Tag: ರುದ್ರಪ್ಪ

  • ವಕ್ಫ್‌ ನೋಟಿಸ್‌ನಿಂದಲ್ಲ ಸಾಲಭಾದೆಯಿಂದ ರೈತ ರುದ್ರಪ್ಪ ಆತ್ಮಹತ್ಯೆ – ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ

    ವಕ್ಫ್‌ ನೋಟಿಸ್‌ನಿಂದಲ್ಲ ಸಾಲಭಾದೆಯಿಂದ ರೈತ ರುದ್ರಪ್ಪ ಆತ್ಮಹತ್ಯೆ – ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ

    ಹಾವೇರಿ: ವಕ್ಫ್‌ ನೋಟಿಸ್‌ನಿಂದ ರೈತ ಆತ್ಮಹತ್ಯೆ ಪ್ರಕರಣ ವದಂತಿಗೆ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ಕೊಟ್ಟಿದೆ. ವಕ್ಫ್‌ ನೋಟಿಸ್‌ನಿಂದ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆತ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದ ಎಂದು ಸ್ಪಷ್ಟಪಡಿಸಿದೆ.

    ವಕ್ಫ್ ಅಂತಾ ನಮೂದಾದ ಹಿನ್ನೆಲೆ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿಲ್ಲ. ವಕ್ಫ್ ಎಂದು ನಮೂದಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪ್ರಕರಣ ದಾಖಲಾಗಿರುವುದಿಲ್ಲ. ಆದರೆ, ರೈತ ಸಾಲಬಾಧೆಗೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಪೊಲೀಸ್ ಇಲಾಖೆ ಹಾಗೂ ಹಾವೇರಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

    ನಿನ್ನೆ ಹುಬ್ಬಳ್ಳಿಯಲ್ಲಿ ವಕ್ಫ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ಮೃತ ರೈತ ಚೆನ್ನಪ್ಪ ಕುಟುಂಬಸ್ಥರು ಮನವಿ ಮಾಡಿದ್ದರು. ವಕ್ಫ್ ಬೋರ್ಡ್‌ನಿಂದ ಅನ್ಯಾಯ ಆಗಿರೋದಾಗಿ ದೂರು ನೀಡಿದ್ದರು. ಆದರೆ, ವಕ್ಫ್ ಎಂದು ನಮೂದಾಗಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಸಿದೆ.

    ಹರನಗಿ ಗ್ರಾಮದ ನಿವಾಸಿ ರುದ್ರಪ್ಪ 2022ರಲ್ಲಿ ಆತ್ಮಹತ್ಯೆಗೆ ಶರಣಾದರು. ವಕ್ಫ್‌ ವಿವಾದದ ಹಿನ್ನೆಲೆ ಗುರುವಾರ ಹುಬ್ಬಳ್ಳಿಗೆ ಭೇಟಿ ನೀಡಿದ್ದ ವಕ್ಫ್‌ ಸಂಸದೀಯ ಜಂಟಿ ಸಮಿತಿ ಮುಂದೆ ರೈತರು ಹಾಗೂ ರುದ್ರಪ್ಪ ಕುಟುಂಬಸ್ಥರು ಮನವಿಯೊಂದನ್ನು ಸಲ್ಲಿಸಿದ್ದರು. ವಕ್ಫ್‌ ಬೋರ್ಡ್‌ನವರು ನಮ್ಮ ಜಮೀನನ್ನು ವಶಪಡಿಸಿಕೊಂಡಿದ್ದರಿಂದ ರುದ್ರಪ್ಪ ಕಂಗಾಲಾಗಿದ್ದ. ಅದೇ ನೋವಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಎಂದು ಆರೋಪ ಮಾಡಿದ್ದರು.

  • ರುದ್ರಪ್ಪ: ಇದು 21 ಸಾವಿರ ರೂಪಾಯಿ ಬಹುಮಾನ ಪಡೆದ ಟೈಟಲ್

    ರುದ್ರಪ್ಪ: ಇದು 21 ಸಾವಿರ ರೂಪಾಯಿ ಬಹುಮಾನ ಪಡೆದ ಟೈಟಲ್

    ಸ್ಟಾಕರ್’ ಚಿತ್ರ ನಿರ್ಮಾಣ ಮಾಡಿದ್ದ ಎಸ್‌ಎಂಎಲ್ ಪ್ರೊಡಕ್ಷನ್ ಸಂಸ್ಥೆಯು  ’ಪ್ರೊಡಕ್ಷನ್ ನಂ.2’ ಹೆಸರಿನಲ್ಲಿ ಹೊಸ ಚಿತ್ರವನ್ನು ಶುರು ಮಾಡಲು ಸಜ್ಜಾಗಿತ್ತು. ಸೂಕ್ತ ಶೀರ್ಷಿಕೆ (Title) ನೀಡಿದವರಿಗೆ ಇಪ್ಪತ್ತೊಂದು ಸಾವಿರ ಬಹುಮಾನ ನೀಡುವುದಾಗಿ ಹೇಳಿಕೊಂಡಿತ್ತು.  ಇದಕ್ಕಾಗಿ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್‌ನ್ನು ಬಿಡುಗಡೆ ಮಾಡಿದ್ದರು. ಅದರಂತೆ ನೂರಾರು ಸಿನಿರಸಿಕರು ಹೆಸರುಗಳನ್ನು ನೀಡಿದ್ದಾರೆ.

    ಪ್ರೇಕ್ಷಕರು ನೀಡಿದ ಟೈಟಲ್ ನಲ್ಲೇ ಕೊನೆಗೊಂದು ಆಯ್ಕೆ ಮಾಡಿಕೊಂಡಿದ್ದು,  ಬೆಂಗಳೂರಿನ ಸುರೇಶ್ (Suresh) ಎಂಬುವರು ನೀಡಿದ ಟೈಟಲ್ ಆಯ್ಕೆಯಾಗಿದೆ. ’ರುದ್ರಪ್ಪ’ (Rudrappa) ಎಂಬ ಟೈಟಲ್ ನೀಡುವ ಮೂಲಕ ಸುರೇಶ್  ಬಹುಮಾನ ಪಡೆದಿದ್ದಾರೆ. ರಮೇಶ್ (Ramesh) ನಾಯಕನಾಗಿ ಎರಡನೇ ಅನುಭವ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ಹೇಮಂತ್ (Hemant) ನಿರ್ದೇಶನದಲ್ಲಿ ಭರತ್.ಹೆಚ್.ಎಸ್ ಸಂಗೀತ ಮತ್ತು ಸುಧೀರ್ ಛಾಯಾಗ್ರಹಣ ಇರಲಿದೆ. ನಾಯಕಿ, ಮಿಕ್ಕಂತೆ ಕಲಾವಿದರುಗಳನ್ನು ಅಡಿಷನ್ ಮೂಲಕ ಆಯ್ಕೆ ಮಾಡಲಿದ್ದು, ಪ್ರಕ್ರಿಯೆ ಶುರುವಾಗಿದೆ. ಇನ್ನರೆಡು ತಿಂಗಳಲ್ಲಿ ಶೂಟಿಂಗ್ ಪ್ರಾರಂಭಿಸಲು ತಂಡವು ಯೋಜನೆ ರೂಪಿಸಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ನಟ ದುನಿಯಾ ವಿಜಯ್‍ಗೆ ಪಿತೃ ವಿಯೋಗ

    ನಟ ದುನಿಯಾ ವಿಜಯ್‍ಗೆ ಪಿತೃ ವಿಯೋಗ

    ಬೆಂಗಳೂರು: ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ(81) ಇಂದು ನಿಧನರಾಗಿದ್ದಾರೆ.

    ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ರುದ್ರಪ್ಪ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಎರಡು ದಿನದ ಹಿಂದೆ ದುನಿಯಾ ವಿಜಯ್, ಅಪ್ಪನನ್ನ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಇಂದು ಬೆಳಗ್ಗೆ 7.30ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ರುದ್ರಪ್ಪ ಮೃತಪಟ್ಟಿದ್ದಾರೆ.

    ಈ ಸಂಬಂಧ ವಿಜಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಅಪ್ಪನ ಫೋಟೋ ಹಾಕಿ ‘ಮಿಸ್ ಯೂ ಅಪ್ಪ’ ಎಂದು ಬರೆದುಕೊಂಡಿದ್ದಾರೆ. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ವಿಜಯ್ ತಂದೆಯ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ನನಗೆ ಸಲ್ಮಾನ್ ಜೊತೆ ನಟಿಸಲು ಇಷ್ಟವಿರಲಿಲ್ಲ ಎಂದ ಆಯುಷ್ ಶರ್ಮಾ

    ಕಳೆದ ಜುಲೈನಲ್ಲಿ ವಿಜಯ್ ರ ತಾಯಿ ನಾರಾಯಣಮ್ಮ ನಿಧನರಾಗಿದ್ದರು. ಈ ಕುರಿತು ಸ್ವತಃ ನಟನೇ ತನ್ನ ತಾಯಿ ಜೊತೆಗಿನ ಫೋಟೋ ಹಾಕಿ ‘ಮತ್ತೆ ಹುಟ್ಟಿ ಬಾ ಅಮ್ಮ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ನಾರಾಯಣಮ್ಮ ಅವರ ಅಂತ್ಯಕ್ರಿಯೆ ನಡೆದಿತ್ತು. ಇದನ್ನೂ ಓದಿ: ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟ ಮಾಡಿದ ಪೊಲೀಸ್ – ವೀಡಿಯೋ ವೈರಲ್