Tag: ರಿಷಭ್‌ಪಂತ್

  • ಸರಣಿ ಗೆದ್ದರೂ ಮುಖದಲ್ಲಿ ನಗುವಿಲ್ಲ – ಕೊಹ್ಲಿಯನ್ನು ಗುರಾಯಿಸಿದ ಪಂತ್

    ಸರಣಿ ಗೆದ್ದರೂ ಮುಖದಲ್ಲಿ ನಗುವಿಲ್ಲ – ಕೊಹ್ಲಿಯನ್ನು ಗುರಾಯಿಸಿದ ಪಂತ್

    ಹೈದರಾಬಾದ್: ಇಲ್ಲಿನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಭಾರತ (India) ಮತ್ತು ಆಸ್ಟ್ರೇಲಿಯಾ (Australia) ನಡುವಿನ ಟಿ20 (T20) ಸರಣಿಯ 3ನೇ ಪಂದ್ಯ ನಡೆಯಿತು. ಪಂದ್ಯ ಗೆದ್ದು ಪ್ರಶಸ್ತಿ ಸ್ವೀಕರಿಸಿದ ವೇಳೆ ರಿಷಭ್ ಪಂತ್ (Rishabh Pant) ಒಂದೇಸಮನೆ ವಿರಾಟ್ ಕೊಹ್ಲಿಯನ್ನೇ ಗುರಾಯಿಸುತ್ತಿರುವ ವೀಡಿಯೋ (Virat Kohli) ಇದೀಗ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ.

    ಪಂದ್ಯ ಗೆದ್ದಿದ್ದಕ್ಕಿಂತಲೂ ತಾನು ಕಣಕ್ಕಿಳಿದು ಅಬ್ಬರಿಸಲಿಲ್ಲ ಎನ್ನುವ ಕೋಪವೇ ರಿಷಭ್ ಪಂತ್ (Rishabh Pant) ಅಸಮಾಧಾನಕ್ಕೆ ಕಾರಣವಾಗಿದೆ ಎನ್ನುವಂತಿದೆ. ರಿಷಭ್ ಪಂತ್‌ನ ಈ ನಡೆಗೆ ಕೊಹ್ಲಿ ಅಭಿಮಾನಿಗಳು ಪಂತ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಭಾರತ-ದ.ಆಫ್ರಿಕಾ ಟಿ-20 ಸರಣಿಗೆ ಪರಿವೀಕ್ಷಕರಾಗಿ ಬೆಳಗಾವಿ ಮೂಲದ ಅವಿನಾಶ್ ನೇಮಕ

    ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಇತ್ತಂಡಗಳ ನಡುವೆ 1-1 ರಲ್ಲಿ ಸಮಬಲ ಕಂಡಿತ್ತು. ಭಾನುವಾರದ ಪಂದ್ಯ ಫೈನಲ್‌ನಲ್ಲಿ ಸರಣಿ ಗೆಲ್ಲುವ ತವಕದಲ್ಲಿ ಎರಡು ತಂಡಗಳು ಕಣಕ್ಕಿಳಿದಿದ್ದವು. ಹಾಗಾಗಿ ರೋಚಕ ಕದನಕ್ಕೆ ಹೈದರಾಬಾದ್ ಸಾಕ್ಷಿಯಾಗಿತ್ತು. ಕ್ರೀಸ್‌ನಲ್ಲಿ ನಿಂತು ಅಬ್ಬರಿಸಿದ ವಿರಾಟ್ ಕೊಹ್ಲಿ (Virat Kohli) ಹಾಗೂ ಸೂರ್ಯಕುಮಾರ್ ಯಾದವ್ (Suryakumar Yadav) ಸಿಕ್ಸ್-ಫೋರ್‌ಗಳ ಭರ್ಜರಿ ಬ್ಯಾಟಿಂಗ್ ಮಾಡಿದರು.

