Tag: ರೇವಂತ್ ರೆಡ್ಡಿ

  • ತೆಲಂಗಾಣ | ಜಾತಿಗಣತಿ ಆರಂಭಿಸಿದ ಕಾಂಗ್ರೆಸ್ ಸರ್ಕಾರ – 1.17 ಕೋಟಿ ಕುಟುಂಬಗಳ ಸಮೀಕ್ಷೆ

    ತೆಲಂಗಾಣ | ಜಾತಿಗಣತಿ ಆರಂಭಿಸಿದ ಕಾಂಗ್ರೆಸ್ ಸರ್ಕಾರ – 1.17 ಕೋಟಿ ಕುಟುಂಬಗಳ ಸಮೀಕ್ಷೆ

    ಹೈದರಾಬಾದ್‌: ತೆಲಂಗಾಣದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ (Revanth Reddy) ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ ಬಹುನಿರೀಕ್ಷಿತ ಜಾತಿ ಆಧಾರಿತ ಗಣತಿ (Caste Survey) ಕಾರ್ಯ ಆರಂಭಿಸಿದೆ.

    ಇದೊಂದು ಐತಿಹಾಸಿಕ ಮತ್ತು ಕ್ರಾಂತಿಕಾರಿ ಕ್ಷಣ ಅಂತ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ (Jairam Ramesh) ಬಣ್ಣಿಸಿದ್ದಾರೆ. ಇದನ್ನೂ ಓದಿ: ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ‘ಲಕ್ಕಿ’ ಕಾರ್ ಸಮಾಧಿ – ಅಂತ್ಯಸಂಸ್ಕಾರಕ್ಕೆ 4 ಲಕ್ಷ ಖರ್ಚು, 1,500 ಮಂದಿ ಭಾಗಿ

    ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೈರಾಮ್ ರಮೇಶ್, ಮುಂದಿನ ಕೆಲವು ವಾರಗಳಲ್ಲಿ 80,000 ಗಣತಿದಾರರು ಮನೆ ಮನೆಗಳಿಗೆ ತೆರಳಿ ಜಾತಿ ಗಣತಿ ಕಾರ್ಯ ಮಾಡಲಿದ್ದಾರೆ. 33 ಜಿಲ್ಲೆಗಳಲ್ಲಿ 1.17 ಕೋಟಿ ಕುಟುಂಬಗಳನ್ನು ಗಣತಿ ಮಾಡಲಿದ್ದಾರೆ ಅಂತ ತಿಳಿಸಿದ್ದಾರೆ.

    1931 ರಿಂದ ತೆಲಂಗಾಣದಲ್ಲಿ ಇದೇ ಮೊದಲ ಬಾರಿಗೆ ಜಾತಿ ಆಧಾರಿತ ಗಣತಿ ಕಾರ್ಯ ನಡೀತಿದೆ. ರಾಹುಲ್ ಗಾಂಧಿ ಹೇಳಿದಂತೆ ಜಾತಿಗಣತಿ ನಡೀತಿದ್ದು, ಇದು ದೇಶದ ಜಾತಿಗಣತಿಯ ನೀಲನಕ್ಷೆಯಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಐಸಿಸಿ ಟೂರ್ನಿಗಳಿಗೆ ಬಹಿಷ್ಕಾರ: ಪಾಕ್‌

    ಜಾತಿಗಣತಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗಿರುವ ಶೇ.50 ರಷ್ಟು ಮೀಸಲಾತಿಯ ಸುಪ್ರೀಂ ಕೋರ್ಟ್ ನಿರ್ಬಂಧವನ್ನು ರದ್ದುಗೊಳಿಸುವ ಕಾಂಗ್ರೆಸ್‌ಗೆ ದೂರ ದೃಷ್ಟಿಗೆ ಕೇಂದ್ರವಾಗಿದೆ ಅಂತಲೂ ಜೈರಾಮ್ ರಮೇಶ್ ಬಣ್ಣಿಸಿದ್ದಾರೆ. ಇದನ್ನೂ ಓದಿ: ನೀಟ್‌ ಆಕಾಂಕ್ಷಿಗಳ ಮೇಲೆ ವಿಜ್ಞಾನ ಶಿಕ್ಷಕರಿಂದ ತಿಂಗಳಾನುಗಟ್ಟಲೆ ರೇಪ್‌, ಬ್ಲ್ಯಾಕ್‌ಮೇಲ್‌ – ಕಾಮುಕರು ಅರೆಸ್ಟ್‌

  • ಸುಪ್ರೀಂ ಛೀಮಾರಿ ಹಾಕಿದ ಬೆನ್ನಲ್ಲೇ ಕ್ಷಮೆಯಾಚಿಸಿದ ರೇವಂತ್ ರೆಡ್ಡಿ

    ಸುಪ್ರೀಂ ಛೀಮಾರಿ ಹಾಕಿದ ಬೆನ್ನಲ್ಲೇ ಕ್ಷಮೆಯಾಚಿಸಿದ ರೇವಂತ್ ರೆಡ್ಡಿ

    ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ತೆಲಂಗಾಣ (Telangana) ಸಿಎಂ ರೇವಂತ್ ರೆಡ್ಡಿ (Revanth Reddy) ಕ್ಷಮೆಯಾಚಿಸಿದ್ದಾರೆ.

    ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಒಂದು ದಿನದ ಬಳಿಕ ಮುಖ್ಯಮಂತ್ರಿ ರೇವಂತ್ ರೆಡ್ಡಿ ತಪ್ಪೊಪ್ಪಿಕೊಂಡು ಕ್ಷಮೆ ಕೇಳಿದ್ದಾರೆ. ನ್ಯಾಯಾಂಗ ಪ್ರಕ್ರಿಯೆಯಲ್ಲಿ ನಾನು ದೃಢ ನಂಬಿಕೆಯುಳ್ಳವನು. ವರದಿಗಳಲ್ಲಿ ಬಿಂಬಿಸಲಾದ ಹೇಳಿಕೆಗಳಿಗೆ ವಿಷಾದವನ್ನು ವ್ಯಕ್ತಪಡಿಸುತ್ತೇನೆ. ಭಾರತ ಸಂವಿಧಾನ ಮತ್ತು ಅದರ ಸ್ವಾತಂತ್ರ‍್ಯದ ನನಗೆ ಗೌರವವಿದೆ ಮತ್ತು ಭವಿಷ್ಯದಲ್ಲಿಯೂ ಗೌರವವಿರುತ್ತದೆ ಆದ್ದರಿಂದ ನಾನು ಬೇಷರತ್ತಾಗಿ ಕ್ಷಮೆಯಾಚಿಸುತ್ತೇನೆ ಎಂದು ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

    ರೇವಂತ್ ರೆಡ್ಡಿ ಹೇಳಿದ್ದೇನು?
    ಮಾಧ್ಯಮಗಳ ಜೊತೆ ಮಾತನಾಡಿದ್ದ ರೇವಂತ್ ರೆಡ್ಡಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ 15 ತಿಂಗಳ ಬಳಿಕ ಜಾಮೀನು ಸಿಕ್ಕಿತ್ತು. ಆಗ ಮುಖ್ಯಮಂತ್ರಿಗಳು ಇದನ್ನು ರಾಜಕೀಯ ನಾಟಕವೆಂದು ಕರೆದಿದ್ದರು. ಈಗ ಕವಿತಾ ಅವರಿಗೆ ಐದೇ ತಿಂಗಳಲ್ಲಿ ಜಾಮೀನು ಸಿಕ್ಕಿರುವ ಕುರಿತು ನನಗೆ ಅನುಮಾನವಿದೆ. ಬಿಜೆಪಿ ಹಾಗೂ ಮಾಜಿ ಮುಖ್ಯಮಂತ್ರಿ (K. Chandrashekar Rao) ನಡುವಿನ ಒಪ್ಪಂದದಿಂದ ಜಾಮೀನು ಸಿಕ್ಕಿರಬಹುದು ಎಂದು ಹೇಳಿಕೆ ನೀಡುವ ಮೂಲಕ ಸುಪ್ರೀಂ ಜಾಮೀನಿನ ಬಗ್ಗೆಯೇ ಅನಮಾನ ವ್ಯಕ್ತಪಡಿಸಿದ್ದರು.

    ಈ ಹೇಳಿಕೆಯ ಬಗ್ಗೆ ಗುರುವಾರ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿ, ಸಂವಿಧಾನಿಕ ಹುದ್ದೆಯಲ್ಲಿರುವ ನೀವು ಈ ರೀತಿಯ ಹೇಳಿಕೆಗಳನ್ನು ನೀಡುವುದು ಸರಿಯೇ? ನಿಮ್ಮ ಹೇಳಿಕೆಗಳಿಂದ ಜನರ ಮನಸ್ಸಿನಲ್ಲಿ ಅನುಮಾನ ಮೂಡುತ್ತದೆ. ರಾಜಕೀಯ ಕಾರಣಗಳಿಗಾಗಿ ನಾವು ಏಕೆ ಆದೇಶವನ್ನು ನೀಡಬೇಕು? ನಿಮ್ಮ ರಾಜಕೀಯ ದ್ವೇಷಗಳ ನಡುವೆ ಏಕೆ ನ್ಯಾಯಾಲಯವನ್ನು ಎಳೆದು ತರುತ್ತೀರಿ ಎಂದು ಪ್ರಶ್ನಿಸಿ ರೇವಂತ್ ರೆಡ್ಡಿ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು.

  • ಅಮಿತ್‌ ಶಾ ಫೇಕ್‌ ವಿಡಿಯೋ ಕೇಸ್‌ – ರೇವಂತ್‌ ರೆಡ್ಡಿಗೆ ಸಮನ್ಸ್‌, ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಅರೆಸ್ಟ್‌

    ಅಮಿತ್‌ ಶಾ ಫೇಕ್‌ ವಿಡಿಯೋ ಕೇಸ್‌ – ರೇವಂತ್‌ ರೆಡ್ಡಿಗೆ ಸಮನ್ಸ್‌, ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಅರೆಸ್ಟ್‌

    ನವದೆಹಲಿ: ಗೃಹ ಸಚಿವ ಅಮಿತ್‌ ಶಾ (Amit Shah ) ಅವರ ಮೀಸಲಾತಿ (Reservation) ಹೇಳಿಕೆಯನ್ನು ತಿರುಚಿ ವಿಡಿಯೋ ಅಪ್ಲೋಡ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ (Telangana CM Revanth Reddy) ಅವರಿಗೆ ದೆಹಲಿ ಪೊಲೀಸರು (Delhi Police) ಸಮನ್ಸ್‌ ಜಾರಿ ಮಾಡಿದ್ದಾರೆ.

