Tag: ರೇಖಾಚಿತ್ರ

  • Pahalgam Terror Attack | ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

    Pahalgam Terror Attack | ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ಬುಧವಾರ ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಇದೀಗ ಘಟನೆಯಲ್ಲಿ ಭಾಗಿಯಾದ ಮೂವರು ಉಗ್ರರ (Terrorists) ರೇಖಾಚಿತ್ರವನ್ನು ಭದ್ರತಾ ಸಂಸ್ಥೆ ಬಿಡುಗಡೆ ಮಾಡಿದೆ.

    ಭದ್ರತಾ ಸಂಸ್ಥೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ಈ ಭಯಾನಕ ದಾಳಿಯ ಹಿಂದಿನ ಕ್ರೂರ ಯೋಜನೆಯನ್ನು ಬಯಲು ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿವೆ. ಇದೀಗ ಪ್ರತ್ಯಕ್ಷದರ್ಶಿಗಳ ಮಾಹಿತಿಯ ಆಧಾರದ ಮೇಲೆ ಶಂಕಿತ ಭಯೋತ್ಪಾದಕರ ರೇಖಾಚಿತ್ರವನ್ನು ಬಿಡಿಸಲಾಗಿದೆ. ಇದನ್ನೂ ಓದಿ: ಮಹಿಳೆಯರಿಂದ ಪುರುಷರನ್ನು ಬೇರ್ಪಡಿಸಿ ಹತ್ಯೆ – 20 ನಿಮಿಷದಲ್ಲಿ ನರಮೇಧ ಮಾಡಿದ್ದು ಹೇಗೆ?

    ಆಸಿಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಈ ರೇಖಾಚಿತ್ರದಲ್ಲಿ ತೋರಿಸಲಾಗಿರುವ 3 ಶಂಕಿತ ಭಯೋತ್ಪಾದಕರ ಹೆಸರುಗಳು ಎಂದು ಎನ್‌ಐಎ ತಿಳಿಸಿದೆ. ಇದನ್ನೂ ಓದಿ: ಪಹಲ್ಗಾಮ್ ದಾಳಿಯ ಬೆನ್ನಲ್ಲೇ 2 ಭಯೋತ್ಪಾದಕರನ್ನ ಹೊಡೆದುರುಳಿಸಿದ ಸೇನಾ ಪಡೆ

    ದಾಳಿಗೆ ಮುನ್ನ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗುತಾಣಗಳನ್ನು ನಿರ್ಮಿಸಿದ್ದರು. ಭಯೋತ್ಪಾದಕರು ಬಾಡಿ ಕ್ಯಾಮೆರಾಗಳನ್ನು ಧರಿಸಿದ್ದರು. ವಿಶೇಷವಾಗಿ ಹೆಲ್ಮೆಟ್ ಅಳವಡಿಸಿದ ಕ್ಯಾಮೆರಾಗಳನ್ನು ಧರಿಸಿ ಕೃತ್ಯವನ್ನು ಸಂಪೂರ್ಣವಾಗಿ ಚಿತ್ರೀಕರಿಸಿದ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ. ಇದನ್ನೂ ಓದಿ: ಕಲಿಮಾ ಹೇಳದ್ದಕ್ಕೆ ತಂದೆಯ ತಲೆಗೆ ಗುಂಡೇಟು – ಕಣ್ಣೀರಿಟ್ಟ ಪುತ್ರಿ

    ಮೂಲಗಳ ಪ್ರಕಾರ ಮೂವರು ಭಯೋತ್ಪಾದಕರು ಪ್ರವಾಸಿಗರನ್ನು ಒಟ್ಟುಗೂಡಿಸಿ ಪುರುಷ ಮತ್ತು ಮಹಿಳಾ ಗುಂಪುಗಳಾಗಿ ವಿಂಗಡಿಸಿದ್ದಾರೆ. ನಂತರ ಅವರ ಧರ್ಮ, ಹೆಸರನ್ನು ಕೇಳಿದ್ದಾರೆ. ಈ ವೇಳೆ ಹಿಂದೂ ಹೆಸರು ಹೇಳಿದವರ ಮೇಲೆ ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ.

  • ಸಿಸಿಬಿಯಿಂದ ರಾಮೇಶ್ವರಂ ಕೆಫೆ ಬಾಂಬರ್ ರೇಖಾಚಿತ್ರ ಬಿಡುಗಡೆ

    ಸಿಸಿಬಿಯಿಂದ ರಾಮೇಶ್ವರಂ ಕೆಫೆ ಬಾಂಬರ್ ರೇಖಾಚಿತ್ರ ಬಿಡುಗಡೆ

    ಬೆಂಗಳೂರು: ರಾಮೇಶ್ವರಂ ಕೆಫೆ (Rameshwaram Cafe) ಬ್ಲಾಸ್ಟ್‌ನ ಶಂಕಿತ ಉಗ್ರನ (Suspected Terrorist) ಸುಳಿವು ಕೊಟ್ಟರೆ 10 ಲಕ್ಷ ನಗದು ಬಹುಮಾನ ಕೊಡುವುದಾಗಿ ಬಾಂಬರ್‌ನ ಸಿಸಿಟಿವಿ ಫೋಟೋವೊಂದನ್ನು ಬುಧವಾರ ಎನ್‌ಐಎ (NIA) ಬಿಡುಗಡೆ ಮಾಡಿತ್ತು. ಈ ಬೆನ್ನಲ್ಲೇ ಸಿಸಿಬಿ (CCB) ಪೊಲೀಸರು ಬಾಂಬರ್‌ನ ಮತ್ತೊಂದು ರೇಖಾಚಿತ್ರವನ್ನು (Sketch) ಬಿಡುಗಡೆ ಮಾಡಿದ್ದಾರೆ.

    ಸಿಸಿಟಿವಿಯಲ್ಲಿ ಬಾಂಬರ್ ದೃಶ್ಯ ಸಮರ್ಪಕವಾಗಿ ಸೆರೆಯಾಗದ ಕಾರಣ ರೇಖಾಚಿತ್ರ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದರು. ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯವನ್ನು ಆಧಾರವಾಗಿ ಇಟ್ಟುಕೊಂಡು ಸಿಸಿಬಿ ಶಂಕಿತ ಉಗ್ರನ ರೇಖಾಚಿತ್ರ ತಯಾರಿ ಮಾಡಿದೆ. ಈಗಾಗಲೇ ಸಾರ್ವಜನಿಕರಿಂದ ಸಾಕಷ್ಟು ಕರೆಗಳು ಬಂದಿವೆ. ಆರೋಪಿಯನ್ನು ನೋಡಿದ್ದಾಗಿ ಕರೆಗಳು ಬರುತ್ತಿದ್ದ ಕಾರಣ ರೇಖಾಚಿತ್ರ ಬಿಡುಗಡೆ ಮಾಡಲು ಸಿಸಿಬಿ ತಯಾರಿ ನಡೆಸಿತ್ತು. ಇದನ್ನೂ ಓದಿ: ತೆಪ್ಪ ಮಗುಚಿಬಿದ್ದು ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಸಾವು

    ಖ್ಯಾತ ಸ್ಕೆಚ್ ಆರ್ಟಿಸ್ಟ್‌ನಿಂದ ಬಾಂಬರ್‌ನ ಇಮ್ಯಾಜಿನರಿ ಸ್ಕೆಚ್ ಬಿಡಿಸಲಾಗಿದೆ. ಸ್ಕೆಚ್ ಆರ್ಟಿಸ್ಟ್ ಎನ್‌ಐಎ ಬಿಡುಗಡೆ ಮಾಡಿದ ಸಿಸಿಟಿವಿ ಫೋಟೋವನ್ನು ಆಧರಿಸಿ ಸಂಪೂರ್ಣ ಮುಖದ ಇಮ್ಯಾಜಿನರಿ ಸ್ಕೆಚ್ ಮಾಡಿದ್ದಾರೆ. ಆರ್ಟಿಸ್ಟ್ ಹರ್ಷ ಅವರು ಈ ರೇಖಾಚಿತ್ರವನ್ನು ಬಿಡಿಸಿದ್ದಾರೆ. ಮಾಸ್ಕ್ ಧರಿಸಿದ ರೀತಿಯಲ್ಲಿ ಹಾಗೂ ಮಾಸ್ಕ್ ಇಲ್ಲದೇ ಟೋಪಿ ಕನ್ನಡಕ ಧರಿಸಿದ ರೇಖಾಚಿತ್ರವನ್ನು ಬಿಡಿಸಲಾಗಿದೆ. ಇದೇ ರೀತಿ ಬಾಂಬರ್ ಇರಬಹುದು ಎಂದು ಕಲ್ಪಿಸಿ ಕಲಾವಿದ ಹರ್ಷ ಈ ರೇಖಾಚಿತ್ರ ಬಿಡಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್‌ – ಬಾಂಬರ್‌ ಬಳ್ಳಾರಿಯಿಂದ ಭಟ್ಕಳಕ್ಕೆ ತೆರಳಿರುವ ಶಂಕೆ

  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಹಂತಕರ ರೇಖಾಚಿತ್ರ ಬಿಡುಗಡೆ

    ಗೌರಿ ಲಂಕೇಶ್ ಹತ್ಯೆ ಪ್ರಕರಣ: ಹಂತಕರ ರೇಖಾಚಿತ್ರ ಬಿಡುಗಡೆ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಮೂವರ ಹಂತಕರ ರೇಖಾಚಿತ್ರವನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ಇಂದು ಬಿಡುಗಡೆಗೊಳಿಸಿದೆ.

    ಹಂತಕರು ನಗರದಲ್ಲಿ ಮೂರು ವಾರಗಳ ಕಾಲ ಉಳಿದುಕೊಂಡಿದ್ದರು ಎಂದು ತಿಳಿದು ಬಂದಿದೆ. ಎಸ್‍ಐಟಿ ಆರೋಪಿಗಳ ರೇಖಾಚಿತ್ರ ಮತ್ತು ವೀಡಿಯೊವನ್ನು ಬಿಡುಗಡೆ ಮಾಡಿದ್ದು, ಸಾರ್ವಜನಿಕರಿಗೆ ಹಂತಕರ ಬಗ್ಗೆ ಸುಳಿವಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಮೂವರು ಆರೋಪಿಗಳಲ್ಲಿ ಇಬ್ಬರು ನೋಡುವುದಕ್ಕೆ ಒಂದೇ ತರಹನಾಗಿ ಕಾಣುತ್ತಿದ್ದಾರೆ. ಗೌರಿ ಅವರ ಕೊಲೆಯಾಗಿ ಇಂದಿಗೆ ಒಂದು ತಿಂಗಳು ಹತ್ತು ದಿನಗಳಾಗಿವೆ.

    ರೇಖಾಚಿತ್ರ ತಯಾರಾಗಿದ್ದು ಹೇಗೆ?
    ದಿನಾಂಕ 05-09-2017ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿತ್ತು. ರೇಖಾಚಿತ್ರದಲ್ಲಿರುವ ವ್ಯಕ್ತಿಗಳು ಗೌರಿಯವರ ಮನೆಯ ಆಸುಪಾಸಿನಲ್ಲಿ ಮೋಟರ್ ಸೈಕಲ್ ನಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದು ಮತ್ತು ಕೆಲವು ವಿಡಿಯೋ ಕ್ಲಿಪ್ ಗಳ ಆಧಾರದ ಮೇಲೆ ನುರಿತ ರೇಖಾಚಿತ್ರ ಕಲಾವಿದರಿಂದ ಚಿತ್ರ ಸಿದ್ಧಪಡಿಸಲಾಗಿದೆ.

    ಹಂತಕರು ಗೌರಿ ಅವರ ಹತ್ಯೆಯ ಏಳು ದಿನಗಳ ಮೊದಲೇ ನಗರದಲ್ಲಿ ಬಂದು ವಾಸವಾಗಿದ್ದರು. ಈಗಾಗಲೇ ಹಲವಾರು ಸಂಘ-ಸಂಸ್ಥೆಗಳನ್ನು, ಮಾಜಿ ನಕ್ಸಲ್‍ರನ್ನು ಸೇರಿದಂತೆ 200 ರಿಂದ 250 ಜನರನ್ನು ವಿಚಾರಿಸಲಾಗಿದೆ. ಆದರೆ ಹಂತಕರ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಹಂತಕರು ಗೌರಿ ಅವರ ಹತ್ಯೆಗೆ 7.65 ಕಂಟ್ರಿ ಮೇಡ್ ಪಿಸ್ತೂಲ್ ಬಳಸಿದ್ದು, ವೀಡಿಯೊ ಕ್ಲಿಪ್ ನಲ್ಲಿರುವ ವ್ಯಕ್ತಿಯೊಬ್ಬ ಗೌರಿ ಮನೆಯ ಸುತ್ತ ಓಡಾಡಿರೋದು ಪತ್ತೆಯಾಗಿದೆ. ಹಾಗಾಗಿ ಸಾರ್ವಜನಿಕರು ವಿಡಿಯೋ ಕ್ಲಿಪ್ ಮತ್ತು ರೇಖಾಚಿತ್ರಗಳನ್ನು ನೋಡಿ ಸುಳಿವು ನೀಡಬೇಕು ಎಂದು ಎಸ್‍ಐಟಿ ಮಖ್ಯಸ್ಥ ಐಜಿಪಿ ಬಿಕೆ ಸಿಂಗ್ ಹೇಳಿದ್ದಾರೆ.

    ಸಾರ್ವಜನಿಕರಲ್ಲಿ ವಿನಂತಿ:
    ಗೌರಿ ಲಂಕೇಶ್ ಹತ್ಯೆಯಲ್ಲಿ ಈ ರೇಖಾಚಿತ್ರಗಳಲ್ಲಿರುವ ಮತ್ತು ವೀಡಿಯೋ ನಲ್ಲಿರುವ ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಅನುಮಾನವಿದ್ದು, ಇವರ ಬಗ್ಗೆ ಯಾವುದೇ ಮಾಹಿತಿಯಿದ್ದಲ್ಲಿ ಕೂಡಲೇ ವಿಶೇಷ ತನಿಖಾ ತಂಡ, ಸಿ.ಐ.ಡಿ., ಬೆಂಗಳೂರು, ಇವರಿಗೆ ಅಥವಾ ಮೊಬೈಲ್ ಸಂಖ್ಯೆ 9480800202 ನಂಬರಿಗೆ ಅಥವಾ sit.glankesh@ksp.gov.in ಗೆ ಮಾಹಿತಿ ನೀಡಲು ಕೋರಿದೆ.

    ಸಂಪರ್ಕಿಸಬೇಕಾದ ವಿಳಾಸ:
    ಕೊಠಡಿ ಸಂಖ್ಯೆ-104.
    ವಿಶೇಷ ತನಿಖಾ ತಂಡ, ಸಿಐಡಿ ಕಚೇರಿ.
    ಮೊಬೈಲ್ ಸಂಖ್ಯೆ- 9480800202
    ಈ-ಮೇಲ್ ವಿಳಾಸ- sit.glankesh@ksp.gov.in
    ವಾಟ್ಸಪ್ ನಂಬರ್- 9480800304, 9480801710

    https://www.youtube.com/watch?v=9WT11xFPWIc

    https://www.youtube.com/watch?v=gMCRfdWRT8w