    ಕೊನೆಯ 6 ಎತೆಗಳಲ್ಲಿ 11 ರನ್‌ಗಳು ಬೇಕಿದ್ದಾಗಲೇ ಮೊದಲ ಎಸೆತವನ್ನು ಕೊಹ್ಲಿ ಸಿಕ್ಸ್‌ಗೆ ಅಟ್ಟಿದರು. 2ನೇ ಎಸೆತವನ್ನು ಬೌಂಡರಿ ಬಾರಿಸುವ ಪ್ರಯತ್ನದಲ್ಲಿ ಕ್ಯಾಚ್ ನೀಡಿ ಔಟಾದರು. ಇನ್ನೂ ಕೊನೆಯಲ್ಲಿ ಕಣಕ್ಕಿಳಿದ ದಿನೇಶ್ ಕಾರ್ತಿಕ್ (Dinesh Karthik) 3ನೇ ಎಸೆತದಲ್ಲಿ ಒಂದು ರನ್ ಕಲೆಹಾಕಿದರು. 5ನೇ ಎಸೆತವನ್ನು ಬೌಂಡರಿಗೆ ತಳ್ಳುವ ಮೂಲಕ ಹಾರ್ದಿಕ್ ಪಾಂಡ್ಯ (Hardik Pandya) ಗೆಲುವಿನ ನಗೆ ಬೀರಿದರು. ಇದನ್ನೂ ಓದಿ: ಭಾರತ Vs ಆಸ್ಟ್ರೇಲಿಯಾ ಹೈವೋಲ್ಟೆಜ್ ಪಂದ್ಯದ ನಡುವೆ ಮೊಳಗಿತು ಜೈಶ್ರೀರಾಮ್ ಉದ್ಘೋಷ

    ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್, ಕೊನೆಯ ಓವರ್‌ವರೆಗೂ ನಿಂತು ಅಬ್ಬರಿಸಿದ ಕೊಹ್ಲಿ ಪಾತ್ರ ಪ್ರಮುಖವಾಗಿತ್ತು. ಆದರೆ ಹಾಲಿ ವಿಶ್ವಚಾಂಪಿಯನ್‌ಗಳನ್ನ ಸೋಲಿಸಿದರೂ ಟೀಂ ಇಂಡಿಯಾ ಕ್ರಿಕೆಟರ್ ರಿಷಭ್ ಪಂತ್‌ಗೆ ಪಂದ್ಯ ಗೆದ್ದಿದ್ದಕ್ಕಿಂತಲೂ ತಾನು ಕಣಕ್ಕಿಳಿಯಲಿಲ್ಲ ಎನ್ನುವ ಅಸಮಾಧಾನವೇ ಇದ್ದಂತೆ ಕಾಣುತ್ತಿದೆ ಎಂದು ನೆಟ್ಟಿಗರು ಸೂಚಿಸಿದ್ದಾರೆ. ಹಾಗಾಗಿ ರಿಷಭ್ ಮುಖದಲ್ಲಿ ಮಂದಹಾಸ ಮೂಡಲೇ ಇಲ್ಲ. ಕೊಹ್ಲಿಯನ್ನು ಗುರಾಯಿಸುತ್ತಲೇ ಇದ್ದರು. ಕೊನೆಯಲ್ಲಿ ಸಾಂಕೇತಿಕವಾಗಿ ನಕ್ಕು ಸುಮ್ಮನಾದರು.

    ಭಾನುವಾರ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 186 ರನ್‌ಗಳನ್ನು ಗಳಿಸಿತು. ಈ ಗುರಿ ಬೆನ್ನತ್ತಿದ ಟೀಂ ಇಂಡಿಯಾ 19.5 ಓವರ್‌ಗಳಲ್ಲೇ 4 ವಿಕೆಟ್ ನಷ್ಟಕ್ಕೆ 187 ರನ್‌ಗಳನ್ನು ಪೇರಿಸುವ ಮೂಲಕ ಗೆಲುವು ಸಾಧಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಟ್ರೆನಿನಾಡ್: ಬ್ರಾಂಡನ್ ಕಿಂಗ್ ಅವರ ಆಕರ್ಷಕ ಅರ್ಧ ಶತಕ ಹಾಗೂ ಒಬೆಡ್ ಮೆಕಾಯ್ ಅವರ ಮಾರಕ ಬೌಲಿಂಗ್ ನೆರವಿನಿಂದ ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ವಿಂಡೀಸ್ ರೋಚಕ ಜಯ ಸಾಧಿಸಿದೆ.

