Tag: ರೇಡ್

  • ರಾಜಕೀಯ ಉದ್ದೇಶಕ್ಕಾಗಿ ಕಾಂಗ್ರೆಸ್ ಪಕ್ಷದ ಬ್ಯಾಂಕ್‌ಖಾತೆಗಳನ್ನ ಬಿಜೆಪಿ ಸೀಜ್ ಮಾಡಿದೆ: ಪರಮೇಶ್ವರ್

    ರಾಜಕೀಯ ಉದ್ದೇಶಕ್ಕಾಗಿ ಕಾಂಗ್ರೆಸ್ ಪಕ್ಷದ ಬ್ಯಾಂಕ್‌ಖಾತೆಗಳನ್ನ ಬಿಜೆಪಿ ಸೀಜ್ ಮಾಡಿದೆ: ಪರಮೇಶ್ವರ್

    ಬೆಂಗಳೂರು: ಆದಾಯ ತೆರಿಗೆ ಇಲಾಖೆ (IT Department) ಕಾಂಗ್ರೆಸ್ ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸೀಜ್‌ ಮಾಡಿರೋದು ರಾಜಕೀಯ ಉದ್ದೇಶದಿಂದ ಅಂತ ಗೃಹ ಸಚಿವ ಪರಮೇಶ್ವರ್ (G Parameshwara) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ (Congress Party) ಹೇಗಾದರೂ ಮಾಡಿ ತೊಂದರೆ ಕೊಡಬೇಕು ಅಂತ ನಿರ್ಧಾರ ಮಾಡಿದ ಹಾಗೆ ಇದೆ. ಸುಪ್ರೀಂ ಕೋರ್ಟ್ (Supreme Court) ಚುನಾವಣೆ ಬಾಂಡ್ ತೆಗೆದುಕೊಳ್ಳಬಾರದು ಅಂತ ಆದೇಶ ಮಾಡಿದೆ. ಇಲ್ಲಿವರೆಗೂ ತೆಗೆದುಕೊಂಡಿರೋ ಬಾಂಡ್‌ಗಳ ಬಗ್ಗೆ ಮಾಹಿತಿ ಕೊಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ. ಈ ಹಿನ್ನೆಲೆಯಲ್ಲಿ ಅವರು ಸೀಜ್‌ ಮಾಡಿದ್ದಾರೆ ಅನ್ನಿಸುತ್ತೆ ಎಂದು ಕಿಡಿ ಕಾರಿದ್ದಾರೆ.

    ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಖಾತೆಗಳನ್ನ ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ. ಅಕೌಂಟ್ ‌ವಿವರ ಕೇಳಬಹುದಿತ್ತು. ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಮುಖವಾಣಿ; ಕೇರಳದ ʻಜೈಹಿಂದ್‌ ಟಿವಿʼ ಚಾನೆಲ್‌ ಬ್ಯಾಂಕ್‌ ಖಾತೆಗಳು ಫ್ರೀಜ್‌!

    ಐಟಿಗೆ ಅರಿವಾದ ಮೇಲೆ ಅಕೌಂಟ್ ಓಪನ್ ಮಾಡಿದ್ದಾರೆ. ಇದೆಲ್ಲವನ್ನು ನೋಡಿದ್ರೆ ಉದ್ದೇಶ ಪೂರ್ವಕವಾಗಿ ಕೇಂದ್ರ ಮಾಡ್ತಿದೆ ಅಂತ ನಮಗೆ ಅನಿಸುತ್ತದೆ. ಈ ಸಂಧರ್ಭದಲ್ಲಿ ಮಾಡಿದಾಗ ಉದ್ದೇಶಪೂರ್ವಕವಾಗಿ ಚುನಾವಣೆಗೆ ತೊಂದರೆ ಮಾಡೋದಕ್ಕೆ‌ ಮಾಡ್ತಿದ್ದಾರೆ ಅಂತ ಅನ್ನಿಸುತ್ತೆ. ಬರೀ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಹೀಗೆ, ಆದರೆ‌ ಇದು ಉದ್ದೇಶಪೂರ್ವಕವಾಗಿ ಆಗಿದೆ ಅಂತ ಅನ್ನಿಸುತ್ತದೆ. ಇದರಲ್ಲಿ ‌ರಾಜಕೀಯ ಇದೆ ಅಂತ ಅನ್ನಿಸುತ್ತೆ ಅಂತ ಕೇಂದ್ರದ ವಿರುದ್ದ ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

    115 ಕೋಟಿ ಹಣ ಫ್ರೀಜ್‌:
    ಚುನಾವಣಾ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್‌ ನಿಷೇಧಿಸಿದ ಮರು ದಿನವೇ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಮೂರು ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿದ ಬೆಳವಣಿಗೆ ನಡೆದಿದೆ. ಸಾರ್ವಜನಿಕರಿಂದ ದೇಣಿಗೆ ರೂಪದಲ್ಲಿ ಸಂಗ್ರಹಿಸಲಾದ 210 ಕೋಟಿ ರೂ.ಗಳಿಗೆ ತೆರಿಗೆ ಪಾವತಿಸದ ಕಾರಣ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ಸೇರಿದ ಮೂರು ಬ್ಯಾಂಕ್‌ ಖಾತೆಗಳನ್ನು ಗುರುವಾರ ರಾತ್ರಿಯಿಂದಲೇ ಮುಟ್ಟುಗೋಲು ಹಾಕಿಕೊಂಡಿರುವುದು ವರದಿಯಾಗಿದೆ. ಆದಾಯ ತೆರಿಗೆ ಮೇಲ್ಮನವಿ ನ್ಯಾಯ ಮಂಡಳಿ ಆದೇಶದ ಬಳಿಕ ಬ್ಯಾಂಕ್‌ ಖಾತೆಗಳು ಚಾಲ್ತಿಗೆ ಬಂದಿದ್ದರೂ 115 ಕೋಟಿ ರೂ. ಹಣವನ್ನು ದಂಡದ ರೂಪದಲ್ಲಿ ಫ್ರೀಜ್‌ ಮಾಡಲಾಗಿದೆ. 115 ಕೋಟಿ ರೂ. ಹಣವನ್ನು ಬ್ಯಾಂಕ್‌ ಖಾತೆಯಲ್ಲಿ ಉಳಿಸಿ, ಪಕ್ಷದ ರಾಜಕೀಯ ಚಟುವಟಿಕೆಗಳಿಗೆ ಉಳಿದ ಹಣವನ್ನು ವಿನಿಯೋಗ ಮಾಡುತ್ತೇವೆ ಎಂದು ಅಜಯ್‌ ಮಾಕೆನ್‌ ಹೇಳಿದರು. ಇದಕ್ಕೆ ಸಂಬಂಧಿಸಿದಂತೆ ಪರಮೇಶ್ವರ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ.

    `ಜೈಹಿಂದ್ ಚಾನೆಲ್’ನ ಬ್ಯಾಂಕ್ ಖಾತೆ ಫ್ರೀಜ್‌:
    ಕಾಂಗ್ರೆಸ್ ಮುಖವಾಣಿ ಸಂಸ್ಥೆ ಕೇರಳದ `ಜೈಹಿಂದ್ ಚಾನೆಲ್’ನ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಸ್ಥಗಿತಗೊಳಿಸಿದೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Loksabha Election: ಸೋಮಣ್ಣ ಬಳಿಕ ಸಿ.ಟಿ ರವಿ, ಸುಧಾಕರ್, ಶ್ರೀರಾಮುಲು ಕಸರತ್ತು

  • ಕಾಂಗ್ರೆಸ್‌ ಮುಖವಾಣಿ; ಕೇರಳದ ʻಜೈಹಿಂದ್‌ ಟಿವಿʼ ಚಾನೆಲ್‌ ಬ್ಯಾಂಕ್‌ ಖಾತೆಗಳು ಫ್ರೀಜ್‌!

    ಕಾಂಗ್ರೆಸ್‌ ಮುಖವಾಣಿ; ಕೇರಳದ ʻಜೈಹಿಂದ್‌ ಟಿವಿʼ ಚಾನೆಲ್‌ ಬ್ಯಾಂಕ್‌ ಖಾತೆಗಳು ಫ್ರೀಜ್‌!

    – ಚಾನೆಲ್‌ಗೆ ಡಿಕೆಶಿ ಕುಟುಂಬ ಹೂಡಿಕೆ ಬಗ್ಗೆ ಮಾಹಿತಿ ಕೇಳಿದ್ದ ಸಿಬಿಐ

    ಬೆಂಗಳೂರು/ತಿರುವನಂತಪುರಂ: ಕಾಂಗ್ರೆಸ್‌ ಮುಖವಾಣಿ ಸಂಸ್ಥೆ ಕೇರಳದ ʻಜೈಹಿಂದ್ ಚಾನೆಲ್‌ʼನ ಬ್ಯಾಂಕ್‌ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ (Income Tax department) ಸ್ಥಗಿತಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

    ʻಜೈಹಿಂದ್ ಟಿವಿ’ಯ (Jai Hind TV channel) ಮಾತೃಸಂಸ್ಥೆಯಾದ ಭಾರತ್ ಬ್ರಾಡ್ ಕಾಸ್ಟಿಂಗ್ ಕಂಪನಿಯಿಂದ ಬಾಕಿ ಇರುವ ತೆರಿಗೆ ಮೊತ್ತವನ್ನು ವಸೂಲಿ ಮಾಡುವಂತೆ ಎರಡು ಪ್ರಮುಖ ಖಾಸಗಿ ಬ್ಯಾಂಕುಗಳಿಗೆ ಇಲ್ಲಿನ ಕೇಂದ್ರ GST ಮತ್ತು ಅಬಕಾರಿ ಕಚೇರಿಯ ಸಹಾಯಕ ಆಯುಕ್ತರು ಇತ್ತೀಚೆಗೆ ನೋಟಿಸ್ ನೀಡಿದ್ದರು. ಇದರ ಬೆನ್ನಲ್ಲೇ ಈಗ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.

    ಸಂಸ್ಥೆಯ ಖಾತೆಗಳನ್ನು ಸ್ಥಗಿತಗೊಳಿಸಿ ಕೈಗೊಂಡಿರುವ ಕ್ರಮಕ್ಕೂ, 7 ವರ್ಷಗಳ ಹಿಂದಿನ ಸೇವಾ ತೆರಿಗೆ ಬಾಕಿಗೆ ಸಂಬಂಧಿಸಿದ ಇದೇ ಸಂಸ್ಥೆಗೆ ಸಂಬಂಧಿಸಿದ ಪ್ರಕರಣಕ್ಕೂ ನಂಟಿದೆ. ಸೇವಾ ತೆರಿಗೆ ಬಾಕಿ ಕುರಿತ ಪ್ರಕರಣದ ವಿಚಾರಣೆ ಸದ್ಯ ಕೇರಳ ಹೈಕೋರ್ಟ್‌ನಲ್ಲಿ (Kerala Highcourt) ನಡೆಯುತ್ತಿದೆ. ಈ ನಡುವೆ ಇಲಾಖೆ ಕೈಗೊಂಡಿರುವ ಈ ದಿಢೀರ್ ಕ್ರಮ ದುರದೃಷ್ಟಕರ ಮಾತ್ರವಲ್ಲ. ಇದರಿಂದ ಚಾನೆಲ್ ಸಂಕಷ್ಟಕ್ಕೆ ಸಿಲುಕಿದೆ ಚಾನೆಲ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಇಂದಿರಾ ಗಾಂಧಿ 3ನೇ ಮಗ ಶಾಕ್? – ಪುತ್ರನ ಜೊತೆ ಕಮಲ್‌ನಾಥ್ ಬಿಜೆಪಿ ಸೇರ್ಪಡೆ?

    ಡಿಕೆಶಿ ಹೂಡಿಕೆ ಬಗ್ಗೆ ಮಾಹಿತಿ ಕೇಳಿದ್ದ ಸಿಬಿಐ:
    ಸದ್ಯ ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾ‌ರ್ ಮತ್ತು ಅವರ ಕುಟುಂಬ ಈ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಕುರಿತು ವಿವರ ನೀಡುವಂತೆ ಸಂಸ್ಥೆಗೆ ಕಳೆದ ಡಿಸೆಂಬರ್ 22ರಂದು ಸಿಬಿಐ ನೋಟಿಸ್ ನೀಡಿತ್ತು. ಈ ವಿಚಾರವಾಗಿ ನಾವು ತನಿಖಾ ಸಂಸ್ಥೆಗೆ ಸಹಕಾರ ನೀಡುತ್ತಿದ್ದೇವೆ. ಇದಾದ ನಂತರ, ನಾವು ಕೇಂದ್ರದ ವಿವಿಧ ಇಲಾಖೆಗಳಿಂದ 10ಕ್ಕೂ ಹೆಚ್ಚು ನೋಟಿಸ್‌ಗಳನ್ನು ಪಡೆದಿದ್ದೇವೆ ಎಂದು ಶಿಜು ಹೇಳಿದ್ದಾರೆ.

    ಡಿಕೆಶಿ ಕುಟುಂಬದಿಂದ 25 ಲಕ್ಷ ರೂ. ಹೂಡಿಕೆ?:
    2016-17 ರಲ್ಲಿ ಕೇರಳದ ಜೈಹಿಂದ್ ಪ್ರೈವೇಟ್ ಲಿಮಿಟೆಡ್‌ಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಕುಟುಂಬ 25 ಲಕ್ಷ ರೂ. ಹೂಡಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್‌ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಏರ್‌ಪೋರ್ಟ್ ಸ್ಫೋಟಿಸುತ್ತೇನೆ- ‌ ಬೆದರಿಕೆ ಕರೆ ಮಾಡಿ ಮೊಬೈಲ್‌ ಸ್ವಿಚ್ಛ್‌ ಆಫ್‌ ಮಾಡ್ಕೊಂಡ!

    115 ಕೋಟಿ ಹಣ ಫ್ರೀಜ್‌:
    ಚುನಾವಣಾ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್‌ ನಿಷೇಧಿಸಿದ ಮರು ದಿನವೇ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಮೂರು ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿದ ಬೆಳವಣಿಗೆ ನಡೆದಿದೆ. ಸಾರ್ವಜನಿಕರಿಂದ ದೇಣಿಗೆ ರೂಪದಲ್ಲಿ ಸಂಗ್ರಹಿಸಲಾದ 210 ಕೋಟಿ ರೂ.ಗಳಿಗೆ ತೆರಿಗೆ ಪಾವತಿಸದ ಕಾರಣ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ಸೇರಿದ ಮೂರು ಬ್ಯಾಂಕ್‌ ಖಾತೆಗಳನ್ನು ಗುರುವಾರ ರಾತ್ರಿಯಿಂದಲೇ ಮುಟ್ಟುಗೋಲು ಹಾಕಿಕೊಂಡಿರುವುದು ವರದಿಯಾಗಿದೆ. ಆದಾಯ ತೆರಿಗೆ ಮೇಲ್ಮನವಿ ನ್ಯಾಯ ಮಂಡಳಿ ಆದೇಶದ ಬಳಿಕ ಬ್ಯಾಂಕ್‌ ಖಾತೆಗಳು ಚಾಲ್ತಿಗೆ ಬಂದಿದ್ದರೂ 115 ಕೋಟಿ ರೂ. ಹಣವನ್ನು ದಂಡದ ರೂಪದಲ್ಲಿ ಫ್ರೀಜ್‌ ಮಾಡಲಾಗಿದೆ. 115 ಕೋಟಿ ರೂ. ಹಣವನ್ನು ಬ್ಯಾಂಕ್‌ ಖಾತೆಯಲ್ಲಿ ಉಳಿಸಿ, ಪಕ್ಷದ ರಾಜಕೀಯ ಚಟುವಟಿಕೆಗಳಿಗೆ ಉಳಿದ ಹಣವನ್ನು ವಿನಿಯೋಗ ಮಾಡುತ್ತೇವೆ ಎಂದು ಅಜಯ್‌ ಮಾಕೆನ್‌ ಹೇಳಿದರು. ಇದನ್ನೂ ಓದಿ: ಹಳಿ ತಪ್ಪಿದ ರೈತರ ಪ್ರತಿಭಟನೆ; ಕತ್ತಿ ಝಳಪಿಸಿದ ನಿಹಾಂಗ್‌ ಸಿಖ್ಖರು – ಖಲಿಸ್ತಾನಿ ಉಗ್ರನ ಫೋಟೋ ಪತ್ತೆ!

  • ಉಗ್ರರನ್ನು ಮಟ್ಟ ಹಾಕಲು ಉತ್ತರ ಭಾರತದ ಹಲವೆಡೆ NIA ರೇಡ್

    ಉಗ್ರರನ್ನು ಮಟ್ಟ ಹಾಕಲು ಉತ್ತರ ಭಾರತದ ಹಲವೆಡೆ NIA ರೇಡ್

    ನವದೆಹಲಿ: ಭಾರತ (India) ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಯೋತ್ಪಾದಕರು (Terrorists), ಗ್ಯಾಂಗ್‌ಸ್ಟರ್‌ಗಳು (Gangsters), ಮಾದಕವಸ್ತು ಕಳ್ಳಸಾಗಣೆದಾರರ (Smugglers) ಸಂಪರ್ಕವನ್ನು ಕೆಡವಲು ರಾಷ್ಟ್ರೀಯ ತನಿಖಾ ದಳ (NIA) ಮಂಗಳವಾರ ಪಂಜಾಬ್, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ದಾಳಿ ನಡೆಸಿದೆ.

    ಇಂದು ಬೆಳಗ್ಗೆ ಎನ್‌ಐಎ ಉತ್ತರ ಭಾರತದ ಹಲವು ಭಾಗಗಳಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಬಂಧನ ವರದಿಯಾಗಿಲ್ಲ. ಇದನ್ನೂ ಓದಿ: ತಾಯಿ ಸನ್‍ಸ್ಕ್ರೀನ್ ಕಳಿಸಿದ್ರು, ನಾನು ಬಳಸಲ್ಲ: ರಾಹುಲ್ ಗಾಂಧಿ

    ಈ ಹಿಂದೆ ಅಕ್ಟೋಬರ್ 14 ರಂದು, ಡ್ರೋನ್ ಡೆಲಿವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿತ್ತು.

    ಕಳೆದ 9 ತಿಂಗಳುಗಳಲ್ಲಿ, ನೆರೆಯ ಪಾಕಿಸ್ತಾನದಿಂದ 191 ಡ್ರೋನ್‌ಗಳು ಭಾರತದ ಭೂಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿರುವುದನ್ನು ಭದ್ರತಾ ಪಡೆಗಳು ಗಮನಿಸಿವೆ. ಸೋಮವಾರ ಮುಂಜಾನೆಯೂ ಭಾರತ – ಪಾಕಿಸ್ತಾನ ಗಡಿಯಲ್ಲಿ ಪಂಜಾಬ್ ಅಮೃತಸರ ಸೆಕ್ಟರ್‌ನಲ್ಲಿ ಭಾರತವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಸುಮಾರು 12 ಕೆಜಿ ಸರಕನ್ನು ಒಯ್ಯುತ್ತಿದ್ದ ಡ್ರೋನ್ ಅನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಇದನ್ನೂ ಓದಿ: ನನಗೆ AAP ತೊರೆಯುವಂತೆ ಒತ್ತಡ ಹೇರಿದ್ದಾರೆ – ಸಿಸೋಡಿಯಾ ಆರೋಪ, CBI ಪ್ರತಿಕ್ರಿಯೆ

    Live Tv
    [brid partner=56869869 player=32851 video=960834 autoplay=true]

  • ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ – 20 ಕಡೆಗಳಲ್ಲಿ ಶೋಧ

    ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ – 20 ಕಡೆಗಳಲ್ಲಿ ಶೋಧ

    ನವದೆಹಲಿ: ಅಬಕಾರಿ ನೀತಿ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಕೇಂದ್ರ ತನಿಖಾ ದಳ(ಸಿಬಿಐ) ದಾಳಿ ನಡೆಸಿದೆ. ದೆಹಲಿಯ ಸುಮಾರು 20 ಸ್ಥಳಗಳಲ್ಲಿ ದಾಳಿಯಾಗಿದೆ.

    ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿಯ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇತ್ತಿಚೆಗೆ ಎಫ್‌ಐಆರ್ ದಾಖಲಿಸಿತ್ತು. ಇದರ ಆಧಾರದ ಮೇಲೆ ಈ ದಾಳಿ ನಡೆಸಿ ತಪಾಸಣೆ ಆರಂಭಿಸಿದೆ.

    ಈ ನಡುವೆ ಮನೀಶ್ ಸಿಸೋಡಿಯಾ ಅವರು ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದಾರೆ ಹಾಗೂ ತನಿಖೆಗೆ ಸಹಕರಿಸುವುದಾಗಿ ಹೇಳಿದ್ದಾರೆ. ದೇಶದ ಸೇವೆ ಮಾಡುವವರಿಗೆ ಈ ರೀತಿ ಕಿರುಕುಳ ನೀಡುತ್ತಿರುವುದು ದುರದೃಷ್ಟಕರ ಎಂದು ಸಿಸೋಡಿಯಾ ಹೇಳಿದ್ದಾರೆ. ಇದನ್ನೂ ಓದಿ: ಇದೊಂದು ಬಾರಿ ನನ್ನನ್ನು ಗೆಲ್ಲಿಸಿ – ಚುನಾವಣೆಗೂ ಮುನ್ನವೇ ಶ್ರೀರಾಮುಲುಗೆ ಢವಢವ

    MANISH SISODIA

    ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಸಿಬಿಐ ನಡೆಯನ್ನು ನಾವು ಸ್ವಾಗತಿಸುತ್ತೇವೆ. ಈ ಹಿಂದೆಯೂ ಪಕ್ಷದ ಇತರ ನಾಯಕರ ಮೇಲೆ ದಾಳಿಗಳು ನಡೆದಿವೆ. ಆದರೆ ಅವುಗಳಿಂದ ಏನೂ ಹೊರಬಂದಿಲ್ಲ. ದೆಹಲಿಯ ಆರೋಗ್ಯ ಮತ್ತು ಶಿಕ್ಷಣದ ಮಾದರಿಗಳನ್ನು ಜಗತ್ತು ಮೆಚ್ಚುತ್ತಿದೆ. ಇದನ್ನು ಸಹಿಸಲಾಗದೇ ಆರೋಗ್ಯ ಮತ್ತು ಶಿಕ್ಷಣ ಸಚಿವರ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಐಫೋನ್, ಮ್ಯಾಕ್‌ಗಳಿಗೆ ಹ್ಯಾಕರ್‌ಗಳ ಭೀತಿ! – ಆಪಲ್ ಎಚ್ಚರಿಕೆ

    ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಅನುರಾಗ್‌ ಟಾಕೂರ್‌, ಅರವಿಂದ್ ಕೇಜ್ರಿವಾಲ್ ಜನರನ್ನು ಮೂರ್ಖರಂತೆ ನಡೆಸಿಕೊಳ್ಳುವುದನ್ನು ನಿಲ್ಲಿಸಬೇಕು ಮತ್ತು ದೇಶದ ಜನರನ್ನು ಸಂಬೋಧಿಸುವುದನ್ನು ನಿಲ್ಲಿಸಬೇಕು. ಸತ್ಯೇಂದ್ರ ಜೈನ್ ಜೈಲಿಗೆ ಹೋದಾಗ ದೆಹಲಿ ಸಿಎಂ ಅವರನ್ನು ಅಮಾನತು ಮಾಡಿಲ್ಲ. ಎಎಪಿ, ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರ ನಿಜವಾದ ಮುಖ ಇಂದು ಸಾರ್ವಜನಿಕರ ಮುಂದೆ ಬಂದಿದೆ ಎಂದು ತಿರುಗೇಟು ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ತೃಣಮೂಲ ಶಾಸಕ ಪಾರ್ಥ ಚಟರ್ಜಿ ಆಪ್ತೆ ಮನೆ ಮೇಲೆ ಇಡಿ ರೇಡ್ – 20 ಕೋಟಿ ವಶ

    ತೃಣಮೂಲ ಶಾಸಕ ಪಾರ್ಥ ಚಟರ್ಜಿ ಆಪ್ತೆ ಮನೆ ಮೇಲೆ ಇಡಿ ರೇಡ್ – 20 ಕೋಟಿ ವಶ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆಯೊಬ್ಬರ ಮನೆಯಿಂದ 20 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ವಶಪಡಿಸಿಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅರ್ಪಿತಾ ಮುಖರ್ಜಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿದೆ.

    ಅರ್ಪಿತಾ ಮುಖರ್ಜಿ ಮನೆಯಿಂದ ವಶಪಡಿಸಿಕೊಳ್ಳಲಾದ 20 ಕೋಟಿ ಹಣ ಶಿಕ್ಷಕರ ನೇಮಕಾತಿ ಹಗರಣದಿಂದ ಬಂದಿರುವ ಆದಾಯ ಎಂದು ಶಂಕಿಸಲಾಗಿದೆ. ಭಾರೀ ಮೊತ್ತದ ಹಣವನ್ನು ಎಣಿಕೆ ಯಂತ್ರಗಳಿಂದ ಹಾಗೂ ಬ್ಯಾಂಕ್ ಅಧಿಕಾರಿಗಳ ನೆರವಿನಿಂದ ಎಣಿಸಲಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: 75 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿರುವ ಮನೆಗೆ ಹೋಗಿ 90ರ ಅಜ್ಜಿ ಭಾವುಕ

    ಇಡಿ ರೇಡ್ ವೇಳೆ ಅರ್ಪಿತಾ ಮನೆ ಆವರಣದಿಂದ 20ಕ್ಕೂ ಹೆಚ್ಚು ಮೊಬೈಲ್ ಫೋನ್‌ಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಇಷ್ಟೊಂದು ಸಂಖ್ಯೆಯ ಮೊಬೈಲ್ ಫೋನ್‌ಗಳನ್ನು ಹೊಂದಿರುವ ಬಗೆಗಿನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ.

    ಚಟರ್ಜಿ ಅವರೊಂದಿಗೆ, ರಾಜ್ಯ ಶಿಕ್ಷಣ ಸಚಿವ ಪರೇಶ್ ಸಿ ಅಧಿಕಾರಿ, ಶಾಸಕ ಮಾಣಿಕ್ ಭಟ್ಟಾಚಾರ್ಯ ಹಾಗೂ ಇನ್ನಿತರರ ಮೇಲೂ ಇಡಿ ದಾಳಿ ನಡೆಸಿದೆ. ಇದನ್ನೂ ಓದಿ: 2-3 ತಲೆಮಾರಿಗಾಗುವಷ್ಟು ಮಾಡಿಕೊಂಡಿದ್ದೇವೆ – ವಿವಾದಿತ ಹೇಳಿಕೆಗೆ ರಮೇಶ್ ಕುಮಾರ್ ಸ್ಪಷ್ಟನೆ

    ಪ್ರಸ್ತುತ ಕೈಗಾರಿಕಾ ಮತ್ತು ವಾಣಿಜ್ಯ ಸಚಿವರಾಗಿರುವ ಪಾರ್ಥ ಚಟರ್ಜಿ ಅವರು ಈ ಹಿಂದೆ ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ (ಡಬ್ಲ್ಯುಬಿಎಸ್‌ಎಸ್‌ಸಿ) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಿರುವುದಾಗಿ ಆರೋಪಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದಾಖಲೆಯಿಲ್ಲದೇ ಸಾಗಿಸ್ತಿದ್ದ 56.96 ಲಕ್ಷ ರೂ. ವಶ

    ದಾಖಲೆಯಿಲ್ಲದೇ ಸಾಗಿಸ್ತಿದ್ದ 56.96 ಲಕ್ಷ ರೂ. ವಶ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚಿಪಗಿ ನಾಕಾ ಬಳಿ ಕಾರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಅಂದಾಜು 56 ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸಿದ್ದಾಪುರ ತಾಲೂಕಿನ ಹೇರೂರಿನ ಅಬ್ದುಲ್ ಮುತಲಿಫ್ (31) ಹಾಗೂ ಅಬ್ದುಲ್ ಸೌದ್ (42) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

    ಅಬ್ದುಲ್ ಮುತಲಿಫ್ ಮತ್ತು ಅಬ್ದುಲ್ ಸೌದ್ ಇವರು ಹುಬ್ಬಳ್ಳಿಯಿಂದ ಶಿರಸಿ ಕಡೆಗೆ ಕಾರಿನಲ್ಲಿ ಹಣ ಸಾಗಿಸುತ್ತಿದ್ದರು. ಆದರೆ ಚಿಪಗಿ ನಾಕಾ ಬಳಿ ಖಚಿತ ಮಾಹಿತಿ ಮೇರೆಗೆ ಡಿವೈಎಸ್‍ಪಿ ಜಿ.ಟಿ.ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ಮಾಡಿದೆ. ಆಗ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಸುಮಾರು 56 ಲಕ್ಷ ರೂ. ನಗದು ಪತ್ತೆಯಾಗಿದೆ.

