ಸ್ಯಾಂಡ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ ‘ಅನ್ಲಾಕ್ ರಾಘವ’ (Unlock Raghava) ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ. ಈಗ ಚಿತ್ರತಂಡದಿಂದ ಮತ್ತೊಂದು ಹೊಸ ಸುದ್ದಿ ಬಂದಿದೆ. ಚಿತ್ರದ ಆಡಿಯೋ (Audio) ರೈಟ್ಸ್ ಎ2 ಮ್ಯೂಸಿಕ್ ಪಾಲಾಗಿದೆ. ದಾಖಲೆ ಮೊತ್ತಕ್ಕೆ ಹೊಸ ನಾಯಕನಟನ ಚಿತ್ರದ ಆಡಿಯೋ ರೈಟ್ಸ್ ಮಾರಾಟವಾಗಿರುವುದು ವಿಶೇಷ.
ದಾಖಲೆ ಮೊತ್ತಕ್ಕೆ ಮಾರಾಟವಾಗಿರುವ ವಿಷಯ ಮಾತ್ರ ತಿಳಿದು ಬಂದಿದ್ದು. ಹೆಚ್ಚಿನ ವಿವರಗಳನ್ನು ಚಿತ್ರತಂಡವಾಗಲಿ ಅಥವಾ ಮ್ಯೂಸಿಕ್ ಕಂಪೆನಿಯಾಗಲಿ ಬಹಿರಂಗಪಡಿಸಿಲ್ಲ. ಇದಲ್ಲದೇ ಮತ್ತೊಂದು ವಿಶೇಷತೆಯನ್ನೂ ‘ಅನ್ಲಾಕ್ ರಾಘವ’ ಚಿತ್ರತಂಡ ಸಿನಿಪ್ರೇಕ್ಷಕರಿಗೆ ಹೊತ್ತು ತಂದಿದೆ. ಅದೇ ‘ಮೂಡ್ಸ್ ಆಫ್ ರಾಘವ’ ಟೀಸರ್. ಶೀಘ್ರದಲ್ಲೇ ಬಿಡುಗಡೆಯಾಗುತ್ತಿರುವ ಈ ಟೀಸರ್ ಕೂಡ ವಿಭಿನ್ನ ಹೆಸರಿನಿಂದಲೇ ಸಾಕಷ್ಟು ಕುತೂಹಲಗಳನ್ನು ಹುಟ್ಟುಹಾಕಿದೆ. ಹೀಗೆ ವಿಶೇಷ ರಸದೌತಣಗಳನ್ನು ಒಂದರ ನಂತರ ಮತ್ತೊಂದರಂತೆ ಉಣಬಡಿಸುತ್ತಿರುವ ‘ಅನ್ಲಾಕ್ ರಾಘವ’ ಚಿತ್ರ ನೋಡಲು ಸ್ಯಾಂಡಲ್ ವುಡ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.
‘ಅನ್ ಲಾಕ್ ರಾಘವ’ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ (Deepak Madhuvanahalli) ಅವರು ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ.
ಧನಂಜಯ್ ಮಾಸ್ಟರ್ ಹಾಗೂ ಮುರಳಿ ಮಾಸ್ಟರ್ ನೃತ್ಯನಿರ್ದೇಶನದಲ್ಲಿ ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಮಿಲಿಂದ್ ನಾಯಕನಾಗಿ ಹಾಗೂ ರೇಚಲ್ ಡೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್ ಹಾಗೂ ಮತ್ತಿತರ ಕಲಾವಿದರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.
ವಿಭಿನ್ನ ಟೈಟಲ್ ನಿಂದಲೇ ಗಮನ ಸೆಳೆದಿರುವ ‘ಅನ್ಲಾಕ್ ರಾಘವ’ (Unlock Raghava) ಚಲನಚಿತ್ರದ ಡಬ್ಬಿಂಗ್ ಪಿ.ಆರ್.ಕೆ. ಆಡಿಯೋ ಸ್ಟುಡಿಯೋದಲ್ಲಿ ಆರಂಭವಾಗಿದೆ. ಈ ಸಿನಿಮಾದ ನಾಯಕಿ ರೇಚಲ್ ಡೇವಿಡ್ (Rachel David) ತಮ್ಮ ಪಾತ್ರಕ್ಕಾಗಿ ಕನ್ನಡ ಪದಗಳ ಉಚ್ಛಾರಣೆಯನ್ನು ಕಲಿತು, ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿರುವುದು ವಿಶೇಷ. ತನ್ನ ಈ ಪ್ರಯತ್ನಕ್ಕೆ ಅನ್ಲಾಕ್ ರಾಘವ ಚಲನಚಿತ್ರ ತಂಡ ತುಂಬಾ ಸಹಕಾರ ನೀಡುತ್ತಿದೆ ಎಂದು ನಾಯಕಿ ರೇಚಲ್ ಡೇವಿಡ್ ಹರ್ಷ ವ್ಯಕ್ತಪಡಿಸಿದ್ದಾರೆ.
ಅನ್ಲಾಕ್ ರಾಘವ ಚಿತ್ರತಂಡ ಚಿತ್ರದುರ್ಗ ಹಾಗೂ ಬೆಂಗಳೂರಿನಲ್ಲಿ 60 ದಿನಗಳ ಕಾಲ ಸಿನಿಮಾ ಶೂಟಿಂಗ್ ನಡೆಸಿದೆ. ಅನ್ಲಾಕ್ ರಾಘವದಲ್ಲಿ ಚಿತ್ರ ಸಿನಿಗೀತೆಪ್ರೇಮಿಗಳಿಗಾಗಿಯೇ ಕುಣಿಸಿ-ತಣಿಸುವ ಮೂರು ಹಾಡುಗಳ ರಸದೌತಣವಿದ್ದರೆ, ಆ್ಯಕ್ಷನ್ ಪ್ರಿಯರಿಗಾಗಿ ಬರೋಬ್ಬರಿ ನಾಲ್ಕು ವಿಭಿನ್ನ ಫೈಟ್ ಗಳ ಸಖತ್ ಮನರಂಜನೆಯಿದೆ ಎಂದು ಚಿತ್ರದ ನಿರ್ದೇಶಕರಾದ ದೀಪಕ್ ಮಧುವನಹಳ್ಳಿ (Deepak Madhuvanahalli) ಮಾಹಿತಿ ನೀಡಿದ್ದಾರೆ. ಜೊತೆಗೆ “ನಿರ್ದೇಶಕ, ಫೈಟ್ ಮಾಸ್ಟರ್, ನೃತ್ಯ ನಿರ್ದೇಶಕರು ಮೂವರೂ ಒಂದು ವಿಶೇಷ ಗೀತೆಯನ್ನು ವಿಭಿನ್ನವಾಗಿ ಒಟ್ಟಾಗಿ ಸಂಯೋಜಿಸಿದ್ದು, ಅದ್ಭುತವಾಗಿ ಮೂಡಿಬಂದಿದೆ” ಎಂದೂ ಕೂಡ ಹೇಳಿದ್ದಾರೆ.
ಇತ್ತೀಚಿಗಷ್ಟೇ ಯುಗಾದಿ ಹಬ್ಬದ ವಿಶೇಷವಾಗಿ ‘ಅನ್ ಲಾಕ್ ರಾಘವ’ ಚಿತ್ರತಂಡ ಬಿಡುಗಡೆ ಮಾಡಿದ್ದ ಸಿನಿಮಾದ ಎರಡನೆಯ ಪೋಸ್ಟರ್ ಕೂಡ ವೈರಲ್ ಆಗಿದೆ. ‘ಅನ್ಲಾಕ್ ರಾಘವ’ ಸಿನಿಮಾವನ್ನು, ಇದೇ ವರ್ಷ ಜುಲೈ ಅಂತ್ಯದ ಒಳಗಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದೆ. ಇದನ್ನೂ ಓದಿ: ಬೋಲ್ಡ್ ಅವತಾರ ತಾಳಿದ ‘ಕಬ್ಜ’ ಸುಂದರಿ ಶ್ರೀಯಾ
‘ಅನ್ ಲಾಕ್ ರಾಘವ’ ಚಿತ್ರವನ್ನು ಸತ್ಯ ಹಾಗೂ ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ, ಡಿ ಸತ್ಯಪ್ರಕಾಶ್ (Satya Prakash) ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ ಅವರು ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಧನಂಜಯ್ ಮಾಸ್ಟರ್ ಹಾಗೂ ಮುರಳಿ ಮಾಸ್ಟರ್ ನೃತ್ಯನಿರ್ದೇಶನದಲ್ಲಿ ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.
