Tag: ರಿವಾಬಾ ಜಡೇಜಾ

  • ನಿಮ್ಮ ಸಾಧನೆಗಳ ಬಗ್ಗೆ ಹೆಮ್ಮೆ ಇದೆ: ಗುಜರಾತ್‌ ಕ್ಯಾಬಿನೆಟ್ ಮಿನಿಸ್ಟರ್‌ ಆದ ಪತ್ನಿಗೆ ಜಡೇಜಾ ವಿಶ್‌

    ನಿಮ್ಮ ಸಾಧನೆಗಳ ಬಗ್ಗೆ ಹೆಮ್ಮೆ ಇದೆ: ಗುಜರಾತ್‌ ಕ್ಯಾಬಿನೆಟ್ ಮಿನಿಸ್ಟರ್‌ ಆದ ಪತ್ನಿಗೆ ಜಡೇಜಾ ವಿಶ್‌

    ಗಾಂಧೀನಗರ: ಗುಜರಾತ್‌ ಸರ್ಕಾರದಲ್ಲಿ ಕ್ಯಾಬಿನೆಟ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪತ್ನಿ ರಿವಾಬಾಗೆ ಕ್ರಿಕೆಟಿಗ ರವೀಂದ್ರ ಜಡೇಜಾ (Ravindra Jadeja) ಅಭಿನಂದನೆ ತಿಳಿಸಿದ್ದಾರೆ.

    ‘ನಿಮ್ಮ ಮತ್ತು ನಿಮ್ಮ ಸಾಧನೆಗಳ ಬಗ್ಗೆ ತುಂಬಾ ಹೆಮ್ಮೆ ಇದೆ. ನೀವು ಅದ್ಭುತ ಕೆಲಸ ಮಾಡುತ್ತಲೇ ಇರುತ್ತೀರಿ. ಎಲ್ಲಾ ವರ್ಗದ ಜನರಿಗೂ ಸ್ಫೂರ್ತಿಯಾಗುತ್ತೀರಿ ಎಂದು ನಾನು ಭಾವಿಸಿದ್ದೇನೆ. ಗುಜರಾತ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ನಿಮಗೆ ಉತ್ತಮ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. ಜೈ ಹಿಂದ್’ ಎಂದು ಪತ್ನಿಗೆ ಜಡೇಜಾ ಎಕ್ಸ್‌ ಪೋಸ್ಟ್‌ ಮೂಲಕ ವಿಶ್‌ ಮಾಡಿದ್ದಾರೆ.‌ ಇದನ್ನೂ ಓದಿ: ಗುಜರಾತ್‌ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್‌ ಪಟ್ಟ

    ಗುಜರಾತ್‌ನಲ್ಲಿಂದು (Gujarat) ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ (Harsh Sanghavi) ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೇ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ (Rivaba Jadeja) ಸೇರಿ 26 ಸಚಿವರೂ ಪ್ರಮಾಣ ಸ್ವೀಕರಿಸಿದರು.

    ಭೂಪೇಂದ್ರ ಪಟೇಲ್‌ (Bhupendra Patel) ಸಂಪುಟದ 16 ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಗಾಂಧಿನಗರದ ಮಹಾತ್ಮ ಮಂದಿರ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ 26 ಸದಸ್ಯರು ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಜಾತಿ ಮತ್ತು ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಕೆಲವರಿಗೆ, ವಿಪಕ್ಷಗಳಿಂದ ಬಿಜೆಪಿ ಸೇರ್ಪಡೆಯಾದ ಕೆಲ ನಾಯಕರನ್ನ ಗುರುತಿಸಿ ಸಚಿವ ಸ್ಥಾನ ನೀಡಿರುವುದು ಹಿರಿಯ ನಾಯಕರ ಮೆಚ್ಚುಗೆಗೂ ಪಾತ್ರವಾಗಿದೆ. ಇದನ್ನೂ ಓದಿ: ಯಶಸ್ವಿಯಾಗಿ ಮೊದಲ ಹಾರಾಟ ನಡೆಸಿದ ತೇಜಸ್ ಎಂಕೆ1ಎ ಯುದ್ಧ ವಿಮಾನ