    ರೇವಂತ್‌ ರೆಡ್ಡಿ ಸೇರಿದಂತೆ ತೆಲಂಗಾಣ ಮೂಲದ ಇತರ ನಾಲ್ವರಿಗೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಬಾಲಾಕೋಟ್ ಏರ್‌ಸ್ಟ್ರೈಕ್‌ ರಹಸ್ಯ ರಿವೀಲ್‌ ಮಾಡಿದ ಮೋದಿ

     

    ನೋಟಿಸ್‌ಗೆ ಪ್ರತಿಕ್ರಿಯಿಸಿದ ರೇವಂತ್‌ ರೆಡ್ಡಿ, ಬಿಜೆಪಿ ಸಿಬಿಐ, ಜಾರಿ ನಿರ್ದೇಶನಾಲಯವನ್ನು ಬಳಸುತ್ತಿತ್ತು. ಈಗ ದೆಹಲಿ ಪೊಲೀಸರ ಮೂಲಕ ವಿರೋಧಿ ಪಕ್ಷಗಳನ್ನು ನಿಯಂತ್ರಿಸಲು ಮುಂದಾಗಿದೆ. ನಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಟೀಕಿಸಿದರು.

    ದೂರುಗಳ ನಂತರ ಪೊಲೀಸರು ಐಪಿಸಿ ಸೆಕ್ಷನ್ 153, 153 ಎ, 465, 469, 171 ಜಿ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66 ಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ವೀಡಿಯೊವನ್ನು ಅಪ್‌ಲೋಡ್ ಮಾಡಿದ ಮತ್ತು ಹಂಚಿಕೊಂಡ ಖಾತೆಗಳ ಬಗ್ಗೆ ಮಾಹಿತಿ ಕೋರಿ ಪೊಲೀಸರು ಎಕ್ಸ್ ಮತ್ತು ಫೇಸ್‌ಬುಕ್‌ಗೆ ನೋಟಿಸ್ ಕಳುಹಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್‍ನಿಂದ ಪ್ರಜ್ವಲ್ ರೇವಣ್ಣ ಅಮಾನತು

    ಕಾಂಗ್ರೆಸ್‌ ಕಾರ್ಯಕರ್ತ ಅರೆಸ್ಟ್‌:
    ಅಮಿತ್‌ ಶಾ ಅವರ ಫೇಕ್‌ ವಿಡಿಯೋವನ್ನು ಅಪ್ಲೋಡ್‌ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಓರ್ವ ಕಾಂಗ್ರೆಸ್‌ ಕಾರ್ಯಕರ್ತನನ್ನು ಅರೆಸ್ಟ್‌ ಮಾಡಲಾಗಿದೆ ಎಂದು ಅಸ್ಸಾಂ (Assam) ಸಿಎಂ ಹಿಮಾಂತ ಬಿಸ್ವಾ ಶರ್ಮಾ (Himanta Biswa Sarma ) ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ತಿಳಿಸಿದ್ದಾರೆ.

  • ರಾಹುಲ್ ಗಾಂಧಿ ಯುವಕರಿಗೆ ಆದರ್ಶ: ರೇವಂತ್ ರೆಡ್ಡಿ

    ರಾಹುಲ್ ಗಾಂಧಿ ಯುವಕರಿಗೆ ಆದರ್ಶ: ರೇವಂತ್ ರೆಡ್ಡಿ

    ಯಾದಗಿರಿ: ದೇಶದ ಯುವಕರಿಗೆ ರಾಹುಲ್ ಗಾಂಧಿ (Rahul Gandhi) ಆದರ್ಶವಾಗಿದ್ದಾರೆ. ಜನರಿಗಾಗಿ ಅವರು ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ (Revanth Reddy) ಹೇಳಿದ್ದಾರೆ.

    ಯಾದಗಿರಿಯಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಮತಯಾಚಿಸಿದರು. ಈ ವೇಳೆ ಮೋದಿಯವರು (Narendra Modi) 10 ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಆದರೂ ಅವರು ರೈತರ ಹಿತ ಕಾಪಾಡಿಲ್ಲ. ಮೋದಿಯವರು ಜನರ ನಂಬಿಕೆಗೆ ದ್ರೋಹ ಮಾಡಿದ್ದಾರೆ. ಅವರು ಕರ್ನಾಟಕ ರಾಜ್ಯಕ್ಕೆ ಸಹಾಯ ಮಾಡಿಲ್ಲ. ರಾಜ್ಯದಲ್ಲಿ ಬರ ಆವರಿಸಿದ್ರು ಪರಿಹಾರ ನೀಡದೆ ಜನರಿಗೆ ಖಾಲಿ ಚೊಂಬು ನೀಡಿದ್ದಾರೆ. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ಹಣ ಬಿಡುಗಡೆ ಮಾಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ? – ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಹೆಚ್.ಡಿ ರೇವಣ್ಣ ಫಸ್ಟ್ ರಿಯಾಕ್ಷನ್

    ಕೇಂದ್ರ ಬಿಜೆಪಿ (BJP)  ಸರ್ಕಾರ ಎಸ್‍ಸಿ, ಎಸ್‍ಟಿ ಹಾಗೂ ಒಬಿಸಿ ಮೀಸಲಾತಿ ರದ್ದು ಮಾಡುವ ಹುನ್ನಾರ ಮಾಡಿದೆ. ಇದಕ್ಕಾಗಿ 400 ಸ್ಥಾನ ಗೆಲ್ಲಿಸಿ ಎನ್ನುತ್ತಿದ್ದಾರೆ. ಬಿಜೆಪಿ ನಾಯಕರು ಮೋದಿ ಮುಖ ನೋಡಿ ಮತ ಹಾಕಿ ಎಂದು ಹೇಳುತ್ತಾರೆ. ಹಾಗಾದರೆ ಬಿಜೆಪಿ ಪಕ್ಷದವರು ಕೈಲಾಗದವರಾ? ಈ ಕ್ಷೇತ್ರದ ಜನ ಕಾಂಗ್ರೆಸ್ ಅಭ್ಯರ್ಥಿಯನ್ನು 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಖರ್ಗೆಯವರ (Mallikarjun Kharge) ನಾಯಕತ್ವದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಿಸಿದ ನಂತರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ್ನು ಗೆಲ್ಲಿಸಿ ರಾಜ್ಯದ ಜನರು ನನ್ನ ಹತ್ತಿರ ಬಂದ್ರೆ, ನಾನು ಹೈದ್ರಾಬಾದ್‍ನಲ್ಲಿಯೇ ಇರುತ್ತೇನೆ. ನಾನು ನಿಮ್ಮ ಸಹಾಯಕ್ಕೆ ಬರುತ್ತೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ: ಮೋದಿ

  • ಈ ಬಾರಿ ಮೋದಿ ಗರಿಷ್ಠ 214-240 ಸ್ಥಾನ ಗೆಲ್ಲಬಹುದು: ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ

    ಈ ಬಾರಿ ಮೋದಿ ಗರಿಷ್ಠ 214-240 ಸ್ಥಾನ ಗೆಲ್ಲಬಹುದು: ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ

    ನವದೆಹಲಿ: ಅಬ್ ಕಿ ಬಾರ್, 400 ಪಾರ್‌ ಘೋಷಣೆಯ ಹೊರತಾಗಿಯೂ ಈ ಬಾರಿ ಪ್ರಧಾನಿ ನರೇಂದ್ರ ಮೋದಿ (Narendra Modi) ಗರಿಷ್ಠ 214 ರಿಂದ 240 ಲೋಕಸಭಾ ಸ್ಥಾನಗಳನ್ನು ಗೆಲ್ಲಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ (Telangana CM) ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಎ. ರೇವಂತ್ ರೆಡ್ಡಿ (Revanth Reddy) ಅವರು ಭವಿಷ್ಯ ನುಡಿದಿದ್ದಾರೆ.

    ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದಕ್ಷಿಣ ಭಾರತದಲ್ಲಿ 129 ಲೋಕಸಭಾ (Lok Sabha) ಸ್ಥಾನಗಳಿವೆ. ಕರ್ನಾಟಕದಲ್ಲಿ ಅವರು 10 ರಿಂದ 12 ಸ್ಥಾನಗಳನ್ನು ಗೆಲ್ಲಬಹುದು. ಕಳೆದ ಚುನಾವಣೆಯಲ್ಲಿ 4 ಸ್ಥಾನ ಗೆದ್ದಿದ್ದರೆ ಈ ಬಾರಿ ತೆಲಂಗಾಣದಲ್ಲಿ ಕೇವಲ 2 ಸ್ಥಾನ ಮಾತ್ರ ಗೆಲ್ಲಬಹುದು ಎಂದು ಹೇಳಿದರು. ಇದನ್ನೂ ಓದಿ: ಭಾನುವಾರ ಮೈಸೂರಿನಲ್ಲಿ ರ‍್ಯಾಲಿ, ಮಂಗಳೂರಿನಲ್ಲಿ ರೋಡ್‌ ಶೋ – ಎಷ್ಟು ಗಂಟೆಗೆ ಎಲ್ಲಿ ಮೋದಿ ಕಾರ್ಯಕ್ರಮ?

    2019ರ ಚುನಾವಣೆಯಲ್ಲಿ ಬಿಜೆಪಿ ಗುಜರಾತ್, ರಾಜಸ್ಥಾನ, ಹರಿಯಾಣ, ದೆಹಲಿಯಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ 303 ಸ್ಥಾನಗಳನ್ನು ಗೆದ್ದಿತ್ತು. ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಮೈತ್ರಿ ಉತ್ತಮ ಸಾಧನೆ ಮಾಡಿತ್ತು. ಈ ಬಾರಿಯೂ ಶೇ.100ರಷ್ಟು ಸಾಧನೆ ಮಾಡಿದರೆ ಅವರು 300 ಸ್ಥಾನ ಗೆಲ್ಲಬಹುದು. ಉಳಿದ 100 ಸ್ಥಾನಗಳನ್ನು ಅವರು ಪಾಕಿಸ್ತಾನದಲ್ಲಿ ಮಾತ್ರ ಗೆಲ್ಲಬಹುದು, ಹಿಂದೂಸ್ತಾನದಲ್ಲಿ ಅಲ್ಲ ಎಂದರು.

    400 ಪಾರ್ ಹೇಳುವಾಗ ಬಿಜೆಪಿಯವರಿಗೆ ಖುಷಿಯಾಗುತ್ತದೆ. ಈ ಹಿಂದೆ ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಅವರು 100 ವಿಧಾನಸಭಾ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದರು. ಆದರೆ ಕಳೆದ ಚುನಾವಣೆಯಲ್ಲಿ 39 ಸ್ಥಾನ ಮಾತ್ರ ಗೆದ್ದಿದ್ದರು ಎಂದು ಹೇಳಿದರು.  ಇದನ್ನೂ ಓದಿ: ಚುನಾವಣಾ ಬಾಂಡ್ ಖರೀದಿಯಲ್ಲಿ ಅತಿ ಹೆಚ್ಚು ದೇಣಿಗೆ ನೀಡಿದ ಮೇಘಾ ಎಂಜಿನಿಯರಿಂಗ್‍ಗೆ ಸಿಬಿಐ ಶಾಕ್

    ರಾಹುಲ್ ಗಾಂಧಿ (Rahul Gandhi) ಅವರು ಅದಾನಿಯನ್ನು(Adani) ಪಿಕ್‌ಪಾಕೆಟ್ ಎಂದು ಬಣ್ಣಿಸುವ ಸಮಯದಲ್ಲಿ ನೀವು 12,400 ಕೋಟಿ ರೂ. ಯೋಜನೆ ಯಾಕೆ ನೀಡಿದ್ದೀರಿ ಎಂದು ಕೇಳಿದ್ದಕ್ಕೆ ನಾನು ನಾನು ನಮ್ಮ ಯೋಜನೆಗಳನ್ನು ಅದಾನಿಗೆ ನೀಡಲಿಲ್ಲ. ಮೋದಿ ಅವರು ಬಂದರು, ವಿಮಾನ ನಿಲ್ದಾಣಗಳನ್ನು ಅದಾನಿಗೆ ನೀಡಿದ್ದಾರೆ. ಆದರೆ ನಾನು ಅದಾನಿ ಜೇಬಿನಿಂದ ಹಣವನ್ನು ಪಡೆದು ರಾಜ್ಯದಲ್ಲಿ ಹೂಡಿಕೆ ಮಾಡುತ್ತಿದ್ದೇನೆ. ನಮ್ಮ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಯಾರು ಸಹಕಾರ ನೀಡುತ್ತಾರೋ ಅವರಿಗೆ ನಾನು ಸಮಾನವಾಗಿ ಅವಕಾಶ ನೀಡುತ್ತೇನೆ. ಅದಾನಿ, ಟಾಟಾ, ಬಿರ್ಲಾ ಅಂಬಾನಿ ಅಥವಾ ಯಾರೇ ಆಗಿರಲಿ ಎಲ್ಲರನ್ನು ಸಮಾನವಾಗಿ ನೋಡುತ್ತೇನೆ ಎಂದು ಹೇಳಿದರು.

     

  • ತೆಲಂಗಾಣ ಸಿಎಂ ಜೊತೆ ಅದಾನಿ ಸಮೂಹ ಮಾತುಕತೆ – ರಾಹುಲ್‌ಗೆ ಪಕ್ಷದಲ್ಲೇ ಹಿನ್ನಡೆ ಎಂದ ನೆಟ್ಟಿಗರು

    ತೆಲಂಗಾಣ ಸಿಎಂ ಜೊತೆ ಅದಾನಿ ಸಮೂಹ ಮಾತುಕತೆ – ರಾಹುಲ್‌ಗೆ ಪಕ್ಷದಲ್ಲೇ ಹಿನ್ನಡೆ ಎಂದ ನೆಟ್ಟಿಗರು

    ಹೈದರಾಬಾದ್‌: ಅದಾನಿ ಸಮೂಹ (Adani Group) ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯನ್ನು (Telangana CM Revanth Reddy) ಬುಧವಾರ ಭೇಟಿ ಮಾಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ (Congress) ವಿರುದ್ಧ ಟ್ರೋಲ್‌ (Troll) ಆರಂಭವಾಗಿದೆ.

    ಚುನಾವಣಾ ಭಾಷಣದಲ್ಲಿ, ಸಂಸತ್‌ ಕಲಾಪದಲ್ಲಿ ಅದಾನಿ ಕಂಪನಿ ವಿರುದ್ಧ ಕಾಂಗ್ರೆಸ್‌ ನಾಯಕರು ಟೀಕೆ ಮಾಡುತ್ತಲೇ ಇರುತ್ತಾರೆ. ಆದರೆ ಈಗ ಗೌತಮ್‌ ಅದಾನಿ (Gautam Adani) ಅವರ ಪುತ್ರ ಕರಣ್‌ ಅದಾನಿ (Karan Adani) ಅವರು ರೇವಂತ್‌ ರೆಡ್ಡಿ ಅವರ ಜೊತೆ ಡೇಟಾ ಸೆಂಟರ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ನಿರ್ಮಾಣ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.

    ಅದಾನಿ ಪೋರ್ಟ್‌ ಮತ್ತು ಎಸ್‌ಇಝಡ್‌ ಕಂಪನಿಯ ಸಿಇಒ ಆಗಿರುವ ಕರಣ್‌ ಅದಾನಿ ಅವರು ರೇವಂತ್‌ ರೆಡ್ಡಿ ಜೊತೆಗಿನ ಮಾತುಕತೆ ವಿಚಾರ ಹೊರ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕಾಂಗ್ರೆಸ್‌ ನಾಯಕರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಂಧನ ಊಹಾಪೋಹ ಮಧ್ಯೆ 3 ದಿನ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದಾರೆ ಕೇಜ್ರಿವಾಲ್‌

    ರಾಹುಲ್‌ ಗಾಂಧಿ ಅವರು ಗೌತಮ್‌ ಅದಾನಿ ಅವರ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದರೆ ಇತ್ತ ತೆಲಂಗಾಣ ಸಿಎಂ ಅವರು ಗೌತಮ್‌ ಅದಾನಿ ಅವರ ಪುತ್ರ ಕರಣ್‌ ಅದಾನಿ ಜೊತೆ ಮಾತನಾಡುತ್ತಾರೆ ಎಂದು ಟ್ರೋಲ್‌ ಮಾಡುತ್ತಿದ್ದಾರೆ.

    ಕಾಂಗ್ರೆಸ್‌ ಬೂಟಾಟಿಕೆ ಇದೊಂದು ಉತ್ತಮ ಉದಾಹರಣೆ. ರಾಹುಲ್‌ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮಾತ್ರವಲ್ಲ. ಪಕ್ಷದಲ್ಲೇ ಅವರಿಗೆ ಹಿನ್ನಡೆಯಾಗುತ್ತಿದ್ದು, ಅವರ ಮಾತಿಗೆ ಕಾಂಗ್ರೆಸ್‌ನಲ್ಲೇ ಯಾರು ಗೌರವ ನೀಡುತ್ತಿಲ್ಲ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

     

  • ತೆಲಂಗಾಣ ಹಂಗಾಮಿ ಸ್ಪೀಕರ್‌ ಆಗಿ AIMIM ಶಾಸಕ ಅಕ್ಬರುದ್ದೀನ್ ಓವೈಸಿ ಪ್ರಮಾಣ ವಚನ

    ತೆಲಂಗಾಣ ಹಂಗಾಮಿ ಸ್ಪೀಕರ್‌ ಆಗಿ AIMIM ಶಾಸಕ ಅಕ್ಬರುದ್ದೀನ್ ಓವೈಸಿ ಪ್ರಮಾಣ ವಚನ

    ಹೈದರಾಬಾದ್:‌ ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ (Akbaruddin Owaisi) ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ ಶನಿವಾರ ಆರಂಭವಾಗಿರುವ ರಾಜ್ಯ ವಿಧಾನಸಭೆಯ (Telangana Legislative Assembly) ಮೊದಲ ಅಧಿವೇಶನಕ್ಕೆ ಹಂಗಾಮಿ ಸ್ಪೀಕರ್‌ ಆಗಿ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ತಮಿಳಿಸೈ ಸೌಂದರರಾಜನ್ (Tamilisai Soundararajan) ಪ್ರಮಾಣ ವಚನ ಬೋಧಿಸಿದ್ದಾರೆ. ಇದನ್ನೂ ಓದಿ: ಶತ್ರು ಸೇನೆಗಳಿಂದ ರಕ್ಷಣೆಗೆ ಮಾಸ್ಟರ್‌ ಪ್ಲ್ಯಾನ್‌ – ಫೈಟರ್‌ ಜೆಟ್‌ಗಳಿಗೆ ಶೀಘ್ರವೇ ಬರಲಿದೆ ಡಿಜಿಟಲ್‌ ನಕ್ಷೆ

    ಭಾರತದ ಸಂವಿಧಾನದ 180ನೇ ವಿಧಿಯ ಷರತ್ತು (1) ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ತೆಲಂಗಾಣ ರಾಜ್ಯಪಾಲರು ಅಕ್ಬರುದ್ದೀನ್ ಓವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ (Telangana Assembly Speaker), ಆಗಿ ನೇಮಿಸಿದ್ದಾರೆ. ಚುನಾಯಿತ ಸದಸ್ಯರಲ್ಲಿ ಒಬ್ಬರನ್ನು ಸ್ಪೀಕರ್‌ ಆಗಿ‌ ನೇಮಿಸುವವರೆಗೆ ಅಕ್ಬರುದ್ದೀನ್‌ ಸ್ಪೀಕರ್‌ ಆಗಿ ಅಧಿವೇಶನ ನಿರ್ವಹಿಸಲಿದ್ದಾರೆ. ಇದನ್ನೂ ಓದಿ: ಐಸಿಸ್‌ ಉಗ್ರರೊಂದಿಗೆ ನಂಟು; ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ತೆಲಂಗಾಣ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಕಾಂಗ್ರೆಸ್‌ 64 ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢವಾಗಿದ್ದ ಭಾರತ್‌ ರಾಷ್ಟ್ರ ಸಮಿತಿ 39 ಹಾಗೂ ಬಿಜೆಪಿ 8 ಸ್ಥಾನಗಳನ್ನ ಪಡೆದುಕೊಂಡಿದೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (TPCC) ಅಧ್ಯಕ್ಷರಾಗಿದ್ದ ರೇವಂತ್ ರೆಡ್ಡಿ ಅವರು ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ದೇಶದಲ್ಲಿ ಅತ್ಯಂತ ಕಿರಿಯ ವಯಸ್ಸಿಗೆ ಸಿಎಂ ಹುದ್ದೆ ಅಲಂಕರಿಸಿದ ಖ್ಯಾತಿ ಗಳಿಸಿದ್ದಾರೆ.

  • ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

    ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

    ಹೈದರಾಬಾದ್: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ (Revanth Reddy), ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ.

    ಹೌದು, ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ ಅಧಿಕೃತ ನಿವಾಸವಾದ ಹೈದರಾಬಾದ್‌ನ ಪ್ರಗತಿ ಭವನದಲ್ಲಿ ಬಿರುಸಿನ ಚಟುವಟಿಕೆ ನಡೆದಿದೆ. ಹಲವಾರು ಬುಲ್ಡೋಜರ್‌ಗಳು, ಟ್ರ್ಯಾಕ್ಟರ್‌ಗಳು ಹಾಗೂ ಕಟ್ಟಡ ಕಾರ್ಮಿಕರು ಈ ಕಬ್ಬಿಣದ ಬ್ಯಾರಿಕೇಡ್‌ಗಳನ್ನು ಕಿತ್ತು ಹಾಕುವುದು ಕಂಡುಬಂದಿದೆ.

    ಈ ಬ್ಯಾರಿಕೇಡ್ ಹಿಂದೆ ಪಾದಚಾರಿಗಳ ಪ್ರವೇಶವನ್ನು ನಿರ್ಬಂಧಿಸುತ್ತಿತ್ತು. ಹಲವು ವರ್ಷಗಳಿಂದ ಈ ಬ್ಯಾರಿಕೇಡ್‌ನಿಂದಾಗಿ ಚಲಿಸುವ ವಾಹನಗಳ ದಟ್ಟಣೆಯೂ ಉಂಟಾಗುತ್ತಿತ್ತು. ಈ ಹಿನ್ನೆಲೆ ರೇವಂತ್ ರೆಡ್ಡಿ ತಮ್ಮ ಚುನಾವಣಾ ಪ್ರಚಾರದ ವೇಳೆ, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಬ್ಯಾರಿಕೇಡ್ ಅನ್ನು ತೆಗೆಸುವುದಾಗಿ ಭರವಸೆ ನೀಡಿದ್ದರು. ಇದೀಗ ಪ್ರಮಾಣವಚನ ಸ್ವೀಕರಿಸುತ್ತಲೇ ಅವರು ತಮ್ಮ ಮೊದಲ ಭರವಸೆಯನ್ನು ಪೂರೈಸಿದ್ದಾರೆ. ಇದನ್ನೂ ಓದಿ: ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್‌ ರೆಡ್ಡಿ

    ಕಳೆದ ತಿಂಗಳು ನಡೆದ ತೆಲಂಗಾಣದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇಂದು ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ. ರೇವಂತ್ ರೆಡ್ಡಿ ಸಿಎಂ ಆಗಿ, ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದ ಮಲ್ಲು ಭಟ್ಟಿ ವಿಕ್ರಮಾರ್ಕ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ರೇವಂತ್ ರೆಡ್ಡಿಗೆ ಶುಭಕೋರಿ ಬೆಂಬಲದ ಭರವಸೆ ಕೊಟ್ಟ ಪ್ರಧಾನಿ ಮೋದಿ

  • ರೇವಂತ್ ರೆಡ್ಡಿಗೆ ಶುಭಕೋರಿ ಬೆಂಬಲದ ಭರವಸೆ ಕೊಟ್ಟ ಪ್ರಧಾನಿ ಮೋದಿ

    ರೇವಂತ್ ರೆಡ್ಡಿಗೆ ಶುಭಕೋರಿ ಬೆಂಬಲದ ಭರವಸೆ ಕೊಟ್ಟ ಪ್ರಧಾನಿ ಮೋದಿ

    ನವದೆಹಲಿ: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ರೇವಂತ್ ರೆಡ್ಡಿಗೆ (Revanth Reddy) ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಅಲ್ಲದೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

    ಹೈದರಾಬಾದ್‍ನ ಎಲ್‍ಬಿ ಸ್ಟೇಡಿಯಂನಲ್ಲಿ (LB Stadium Hyderabad) ನಡೆದ ಅದ್ಧೂರಿ ಸಮಾರಂಭದಲ್ಲಿ ರೇವಂತ್ ರೆಡ್ಡಿ ಸೇರಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಇವರಿಗೆ ರಾಜ್ಯಪಾಲೆ ತಮಿಳಿಸೈ ಸುಂದರರಾಜನ್ ಅವರು ಪ್ರಮಾಣವಚನ ಬೋಧಿಸಿದರು. ರೇವಂತ್ ರೆಡ್ಡಿಯವರು ತೆಲಂಗಾಣ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆಯೇ ಮೋದಿಯವರು (Narendra Modi) ಎಕ್ಸ್ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

    ಎಕ್ಸ್ ನಲ್ಲಿ ಏನಿದೆ..?: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ರೇವಂತ್ ರೆಡ್ಡಿಯವರಿಗೆ ಅಭಿನಂದನೆಗಳು. ರಾಜ್ಯದ ಪ್ರಗತಿ ಮತ್ತು ನಾಗರಿಕರ ಕಲ್ಯಾಣಕ್ಕಾಗಿ ನನ್ನಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಇದನ್ನೂ ಓದಿ: ‘ಮೋದಿ ಜೀ’ ಕರೆದು ಸಾರ್ವಜನಿಕರಿಂದ ನನ್ನ ದೂರ ಮಾಡ್ಬೇಡಿ: ಪ್ರಧಾನಿ ಮನವಿ

    ಪ್ರಮಾಣವಚನದ ವೇಳೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ಉಪಸ್ಥಿತರಿದ್ದರು.

  • ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್‌ ರೆಡ್ಡಿ

    ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್‌ ರೆಡ್ಡಿ

    ಹೈದರಾಬಾದ್‌: ತೆಲಂಗಾಣದ (Telangana) ನೂತನ ಮುಖ್ಯಮಂತ್ರಿಯಾಗಿ (Chief Minister) ರೇವಂತ್‌ ರೆಡ್ಡಿ (Revanth Reddy) ಗುರುವಾರ ಮಧ್ಯಾಹ್ನ ಪ್ರಮಾಣ ವಚನ (Oath) ಸ್ವೀಕರಿಸಿದರು.

    ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರೇವಂತ್‌ ರೆಡ್ಡಿ ಸೇರಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಹಲವು ಕಾಂಗ್ರೆಸ್‌ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

    ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ (Telangana Vidhanasabha Election Results)  ಕಾಂಗ್ರೆಸ್ (Congress) ಅಭೂತಪೂರ್ವ ಜಯಗಳಿಸಿತ್ತು. 119 ಸ್ಥಾನಗಳ ಪೈಕಿ 69 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟಬಹುಮತ ಪಡೆದಿತ್ತು.

     

    ಯಾರು ಈ ರೇವಂತ್‌ ರೆಡ್ಡಿ?: ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ 56 ವರ್ಷದ ಅನುಮುಲಾ ರೇವಂತ್ ರೆಡ್ಡಿ  ಮೊದಲು ಆರ್‌ಎಸ್‌ಎಸ್‌ ಮತ್ತು ಎಬಿವಿಪಿಯಿಂದ ಗುರುತಿಸಿಕೊಂಡಿದ್ದವರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ರೆಡ್ಡಿ ಅವರು ಕಾಂಗ್ರೆಸ್‌ ಸೇರಿದರು. ಕಾಂಗ್ರೆಸ್‌ ಪರ ಅವರು ಕ್ಯಾಂಪೇನ್‌ ನಡೆಸುತ್ತಿದ್ದಾಗ, ಅವರ ಹಿನ್ನೆಲೆ ಹೆಚ್ಚು ಚರ್ಚೆಯಾಗಿತ್ತು.  ಇದನ್ನೂ ಓದಿ: ‘ಮೋದಿ ಜೀ’ ಕರೆದು ಸಾರ್ವಜನಿಕರಿಂದ ನನ್ನ ದೂರ ಮಾಡ್ಬೇಡಿ: ಪ್ರಧಾನಿ ಮನವಿ

    ರೇವಂತ್‌ ರೆಡ್ಡಿ ಆರ್‌ಎಸ್‌ಎಸ್‌ (RSS) ಕೈಗೊಂಬೆ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್‌ ಓವೈಸಿ ಅನೇಕ ಬಾರಿ ಟೀಕಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ ಕೆಲವು ಕ್ಷೇತ್ರಗಳಲ್ಲಿ ಒಂದಾಗಿ ಕೆಲಸ ಮಾಡುತ್ತಿವೆ ಎಂದೂ ಸಹ ಓವೈಸಿ ಹಿಂದಿನ ದಿನಗಳಲ್ಲಿ ಆರೋಪಿಸಿದ್ದರು.

    ರೇವಂತ್ ರೆಡ್ಡಿ ಅವರು ಎಬಿವಿಪಿಯಿಂದ (ABVP) ರಾಜಕೀಯ ಜೀವನ ಆರಂಭಿಸಿದರು. ನಂತರ ಟಿಡಿಪಿಗೆ (TDP) ಸೇರ್ಪಡೆಯಾದರು. 2009 ಮತ್ತು 2014 ರ ಚುನಾವಣೆಯಲ್ಲಿ ಕೊಡಂಗಲ್ ಕ್ಷೇತ್ರದಿಂದ ಗೆಲುವು ಸಾಧಿಸಿದರು. ಲಂಚ ಹಗರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದ ನಂತರ ಅವರು ಟಿಡಿಪಿ ತೊರೆದರು. 2017 ರ ಅಕ್ಟೋಬರ್‌ನಲ್ಲಿ ಕಾಂಗ್ರೆಸ್‌ ಸೇರಿದರು. 2018 ರ ಚುನಾವಣೆಯಲ್ಲಿ ಬಿಆರ್‌ಎಸ್‌ (BRS) ವಿರುದ್ಧ ಸ್ಪರ್ಧಿಸಿ ಕೊಡಂಗಲ್‌ನಿಂದ ಸೋತರು. ಆದರೆ ಮತ್ತೆ ಪುಟಿದೆದ್ದು 2019 ರ ಲೋಕಸಭೆ ಚುನಾವಣೆಯಲ್ಲಿ ಮಲ್ಕಾಜ್‌ಗಿರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದರು. ಜೂನ್ 2021 ರಲ್ಲಿ ಅವರನ್ನು TPCC ಮುಖ್ಯಸ್ಥರನ್ನಾಗಿ ನೇಮಿಸಲಾಯಿತು.