ಮಿಲಿಂದ್ ನಾಯಕನಾಗಿ ಹಾಗೂ ರೇಚಲ್ ದೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್, ಅಥರ್ವ ಪ್ರಕಾಶ್, ಶ್ರೀದತ್ತ, ಬೃಂದಾ ವಿಕ್ರಮ್ ಮೊದಲಾದವರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.
ವಿಭಿನ್ನವಾದ ಟೈಟಲ್ ನಿಂದ ಗಮನ ಸೆಳೆದಿರುವ ‘ಅನ್ ಲಾಕ್ ರಾಘವ’ (Unlock Raghava) ಸಿನಿಮಾದ ಕ್ಲೈಮ್ಯಾಕ್ಸ್ ಚಿತ್ರೀಕರಣ ಭರದಿಂದ ಸಾಗಿದೆ. ಸತ್ಯ ಮತ್ತು ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಈ ಸಿನಿಮಾದ ಕ್ಲೈಮಾಕ್ಸ್ ಹಾಸ್ಯಲೇಪನದೊಂದಿಗೆ ಸಾಕಷ್ಟು ಅಚ್ಚರಿ ಮೂಡಿಸಲಿದೆ ಎನ್ನುತ್ತಿದೆ ಚಿತ್ರತಂಡ. ದೀಪಕ್ ಮಧುವನಹಳ್ಳಿ (Deepak Madhavanahalli) ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಮಿಲಿಂದ್ (Milind) ನಾಯಕ ನಟನಾಗಿ ನಟಿಸುತ್ತಿದ್ದು, ನಾಯಕಿಯಾಗಿ ರೇಚಲ್ ಡೇವಿಡ್ (Rachel David) ನಟಿಸುತ್ತಿದ್ದಾರೆ. ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ನಾಯಕ, ನಾಯಕಿ ಒಳಗೊಂಡಂತೆ ಸಾಧುಕೋಕಿಲ, ಸುಂದರ್, ವೀಣಾ ಸುಂದರ್, ಶೋಭರಾಜ್, ಅವಿನಾಶ್ ಸೇರಿದಂತೆ ಹಲವು ಕಲಾವಿದರು ಪಾಲ್ಗೊಂಡಿದ್ದು, ಇದೇ ಸಂದರ್ಭದಲ್ಲಿ ಚಿತ್ರತಂಡ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.
ಅನ್ ಲಾಕ್ ರಾಘವ ಚಿತ್ರದ ನಿರ್ದೇಶಕ ದೀಪಕ್ ಮಧುವನಹಳ್ಳಿ ಮಾತನಾಡಿ “ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆಯುತ್ತಿದೆ. ಎಂಟು ದಿನಗಳ ಕಾಲ ಕ್ಲೈಮಾಕ್ಸ್ ಚಿತ್ರೀಕರಣ ಯೋಜಿಸಿದ್ದು, ಇನ್ನು ಮೂರು ದಿನದಲ್ಲಿ ಕ್ಲೈಮ್ಯಾಕ್ಸ್ ಚಿತ್ರೀಕರಣ ಮುಗಿಯಲಿದೆ. ಎರಡು ಸಾಂಗ್ ಹಾಗೂ ಟಾಕಿ ಪೋಷನ್ ಮುಗಿಸಿದ್ರೆ ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗುತ್ತದೆ. ಒಟ್ಟು 50 ರಿಂದ 55 ದಿನ ಚಿತ್ರೀಕರಣ ಮಾಡಿದ್ದೇವೆ. ಎಲ್ಲಾ ಕಲಾವಿದರ ಕಾಂಬಿನೇಶನ್ ನಲ್ಲಿ ಕ್ಲೈಮ್ಯಾಕ್ಸ್ ಚಿತ್ರೀಕರಿಸುತ್ತಿದ್ದೇವೆ. ವಿನೋದ್ ಮಾಸ್ಟರ್ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಹೊಸ ರೀತಿಯ ಪ್ರಯತ್ನ ಸಿನಿಮಾದಲ್ಲಿದೆ. ಆಕ್ಷನ್ ಜೊತೆಗೆ ಹ್ಯೂಮರ್ ಕೂಡ ಇಡೀ ಸಿನಿಮಾದಲ್ಲಿ ಜೊತೆಯಾಗಿ ಟ್ರಾವೆಲ್ ಆಗಲಿದೆ. ಸಿನಿಮಾಗೆ ಏನೂ ಕೊರತೆ ಆಗದ ಹಾಗೆ ನಿರ್ಮಾಪಕರು ನೋಡಿಕೊಂಡಿದ್ದಾರೆ” ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮಂಜು ಪಾವಗಡ ಮೇಲೆ ಅಮೂಲ್ಯ ಲವ್: ರಾಕೇಶ್ ಅಡಿಗ ಕಕ್ಕಾಬಿಕ್ಕಿ
ಚಿತ್ರದ ನಿರ್ಮಾಪಕ ಮಂಜುನಾಥ್.ಡಿ ಮಾತನಾಡಿ “ಒಳ್ಳೆಯ ಕಂಟೆಂಟ್ ಕೊಟ್ರೆ ಖಂಡಿತಾ ಜನ ಸಿನಿಮಾವನ್ನು ನೋಡ್ತಾರೆ, ಗೆಲ್ಲಿಸ್ತಾರೆ. ಈ ಸಿನಿಮಾದ ಕಂಟೆಂಟ್ ತುಂಬಾ ಚೆನ್ನಾಗಿದೆ, ಒಳ್ಳೆಯ ಕಲಾವಿದರು ಇದ್ದಾರೆ. ಗೆಲ್ತೀವಿ ಎನ್ನುವ ಕಾನ್ಫಿಡೆನ್ಸ್ ನಿಂದ ಹೆಜ್ಜೆ ಇಟ್ಟಿದ್ದೇವೆ. ಏಪ್ರಿಲ್ ನಂತರದಲ್ಲಿ ಸಿನಿಮಾ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದರು. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರಾದ ಡಿ.ಸತ್ಯಪ್ರಕಾಶ್ ಅವರು ಮಾತನಾಡಿ “ಖಂಡಿತವಾಗಿಯೂ, ಇಡೀ ಸಿನಿಮಾವನ್ನು ನಗ್ತಾ ನಗ್ತಾ ಸಿನಿಮಾ ನೋಡ್ತೀರ. ಸಬ್ಜೆಕ್ಟ್ ಬಹಳ ವಿಭಿನ್ನವಾಗಿದೆ. ದೊಡ್ಡ ದೊಡ್ಡ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಸಾಧುಕೋಕಿಲ ಸರ್ ಪೂರ್ತಿ ಸಿನಿಮಾದಲ್ಲಿ ಕಾಣಿಸಿಕೊಳ್ತಾರೆ. ಇನ್ನು ಸುಂದರ್ ಸರ್ ಬಹಳ ವಿಭಿನ್ನ ಪಾತ್ರ ನಿರ್ವಹಿಸಿದ್ದಾರೆ. ಅವರ ಪಾತ್ರದ ವೈಶಿಷ್ಟ್ಯವನ್ನು ಫಿಲಂ ನೋಡಿನೇ ತಿಳ್ಕೋಬೇಕು. ವಿಶೇಷ ಅಂದರೆ ಎಲ್ಲ ಪಾತ್ರಗಳಿಗೂ ಅದರದ್ದೇ ಆದ ವಿಶೇಷತೆಗಳಿವೆ. ಇಡೀ ಫ್ಯಾಮಿಲಿ ಒಟ್ಟಾಗಿ ಕುಳಿತು ನೋಡುವ ಸಿನಿಮಾವಿದು. ಒಂದೊಳ್ಳೆ ಮೆಸೇಜ್ ಚಿತ್ರದಲ್ಲಿದೆ. ಇನ್ನು ನನ್ನ ದೀಪಕ್ ಅವರ ಸ್ನೇಹ 15 ವರ್ಷದ್ದು. ನಾನು ಕಥೆಯಲ್ಲಿ ಬರೆದಿರೋ ಹ್ಯೂಮರನ್ನು ದೀಪಕ್ ಚೆನ್ನಾಗಿ ತೆರೆ ಮೇಲೆ ತಂದಿದ್ದಾರೆ. ಇಡೀ ಸಿನಿಮಾ ಕಟ್ಟುವಾಗ ನಮ್ಮ ಜೊತೆ ಸಪೋರ್ಟಿವ್ ಆಗಿ ನಿಂತು ನಿರ್ಮಾಪಕರಾದ ಮಂಜುನಾಥ್ ಅವರು ಸಹಕಾರ ನೀಡಿದ್ದಾರೆ” ಎಂದು ಮಾಹಿತಿ ಹಂಚಿಕೊಂಡರು.
ನಾಯಕ ನಟ ಮಿಲಿಂದ್ ಮಾತನಾಡಿ “ಒಬ್ಬ ಹೀರೋ ಆಗಿ ನನಗೆ ಬಹಳ ಮುಖ್ಯವಾದ ಸಿನಿಮಾವಿದು. ಅದ್ಭುತವಾದ ಕಥೆ ಆಯ್ಕೆ ಮಾಡಿಕೊಂಡಿದ್ದೇನೆ. ಈ ಸಿನಿಮಾದ ಶಕ್ತಿ ಎಂದರೆ ಸತ್ಯ ಸರ್ ಬರವಣಿಗೆ. ಕಮರ್ಶಿಯಲ್ ಸಿನಿಮಾವಾದ್ರು ಕೂಡ ಜಾಸ್ತಿ ಹೊಡೆದಾಟ ಬಡಿದಾಟಕ್ಕೆ ಹೋಗಿಲ್ಲ. ಬದಲಾಗಿ ರೋಮ್ಯಾನ್ಸ್ ಮತ್ತು ಕಾಮಿಡಿ ಜಾನರ್ ಸಿನಿಮಾವಿದು ಅದಕ್ಕೆ ಹೆಚ್ಚು ಒತ್ತು ನೀಡಿದ್ದೇವೆ. ಮೊದಲ ಸಿನಿಮಾದಲ್ಲಿ ಪೆಟ್ಟು ತಿಂದಿದ್ದರಿಂದ, ಈ ಸಿನಿಮಾ ಮಾಡುವಾಗ ಒಂದು ಫಿಯರ್ ಇತ್ತು. ನಿರ್ದೇಶಕ ದೀಪಕ್ ಸರ್ ಅದನ್ನೆಲ್ಲ ಹೋಗಲಾಡಿಸಿ, ಸಾಕಷ್ಟು ತಿದ್ದಿದ್ದಾರೆ. ನಾನು ಈ ಸಿನಿಮಾ ಮಾಡೋದಕ್ಕೆ ಮುಖ್ಯ ಕಾರಣ ಅಂದ್ರೆ ನಮ್ಮ ತಂದೆ. ಅವರಿಗೆ ಸಿನಿಮಾ ಅಂದ್ರೆ ಪ್ಯಾಶನ್, ನಾನು ನಟನಾಗಬೇಕು ಎಂಬುದು ಅವರ ಆಸೆ. ಈ ಸಿನಿಮಾ ಜರ್ನಿಯಲ್ಲಿ ಪ್ರತಿ ಹಂತದಲ್ಲಿ ನನ್ನ ಜೊತೆ ನಿಂತಿದ್ದಾರೆ. ಈ ಸಿನಿಮಾ ಗೆಲ್ಲುತ್ತೆ ಎನ್ನುವ ಕಾನ್ಫಿಡೆನ್ಸ್ ಇದೆ“ ಎಂದು ಭರವಸೆಯ ಮಾತುಗಳನ್ನಾಡಿದರು.
ನಾಯಕ ನಟಿ, ರೇಚಲ್ ಡೇವಿಡ್ ಮಾತನಾಡಿ “ವಿಶೇಷವಾದಂತಹ ಪಾತ್ರ ನನ್ನದು. ಈಗ ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಇಲ್ಲಿವರೆಗೂ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಹಿರಿಯ ನಟರೊಂದಿಗೆ ನಟಿಸಿದ್ದು ಒಳ್ಳೆ ಅನುಭವ ನೀಡಿದೆ. ಚಿತ್ರದಲ್ಲಿ ಜಾನಕಿ ಹೆಸರಲ್ಲಿ ಆರ್ಕಿಯೋಲಜಿಸ್ಟ್ ಪಾತ್ರ ನಿರ್ವಹಿಸಿದ್ದೇನೆ” ಎಂದು ತಿಳಿಸಿದರು. ಹಿರಿಯ ನಟ ಅವಿನಾಶ್ ಮಾತನಾಡಿ “ಇದು ಬಹಳ ಒಳ್ಳೆಯ ಕಥಾಹಂದರ ಇರುವ ಸಿನಿಮಾ. ಹಲವು ಕಲಾವಿದರು ಈ ಚಿತ್ರದಲ್ಲಿದ್ದೇವೆ. ಬೇರೆ ರೀತಿಯ ಕಥೆ ಮಾಡಿಕೊಂಡಿದ್ದಾರೆ. ಥ್ರಿಲ್ ಇದೆ, ಹ್ಯೂಮರ್ ಇದೆ, ವಿಡಂಬನಾತ್ಮಕವಾಗಿ ಸಿನಿಮಾ ಹೋಗುತ್ತೆ. ನಿರ್ದೇಶಕ ದೀಪಕ್ ಸಿನಿಮಾವನ್ನು ತುಂಬಾ ಚೆನ್ನಾಗಿ ನಿರ್ದೇಶಿಸಿದ್ದಾರೆ. ಈ ಸಿನಿಮಾ ನನಗೆ ಒಳ್ಳೆಯ ಅನುಭವ ನೀಡಿದೆ” ಎಂದು ತಿಳಿಸಿದರು.
‘ಅನ್ ಲಾಕ್ ರಾಘವ’ ಚಿತ್ರವನ್ನು ಸತ್ಯ ಹಾಗೂ ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್. ಡಿ, ಡಿ ಸತ್ಯಪ್ರಕಾಶ್ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದಾರೆ. ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ವಿಭಿನ್ನವಾದ ಟೈಟಲ್‌ನಿಂದ ಗಮನ ಸೆಳೆದಿರುವ ‘ಅನ್ ಲಾಕ್ ರಾಘವ’ ಸಿನಿಮಾ ಈಗಾಗಲೇ 50ಕ್ಕೂ ಹೆಚ್ಚಿನ ದಿನಗಳ ಕಾಲ ಚಿತ್ರೀಕರಣ ಕಂಪ್ಲೀಟ್ ಮಾಡಿದೆ. ಕೋಟೆ ನಾಡು ಚಿತ್ರದುರ್ಗದ ವಿಭಿನ್ನ ಪ್ರದೇಶಗಳಲ್ಲಿಹಾಗೂ ಬೆಂಗಳೂರಿನ ವಿವಿಧೆಡೆ ಇಷ್ಟು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಕ್ಲೈಮ್ಯಾಕ್ಸ್ ಮತ್ತು ಹಾಡಿನ ಭಾಗದ ಚಿತ್ರೀಕರಣ ಮಾತ್ರ ಬಾಕಿ ಉಳಿದಿದ್ದು, ಅದನ್ನು ಸದ್ಯದಲ್ಲೇ ಚಿತ್ರತಂಡ ಆರಂಭಿಸಲಿದೆ.
‘ಅನ್ ಲಾಕ್ ರಾಘವ’ ಚಿತ್ರದ ನಾಯಕನಾಗಿ ‘ವೀಕೆಂಡ್’ ಚಿತ್ರದಲ್ಲಿನಟಿಸಿದ್ದ ಮಿಲಿಂದ್, ನಾಯಕಿಯಾಗಿ ‘ಲವ್ ಮಾಕ್ಟೇಲ್ 2’ ಖ್ಯಾತಿಯ ರೇಚಲ್ ಡೇವಿಡ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಮೂಗು ಸುರೇಶ್, ಭೂಮಿ ಶೆಟ್ಟಿ ಅವರು ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆ ಡೇಟ್ ಫಿಕ್ಸ್
ಹಾಸ್ಯಪ್ರಧಾನವಾದ ನವಿರಾದ ಪ್ರೇಮಕತೆಯುಳ್ಳ ‘ಅನ್ ಲಾಕ್ ರಾಘವ’ ಚಿತ್ರವನ್ನು ದೀಪಕ್ ಮಧುವನಹಳ್ಳಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಡಿ ಸತ್ಯಪ್ರಕಾಶ್ ರಾಘವನ ಕಥೆ-ಚಿತ್ರಕಥೆ-ಸಂಭಾಷಣೆಯನ್ನು ಬರೆದಿದ್ದಾರೆ. ಸತ್ಯ – ಮಯೂರ ಪಿಕ್ಚರ್ಸ್ ಬ್ಯಾನರ್‌ನಡಿ ಮಂಜುನಾಥ್ ಡಿ ಮತ್ತು ಸತ್ಯಪ್ರಕಾಶ್ ಜಂಟಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಲವಿತ್ ಛಾಯಾಗ್ರಹಕರಾಗಿದ್ದು, ರಾಗನಿಧಿ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಬಾಕಿ ಉಳಿದಿರುವ ಚಿತ್ರೀಕರಣವನ್ನು ಮುಗಿಸಿಕೊಂಡು 2023ರಲ್ಲಿಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.
Live Tv
[brid partner=56869869 player=32851 video=960834 autoplay=true]