Tag: ರಿಪಬ್ಲಿಕನ್

  • ಕಮಲಾಗೆ ಶಾಕ್‌ – ಟ್ರಂಪ್‌ ಪರ ಅನಿವಾಸಿ ಭಾರತೀಯರ ಒಲವು ಏರಿಕೆ

    ಕಮಲಾಗೆ ಶಾಕ್‌ – ಟ್ರಂಪ್‌ ಪರ ಅನಿವಾಸಿ ಭಾರತೀಯರ ಒಲವು ಏರಿಕೆ

    ವಾಷಿಂಗ್ಟನ್: ಅಮೆರಿಕ ಚುನಾವಣೆಗೆ (USA Election) ದಿನಗಣನೆ ಆರಂಭವಾಗುತ್ತಿದ್ದಂತೆ ಕಮಲಾ ಹ್ಯಾರಿಸ್‌ಗೆ (Kamala Harris) ಅನಿವಾಸಿ ಭಾರತೀಯರು (NRI) ಶಾಕ್‌ ನೀಡುವ ಸಾಧ್ಯತೆ ಹೆಚ್ಚಿದೆ.

    ಹೌದು. ಅನಿವಾಸಿ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಡೆಮಾಕ್ರಟಿಕ್ (Democratic) ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಅನಿವಾಸಿ ಭಾರತೀಯರ ಒಲವು ರಿಪಬ್ಲಿಕನ್‌ (Republican) ಪಕ್ಷದ ಕಡೆಗೆ ವಾಲಿದೆ. ಹೀಗಿದ್ದರೂ ಒಟ್ಟಾರೆ ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್‌ಗೆ ಮತ ಹಾಕುವುದಾಗಿ ತಿಳಿಸಿದ್ದಾರೆ.

    ಭಾರತೀಯ ಅಮೆರಿಕರನ್ನು ಗುರಿಯಾಗಿಸಿ ಕಾರ್ನೆಗೀ ಎಂಡೋಮೆಂಟ್‌ ಫಾರ್‌ ಇಂಟರ್‌ನ್ಯಾಷನಲ್ ಪೀಸ್‌’ ಸಂಸ್ಥೆ ನಡೆಸಿದ ಅನ್‌ಲೈನ್ ಸಮೀಕ್ಷೆಯಲ್ಲಿ 61%ರಷ್ಟು ಮಂದಿ ಡೆಮಾಕ್ರಟಿಕ್ ಪಕ್ಷಕ್ಕೆ ಬೆಂಬಲ ನೀಡಿದರೆ 32% ಜನರು ರಿಪಬ್ಲಿಕನ್ ಪಕ್ಷದ ಪರ ಒಲವು ತೋರಿದ್ದಾರೆ.

    2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳ ಕಡೆಗೆ ಭಾರತೀಯರು ಚಲಾಯಿಸಿದ್ದ ಮತಗಳನ್ನು ಲೆಕ್ಕ ಹಾಕಿದಾಗ ಈ ಬಾರಿ ಕಮಲಾ ಹ್ಯಾರಿಸ್ ಪಕ್ಷದ ಪರ ಒಲವು ಸ್ವಲ್ಪ ಇಳಿದಿದ್ದು, ಟ್ರಂಪ್ (Donald Trump) ಪರ ಹೆಚ್ಚು ಮತಗಳು ಬೀಳಬಹುದು ಎಂದು ಸಮೀಕ್ಷೆ ತಿಳಿಸಿದೆ.

    ಸೆಪ್ಟೆಂಬರ್‌ 18ರಿಂದ ಅಕ್ಟೋಬರ್‌ 15ರ ನಡುವೆ 714  ಅನಿವಾಸಿ ಭಾರತೀಯರು ಆನ್‌ಲೈನ್‌ ಸಮೀಕ್ಷೆಯಲ್ಲಿ ಭಾಗಿಯಾಗಿದ್ದರು.

    ಅಮೆರಿಕದಲ್ಲಿ ಭಾರತ ಮೂಲದ 52 ಲಕ್ಷ ಜನ ವಾಸವಾಗಿದ್ದು, ಈ ಪೈಕಿ 39 ಲಕ್ಷ ಜನರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. ಅನಿವಾಸಿ ಭಾರತೀಯರು ಅಮೆರಿಕದಲ್ಲಿ ನೆಲೆಸಿರುವ ಎರಡನೇ ಅತಿ ದೊಡ್ಡ ವಲಸಿಗರ ಗುಂಪಿಗೆ ಸೇರಿದ್ದಾರೆ.