    2027ರ ವಿಧಾನಸಭಾ ಚುನಾವಣೆಯನ್ನ ಗುರಿಯಾಗಿಟ್ಟು ಸಮುದಾಯದ ನಾಯಕರು, ಕಾರ್ಯಕರ್ತರ ಮೇಲೆ ಹಿಡಿತ ಸಾಧಿಸುವ ನಾಯಕರನ್ನ ಸಂಪುಟಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಪಾಟಿದಾರ್ ಸಮುದಾಯದ ಆರು ಮಂದಿ, ಪರಿಶಿಷ್ಟ ಜಾತಿಯಿಂದ ಮೂವರು, ಆದಿವಾಸಿ ಸಮುದಾಯದ ನಾಲ್ವರು, ಕ್ಷತ್ರಿಯ ಸಮುದಾಯದ ಇಬ್ಬರು, ಒಬಿಸಿ ಸಮುದಾಯದ ಎಂಟು ಮಂದಿ ಹಾಗೂ ಬ್ರಾಹ್ಮಣ ಮತ್ತು ಜೈನ ಸಮುದಾಯ ತಲಾ ಒಬ್ಬೊಬ್ಬರಿಗೆ ಸಚಿವ ಸ್ಥಾನ ನೀಡಲಾಯಿತು.

  • ಜಡೇಜಾ ಟೀಂ ಇಂಡಿಯಾ ಪರ ಆಡಲು ಅನ್‍ಫಿಟ್ – ಬಿಜೆಪಿ ಪರ ಪ್ರಚಾರಕ್ಕೆ ಫಿಟ್

    ಜಡೇಜಾ ಟೀಂ ಇಂಡಿಯಾ ಪರ ಆಡಲು ಅನ್‍ಫಿಟ್ – ಬಿಜೆಪಿ ಪರ ಪ್ರಚಾರಕ್ಕೆ ಫಿಟ್

    ಗಾಂಧೀನಗರ: ಗಾಯಾಳುವಾಗಿ ಟೀಂ ಇಂಡಿಯಾದಿಂದ (Team India) ಹೊರಗುಳಿದಿರುವ ಆಲ್‍ರೌಂಡರ್ ರವೀಂದ್ರ ಜಡೇಜಾ (Ravindra Jadeja)  ಅನ್‍ಫಿಟ್ ಕಾರಣ ಹೇಳಿ ಬಾಂಗ್ಲಾದೇಶ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಆದರೆ ಅತ್ತ ಗುಜರಾತ್‍ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ (Gujarat Election) ಬಿಜೆಪಿ (BJP) ಪರ ಪ್ರಚಾರ ರ್‍ಯಾಲಿಯಲ್ಲಿ ಭಾಗವಹಿಸಿ ಟೀಕೆಗೆ ಗುರಿಯಾಗಿದ್ದಾರೆ.

    ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ (Rivaba Jadega) ಅವರಿಗೆ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಗುಜರಾತ್‍ನ ಜಾಮ್‍ನಗರ ಉತ್ತರದಿಂದ (Jamnagar North) ಬಿಜೆಪಿ ಅಭ್ಯರ್ಥಿಯಾಗಿ ರಿವಾಬಾ ಜಡೇಜಾ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಜಡೇಜಾ ಪತ್ನಿ ಪರ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ (Narendra Modi), ಅಮಿತ್ ಶಾ (Amit Shah) ಸೇರಿದಂತೆ ಘಟಾನುಘಟಿ ನಾಯಕರು ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದು, ಇವರೊಂದಿಗೆ ಜಡೇಜಾ ಕೂಡ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಜಡೇಜಾ ಪತ್ನಿಗೆ ಗುಜರಾತ್‍ನ ಜಾಮ್‌ನಗರ ಉತ್ತರದಿಂದ ಬಿಜೆಪಿ ಟಿಕೆಟ್

    ಇದೀಗ ಜಡೇಜಾ ಈ ನಡೆ ಕುರಿತಾಗಿ ಟೀಕೆಗಳು ಕೇಳಿ ಬರುತ್ತಿದೆ. ಟಿ20 ವಿಶ್ವಕಪ್‍ಗೂ (T20 World Cup) ಮುನ್ನ ಏಷ್ಯಾಕಪ್‍ನಲ್ಲಿ (Asia Cup) ಜಡೇಜಾ ಗಾಯಗೊಂಡು ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. ಆ ಬಳಿಕ ಗಾಯದಿಂದ ಚೇತರಿಕೆ ಕಂಡಿದ್ದು, ಬಾಂಗ್ಲಾದೇಶ ಸರಣಿಗೆ ತಂಡಕ್ಕೆ ಮೊದಲು ಆಯ್ಕೆಯಾಗಿದ್ದರು. ಆದರೆ ಆ ಬಳಿಕ ದಿಢೀರ್ ಆಗಿ ಜಡೇಜಾ ಅನ್‍ಫಿಟ್ ಎಂದು ತಿಳಿಸಿ ವಿಶ್ರಾಂತಿ ಬಯಸಿದ್ದಾರೆ. ಈ ನಡುವೆ ಪತ್ನಿ ಪರ ಪ್ರಚಾರ ರ್‍ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಇದನ್ನು ಕಂಡ ಅಭಿಮಾನಿಗಳು ಜಡೇಜಾಗೆ ದೇಶದ ಪರ ಆಡುವುದಕ್ಕಿಂತ ಪತ್ನಿಯ ಪರ ಪ್ರಚಾರ ಹೆಚ್ಚಾಯಿತೇ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅರ್ಜೆಂಟೀನಾಗೆ ಮಾಡು ಇಲ್ಲವೇ ಮಡಿ ಪಂದ್ಯ – ಕತಾರ್ ಕಥೆ ಮುಗಿಯಿತು

