Tag: ರೇಸ್ ಕೋರ್ಸ್

  • ಬೆಂಗಳೂರಿನ ರೇಸ್‌ಕೊರ್ಸ್ ಬುಕ್ಕಿಂಗ್‌ ಕೌಂಟರ್‌ ಮೇಲೆ CCB ದಾಳಿ – 3.47 ಕೋಟಿ ರೂ. ಸೀಜ್

    ಬೆಂಗಳೂರಿನ ರೇಸ್‌ಕೊರ್ಸ್ ಬುಕ್ಕಿಂಗ್‌ ಕೌಂಟರ್‌ ಮೇಲೆ CCB ದಾಳಿ – 3.47 ಕೋಟಿ ರೂ. ಸೀಜ್

    ಬೆಂಗಳೂರು:‌ ಇಲ್ಲಿನ ರೇಸ್‌ಕೋರ್ಸ್‌ (Race Course) ಬುಕ್ಕಿಂಗ್‌ ಕೌಂಟರ್‌ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಸೂಕ್ತ ದಾಖಲೆಗಳಿಲ್ಲದ 3.47 ಕೋಟಿ ರೂ. ಹಣವನ್ನು ಜಪ್ತಿ ಮಾಡಿರುವ ಘಟನೆ ಬೆಂಗಳೂರು (Bengaluru) ನಗರದಲ್ಲಿ ತಡರಾತ್ರಿ ನಡೆದಿದೆ.

    ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್​ಟಿ ಕಟ್ಟದೇ ವಂಚನೆ ಮಾಡಿದ ಆರೋಪಗಳ ಮೇಲೆ ರೇಸ್​ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದಾರೆ. ಬುಕ್ಕಿಂಗ್‌ ಕೌಂಟರ್​ಗಳನ್ನ ಲಾಕ್​ ಮಾಡಿದ್ದಾರೆ. ಅಲ್ಲದೇ ಕೌಂಟರ್​ನಲ್ಲಿನ ಸಿಬ್ಬಂದಿ ಹೊರ ಹೋಗದಂತೆ ತಡೆದು ಪರಿಶೀಲಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ದಾಳಿಯನ್ನು ಅಂತ್ಯಗೊಳಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ಸ್ಪರ್ಶಿಸಿ ಯಶ್‌ ಅಭಿಮಾನಿಗಳ ಸಾವು – ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ವಿತರಣೆ 

    ದಾಳಿ ವೇಳೆ ದಾಖಲೆಗಳಿಲ್ಲದ 3.47 ಕೋಟಿ ರೂ. ಜಪ್ತಿ ಮಾಡಿದ್ದಾರೆ. ಈ ವೇಳೆ ಸಿಕ್ಕವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸುಮಾರು 60 ಜನರನ್ನ ವಶಕ್ಕೆ ಪಡೆದು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ನೋಟೀಸ್‌ ನೀಡಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಸಂಸತ್ ದಾಳಿ: ಮೈಸೂರಿನ ಮನೋರಂಜನ್‌ ಸೇರಿ ಐವರಿಗೆ ಮಂಪರು ಪರೀಕ್ಷೆ

    ದಾಳಿ ಸಂದರ್ಭದಲ್ಲಿ ಸಿಕ್ಕ ಹಣಕ್ಕೆ ಸೂಕ್ತ ದಾಖಲೆ ಸಲ್ಲಿಸುವಂತೆ ಸೂಚಿಸಿರುವ ಸಿಸಿಬಿ ಪೊಲೀಸರು, ದಾಖಲೆ ಸಲ್ಲಿಸಲು ವಿಫಲರಾದ್ರೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಮಾಹಿತಿ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಹುಟ್ಟು ಮುಸ್ಲಿಂ ಆಗದಿದ್ರೂ, ಟೋಪಿ ಹಾಕಿದಾಗ ಒರಿಜಿನಲ್‌ ಮುಸ್ಲಿಂ ಥರ ಕಾಣ್ತಾರೆ: ಸಿ.ಟಿ.ರವಿ

  • Breaking- ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು ಸಿಎಂ ಒಪ್ಪಿಗೆ

    Breaking- ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು ಸಿಎಂ ಒಪ್ಪಿಗೆ

    ನ್ನಡದ ಹೆಸರಾಂತ ನಟ ಅಂಬರೀಶ್ (Ambarish) ಅವರ ಹೆಸರನ್ನು ಬೆಂಗಳೂರಿನ ರೇಸ್ ಕೋರ್ಸ್ (Race Course) ರಸ್ತೆಗೆ (Road) ಇಡಲು ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಒಪ್ಪಿಗೆ ನೀಡಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ ಹರೀಶ್ ಟ್ವೀಟ್ ಮಾಡಿದ್ದಾರೆ. ಇದೇ ವಾರದಲ್ಲೇ ಹೆಸರು ಇಡುವ ಕಾರ್ಯಕ್ರಮ ಕೂಡ ನಡೆಯಲಿದೆ ಎಂದು ತಿಳಿಸಿದ್ದಾರೆ.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ಇಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು. ಮಂಡಳಿಯ ಮನವಿಗೆ ಸ್ಪಂದಿಸಿರುವ ಸರಕಾರ ಇದೇ ವಾರದಲ್ಲೇ ಹೆಸರು ಇಡುವ ಒಪ್ಪಿಗೆ ಕೂಡ ನೀಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಹಲವು ದಿನಗಳ ಬೇಡಿಕೆ ಈ ಮೂಲಕ ಈಡೇರಿದಂತಾಗಿದೆ.

    ಕನ್ನಡ ಚಿತ್ರ ಜಗತ್ತಿಗೆ ಅಂಬರೀಶ್ ಕೊಟ್ಟಿರುವ ಕೊಡುಗೆ ಅಪಾರ. ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಸಾಕಷ್ಟು ಸಹಾಯವನ್ನೂ ಅಂಬರೀಶ್ ಮಾಡಿದ್ದಾರೆ. ರಾಜಕಾರಣಿಯಾಗಿಯೂ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಈ ಎಲ್ಲ ಸೇವೆಯನ್ನು ಪರಿಗಣಿಸಿರುವ ಸರಕಾರ ರೇಸ್ ಕೋರ್ಸ್ ರಸ್ತೆಗೆ ಹೆಸರು ಇಡಲು ಒಪ್ಪಿಗೆ ನೀಡಿದೆ.

    ಅಷ್ಟೇ ಅಲ್ಲದೇ, ಅಂಬರೀಶ್ ಸ್ಮಾರಕದ ಕೆಲಸ ಕೂಡ ಬಹುತೇಕ ಮುಗಿದಿದ್ದು, ಅತೀ ಶೀಘ್ರದಲ್ಲೇ ಸ್ಮಾರಕದ ಲೋಕಾರ್ಪಣೆ ಕೂಡ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಸ್ಮಾರಕವು ಹಲವು ಕೋಟಿ ರೂಪಾಯಿಗಳಲ್ಲಿ ನಿರ್ಮಾಣವಾಗಿದೆ. ಡಾ.ರಾಜ್ ಕುಮಾರ್ ಸ್ಮಾರಕದ ಪಕ್ಕದಲ್ಲೇ ಅಂಬರೀಶ್ ಸ್ಮಾರಕ ಕೂಡ ತಲೆಯೆತ್ತಿದೆ.