Tag: ರೈಟ್ಸ್

  • ಹಿಂದಿಗೆ ಬಿಕರಿಯಾದ ‘ಪುಷ್ಪ 2’ ಚಿತ್ರದ ವಿತರಣಾ ಹಕ್ಕು

    ಹಿಂದಿಗೆ ಬಿಕರಿಯಾದ ‘ಪುಷ್ಪ 2’ ಚಿತ್ರದ ವಿತರಣಾ ಹಕ್ಕು

    ಕ್ಷಿಣದ ಸಿನಿಮಾಗಳಿಗೆ ಹಿಂದಿಯಲ್ಲಿ (Bollywood) ಬೇಡಿಕೆ ಹೆಚ್ಚಾಗುತ್ತಿದೆ. ಕೋಟಿ ಕೋಟಿ ಮುಂಗಡ ಹಣಕೊಟ್ಟು ವಿತರಣಾ ಹಕ್ಕುಗಳನ್ನು (Rights) ಖರೀದಿಸಲಾಗುತ್ತಿದೆ. ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದ ಹಕ್ಕನ್ನು ಬರೋಬ್ಬರಿ 200 ಕೋಟಿ ರೂಪಾಯಿಗೆ ಖರೀದಿಸಿದ್ದಾರಂತೆ ಅನಿಲ್ ತಡಾನಿ. ಅಧಿಕೃತವಾಗಿ ಮಾಹಿತಿಯನ್ನು ಚಿತ್ರತಂಡವಾಗಲಿ ಅಥವಾ ತಡಾನಿ ಆಗಲಿ ಹೇಳಿಕೊಳ್ಳದೇ ಇದ್ದರೂ, ಬಿಟೌನ್ ನಲ್ಲಿ ಇದು ಭಾರೀ ಸದ್ದು ಮಾಡಿದೆ.

    ಪುಷ್ಪ 2 ಸಿನಿಮಾ ಬಿಡುಗಡೆಯ ದಿನಾಂಕ ಸಮೀಪಕ್ಕೆ ಬರುತ್ತಿದ್ದಂತೆಯೇ ಸಿನಿಮಾ ತಲುಪಿಸಲು ನಾನಾ ರೀತಿಯ ಸಿದ್ದತೆಗಳನ್ನು ಮಾಡುತ್ತಿದೆ ಚಿತ್ರತಂಡ. ಈಗಾಗಲೇ ಫಸ್ಟ್  ಲುಕ್, ಟೀಸರ್ ರಿಲೀಸ್ ಮಾಡಿರುವ ನಿರ್ದೇಶಕರು, ಈಗ ಮೇ 1 ರಂದು ಚಿತ್ರದ ಮೊದಲ ಲಿರಿಕಲ್ ಸಾಂಗ್ (Lyrical Song) ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ.

    ಭಾರತೀಯ ಸಿನಿಮಾ ರಂಗದಲ್ಲಿ ಪುಷ್ಪ 2 ದಾಖಲೆಗೆ ಕಾರಣವಾಗುತ್ತಿದೆ. ಈ ಸಿನಿಮಾದ ಡಿಜಿಟೆಲ್ ರೈಟ್ಸ್ (Digital Rights) ಬರೋಬ್ಬರಿ 275 ಕೋಟಿ ರೂಪಾಯಿ ಸೇಲ್ ಆಗಿದೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಹಣ ಸಿನಿಮಾ ರಿಲೀಸ್ ಆದ ನಂತರ ಮತ್ತಷ್ಟು ಏರಿಕೆಯೂ ಆಗಲಿದೆಯಂತೆ. ಇಷ್ಟೊಂದು ಮೊತ್ತದ ಹಣವನ್ನು ಕೊಟ್ಟು ಇದೇ ಮೊದಲ ಬಾರಿಗೆ ಡಿಜಿಟೆಲ್ ಹಕ್ಕುಗಳನ್ನು ಖರೀದಿಸಲಾಗಿದೆಯಂತೆ.

    ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 (Pushpa 2) ಸಿನಿಮಾ ಇದೇ ಆಗಸ್ಟ್ 15ರಂದು ಬಿಡುಗಡೆ ಮಾಡುವುದಾಗಿ ಈಗಾಗಲೇ ಚಿತ್ರತಂಡ ಘೋಷಣೆ ಮಾಡಿದೆ. ಅದೇ ರೀತಿಯ ಬಾಲಿವುಡ್ ನ ಹೆಸರಾಂತ ನಟ ಅಜಯ್ ದೇವಗನ್ (Ajay Devgan) ನಟನೆಯ ಸಿಂಗಂ ಅಗೇನ್ ಚಿತ್ರ ಕೂಡ ಅದೇ ದಿನಾಂಕದಂದು ರಿಲೀಸ್ ಆಗಬೇಕಿತ್ತು. ಆದರೆ, ಸಿಂಗಂ (Singam Again) ಸೈಡ್ ಗೆ ಹೋಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

     

    ಪುಷ್ಪ 2 ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಸಿನಿ ಪಂಡಿತರ ಲೆಕ್ಕಾಚಾರದಂತೆ ಸಾವಿರಾರು ಕೋಟಿ ರೂಪಾಯಿ ವ್ಯಾಪಾರ ಮಾಡುವ ಶಕ್ತಿ ಈ ಚಿತ್ರಕ್ಕಿದೆಯಂತೆ. ಅಲ್ಲದೇ, ದೊಡ್ಡ ಮಟ್ಟದಲ್ಲಿ ಮತ್ತು ಹಲವು ಭಾಷೆಗಳಲ್ಲಿ ಈ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ಸಿಂಗಂ ಅಗೇನ್ ಚಿತ್ರದ ರಿಲೀಸ್ ಅನ್ನು ಮುಂದೂಡಿಕೆ ಮಾಡುವ ಯೋಚನೆ ಮಾಡಲಾಗಿದೆಯಂತೆ.