    ಗುಜರಾತ್‍ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್ (Congress), ಎಎಪಿ (AAP) ಸೇರಿ ಎಲ್ಲಾ ಪಕ್ಷಗಳು ಭರದಿಂದ ಪ್ರಚಾರದಲ್ಲಿ ತೊಡಗಿಕೊಂಡಿವೆ.

    Live Tv
    [brid partner=56869869 player=32851 video=960834 autoplay=true]

  • ಗುಜರಾತ್ ವಿಧಾನಸಭೆ ಚುನಾವಣೆ – 14 ಮಂದಿ ಮಹಿಳೆಯರು ಸೇರಿ 160 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ

    ಗುಜರಾತ್ ವಿಧಾನಸಭೆ ಚುನಾವಣೆ – 14 ಮಂದಿ ಮಹಿಳೆಯರು ಸೇರಿ 160 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ

    ಗಾಂಧೀನಗರ: ಗುಜರಾತ್ ವಿಧಾನಸಭೆ ಚುನಾವಣೆ (Gujarat Assembly polls) ಹಿನ್ನೆಲೆ ಬಿಜೆಪಿ (BJP) ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಮೊದಲ ಪಟ್ಟಿ 160 ಮಂದಿ ಅಭ್ಯರ್ಥಿಗಳನ್ನು ಒಳಗೊಂಡಿದ್ದು, ಈ ಪೈಕಿ 69 ಮಂದಿ ಹಾಲಿ ಶಾಸಕರಿದ್ದು, 13 ಪರಿಶಿಷ್ಟ ಜಾತಿ ಅಭ್ಯರ್ಥಿಗಳು, 24 ಪರಿಶಿಷ್ಟ ಪಂಗಡದ ಸಮುದಾಯ ಹಾಗೂ 14 ಮಂದಿ ಮಹಿಳೆಯರಿಗೆ ಅವಕಾಶ ನೀಡಲಾಗಿದೆ.

    ಜಂಟಿ ಸುದ್ದಿಗೋಷ್ಠಿಯನ್ನು ನಡೆಸಿದ ಕೇಂದ್ರ ಸಚಿವರಾದ ಮನ್ಸುಖ್ ಮಾಂಡವಿಯಾ, ಭೂಪೇಂದರ್ ಯಾದವ್ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದರು. ಇದನ್ನೂ ಓದಿ: ಜಡೇಜಾ ಪತ್ನಿಗೆ ಗುಜರಾತ್‍ನ ಜಾಮ್‌ನಗರ ಉತ್ತರದಿಂದ ಬಿಜೆಪಿ ಟಿಕೆಟ್

    bhupendra patel gujarat chief minister

    ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಘಟ್ಲೋಡಿಯಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಗೃಹ ಸಚಿವ ಹರ್ಷ ಸಂಘವಿ ಮಜುರಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ (Congress) ತೊರೆದು ಬಿಜೆಪಿ ಸೇರಿದ್ದ ಹಾರ್ದಿಕ್ ಪಟೇಲ್ ವಿರಾಮಗಮ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಕ್ರಿಕೆಟಿಗ ರವೀಂದ್ರ ಜಡೇಜಾ (Ravindra Jadeja) ಅವರ ಪತ್ನಿ ರಿವಾಬಾ ಜಡೇಜಾ (Rivaba Jadega) ಅವರಿಗೆ ಟಿಕೆಟ್ ಸಿಕ್ಕಿದ್ದು, ಅವರು ಜಾಮ್‍ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