    ತಕ್ಷಣ ಪೊಲೀಸರು ಇಬ್ಬರನ್ನು ಬಂಧಿಸಿ, 55 ಲಕ್ಷದ 96 ಸಾವಿರ ರೂ.ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಘಟನೆಯಲ್ಲಿ ಹಣ ಸಾಗಿಸಲು ಬಳಸಿದ್ದ ಕಾರನ್ನು ಸಹ ಜಪ್ತಿ ಮಾಡಲಾಗಿದೆ. ಈ ಕುರಿತು ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪೊಲೀಸ್ ಸಿಬ್ಬಂದಿ ಪ್ರಶಾಂತ್, ಚಂದ್ರಪ್ಪ, ಕೃಷ್ಣ, ಅನ್ಸಾರಿ, ರಾಜೇಶ್ ನಾಯಕ್, ರಾಜೇಶ್ ಕೊರಗ, ಜೋಸೆಫ್, ಶ್ರೀಧರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

  • ಅಕ್ರಮವಾಗಿ ಕಲ್ಲು ಸಾಗಿಸ್ತಿದ್ದ ಲಾರಿಗಳ ವಶ – ಬೆಳ್ಳಂಬೆಳಗ್ಗೆ ಗಣಿ ಅಧಿಕಾರಿಗಳ ರೇಡ್

    ಅಕ್ರಮವಾಗಿ ಕಲ್ಲು ಸಾಗಿಸ್ತಿದ್ದ ಲಾರಿಗಳ ವಶ – ಬೆಳ್ಳಂಬೆಳಗ್ಗೆ ಗಣಿ ಅಧಿಕಾರಿಗಳ ರೇಡ್

    ಚಾಮರಾಜನಗರ: ಬೆಳ್ಳಂಬೆಳಗ್ಗೆ ಗಣಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಅಕ್ರಮ ಕ್ವಾರಿಗಳಲ್ಲಿ ಪರವಾನಿಗೆ ಇಲ್ಲದೆ ಕಲ್ಲು ಸಾಗಾಣಿಕೆ ಮಾಡುತ್ತಿದ್ದ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

    ಗಣಿ ಇಲಾಖೆ ಉಪ ನಿರ್ದೇಶಕಿ ಲಕ್ಷ್ಮಮ್ಮ ಆದೇಶದಂತೆ ಭೂ ವಿಜ್ಞಾನ ಎರಡು ತಂಡ ರಚಿಸಿದ್ದು, ಜಿಲ್ಲಾದ್ಯಂತ ಗಸ್ತು ಕಾರ್ಯ ಕೈಗೊಂಡಿದ್ದಾರೆ. ಚಾಮರಾಜನಗರದಲ್ಲಿ ಮೂರು ಲಾರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಲಾರಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    ಅಲ್ಲದೇ ಗುಂಡ್ಲುಪೇಟೆಯಲ್ಲಿಯೂ ಕೂಡ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದ್ದು, ಎರಡು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಖನಿಜ ಸಾಗಾಣಿಕೆ ಮಾಡಲೂ ಪರವಾನಿಗೆ ಇಲ್ಲದಿರುವುದರಿಂದ ಸದರಿ ವಾಹನಗಳನ್ನು ವಶಪಡಿಸಿಕೊಂಡು ಪೊಲೀಸರ ಸುಪರ್ದಿಗೆ ನೀಡಲಾಗಿದೆ.

  • ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ ಎಸ್‍ಪಿ – ಕೇವಲ 6 ತಿಂಗ್ಳಲ್ಲಿ ಸಾವಿರ ರೇಡ್

    ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ ಎಸ್‍ಪಿ – ಕೇವಲ 6 ತಿಂಗ್ಳಲ್ಲಿ ಸಾವಿರ ರೇಡ್

    -ಎಸ್‍ಪಿಗೆ ಅಬಕಾರಿ ಅಧಿಕಾರಿಗಳು ಒತ್ತಡ
    -ಕ್ಯಾರೇ ಎನ್ನದ ಎಸ್‍ಪಿಗೆ ಜನರಿಂದ ಮೆಚ್ಚುಗೆ

    ಚಿಕ್ಕಬಳ್ಳಾಪುರ: ಜಿಲ್ಲೆಗೆ ಬಂದ ನೂತನ ಅಧಿಕಾರಿಯೊಬ್ಬರು ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ್ದು, ಕೇವಲ 6 ತಿಂಗಳಲ್ಲೇ ಮಾರಾಟಕ್ಕೆ ಬ್ರೇಕ್ ಹಾಕುತ್ತಿದ್ದಾರೆ.

    ಜಿಲ್ಲೆಯಲ್ಲಿ ಒಂದು ಕಡೆ ಮಳೆಯಿಲ್ಲ, ಮತ್ತೊಂದೆಡೆ ಮಳೆಯಿಲ್ಲದೆ ಬೆಳೆಯೂ ಇಲ್ಲ. ಇತ್ತ ಸರ್ಕಾರ ಕುಡಿಯೋಕೆ ನೀರು ಕೊಡದಿದ್ದರೂ ಆ ಜಿಲ್ಲೆಗೆ ಸಾಕು ಎನ್ನುವಷ್ಟು ಮದ್ಯ ಸರಬರಾಜಾಗುತ್ತಿದೆ. ಹೀಗಾಗಿ ಪ್ರತಿ ಹಳ್ಳಿಯಲ್ಲಿರುವ ಚಿಲ್ಲರೆ ಅಂಗಡಿಗಳು ಮದ್ಯ ಮಾರಾಟ ಅಂಗಡಿಗಳಾಗಿ ಮಾರ್ಪಾಡಾಗಿದ್ದವು. ಇದರಿಂದ ಗ್ರಾಮೀಣ ಭಾಗದ ಬಹಳಷ್ಟು ಮಂದಿ ಹಳ್ಳಿಗಳಲ್ಲಿನ ಚಿಲ್ಲರೆ ಅಂಗಡಿಗಳಲ್ಲೇ ಸಿಗುತ್ತಿದ್ದ ಮದ್ಯದ ಚಟಕ್ಕೆ ದಾಸರಾಗಿ ಬದುಕು ಹಾಳು ಮಾಡಿಕೊಂಡಿದ್ದರು.

    ಈ ಬಗ್ಗೆ ಜಿಲ್ಲೆಗೆ ಬಂದ ನೂತನ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಅವರಿಗೆ ಯುವಕರು, ಮಹಿಳೆಯರು, ವಿದ್ಯಾರ್ಥಿಗಳು ಕರೆ ಮಾಡಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿಸುವಂತೆ ಮನವಿ ಮಾಡಿಕೊಂಡಿದ್ದರು. ಇದರಿಂದ ಎಚ್ಚೆತ್ತ ಎಸ್‍ಪಿ ಸಂತೋಷ್ ಬಾಬು, ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೆ ಹಗಲು ರಾತ್ರಿ ಎನ್ನದೆ ಅಕ್ರಮ ಮದ್ಯ ಮಾರಾಟ ಹಾಗೂ ಸರಬರಾಜು ಕಂಡು ಬಂದರೆ ಸಾಕು ನಿರ್ಧಾಕ್ಷಿಣ್ಯವಾಗಿ ಕ್ರಮಕೈಗೊಂಡು ಕೇಸ್ ಮಾಡುವಂತೆ ತಾಕೀತು ಮಾಡಿದರು. ಹೀಗಾಗಿ ಕೇವಲ 6 ತಿಂಗಳಲ್ಲಿ 1000ಕ್ಕೂ ಹೆಚ್ಚು ಅಕ್ರಮ ಮದ್ಯ ಮಾರಾಟದ ಕೇಸ್ ದಾಖಲಾಗಿದ್ದು, ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿದಂತಾಗಿದೆ.

    ಜಿಲ್ಲೆಯ ಆರು ತಾಲೂಕುಗಳು, ಗಡಿಭಾಗದ ಹಳ್ಳಿಗಳಲ್ಲಂತೂ ಅಕ್ರಮ ಮದ್ಯ ಮಾರಾಟ ಬಲು ಜೋರಾಗಿಯೇ ಇತ್ತು. ಅದರಲ್ಲೂ ಅನುಮತಿ ಪಡೆದಿರುವ ಬಾರ್ ಮಾಲೀಕರೇ ಸ್ವತಃ ಅಬಕಾರಿ ಅಧಿಕಾರಿಗಳ ಕೊಡುವ ಟಾರ್ಗೆಟ್ ರೀಚ್ ಮಾಡೋಕೆ ಹಳ್ಳಿ ಹಳ್ಳಿಗಳಿಗೆ ಮದ್ಯ ಸರಬರಾಜು ಮಾಡುತ್ತಿದ್ದರು. ಆದರೆ ಈಗ ಅದೆಲ್ಲಕ್ಕೂ ಕಡಿವಾಣ ಬಿದ್ದಿದ್ದು ಎಸ್‍ಪಿ ಸಂತೋಷ್ ಬಾಬು ಕಾರ್ಯಕ್ಕೆ ಸಾರ್ವಜನಿಕರೇ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಪೊಲೀಸರು ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಟಕ್ಕೆ ಬ್ರೇಕ್ ಹಾಕಿದ್ದೇ ತಡ ಅಬಕಾರಿ ಇಲಾಖಾಧಿಕಾರಿಗಳು ಸರ್ ಟಾರ್ಗೆಟ್ ರೀಚ್ ಮಾಡೋಕೆ ಕಷ್ಟ ಆಗುತ್ತದೆ. ಕುಡಿಯೋರು ಕುಡಿಯಲಿ ಬಿಡಿ ಎಂದು ಒತ್ತಡ ಹಾಕುತ್ತಿದ್ದಾರೆ. ಆದರೆ ಅಬಕಾರಿ ಅಧಿಕಾರಿಗಳು ಏನೇ ಹೇಳಿದರೂ ಕೇಳದ ಎಸ್‍ಪಿ ಮಾತ್ರ ಪ್ರತಿ ದಿನ ಅಕ್ರಮ ಮದ್ಯ ಮಾರಾಟದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದ್ದು, ಪ್ರತಿದಿನ ಹತ್ತಾರು ಕೇಸ್ ದಾಖಲಾಗುತ್ತಿವೆ.

  • ಡ್ಯಾನ್ಸ್ ಬಾರ್‌ಗಳ ಮೇಲೆ ಸಿಸಿಬಿ ದಾಳಿ – 74 ಮಹಿಳೆಯರ ರಕ್ಷಣೆ

    ಡ್ಯಾನ್ಸ್ ಬಾರ್‌ಗಳ ಮೇಲೆ ಸಿಸಿಬಿ ದಾಳಿ – 74 ಮಹಿಳೆಯರ ರಕ್ಷಣೆ

    ಬೆಂಗಳೂರು: ಡ್ಯಾನ್ಸ್ ಬಾರ್‌ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 74 ಮಹಿಳೆಯರ ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

    ದೊಮ್ಮಲೂರು ರಿಂಗ್ ರಸ್ತೆಯ ಚೆಪ್ ಇನ್ ರಿಜೆನ್ಸಿ ಬಾರ್ ಮೇಲೆ ಸಿಸಿಬಿ ದಾಳಿ ಮಾಡಿದೆ. ಬಂಧಿತರನ್ನು ಡ್ಯಾನ್ಸ್ ಬಾರ್ ಮ್ಯಾನೇಜರ್ ದಿನೇಶ್, ದಿನೇಶ್ ಕುಮಾರ್, ರಿಯಾಜುದ್ದೀನ್, ಪ್ರಕಾಶ್ ದತ್ ಹೆಗ್ಯಾರಾಜ್ ಎಂದು ಗುರುತಿಸಲಾಗಿದೆ.

    ಇದೊಂದು ಡ್ಯಾನ್ಸ್ ಬಾರಾಗಿದ್ದು, ಕಾನೂನು ಬಾಹಿರವಾಗಿ ಬಾರ್ ನಡೆಸಲಾಗುತ್ತಿದೆ. ಇಲ್ಲಿ ಮಹಿಳೆಯರಿಂದ ಅಶ್ಲೀಲ ಡ್ಯಾನ್ಸ್ ಮಾಡಿಸುತ್ತಿದ್ದರು. ಬಂಧಿತ ಆರೋಪಿಗಳಿಂದ ಒಂದು ಲಕ್ಷ ನಗದನ್ನು ವಶ ಪಡಿಸಿಕೊಂಡಿದ್ದಾರೆ.

    ಇಲ್ಲಿ ಡ್ಯಾನ್ಸ್ ಮಾಡುವ ಮಹಿಳೆಯರು ಹೊಟ್ಟೆ ಪಾಡಿಗಾಗಿ ಬಂದು ಡ್ಯಾನ್ಸ್ ಮಾಡುತ್ತಿದ್ದರು. ಯಾರು ಕೂಡ ಬಲವಂತವಾಗಿ ಬಂದಿರಲಿಲ್ಲ. ಈ ವೇಳೆ ಡ್ಯಾನ್ಸ್ ಬಾರ್ ಮ್ಯಾನೇಜರ್ ಹಣದ ಆಸೆ ತೋರಿಸಿ ಅವರಿಂದ ಅಶ್ಲೀಲವಾಗಿ ಹಾಗೂ ಕಾನೂನು ಬಾಹಿರವಾಗಿ ಬಾರ್ ನಡೆಸುತ್ತಿದ್ದನು ಎಂದು ತಿಳಿದು ಬಂದಿದೆ.

    ಖಚಿತ ಮಾಹಿತಿ ಮೇರೆಗೆ ಸಿಸಿಬಿ ಅವರು ದಾಳಿ ಮಾಡಿದ್ದು, ಇದೀಗ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಸದ್ಯಕ್ಕೆ ಸಿಸಿಬಿ ಪೊಲೀಸರು ಈ ಸಂಬಂಧ ಐವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವೈದ್ಯಾಧಿಕಾರಿಗಳಿಂದ ವಸಂತನಗರ ಡರ್ಟಿ ಕಿಚನ್ ಮೇಲೆ ದಾಳಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವೈದ್ಯಾಧಿಕಾರಿಗಳಿಂದ ವಸಂತನಗರ ಡರ್ಟಿ ಕಿಚನ್ ಮೇಲೆ ದಾಳಿ

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆನ್‍ಲೈನ್ ಫುಡ್ ಆರ್ಡರ್ ಮಾಫಿಯಾ ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಬಗ್ಗೆ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಡೆಸಿತ್ತು. ಈ ಡರ್ಟಿ ಕಿಚನ್‍ಗಳ ಬಗ್ಗೆ ಇಂದು ಬೆಳಗ್ಗಿನಿಂದಲೇ ವಿಸ್ತೃತವಾದ ವರದಿ ಕೂಡ ಪ್ರಸಾರ ಮಾಡಿತ್ತು. ಈ ಸುದ್ದಿ ಪ್ರಸಾರವಾದ ಬೆನ್ನಲ್ಲೇ ವಸಂತನಗರದ ವೈದ್ಯಾಧಿಕಾರಿಗಳು ಎಚ್ಚೆತ್ತು ದಾಳಿ ಮಾಡಿದ್ದಾರೆ.

    ಬೆಂಗಳೂರಿನ ವಸಂತನಗರ ತಡ್ಕವಾಲಾ, ಬನ್ನೆರುಗಟ್ಟದ ಶುದ್ಧ್ ದೇಸಿ ಖಾನ, ಲೆಟ್ ನೈಟ್ ಕಿಚನ್‍ಗಳಿಂದ ಅರ್ಧ ಬೆಂಗಳೂರಿಗೆ ಫುಡ್ ಡೆಲಿವರಿ ಆಗುತ್ತಿತ್ತು. ಆದರೆ ಇಲ್ಲಿ ಸ್ವಚ್ಛತೆ ಅನ್ನೋದೇ ಇರಲಿಲ್ಲ. ಅದರಲ್ಲೂ ವಸಂತನಗರ ತಡ್ಕವಾಲಾ ಕಿಚನ್‍ನಲ್ಲಿ ಟಾಯ್ಲೆಟ್ ರೂಮಿನಲ್ಲಿ ಕಡಾಯಿ ಇಟ್ಟುಕೊಂಡು ಅಡುಗೆ ಮಾಡಲಾಗುತ್ತಿತ್ತು. ಇದೀಗ ಈ ಡರ್ಟಿ ಕಿಚನ್‍ನ ಮೇಲೆ ಪಾಲಿಕೆಯ ವೈದ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡೋ ಮುನ್ನ ಹುಷಾರ್

    ಸುದ್ದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ರೇಡ್ ಮಾಡಿ ವಸಂತನಗರದ ತಡ್ಕವಾಲಾ ಡರ್ಟಿ ಕಿಚನ್‍ಗೆ ಶಿವಾಜಿನಗರದ ಆರೋಗ್ಯ ವೈದ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ವಸಂತನಗರ ಹೆಲ್ತ್ ಇನ್ಸ್ ಪೆಕ್ಟರ್ ರೇಣುಕಾಂಬ, ಹಿರಿಯ ಆರೋಗ್ಯ ಪರಿವೀಕ್ಷಕರು ಹಾಗೂ ಸಿಬ್ಬಂದಿ ಕೂಡ ಇದ್ದರು.

    ದಾಳಿ ವೇಳೆ ಕಿಚನ್‍ನಲ್ಲಿ ಸಿಕ್ಕಿದ ಪ್ಲಾಸ್ಟಿಕ್ ಹಾಗೂ ಕೊಳೆತ ವಸ್ತುಗಳು, ಅವಧಿ ಮುಗಿದ ಚಿಲ್ಲಿ, ಟೊಮೆಟೋ ಸಾಸ್ ಮೊದಲಾದವುಗಳನ್ನು ವೈದ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವೈದ್ಯಾಧಿಕಾರಿಗಳ ದಾಳಿಯಿಂದ ಸಿಬ್ಬಂದಿ ಹೆದರಿದ್ದು, ಈ ಬಗ್ಗೆ ಮಾಹಿತಿ ತಿಳಿದರೂ ಕಿಚನ್ ಮಾಲೀಕ ಮಾತ್ರ ಸ್ಥಳಕ್ಕೆ ಬಂದಿಲ್ಲ.