    ನವೆಂಬರ್‌ 5 ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ 96% ರಷ್ಟು ಅನಿವಾಸಿ ಭಾರತೀಯರು ಮತ ಚಲಾಯಿಸುವುದಾಗಿ ತಿಳಿಸಿದ್ದಾರೆ.

     

  • ಡೆಮಾಕ್ರಟಿಕ್ ಬೆಂಬಲಿಸಲ್ಲ, ಇನ್ನು ಮುಂದೆ ರಿಪಬ್ಲಿಕ್‌ಗೆ ಮತ ಹಾಕ್ತೀನಿ: ಮಸ್ಕ್

    ಡೆಮಾಕ್ರಟಿಕ್ ಬೆಂಬಲಿಸಲ್ಲ, ಇನ್ನು ಮುಂದೆ ರಿಪಬ್ಲಿಕ್‌ಗೆ ಮತ ಹಾಕ್ತೀನಿ: ಮಸ್ಕ್

    ವಾಷಿಂಗ್ಟನ್: ಇಲ್ಲಿಯವರೆಗೆ ನಾನು ಡೆಮಾಕ್ರಟಿಕ್ ಪರವಾಗಿ ಮತ ಹಾಕುತ್ತಿದ್ದೆ. ಇನ್ನು ಮುಂದೆ ರಿಪಬ್ಲಿಕ್ ಪರವಾಗಿ ಮತ ಹಾಕುತ್ತೇನೆ ಎಂದು ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಹೇಳಿದ್ದಾರೆ.

    ನಾನು ಇನ್ನು ರಿಪಬ್ಲಿಕ್ ಪಕ್ಷಕ್ಕೆ ಮತ ಹಾಕುತ್ತೇನೆ. ಏಕೆಂದರೆ ಅದು ತುಂಬಾ ದಯೆಯುಳ್ಳ ಪಕ್ಷ ಎಂದಿದ್ದಾರೆ. ಮಸ್ಕ್ ಅವರ ಈ ಹೇಳಿಕೆಯಿಂದ ಟೆಸ್ಲಾ ಕಂಪನಿ ಷೇರು ಮೌಲ್ಯ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಶೇ.7.51 ರಷ್ಟು ಇಳಿಕೆಯಾಗಿದೆ. ಇದನ್ನೂ ಓದಿ: ಕೊರೊನಾ ಲಸಿಕೆಯಂತೆ ಗೋಧಿ ರಫ್ತು ಮಾಡಲಾಗುದಿಲ್ಲ: ಭಾರತ

    ಈ ಕುರಿತು ಟ್ವೀಟ್ ಮಾಡಿರುವ ಎಲಾನ್ ಮಸ್ಕ್, ಈ ಹಿಂದೆ ನಾನು ಡೆಮಾಕ್ರಟಿಕ್ ಪಕ್ಷಕ್ಕೆ ಮತ ಹಾಕಿದ್ದೇನೆ. ಆಗ ಅವರು ದಯೆಯುಳ್ಳ ಪಕ್ಷವಾಗಿತ್ತು. ಈಗ ದ್ವೇಷದ ಪಕ್ಷವಾಗಿ ವಿಭಜನೆಯಾಗುತ್ತಿದೆ. ಅವರನ್ನು ಬೆಂಬಲಿಸಲು ಸಾಧ್ಯವಿಲ್ಲ. ಆದ್ದರಿಂದ ರಿಪಬ್ಲಿಕ್‌ಗೆ ಮತ ಹಾಕುತ್ತೇನೆ. ಇನ್ನು ಮುಂದೆ ನನ್ನ ವಿರುದ್ಧ ನಡೆಸುವ ಕ್ಯಾಂಪೇನ್ ತಂತ್ರಗಳು ಹಾಗೂ ರಾಜಕೀಯ ದಾಳಿಗಳನ್ನು ನೋಡಬಹುದು. ಬರುವ ಚುನಾವಣೆಯಲ್ಲಿ ನಾನು ರಿಪಬ್ಲಿಕನ್ನರಿಗೆ ಮತ ಹಾಕುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಫ್ತಿಗೆ ನಿಷೇಧ ಹೇರಿದ ಭಾರತ- ಗೋಧಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ

    ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಟ್ವಿಟ್ಟರ್ ಹೇರಿದ ನಿಷೇಧವನ್ನು ರದ್ದು ಮಾಡುತ್ತೇನೆ. ನಾನು ಮುಕ್ತ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದರು.