Tag: ರೇಣುಕಾಸ್ವಾಮಿ

  • ನಟ ದರ್ಶನ್‌ಗೆ ಇನ್ಮುಂದೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ – ಹೈಕೋರ್ಟ್ ಆದೇಶ

    ನಟ ದರ್ಶನ್‌ಗೆ ಇನ್ಮುಂದೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ – ಹೈಕೋರ್ಟ್ ಆದೇಶ

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಹೋಗದಂತೆ ನಟ ದರ್ಶನ್‌ಗೆ (Darshan) ವಿಧಿಸಿದ್ದ ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ಕೊಡಲಾಗಿದೆ.

    ಹೈಕೋರ್ಟ್‌ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಓಡಾಡಲು ಅವಕಾಶ ನೀಡಿದೆ. ವಿದೇಶಕ್ಕೆ ಹೋಗುವಂತಿಲ್ಲ ಅಂತಾ ಆದೇಶ ಹೊರಡಿಸಿದೆ. ಇದನ್ನೂ ಓದಿ: ಸಿನಿಮಾ ಶೂಟಿಂಗ್‌ಗೆ ಸಜ್ಜಾದ ನಟ ದರ್ಶನ್ – ಅವಕಾಶ ಕೋರಿ ಮುಂದಿನ ವಾರ ಕೋರ್ಟ್ ಮೊರೆ

    ದರ್ಶನ್ ಹೈಕೋರ್ಟ್‌ಗೆ ಕೊಟ್ಟ ಕಾರಣಗಳೇನು?
    * ವೃತ್ತಿಯಲ್ಲಿ ನಾನೊಬ್ಬ ನಟ ಹಾಗೂ ಮೈಸೂರಿನ ಖಾಯಂ ನಿವಾಸಿ
    * ವೃತ್ತಿಪರ ಕಾರಣಗಳು ಹಾಗೂ ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಹೊರಗೆ ಹೋಗುವುದು ಯಾವಾಗಲೂ ಅವಶ್ಯವಿರುತ್ತದೆ
    * ಆದರೆ, ಈ ಕೋರ್ಟ್ ವಿಚಾರಣಾ ನ್ಯಾಯಲಯದ ವ್ಯಾಪ್ತಿ ಬಿಡದಂತೆ ಷರತ್ತು ವಿಧಿಸಿದೆ
    * ಇದರಿಂದಾಗಿ ವಿಚಾರಣಾ ನ್ಯಾಯಾಲಯದಲ್ಲಿ ಪ್ರತಿ ಬಾರಿ ಅನುಮತಿ ಪಡೆಯುವುದು ಕಠಿಣವಾಗಿದೆ
    * ನನಗೆ ಕೇವಲ ರಾಜ್ಯದ ಹೊರಗೆ ಹೋಗುವುದಲ್ಲದೇ ವಿದೇಶಕ್ಕೆ ಹೋಗುವುದು ಅವಶ್ಯವಿದೆ
    * ಇಷ್ಟು ಅಂಶಗಳನ್ನ ನ್ಯಾಯಾಲಯದ ಮುಂದಿಟ್ಟಿದ್ದ ನಟ ದರ್ಶನ್
    * ಸದ್ಯ ದರ್ಶನ್ ಅರ್ಜಿಯನ್ನ ಪುರಸ್ಕರಿಸಿರುವ ಹೈಕೋರ್ಟ್ ಏಕಸದಸ್ಯ ಪೀಠ
    * ದೇಶದಾದ್ಯಂತ ಓಡಾಡಲು ಅನುಮತಿ ನೀಡಿ ಆದೇಶ ನೀಡಿರುವ ಕೋರ್ಟ್

  • ಸಿನಿಮಾ ಶೂಟಿಂಗ್‌ಗೆ ಸಜ್ಜಾದ ನಟ ದರ್ಶನ್ – ಅವಕಾಶ ಕೋರಿ ಮುಂದಿನ ವಾರ ಕೋರ್ಟ್ ಮೊರೆ

    ಸಿನಿಮಾ ಶೂಟಿಂಗ್‌ಗೆ ಸಜ್ಜಾದ ನಟ ದರ್ಶನ್ – ಅವಕಾಶ ಕೋರಿ ಮುಂದಿನ ವಾರ ಕೋರ್ಟ್ ಮೊರೆ

    – ಅನುಮತಿ ಸಿಕ್ಕರೆ ಚಿತ್ರೀಕರಣದಲ್ಲಿ ಭಾಗಿ

    ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಜಾಮೀನು ಪಡೆದು ನಿರಾಳಾರಾಗಿದ್ದಾರೆ. ಸಿನಿಮಾ ಶೂಟಿಂಗ್‌ಗೆ ಸಜ್ಜಾಗಿರುವ ದರ್ಶನ್, ಅವಕಾಶ ಕೋರಿ ಮುಂದಿನ ವಾರ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

    ನಟ ದರ್ಶನ್ ತಮ್ಮ ಕಾನೂನು ಹೋರಾಟ ಮುಂದುವರೆಸಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆಯೂ ಬಾಕಿ ಇದೆ. ಈ ನಡುವೆ ದರ್ಶನ್ ತಮ್ಮ ವೃತ್ತಿ ಜೀವನಕ್ಕೆ ಕಿಕ್ ಸ್ಟಾರ್ಟ್ ಕೊಡಲು ತಯಾರಿ ಆಗಿದ್ದಾರೆ. ಕಳೆದ ಜೂನ್‌ನಲ್ಲಿ ನಿಂತು ಹೋಗಿದ್ದ ಚಲನಚಿತ್ರದ ಶೂಟಿಂಗ್ ಪ್ರಾರಂಭಿಸುವ ಎಲ್ಲಾ ತಯಾರಿ ಮಾಡಿದ್ದಾರೆ.

    ಮುಂದಿನ ವಾರ ಕೋರ್ಟ್‌ನಲ್ಲಿ ಅನುಮತಿ ಕೋರಲಿದ್ದಾರೆ. ಬೆಂಗಳೂರು ಬಿಟ್ಟು ಹೊರಗೆ ಹೋಗಬೇಕಾದರೆ ಕೋರ್ಟ್ ಅನುಮತಿ ಕಡ್ಡಾಯ ಆಗಲಿದೆ. ಹೀಗಾಗಿ, ಕೋರ್ಟ್‌ಗೆ ಮಾಹಿತಿ ನೀಡಿ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.

    ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳು ಜೈಲು ಶಿಕ್ಷೆ ಅನುಭವಿಸಿದ್ದರು. ಸದ್ಯ ಜಾಮೀನಿನ ಮೇಲೆ ಆರೋಪಿಗಳು ಹೊರಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ವಿಚಾರಣೆ ನಡೆಸಿ ಕೋರ್ಟ್‌, ಏ.8 ಕ್ಕೆ ವಿಚಾರಣೆ ಮುಂದೂಡಿದೆ.

  • ಕೋರ್ಟ್ ಹಾಲ್‌ನಲ್ಲಿ ಪವಿತ್ರಾ, ದರ್ಶನ್ ದೂರ ದೂರಾ – ಕಣ್ಣೀರಿಡುತ್ತ ತೆರಳಿದ ಗೆಳತಿ!

    ಕೋರ್ಟ್ ಹಾಲ್‌ನಲ್ಲಿ ಪವಿತ್ರಾ, ದರ್ಶನ್ ದೂರ ದೂರಾ – ಕಣ್ಣೀರಿಡುತ್ತ ತೆರಳಿದ ಗೆಳತಿ!

    ಬೆಂಗಳೂರು: ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ (Darshan) ಹಾಗೂ ಪವಿತ್ರಾಗೌಡ (Pavithra Gowda) ಇಂದು (ಫೆ.25) ಕೋರ್ಟ್‌ಗೆ ಹಾಜರಾಗಿದ್ದರು. ಈ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ಕೋರ್ಟ್ ನಲ್ಲಿ ದೂರ ದೂರ ನಿಂತಿದ್ದರು.

    ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಕೋರ್ಟ್ ಕಲಾಪಕ್ಕೂ 10 ನಿಮಿಷ ಮೊದಲೇ ಕೋರ್ಟ್‌ನಲ್ಲಿ ಹಾಜರಾಗಿದ್ದರು. ದರ್ಶನ್ ಬರುವುದು ತಡವಾದ ಹಿನ್ನೆಲೆ 10 ನಿಮಿಷ ಕಲಾಪ ಮುಂದೂಡುವಂತೆ ದರ್ಶನ್ ಪರ ವಕೀಲರು ‌ಮನವಿ ಮಾಡಿದರು. ದರ್ಶನ್ ಬರುತ್ತಿದ್ದಂತೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರು, ಎಲ್ಲರ ಹಾಜರಾತಿಯನ್ನ ಖಾತರಿಪಡಿಸಿಕೊಂಡ್ರು. ಪ್ರಕರಣದ ಆರೋಪಿಗಳಾದ ನಿಖಿಲ್ ಮತ್ತು ಕೇಶವಮೂರ್ತಿ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಕೋರ್ಟ್‌ನಲ್ಲಿ ಹಾಜರಿದ್ದರು. ಇದನ್ನೂ ಓದಿ:

    ಬೆನ್ನು ನೋವು ಶಮನವಾಗದ ಹಿನ್ನೆಲೆ ಕುಂಟುತ್ತಲೇ ಕೋರ್ಟ್ ಹಾಲ್‌ಗೆ ದರ್ಶನ್ ಬಂದಿದ್ದಾರೆ. ಈ ವೇಳೆ ಪವಿತ್ರಾಗೌಡ, ದರ್ಶನ್ ಕಡೆ ನೋಡಿದರೂ, ದರ್ಶನ್ ಅವರ ಕಡೆ ನೋಡಲೇ ಇಲ್ಲ. ಅಲ್ಲದೇ ಕೋರ್ಟ್‌ನಲ್ಲಿ ಬೇರೆ ಕಡೆ ಕುಳಿತುಕೊಂಡ್ರು. ಇತರ ಆರೋಪಿಗಳ ಜೊತೆ ಮಾತನಾಡಿದ ದರ್ಶನ್, ಪವಿತ್ರಾಗೌಡಳನ್ನ ಮಾತನಾಡಿಸಲೇ ಇಲ್ಲ. ಈ ಮೂಲಕ ಅಂತರವನ್ನು ಕಾಯ್ದುಕೊಳ್ಳುವ ಯತ್ನವನ್ನು ದರ್ಶನ್ ಮಾಡಿದ್ರು. ಕೋರ್ಟ್ ವಿಚಾರಣೆ ಮುಗಿದ ಬಳಿಕ ಪವಿತ್ರಾ ಹೋಗುವವರೆಗೂ ದರ್ಶನ್ ಕೋರ್ಟ್ ಹಾಲ್‌ನಲ್ಲಿಯೇ ಇದ್ದು, ಬಳಿಕ ಕೋರ್ಟ್ ಹಾಲ್‌ನಿಂದ ಹೋಗಿದ್ದಾರೆ. ಇನ್ನೂ ಪವಿತ್ರಾಗೌಡ ಅಳುತ್ತಾ ಕೋರ್ಟ್‌ನಿಂದ ಮನೆ ಕಡೆ ಹೊರಟಿದ್ದಾರೆ.

    ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲ ಸುನೀಲ್, ಪೊಲೀಸರು ಪ್ರಕರಣದ ಇತರ ಆರೋಪಿಗಳನ್ನು ಮಾಫಿ ಸಾಕ್ಷಿಯಾಗುವಂತೆ, ಒತ್ತಡ ಬೆದರಿಕೆ ಹಾಕ್ತಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಪ್ರಮುಖವಾಗಿ ನಾಲ್ವರು ಆರೋಪಿಗಳನ್ನು ಮಾಫಿ ಸಾಕ್ಷಿಯಾಗುವಂತೆ ಬೆದರಿಕೆ ಹಾಕ್ತಿದ್ದಾರೆ. ಸಾಕಷ್ಟು ಸಾಕ್ಷಿಗಳಿದ್ದು, ಮಾಫಿ ಸಾಕ್ಷಿಯಾದ್ರೆ ಕೇಸ್‌ನಿಂದ ಖುಲಾಸೆ ಮಾಡಿಕೊಡೊದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಿದ್ರು. ಪ್ರತ್ಯೇಕ ಅರ್ಜಿ ಹಾಕಿದರೆ ವಾದಕ್ಕೆ ಅವಕಾಶ ಮಾಡಿಕೊಡೋದಾಗಿ ತಿಳಿಸಿ, ಮಾ.8ಕ್ಕೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿತು. ಇದನ್ನೂ ಓದಿ: ಪಂಜಾಬ್‌ನ ಆಪ್‌ ಸರ್ಕಾರದಿಂದ ಬುಲ್ಡೋಜರ್ ಅಸ್ತ್ರ – ಡ್ರಗ್ ಮಾಫಿಯಾ ಕಿಂಗ್‌ಗಳ ಮನೆ ನೆಲಸಮ

  • ಶಾಸ್ತ್ರೋಕ್ತವಾಗಿ ನೆರವೇರಿದ ರೇಣುಕಾಸ್ವಾಮಿ ಪುತ್ರನ ನಾಮಕರಣ – ಹೆಸರೇನು ಗೊತ್ತಾ?

    ಶಾಸ್ತ್ರೋಕ್ತವಾಗಿ ನೆರವೇರಿದ ರೇಣುಕಾಸ್ವಾಮಿ ಪುತ್ರನ ನಾಮಕರಣ – ಹೆಸರೇನು ಗೊತ್ತಾ?

    ಚಿತ್ರದುರ್ಗ: ನಟ ದರ್ಶನ್ (Darshan) & ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ (Renukaswamy) ಪುತ್ರನ ನಾಮಕರಣವು (Naming Ceremony) ಚಿತ್ರದುರ್ಗದ (Chitradurga) ವಿಆರ್‌ಡಸ್ ಬಡಾವಣೆಯ ನಿವಾಸದಲ್ಲಿ ಶಾಸ್ತ್ರೋಕ್ತವಾಗಿ ನೆರೆವೇರಿತು.

    ರೇಣುಕಾಸ್ವಾಮಿ ಹತ್ಯೆ ಬಳಿಕ ಕುಟುಂಬಸ್ಥರು ಕಂಗಾಲಾಗಿದ್ದರು. ಕೊಲೆಯಾದಾಗ ರೇಣುಕಾಸ್ವಾಮಿ ಪತ್ನಿ ಸಹನಾ 5 ತಿಂಗಳ ಗರ್ಭಿಣಿಯಾಗಿದ್ದರು. ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಹಾಗೂ ತಾಯಿ ರತ್ನಪ್ರಭ ಮೊಮ್ಮಗನನ್ನು ಎತ್ತಿಕೊಂಡು ಮುದ್ದಾಡಿದ್ದರು. ಮಗನ ತದ್ರೂಪಿಯಾದ ಮೊಮ್ಮನಿಗೆ ಮುತ್ತಿಟ್ಟು ಕಾಶಿನಾಥ್ ಶಿವನ ಗೌಡ ಸಂಭ್ರಮಿಸಿದರು. ಇದನ್ನೂ ಓದಿ: Grand Championship | ಭಾರತ ತಂಡ ಪ್ರತಿನಿಧಿಸುತ್ತಿರೋ ಎನ್‍ಎಫ್‍ಸಿ ಕ್ಲಬ್

    ಜಂಗಮ ಸಂಪ್ರದಾಯದಂತೆ ನಾಮಕರಣ ಶಾಸ್ತ್ರ ನೆರವೇರಿಸಿದರು. ಮನೆ ಮುಂದೆ ತೊಟ್ಟಿಲು ಇಟ್ಟು ಸಿದ್ಧತೆ ನಡೆಸಿದ್ದು, ಕುಟುಂಬದ ಬಂಧುಗಳ ಸಮ್ಮುಖದಲ್ಲಿ ಮಗುವಿನ ನಾಮಕರಣ ಶಾಸ್ತ್ರ ನೆರವೇರಿತು. ಇದನ್ನೂ ಓದಿ: Champions Trophy 2025 | ಭಾರತದ ಗೆಲುವಿಗೆ ಕ್ರೀಡಾಭಿಮಾನಿಗಳಿಂದ `ಬೆಸ್ಟ್ ಆಫ್ ಲಕ್’

    ರೇಣುಕಾಸ್ವಾಮಿ ಪುತ್ರನಿಗೆ `ಶಶಿಧರ್ ಸ್ವಾಮಿ’ ಎಂದು ರೇಣುಕಾಸ್ವಾಮಿ ಸಹೋದರಿ ಸುಚೇತ ಮಗುವಿಗೆ ಹೆಸರಿಟ್ಟರು. ಮಗುಗೆ ಜೇನುತುಪ್ಪ ತಿನ್ನಿಸಿ ನಾಮಕರಣ ನೆರವೇರಿಸಿದ ಸುಚೇತ, ಮಗುವಿನ ಕಿವಿಯಲ್ಲಿ ಹೆಸರು ಹೇಳಿದರು. ಇದನ್ನೂ ಓದಿ: Champions Trophy 2025 | ಆಲ್ ದಿ ಬೆಸ್ಟ್ ಟೀಂ ಇಂಡಿಯಾ – ನಾಡಿನಾದ್ಯಂತ ಅಭಿಮಾನಿಗಳಿಂದ ಶುಭ ಹಾರೈಕೆ

    ಮೊಮ್ಮಗ ಶಶಿಧರ್ ಸ್ವಾಮಿ ಕೈ ಬೆರಳಿಗೆ ಉಂಗುರ ಹಾಕಿ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನ ಗೌಡ ಸಂಭ್ರಮಿಸಿದರು. ರತ್ನಪ್ರಭ ಮೊಮ್ಮಗನಿಗೆ ಬೆಳ್ಳಿ ಉಡುದಾರ ಹಾಕಿದರು. ಮಗುವನ್ನು ತೊಟ್ಟಿಲಿಗೆ ಹಾಕಿ ತೊಟ್ಟಿಲು ಶಾಸ್ತ್ರ ನೆರೆವೇರಿಸಿದ್ದು, ಕಾರ್ಯಕ್ರಮದಲ್ಲಿ ಬಂಧು ಮಿತ್ರರು ಭಾಗಿಯಾಗಿದ್ದರು.

  • ಕೋರ್ಟ್‌ನಿಂದ ರಿಲೀಫ್‌ ಸಿಕ್ಕಿದ ಬೆನ್ನಲ್ಲೇ ಶಿರಡಿಗೆ ತೆರಳಿದ ಪವಿತ್ರಾ ಗೌಡ

    ಕೋರ್ಟ್‌ನಿಂದ ರಿಲೀಫ್‌ ಸಿಕ್ಕಿದ ಬೆನ್ನಲ್ಲೇ ಶಿರಡಿಗೆ ತೆರಳಿದ ಪವಿತ್ರಾ ಗೌಡ

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಕೋರ್ಟ್‌ನಿಂದ ರಿಲೀಫ್‌ ಸಿಕ್ಕಿದ ಬೆನ್ನಲ್ಲೇ ಎ1 ಆರೋಪಿ ಪವಿತ್ರಾ ಗೌಡ (Pavithra Gowda) ಟೆಂಪಲ್‌ ರನ್‌ ಮಾಡಿದ್ದು ಶಿರಡಿ ಸಾಯಿಬಾಬಾ ದೇವಾಲಯ (Sri Shirdi Sai Baba Temple) ಹೋಗಿದ್ದಾರೆ.

    ಶಿರಡಿಗೆ ತೆರಳಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಓಂ ಶ್ರೀ ಸಾಯಿ ರಾಮ್ ಎಂದು ಎಂದು ಪವಿತ್ರಾ ಗೌಡ ಪೋಸ್ಟ್‌ ಹಾಕಿದ್ದಾರೆ. ಇದನ್ನೂ ಓದಿ: ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್‌

    ಹೊರರಾಜ್ಯಗಳ ದೇವಸ್ಥಾನದ ಭೇಟಿಗಾಗಿ ಪವಿತ್ರಾ ಗೌಡ ಕೋರ್ಟ್‌ (Bengaluru Court) ಮೊರೆ ಹೋಗಿದ್ದರು. ಕೋರ್ಟ್‌ನಿಂದ ಅನುಮತಿ ಸಿಕ್ಕಿದ ಹಿನ್ನೆಲೆಯಲ್ಲಿ ಪವಿತ್ರಾ ಗೌಡ ಟೆಂಪಲ್‌ ರನ್‌ ಮಾಡುತ್ತಿದ್ದಾರೆ.

    ಜ.10 ರಂದು ಬೆಂಗಳೂರಿನ 57ನೇ ಸಿಸಿಹೆಚ್‌ ನ್ಯಾಯಾಧೀಶರ ಮುಂದೆ ಪವಿತ್ರಾ ಗೌಡ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಹಾಜರಾಗಿದ್ದರು. ಈ ವೇಳೆ ಪವಿತ್ರಾ ಪರ ವಕೀಲರು ದೇವಸ್ಥಾನ ಮತ್ತು ವ್ಯವಹಾರ ಸಂಬಂಧ ಒಂದು ತಿಂಗಳ ಕಾಲ ಹೊರ ರಾಜ್ಯಕ್ಕೆ ತೆರಳಲು ಅನುಮತಿ ಕೇಳಿದ್ದರು. ಇದನ್ನೂ ಓದಿ: ಕಗ್ಗಲೀಪುರದಲ್ಲಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ?

    ಆರ್ ಆರ್ ನಗರದಲ್ಲಿ ಇರುವ ರೆಡ್ ಕಾರ್ಪೆಟ್ ಶೋ ರೂಂಗೆ ಸಂಬಂಧಿಸಿದಂತೆ ವಸ್ತುಗಳನ್ನು ಹೊರ ರಾಜ್ಯದಿಂದ ತರಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ್ದ ಕೋರ್ಟ್‌ ಮುಂಬೈ ಮತ್ತು ದೆಹಲಿಗೆ ತೆರಳಲು ಪವಿತ್ರಾ ಗೌಡಗೆ ಅನುಮತಿ ನೀಡಿತ್ತು.

    ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್‌ ಡಿ. 13 ರಂದು ಜಾಮೀನು ಮಂಜೂರು ಮಾಡಿತ್ತು. ಆದೇಶದಲ್ಲಿ ಏಳು ಆರೋಪಿಗಳಿಗೆ ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು (Bengaluru) ಬಿಟ್ಟು ಹೋಗುವಂತಿಲ್ಲ. ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು.

  • ದರ್ಶನ್‌ ಜಾಮೀನು ರದ್ದುಗೊಳಿಸಿ – ಸುಪ್ರೀಂಗೆ 1492 ಪುಟಗಳ ದಾಖಲೆ ಸಲ್ಲಿಸಿದ ಪೊಲೀಸರು

    ದರ್ಶನ್‌ ಜಾಮೀನು ರದ್ದುಗೊಳಿಸಿ – ಸುಪ್ರೀಂಗೆ 1492 ಪುಟಗಳ ದಾಖಲೆ ಸಲ್ಲಿಸಿದ ಪೊಲೀಸರು

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ ದರ್ಶನ್‌ಗೆ (Darshan) ಸಂಕಷ್ಟ ತಪ್ಪಿದಂತೆ ಕಾಣ್ತಿಲ್ಲ. ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆ (Supreme Court) ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ.

    ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿದೆ. ಇದನ್ನೂ ಓದಿ: ಮದುವೆಯಾಗಿ 2 ವರ್ಷಕ್ಕೆ ಡಿವೋರ್ಸ್ ಘೋಷಿಸಿದ ನಟಿ ಅಪರ್ಣಾ ವಿನೋದ್

    ಕಡತದಲ್ಲಿ ಏನಿದೆ?
    ಹೈಕೋರ್ಟ್ ಜಾಮೀನು ಆದೇಶ, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಮತ್ತು ದೂರಿನ ಪ್ರತಿ, ಮರಣೋತ್ತರ ಪರೀಕ್ಷೆಯ ವರದಿ, ಆರೋಪಿಗಳ ಗ್ರೌಂಡ್ಸ್ ಆಫ್ ಅರೆಸ್ಟ್, ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯ ತರ್ಜುಮೆ ಪ್ರತಿ.

    ಪ್ರತ್ಯಕ್ಷ ದರ್ಶಿಗಳ ಹೇಳಿಕೆಯ ತರ್ಜುಮೆ ಕಾಪಿ, ಮರಣೋತ್ತರ ಪರೀಕ್ಷೆಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಡಿಆರ್, ಪಂಚನಾಮೆ ವರದಿ, ಆರೋಪಿಗಳ ಬಳಿ ವಶಪಡಿಸಿಕೊಂಡ ಡಿಜಿಟಲ್ ವಸ್ತುಗಳ ವಿಶ್ಲೇಷಣೆ ವರದಿ.

    ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆದೇಶ ಪ್ರತಿ, ದರ್ಶನ್‌ಗೆ ನೀಡಿದ್ದ ಮಧ್ಯಂತರ ಜಾಮೀನು ಅದೇಶ ಪ್ರತಿ, ಜೈಲಿನಿಂದ ದರ್ಶನ್ ಬಗ್ಗೆ ಸಲ್ಲಿಕೆಯಾದ ವೈದ್ಯಕೀಯ ವರದಿ, ಬಿಜಿಎಸ್ ಆಸ್ಪತ್ರೆ ವೈದ್ಯರ ವರದಿ ಸೇರಿದಂತೆ ಒಟ್ಟು 15 ಅಂಶಗಳಿಗೆ ಸಂಬಂಧಿಸಿ  ಒಟ್ಟು 1492 ಪುಟಗಳ ಕಡತವನ್ನು  ಕೋರ್ಟ್‌ಗೆ ನೀಡಿದೆ.

     

  • ಹೊರ ರಾಜ್ಯದ ದೇವಸ್ಥಾನಕ್ಕೆ ತೆರಳಲು ಅನುಮತಿ ನೀಡಿ – ಪವಿತ್ರಾ ಗೌಡ ಅರ್ಜಿ

    ಹೊರ ರಾಜ್ಯದ ದೇವಸ್ಥಾನಕ್ಕೆ ತೆರಳಲು ಅನುಮತಿ ನೀಡಿ – ಪವಿತ್ರಾ ಗೌಡ ಅರ್ಜಿ

    ಬೆಂಗಳೂರು: ಇಂದು ಕೋರ್ಟ್‌ಗೆ ಹಾಜರಾದ ಪವಿತ್ರಾ ಗೌಡ (Pavithra Gowda) ಹೊರ ರಾಜ್ಯದ ದೇವಸ್ಥಾನಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

    57ನೇ ಸಿಸಿಹೆಚ್‌ ನ್ಯಾಯಾಧೀಶರ ಮುಂದೆ ಪವಿತ್ರಾ ಪರ ವಕೀಲರು, ಹೊರ ರಾಜ್ಯದ ದೇವಸ್ಥಾನದಲ್ಲಿ (Temple) ಪೂಜೆ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡುವಂತೆ ಕೋರಿದರು.

    ಯಾವ ದೇವಸ್ಥಾನಕ್ಕೆ ತೆರಳಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿಲ್ಲ. ಈ ಅರ್ಜಿಯ ವಿಚಾರಣೆ ಸಮಯದಲ್ಲಿ ಯಾವ ರಾಜ್ಯದ ಯಾವ ದೇವಸ್ಥಾನಕ್ಕೆ ತೆರಳಲಿದ್ದಾರೆ ಎನ್ನುವುದು ತಿಳಿಯಲಿದೆ. ಸರ್ಕಾರಿ ವಕೀಲರುಈ ಅರ್ಜಿಗೆ ಪ್ರಬಲವಾಗಿ ಆಕ್ಷೇಪ ವ್ಯಕ್ತಪಡಿಸಿದರೆ ಕೋರ್ಟ್‌ ಈ ಅರ್ಜಿಯನ್ನು ತಿರಸ್ಕರಿಸಬಹುದು. ಇದನ್ನೂ ಓದಿ: ಕೋರ್ಟ್‌ನಲ್ಲಿ ಪವಿತ್ರಾ ಭಾವುಕ – ಬೆನ್ನುತಟ್ಟಿ ಸಂತೈಸಿದ ದರ್ಶನ್‌

    ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್‌ ಡಿ. 13 ರಂದು ಜಾಮೀನು ಮಂಜೂರು ಮಾಡಿತ್ತು. ಆದೇಶದಲ್ಲಿ ಏಳು ಆರೋಪಿಗಳಿಗೆ, ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು (Bengaluru) ಬಿಟ್ಟು ಹೋಗುವಂತಿಲ್ಲ. ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು.

    ಇಂದು ಏನಾಯ್ತು?
    ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು. ನಟ ದರ್ಶನ್ ಮಾತ್ರ ತುಸು ತಡವಾಗಿ ನ್ಯಾಯಾಲಯದ ಬಳಿ ಬಂದರು.  ಎಲ್ಲಾ ಆರೋಪಿಗಳು ಹಾಲ್‌ಗೆ ಬಂದ ನಂತರ ನ್ಯಾಯಾಧೀಶರು ಹಾಜರಿ ಪಡೆದರು.  ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ಫೆ. 25ಕ್ಕೆ ಮುಂದೂಡಿದ ಬಳಿಕ ಪವಿತ್ರಾ ಗೌಡ ಮತ್ತು ದರ್ಶನ್‌ ಕೋರ್ಟ್‌ನಿಂದ ಒಟ್ಟಿಗೆ ಹೊರಬಂದು ಪ್ರತ್ಯೇಕ ಕಾರಿನಲ್ಲಿ ತೆರಳಿದರು.

     

    ಜಾಮೀನು ಸಿಕ್ಕಿದರೂ ಇಲ್ಲಿಯವರೆಗೆ ಪವಿತ್ರಾಗೌಡ- ದರ್ಶನ್ ಭೇಟಿಯಾಗಿಲ್ಲ. ಈ ಹಿಂದೆ ಕೋರ್ಟ್‌ (Court) ವಿಚಾರಣೆಯ ಸಮಯದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮುಖಾಮುಖಿಯಾಗಿದ್ದೇ ಕೊನೆ. ಅದಾದ ಬಳಿಕ ದರ್ಶನ್ ಹಾಗೂ ಪವಿತ್ರಾ ದೂರವಾಗಿದ್ದರು.

     

  • 6 ತಿಂಗಳ ಬಳಿಕ ಮುಖಾಮುಖಿಯಾಗಲಿದ್ದಾರೆ ದರ್ಶನ್‌, ಪವಿತ್ರಾ ಗೌಡ

    6 ತಿಂಗಳ ಬಳಿಕ ಮುಖಾಮುಖಿಯಾಗಲಿದ್ದಾರೆ ದರ್ಶನ್‌, ಪವಿತ್ರಾ ಗೌಡ

    ಬೆಂಗಳೂರು: 6 ತಿಂಗಳ ಬಳಿಕ ನಟ ದರ್ಶನ್ (Darshan) ಮತ್ತು ಪವಿತ್ರಾ ಗೌಡ (Pavithra Gowda) ಕೋರ್ಟ್‌ನಲ್ಲಿ ಶುಕ್ರವಾರ (ಜ.10) ಮುಖಾಮುಖಿಯಾಗಲಿದ್ದಾರೆ.

    ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ  ಖುದ್ದು ಎಲ್ಲಾ ಆರೋಪಿಗಳ ಹಾಜರಾತಿಗೆ ಸೂಚನೆ ಇರುವ ಕಾರಣ ಸಿಸಿಎಚ್ 57ರ ಕೋರ್ಟ್‌ನಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಮುಖಾಮುಖಿಯಾಗಲಿದ್ದಾರೆ.

    ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು. ಆದರಂತೆ ಶುಕ್ರವಾರ  ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

     

    ಜಾಮೀನು ಸಿಕ್ಕಿದರೂ ಇಲ್ಲಿಯವರೆಗೆ ಪವಿತ್ರಾಗೌಡ- ದರ್ಶನ್ ಭೇಟಿಯಾಗಿಲ್ಲ. ಈ ಹಿಂದೆ ಕೋರ್ಟ್‌ (Court) ವಿಚಾರಣೆಯ ಸಮಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಮುಖಿಯಾಗಿದ್ದೇ ಕೊನೆ. ಅದಾದ ಬಳಿಕ ದರ್ಶನ್ ಹಾಗೂ ಪವಿತ್ರಾ ದೂರವಾಗಿದ್ದರು. ಇದನ್ನೂ ಓದಿ: ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ಆರೋಪ – ಚೆಮ್ಮನೂರ್‌ ಮಾಲೀಕ ಅರೆಸ್ಟ್‌

    ದರ್ಶನ್‌ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್‌ ಡಿ. 13 ರಂದು ಜಾಮೀನು ಮಂಜೂರು ಮಾಡಿತ್ತು. ಆದೇಶದಲ್ಲಿ ಏಳು ಆರೋಪಿಗಳಿಗೆ, ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು (Bengaluru) ಬಿಟ್ಟು ಹೋಗುವಂತಿಲ್ಲ ಎಂಬ ಷರತ್ತನ್ನು ವಿಧಿಸಿತ್ತು.

    ಜಾಮೀನು ಸಿಕ್ಕಿದ್ದು ಹೇಗೆ?
    ಜಾಮೀನು ಮೊದಲ ನಿಯಮ. ಆರೋಪಿಗಳಿಗೆ ಯಾವುದೇ ಅಪರಾಧಿಕ ಹಿನ್ನೆಲೆ ಇಲ್ಲ. ಆರೋಪಿಗಳು 6 ತಿಂಗಳಿನಿಂದ ಜೈಲಿನಲ್ಲಿ ಇದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಬಂಧನ ಮಾಡುವಾಗ ನಿಯಮಗಳ ಪಾಲನೆ ಆಗಿಲ್ಲ. ಬಂಧನ ವೇಳೆ ಆರೋಪಿಗೆ ಬಂಧನದ ಕಾರಣ ನೀಡಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ಆದೇಶವಿದೆ. ಆದರೆ ಈ ಪ್ರಕರಣದಲ್ಲಿ ಪೊಲೀಸರು ಗ್ರೌಂಡ್ಸ್ ಆಫ್ ಅರೆಸ್ಟ್ ಪಾಲಿಸಿಲ್ಲ. ಆರೋಪಿಗಳ ನಿರ್ದಿಷ್ಟ ಪಾತ್ರದ ಬಗ್ಗೆ ಸ್ಪಷ್ಟ ಉಲ್ಲೇಖವಿಲ್ಲ. ಪ್ರತ್ಯಕ್ಷದರ್ಶಿಗಳ ಹೇಳಿಕೆಯಲ್ಲೂ ವ್ಯತ್ಯಾಸ ಕಂಡು ಬಂದಿದೆ ಎಂದು ಅಭಿಪ್ರಾಯಪಟ್ಟು ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು.

     

  • ಯಾರು ಏನೇ ಹೇಳಿದ್ರೂ ಅಮ್ಮನೇ ನನ್ನ ಹೀರೋ: ಮಧ್ಯರಾತ್ರಿ ಅಮ್ಮನ ನೆನೆದ ಪವಿತ್ರಾ ಗೌಡ ಮಗಳು

    ಯಾರು ಏನೇ ಹೇಳಿದ್ರೂ ಅಮ್ಮನೇ ನನ್ನ ಹೀರೋ: ಮಧ್ಯರಾತ್ರಿ ಅಮ್ಮನ ನೆನೆದ ಪವಿತ್ರಾ ಗೌಡ ಮಗಳು

    – ಪವಿತ್ರಾ ಗೌಡ ಬಗ್ಗೆ ಕೆಟ್ಟ ಕಾಮೆಂಟ್ಸ್‌ಗೆ ಬೇಸರ ಹೊರಹಾಕಿದ ಪವಿತ್ರಾ ಪುತ್ರಿ

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿ ಬಳಿಕ ಜಾಮೀನಿನ ಮೇಲೆ ಹೊರಬಂದಿರುವ ಪವಿತ್ರಾ ಗೌಡ (Pavithra Gowda) ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವ್ಯಕ್ತವಾಗುತ್ತಿರುವ ಕಾಮೆಂಟ್‌ಗಳಿಗೆ ಪವಿತ್ರಾ ಗೌಡ ಮಗಳು ಖುಷಿ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಮಧ್ಯರಾತ್ರಿ ಅಮ್ಮನ ನೆನೆದು ಖುಷಿ ಗೌಡ ಸುದೀರ್ಘ ಪೋಸ್ಟ್‌ವೊಂದನ್ನು ಹಾಕಿದ್ದಾರೆ.

    ಪವಿತ್ರಾ ಗೌಡ ಬಗ್ಗೆ ಕೆಟ್ಟ ಕಾಮೆಂಟ್ಸ್‌ಗಳಿಗೆ ನಾನು ಕೇರ್ ಮಾಡೋದಿಲ್ಲ. ನಾನು ಈ ರೀತಿ ಬರೆಯಬೇಕು ಅಂತ ಎಂದಿಗೂ ಯೋಚಿಸಲಿಲ್ಲ. ಆದರೆ, ನಿಮ್ಮ ಕಟು ಮಾತುಗಳು ಗಾಯ ಮಾಡಿದೆ. ನನ್ನ ತಾಯಿಯ ಬಗ್ಗೆ ಅಶ್ಲೀಲ ಕಾಮೆಂಟ್ಸ್, ಎಷ್ಟು ಅಂತ ದ್ವೇಷ ನನ್ನ ಹೃದಯವನ್ನು ಚುಚ್ಚಿದೆ ಎಂದು ನೋವಿನಿಂದ ನುಡಿದಿದ್ದಾರೆ.

    ನಿಮಗ್ಯಾರಿಗೂ ಪವಿತ್ರಾ ಗೌಡ ಪರಿಚಯವಿಲ್ಲ. ಅಮ್ಮನ ಹೋರಾಟ, ತ್ಯಾಗಗಳು ನಿಮಗೆ ತಿಳಿದಿಲ್ಲ. ನನ್ನ ಅಮ್ಮ ಮೌನವಾಗಿ ಎದುರಿಸಿದ ಸವಾಲುಗಳು ನನಗೆ ಮಾತ್ರ ಗೊತ್ತು. ನನ್ನ ತಾಯಿ ನನ್ನ ಜಗತ್ತು, ನನ್ನ ಶಕ್ತಿ, ನನ್ನ ಸ್ಫೂರ್ತಿ ತಂದೆ ಜಾಗವನ್ನು ನನ್ನ ತಾಯಿ ತುಂಬಿಸಿದ್ದಾಳೆ ಎಂದು ತಾಯಿ ಪವಿತ್ರಾ ಗೌಡ ಕುರಿತು ಹೆಮ್ಮೆ ಪಟ್ಟಿದ್ದಾರೆ.

    ನಾನು ಇನ್ನು ಚಿಕ್ಕವಳು, ಇನ್ನೂ ಪ್ರಪಂಚವನ್ನು ಅರ್ಥ ಮಾಡಿಕೊಳ್ಳೋದಕ್ಕೆ ಪ್ರಯತ್ನಿಸುತ್ತಿದ್ದೇನೆ. ಈ ಭಾರವನ್ನು ಹೊರಲು ಅಗಾಧವಾಗಿದೆ. ನನ್ನ ತಾಯಿಗೆ ಯಾರನ್ನೂ ನೋಯಿಸುವ ಉದ್ದೇಶವಿಲ್ಲ. ಯಾರು ಏನೇ ಹೇಳಿದ್ರು ಅಮ್ಮನೇ ನನ್ನ ಹೀರೋ. ಹೀಗೆಂದು ಪವಿತ್ರಾ ಗೌಡ ಕುರಿತು ಸುದೀರ್ಘ ಪತ್ರ ಬರೆದು ಪವಿತ್ರಾಗೆ ಟ್ಯಾಗ್ ಮಾಡಿದ್ದಾರೆ ಪುತ್ರಿ ಖುಷಿ ಗೌಡ.

  • ಬೇಲ್‌ ಮೇಲಿರುವ ದರ್ಶನ್‌, ಗ್ಯಾಂಗ್‌ಗೆ ರಾಜ್ಯ ಸರ್ಕಾರ ಶಾಕ್‌!

    ಬೇಲ್‌ ಮೇಲಿರುವ ದರ್ಶನ್‌, ಗ್ಯಾಂಗ್‌ಗೆ ರಾಜ್ಯ ಸರ್ಕಾರ ಶಾಕ್‌!

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ವಿರುದ್ಧ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಲು ಸರ್ಕಾರ ಅಸ್ತು ಎಂದಿದೆ.

    ದರ್ಶನ್ ಜಾಮೀನು ರದ್ದಿಗೆ ಮೇಲ್ಮನವಿಗೆ ಸರ್ಕಾರ (Karnataka Government) ಗ್ರೀನ್ ಸಿಗ್ನಲ್ ನೀಡಿದೆ. ಮೇಲ್ಮನವಿ ಸಲ್ಲಿಕೆಗೆ ಗೃಹ ಇಲಾಖೆ ಅಧಿಕಾರಿಗಳಿಂದ ಪೊಲೀಸ್‌ ಇಲಾಖೆಗೆ ಆದೇಶ ಸಿಕ್ಕಿದೆ.

    ಬೆಂಗಳೂರು ಪೊಲೀಸರ (Bengalruu Police) ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು ಅನಿಲ್ ಸಿ ನಿಶಾನಿ ಹಾಗೂ ಹಿರಿಯ ವಕೀಲ ಸಿದ್ದಾರ್ಥ್ ಲುಥಾರ ಅವರನ್ನು ನೇಮಕ ಮಾಡಲಾಗಿದೆ.

    ರಾಜ್ಯ ಸರ್ಕಾರ ಅಸ್ತು ಹಿನ್ನಲೆ ಎರಡ್ಮೂರು ದಿನಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಸ್ಪೆಷಲ್‌ ಲೀವ್‌ ಪಿಟಿಷನ್‌ (SLP) ಸಲ್ಲಿಕೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮಹಿಳೆಯರನ್ನು ಉದ್ಯೋಗದಿಂದ ಕೈಬಿಡಿ – ಎನ್‌ಜಿಒಗಳಿಗೆ ತಾಲಿಬಾನ್‌ ಎಚ್ಚರಿಕೆ

    ಪವಿತ್ರಗೌಡ, ದರ್ಶನ್ ಸೇರಿದಂತೆ ಎಲ್ಲಾ 7 ಜನ ಆರೋಪಿಗಳ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಬೆಂಗಳೂರು ಪೊಲೀಸರು ತಯಾರಿ ನಡೆಸುತ್ತಿದ್ದಾರೆ.