Tag: ರಿಷಿ

  • Exclusive: ತೆಲುಗಿನತ್ತ ಕನ್ನಡದ ನಟ- ಬಾಲಯ್ಯಗೆ ರಿಷಿ ವಿಲನ್

    Exclusive: ತೆಲುಗಿನತ್ತ ಕನ್ನಡದ ನಟ- ಬಾಲಯ್ಯಗೆ ರಿಷಿ ವಿಲನ್

    ‘ಆಪರೇಷನ್ ಅಲಮೇಲಮ್ಮ’, ‘ಕವಲುದಾರಿ’ ಖ್ಯಾತಿಯ ರಿಷಿ (Rishi) ಇದೀಗ ತೆಲುಗಿನಲ್ಲಿ ಗೋಲ್ಡನ್ ಚಾನ್ಸ್ ಗಿಟ್ಟಿಸಿಕೊಂಡಿದ್ದಾರೆ. ತೆಲುಗಿನ ಸ್ಟಾರ್ ನಟ ಬಾಲಯ್ಯ (Balayya) ಅವರ 109ನೇ ಸಿನಿಮಾದಲ್ಲಿ ಕನ್ನಡದ ಪ್ರತಿಭಾನ್ವಿತ ನಟ ರಿಷಿ ನಟಿಸುತ್ತಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಹೀರೋ ಆಗಿ ಗೆದ್ದಿದ್ದ ರಿಷಿ, ಬಾಲಯ್ಯ ಮುಂದೆ ವಿಲನ್ ಆಗಿ ಅಬ್ಬರಿಸಲಿದ್ದಾರೆ.

    ನಟ ರಿಷಿ ಅವರು ತೆಲುಗಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಟಾಲಿವುಡ್ ಸೂಪರ್ ಸ್ಟಾರ್ ಬಾಲಕೃಷ್ಣ ಅವರ ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಬಾಬಿ ಕೊಲ್ಲಿ ನಿರ್ದೇಶನದಲ್ಲಿ ಬಾಲಯ್ಯ ಅವರ 109ನೇ ಸಿನಿಮಾ ಮೂಡಿ ಬರುತ್ತಿದೆ. ಇದನ್ನೂ ಓದಿ:ಗುಡ್ ನ್ಯೂಸ್ ಕೊಟ್ಟ ‘ಉಲ್ಲಾಸ ಉತ್ಸಾಹ’ ನಟಿ ಯಾಮಿ ಗೌತಮ್

    ಬಾಲಯ್ಯ ಮುಂದೆ ರಿಷಿ ವಿಲನ್ ಆಗಿ ಕಾಣಿಸಿಕೊಳ್ತಿದ್ದಾರೆ. ಅದಷ್ಟೇ ಅಲ್ಲ, ‘ಅನಿಮಲ್’ (Animal) ಚಿತ್ರದ ಖಡಕ್ ವಿಲನ್ ಬಾಬಿ ಡಿಯೋಲ್ (Bobby Deol) ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಾಬಿ ಡಿಯೋಲ್- ರಿಷಿ ಇಬ್ಬರೂ ಈ ಚಿತ್ರದಲ್ಲಿ ಖಳನಾಯಕರಾಗಿ ನಟಿಸುತ್ತಿದ್ದಾರೆ. ವಿಶೇಷ ಅಂದರೆ ರಿಷಿಗೆ ಬಾಬಿ ಡಿಯೋಲ್ ಚಿಕ್ಕಪ್ಪನ ಪಾತ್ರದಲ್ಲಿ ನಟಿಸಿದ್ದಾರೆ. ಇಬ್ಬರ ಪಾತ್ರಕ್ಕೂ ಪ್ರಾಮುಖ್ಯತೆ ಇದೆ. ಸದ್ಯ ಈ ಚಿತ್ರದ ಬಗ್ಗೆ ರಿಷಿ ಪಬ್ಲಿಕ್ ಟಿವಿ ಡಿಜಿಟಲ್‌ಗೆ ಮಾಹಿತಿ ನೀಡಿದ್ದಾರೆ.

    ಡೈರೆಕ್ಟರ್ ಬಾಬಿ ಕೊಲ್ಲಿ ಟೀಮ್, ಸಂಪರ್ಕಿಸಿ ಕಥೆ ಹೇಳಿದಾಗ ತಮ್ಮ ಪಾತ್ರ ಮತ್ತು ಚಿತ್ರದ ಎಳೆ ಇಷ್ಟವಾಗಿ ಚಿತ್ರತಂಡಕ್ಕೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ರಿಷಿ. ಸಿನಿಮಾ ಕಥೆ ಕೂಡ ವಿಭಿನ್ನವಾಗಿದ್ದು, ಒಂದು ವಾರಗಳ ಕಾಲ ರಿಷಿ ಪಾತ್ರದ ಚಿತ್ರೀಕರಣ ಕೂಡ ಮಾಡಲಾಗಿದೆ. ಮತ್ತೆ ಮುಂದಿನ ವಾರ ಸೆಕೆಂಡ್ ಶೆಡ್ಯೂಲ್ ಶೂಟಿಂಗ್ ನಡೆಯಲಿದೆ ಎಂದು ರಿಷಿ ತಿಳಿಸಿದ್ದಾರೆ. ಬಾಲಯ್ಯ ಮತ್ತು ಬಾಬಿ ಡಿಯೋಲ್ ಜೊತೆ ನಟಿಸುತ್ತಿರೋದಕ್ಕೆ ರಿಷಿ ಸಂತಸ ವ್ಯಕ್ತಪಡಿಸಿದ್ದಾರೆ.

    ಕನ್ನಡದಲ್ಲಿ ‘ರಾಮನ ಅವತಾರ’, ‘ರುದ್ರ ಗರುಡ ಪುರಾಣ’ ಸೇರಿದಂತೆ ಹಲವು ಸಿನಿಮಾಗಳು ರಿಷಿ ಕೈಯಲ್ಲಿದೆ. ತೆಲುಗಿನ ಮತ್ತೊಂದು ಸಿನಿಮಾದಲ್ಲಿ ಲೀಡ್ ಹೀರೋ ಆಗಿ ರಿಷಿ ನಟಿಸುತ್ತಿದ್ದಾರೆ. ಗೋಪಿ.ಜಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಒಟ್ನಲ್ಲಿ ಕನ್ನಡ ಮತ್ತು ತೆಲುಗು ಎರಡರಲ್ಲೂ ರಿಷಿ ಆ್ಯಕ್ಟೀವ್ ಆಗಿದ್ದಾರೆ.

  • ತೆಲುಗಿನಲ್ಲಿ ಬ್ಯುಸಿಯಾದ ರಿಷಿ : ಒಟಿಟಿ ಅವಾರ್ಡ್ ಪಡೆದ ಖುಷಿ

    ತೆಲುಗಿನಲ್ಲಿ ಬ್ಯುಸಿಯಾದ ರಿಷಿ : ಒಟಿಟಿ ಅವಾರ್ಡ್ ಪಡೆದ ಖುಷಿ

    ನ್ನಡ ಚಿತ್ರರಂಗದ ಪ್ರತಿಭಾನ್ವಿತ ತಾರೆ ರಿಷಿ (Rishi). ಅಪರೇಷನ್ ಅಲಮೇಲಮ್ಮ, ಕವಲುದಾರಿ, ನೋಡಿ ಸ್ವಾಮಿ ನಾವು ಇರೋದು ಹೀಗೆ ಪ್ರತಿ ಸಿನಿಮಾದಲ್ಲೊಂದು ಹೊಸ ಬಗೆಯ ಪಾತ್ರದ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿಕೊಂಡು ಬರ್ತಿದ್ದಾರೆ. ಶೈತನ್ ವೆಬ್ ಸೀರೀಸ್ ಮೂಲಕ ಒಟಿಟಿ ಪ್ರಪಂಚಕ್ಕೂ ಪರಿಚಿತರಾಗಿದ್ದ ರಿಷಿ ಇದೇ ಸೀರಿಸ್ ಗಾಗಿ ಅತ್ಯುತ್ತಮ ಖಳನಾಯಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.  ಕಿರುತೆರೆ ಹಾಗೂ ಸಿನಿಮಾ ರಂಗಕ್ಕೆ ಪ್ರಶಸ್ತಿಗಳಿರುವಂತೆ ಒಟಿಟಿ ವೇದಿಕೆಗೂ ಪ್ರಶಸ್ತಿ ಇದೆ. ಪ್ರತಿ ವರ್ಷ ಬಹಳ ಅದ್ಧೂರಿಯಾಗಿ ನಡೆಯುವ ಈ ಅವಾರ್ಡ್ ಕಾರ್ಯಕ್ರಮ ಮೊನ್ನೆ ಮುಂಬೈನಲ್ಲಿ ನೆರವೇರಿದೆ. ಇದೇ ವೇದಿಕೆಯಲ್ಲಿ ಬಾಲಿವುಡ್, ಕಾಲಿವುಡ್, ಮಾಲಿವುಡ್ ಹಾಗೂ ಸ್ಯಾಂಡಲ್ ವುಡ್ ಕಲಾವಿದರ ಸಮ್ಮುಖದಲ್ಲಿ ರಿಷಿ ಗಾಗಿ ಅತ್ಯುತ್ತಮ ಖಳನಾಯಕ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

    ಹಾಗ್ ನೋಡಿದ್ರೆ ಈ ವರ್ಷ ಬಹಳಷ್ಟು ವೆಬ್ ಸೀರಿಸ್ ಗಳು ಬಿಡುಗಡೆಯಾಗಿವೆ. ಆ ಎಲ್ಲಾ ವೆಬ್ ಸೀರಿಸ್ ಹಿಂದಿಕ್ಕಿ ಸೈತನ್ ಜೂರಿಗಳ ಮನಗೆದ್ದಿದೆ. ರಿಷಿ ಅಭಿನಯವೂ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ನೆಗೆಟಿವ್ ರೋಲ್ ನಲ್ಲಿ ಅಬ್ಬರಿಸಿ ಬೊಬ್ಬಿರಿಸಿದ್ದ ಕನ್ನಡದ ತಾರೆ ರಿಷಿ ಅವರಿಗೆ 2023 ಒಟಿಟಿ ಅತ್ಯುತ್ತಮ ಖಳನಾಯಕ ಪ್ರಶಸ್ತಿ  (Award) ಸಂದಿದೆ.

    ಶೈತನ್  (Shaitan) ವೆಬ್ ಸೀರಿಸ್ ಮೂಲಕ ತೆಲುಗು ಪ್ರೇಕ್ಷಕರಿಗೆ ರಿಷಿ ಹತ್ತಿರವಾಗಿದ್ದಾರೆ. ಅವರ ಸಹಜ ನಟನೆ ಗಮನಸೆಳೆದಿದ್ದು, ಹೊಸ ಹೊಸ ಅವಕಾಶಗಳು ಅವರನ್ನು ಅರಸಿ ಬರ್ತಿವೆ. ಅದರ ಮುಂದುವರೆದ ಭಾಗ ಎನ್ನುವಂತೆ ತೆಲುಗಿನಲ್ಲಿ ಹೊಸ ಚಿತ್ರವೊಂದರಲ್ಲಿ ರಿಷಿ ನಟಿಸುತ್ತಿದ್ದಾರೆ. ಹೈದ್ರಾಬಾದ್ ನಲ್ಲಿ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ. ನೈಜ ಘಟನೆಯ ಪ್ರೇರೆಪಿತ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಿಷಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಒಂದೊಳ್ಳೆ ಬಜೆಟ್ ನಲ್ಲಿ ತಯಾರಾಗ್ತಿರುವ ಈ ಸಿನಿಮಾ ಗೋಪಿ ವಿಹಾನಿ ಎಂಬುವವರು ಆಕ್ಷನ್ ಕಟ್ ಹೇಳ್ತಿದ್ದು, ಇದು ಇವರ ಚೊಚ್ಚಲ ಹೆಜ್ಜೆ.. ಬಯೋಪಾಟಿ ಸಿನಿಮಾಗಳಿಗೆ ಬರಹಗಾರರಾಗಿ ದುಡಿದಿರುವ ಗೋಪಿ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನದ ಅಖಾಡಕ್ಕೆ ಇಳಿದಿದ್ದಾರೆ.

    ತೆಲುಗಿನಲ್ಲಿ (Telugu) ಒಂದಿಷ್ಟು ವರ್ಷಗಳ ಕಾಲ ಮಾರ್ಕೆಟಿಂಗ್ ಹಾಗೂ ಪಿಆರ್ ಆಗಿ ಕೆಲಸ ಮಾಡಿರುವ ಅನುಭವಿರುವ ರವಿ ಪನಸ ತಮ್ಮದೇ ರವಿ ಪಸನ ಫಿಲ್ಮಂ ಕಾರ್ಪೊರೇಷನ್ ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ತಿರುವೀರ್, ಫರಿಯಾ ಅಬ್ದುಲ್ಲಾ, ರವೀಂದರ್ ವಿಜಯ್, ಶೆಲ್ಲಿ ಕಿಶೋರ್, ಕಾಲಕೇಯ ಪ್ರಭಾಕರ್, ಚಿರಾಗ್ ಜಾನಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹೊಸ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ರಿಷಿ ರಾಮನ ಅವತಾರ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ‘ರಾಮನ ಅವತಾರ’ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.

    ಸ್ಟಾರ್ ಫ್ಯಾಬ್ ಪ್ರೊಡಕ್ಷನ್‌ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಾತನ ಅಗಲಿಕೆಯ ನೋವಿನಲ್ಲಿ ‘ಆಪರೇಷನ್‌ ಅಲಮೇಲಮ್ಮ’ ನಟ ರಿಷಿ

    ತಾತನ ಅಗಲಿಕೆಯ ನೋವಿನಲ್ಲಿ ‘ಆಪರೇಷನ್‌ ಅಲಮೇಲಮ್ಮ’ ನಟ ರಿಷಿ

    ಸ್ಯಾಂಡಲ್‌ವುಡ್ (Sandalwood) ನಟ ರಿಷಿ (Rishi) ಅವರ ಮನೆಯಲ್ಲಿ ಸೂತಕದ ಛಾಯೆ ಮನೆ ಮಾಡಿದೆ.  ತಾತನ (Grand Father) ಅಗಲಿಕೆಯ ನೋವಿನಲ್ಲಿದ್ದಾರೆ ರಿಷಿ. ತಾತನ ಬಗ್ಗೆ ಭಾವನಾತ್ಮಕ ಸಾಲುಗಳನ್ನ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Rishi (@rishi_actor)

    ರಿಷಿ ಅವರ ತಾತ ಬೋರಯ್ಯ ಅವರು ಅಕ್ಟೋಬರ್ 8ರಂದು ನಿಧನರಾಗಿದ್ದಾರೆ. ನನ್ನ ಹೀರೋ, ನನ್ನ ತಾತ ಶಾಂತಿಯುತವಾಗಿ ನಿನ್ನೆ ನಮ್ಮನ್ನು ದೈಹಿಕವಾಗಿ ಅಗಲಿದ್ದಾರೆ ಎಂದು ನಟ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ನಾನು ‘ಹಿಟ್ ಅಂಡ್ ರನ್’ ಮಾಡಿಲ್ಲ: ನಟ ನಾಗಭೂಷಣ್

    ಆಪರೇಷನ್ ಅಲಮೇಲಮ್ಮ, ಕವಲುದಾರಿ, ನೋಡಿ ಸ್ವಾಮಿ ಇವನು ಇರೋದೇ ಹೀಗೆ, ರಾಮನ ಅವತಾರ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ರಿಷಿ ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ರಾಮನ ಅವತಾರ’ದ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ ರಿಷಿ-ಪ್ರಣೀತಾ

    ‘ರಾಮನ ಅವತಾರ’ದ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ ರಿಷಿ-ಪ್ರಣೀತಾ

    ವಿಭಿನ್ನ ಹಾಗೂ ಹೊಸತನ ಸಿನಿಮಾಗಳ ಮೂಲಕ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಿರುವ ಕನ್ನಡದ ಪ್ರತಿಭಾನ್ವಿತ ನಟ ರಿಷಿ (Rishi) . ಕಾಮಿಡಿ, ಸಸ್ಪೆನ್ಸ್ ಹಾಗೂ ಪ್ರೇಮಕಥೆ ಯಾವುದೇ ಇರಲಿ ಅದಕ್ಕೆ ರಿಷಿ ಸರಿಹೊಂದುತ್ತಾರೆ. ಬರೀ ಸಿನಿಮಾ ಮಾತ್ರವಲ್ಲ ವೆಬ್ ಸೀರಿಸ್ ಮೂಲಕವೂ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ತೆಲುಗಿನ ಜನಪ್ರಿಯ ನಿರ್ದೇಶಕ ಮಹಿ ರಾಘವ್ ಆಕ್ಷನ್ ಕಟ್ ಹೇಳಿರುವ ಕ್ರೈಮ್ ಡ್ರಾಮಾ ‘ಶೈತಾನ್’ನಲ್ಲಿ ರಿಷಿ ರಗಡ್ ಆಗಿ ಮಾಸ್ ಅವತಾರದಲ್ಲಿ ಅಮೋಘವಾಗಿ ಅಭಿನಯಿಸಿ ಮೆಚ್ಚುಗೆ ಪಡೆದಿದ್ದಾರೆ. ಈಗ ರಾಮನ ಅವತಾರ (Ramana Avatara) ಸಿನಿಮಾ ಮೂಲಕ ಲವರ್ ಬಾಯ್ ಆಗಿ ಪ್ರತ್ಯಕ್ಷರಾಗಿದ್ದಾರೆ.

    ರಿಷಿ ನಟನೆಯ ಬಹು ನಿರೀಕ್ಷಿತ ಸಿನಿಮಾ ರಾಮನ ಅವತಾರ. ಇತ್ತೀಚೆಗೆಷ್ಟೇ ರಾಮ ಈಸ್ ಜೆಂಟಲ್ ಮೆನ್ ಅಂತಾ ಹೆಜ್ಜೆ ಹಾಕಿದ್ದ ರಿಷಿ ಮನಸ್ಸು ಬೇರೆಯ ದಿಕ್ಕಿಗೆ ಸಾಗಲು ಎಂದು ಗುನುಗುತ್ತಿದ್ದಾರೆ. ಅಂದರೆ ರಾಮನ ಅವತಾರ ಸಿನಿಮಾದ ಎರಡನೇ ಹಾಡು (Song) ಬಿಡುಗಡೆಯಾಗಿದೆ.  ಸಿಂಪಲ್ ಸುನಿ ಸಾಹಿತ್ಯದ ಮನಸ್ಸು ಬೇರೆ ದಿಕ್ಕಿಗೆ ಸಾಗಲು ಹಾಡಿಗೆ ಸಂಚಿತ್ ಹೆಗ್ಡೆ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದಾರೆ.  ಉಡುಪಿ ಬೀಚ್ ನಲ್ಲಿ ಇಡೀ ಹಾಡನ್ನು ಚಿತ್ರೀಕರಿಸಲಾಗಿದೆ. ಸೊಗಸಾದ ಈ ಪ್ರೇಮಗೀತೆಯಲ್ಲಿ ರಿಷಿ ಹಾಗೂ ಪ್ರಣೀತಾ (Pranitha) ಜೋಡಿ ನೋಡುಗರ ಗಮನಸೆಳೆಯುತ್ತಿದೆ. ಇದನ್ನೂ ಓದಿ:ಜುಲೈ 23ಕ್ಕೆ ವಿಶ್ವಕುಂದಾಪ್ರ ಕನ್ನಡ ದಿನಕ್ಕೆ ಸಿಎಂ, ರಿಷಬ್ ಶೆಟ್ಟಿ- ಪ್ರಮೋದ್ ಶೆಟ್ಟಿ ಸಾಥ್

    ರಾಮನ ಅವತಾರ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ರಾಮನ ಅವತಾರ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

    ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ನಡಿ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ. ರಾಮನ ಅವತಾರ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಸದ್ಯ ಸೆನ್ಸಾರ್ ಅಂಗಳಕ್ಕೆ ಹೊರಡಲು ಸಜ್ಜಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೊಲೀಸ್ ಅಧಿಕಾರಿಯಾದ ನಟ ರಿಷಿ: ಅಭಿನಂದಿಸಿದ ನೀನಾಸಂ ಸತೀಶ್

    ಪೊಲೀಸ್ ಅಧಿಕಾರಿಯಾದ ನಟ ರಿಷಿ: ಅಭಿನಂದಿಸಿದ ನೀನಾಸಂ ಸತೀಶ್

    ಪರೇಶನ್ ಅಲಮೇಲಮ್ಮ, ಕವಲುದಾರಿ ಮುಂತಾದ ಚಿತ್ರಗಳ ಮೂಲಕ ಮನೆಮಾತಾಗಿರುವ ನಟ ರಿಷಿ (Rishi) ನಾಯಕರಾಗಿ ನಟಿಸುತ್ತಿರುವ,  ಕೆ.ಎಸ್ ನಂದೀಶ್ (Nandish) ನಿರ್ದೇಶನದ ನೂತನ ಚಿತ್ರದ ಮುಹೂರ್ತ ಸಮಾರಂಭ ಹಾಗೂ ಶೀರ್ಷಿಕೆ ಅನಾವರಣ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಟ ನೀನಾಸಂ ಸತೀಶ್ (Ninasam Satish)ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ರುದ್ರ ಗರುಡ ಪುರಾಣ (Rudra Garuda Purana) ಎಂದು ಚಿತ್ರಕ್ಕೆ ಹೆಸರಿಡಲಾಗಿದೆ.

    ಚಂಬಲ್, ಡಿಯರ್ ವಿಕ್ರಮ್ ಚಿತ್ರಗಳು ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು. ಉದ್ಯಮಿ ಲೋಹಿತ್ ನಿರ್ಮಾಣ ಮಾಡುತ್ತಿದ್ದಾರೆ. ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕಾ ಕುಮಾರ್ ಅಭಿನಯಿಸುತ್ತಿದ್ದಾರೆ.

    ರುದ್ರ ಗರುಡ ಪುರಾಣ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಇಂದಿನಿಂದ ಚಿತ್ರೀಕರಣ ಆರಂಭವಾಗಲಿದೆ. ಸಿನಿಮಾ ಜನರ ಮೇಲೆ ಉತ್ತಮ ಪ್ರಭಾವ ಬೀರಬೇಕು. ಅಂತಹ ಸಿನಿಮಾವನ್ನು ಜನರಿಗೆ ಕೊಡುವ ಆಸೆ ನನಗೆ.  2022 UPSC ಪರೀಕ್ಷೆಯಲ್ಲಿ 265ನೇ ರ‍್ಯಾಂಕ್‌ ಪಡೆದಿರುವ ಮೈಸೂರು ಮೂಲದ ಕೆ‌.ಸೌರಭ್  ಅವರು ಸಂದರ್ಶನವೊಂದರಲ್ಲಿ ನನಗೆ ಪುನೀತ್ ರಾಜಕುಮಾರ್ ಅಭಿನಯದ ಪೃಥ್ವಿ ಚಿತ್ರ ಪ್ರೇರಣೆ ಎಂದಿದ್ದಾರೆ. ಪೃಥ್ವಿ ಚಿತ್ರ ಸೌರಭ್ ಅವರಿಗಷ್ಟೆ ಅಲ್ಲ. ಸಾಕಷ್ಟು ಜನರಿಗೆ ಸ್ಪೂರ್ತಿಯಾಗಿದೆ.  ನಾನು ಆ ಚಿತ್ರದ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೆ.‌ ನಾವು ಮಾಡುವ ಚಿತ್ರ, ಈ ರೀತಿ ಜನರಿಗೆ ತಲುಪಿದಾಗ ಮುಂದೆ ಇಂತಹ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡುವ ಹುಮ್ಮಸ್ಸು ನಿರ್ದೇಶಕನಿಗೆ ಹೆಚ್ಚಾಗುತ್ತದೆ ಎಂದು ನಿರ್ದೇಶಕ ಕೆ.ಎಸ್ ನಂದೀಶ್ ತಿಳಿಸಿದರು.

    ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ ಕವಲುದಾರಿ ಚಿತ್ರದಲ್ಲೂ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದೆ. ಹಾಗಾಗಿ, ಅದೇ ಜಾನರ್ ನ ಇನ್ನೊಂದು ಚಿತ್ರ ಮಾಡುವುದಕ್ಕೆ ಇಷ್ಟವಿರಲಿಲ್ಲ. ಆದರೆ ನಂದೀಶ್ ಅವರು ಈ ಚಿತ್ರದ ಕಥೆ ಕೇಳಿದಾಗ ಬಹಳ ಇಷ್ಟವಾಯಿತು. ಎರಡೂ ಚಿತ್ರಗಳ ಮಧ್ಯೆ ಯಾವುದೇ ಹೋಲಿಕೆ ಇಲ್ಲ.  ಇದರಲ್ಲಿ ನಾನು ಪೊಲೀಸ್ ಅಧಿಕಾರಿಯಾದರೂ ಬಹಳ ವಿಭಿನ್ನವಾಗಿದೆ.  ಜೊತೆಗೆ ಕರ್ಮ, ಪಾಪ, ಪುಣ್ಯಕ್ಕೆ ಸಂಬಂಧಿಸಿದ ಗರುಡ ಪುರಾಣದ ಸಾಕಷ್ಟು ಅಂಶಗಳು ಈ ಚಿತ್ರದಲ್ಲಿದೆ.  ಈ ಚಿತ್ರಕ್ಕೆ ಗರುಡ ಪುರಾಣ ಎಂದು ಹೆಸರಿಡಲು ನಿರ್ಧರಿಸಿದ್ದೆವು. ಚಿತ್ರದಲ್ಲಿ ನನ್ನ ಪಾತ್ರದ ಹೆಸರು ರುದ್ರ. ಹಾಗಾಗಿ ರುದ್ರ ಗರುಡ ಪುರಾಣ ಅಂತ ಶೀರ್ಷಿಕೆ ಇಡಲಾಗಿದೆ. ಚಿತ್ರಕ್ಕೆ ಚಾಲನೆ ನೀಡಿದ ನೀನಾಸಂ ಸತೀಶ್ ಅವರಿಗೆ ಧನ್ಯವಾದ ಎಂದರು ನಾಯಕ ರಿಷಿ.  ನಾಯಕಿ ಪ್ರಿಯಾಂಕ ಕುಮಾರ್, ನಟರಾದ ಶಿವರಾಜ್ ಕೆ ಆರ್ ಪೇಟೆ, ಪವನ್  ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

  • ವೆಬ್ ಸಿರೀಸ್ ಪ್ರಪಂಚಕ್ಕೆ ನಟ  ರಿಷಿ ಎಂಟ್ರಿ

    ವೆಬ್ ಸಿರೀಸ್ ಪ್ರಪಂಚಕ್ಕೆ ನಟ ರಿಷಿ ಎಂಟ್ರಿ

    ಗೇನಿದ್ದರೂ ಡಿಜಿಟಲ್ ಜಮಾನ. ಒಟಿಟಿ ಮೂಲಕ ಸಿನಿಮಾಗಳು ಹಾಗೂ ವೆಬ್ ಸರಣಿಗಳು (Web Series) ಪ್ರೇಕ್ಷಕರ ಎದುರು ಬರುತ್ತಿವೆ. ಬಾಲಿವುಡ್ ಚಿತ್ರರಂಗದ ದೊಡ್ಡ ದೊಡ್ಡ ತಾರೆಯರು ಹಾಗೂ ಫಿಲ್ಮಂ ಮೇಕರ್ಸ್ ಸಹ ವೆಬ್ ಸಿರೀಸ್ ಗಳತ್ತ ಚಿತ್ತ ಹರಿಸಿದ್ದಾರೆ. ಇತ್ತೀಚೆಗೆ ಕನ್ನಡದಲ್ಲಿಯೂ ವೆಬ್ ಸಿರೀಸ್ ಗಳ ನಿರ್ಮಾಣ ಜೋರಾಗಿ ನಡೆಯುತ್ತಿದೆ. ಕನ್ನಡ ತಾರೆಯರು ಕೂಡ ವೆಬ್ ಸರಣಿಗಳಲ್ಲಿ ನಟಿಸುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಪ್ರತಿಭಾನ್ವಿತ ನಟ ರಿಷಿ.

    ಸಿನಿಮಾಗಳು ಹಾಗೂ ಪಾತ್ರಗಳ ಆಯ್ಕೆಯಲ್ಲಿ ಇವರು ಬಹಳ ವಿಭಿನ್ನ. ಸಸ್ಪೆನ್ಸ್, ಕಾಮಿಡಿ, ಲವ್ ಸ್ಟೋರಿ ಯಾವುದೇ ಇರಲಿ ಎಲ್ಲದಕ್ಕೂ ಸರಿಹೊಂದುವ ನಟ ರಿಷಿ ((Rishi)). ಅದಕ್ಕೆ ಉದಾರಹಣೆ ಅಪರೇಷನ್ ಅಲಮೇಲಮ್ಮ, ಕವಲುದಾರಿ, ನೋಡಿ ಸ್ವಾಮಿ ಇವನು ಇರೋದೆ ಹೀಗೆ ಸಿನಿಮಾಗಳು. ಪ್ರತಿ ಸಿನಿಮಾದಲ್ಲಿಯೂ ಹೊಸ ಬಗೆಯ ಕಂಟೆಂಟ್, ಕ್ಯಾರೆಕ್ಟರ್ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಾ ತಾವೊಬ್ಬ ಪ್ರತಿಭಾನ್ವಿತ ನಟ ಎಂಬುದನ್ನು ಸಾಬೀತುಪಡಿಸಿದ್ದಾರೆ. ಇದನ್ನೂ ಓದಿ:ಸಮಂತಾ ನಟನೆಯ ಹಾಲಿವುಡ್ ಸಿನಿಮಾಗೆ ಟೈಟಲ್ ಫಿಕ್ಸ್

    ಸದ್ಯ ರಾಮನ ಅವತಾರ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ರಿಷಿ ಒಂದಷ್ಟು ಹೊಸ ಪ್ರಾಜೆಕ್ಟ್ ಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ಬರೀ ಸಿನಿಮಾಗಳಲ್ಲಿ ಮಾತ್ರವಲ್ಲ ಈಗ ವೆಬ್ ಸಿರೀಸ್ ಜಗತ್ತಿನಲ್ಲಿಯೂ‌ ತಮ್ಮ ನಟನ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ತೆಲುಗಿನ ಹೆಸರಾಂತ ನಿರ್ದೇಶಕರಾದ ಮಹಿ ರಾಘವ್ ನಿರ್ದೇಶನದ ಕ್ರೈಮ್ ಡ್ರಾಮಾ ಶೈತಾನ್ ಮೂಲಕ ರಿಷಿ ತೆಲುಗು ಸಿನಿಮಾ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ವೆಬ್ ಸರಣಿಯಲ್ಲಿ ರಿಷಿ ಬಾಲಿ‌ ಎಂಬ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಾಯಕ ಹಾಗೂ ಖಳನಾಯಕ ಎರಡು ಶೇಡ್ ನಲ್ಲಿರುವ ಬಾಲಿ ಪಾತ್ರದ ಸಣ್ಣ ಝಲಕ್ ರಿಲೀಸ್ ಆಗಿದ್ದು, ಕಂಪ್ಲೀಟ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

    ಜೂನ್ 15ರಂದು ಡಿಸ್ನಿ ಹಾಟ್ ಸ್ಟಾರ್‌ನಲ್ಲಿ ಶೈತಾನ್ (Shaitan)  ಸ್ಟ್ರೀಮಿಂಗ್ ಆಗಲಿದೆ. ತೆಲುಗು ಭಾಷೆ ಜೊತೆಗೆ ತಮಿಳು, ಕನ್ನಡ, ಹಿಂದಿ ಹಾಗೂ ಮಲಯಾಳಂನಲ್ಲಿಯೂ ವೆಬ್ ಸರಣಿ ಮೂಡಿಬರಲಿದೆ. ರವಿಕಾಳೆ, ಜಾಫರ್ ಸಾದಿಕ್, ಲೀನಾ, ಮಣಿಕಂದನ್ ಮುಂತಾದವರು ಶೈತಾನ್ ಸಿರೀಸ್ ಭಾಗವಾಗಿದ್ದಾರೆ. ಹಾಗ್ ನೋಡಿದರೆ ತೆಲುಗು ಚಿತ್ರರಂಗದಲ್ಲಿಯೂ ಪ್ರತಿಭಾನ್ವಿತ ಕಲಾವಿದರ ದಂಡೇ ಇದೆ. ಹಾಗಿದ್ದರೂ ರಿಷಿ ಅವರಿಗೆ ಶೈತಾನ್ ವೆಬ್ ಸಿರೀಸ್ ಸಿಗೋದಿಕ್ಕೆ ಅವರ ಅಭಿನಯವೇ ಕಾರಣ. ರಿಷಿ ಸಿನಿಮಾಗಳನ್ನು ನೋಡಿ ಥ್ರಿಲ್ ಆಗಿದ್ದ ನಿರ್ದೇಶಕ ಮಹಿ ರಾಘವ್ ತಮ್ಮ ವೆಬ್ ಸಿರೀಸ್ ತಾವೇ ನಟಿಸುವ ಆಫರ್ ಇಟ್ಟಿದ್ದರು. ಅದಕ್ಕೆ‌ ನೋ ಎನ್ನದ ರಿಷಿ, ಬಾಲಿಯಾಗಿ ಅಬ್ಬರಿಸಿದ್ದಾರೆ.

    ಇತ್ತೀಚೆಗೆ ಕನ್ನಡ ಸಿನಿಮಾಗಳು ಹಾಗೂ ಕನ್ನಡ ಕಲಾವಿದರ ನಟನೆಗೆ ಒಂದೊಳ್ಳೆ ಬೆಲೆ ಸಿಗುತ್ತಿದೆ. ನಮ್ಮ ಇಂಡಸ್ಟ್ರೀಯ ಸ್ಟಾರ್ಸ್ ಅಕ್ಕಪಕ್ಕದ ಸಿನಿ ಲೋಕದಲ್ಲಿ ಮಿಂಚು ಹರಿಸುತ್ತಿದ್ದಾರೆ. ಈಗ ಅದಕ್ಕೆ ಹೊಸ ಸೇರ್ಪಡೆ ರಿಷಿ. ಕಾಮಿಡಿ, ಸಸ್ಪೆನ್ಸ್ ಪಾತ್ರದ ಮೂಲಕ ಗಮನಸೆಳೆದಿದ್ದ ಅವರೀಗ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ದರ್ಶನ ಕೊಡಲು ಸಜ್ಜಾಗಿದ್ದಾರೆ. ಬಹುಕೋಟಿ ಬಜೆಟ್ ನಲ್ಲಿ ತಯಾಗಿರುವ ಶೈತಾನ್ ಮೂಲಕ ಇಡೀ ಇಂಡಿಯನ್ ಸಿನಿಲೋಕಕ್ಕೆ ಪರಿಚಯವಾಗಲಿದ್ದಾರೆ. ಕನ್ನಡದ ಹುಡ್ಗನ ಪ್ರತಿಭೆ ಗಮನಿಸಿ, ಅವರಿಂದ ಮಾತ್ರ ಈ ಪಾತ್ರ ಮಾಡಲು ಸಾಧ್ಯ ಅಂತಾ ಅವಕಾಶ ನೀಡಿರುವ ನಿರ್ದೇಶಕ ಮಹಿ ರಾಘವ್ ಹಾಗೂ ಇಡೀ ಚಿತ್ರತಂಡಕ್ಕೆ ರಿಷಿ ಧನ್ಯವಾದ ಅರ್ಪಿಸಿದ್ದಾರೆ.

  • ರಾಮ ಈಸ್ ಜೆಂಟಲ್ ಮ್ಯಾನ್ ಅಂತಿದ್ದಾರೆ ನಟ ರಿಷಿ

    ರಾಮ ಈಸ್ ಜೆಂಟಲ್ ಮ್ಯಾನ್ ಅಂತಿದ್ದಾರೆ ನಟ ರಿಷಿ

    ಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ರಾಮನ ಅವತಾರ (Ramana Avatar) ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ ರಾಮ ಈಸ್ ಜೆಂಟಲ್ ಮ್ಯಾನ್ ಎಂಬ ಸಿಂಗಿಂಗ್ ಮಸ್ತಿಗೆ ಅಭಿನಂದನ್ ಮಹಿಶಾಲೆ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಟೈಟಲ್ ಕಂ ರೋಮ್ಯಾಂಟಿಕ್ ಹಾಡಾಗಿರುವ ರಾಮ ಈಸ್ ಜೆಂಟಲ್ ಮ್ಯಾನ್ ನಲ್ಲಿ ರಿಷಿ ತನ್ನ ಪ್ರೀತಿಯನ್ನು ನಾಯಕಿ ಶುಭ್ರಗೆ ವ್ಯಕ್ತಪಡಿಸುತ್ತಾ ಹೆಜ್ಜೆ ಹಾಕಿದ್ದಾರೆ.

    ಈ ಹಾಡಿನ ಚಿತ್ರೀಕರಣ ಸಾವನದುರ್ಗ ಮತ್ತು ಶಿವಗಂಗೆ ಸ್ಥಳಗಳಲ್ಲಿ ಮಾಡಿದ್ದು ವೆಸ್ಟೆರ್ನ್ ಶೈಲಿಯ ಸಂಗೀತಕ್ಕೆ ಪಕ್ಕಾ ದೇಸಿ ಟಚ್ ಕೊಟ್ಟಂತಿದೆ. ಸಾಹಿತ್ಯ ಕೇಳಲು ಇಂಪಾಗಿರುವದರ ಜೊತೆಗೆ ಪ್ರೇಕ್ಷರ ಮುಖದಲ್ಲಿ ನಗುವನ್ನು ತರಿಸುವುದರಲ್ಲಿ ಯಶಸ್ವಿಯಾಗಿದೆ. ತಮ್ಮದೇ ವಿಭಿನ್ನ ಶೈಲಿಯ ನಟನೆಯಿಂದ ಜನರ ಮನಸ್ಸನ್ನು ಗೆದ್ದಿರುವ ರಿಷಿ ರಾಮ ಐಸ್ ಆ ಜೆಂಟಲ್ ಮ್ಯಾನ್ ಹಾಡಿನಲ್ಲಿ ಕುಣಿದು ಜನರನ್ನು ಮನೋರಂಜಿಸಿದ್ದಾರೆ. ಈ ಹಾಡಿನ  ಮುಖಾಂತರ ಜನರ ಮನಸ್ಸನ್ನು ಮತ್ತೊಮ್ಮೆ ಗೆದ್ದಿರುವ ಚಿತ್ರತಂಡ ಚಿತ್ರದ ಉಳಿದ ಹಾಡುಗಳನ್ನು ಬಿಡುಗಡೆ ಮಾಡುವ ತಯಾರಿಯಲ್ಲಿದೆ.

    ಟೀಸರ್ ಮೂಲಕ ಭರಪೂರ ಕಾಮಿಡಿ ಉಣಬಡಿಸಿದ್ದ ರಾಮನ ಅವಾತರ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ರಾಮನ ಅವತಾರ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ:‘RRR’ ರೈಟರ್ ವಿಜೇಂದ್ರ ಪ್ರಸಾದ್‌ ಜೊತೆ ಕೇದರನಾಥ್‌ಗೆ ಕಂಗನಾ ಭೇಟಿ

    ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ನಡಿ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ. ರಾಮನ ಅವತಾರ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಪ್ರಚಾರ ಕಾರ್ಯಕ್ಕೆ ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

  • ಎರಡು ಭಾಷೆಗಳಲ್ಲಿ ಏಕಕಾಲಕ್ಕೆ ಸೆಟ್ಟೇರಲಿದೆ ರಿಷಿ ಸಿನಿಮಾ

    ಎರಡು ಭಾಷೆಗಳಲ್ಲಿ ಏಕಕಾಲಕ್ಕೆ ಸೆಟ್ಟೇರಲಿದೆ ರಿಷಿ ಸಿನಿಮಾ

    ವಲುದಾರಿ ಮತ್ತು ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ಅವರು ನಟಿಸುತ್ತಿರುವ ಬಹುಕೋಟಿ ಬಜೆಟ್ ನ ಚಿತ್ರವೊಂದು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ಸೆಟ್ಟೇರುವ ತಯಾರಿಯಲ್ಲಿದೆ. ರಿಷಿ (Rishi) ಅವರು ನಿರ್ಮಾಪಕರ ನಟನಾಗಿದ್ದು ತಮ್ಮದೇ ಪ್ರೇಕ್ಷಕ ವರ್ಗವನ್ನು ಹೊಂದಿರುತ್ತಾರೆ ಮತ್ತು ಕಥೆಯ ಆಯ್ಕೆಯಲ್ಲಿಯೂ ಕೂಡ ತುಂಬಾ ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ.

    ಈ ಚಿತ್ರ ಜೂನ್ ಎರಡರಂದು ಅಧಿಕೃತವಾಗಿ ಆರಂಭವಾಗಲಿದೆ ಎಂದು ತಿಳಿದುಬಂದಿದೆ.   ಸಿನಿಮಾದ ಹೆಸರು. ನಿರ್ಮಾಣ ಸಂಸ್ಥೆ ಮತ್ತು ತಾರಾ ಬಳಗದ ಬಗ್ಗೆ ಜೂನ್ 2ರಂದು ಚಿತ್ರತಂಡ ತಿಳಿಸಲಿದೆ.  ಈ ಚಿತ್ರವನ್ನು ಡಿಯರ್ ವಿಕ್ರಂ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ ಎಸ್ ನಂದೀಶ್ (K.S. Nandish) ಅವರು ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ:ಕಾಲೆಳೆದ ನಟಿಗೆ ಸ್ನೇಹದ ಹಸ್ತಚಾಚಿದ ರಶ್ಮಿಕಾ ಮಂದಣ್ಣ

    ತಮ್ಮ ಪ್ರಥಮ ಚಿತ್ರ ಓ ಟಿ ಟಿ ಯಲ್ಲಿ ಬಿಡುಗಡೆಗೊಂಡು ಅದ್ಭುತ ಯಶಸ್ಸು ಸಾಧಿಸಿರುವುದು ನಿರ್ದೇಶಕರಿಗೆ ಮತ್ತೊಂದು ಚಿತ್ರ ಮಾಡಲು ಹುಮ್ಮಸ್ಸು ಮತ್ತು ಪ್ರೋತ್ಸಾಹ ಕೊಟ್ಟಿದೆ. ಡಿಯರ್ ವಿಕ್ರಂ ಚಿತ್ರವನ್ನು ಓಟಿಟಿಯಲ್ಲಿ ನೋಡಿದ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯು ತೆಲುಗಿನಲ್ಲಿ ರೀಮೇಕ್ ಮಾಡಲು ಮಾತುಕತೆ ನಡೆಸುತ್ತಿದೆ

    ನೈಜ ಘಟನೆಗಳ ಆದರಿಸಿದ ಚಿತ್ರ “ಡಿಯರ್ ವಿಕ್ರಂ”, ನಕ್ಸಲ್ ಮತ್ತು ರಾಜಕೀಯ ಕಥಾಂದರ ಗಳನ್ನು ಒಳಗೊಂಡ ಚಿತ್ರವಾಗಿತ್ತು. ಓ ಟಿ ಟಿ ಯಲ್ಲಿ ಬಿಡುಗಡೆಗೊಂಡ ನಂತರ ತುಂಬಾ ಜನ ಇದು ಥಿಯೇಟರ್ ನಲ್ಲಿ ಬಿಡುಗಡೆ ಆಗಬೇಕಾಗಿತ್ತು ಎಂದು ಮಾತನಾಡಿದ್ದಾರೆ..

    ಆದರೆ ನಿರ್ದೇಶಕರು ನೇರವಾಗಿ ಓಟಿಟಿ ನಲ್ಲಿ ಬಿಡುಗಡೆಗೊಂಡಿದ್ದಕ್ಕೆ ಯಾವುದೇ ಬೇಸರವಿಲ್ಲ ಯಾಕೆಂದರೆ ಪ್ರಸ್ತುತ ಕಾಲದಲ್ಲಿ ಬದಲಾವಣೆಗೆ ಹೊಂದಿಕೊಂಡು ಹೋಗುವುದು ಅನಿವಾರ್ಯ. ಥಿಯೇಟರ್ ನಷ್ಟೇ ಓಟಿಟಿ ಕೂಡ ಮನರಂಜನೆಯನ್ನು ಜನಕ್ಕೆ ತಲುಪಿಸುವ ಒಂದು ಮಾಧ್ಯಮ ಎಂದು ಹೇಳಿದ್ದಾರೆ. ಆದರೆ ಈಗ ತಯಾರಿ ನಡೆಯುತ್ತಿರುವ ಈ ಚಿತ್ರ, ಚಿತ್ರಮಂದಿರಗಳಲ್ಲಿ ಮತ್ತು ಓ ಟಿ ಟಿ ಯಲ್ಲಿ ಬಿಡುಗಡೆಗೊಳ್ಳುತ್ತದೆ.
    ತಾರಾ ಬಳಗದಲ್ಲಿ ತೆಲುಗಿನ ಕೆಲವು ಪ್ರಖ್ಯಾತ ನಟರು ಕೂಡ ನಟಿಸುತ್ತಿದ್ದಾರೆ.

  • ‘ರಾಮನ ಅವತಾರ’ ಟೀಸರ್ ರಿಲೀಸ್ : ರಿಷಿ ಸಖತ್ ಕಾಮಿಡಿ ಮಾಡ್ತಾರಪ್ಪ

    ‘ರಾಮನ ಅವತಾರ’ ಟೀಸರ್ ರಿಲೀಸ್ : ರಿಷಿ ಸಖತ್ ಕಾಮಿಡಿ ಮಾಡ್ತಾರಪ್ಪ

    ಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ‘ರಾಮನ ಅವತಾರ’ (Ramana Avatar) ಸಿನಿಮಾದ ಟೀಸರ್ (Teaser) ರಿಲೀಸ್ ಆಗಿದೆ. ಟೀಸರ್ ಮೂಲಕ ನಿರ್ದೇಶಕ ವಿಕಾಸ್ ಪಂಪಾಪತಿ (Vikas Pampapathy)  ಭರಪೂರ ನಗುವಿನ ಮ್ಯಾಜಿಕ್ ಅನ್ನು ಪ್ರೇಕ್ಷಕರಿಗೆ ಉಣ ಬಡಿಸಿದ್ದಾರೆ. ರಿಷಿ (Rishi) ಪಂಚಿಂಗ್ ಸಂಭಾಷಣೆ ಮೂಲಕ ನೋಡುಗರನ್ನು‌ ನಕ್ಕು ನಲಿಸುತ್ತಾರೆ. ಇವರಿಗೆ ಜೋಡಿಯಾಗಿ ಪ್ರಣೀತಾ  ಸುಭಾಷ್  (Praneetha Subhash) ಹಾಗೂ ಶುಭ್ರ ಅಯ್ಯಪ್ಪ (Shubhra Ayyappa) ನಟಿಸಿದ್ದಾರೆ. ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

    ಟೀಸರ್ ರಿಲೀಸ್ ಬಳಿಕ ಮಾತಾನಾಡಿದ ರಿಷಿ, ಸಾಮಾನ್ಯವಾಗಿ ಕಾಮಿಡಿ ಕಷ್ಟವಾದ ಜಾನರ್. ಅದರಲ್ಲಿ ಡಬಲ್ ಮೀನಿಂಗ್ ಮಾಡಬಹುದು. ಬೇರೆಯವರನ್ನು ನಿಂದಿಸಿ ಕಾಮಿಡಿ ಮಾಡಬಹುದು. ಡಬಲ್ ಮೀನಿಂಗ್ ಇಲ್ಲದೇ, ಯಾರಿಗೂ ನಿಂದಿಸದೆ, ಕಾಮಿಡಿ ಮಾಡಬಹುದು ಎಂಬುದಕ್ಕೆ ನಿರ್ದೇಶಕ ವಿಕಾಸ್‌ ಪಂಪಾಪತಿ ಉದಾಹರಣೆ. ನಾನು ಈ ಸಿನಿಮಾವನ್ನು ತುಂಬಾ ಮಜಾಕೊಂಡು ಮಾಡಿದ್ದೇನೆ. ನನಗೆ ಖುಷಿ ಕೊಟ್ಟ ಸಿನಿಮಾ. ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಅವರೆಲ್ಲರ ಎನರ್ಜಿ ನೋಡಿ ನನಗೆ ಖುಷಿಯಾಗಿದೆ. ಟೀಸರ್ ಚೆನ್ನಾಗಿ ಮೂಡಿಬಂದಿದೆ. ನಮ್ಮ ಸಿನಿಮಾ ಮೇಲೆ ನಿಮ್ಮ ಪ್ರೋತ್ಸಾಹ ಇರಲಿ.

    ಸಿನಿಮಾ ಬಗ್ಗೆ ಮಾತನಾಡಿದ ನಿರ್ದೇಶಕ ವಿಕಾಸ್  ಪಂಪಾಪತಿ, ‘ರಾಮನ ಅವತಾರ ಚಿತ್ರ ಕಲಿಯುಗದ ರಾಮನ ಕಥೆಯಾಗಿದ್ದು, ಸಿನಿಮಾ ನೋಡುವಾಗ ಅಲ್ಲಲ್ಲಿ ಪೌರಾಣಿಕ ರಾಮಾಯಣದ ನೆನಪು ಮಾಡಿಕೊಡುತ್ತದೆ. ಯಾವುದೇ ರೀತಿ ಕಾಂಪ್ರಮೈಸ್ ಮಾಡಿಕೊಳ್ಳದೆ ಸಿನಿಮಾವನ್ನು ಮಾಡಿದ್ದು   ಕನ್ನಡ ಸಿನಿ ರಂಗದಲ್ಲಿ ಇದೊಂದು ವಿಭಿನ್ನ ಚಿತ್ರವಾಗುವುದರಲ್ಲಿ, ಪ್ರೇಕ್ಷಕರಿಗೆ ಮನೋರಂಜನೆ ಕೊಡುವುದರಲ್ಲಿ ಸಂದೇಹವಿಲ್ಲ’ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಗಳ ಮುದ್ದಾದ ಫೋಟೋ ಹಂಚಿಕೊಂಡ ನಟಿ ಮಾನಸ ಜೋಶಿ

    ವಿಕಾಸ್‌ ಪಂಪಾಪತಿ ‘ರಾಮನ ಅವತಾರ’ ಸಿನಿಮಾಕ್ಕೆ ಆಕ್ಷನ್‌ ಕಟ್‌ ಹೇಳಿದ್ದು, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.  ಅಮರೇಜ್‌ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್‌ ಕಾಮಿಡಿ ಜಾನರ್‌ನ ರಾಮನ ಅವತಾರ ಸಿನಿಮಾಗೆ ವಿಷ್ಣುಪ್ರಸಾದ್‌ ಹಾಗೂ ಸಮೀರ್‌ ದೇಶಪಾಂಡೆ ಛಾಯಾಗ್ರಹಣವಿದೆ.

    ಜೂಡಾ ಸ್ಯಾಂಡಿ ಸಂಗೀತ, ಅಮರನಾಥ್‌ ಸಂಕಲನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್‌ ನಡೆಸಲಾಗಿದೆ. ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಕಿಕ್ ಸ್ಟಾರ್ಟ್ ಕೊಟ್ಟಿರುವ ಚಿತ್ರತಂಡ ಜೂನ್‌ ಮೊದಲ ವಾರ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

  • ಇಬ್ಬರು ನಾಯಕಿಯರ ಜೊತೆ ಡುಯೆಟ್ ಹಾಡಲಿದ್ದಾರೆ ರಿಷಿ

    ಇಬ್ಬರು ನಾಯಕಿಯರ ಜೊತೆ ಡುಯೆಟ್ ಹಾಡಲಿದ್ದಾರೆ ರಿಷಿ

    ನ್ನಡ ಚಿತ್ರರಂಗ ಪ್ರತಿಭಾನ್ವಿತ ನಟ ರಿಷಿ (Rishi) ವಿಭಿನ್ನ ಪಾತ್ರಗಳ ಮೂಲಕ ಸಿನಿರಸಿಕರನ್ನು ರಂಜಿಸಿಕೊಂಡು ಬರ್ತಿದ್ದಾರೆ. ಇದೀಗ ಅವರು ರಾಮನ ಅವತಾರ ಎಂಬ ಮತ್ತೊಂದು ಹೊಸ ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾದಲ್ಲಿ ಇಬ್ಬರು ನಾಯಕಿಯರ ಜೊತೆ ಡುಯೆಟ್ ಹಾಡಲಿದ್ದಾರೆ. ಶುಭ್ರ ಅಯ್ಯಪ್ಪ (Shubhra Ayyappa) ಹಾಗೂ ಪ್ರಣಿತಾ ಸುಭಾಷ್ (Pranitha Subhash) ಈ ಚಿತ್ರದ ನಾಯಕಿಯರು. ಅಲ್ಲದೇ ಅರುಣ್ ಸಾಗರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

    ನಿರ್ದೇಶಕ ಸಿಂಪಲ್ ಸುನಿ ಕ್ಯಾಂಪಸ್‌ನಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಬರಹಗಾರನಾಗಿ ಕೆಲಸ ಮಾಡಿರುವ ಅನುಭವವಿರುವ, ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ರಾಮನ ಅವತಾರ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ

    ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ನಡಿ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಗ್ರಾಫಿಕ್ಸ್ ಹಾಗೂ ಮ್ಯೂಸಿಕ್ ಕೆಲಸಗಳು ಭರದಿಂದ ಸಾಗ್ತಿವೆ. ಜೂನ್ ಮೊದಲನೇ ವಾರದಲ್ಲಿ ರಾಮನ ಅವತಾರ ಸಿನಿಮಾವನ್ನು ತೆರೆಗೆ ತರೋದಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ.