ಸಿಲುಕುತ್ತಾನೆ, ಆತನನ್ನು ಪಟ್ಟಭದ್ರರು ಹೇಗೆಲ್ಲ ಬಳಸಿಕೊಳ್ಳುತ್ತಾರೆ,  ಆ ಕ್ಷಣದೊಂದು ನಿರ್ಧಾರ ಆತನ ಬದುಕನ್ನು ಯಾವ ದಿಕ್ಕಿನತ್ತ ಮುನ್ನಡೆಸುತ್ತೆ ಎಂಬಿತ್ಯಾದಿ ಕುತೂಹಲಕರ ತಿರುವುಗಳೊಂದಿಗೆ ‘ಕೆಂಡ’ ಚಿತ್ರ  ಕೆಂಡದಂತಾಗಿದೆ. ಒಟ್ಟಾರೆಯಾಗಿ, ಇದೊಂದು ಈ ದಿನಮಾನದ ಮಟ್ಟಿಗೆ ವಿಭಿನ್ನ ಚಿತ್ರವಾಗಲಿದೆ ಎಂಬಂಥಾ ತುಂಬು ಭರವಸೆ ಚಿತ್ರತಂಡದಲ್ಲಿದೆ.

    ವಿಶೇಷವೆಂದರೆ, ತಾರಾಗಣವೆಲ್ಲ ಹೊಸಬರಿಂದಲೇ ತುಂಬಿಕೊಂಡಿದೆ. ರಂಗಭೂಮಿ ಪ್ರತಿಭೆಗಳಿಲ್ಲಿ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ರವೀಂದ್ರನ್, ಗೋಪಾಲ್ ಕೃಷ್ಣ ದೇಶಪಾಂಡೆ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ. ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ ಕಾಯ್ಕಿಣಿ (Rithvik Kaykini) ಈ ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದಾರೆ. ಕಥೆಯೊಂದಿಗೇ ಹೊಸೆದುಕೊಂಡಂತಹ ಎರಡು ಹಾಡುಗಳಿಗೆ ಖುದ್ದು ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ.

     

    ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಕೆಂಡ ಚಿತ್ರಕ್ಕೆ ಶಬ್ಧ ಸಂಯೋಜನೆ ಮಾಡಿದ್ದಾರೆ. ಗಂಟುಮೂಟೆಯಂಥಾ ಚೆಂದದ ಸಿನಿಮಾ ಕೊಟ್ಟಿದ್ದ ತಂಡವೇ ಕೆಂಡದ ಸಾರಥ್ಯ ವಹಿಸಿರೋದರಿಂದಾಗಿ, ಈ ಚಿತ್ರ ಒಂದಷ್ಟು ಕುತೂಹಲ ಮೂಡಿಸಿದೆ. ಯುವ ಸಮೂಹದ ಕನಸು, ನಿರಾಸೆ, ತವಕ ತಲ್ಲಣಗಳನ್ನು ಹೊಂದಿರುವ ಈ ಚಿತ್ರ ಈಗಾಗಲೇ ಚಿತ್ರೀಕರಣ ಮುಗಿಸಿಕೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕಾರ್ಯವೂ ಅಂತಿಮ ಘಟ್ಟದಲ್ಲಿದೆ. ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಯ ದಿನಾಂಕ ಅನೌನ್ಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]