Tag: ರಿಷಿ

  • ರಿಷಿ ಹೊಸ ಸಿನಿಮಾಗೆ ಮುಹೂರ್ತ: ಬಿಗ್ ಬಾಸ್ ಸ್ಪರ್ಧಿ ನಾಯಕಿ

    ರಿಷಿ ಹೊಸ ಸಿನಿಮಾಗೆ ಮುಹೂರ್ತ: ಬಿಗ್ ಬಾಸ್ ಸ್ಪರ್ಧಿ ನಾಯಕಿ

    ‘ಮಂಗಳಾಪುರಂ’ (Mangalapuram) ಸ್ಯಾಂಡಲ್‌ವುಡ್‌ನಲ್ಲಿ ಸೆಟ್ಟೇರಿದ ಮತ್ತೊಂದು ಹೊಸ ಸಿನಿಮಾ. ಆಪರೇಷನ್ ಅಲಮೇಲಮ್ಮ, ಕವಲುದಾರಿ ಖ್ಯಾತಿಯ ನಟ ರಿಷಿ ನಾಯಕನಾಗಿ ನಟಿಸುತ್ತಿರುವ ಸಿನಿಮಾ. ವಿಭಿನ್ನ ಸಿನಿಮಾಗಳ ಮೂಲಕ, ವಿನೂತನ ಪಾತ್ರಗಳ ಮೂಲಕ ಅಭಿಮಾನಿಗಳ ಮುಂದೆ ಬರುವ ನಟ ರಿಷಿ ಈ ಬಾರಿ ಮಂಗಳಾಪುರಂ ಎನ್ನುವ ಮತ್ತೊಂದು ವಿಭಿನ್ನ ಸಿನಿಮಾಗೆ ಬಣ್ಣ ಹಚ್ಚಿದ್ದಾರೆ. ರಿಷಿ ಜೊತೆಗೆ ಪ್ರಮುಖ ಪಾತ್ರದಲ್ಲಿ ಕಾಶಿನಾಥ್ ಅವ ಪುತ್ರ ಅಭಿಮನ್ಯು ಕಾಶಿನಾಥ್ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಟೈಟಲ್ ಮೂಲಕ ಗಮನ ಸೆಳೆದಿದ್ದ ಮಂಗಳಾಪುರಂ ಸಿನಿಮಾ ಇದೀಗ ಅದ್ದೂರಿ ಮುಹೂರ್ತ ಮಾಡಿಕೊಳ್ಳುವ ಮೂಲಕ ಚಿತ್ರೀಕರಣ ಪ್ರಾರಂಭಿಸಿದೆ.

    ಮಂಗಳಾಪುರಂ ಸಿನಿಮಾದ ಮುಹೂರ್ತ ಸಮಾರಂಭ ಮೂಡಬಿದಿರೆಯ ಅಲಂಗಾರಿನಲ್ಲಿರುವ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಮುಹೂರ್ತ ಸಮಾರಂಭದಲ್ಲಿ ಇಡೀ ಸಿನಿಮಾತಂಡದ ಜೊತೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವಾ, ಅಲಂಗಾರು ಈಶ್ವರ ಭಟ್, ಉದ್ಯಮಿ ಶ್ರೀಪತಿ ಭಟ್ ಸೇರಿದಂತೆ ಅನೇಕರು ಹಾಜರಿದ್ದು, ಸಿನಿಮಾತಂಡಕ್ಕೆ ಶುಭಹಾರೈಸಿದರು. ಇದನ್ನೂ ಓದಿ: ದುನಿಯಾ ವಿಜಯ್ ಪುತ್ರಿ ರಿತನ್ಯಾ ಹುಟ್ಟುಹಬ್ಬಕ್ಕೆ ಲ್ಯಾಂಡ್ ಲಾರ್ಡ್ ಫಸ್ಟ್ ಲುಕ್

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವಾ ಮಂಗಳಾಪುಂ ಸಿನಿಮಾಗೆ ಕ್ಲ್ಯಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಅಂದಹಾಗೆ ಮಂಗಳಾಪುರಂ ರಂಜಿತ್ ರಾಜ್ ಸುವರ್ಣ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮೊದಲ ಕನ್ನಡ ಸಿನಿಮಾ. ಈ ಮೊದಲು ತುಳು ಸಿನಿಮಾ ಮಾಡಿದ್ದ ರಂಜಿತ್ ರಾಜ್ ಅವರು ಇದೀಗ ಮಂಗಳಾಪುರಂ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ವಾರಾಹಿ ಕ್ರಿಯೇಶನ್ ಮೂಲಕ ಈ ಚಿತ್ರವನ್ನು ವಿದ್ವಾನ್ ಪ್ರಸನ್ನ ತಂತ್ರಿ, ರಾಮ್ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ.

    ಮಂಗಳಾಪುರಂನಲ್ಲಿ ರಿಷಿಗೆ ಜೋಡಿಯಾಗಿ ಕಿರುತೆರೆಯಲ್ಲಿ ಖ್ಯಾತಿಗಳಿಸಿದ್ದ ನಟಿ ಗೌತಮಿ ಜಾದವ್ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಗೌತಮಿ ಮತ್ತು ರಿಷಿ ತೆರೆ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಇನ್ನೂ ವಿಶೇಷ ಎಂದರೆ ಚಿತ್ರಕ್ಕೆ ಗೌತಮಿ ಜಜಾದವ್ ಅವರ ಪತಿ ಅಭಿಷೇಕ್ ಕಾಸರಗೋಡು ಛಾಯಾಗ್ರಹಣವಿದೆ. ಪತ್ನಿಯ ನಟನೆಯನ್ನು ಪತಿಯೇ ಸೆರೆಹಿಡಿಯುತ್ತಿರುವುದು ವಿಶೇಷ. ಇನ್ನೂ ಉಳಿದಂತೆ ಸಿವಿಮಾದಲ್ಲಿ ವಿದ್ಯನಾಥ್ ಬಿರಾದರ್, ದೀಪಕ್ ರೈ ದೇವರಾಜ್ ಕಾಪಿಕಾಡ್,ರಾಮದಾಸ್ ಸೇರಿದಂತೆ ಕರಾವಳಿಯ ಅನೇಕ ಕಲಾವಿದರು ಕಾಣಿಸಿಕೊಳ್ಳುತ್ತಿದ್ದಾರೆ. ಮಂಗಳಾಪುರಂ ಸಿನಿಮಾ ಒಂದು ಊರಿನಲ್ಲಿ ನಡೆಯುವ ಮರ್ಡರ್ ಮಿಸ್ಟ್ರಿ ಕಥೆ. ನಂಬಿಕೆ – ಮೂಡನಂಬಿಕೆ ಹಾಗೂ ಪವಾಡ ವಿಚಾರದ ಮೇಲೆ ಕಥೆ ಸಾಗಲಿದೆ ..ಕಾರ್ಕಳ, ತೀರ್ಥಹಳ್ಳಿ, ಮಡಿಕೆರಿ, ಬೆಂಗಳೂರು ಸುತ್ತಾಮುತ್ತಾ ಚಿತ್ರೀಕರಣ ನಡೆಯಲಿದೆ. ಅನೂಪ್ ಸೀಳಿನ್ ಸಂಗೀತ ಚಿತ್ರಕ್ಕಿದೆ.