    182 ಸ್ಥಾನಗಳ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಈ ಹಿನ್ನಲೆ ನಿನ್ನೆ ಕೇಂದ್ರ ಚುನಾವಣಾ ಸಮಿತಿ ದೆಹಲಿಯಲ್ಲಿ ಸಭೆ ನಡೆಸಿತ್ತು. ಸಭೆಯ ಬಳಿಕ ಇಂದು ಒಂದೇ ಹಂತದಲ್ಲಿ 160 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತ – ನದಿಗೆ ಹಾರಿ ಜನರ ಪ್ರಾಣ ಉಳಿಸಿದ ಮಾಜಿ ಶಾಸಕನಿಗೆ ಬಿಜೆಪಿಯಿಂದ ಟಿಕೆಟ್

    ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ (Vijay Rupani) ಮತ್ತು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಇತರ ಮೂವರು ನಾಯಕರು ಹೊಸ ಮುಖಗಳಿಗೆ ದಾರಿ ಮಾಡಿಕೊಡಲು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದರು. ರೂಪಾನಿ ಆಗಸ್ಟ್ 2016 ರಿಂದ ಸೆಪ್ಟೆಂಬರ್ 2021 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಪ್ರಸ್ತುತ ಅವರು ರಾಜ್ಕೋಟ್ ಪಶ್ಚಿಮದಿಂದ ಶಾಸಕರಾಗಿದ್ದಾರೆ.

    ಎರಡೂ ಹಂತದ ಮತಗಳ ಎಣಿಕೆ ಡಿಸೆಂಬರ್ 08 ರಂದು ನಡೆಯಲಿದೆ. ಬಿಜೆಪಿಯು ಚುನಾವಣೆಯಲ್ಲಿ ಆರನೇ ಬಾರಿಗೆ ನೇರ ಅಧಿಕಾರವನ್ನು ಹಿಡಯುವ ವಿಶ್ವಾಸದಲ್ಲಿದೆ, AAP ಗುಜರಾತ್ ಚುನಾವಣೆಯಲ್ಲಿ ಪಾದಾರ್ಪಣೆ ಮಾಡಲು ಪ್ರಯತ್ನಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಜಡೇಜಾ ಪತ್ನಿಗೆ ಗುಜರಾತ್‍ನ ಜಾಮ್‌ನಗರ ಉತ್ತರದಿಂದ ಬಿಜೆಪಿ ಟಿಕೆಟ್

    ಜಡೇಜಾ ಪತ್ನಿಗೆ ಗುಜರಾತ್‍ನ ಜಾಮ್‌ನಗರ ಉತ್ತರದಿಂದ ಬಿಜೆಪಿ ಟಿಕೆಟ್

    ಗಾಂಧೀನಗರ: ಟೀಂ ಇಂಡಿಯಾದ ಸ್ಟಾರ್ ಆಲ್‍ರೌಂಡರ್ ರವೀಂದ್ರ ಜಡೇಜಾ (Ravindra Jadeja) ಪತ್ನಿ ರಿವಾಬಾ ಜಡೇಜಾ (Rivaba Jadega) ಅವರಿಗೆ ಗುಜರಾತ್ ವಿಧಾನಸಭಾ ಚುನಾವಣೆಗೆ (Gujarat Polls) ಬಿಜೆಯಿಂದ (BJP) ಟಿಕೆಟ್ ಸಿಕ್ಕಿದೆ. ಗುಜರಾತ್‍ನ ಜಾಮ್‌ನಗರ ಉತ್ತರದಿಂದ (Jamnagar North) ರಿವಾಬಾ ಜಡೇಜಾ ಸ್ಪರ್ಧಿಸಲಿದ್ದಾರೆ.

    ನಿನ್ನೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿತ್ತು. ಸಭೆಯಲ್ಲಿ ಪಕ್ಷದ ಮುಖ್ಯಸ್ಥ ಜೆ.ಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಪಾಲ್ಗೊಳ್ಳಂಡಿದ್ದರು. ಸಭೆಯಲ್ಲಿ ಒಟ್ಟು 100ಕ್ಕೂ ಅಧಿಕ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಗುಜರಾತ್‍ನ ಜಮ್ನಗರ ಉತ್ತರದಿಂದ ರಿವಾಬಾ ಜಡೇಜಾ ಬಿಜೆಪಿ ಟಿಕೆಟ್ ನೀಡಿದೆ. ಇದನ್ನೂ ಓದಿ: ಭಾರತ-ಇಂಗ್ಲೆಂಡ್ ಸೆಮಿ ಸಮರ – ಗೆದ್ದವರು ಫೈನಲ್‍ಗೆ ಸೋತವರು ಮನೆಗೆ