    ಇಲ್ಲಿನ ವಾರ್ನರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ವೆಸ್ಟ್ ಇಂಡೀಸ್, ಬ್ಯಾಟಿಂಗ್ ಮಾಡುವ ಅವಕಾಶವನ್ನು ಟೀಂ ಇಂಡಿಯಾಕ್ಕೆ ನೀಡಿತು. ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ 19.4 ಓವರ್‌ಗಳಲ್ಲಿ 138 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ವಿಂಡೀಸ್ ತಂಡ 19.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 141 ರನ್‌ಗಳಿಸಿ ರೋಚಕ ಜಯ ಸಾಧಿಸಿತು. ಇದನ್ನೂ ಓದಿ: Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    ಅರಂಭದಿಂದಲೇ ಮಾರಕ ಬೌಲಿಂಗ್ ದಾಳಿ ಮಾಡಿದ ವಿಂಡೀಸ್ ತಂಡದ ಬೌಲರ್‌ಗಳು ಟೀಂ ಇಂಡಿಯಾದ ಯಾವೊಬ್ಬ ಆಟಗಾರರೂ ಸ್ಥಿರವಾಗಿ ಕ್ರೀಸ್‌ನಲ್ಲಿ ನಿಲ್ಲದಂತೆ ಕಟ್ಟಿಹಾಕಿದರು. ಪರಿಣಾಮವಾಗಿ 138 ರನ್‌ಗಳ ಸಾಧಾರಣ ಮೊತ್ತವನ್ನಷ್ಟೇ ಭಾರತ ಪೇರಿಸಲು ಸಾಧ್ಯವಾಯಿತು. ಈ ಮೊತ್ತವನ್ನು ರಕ್ಷಣೆ ಮಾಡಲು ಭಾರತೀಯ ಬೌಲರ್‌ಗಳು ಕೂಡ ಅಂತಿಮ ಹಂತದವರೆಗೂ ಹೋರಾಡಿದರಾದರೂ ಕೊನೆಯ ಹಂತದಲ್ಲಿ ವಿಂಡೀಸ್ ಗೆದ್ದು ಬೀಗಿದೆ. ಇದನ್ನೂ ಓದಿ: ಪದಕ ಗೆದ್ದಾಗಿದೆ ಇನ್ನಾದರೂ ಸಿನಿಮಾ ನೋಡು – ಚಿನ್ನದ ಹುಡುಗ ಅಚಿಂತ್‌ಗೆ ಮೋದಿ ಸಂದೇಶ

    ಮೆಕಾಯ್ ಮ್ಯಾಜಿಕ್: ಇನ್ನೂ ಭಾರತೀಯ ಬ್ಯಾಟಿಂಗ್ ವಿಭಾಗಕ್ಕೆ ದೊಡ್ಡ ಆಘಾತ ನೀಡಿದ್ದು ವೆಸ್ಟ್ ಇಂಡೀಸ್ ತಂಡದ ವೇಗಿ ಒಬೆದ್ ಮೆಕಾಯ್. ಪಂದ್ಯದ ಮೊದಲ ಎಸೆತವೇ ಭಾರತ ತಂಡಕ್ಕೆ ಆಘಾತ ನೀಡಿತು. ಪಂದ್ಯದ ಮೊದಲ ಎಸೆತದಲ್ಲಿಯೇ ಆರಂಭಿಕ ಆಟಗಾರ ರೋಹಿತ್ ಶರ್ಮಾ ವಿಕೆಟ್ ಉರುಳಿಸಿದರು. ತಮ್ಮ ಮುಂದಿನ ಓವರ್‌ನ ಮೊದಲ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ವಿಕೆಟ್ ಪಡೆದರು. ಅದಾದ ಬಳಿಕ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಆರ್.ಅಶ್ವಿನ್ ಹಾಗೂ ಭುವನೇಶ್ವರ್ ಕುಮಾರ್ ವಿಕೆಟ್ ಕಬಳಿಸಿ ಟೀಂ ಇಂಡಿಯಾವನ್ನು ಅಲ್ಪ ಮೊತ್ತದಲ್ಲೇ ಕಟ್ಟಿಹಾಕಿದರು. 4 ಓವರ್‌ಗಳಲ್ಲಿ ಕೇವಲ 17 ರನ್ ನೀಡಿದ ಮೆಕಾಯ್ 6 ವಿಕೆಟ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು.

    ಬ್ರೆಂಡನ್ ಕಿಂಗ್ ಅರ್ಧ ಶತಕ: ಅದರಂತೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಆರಂಭಿಕ ಆಟಗಾರ ಬ್ರೆಂಡನ್ ಕಿಂಗ್ ಜವಾಬ್ದಾರಿಯುತ ಅರ್ಧ ಶತಕ ಸಿಡಿಸಿ ತಂಡಕ್ಕೆ ನೆರವಾಗಿದ್ದಾರೆ. 52 ಎಸೆತಗಳನ್ನು ಎದುರಿಸಿದ ಬ್ರೆಂಡನ್ 68 ರನ್ (8 ಬೌಂಡರಿ, 2 ಸಿಕ್ಸರ್) ಗಳಿಸಿದರು. ಬಳಿಕ ಅಂತಿಮ ಹಂತದಲ್ಲಿ ಡೆವೋನ್ ಥೋಮಸ್ ಸ್ಪೋಟಕ ಪ್ರದರ್ಶನ ನೀಡಿ ಭಾರತದಿಂದ ಗೆಲುವನ್ನು ಕಸಿದರು. ಥೋಮರ್ 19 ಎಸೆತಗಳಲ್ಲಿ ಸ್ಪೋಟಕ 31 ರನ್ (1 ಬೌಂಡರಿ, 2 ಸಿಕ್ಸರ್) ಸಿಡಿಸಿದರು.

    ರೋಹಿತ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದ ನಂತರ ಸೂರ್ಯಕುಮಾರ್ ಯಾದವ್ 11, ಶ್ರೇಯಸ್ ಅಯ್ಯರ್ 10 ಗಳಿಸಿ ಪೆವಿಲಿಯನ್ ಸೇರಿದರು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಿಷಭ್‌ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರು. ಸ್ಫೋಟಕ ಬ್ಯಾಟಿಂಗ್ ಆರಂಭಿಸಿದ ರಿಷಭ್ ಪಂತ್ 12 ಎಸೆಗಳಲ್ಲಿ 2 ಸಿಕ್ಸರ್ ಹಾಗೂ 1 ಬೌಂಡರಿಯೊಂದಿಗೆ 24 ರನ್ ಸಿಡಿಸಿದರೆ, ಹಾರ್ದಿಕ್ ಪಾಂಡ್ಯ 31 ಎಸೆತಗಳಲ್ಲಿ 31 ರನ್ (1 ಬೌಂಡರಿ, 2 ಸಿಕ್ಸರ್) ಸಿಡಿಸಿದರು. ಇವರಿಬ್ಬೆ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 55 ರನ್‌ಗಳನ್ನು ಗಳಿಸಿತ್ತು. ನಂತರದಲ್ಲಿ ಬಂದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಟೀಂ ಇಂಡಿಯಾ ಸೋಲನ್ನು ಎದುರಿಸಬೇಕಾಯಿತು.

    ಬೌಲಿಂಗ್‌ನಲ್ಲಿ ಅರ್ಶ್‌ದೀಪ್‌ ಸಿಂಗ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಹಾರ್ದಿಕ್ ಪಾಂಡ್ಯ, ಅವೇಶ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು. ಇದನ್ನೂ ಓದಿ: IND vs WI 2nd T20: ಎರಡು ಗಂಟೆ ತಡವಾಗಿ ಪಂದ್ಯ ಆರಂಭ – ಕಾರಣ ಮಾತ್ರ ಸಿಂಪಲ್

    ಸರಣಿ ಸಮಬಲ: ಇನ್ನು ಈ ಫಲಿತಾಂಶದಿಂದಾಗಿ 5 ಟಿ20 ಪಂದ್ಯಗಳ ಟಿ20 ಸರಣಿ ಈಗ 1-1ರಲ್ಲಿ ಸಮಬಲಗೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 2ನೇ ಓವರ್‌ನಿಂದಲೇ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರೂ ಅತಿ ವೇಗವಾಗಿಯೇ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. ಐದು ಓವರ್‌ಗಳಲ್ಲಿ 48 ರನ್ ಗಳಿಸಿದ್ದ ಟೀಂ ಇಂಡಿಯಾ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • 17 ವರ್ಷಗಳ ಬಳಿಕ ಧೋನಿ ದಾಖಲೆ ಸರಿಗಟ್ಟಿದ ಪಂತ್- ಅಂತಿಮ ಟೆಸ್ಟ್‌ನಲ್ಲಿ ಅಮೋಘ ಶತಕದಾಟ

    17 ವರ್ಷಗಳ ಬಳಿಕ ಧೋನಿ ದಾಖಲೆ ಸರಿಗಟ್ಟಿದ ಪಂತ್- ಅಂತಿಮ ಟೆಸ್ಟ್‌ನಲ್ಲಿ ಅಮೋಘ ಶತಕದಾಟ

    ಬರ್ಮಿಂಗ್‌ಹ್ಯಾಮ್‌: ಎಡ್ಜಾಬಸ್ಟನ್‌ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್‌ನ ಮೊದಲ ದಿನವೇ ಅಮೋಘ ಶತಕ ಸಿಡಿಸಿದ ವಿಕೆಟ್ ಕೀಪರ್ ರಿಷಭ್ ಪಂತ್ 17 ವರ್ಷಗಳ ಬಳಿಕ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

    ಟೆಸ್ಟ್ ಕ್ರಿಕೆಟ್‌ನಲ್ಲಿ 89 ಎಸೆತಗಳಲ್ಲಿ 5ನೇ ಬಾರಿಗೆ ಶತಕ ಸಿಡಿಸಿದ ಪಂತ್ ಅತಿ ವೇಗದ ಶತಕ ಬಾರಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಅವರು 2005ರಲ್ಲಿ ಫೈಸಲಾಬಾದ್‌ನಲ್ಲಿ ಪಾಕಿಸ್ತಾನದ ವಿರುದ್ಧ 93 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ದಾಖಲೆ ಮಾಡಿದ್ದರು. ಪಂತ್ ಕೇವಲ 111 ಎಸೆತಗಳಲ್ಲಿ 146 ರನ್ ಗಳಿಸಿದರು. ಇದರಲ್ಲಿ 4 ಸಿಕ್ಸರ್ ಹಾಗೂ 19 ಬೌಂಡರಿಗಳೂ ಒಳಗೊಂಡಿವೆ.

    89 ಎಸೆತಗಳಲ್ಲಿ ದಾಖಲಾದ ಪಂತ್ ಶತಕವು ಅತ್ಯಂತ ವೇಗದ ಶತಕ ಎನಿಸಿಕೊಳ್ಳುವ ಜೊತೆಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಅವರ ದಾಖಲೆಯನ್ನೂ ಸೋಲಿಸಿದ್ದಾರೆ. ಇದನ್ನೂ ಓದಿ: ಕಪಿಲ್ ದೇವ್ ನಂತರ 35 ವರ್ಷಗಳ ಬಳಿಕ ಭಾರತದ ನಾಯಕತ್ವ ಪಡೆದ ವೇಗಿ – ಬುಮ್ರಾ ಕ್ಯಾಪ್ಟನ್, ಪಂತ್ ವೈಸ್ ಕ್ಯಾಪ್ಟನ್

    ಪಂಥ್ ಅಮೋಘ ಶತಕ: ಇಂಗ್ಲೆಂಡ್ ವಿರುದ್ಧದ ಎಡ್ಜಾಬಸ್ಟನ್‌ ಕ್ರೀಡಾಂಗಣದಲ್ಲಿ ಅಂತಿಮ ಟೆಸ್ಟ್ನ ಮೊದಲ ದಿನವಾದ ಶುಕ್ರವಾರ ವಿಕೆಟ್ ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರ ಅದ್ಭುತ ಶತಕ ಮತ್ತು ರವೀಂದ್ರ ಜಡೇಜಾ ಅವರ 222 ರನ್‌ಗಳ ಅಮೋಘ ಜೊತೆಯಾಟದ ನೆರವಿನಿಂದ ಭಾರತ 7 ವಿಕೆಟ್ ಕಳೆದುಕೊಂಡು 338 ರನ್ ಗಳಿಸಿದೆ.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 100 ರನ್‌ಗಳ ಗಡಿ ದಾಟುವ ಮೊದಲೇ ಅಗ್ರ ಕ್ರಮಾಂಕದ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಂಗ್ಲೆಂಡ್‌ನ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಪ್ರಮುಖ 3 ವಿಕೆಟ್ ಕಿತ್ತು ಭಾರತಕ್ಕೆ ಆಘಾತ ನೀಡಿದ್ದರು. ಇದನ್ನೂ ಓದಿ: ಒಂದು ದಿನ ಮುಂಚಿತವಾಗಿ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್ – ತಂಡದಲ್ಲಿ ಯಾರೆಲ್ಲಾ ಇದ್ದಾರೆ?

    ನಂತರ 6ನೇ ವಿಕೆಟ್‌ಗೆ ಜೊತೆಯಾದ ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ ಪ್ರತಿ ಹೋರಾಟ ನಡೆಸಿ ಅರ್ಧಶತಕದ ಜೊತೆಯಾಟ ಕಟ್ಟಿದರು. ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ರಿಷಭ್ ಪಂತ್ ಇಂಗ್ಲೆಂಡ್ ನೆಲದಲ್ಲಿ ಮತ್ತೊಂದು ಅರ್ಧಶತಕ ಬಾರಿಸಿ ತಂಡಕ್ಕೆ ನೆರವಾದರು. ಸದ್ಯ ಎಚ್ಚರಿಕೆಯಿಂದ ಬ್ಯಾಟ್ ಮಾಡುತ್ತಿರುವ ರವೀಂದ್ರ ಜಡೇಜಾ 163 ಎಸೆತಗಳನ್ನು ಎದುರಿಸಿ 10 ಬೌಂಡರಿಗಳೊಂದಿಗೆ 83 ರನ್‌ಗಳನ್ನು ಕಲೆಹಾಕಿದ್ದಾರೆ. ಇವರಿಗೆ ಜೊತೆಯಾಗಿ ಮೊಹಮ್ಮದ್ ಶಮಿ ಕ್ರೀಸ್‌ನಲ್ಲಿ ಇದ್ದಾರೆ.

    5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1ರ ಅಂತರದಲ್ಲಿ ಮೇಲುಗೈ ಸಾಧಿಸಿದ್ದು, ಈ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳಲು ಬುಮ್ರಾ ಪಡೆ ಸಜ್ಜಾಗಿದೆ.

    Live Tv

  • ಪಂದ್ಯ ಗೆದ್ದು IPL ಸೀಸನ್‌ಗೆ ಗುಡ್‌ಬೈ ಹೇಳಿದ ಮುಂಬೈ- ಸೋಲಿಗೆ ಕಾರಣ ಬಿಚ್ಚಿಟ್ಟ ರಿಷಭ್ ಪಂತ್

    ಪಂದ್ಯ ಗೆದ್ದು IPL ಸೀಸನ್‌ಗೆ ಗುಡ್‌ಬೈ ಹೇಳಿದ ಮುಂಬೈ- ಸೋಲಿಗೆ ಕಾರಣ ಬಿಚ್ಚಿಟ್ಟ ರಿಷಭ್ ಪಂತ್

    ನವದೆಹಲಿ: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ನಡೆದ IPL ಟೂರ್ನಿಯ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ದೆಹಲಿ ಕ್ಯಾಪಿಟಲ್ಸ್ ಸೋಲು ಕಂಡಿತು. ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರಬಿದ್ದಿದ್ದ ಮುಂಬೈ ತನ್ನ ಜೊತೆಗೆ ದೆಹಲಿಯನ್ನೂ ಸೀಸನ್‌ನಿಂದ ಹೊರಗೆಳೆಯಿತು.

    ಐಪಿಎಲ್ 15ನೇ ಆವೃತ್ತಿಯಲ್ಲಿ ತನ್ನ 14ನೇ ಪಂದ್ಯವನ್ನಾಡಿದ ಮುಂಬೈ ಇಂಡಿಯನ್ಸ್ ತಂಡ ಗೆದ್ದು ಆವೃತ್ತಿಗೆ ಗುಡ್‌ಬೈ ಹೇಳಿತು. 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ರೋಹಿತ್ ಶರ್ಮಾ ಪಡೆಯಿಂದ RCB ತಂಡವು ಪ್ಲೇ ಆಫ್ ಪ್ರವೇಶಿಸಲು ಸಹಕಾರಿಯಾಯಿತು. ಇದನ್ನೂ ಓದಿ: ಈಡೇರಿದ ಬೆಂಗ್ಳೂರು ಅಭಿಮಾನಿಗಳ ಬಯಕೆ – ಆರ್‌ಸಿಬಿ ಪ್ಲೇ ಆಫ್‍ಗೆ ಡೆಲ್ಲಿ ಮನೆಗೆ

    TIM DEVID

    ಕೊನೆಯ ಪಂದ್ಯವನ್ನು ಗೆದ್ದಿದ್ದರೆ ದೆಹಲಿಗೆ ಪ್ಲೇ ಆಫ್ ಪ್ರವೇಶಿಸುವ ಉತ್ತಮ ಅವಕಾಶವಿತ್ತು. ಮುಂಬೈ ವಿರುದ್ಧ ರಿಷಭ್ ಪಂತ್ ಪಡೆಯ ಗೆಲುವಿಗೆ ಉತ್ತಮ ಅವಕಾಶವಿತ್ತು. ಆದರೆ ಸುಲಭವಾಗಿ ಗೆಲ್ಲುವ ಪಂದ್ಯದಲ್ಲಿ ದೆಹಲಿ ಸೋಲಬೇಕಾಯಿತು. ಮ್ಯಾಚ್ ಮುಗಿದ ಬಳಿಕ ತಮ್ಮ ತಂಡದ ಸೋಲಿಗೆ ಕಾರಣವೇನೆಂಬುದನ್ನು ನಾಯಕ ರಿಷಭ್ ಪಂತ್ ಹೇಳಿದ್ದಾರೆ. ಇದನ್ನೂ ಓದಿ: ಡೆಲ್ಲಿ ವಿರುದ್ಧದ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಐಪಿಎಲ್‍ಗೆ ಪದಾರ್ಪಣೆ?

    ಈ ಕುರಿತು ಮಾತನಾಡಿದ ರಿಷಭ್ ಪಂತ್, ನಾವು ಉತ್ತಮವಾಗಿಯೇ ಆಡಿದ್ದೆವು. ಆದರೆ ಕೆಲವು ತಪ್ಪುಗಳಿಂದಾಗಿ ಸೋಲಬೇಕಾಯಿತು. ಬೌಲಿಂಗ್ ಮತ್ತು ಫೀಲ್ಡಿಂಗ್‌ನಲ್ಲಿ ಫೇಲ್ ಆಗಿದ್ದರಿಂದ ಸೋಲಾಗಿದೆ. ಟೂರ್ನಿಯುದ್ದಕ್ಕೂ ನಾವು ಇದೇ ತೊಂದರೆಯನ್ನು ಎದುರಿಸಿದ್ದೇವೆ. ನಾವು ನಮ್ಮ ತಪ್ಪುಗಳಿಂದ ಪಾಠ ಕಲಿತಿದ್ದೇವೆ. ಮುಂದಿನ ಸೀಸನ್‌ನಲ್ಲಿ ಬಲಿಷ್ಠ ತಂಡವಾಗಿ ಮರಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮುಂಬೈ ಇಂಡಿಯನ್ಸ್ ತಂಡದ ಈ ಗೆಲುವಿನಲ್ಲಿ ಟಿಮ್ ಡೇವಿಡ್ ಪಾತ್ರ ಬಹುಮುಖ್ಯವಾಗಿದೆ. ಕೇವಲ 11 ಎಸೆತಗಳಲ್ಲಿ ಅವರು 34 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿ ತಂಡಕ್ಕೆ ಗೆಲುವು ತಂದುಕೊಟ್ಟರು. ಒಂದು ಬಾರಿ ಟಿಮ್ ಡೇವಿಡ್ ಕ್ಲೀನ್ ಔಟ್ ಆಗಿದ್ದರು. ಆದರೆ ಅಂಪೈರ್ ಔಟ್ ನೀಡಲಿಲ್ಲ. ಈ ವೇಳೆ ರಿಷಭ್ ಪಂತ್ ಡಿಆರ್‌ಎಸ್ ರಿವ್ಯೂ ತೆಗೆದುಕೊಳ್ಳಲಿಲ್ಲ. ಆದರೆ ಟಿಮ್ ಡೇವಿಡ್ ಸ್ಪಷ್ಟವಾಗಿ ಔಟಾಗಿರುವುದು ಬಳಿಕ ಗೊತ್ತಾಯಿತು. ಇದರಿಂದಾಗಿ ದೆಹಲಿಗೆ ದೊಡ್ಡ ಹೊಡೆತ ಬಿದ್ದಂತಾಯಿತು. ಒಂದು ವೇಳೆ ರಿವ್ಯೂ ತೆಗೆದುಕೊಂಡಿದ್ದರೆ ಟಿಮ್ ಡೇವಿಡ್ ಸ್ಫೋಟಕ ಆಟಕ್ಕೆ ಬ್ರೇಕ್ ಬೀಳುತ್ತಿತ್ತು. ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧ್ಯವೂ ಆಗುತ್ತಿತ್ತು.

    ಕ್ಯಾಚ್ ಕೈಚೆಲ್ಲಿದ್ದೇ ಎಡವಟ್ಟಾಯ್ತು: ರಿಷಭ್ ಪಂತ್ ಸೇರಿದಂತೆ ದೆಹಲಿಯ ಕೆಲ ಆಟಗಾರರು ಕೆಲವು ಸುಲಭ ಕ್ಯಾಚ್‌ಗಳನ್ನು ಕೈಚೆಲ್ಲಿದ್ದು ತಂಡಕ್ಕೆ ಭಾರೀ ಪೆಟ್ಟು ನೀಡಿತು. ಉತ್ತಮ ಫೀಲ್ಡಿಂಗ್ ಮಾಡಿದ್ದರೆ ಮುಂಬೈ ವಿರುದ್ಧ ದೆಹಲಿ ಗೆಲುವು ಸಾಧಿಸುವ ಎಲ್ಲ ಸಾಧ್ಯತೆಗಳು ಇದ್ದವು. ಆದರೆ ಕೈಚೆಲ್ಲಿದ ಕ್ಯಾಚ್‌ಗಳಿಂದ ದೆಹಲಿ ಸೋಲು ಕಾಣಬೇಕಾಯಿತು.