  • ‘ಮಂಗಳಾಪುರಂ’ ಸಿನಿಮಾ ಕಥೆ ಹೇಳಲು ಸಜ್ಜಾದ ರಿಷಿ

    ‘ಮಂಗಳಾಪುರಂ’ ಸಿನಿಮಾ ಕಥೆ ಹೇಳಲು ಸಜ್ಜಾದ ರಿಷಿ

    ಟ ರಿಷಿ (Rishi) ಸದಾ ವಿಭಿನ್ನ ಕಥೆಗಳನ್ನ ಆಯ್ಕೆ ಮಾಡಿಕೊಂಡು ಪ್ರೇಕ್ಷಕರ ಮುಂದೆ ಬರುವ ಕಲಾವಿದ. ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ರಿಷಿ ಮಂಗಳೂರು ಮೂಲದ ತಂಡದ ಜೊತೆಗೆ ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಹಿಂದೆ ತುಳು ಚಿತ್ರರಂಗದಲ್ಲಿ ಉಮಿಲ್ ಹಾಗೂ ದೊಂಬರಾಟ ಸಿನಿಮಾ ಮಾಡಿ ಸಕ್ಸಸ್ ಕಂಡಿರೋ ರಂಜಿತ್ ರಾಜ್ ಸುವರ್ಣ ಅವರು ರಿಷಿ ನಟನೆಯ ಹೊಸ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ:ಧನುಷ್ ನಟನೆಯ ‘ಕುಬೇರ’ ಚಿತ್ರದ ಫಸ್ಟ್ ಸಾಂಗ್ ರಿಲೀಸ್

    ರಿಷಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ‘ಮಂಗಳಾಪುರಂ’ (Mangalapuram Film) ಎಂದು ಹೆಸರಿಟ್ಟಿದ್ದು ಸದ್ಯ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದೆ ಚಿತ್ರತಂಡ. ರಿಷಿ ಜೊತೆ ಕಾಶಿನಾಥ್ (Kashinath) ಪುತ್ರ ಅಭಿಮನ್ಯು ಕೂಡ ನಟಿಸಲಿದ್ದಾರೆ. ಇದೇ ಮೊದಲ ಬಾರಿಗೆ ಅಭಿಮನ್ಯು (Abhimanyu) ಹಾಗೂ ರಿಷಿ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ. ಇದನ್ನೂ ಓದಿ: ನಾನು ಚಿಕ್ಕಂದಿನಿಂದ ಶಿವನ ಭಕ್ತ: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಯಶ್

    ‘ಮಂಗಳಾಪುರಂ’ ಸಿನಿಮಾ ಒಂದು ಊರಿನಲ್ಲಿ ನಡೆಯುವ ಮರ್ಡರ್ ಮಿಸ್ಟ್ರಿ ಕಥೆ. ನಂಬಿಕೆ, ಮೂಡನಂಬಿಕೆ, ಕೈವಾಡ ಹಾಗೂ ಪವಾಡ ವಿಚಾರದ ಮೇಲೆ ಕಥೆ ಸಾಗಲಿದೆ. ಈ ಸಿನಿಮಾಗೆ ಪ್ರಸನ್ನ ತಂತ್ರಿ ಮೂಡಬಿದ್ರೆ ಹಾಗೂ ರಾಮ್ ಪ್ರಸಾದ್ ಬಂಡವಾಳ ಹಾಕಿದ್ದಾರೆ. ಈ ಮೂಲಕ ಮೊದಲ ಬಾರಿಗೆ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

    ಸದ್ಯ ಫಸ್ಟ್ ಲುಕ್ ರಿವೀಲ್ ಮಾಡಿರುವ ತಂಡ ಜೂನ್‌ನಲ್ಲಿ ಚಿತ್ರೀಕರಣ ಶುರು ಮಾಡಲಿದೆ. ಕಾರ್ಕಳ, ತೀರ್ಥಹಳ್ಳಿ, ಮಡಿಕೇರಿ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಅನೂಪ್ ಸಿಳೀನ್ ಸಂಗೀತ ನಿರ್ದೇಶನ ಸಿನಿಮಾಗೆ ಇರಲಿದ್ದು, ಅಭಿಷೇಕ್ ಕಾಸರಗೋಡು ಕ್ಯಾಮೆರಾ ವರ್ಕ್ ಮಾಡಲಿದ್ದಾರೆ. ಚಿತ್ರದ ಫಸ್ಟ್ ಲುಕ್ ರಿವೀಲ್ ಮಾಡಿರುವ ತಂಡ ಆದಷ್ಟು ಬೇಗ ಶೂಟಿಂಗ್ ಮುಗಿಸಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

  • ನಿರ್ಮಾಪಕರ ಕಣ್ಣಲ್ಲಿ ಮಿನುಗಿದ ರುದ್ರ ಗರುಡ ಪುರಾಣ!

    ನಿರ್ಮಾಪಕರ ಕಣ್ಣಲ್ಲಿ ಮಿನುಗಿದ ರುದ್ರ ಗರುಡ ಪುರಾಣ!

    ವ್ಯವಹಾರದಾಚೆ ಸಿನಿಮಾ ಪ್ರೇಮ ಹೊಂದಿರುವ, ಕಥೆಯೊಂದನ್ನು ಆ ಕ್ಷಣದಲ್ಲಿಯೇ ಅಳೆದೂ ತೂಗಿ ನಿರ್ಧರಿಸುವ ಛಾತಿ ಹೊಂದಿರುವ ನಿರ್ಮಾಪಕರ ಆಗಮನವಾಗೋದು ಚಿತ್ರರಂಗದ ಪಾಲಿಗೆ ಸಕಾರಾತ್ಮಕ ವಿದ್ಯಮಾನ. ಇಂಥವರ ಬೆಂಬಲದಿಂದಷ್ಟೇ ಒಳ್ಳೆ ಕಥೆಗಳು, ಪ್ರತಿಭಾನ್ವಿತರ ಕನಸುಗಳು ಕಾರ್ಯ ರೂಪಕ್ಕೆ ಬರಲು ಸಾಧ್ಯ. ಇದೇ ಜ.24 ರಂದು ಬಿಡುಗಡೆಗೆ ತಯಾರಾಗಿರುವ `ರುದ್ರ ಗರುಡ ಪುರಾಣ’ (Rudra Garuda Purana) ಚಿತ್ರದ ಮೂಲಕ ಅಂಥಾದ್ದೇ ಅಭಿರುಚಿ ಹೊಂದಿರುವ ಲೋಹಿತ್ ನಿರ್ಮಾಣ ಕ್ಷೇತ್ರಕ್ಕಿಳಿದಿದ್ದಾರೆ. ಈ ಸಿನಿಮಾ ನಿರ್ಮಾಣ ಮಾಡಿರೋದು ಅವರ ಮಡದಿ ಅಶ್ವಿನಿ ವಿಜಯ್ ಲೋಹಿತ್. ಈ ಮೂಲಕ ಆರಂಭದಿಂದಲೂ ಸಿನಿಮಾ ಗುಂಗು ಹತ್ತಿಸಿಕೊಂಡಿದ್ದ ಲೋಹಿತ್ ಅವರ ಕನಸು ನನಸಾದಂತಾಗಿದೆ.