    2016ರಲ್ಲಿ ಜಡೇಜಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ರಿವಾಬಾ ಜಡೇಜಾ ಮೆಕ್ಯಾನಿಕಲ್ ಎಂಜಿನಿಯರ್ ಪದವೀಧರೆ. ಅಲ್ಲದೇ ಕಾಂಗ್ರೆಸ್ ಹಿರಿಯ ಆಯಕ ಹರಿಸಿಂಗ್ ಸೋಲಂಕಿ ಅವರ ಸಂಬಂಧಿಯಾಗಿದ್ದಾರೆ. ರಿವಾಬಾ ಜಡೇಜಾರನ್ನು ಬಿಜೆಪಿ ನಾಯಕರಾದ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದರು. ಇದೀಗ ಬಿಜೆಪಿ ಟಿಕೆಟ್ ನೀಡಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದೆ. ಇದನ್ನೂ ಓದಿ: ಮುಂಬೈ ಗಲ್ಲಿಯಲ್ಲಿ ಅಭಿಮಾನಿಗಳ ಜೊತೆ ಕ್ರಿಕೆಟ್ ಆಡಿದ ಎಬಿಡಿ

    ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ಪಕ್ಷದ ಹಿರಿಯ ನಾಯಕ ಭೂಪೇಂದ್ರ ಸಿನ್ಹ್ ಚುಡಾಸಮಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಅವರನ್ನು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಟ್ಟಿದೆ. ಗುಜರಾತ್‍ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿಯಿಂದ ಟಿಕೆಟ್?

    ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿಯಿಂದ ಟಿಕೆಟ್?

    ಗಾಂಧಿನಗರ: ಮೂರು ವರ್ಷಗಳ ಹಿಂದೆಯಷ್ಟೇ ಬಿಜೆಪಿ (BJP) ಸೇರ್ಪಡೆಗೊಂಡ ಟೀಂ ಇಂಡಿಯಾ (Team India) ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅವರ ಪತ್ನಿ ರಿವಾಬಾ ಜಡೇಜಾ (Rivaba Jadeja) ಅವರಿಗೆ ಗುಜರಾತ್ ವಿಧಾನಸಭಾ ಚುನಾವಣೆಗೆ (Gujarat Election) ಬಿಜೆಪಿಯಿಂದ ಟಿಕೆಟ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

    ಚುನಾವಣಾ ಸಂಭಾವಿತರ ಪಟ್ಟಿಯಲ್ಲಿ ಜಡೇಜಾ ಪತ್ನಿ ಹೆಸರು ಇರುವುದಾಗಿ ಕೇಳಿಬಂದಿದ್ದು, ಇಂದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಲಿದೆ. ಪಕ್ಷದ ಮುಖ್ಯಸ್ಥ ಜೆ.ಪಿ ನಡ್ಡಾ (JP Nadda) ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಕಾಫಿನಾಡಲ್ಲಿ ದತ್ತಮಾಲಾ ಅಭಿಯಾನ – ಕೇಸರಿ ಬಾವುಟ ವಿಚಾರಕ್ಕೆ 2 ಕೋಮುಗಳ ಮಧ್ಯೆ ಗಲಾಟೆ

    ಕಳೆದ 27 ವರ್ಷಗಳಿಂದ ಗುಜರಾತ್‌ನ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯಿಂದ ಈಬಾರಿ ಮಾಜಿ ಸಿಎಂ ವಿಜಯ್ ರೂಪಾನಿ ಹಾಗೂ ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರಂತಹ ಹಿರಿಯ ನಾಯಕರನ್ನು ಕಣಕ್ಕಿಳಿಸಲು ಸಾಧ್ಯವಿಲ್ಲ. ಹಾಗೆಯೇ 75 ವರ್ಷ ದಾಟಿದವರು ಪ್ರತಿನಿಧಿಸಲು ಅನರ್ಹರಾಗುತ್ತಾರೆ. ಹಾಗಾಗಿ ಸಂಭಾವಿತರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಕೇಳಿ ಬರಲಿದೆ ‘ಮೆಲ್ಲುಸಿರೆ ಸವಿಗಾನ’ ಹಾಡು

    2016ರಲ್ಲಿ ಜಡೇಜಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ರಿವಾಬಾ ಜಡೇಜಾ ಶಿಕ್ಷಣದಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಪದವೀಧರರಾಗಿದ್ದಾರೆ. ಅಲ್ಲದೇ ಕಾಂಗ್ರೆಸ್ ಹಿರಿಯ ಆಯಕ ಹರಿಸಿಂಗ್ ಸೋಲಂಕಿ ಅವರ ಸಂಬಂಧಿಯಾಗಿದ್ದಾರೆ. ಬಿಜೆಪಿ ನಾಯಕರಾದ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಬಿಜೆಪಿಗೆ ಸೇರ್ಪಡೆ

    ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಬಿಜೆಪಿಗೆ ಸೇರ್ಪಡೆ

    ಅಹಮದಾಬಾದ್: ಟೀಮ್ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿ ಹಾಗೂ ಕರ್ಣಿ ಸೇನೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿರುವ ರಿವಾಬಾ ಜಡೇಜಾ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ರಿವಾಬಾ ಜಡೇಜಾ, ಬಿಜೆಪಿ ಸೇರಲು ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಸ್ಫೂರ್ತಿ. ಕೇವಲ ನಮ್ಮ ಸಮುದಾಯಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ನನ್ನ ಸೇವೆಸಲ್ಲಿಸಲು ಬಿಜೆಪಿ ಸೇರಿದ್ದರಿಂದ ನನಗೆ ಅವಕಾಶ ದೊರಕಿದೆ ಅಂತ ನಾನು ನಂಬಿದ್ದೇನೆ ಎಂದಿದ್ದಾರೆ.

    ಈ ಸಂದರ್ಭದಲ್ಲಿ ಗುಜರಾತಿನ ಕೃಷಿ ಸಚಿವ ಆರ್.ಸಿ ಫಾಲ್ದು ಹಾಗೂ ಸಂಸದರಾದ ಪೂನಮ್ ಮದಂ ಅವರು ಉಪಸ್ಥಿತರಿದ್ದರು. ಕರ್ಣಿ ಸೇನೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಿವಾಬಾ ಅವರು ಬಹಳಷ್ಟು ಹೆಸರು ಗಳಿಸಿದ್ದು, ಈಗ ರಾಜಕೀಯಕ್ಕೆ ಕಾಲಿಟ್ಟು ದೇಶಕ್ಕೆ ಸೇವೆ ಸಲ್ಲಿಸಲು ಮುಂದಾಗಿದ್ದಾರೆ.

    ಜಡೇಜಾ ಅವರ ಜನಪ್ರಿಯತೆ ನಿಮಗೆ ಚುನಾವಣೆಗೆ ಲಾಭವಾಗುತ್ತದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಡೇಜಾ ಅವರು ನಮ್ಮ ರಜಪೂತ್ ಸಮುದಾಯಕ್ಕೆ ಮಾತ್ರ ಹೆಮ್ಮೆಯಲ್ಲ, ಯುವ ಜನಾಂಗಕ್ಕೂ ಹೆಮ್ಮೆ. ಆದ್ರೆ ಬಿಜೆಪಿ ಸೇಪಡೆಯಾಗುವ ವಿಚಾರ ನನ್ನ ವೈಯಕ್ತಿಕ ನಿರ್ಧಾರ. ಇದರಿಂದ ಸಮಾಜದಲ್ಲಿ ನನ್ನನ್ನು ನಾನು ಗುರುತಿಸುಕೊಳ್ಳುವುದಕ್ಕೆ ನೆರವಾಗುತ್ತದೆ. ಮಹಿಳಾ ಸಬಲಿಕರಣಕ್ಕೆ ಒಂದು ಉದಾಹರಣೆಯಾಗುತ್ತದೆ. ನಾನು ದೇಶಕ್ಕೆ ಮತ್ತು ನನ್ನ ಸಮುದಾಯಕ್ಕೆ ಸೇವೆ ಸಲ್ಲಿಸಲು ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ.

    ಆದ್ರೆ ನನ್ನ ಪತಿ ಸೆಲೆಬ್ರಿಟಿಯಾಗಿರುವುದರಿಂದ ಅವರು ಯುತ್ ಐಕಾನ್. ಇದರಿಂದ ಬಹಳಷ್ಟು ಯುವಕರು ಕೂಡ ಬಿಜೆಪಿಯತ್ತ ಮುಖಮಾಡುವ ಸಾಧ್ಯತೆಯಿದೆ ಎಂದು ರಿವಾಬಾ ಅಭಿಪ್ರಾಯ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv