Tag: ರೆಚೆಲ್ ಡೇವಿಡ್

  • ಅನ್‌ಲಾಕ್ ರಾಘವನ ಬಗ್ಗೆ ರೆಚೆಲ್ ಡೇವಿಡ್ ಹೇಳಿದ್ದಿಷ್ಟು!

    ಅನ್‌ಲಾಕ್ ರಾಘವನ ಬಗ್ಗೆ ರೆಚೆಲ್ ಡೇವಿಡ್ ಹೇಳಿದ್ದಿಷ್ಟು!

    ದೀಪಕ್ ಮಧುವನಹಳ್ಳಿ ನಿರ್ದೇಶನದ ‘ಅನ್‌ಲಾಕ್ ರಾಘವ’ (Unlock Raghava) ಚಿತ್ರವೀಗ ಬಿಡುಗಡೆಗೊಂಡಿದೆ. ಪ್ರೇಕ್ಷಕರ ಕಡೆಯಿಂದ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ. ಕಾಮಿಡಿ, ಮನೋರಂಜನೆಯೊಂದಿಗೆ ಪ್ರೇಮ ಕಥಾನಕದ ಮೂಲಕವೂ ಈ ಸಿನಿಮಾ ನೋಡುಗರನ್ನು ಸೆಳೆಯುತ್ತಿದೆ. ಹೀಗೆ ಹಲವು ಕೊಂಬೆ ಕೋವೆಗಳನ್ನು ಹೊಂದಿರುವ ಈ ಕಥನಕ್ಕೆ ಗ್ಲಾಮರ್ ಟಚ್ ಕೊಟ್ಟಿರುವವರು ನಾಯಕಿ ರೆಚೆಲ್ ಡೇವಿಡ್ (Rechel David).

    ಮೂಲತಃ ಕೇರಳದವರಾದರೂ, ಕನ್ನಡ ಕಲಿತು ಮಾತಾಡುವಷ್ಟು ಪ್ರೀತಿ ಹೊಂದಿರೋ ರೆಚೆಲ್, ಅನ್‌ಲಾಕ್ ರಾಘವನ ಮೂಲಕ ಕನ್ನಡ ಚಿತ್ರರಂಗದಲ್ಲಿ ಮತ್ತಷ್ಟು ಭದ್ರವಾದ ನೆಲೆ ಕಂಡುಕೊಳ್ಳುವ ನಿರೀಕ್ಷೆ ಹೊಂದಿದ್ದಾರೆ. ಇದನ್ನೂ ಓದಿ: ನಾಳೆ ನಿಮ್ಮೆದುರು ಬರ್‍ತಾನೆ ಅನ್ ಲಾಕ್ ರಾಘವ!

    ರೆಚೆಲ್ ಡೇವಿಡ್ ಇಲ್ಲಿ ಜಾನಕಿ ಎಂಬ ಪಾತ್ರವಾಗಿ ಕಾಣಿಸಿಕೊಂಡಿದ್ದಾರೆ. ಈಗ್ಗೆ ಎರಡ್ಮೂರು ವರ್ಷಗಳ ಹಿಂದೆಯೇ ನಿರ್ದೇಶಕರು ರೆಚೆಲ್‌ಗೆ ಕಥೆ ಹೇಳಿ, ಅವರ ಪಾತ್ರದ ಬಗ್ಗೆ ವಿವರಿಸಿದ್ದರಂತೆ. ಆ ಕ್ಷಣವೇ ಇದೊಂದು ಅಪರೂಪದ ಕಥೆ ಎಂಬ ಸುಳಿವು ಸಿಕ್ಕಿದ್ದೇ ರೆಚೆಲ್ ಒಪ್ಪಿಗೆ ಸೂಚಿಸಿದ್ದರಂತೆ. ಹೀಗೆ ಈ ಸಿನಿಮಾ ಭಾಗವಾಗಿದ್ದ ರೆಚೆಲ್ ಚಿತ್ರೀಕರಣದ ಪ್ರತೀ ಹಂತವನ್ನೂ ಸಂಭ್ರಮಿಸಿದ್ದಾರೆ. ಹೊಸ ಕಲಿಕೆಯ ಜೊತೆಗೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಇದೀಗ ಪ್ರೇಕ್ಷಕರೂ ಕೂಡಾ ಜಾನಕಿ ಎಂಬ ಪಾತ್ರವನ್ನು ಮೆಚ್ಚಿಕೊಂಡಿದ್ದಾರೆ. ಇಂಥಾ ಸಕಾರಾತ್ಮಕ ವಾತಾವರಣ ತನ್ನ ಮುಂದಿನ ಹೆಜ್ಜೆಗಳನ್ನು ಸುಗಮಗೊಳಿಸುತ್ತದೆ ಎಂಬ ನಂಬಿಕೆ ರೆಚೆಲ್‌ಗಿದೆ.

    ಮಾಡೆಲಿಂಗ್ ಕ್ಷೇತ್ರಕ್ಕೆ ಚಿಕ್ಕ ವಯಸ್ಸಿನಲ್ಲಿಯೇ ಎಂಟ್ರಿ ಕೊಟ್ಟು ಆನಂತರ ಚಿತ್ರರಂಗದತ್ತ ಹೊರಳಿಕೊಂಡಿದ್ದವರು ರೆಚೆಲ್. ಬಾಂಬೆಯಲ್ಲಿ ಅನುಪಮ್ ಖೇರ್ ಆಕ್ಟಿಂಗ್ ಸ್ಕೂಲಿನಲ್ಲಿ ಪಳಗಿಕೊಂಡಿದ್ದ ಈಕೆ ಆ ನಂತರ ಮಲೆಯಾಳಂನ ಚಿತ್ರವೊಂದರ ನಾಯಕಿಯಾಗಿದ್ದರು. ಹಾಗೆ ಮಲೆಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ರೆಚೆಲ್ ಕನ್ನಡಕ್ಕೆ ಆಗಮಿಸಿದ್ದದ್ದು ಲವ್ ಮಾಕ್ಟೈಲ್ ಸಿನಿಮಾ ಮೂಲಕ. ಆ ನಂತರದಲ್ಲಿ ಒಂದಷ್ಟು ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಅನ್‌ಲಾಕ್ ರಾಘವ ಚಿತ್ರದ ಬೆನ್ನಲ್ಲಿಯೇ ರೆಚೆಲ್ ನಾಯಕಿಯಾಗಿರೋ ಮತ್ತೊಂದು ಚಿತ್ರವೂ ಬಿಡುಗಡೆಗೆ ತಯಾರಾಗಿದೆ. ಇದನ್ನೂ ಓದಿ: ಅನ್ ಲಾಕ್ ರಾಘವನ ಬಗ್ಗೆ ನಿರ್ಮಾಪಕ ಮಂಜುನಾಥ್ ಹೇಳಿದ್ದಿಷ್ಟು!

    ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಲವಿತ್ ಛಾಯಾಗ್ರಹಣ, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ನಿರ್ದೇಶನ, ಅನೂಪ್ ಸಿಳೀನ್ ಸಂಗೀತ, ಅಜಯ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ. ಇದರೊಂದಿಗೆ ಹೊಸ ಪ್ರತಿಭೆ ಮಿಲಿಂದ್ ಗೌತಮ್ ನಾಯಕನಾಗಿ ನೆಲೆ ಕಂಡುಕೊಳ್ಳುವ ಲಕ್ಷಣಗಳು ದಟ್ಟವಾಗಿಯೇ ಕಾಣಿಸುತ್ತಿವೆ. ಮಿಲಿಂದ್ ಮತ್ತು ರೆಚೆಲ್ ಜೋಡಿ ಮೆಲ್ಲಗೆ ಕ್ರೇಜ್ ಮೂಡಿಸುತ್ತಿದೆ.

  • ಸದ್ದಿಲ್ಲದೇ ಮದುವೆಯಾದ ‘ಲವ್‌ ಮಾಕ್ಟೈಲ್‌ 2’ ನಟಿ ರೆಚೆಲ್ ಡೇವಿಡ್

    ಸದ್ದಿಲ್ಲದೇ ಮದುವೆಯಾದ ‘ಲವ್‌ ಮಾಕ್ಟೈಲ್‌ 2’ ನಟಿ ರೆಚೆಲ್ ಡೇವಿಡ್

    ‘ಲವ್‌ ಮಾಕ್ಟೈಲ್‌ 2′ (Love Mocktail 2) ನಟಿ ರೆಚೆಲ್ ಡೇವಿಡ್ (Rachel David) ಅವರು ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟಿದ್ದಾರೆ. ಪತಿ ಜೊತೆಗಿನ ಮದುವೆಯ ಸುಂದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಮಗನನ್ನು ನೋಡಲು ವಿಜಯಲಕ್ಷ್ಮಿ ಮನೆಗೆ ಆಗಮಿಸಿದ ಮೀನಾ ತೂಗುದೀಪ

    ‘ಲವ್‌ ಮಾಕ್ಟೈಲ್‌ 2’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣಗೆ ನಾಯಕಿಯಾಗಿ ನಟಿಸಿದ್ದ ರೆಚೆಲ್ ಅವರು ಆ್ಯಂಟೋ ಅವರನ್ನು ಕ್ರಿಶ್ಚಿಯನ್ ಪದ್ಧತಿಯಂತೆ ಮದುವೆಯಾಗಿದ್ದಾರೆ. ನಟಿ ಬಿಳಿ ಬಣ್ಣದ ಗೌನ್‌ನಲ್ಲಿ ಮಿಂಚಿದ್ರೆ, ವರ ಕಪ್ಪು ಬಣ್ಣದ ಸೂಟ್ ಧರಿಸಿದ್ದರು. ಚರ್ಚ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ರೆಚೆಲ್ ಜೋಡಿ ಉಂಗುರ ಬದಲಾಯಿಸಿಕೊಂಡು ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ವೈವಾಹಿಕ ಬದುಕಿಗೆ ಕಾಲಿಟ್ಟ ನಟಿಗೆ ಮಿಲನಾ ನಾಗರಾಜ್‌, ಅಮೃತಾ ಅಯ್ಯಂಗಾರ್‌, ರೆಬಾ ಜಾನ್‌, ಡಾರ್ಲಿಂಗ್‌ ಕೃಷ್ಣ ಸೇರಿದಂತೆ ಅನೇಕರು ಸೋಶಿಯಲ್‌ ಮೀಡಿಯಾದಲ್ಲಿ ಶುಭಕೋರಿದ್ದಾರೆ.

     

    View this post on Instagram

     

    A post shared by Anto Philip (@antophilip)

    ಇನ್ನೂ ಮೂಲತಃ ಬೆಂಗಳೂರಿನವರಾದ ರೆಚೆಲ್ ಕನ್ನಡದ ಲವ್‌ ಮಾಕ್ಟೈಲ್‌ 2 , ಚೆಫ್ ಚಿದಂಬರ ಸಿನಿಮಾದಲ್ಲಿ ನಟಿಸಿದ್ದಾರೆ. ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.

  • ಅನಿರುದ್ಧ ಸಿನಿಮಾದಲ್ಲಿ ಲವ್ ಮಾಕ್ಟೇಲ್ ಹುಡುಗಿಗೆ ಅವಕಾಶ

    ಅನಿರುದ್ಧ ಸಿನಿಮಾದಲ್ಲಿ ಲವ್ ಮಾಕ್ಟೇಲ್ ಹುಡುಗಿಗೆ ಅವಕಾಶ

    ವ್ ಮಾಕ್ಟೇಲ್ ಚಿತ್ರದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ ರೆಚೆಲ್ ಡೇವಿಡ್. ಇವರು ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ  ‘chef ಚಿದಂಬರ’ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಅನು ಎಂಬ ಪಾತ್ರದಲ್ಲಿ ರೆಚೆಲ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ‌.  ರೆಚೆಲ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಅನ್ನು ಇತ್ತೀಚಿಗೆ ಚಿತ್ರತಂಡ ಬಿಡುಗಡೆ ಮಾಡಿದೆ.

    ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಈ ಸಿನಿಮಾ ಸದ್ಯದಲ್ಲೇ ತೆರೆಯ ಮೇಲೆ ರಾರಾಜಿಸಲಿದ್ದಾನೆ. ಈಗಾಗಲೇ ಪೋಸ್ಟರ್, ಕ್ಯಾರೆಕ್ಟರ್ ಟೀಸರ್ ಮೂಲಕ ಮನೆಮಾತಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲಾ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, ವಿಕ್ರಾಂತ್ ರೋಣ ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

    ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್‌ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಮುಂತಾದವರು chef ಚಿದಂಬರ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಮಿಲಿಂದ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ

    ಮಿಲಿಂದ್ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ

    ಚಿತ್ರ ಆರಂಭವಾದಗಿನಿಂದಲೂ  ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ‘ಅನ್ ಲಾಕ್ ರಾಘವ’ (Unlock Raghava) ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿ, ಸಾಯಿ ವಿಘ್ನೇಶ್ ಹಾಡಿರುವ ‘ನನ್ನ ಹುಡುಗಿ’ ಎಂಬ ಹಾಡು ನಾಯಕ ಮಿಲಿಂದ್ ಹುಟ್ಟುಹಬ್ಬ (Birthday) ದಂದು ಬಿಡುಗಡೆಯಾಗಿ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು.

    ಹಲವು ವಿಶೇಷಗಳನ್ನು ಹೊಂದಿರುವ ‘ಅನ್ ಲಾಕ್ ರಾಘವ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಪ್ರಥಮಪ್ರತಿ ಬರಲಿದೆ. ನಾಯಕ ಮಿಲಿಂದ್ (Milind) ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಹಾಡಿನ ಚಿತ್ರೀಕರಣ ಚಿತ್ರದುರ್ಗದಲ್ಲಿ ಎರಡು ದಿನಗಳ ಕಾಲ ನಡೆದಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿದ್ದಾರೆ‌. ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿತ್ತು. ಮಿಲಿಂದ್ ಹುಟ್ಟುಹಬ್ಬದಂದು ಬಿಡುಗಡೆಯಾಗಿದೆ.  ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದ ಎಲ್ಲಾ ಹಾಡುಗಳು ಚೆನ್ನಾಗಿದೆ. ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಹಾಗೂ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ದೀಪಕ್ ಮಧುವನಹಳ್ಳಿ.

    ಸತ್ಯಪ್ರಕಾಶ್ ಅವರು ಈ ಚಿತ್ರದ ಕಥೆ ಬರೆದಿದ್ದು, ದೀಪಕ್ ಮಧುವನಹಳ್ಳಿ  (Deepak Madhuvanahalli) ನಿರ್ದೇಶನ ಮಾಡಿದ್ದಾರೆ. ನನ್ನ ಮಗ ಮಿಲಿಂದ್ ನಾಯಕನಾಗಿ ನಟಿಸಿರುವ ಈ ಚಿತ್ರ ಎಲ್ಲರ ಸಹಕಾರದಿಂದ ಉತ್ತಮವಾಗಿ ಮೂಡಿಬರುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಮಂಜುನಾಥ.ಡಿ.  ಮತ್ತೊಬ್ಬ ನಿರ್ಮಾಪಕರಾದ ಗಿರೀಶ್ ಕುಮಾರ್ ಸಹ ಚಿತ್ರದ ಕುರಿತು ಮಾತನಾಡಿ, ಮಿಲಿಂದ್ ಅವರಿಗೆ ಶುಭಾಶಯ ತಿಳಿಸಿದರು.

    ಹೃದಯಶಿವ ಅವರು ಬರೆದು ಅನೂಪ್ ಸೀಳಿನ್ ಸಂಗೀತ ನೀಡಿ, ವರಾಹ ರೂಪಂ ಹಾಡಿನ ಖ್ಯಾತಿಯ ಸಾಯಿವಿಘ್ನೇಶ್ ಹಾಡಿರುವ ಈ ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ. ಚಿತ್ರದುರ್ಗದ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಹಾಡು ನನ್ನ ಹುಟ್ಟುಹಬ್ಬದಂದು ಬಿಡುಗಡೆಯಾಗಿರುವುದು ಖುಷಿಯಾಗಿದೆ ಎನ್ನುತ್ತಾರೆ ನಾಯಕ ಮಿಲಿಂದ್.

    ನಾಯಕಿ ರೆಚೆಲ್ ಡೇವಿಡ್ (Rachel David) ಸಹ ಹಾಡಿನ ಬಗ್ಗೆ ಮಾತನಾಡಿ, ಮಿಲಿಂದ್ ಅವರಿಗೆ ಶುಭಾಶಯ ಕೋರಿದರು. ಛಾಯಾಗ್ರಾಹಕ ಲವಿತ್, ಸಂಕಲನಕಾರ ಅಜಯ್ ಹಾಗೂ ನೃತ್ಯ ಸಂಯೋಜಕ ಮುರಳಿ ಮಾಸ್ಟರ್ ಹಾಡಿನ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

  • ನುರಿತ ಚೆಫ್ ಗಳಿಂದ ತರಬೇತಿ ಪಡೆಯುತ್ತಿದ್ದಾರೆ ನಟ ಅನಿರುದ್ದ್

    ನುರಿತ ಚೆಫ್ ಗಳಿಂದ ತರಬೇತಿ ಪಡೆಯುತ್ತಿದ್ದಾರೆ ನಟ ಅನಿರುದ್ದ್

    ಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ ‘chef ಚಿದಂಬರ’ (Chef Chidambara) ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಕೂಡ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ ಚೆಫ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರಕ್ಕಾಗಿ ಅವರು ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

    ಅನಿರುದ್ದ್ (Anirudh) ಅವರಿಗೆ ಹೆಸರಾಂತ ಬಾಣಸಿಗರು ತರಬೇತಿ ನೀಡುತ್ತಿದ್ದು, ಈ ಟ್ರೈನಿಂಗ್ ವಿಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ.  ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಎಂ.ಆನಂದರಾಜ್ (Anand Raj) ನಿರ್ದೇಶಿಸುತ್ತಿದ್ದಾರೆ. ರೆಚೆಲ್ ಡೇವಿಡ್ (Rachel David) ಹಾಗೂ ನಿಧಿ ಸುಬ್ಬಯ್ಯ (Nidhi Subbaiah) ಈ ಚಿತ್ರದ ನಾಯಕಿಯರು.

     

    ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಆನಂದರಾಜ್, ಇದೊಂದು ಡಾರ್ಕ್ ಕಾಮಿಡಿ ಜಾನರ್ ನ ಚಿತ್ರ. ಅನಿರುದ್ಧ್ ಅವರು ಐದು ವರ್ಷಗಳ ನಂತರ ನಟಿಸುತ್ತಿರುವ ಚಿತ್ರವಿದು. ಇಂದಿನಿಂದ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಆರಂಭವಾಗಲಿದೆ. ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್ ನಟಿಸುತ್ತಿದ್ದಾರೆ.  ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ರಘು ರಮಣಕೊಪ್ಪ, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಉದಯ್ ಲೀಲ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಬಿ.ಆರ್ ನವೀನ್ ಕುಮಾರ್  ಸೌಂಡ್ ಡಿಸೈನ್ ಹಾಗೂ ವಿಜೇತ್ ಚಂದ್ರ ಸಂಕಲನ ಈ ಚಿತ್ರಕ್ಕಿದೆ ಎಂದು ವಿವರಣೆ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]