    ಲೋಹಿತ್ ಕ್ಲಾಸ್ 1 ಪಿಡಬ್ಲ್ಯೂಡಿ ಕಾಂಟ್ರಾಕ್ಟರ್ ಆಗಿ ವೃತ್ತಿ ನಡೆಸುತ್ತಿರುವವರು. ಈ ಕೆಲಸದ ಒತ್ತಡದ ನಡುವೆಯೂ ಸಿನಿಮಾ ಜಗತ್ತಿನ ಸಾಂಗತ್ಯವಿಟ್ಟುಕೊಂಡಿದ್ದರು. ಸಿನಿಮಾ ಕ್ಷೇತ್ರದ ಬಗ್ಗೆ ನಾನಾ ದಿಕ್ಕಿನ ಕನಸಿಟ್ಟುಕೊಂಡಿದ್ದ ಲೋಹಿತ್ ಪಾಲಿಗೆ ಆ ಜಗತ್ತಿನ ಭಾಗವಾಗಿ ಕಾರ್ಯನಿರ್ವಹಸಬೇಕೆಂಬ ಉತ್ಕಟ ಆಕಾಂಕ್ಷೆಯೂ ಇತ್ತು. ಕಡೆಗೂ ಅದಕ್ಕೆ ಮುಹೂರ್ತ ಕೂಡಿ ಬಂದಿದ್ದು ವರ್ಷದ ಹಿಂದೆ. ಅದಾಗಲೇ ಒಂದೊಳ್ಳೆ ಕಥೆ ರೆಡಿ ಮಾಡಿಕೊಂಡು, ಸಿನಿಮಾಕ್ಕೆ ಬೇಕಾದ ಸರ್ವ ಸಿದ್ಧತೆಯೊಂದಿಗೆ ನಿರ್ಮಾಪಕರಿಗಾಗಿ ಹುಡುಕಾಟದಲ್ಲಿದ್ದವರು ನಿರ್ದೇಶಕ ನಂದೀಶ್. ಇದನ್ನೂ ಓದಿ: ರುದ್ರ ಗರುಡ ಪುರಾಣ; ಭಿನ್ನ ಕಥೆಯ ಚುಂಗು ಹಿಡಿದು ಬಂದ್ರು ನಂದೀಶ್!

    ನಂದೀಶ್ ಲೋಹಿತ್ ಅವರಿಗೆ ಹಲವಾರು ವರ್ಷಗಳಿಂದಲೂ ಪರಿಚಿತರು. ಈ ಚಿತ್ರಕ್ಕೆ ರಿಷಿ ಅವರೇ ನಾಯಕನಾಗಬೇಕೆಂಬ ನಿರ್ಧಾರಕ್ಕೆ ಬಂದಿದ್ದ ನಂದೀಶ್ ಅದಾಗಲೇ ರಿಷಿಗೆ ಕಥೆ ಹೇಳಿಯಾಗಿತ್ತು. ಈ ಕಥೆಯನ್ನು ಕೇಳಿ ಥ್ರಿಲ್ ಆಗಿದ್ದ ಲೋಹಿತ್ ಕೂಡಾ ಈ ಸಿನಿಮಾ ನಿರ್ಮಾಣ ಮಾಡಬೇಕೆಂಬ ನಿರ್ಧಾರಕ್ಕೆ ಬಂದಿದ್ದರು. ಅವರ ಪಾಲಿಗೆ ಮತ್ತೊಂದು ಖುಷಿಯ ಸಂಗತಿ ನಂದೀಶ್ ಕಡೆಯಿಂದ ಸಿಕ್ಕಿತ್ತು. ಅದು ಸದರಿ ಕಥೆಯನ್ನು ರಿಷಿ ಮೆಚ್ಚಿಕೊಂಡು ಒಪ್ಪಿಕೊಂಡಿದ್ದಾರೆಂಬ ವಿಚಾರ. ಇದನ್ನು ಕೇಳಿ ಲೋಹಿತ್ ಮತ್ತಷ್ಟು ಭರವಸೆ ತುಂಬಿಕೊಂಡಿದ್ದಕ್ಕೊಂದು ಕಾರಣವಿದೆ. ನಟ ರಿಷಿ ಕಥೆಗಳ ಆಯ್ಕೆ ವಿಚಾರದಲ್ಲಿ ತುಂಬಾನೇ ಚೂಸಿ. ಸಲೀಸಾಗಿ, ಯಾವುದೇ ಮುಲಾಜಿಗೆ ಬಿದ್ದು ಅವರು ಯಾವ ಸಿನಿಮಾಗಳನ್ನೂ ಒಪ್ಪಿಕೊಳ್ಳುವವರಲ್ಲ.

    ಅಂಥಾ ರಿಷಿ ಒಪ್ಪಿಕೊಂಡಿದ್ದಾರೆಂದ ಮೇಲೆ ನಂದೀಶ್ ಸಿದ್ಧಪಡಿಸಿದ್ದ ಕಥೆಗೆ ಬೇರ್‍ಯಾವ ವಿಮರ್ಶೆಗಳೂ ಬೇಕಿಲ್ಲ ಎಂಬಂಥಾ ನಂಬಿಕೆ ಲೋಹಿತ್ ಅವರಲ್ಲಿತ್ತು. ಹಾಗೆ ಒಪ್ಪಿಕೊಂಡು ನಿರ್ಮಾಣಕ್ಕಿಳಿದ ಲೋಹಿತ್ ಅವರ ಪಾಲಿಗೀಗ ಚೆಂದದ ಚಿತ್ರವೊಂದನ್ನು ರೂಪಿಸಿದ ಖುಷಿ ಇದೆ. ಆರಂಭದಿಂದ ಇಲ್ಲಿಯವರೆಗೂ ಈ ಪ್ರಕ್ರಿಯೆ ಅವರಿಗೆ ಒಂದಷ್ಟು ಒಳ್ಳೆ ಅನುಭವಗಳನ್ನು ಕಟ್ಟಿಕೊಟ್ಟಿದೆ. ಯಾವುದಕ್ಕೂ ಕಡಿಮೆ ಮಾಡದಂತೆ ರುದ್ರ ಗರುಡ ಪುರಾಣವನ್ನು ನಿರ್ಮಾಣ ಮಾಡಿರುವ ಅವರ ಪಾಲಿಗೆ ಈ ಸಿನಿಮಾ ಪ್ರೇಕ್ಷಕರಿಗೆಲ್ಲ ಖಂಡಿತವಾಗಿಯೂ ಇಷ್ಟವಾಗುತ್ತದೆಂಬ ಗಾಢ ನಂಬಿಕೆಯಿದೆ. ಇದನ್ನೂ ಓದಿ: ಬಿಡುಗಡೆಯಾಯ್ತು `ರುದ್ರ ಗರುಡ ಪುರಾಣ’ದ ನಶೆಯೇರಿಸೋ ಸಾಂಗು!

    ಇದೊಂದು ಮಿಸ್ಟ್ರಿ ಥ್ರಿಲ್ಲರ್ ಬಗೆಯ ಸಿನಿಮಾ. ಒಂದು ಘಟನೆಯ ಬಗ್ಗೆ ತನಿಖೆಗಿಳಿಯುತ್ತಾ, ಪ್ರೇಕ್ಷಕರೆದುರು ಹೊಸ ಜಗತ್ತೊಂದು ತೆರೆದುಕೊಂಡು ಹೋಗುವಂತೆ ಈ ಚಿತ್ರವನ್ನು ರೂಪಿಸಲಾಗಿದೆಯಂತೆ. ಈಗಿರುವ ಕ್ರೇಜ್ ಅನ್ನು ಆಧರಿಸಿ ಹೇಳೋದಾದರೆ, ರುದ್ರ ಗರುಡ ಪುರಾಣ ಈ ವರ್ಷದ ಆರಂಭವನ್ನು ಗೆಲುವಿನ ಮೂಲಕ ಕಳೆಗಟ್ಟಿಸುವ ಲಕ್ಷಣಗಳು ಕಾಣಿಸಲಾರಂಭಿಸಿವೆ. ವಿನೋದ್ ಆಳ್ವಾ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರೀಶ್ ಶಿವಣ್ಣ ಮುಂತಾದವರು ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಸಂದೀಪ್ ಕುಮಾರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ಕೃಷ್ಣ ಪ್ರಸಾದ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

  • ಹೆಣ್ಣು ಮಗುವಿಗೆ ಜನ್ಮ ನೀಡಿದ ನಟ ರಿಷಿ ಪತ್ನಿ

    ಹೆಣ್ಣು ಮಗುವಿಗೆ ಜನ್ಮ ನೀಡಿದ ನಟ ರಿಷಿ ಪತ್ನಿ

    ‘ಕವಲುದಾರಿ’, ‘ಆಪರೇಷನ್ ಅಲಮೇಲಮ್ಮ’ ಖ್ಯಾತಿಯ ರಿಷಿ (Rishi) ಅವರು ತಂದೆಯಾದ ಖುಷಿಯಲ್ಲಿದ್ದಾರೆ. ಪತ್ನಿ ಸ್ವಾತಿ (Swathi) ಅವರು ಹೆಣ್ಣು ಮಗುವಿಗೆ (Baby Girl) ಜನ್ಮ ನೀಡಿದ್ದಾರೆ. ಇದನ್ನೂ ಓದಿ:BBK 11: ರಜತ್‌ಗೆ ಟಾರ್ಗೆಟ್‌- ಮೋಕ್ಷಿತಾ ಜೊತೆ ಭವ್ಯಾ ಮ್ಯಾಚ್‌ ಫಿಕ್ಸಿಂಗ್‌

    ಇನ್ಸ್ಟಾಗ್ರಾಂ ಖಾತೆಯಲ್ಲಿ ರಿಷಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಮಗಳು ಜನಿಸಿರುವ ಸಿಹಿ ಸುದ್ದಿ ಕೊಟ್ಟಿದ್ದಾರೆ. ಮಗಳ ಆಗಮನ ಖುಷಿ ಕೊಟ್ಟಿದೆ. ನಿಮ್ಮೆಲ್ಲರ ಹಾರೈಕೆ ಅವಳ ಮೇಲಿರಲಿ ಎಂದು ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Rishi (@rishi_actor)

    ಇನ್ನೂ 2020ರಲ್ಲಿ ರಿಷಿ ಅವರು ಸ್ವಾತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈ ಅದ್ಧೂರಿಯಾಗಿ ಮದುವೆ ನಡೆದಿತ್ತು. ಆ ನಂತರ ಬೆಂಗಳೂರಿನಲ್ಲಿ ಆರತಕ್ಷತೆ ನೆರವೇರಿತ್ತು.

  • ಬಿಡುಗಡೆಯಾಯ್ತು `ರುದ್ರ ಗರುಡ ಪುರಾಣ’ದ ನಶೆಯೇರಿಸೋ ಸಾಂಗು!

    ಬಿಡುಗಡೆಯಾಯ್ತು `ರುದ್ರ ಗರುಡ ಪುರಾಣ’ದ ನಶೆಯೇರಿಸೋ ಸಾಂಗು!

    ರಿಷಿ ನಾಯಕನಾಗಿ ನಟಿಸಿರುವ `ರುದ್ರ ಗರುಡ ಪುರಾಣ’ ಚಿತ್ರ ಜನವರಿ 24ರಂದು ತೆರೆಕಾಣಲಿದೆ. ಈಗಾಗಲೇ ಟೀಸರ್, ಹಾಡುಗಳ ಮೂಲಕ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿರುವ ಈ ಸಿನಿಮಾದ ಮತ್ತೊಂದು ಹಾಡು ಇದೀಗ ಬಿಡುಗಡೆಗೊಂಡಿದೆ.

    ಈಗಾಗಲೇ ಟೀಸರ್ ಮತ್ತು ಒಂದಷ್ಟು ಹಾಡುಗಳೊಂದಿಗೆ ಸದರಿ ಸಿನಿಮಾ ಪ್ರೇಕ್ಷಕರನ್ನು ಸೆಳೆದಿತ್ತು. ಯಾವುದೇ ಪ್ರಚಾರದ ಭರಾಟೆಗಳಿಲ್ಲದೆ ಗಟ್ಟಿ ಕಂಟೆಂಟಿನ ಮುನ್ಸೂಚನೆಯೊಂದಿಗೆ ಕುತೂಹಲ ಮೂಡಿಸಿರೋ `ರುದ್ರ ಗರುಡ ಪುರಾಣ’ದಲ್ಲೊಂದು ಪ್ರೇಮ ಕಥನವೂ ಮಿಳಿತಗೊಂಡಿದೆ. ಅದರ ಖುಷಿಯ ಭಾವದ ತೀವ್ರತೆಯನ್ನು ಸಮರ್ಥವಾಗಿ ಹಿಡಿದಿಟ್ಟುಕೊಂಡಂತಿರೋ ಈ ಹಾಡಿಗೀಗ ಕೇಳುಗರ ಕಡೆಯಿಂದ ವ್ಯಾಪಕ ಮೆಚ್ಚುಗೆ, ಹೆಚ್ಚೆಚ್ಚು ವೀಕ್ಷಣೆಗಳು ಸಿಗಲಾರಂಭಿಸಿವೆ.

    ಅದೇನೇನೋ ಖುಷಿ ತಂದೆ, ಅದೇನೇನೋ ನಶೇ ತಂದೆ ಅಂತ ಶುರುವಾಗೋ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಇತ್ತೀಚೆಗೆ ಮತ್ತೆ ಮತ್ತೆ ಗುನುಗಿಸಿಕೊಳ್ಳೋ ಹಾಡುಗಳ ಮೂಲಕ ಹೆಸರಾಗಿರುವವರು ಸಂಜಿತ್. ಅವರ ಹಿಟ್ ಲಿಸ್ಟಿಗೆ ಈ ಹಾಡೂ ಕೂಡಾ ಸೇರಿಕೊಳ್ಳೋ ಲಕ್ಷಣಗಳಿದ್ದಾವೆ. ದೀಪಿಕಾ ವರದರಾಜನ್ ಈ ಹಾಡಿಗೆ ಧ್ವನಿಗೂಡಿಸಿದ್ದಾರೆ. ಕೃಷ್ಣಪ್ರಸಾದ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರೋ ಸದರಿ ಗೀತೆಗೆ ಕಾಂತಾರಾ ಖ್ಯಾತಿಯ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ.

    ಮಿಸ್ಟ್ರಿ ಥ್ರಿಲ್ಲರ್ ಜಾನರಿನ ರುದ್ರ ಗರುಡ ಪುರಾಣದಲ್ಲೊಂದು ಪ್ರೇಮ ಕಥನವೂ ಇದೆ. ಪ್ರೀತಿ ಅಂದ್ರೆ ನಾನಾ ಪದರಗಳಿರುವ ಮಾಯೆ. ಅದರಲ್ಲಿ ಕಿಬ್ಬೊಟ್ಟೆಯಲ್ಲಿ ಚಿಟ್ಟೆ ಹಾರಾಡಿದಂಥಾ ಅನೂಹ್ಯ ಖುಷಿಯೂ ಸೇರಿಕೊಂಡಿದೆ. ಅಂಥಾದ್ದೊಂದು ಆಹ್ಲಾದ ತುಂಬಿಕೊಂಡಂತಿರೋ ಈ ಹಾಡು ವೇಗವಾಗಿ ಕೇಳುಗರನ್ನು ಆವರಿಸಿಕೊಳ್ಳುತ್ತಿದೆ.

    ಕನ್ನಡಕ್ಕೆ ಒಂದಷ್ಟು ವಿಭಿನ್ನ ಸಿನಿಮಾಗಳನ್ನು ಕೊಟ್ಟಿರುವವರು ನಿರ್ದೇಶಕ ಜೇಕಬ್ ವರ್ಗೀಸ್. ದಶಕಗಳ ಕಾಲ ಅವರ ಗರಡಿಯಲ್ಲಿ ಪಳಗಿಕೊಂಡಿರುವ ನಂದೀಶ್ `ರುದ್ರ ಗರುಡ ಪುರಾಣ’ವನ್ನು ನಿರ್ದೇಶನ ಮಾಡಿದ್ದಾರೆ. ಜೇಕಬ್ ಅವರಿಂದ ಪ್ರಭಾವಿತರಾಗಿ, ವಿಶಿಷ್ಟ ಕಥಾ ವಸ್ತುವನ್ನು ಮುಟ್ಟುವ ಗುಣ ಹೊಂದಿರುವ ನಂದೀಶ್, ಈ ಮೂಲಕ ಹೊಸಾ ಆವೇಗದ ಕಥೆಯೊಂದಕ್ಕೆ ದೃಷ್ಯ ರೂಪ ನೀಡಿದ್ದಾರೆ. ಅದರ ಒಟ್ಟಾರೆ ಕಸುವು ಈಗಾಗಲೇ ಬಿಡುಗಡೆಗೊಂಡಿರುವ ಟೀಸರ್ ನಲ್ಲಿ ಪ್ರತಿಫಲಿಸಿದೆ. ವಿಶೇಷವೆಂದರೆ, ಆಪರೇಷನ್ ಅಲಮೇಲಮ್ಮ, ಕವಲು ದಾರಿಯಂಥಾ ಭಿನ್ನ ಸಿನಿಮಾಗಳ ಮೂಲಕ ಗಮನ ಸೆಳೆದಿರುವ ರಿಷಿ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಮೈಸೂರು ಹುಡುಗಿ ಪ್ರಿಯಾಂಕಾ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ.

    ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ವಿಜಯ್ ಲೋಹಿತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೊಂದು ಮಿಸ್ಟ್ರಿ ಥ್ರಿಲ್ಲರ್ ಬಗೆಯ ಸಿನಿಮಾ. ಒಂದು ಘಟನೆಯ ಬಗ್ಗೆ ತನಿಖೆಗಿಳಿಯುತ್ತಾ, ಪ್ರೇಕ್ಷಕರೆದುರು ಹೊಸಾ ಜಗತ್ತೊಂದು ತೆರೆದುಕೊಂಡು ಹೋಗುವಂತೆ ಈ ಚಿತ್ರವನ್ನು ರೂಪಿಸಲಾಗಿದೆಯಂತೆ. ಈಗಿರುವ ಕ್ರೇಜ್ ಅನ್ನು ಆಧರಿಸಿ ಹೇಳೋದಾದರೆ, ರುದ್ರ ಗರುಡ ಪುರಾಣ ಈ ವರ್ಷದ ಆರಂಭವನ್ನು ಗೆಲುವಿನ ಮೂಲಕ ಕಳೆಗಟ್ಟಿಸುವ ಲಕ್ಷಣಗಳು ಕಾಣಿಸಲಾರಂಭಿಸಿವೆ. ವಿನೋದ್ ಆಳ್ವಾ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರೀಶ್ ಶಿವಣ್ಣ ಮುಂತಾದವರು ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಸಂದೀಪ್ ಕುಮಾರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ಕೃಷ್ಣ ಪ್ರಸಾದ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

     

  • ‘ರುದ್ರ ಗರುಡ ಪುರಾಣ’ದಲ್ಲಿ ಮಿಸ್ ಆದ ವಿಮಾನದ ಕಥೆ ಹೇಳಲಿದ್ದಾರೆ ರಿಷಿ

    ‘ರುದ್ರ ಗರುಡ ಪುರಾಣ’ದಲ್ಲಿ ಮಿಸ್ ಆದ ವಿಮಾನದ ಕಥೆ ಹೇಳಲಿದ್ದಾರೆ ರಿಷಿ

    ಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಹಾಗೂ ಪ್ರಸ್ತುತ ತೆಲುಗು ಚಿತ್ರರಂಗದಲ್ಲೂ ಮನೆಮಾತಾಗಿರುವ ನಟ ರಿಷಿ (Rishi) ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” (Rudra Garuda Purana) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ನಿರ್ದೇಶಕ ಜೇಕಬ್ ವರ್ಗೀಸ್ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    914 ವಿಮಾನ 1955 ರಲ್ಲಿ ನ್ಯೂಯಾರ್ಕ್ ನಿಂದ ಮಿಯಾನ್ ಸಿಟಿಗೆ ಹೊರಟಿದ್ದ ವಿಮಾನ ಮಿಸ್ ಆಗುತ್ತದೆ. ವಿಮಾನದ ಸುಳಿವು ಸಿಕ್ಕಿರುವುದಿಲ್ಲ. ಇದಾದ ಮೂವತ್ತು ವರ್ಷಗಳ(1985 ರಲ್ಲಿ)ನಂತರ ಮತ್ತೆ ಆ ವಿಮಾನ ವಾಪಸ್ ಬರುತ್ತದೆ ಅದು ಹೇಗೆ…? ಹಾಗೂ ಒಬ್ಬ ರಾಜ ಇಡೀ ಭೂಮಂಡಲನೇ ಗೆಲ್ಲಬೇಕು ಅಂತ ಆಸೆಯಿಂದ ತನ್ನ‌ ಪಕ್ಕದ ದೇಶದ ಮೇಲೆ ಯುದ್ದಕ್ಕೆ ಹೋಗಿ‌  ಲಕ್ಷಾಂತರ ಜನರನ್ನು ಕೊಂದು ಜಯ‌ ಸಾಧಿಸಿರುತ್ತಾನೆ.‌ ಯುದ್ದ ಮುಗಿದ ಮೇಲೆ‌ ರಣರಂಗಕ್ಕೆ‌ ಹೋಗುತ್ತಾನೆ. ಅಲ್ಲಿ ಸಾಲುಸಾಲು ಹೆಣದ ರಾಶಿಗಳಿರುತ್ತಿದೆ.‌ ಸತ್ತಿದ್ದ ಸೈನಿಕನೊಬ್ಬನ ಮಾಂಸವನ್ನು ಮನುಷ್ಯನೊಬ್ಬ ತಿನ್ನುತ್ತಿರುತ್ತಾನೆ.‌ ಆ ಸಮಯಕ್ಕೆ‌ ರಾಜ ಅಲ್ಲಿಗೆ ಬರುತ್ತಾನೆ‌. ಆ‌ ಮನುಷ್ಯ ರಾಜನನ್ನು ಕುರಿತು, ಕ್ಷಮಿಸು ರಾಜ ನಾನು ನಿನ್ನ ಆಹಾರವನ್ನು ‌ತಿನ್ನುತ್ತಿದ್ದೇನೆ ಎನ್ನುತ್ತಾನೆ. ಆಗ ರಾಜ ನಾನು ನಿನ್ನ ಹಾಗೆ ನರಭಕ್ಷಕ ಅಲ್ಲ‌ ಏನುತ್ತಾನೆ.‌ ಆಗ ಆ ಮನುಷ್ಯ ಹಾಗಾದರೆ ಇಷ್ಟು ಜನರನ್ನು ಏಕೆ‌ ಸಾಯಿಸಿದಿಯಾ ಎಂದು ರಾಜನನ್ನು ಕೇಳುತ್ತಾನೆ?‌.‌ ಈ ಎರಡು ಉಪಕಥೆಗಳೇ ನಮ್ಮ‌ ಚಿತ್ರದ ಕಥೆಗೆ ಸ್ಪೂರ್ತಿ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ನಂದೀಶ್.

    ನಮ್ಮ‌ ಸುತ್ತಮುತ್ತ ನಡೆಯುವ ಅನೇಕ ಸಮಸ್ಯೆಗಳನ್ನಿಟ್ಟುಕೊಂಡು ನಂದೀಶ್ ಈ ಚಿತ್ರದ ಕಥೆ ಮಾಡಿದ್ದಾರೆ. ಪುನೀತ್ ರಾಜಕುಮಾರ್ ಅವರ ನಿರ್ಮಾಣದ “ಕವಲುದಾರಿ” ಚಿತ್ರದ ನಂತರ ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ರುದ್ರ ನನ್ನ ಪಾತ್ರದ ಹೆಸರು ಎಂದರು ನಟ ರಿಷಿ. ಇದು ನನ್ನ ಅಭಿನಯದ ಎರಡನೇ ಚಿತ್ರ.‌ ನನ್ನ‌ ಪಾತ್ರ ಕೂಡ ಚೆನ್ನಾಗಿದೆ‌ ಎಂದು ನಾಯಕಿ ಪ್ರಿಯಾಂಕ ಕುಮಾರ್‌ ತಿಳಿಸಿದರು. ‌

    ಜೇಕಬ್ ವರ್ಗೀಸ್‌ ಹಾಗೂ ನಾನು ಸ್ನೇಹಿತರು. ಜೇಕಬ್ ಅವರ ಜೊತೆಗೆ ಕೆಲಸ ಮಾಡುತ್ತಿದಾಗಿನಿಂದಲೂ ನನಗೆ ನಂದೀಶ್ ಪರಿಚಯ.‌‌ ನಂದೀಶ್ ಈ ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ಅಭಿನಯಿಸಿದ್ದೇನೆ ಎಂದರು ನಟ ವಿನೋದ್ ಆಳ್ವಾ. ಚಿತ್ರದಲ್ಲಿ ನಟಿಸಿರುವ ಕೆ.ಎಸ್ ಶ್ರೀಧರ್, ಗಿರೀಶ್ ಶಿವಣ್ಣ, ಶಿವರಾಜ ಕೆ.ಆರ್ ಪೇಟೆ, ಸಂಗೀತ ನಿರ್ದೇಶಕ ಕೆಪಿ, ಛಾಯಾಗ್ರಾಹಕ ಸಂದೀಪ್ ಕುಮಾರ್ ಹಾಗೂ ಸಂಭಾಷಣೆ ಬರೆದಿರುವ ರಘು ನಿಡವಳ್ಳಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

     ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.  ಅಶ್ವಿನಿ ಅವರ ಪತಿ ಲೋಹಿತ್ ಅವರು ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು.

  • ‘ರುದ್ರ ಗರುಡ ಪುರಾಣ’ ಪೋಸ್ಟರ್ ರಿಲೀಸ್ : ರಿಷಿಗೆ ಬರ್ತ್ ಡೇ ಗಿಫ್ಟ್

    ‘ರುದ್ರ ಗರುಡ ಪುರಾಣ’ ಪೋಸ್ಟರ್ ರಿಲೀಸ್ : ರಿಷಿಗೆ ಬರ್ತ್ ಡೇ ಗಿಫ್ಟ್

    ಪುನೀತ್ ರಾಜಕುಮಾರ್‌ ನಿರ್ಮಾಣದ “ಕವಲುದಾರಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕನಾಗಿ ನಟಿಸಿ ಕನ್ನಡಿಗರ ಮನ ಗೆದ್ದಿರುವ ಹಾಗೂ “ಶೈತಾನ್” ವೆಬ್ ಸಿರೀಸ್ ಮೂಲಕ ತೆಲುಗಿನಲ್ಲೂ ಮನೆಮಾತಾಗಿರುವ ನಟ ರಿಷಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ.  ಈ ಸಂದರ್ಭದಲ್ಲಿ ರಿಷಿ ನಾಯಕರಾಗಿ ನಟಿಸಿರುವ “ರುದ್ರ ಗರುಡ ಪುರಾಣ” ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಿಷಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದೆ‌.

    ಈಗಾಗಲೇ ಚಿತ್ರೀಕರಣ ಪೂರೈಸಿರುವ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ.  ರಿಷಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ(ತನಿಖಾಧಿಕಾರಿ)  ಕಾಣಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಫಸ್ಟ್ ಲುಕ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದರು. ಚಿತ್ರದ ಫಸ್ಟ್ ಲುಕ್ ಗೆ ರಿಷಿ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.  “ಡಿಯರ್ ವಿಕ್ರಮ್” ಚಿತ್ರ ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು. ಕೆಪಿ ಸಂಗೀತ ನಿರ್ದೇಶನ, ಸಂದೀಪ್ ಕುಮಾರ್ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನ ಈ ಚಿತ್ರಕ್ಕಿದೆ.

    ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ನಟಿಸಿದ್ದಾರೆ. ವಿನೋದ್ ಆಳ್ವ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರಿ, ಕೆ.ಎಸ್ ಶ್ರೀಧರ್, ಅಶ್ವಿನಿ ಗೌಡ,  ರಾಮ್ ಪವನ್, ವಂಶಿ, ಆಕರ್ಷ್, ಜೋಸೆಫ್, ಪ್ರಭಾಕರ್, ಗೌತಮ್ ಮೈಸೂರು, ಸ್ನೇಕ್ ಶ್ಯಾಮ್, ರಂಗನಾಥ್ ಭಾರದ್ವಾಜ್, ಕಾಮಿಡಿ ಕಿಲಾಡಿಗಳು ಜಗಪ್ಪ, ಪ್ರಸನ್ನ ಹಂಡ್ರಂಗಿ, ರಿದ್ವಿ ತಾರಾಬಳಗದಲ್ಲಿದ್ದಾರೆ. ಸದ್ಯದಲ್ಲೇ ಚಿತ್ರದ ಹಾಡುಗಳನ್ನು ಬಿಡುಗಡೆ ‌ಮಾಡುವ ಮೂಲಕ ಪ್ರಚಾರ ಕಾರ್ಯ ಪ್ರಾರಂಭಿಸುವುದಾಗಿ ತಿಳಿಸಿರುವ ನಿರ್ದೇಶಕರು ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ ಎನ್ನುತ್ತಾರೆ.

  • ‘ಸಂಜು ವೆಡ್ಸ್ ಗೀತಾ’ ಚಿತ್ರದ ನಿರ್ಮಾಪಕರ ಹೊಸ ಸಿನಿಮಾಗೆ ರಿಷಿ ನಾಯಕ

    ‘ಸಂಜು ವೆಡ್ಸ್ ಗೀತಾ’ ಚಿತ್ರದ ನಿರ್ಮಾಪಕರ ಹೊಸ ಸಿನಿಮಾಗೆ ರಿಷಿ ನಾಯಕ

    ಕನ್ನಡ ಚಿತ್ರರಂಗದ ಸೂಪರ್ ಹಿಟ್ ಚಿತ್ರ ಸಂಜು ವೆಡ್ಸ್ ಗೀತಾ, ಹಾಗೆ ಸುಮ್ಮನೆ ಚಿತ್ರಗಳ ನಿರ್ಮಾಪಕರಾದ ಪ್ರಮೋದ್ ನಾರಾಯಣ್ ಅವರ ನಿರ್ಮಾಣದಲ್ಲಿ ನೂತನ ಚಿತ್ರವೊಂದು ಆರಂಭವಾಗಲಿದೆ. ಕವಲುದಾರಿ, ಆಪರೇಷನ್ ಅಲುಮೇಲಮ್ಮ ಚಿತ್ರಗಳ ಮೂಲಕ ಜನಪ್ರಿಯರಾಗಿ ತಮ್ಮದೇ ಆದ ಅಭಿಮಾನಿ ವಲಯ ಹೊಂದಿರುವ ರಿಷಿ (Rishi) ಈ ಚಿತ್ರದ ನಾಯಕರಾಗಿ ಅಭಿನಯಿಸುತ್ತಿದ್ದಾರೆ.

    ರಾಕಡ್ ಫಿಲಂಸ್ ಮುಂಬೈ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಜೊಯ್ ದೀಪ್ ಬಿಸ್ವಾಸ್ ಹಾಗೂ ಸೋನಾಲಿ ಬಿಸ್ವಾಸ್ ನಿರ್ಮಾಣಕ್ಕೆ ಸಾಥ್ ನೀಡುತ್ತಿದ್ದಾರೆ. ವಸಂತ್ ಹಂಗೆ ಮತ್ತು ಕೆ.ಸಿ.ಶಿವಾನಂದ್ ಈ ನೂತನ ಚಿತ್ರದ ಸಹ ನಿರ್ಮಾಪಕರು.

     ಜನಪ್ರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ, ಮೂಲತಃ ಕನ್ನಡಿಗರೆ ಆಗಿರುವ ಕಿಶೋರ್ ಭಾರ್ಗವ್ (Kishore Bhargav) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ತೆಲುಗು ಚಿತ್ರವೊಂದನ್ನು  ನಿರ್ದೇಶಿಸಿರುವ ಕಿಶೋರ್ ಭಾರ್ಗವ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಮುಂಗಾರು ಕಳೆದ ಮೇಲೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿರುವ ನಿರ್ಮಾಪಕ ಪ್ರಮೋದ್ ನಾರಾಯಣ್,  ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. Disney hotstar ನಿರ್ಮಾಣದ “ಸೈತಾನ್” ವೆಬ್ ಸಿರೀಸ್ ಮೂಲಕ ರಿಷಿ ತೆಲುಗಿನಲ್ಲೂ ಹೆಸರು ಮಾಡಿದ್ದಾರೆ. ತಮಿಳುನಾಡಿನಲ್ಲೂ ರಿಷಿ ಜನಪ್ರಿಯ. ಎಲ್ಲಾ ಭಾಷೆಗಳ ಅಭಿಮಾನಿಗಳಿಗೂ ಪ್ರಿಯವಾಗುವಂತಹ ಕಥೆ ನಮ್ಮ ಚಿತ್ರದಲ್ಲಿರುತ್ತದೆ ಎನ್ನುತ್ತಾರೆ ನಿರ್ಮಾಪಕ ಪ್ರಮೋದ್ ನಾರಾಯಣ್.

  • ‘ರುದ್ರ ಗರುಡ ಪುರಾಣ’ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

    ‘ರುದ್ರ ಗರುಡ ಪುರಾಣ’ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

    ಡಿಯರ್ ವಿಕ್ರಂ ಖ್ಯಾತಿಯ ನಂದೀಶ್ (Nandish) ಮತ್ತು ರಿಷಿ ಕಾಂಬಿನೇಷನ್ ನ ‘ರುದ್ರ ಗರುಡ ಪುರಾಣ’ (Rudra Garuda Purana) ಸಿನಿಮಾದ ಫಸ್ಟ್ ಲುಕ್ (First Look) ರಿಲೀಸ್ ಆಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಫಸ್ಟ್ ಲುಕ್ ವಿಡಿಯೋ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರದ ಫಸ್ಟ್ ಲುಕ್ ಅನ್ನೂ ಅವರು ಮೆಚ್ಚಿಕೊಂಡಿದ್ದಾರೆ.

    ರಿಷಿ (Rishi) ನಾಯಕರಾಗಿ  ಅಭಿನಯಿಸಿರುವ, ಅಶ್ವಿನಿ ಆರ್ಟ್ಸ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಚಿತ್ರವಿದು. ಮೊನ್ನೆಯಷ್ಟೇ ಕ್ಲೈಮ್ಯಾಕ್ಸ್ ಫೈಟ್ ಅನ್ನು ಹೆಚ್. ಎಂ. ಟಿ ಫ್ಯಾಕ್ಟರಿಯಲ್ಲಿ ಆರು ದಿನಗಳ ಕಾಲ ಚಿತ್ರಿಸಿಕೊಳ್ಳುವುದರೊಂದಿಗೆ ಈ ಚಿತ್ರದ ಚಿತ್ರೀಕರಣವನ್ನು ಮುಕ್ಯಾತವಾಗಿತ್ತು. ಚಿತ್ರಕ್ಕೆ ಒಟ್ಟು 70 ದಿನಗಳ ಚಿತ್ರೀಕರಣ ನಡೆದಿದೆ.

    ಕವಲು ದಾರಿ ಚಿತ್ರದಲ್ಲಿ ಟ್ರಾಫಿಕ್ ಪೊಲೀಸ್ ಕೆಲಸದಿಂದ ಕ್ರೈಂ ಡಿಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡಲು ಆಸೆ ಪಡುವ ಪಾತ್ರದಲ್ಲಿ ನಟಿಸಿದ್ದ ರಿಷಿ, ರುದ್ರ ಗರುಡ ಪುರಾಣ ಚಿತ್ರದಲ್ಲಿ ಕ್ರೈಂ ಇನ್ಸ್ ಪೆಕ್ಟರ್ ಆಗಿ ಕಾಣಿಸಿಕೊಂಡಿದ್ದಾರೆ. ರುದ್ರ ಗರುಡ ಪುರಾಣ ಆಕ್ಷನ್ ಡ್ರಾಮಾ ಜಾನರ್ ನ  ಚಿತ್ರವಾಗಿರುತ್ತದೆ. ಟೆಕ್ನಿಕಲ್ ವಿಚಾರದಲ್ಲಿ ಹಲವಾರು ಹೊಸತನಗಳನ್ನು ಅಳವಡಿಸಿಕೊಂಡು ಫೈಟ್ ಮತ್ತು ಸಾಂಗ್ ಗಳನ್ನು ಚಿತ್ರೀಕರಣ ಮಾಡಿರುವುದು ಈ ಚಿತ್ರದ ವಿಶೇಷ.

    ರಿಷಿ ಅವರಿಗೆ  ನಾಯಕಿಯಾಗಿ ಪ್ರಿಯಾಂಕ ಕುಮಾರ್ ನಟಿಸಿದ್ದಾರೆ. “ಕಾಟೇರ” ಚಿತ್ರದಲ್ಲಿ ವಿಲನ್ ಆಗಿ ಅಭಿನಯಿಸಿ ಖ್ಯಾತರಾದ ವಿನೋದ್ ಆಳ್ವ. ಅವಿನಾಶ್. ಕೆ ಎಸ್ ಶ್ರೀಧರ್. ಗಿರಿ. ಕೆ ಆರ್ ಪೇಟೆ ಶಿವು. ಮಜಾ ಭಾರತ ಜಗಪ್ಪ . ಅಶ್ವಿನಿ ಗೌಡ. ಗೌತಮ್ ಮೈಸೂರ್ ಮುಂತಾದವರು ಈ ಚಿತ್ರದ  ತಾರಾಬಳಗದಲ್ಲಿದ್ದಾರೆ. ಹಾಟ್ ಸ್ಟಾರ್ ನಲ್ಲಿ ಬಿಡುಗಡೆಗೊಂಡು  ಯಶಸ್ವಿಗೊಂಡ ತೆಲುಗಿನ “ಸೈತಾನ್” ವೆಬ್ ಸೀರೀಸ್ ರಿಷಿ ಅವರು ನಟಿಸಿದ್ದರು. ಅದಕ್ಕೆ ಅವರಿಗೆ ಅತ್ಯುತ್ತಮ ಖಳನಟ ಪ್ರಶಸ್ತಿ ದೊರಕಿತ್ತು.  ತೆಲುಗಿನ ಬಾಲಯ್ಯ ಅವರ ಚಿತ್ರದಲ್ಲಿ ನಟಿಸುವುದರೊಂದಿಗೆ ಹಲವಾರು ತೆಲುಗು ಚಿತ್ರಗಳಲ್ಲಿ ರಿಷಿ ಬಿಜಿಯಾಗಿದ್ದಾರೆ.

     

    ರುದ್ರ ಗರುಡ ಪುರಾಣ ಚಿತ್ರವನ್ನು ಮೊದಲಿಗೆ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಮಾಡಿ ನಂತರ ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡುವ ಯೋಜನೆಯನ್ನು ರೂಪಿಸಿಕೊಳ್ಳಲಾಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

  • ರಿಷಿ ನಟನೆಯ ‘ರುದ್ರ ಗರುಡ ಪುರಾಣ’ ಚಿತ್ರದ ಶೂಟಿಂಗ್ ಕಂಪ್ಲೀಟ್

    ರಿಷಿ ನಟನೆಯ ‘ರುದ್ರ ಗರುಡ ಪುರಾಣ’ ಚಿತ್ರದ ಶೂಟಿಂಗ್ ಕಂಪ್ಲೀಟ್

    ನ್ನಡದ ನ್ಯಾಚುರಲ್ ಸ್ಟಾರ್ ಎಂದೇ ಖ್ಯಾತಿಯಾಗಿರುವ ರಿಷಿ (Rishi) ನಾಯಕರಾಗಿ  ಅಭಿನಯಿಸಿರುವ, ಅಶ್ವಿನಿ ಆರ್ಟ್ಸ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ,   ‘ರುದ್ರ ಗರುಡ ಪುರಾಣ’ (Rudra Garuda Purana) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.  ಕ್ಲೈಮ್ಯಾಕ್ಸ್ ಫೈಟ್ ಅನ್ನು ಹೆಚ್. ಎಂ. ಟಿ ಫ್ಯಾಕ್ಟರಿಯಲ್ಲಿ ಆರು ದಿನಗಳ ಕಾಲ ಚಿತ್ರಿಸಿಕೊಳ್ಳುವುದರೊಂದಿಗೆ ಈ ಚಿತ್ರದ ಚಿತ್ರೀಕರಣವನ್ನು ಇತ್ತೀಚಿಗೆ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ಚಿತ್ರಕ್ಕೆ ಒಟ್ಟು 70 ದಿನಗಳ ಚಿತ್ರೀಕರಣ ನಡೆದಿದೆ.

    ಕವಲು ದಾರಿ ಚಿತ್ರದಲ್ಲಿ ಟ್ರಾಫಿಕ್ ಪೊಲೀಸ್ ಕೆಲಸದಿಂದ ಕ್ರೈಂ ಡಿಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡಲು ಆಸೆ ಪಡುವ ಪಾತ್ರದಲ್ಲಿ ನಟಿಸಿದ್ದ ರಿಷಿ, ರುದ್ರ ಗರುಡ ಪುರಾಣ ಚಿತ್ರದಲ್ಲಿ ಕ್ರೈಂ ಇನ್ಸ್ ಪೆಕ್ಟರ್ ಆಗಿ ಕಾಣಿಸಿಕೊಂಡಿದ್ದಾರೆ. ರುದ್ರ ಗರುಡ ಪುರಾಣ ಆಕ್ಷನ್ ಡ್ರಾಮಾ ಜಾನರ್ ನ  ಚಿತ್ರವಾಗಿರುತ್ತದೆ. ಟೆಕ್ನಿಕಲ್ ವಿಚಾರದಲ್ಲಿ ಹಲವಾರು ಹೊಸತನಗಳನ್ನು ಅಳವಡಿಸಿಕೊಂಡು ಫೈಟ್ ಮತ್ತು ಸಾಂಗ್ ಗಳನ್ನು ಚಿತ್ರೀಕರಣ ಮಾಡಿರುವುದು ಈ ಚಿತ್ರದ ವಿಶೇಷ. ಡಿಯರ್ ವಿಕ್ರಂ ಚಿತ್ರದ ನಿರ್ದೇಶಕ ಕೆ. ಎಸ್. ನಂದೀಶ್  (Nandish) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

    ರಿಷಿ ಅವರಿಗೆ  ನಾಯಕಿಯಾಗಿ ಪ್ರಿಯಾಂಕ ಕುಮಾರ್ ನಟಿಸಿದ್ದಾರೆ. “ಕಾಟೇರ” ಚಿತ್ರದಲ್ಲಿ ವಿಲನ್ ಆಗಿ ಅಭಿನಯಿಸಿ ಖ್ಯಾತರಾದ ವಿನೋದ್ ಆಳ್ವ. ಅವಿನಾಶ್. ಕೆ ಎಸ್ ಶ್ರೀಧರ್. ಗಿರಿ. ಕೆ ಆರ್ ಪೇಟೆ ಶಿವು. ಮಜಾ ಭಾರತ ಜಗಪ್ಪ . ಅಶ್ವಿನಿ ಗೌಡ. ಗೌತಮ್ ಮೈಸೂರ್ ಮುಂತಾದವರು ಈ ಚಿತ್ರದ  ತಾರಾಬಳಗದಲ್ಲಿದ್ದಾರೆ. ಹಾಟ್ ಸ್ಟಾರ್ ನಲ್ಲಿ ಬಿಡುಗಡೆಗೊಂಡು  ಯಶಸ್ವಿಗೊಂಡ ತೆಲುಗಿನ “ಸೈತಾನ್” ವೆಬ್ ಸೀರೀಸ್ ರಿಷಿ ಅವರು ನಟಿಸಿದ್ದರು. ಅದಕ್ಕೆ ಅವರಿಗೆ ಅತ್ಯುತ್ತಮ ಖಳನಟ ಪ್ರಶಸ್ತಿ ದೊರಕಿತ್ತು.  ತೆಲುಗಿನ ಬಾಲಯ್ಯ ಅವರ ಚಿತ್ರದಲ್ಲಿ ನಟಿಸುವುದರೊಂದಿಗೆ ಹಲವಾರು ತೆಲುಗು ಚಿತ್ರಗಳಲ್ಲಿ ರಿಷಿ ಬಿಜಿಯಾಗಿದ್ದಾರೆ.

    ರುದ್ರ ಗರುಡ ಪುರಾಣ ಚಿತ್ರವನ್ನು ಮೊದಲಿಗೆ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಮಾಡಿ ನಂತರ ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡುವ ಯೋಜನೆಯನ್ನು ರೂಪಿಸಿಕೊಳ್ಳಲಾಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ. ಇದೇ ತಿಂಗಳಲ್ಲಿ ರುದ್ರ ಗರುಡ ಪುರಾಣ ಚಿತ್ರದ ಫಸ್ಟ್ ಲುಕ್  ಬಿಡುಗಡೆಯಾಗಲಿದೆ.