Tag: ರೈತ ಹೋರಾಟ

  • ಪ್ರಧಾನಿ, ಗೃಹ ಸಚಿವರ ನಿವಾಸದ ಮುಂದೆ ರೈತರ ದೀಢಿರ್ ಪ್ರತಿಭಟನೆ ಸಾಧ್ಯತೆ

    ಪ್ರಧಾನಿ, ಗೃಹ ಸಚಿವರ ನಿವಾಸದ ಮುಂದೆ ರೈತರ ದೀಢಿರ್ ಪ್ರತಿಭಟನೆ ಸಾಧ್ಯತೆ

    – ರೈತ ಹೋರಾಟ ಗಂಭೀರತೆ ಬಗ್ಗೆ ಗುಪ್ತಚರ ಇಲಾಖೆ ವರದಿ

    ನವದೆಹಲಿ: ಬೆಂಬಲ ಬೆಲೆ ಖಾತ್ರಿ ಪಡಿಸುವ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟ (Farmers Protest) ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.

    ಸಣ್ಣ ಸಣ್ಣ ಗುಂಪುಗಳಲ್ಲಿ ದೆಹಲಿಗೆ ಆಗಮಿಸುತ್ತಿರುವ ರೈತರು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಮೈದಾನವನ್ನು ಜೈಲಾಗಿಸಲು ಅನುಮತಿ ನೀಡಲ್ಲ – ರೈತರ ಹೋರಾಟಕ್ಕೆ ದೆಹಲಿ ಸರ್ಕಾರದ ಬೆಂಬಲ

    ಕೇಂದ್ರ ಸಚಿವರ ಜೊತೆಗಿನ ಮಾತುಕತೆ ವಿಫಲವಾದ ಬಳಿಕ ರೈತರು ದೆಹಲಿ ಚಲೋ ಹೋರಾಟ ಆರಂಭಿಸಿದ್ದಾರೆ. ಈ ಸಂಬಂಧ ಗುಪ್ತಚರ ಇಲಾಖೆ ವರದಿ (Intelligence Report) ಬಿಡುಗಡೆ ಮಾಡಿದೆ. ವರದಿ ಪ್ರಕಾರ ಪಂಜಾಬ್ ಒಂದರಿಂದಲೇ 1500 ಟ್ರ್ಯಾಕ್ಟರ್, 509 ವಿವಿಧ ವಾಹನಗಳ ಮೂಲಕ ರೈತರು ದೆಹಲಿಯತ್ತ ಹೊರಟಿದ್ದಾರೆ. ಹರಿಯಾಣದಿಂದ ಬರುವ ರೈತರ ಸಂಖ್ಯೆ ಇನ್ನೂ ಹೆಚ್ಚಳವಾಗಲಿದೆ ಎಂದು ವರದಿಯಲ್ಲಿ ತಿಳಿಸಿದೆ.

    ಪ್ರತಿಭಟನಾಕಾರರು ಸುಮಾರು ಆರು ತಿಂಗಳಿಗೆ ಬೇಕಾಗುವ ಆಹಾರ ಧಾನ್ಯಗಳನ್ನು ಟ್ರ್ಯಾಕ್ಟರ್‍ನಲ್ಲಿ ಸಂಗ್ರಹ ಮಾಡಿಕೊಂಡಿದ್ದಾರೆ. ಟ್ರ್ಯಾಕ್ಟರ್‍ಗಳನ್ನೇ ಶೆಲ್ಟರ್ ಮಾಡಿಕೊಂಡಿದ್ದಾರೆ. ಹೀಗಾಗಿ ಕಳೆದ ಬಾರಿಯಂತೆ ದೆಹಲಿಯ ಗಡಿಯಲ್ಲಿ ಸುದೀರ್ಘ ಧರಣಿ ನಡೆಯಬಹುದು. ಅಲ್ಲದೇ ಈ ಹೋರಾಟಕ್ಕೆ ದಕ್ಷಿಣ ರಾಜ್ಯಗಳ ನೆರವನ್ನು ಕೋರಲಾಗಿದೆ ಎಂದು ಇಲಾಖೆ ಎಚ್ಚರಿಸಿದೆ.

    ಮುಂದುವರಿದು ರೈತರು ಸಣ್ಣ ಗುಂಪುಗಳಲ್ಲಿ ಬಂದು ದೆಹಲಿಯ ಸುತ್ತಮುತ್ತಲಿನ ಗುರುದ್ವಾರಗಳು, ಧರ್ಮಶಾಲಾಗಳು, ಆಶ್ರಮಗಳು, ಅತಿಥಿ ಗೃಹಗಳಲ್ಲಿ ಅಡಗಿಕೊಂಡಿದ್ದು, ಕ್ಷಿಪ್ರ ಪ್ರತಿಭಟನೆಗಳನ್ನು ನಡೆಸಲು ಯೋಜಿಸಿದ್ದಾರೆ. ಅವರು ಪ್ರಧಾನ ಮಂತ್ರಿ ಭವನ, ಗೃಹ ಸಚಿವರ ಭವನದಂತಹ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಬಹುದೆಂದು ಎಚ್ಚರಿಸಲಾಗಿದೆ. ಇದನ್ನೂ ಓದಿ: ಡಿಕೆಶಿ ಮೇಲೆ ಲೋಕಾಯುಕ್ತದಿಂದ ಎಫ್‌ಐಆರ್‌ ದಾಖಲು

  • ಮೈದಾನವನ್ನು ಜೈಲಾಗಿಸಲು ಅನುಮತಿ ನೀಡಲ್ಲ – ರೈತರ ಹೋರಾಟಕ್ಕೆ ದೆಹಲಿ ಸರ್ಕಾರದ ಬೆಂಬಲ

    ಮೈದಾನವನ್ನು ಜೈಲಾಗಿಸಲು ಅನುಮತಿ ನೀಡಲ್ಲ – ರೈತರ ಹೋರಾಟಕ್ಕೆ ದೆಹಲಿ ಸರ್ಕಾರದ ಬೆಂಬಲ

    ನವದೆಹಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಕರೆ ಕೊಟ್ಟಿರುವ ದೆಹಲಿ ಚಲೋ (Delhi Chalo) ಹೋರಾಟಕ್ಕೆ ದೆಹಲಿಯ ಆಮ್ ಆದ್ಮಿ ಸರ್ಕಾರ ಬೆಂಬಲ ನೀಡಿದೆ. ಬವಾನಾ ಸ್ಟೇಡಿಯಂನ್ನು ಜೈಲಾಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿರುವ ಕೇಜ್ರಿವಾಲ್ ಸರ್ಕಾರ ಅನ್ನದಾತರನ್ನು ಜೈಲಿಗೆ ಹಾಕುವುದು ತಪ್ಪು ಎಂದು ಹೇಳಿದೆ.

    ರೈತರ ಪ್ರತಿಭಟನೆಯಲ್ಲಿ (Farmers Protest) ಬಂಧಿತರಾದ ಪ್ರತಿಭಟನಾಕಾರರಿಗೆ ಬವಾನಾ ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸಿ, ವ್ಯವಸ್ಥೆ ಮಾಡಿಕೊಡುವಂತೆ ಸೋಮವಾರ ಕೇಂದ್ರ ಸರ್ಕಾರ ದೆಹಲಿ (Delhi) ಸರ್ಕಾರಕ್ಕೆ ಪತ್ರ ಬರೆದಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ದೆಹಲಿ ಸರ್ಕಾರ ರೈತರ ಬೇಡಿಕೆಗಳು ನ್ಯಾಯಸಮ್ಮತವಾಗಿದೆ. ಶಾಂತಿಯುತ ಪ್ರತಿಭಟನೆಯು ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರಿಕನ ಹಕ್ಕು ಎಂದು ಹೇಳಿದೆ.

    ಇಂದು (ಮಂಗಳವಾರ) ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸದಂತೆ ರೈತರ `ದೆಹಲಿ ಚಲೋ’ ಮೆರವಣಿಗೆಯನ್ನು ತಡೆಯಲು ದೆಹಲಿ ಗಡಿಗಳಲ್ಲಿ ಹಲವು ಹಂತದಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್‍ಗಳು, ಕಾಂಕ್ರೀಟ್ ಬ್ಲಾಕ್‍ಗಳು, ಕಬ್ಬಿಣದ ಮೊಳೆಗಳು ಮತ್ತು ಕಂಟೈನರ್‍ಗಳನ್ನು ಬಳಸಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರೈತ ಮುಖಂಡರು ಮತ್ತು ಕೇಂದ್ರದ ನಡುವಿನ ಮಾತುಕತೆ ವಿಫಲವಾದ ಬಳಿಕ ರೈತರನ್ನು ಗಡಿಯಲ್ಲಿ ತಡೆಯುವ ಪ್ರಯತ್ನ ಆರಂಭವಾಗಿದೆ.

    ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿಗಳಲ್ಲಿ ಗಲಭೆ ನಿಗ್ರಹ ಪಡೆಗಳಲ್ಲಿ ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿಯನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ರೈತರ ಪ್ರತಿಭಟನಾ ಮೆರವಣಿಗೆ ಸಲುವಾಗಿ ನಿರ್ದಿಷ್ಟ ಸ್ಥಳಗಳಲ್ಲಿ ತಾತ್ಕಾಲಿಕ ಜೈಲುಗಳನ್ನು ಸಹ ಸ್ಥಾಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಭಾರತ ಬಂದ್‍ಗೆ ಕರ್ನಾಟಕದಲ್ಲೂ ಸಂಪೂರ್ಣ ಬೆಂಬಲ: ಕುರುಬೂರು ಶಾಂತಕುಮಾರ್

    ಭಾರತ ಬಂದ್‍ಗೆ ಕರ್ನಾಟಕದಲ್ಲೂ ಸಂಪೂರ್ಣ ಬೆಂಬಲ: ಕುರುಬೂರು ಶಾಂತಕುಮಾರ್

    ಬೀದರ್: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಹೋರಾಟ ಮಾಡುತ್ತಿದ್ದು, ಹೋರಾಟ ಫಲಪ್ರದವಾಗದ ಕಾರಣ ಸೆಪ್ಟೆಂಬರ್ 27 ರಂದು ಸಂಯುಕ್ತ ಕಿಸಾನ್ ಮೋರ್ಚಾದಿಂದ ಭಾರತ್ ಬಂದ್‍ಗೆ ಕೆರೆ ನೀಡಲಾಗಿದೆ. ಈ ಬಂದ್ ಕರ್ನಾಟಕದಲ್ಲೂ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ರಾಜ್ಯ ರೈತ ಮುಖಂಡ ಕುರುಬೂರು ಶಾಂತಕುಮಾರ್ ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ಇಂದು ಬೀದರ್‍ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ಹೋರಾಟದಲ್ಲಿ 12ನೇ ಸುತ್ತಿನ ಮಾತುಕತೆಯಾದರು ಕೂಡಾ ಇನ್ನೂ ಯಾವುದೇ ಪರಿಹಾರ ಸಿಕ್ಕಿಲ್ಲ. ಈಗಾಗಲೇ ಹೋರಾಟದಲ್ಲಿ 600ಕ್ಕೂ ಹೆಚ್ಚು ರೈತರ ಪ್ರಾಣ ಬಲಿದಾನವಾಗಿವೆ. ಇಷ್ಟಾದ್ರು ಕೂಡಾ ಇಲ್ಲಿಯ ತನಕ ಪ್ರಧಾನಿ ಮೋದಿ ಸಮಸ್ಯೆ ಪರಿಹರಿಸುವಂತ ಕೆಲಸ ಮಾಡಿಲ್ಲ. ರೈತರ ಬೆನ್ನೆಲುಬನ್ನು ಮುರಿಯುವ ನೀಚ ಕೆಲಸವನ್ನು ಸರ್ಕಾರಗಳು ಮಾಡುತ್ತಿವೆ ಎಂದು ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜನ ಅಸಮಾನ್ಯ, ಅಭಿಮಾನಿಗಳ ತಲೆಗೆ ಹುಳ ಬಿಟ್ಟ ಉಪೇಂದ್ರ

    ಸೆಪ್ಟೆಂಬರ್ 27 ರಂದು ಭಾರತ ಬಂದ್‍ಗೆ ಕರೆ ನೀಡಿದ್ದು, ಕರ್ನಾಟಕದಲ್ಲೂ ಕೂಡಾ ಸಂಪೂರ್ಣ ಬಂದ್ ಮಾಡಬೇಕು ಎಂದು ಸಭೆ ಮಾಡಿ ನಿರ್ಮಾಣ ಮಾಡಿದ್ದೇವೆ. ರೈತರು ಹಾಗೂ ಜನರನ್ನು ಮೋಸ ಮಾಡಿ ಆಡಳಿತ ಮಾಡುತ್ತೇವೆ ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಮೋದಿಯವರೆ. ಈ ದೇಶದ ಜನರು ಎಚ್ಚರಗೊಂಡಿದ್ದಾರೆ. ಮುಂದಿನ ಉತ್ತರ ಪ್ರದೇಶದ ಚುನಾವಣೆಯಲ್ಲಿ ರೈತರ ಶಕ್ತಿಯನ್ನು ತೋರಿಸಬೇಕಾಗುತ್ತದೆ ಎಂದು ಕುರುಬೂರು ಶಾಂತಕುಮಾರ್ ಗುಡುಗಿದ್ದಾರೆ. ಇದನ್ನೂ ಓದಿ: ಬಾಳೆಎಲೆಯಲ್ಲಿ ಮೂಡಿದ ಮೋದಿ ಚಿತ್ರ

  • ರೈತ ಹೋರಾಟಗಾರರಿಂದ ಇಂದು ಕರಾಳ ದಿನ ಆಚರಣೆ

    ರೈತ ಹೋರಾಟಗಾರರಿಂದ ಇಂದು ಕರಾಳ ದಿನ ಆಚರಣೆ

    ನವದೆಹಲಿ: ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿ ಭಾಗದಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಇಂದು 6 ತಿಂಗಳು ಪೂರ್ಣವಾಗುವ ಹಿನ್ನೆಲೆ ರೈತ ಹೋರಾಟಗಾರರು ಇಂದು ಕರಾಳ ದಿನ ಆಚರಣೆ ಮಾಡಿದ್ದಾರೆ.

    ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಇಂದು 6 ತಿಂಗಳು ಪೂರ್ಣಗೊಂಡ ಕಾರಣ ಇಂದು ರೈತರು ತಮ್ಮ ಮನೆಗಳಲ್ಲಿ, ವಾಹನಗಳಲ್ಲಿ, ಬೇರೆ ಬೇರೆ ಸ್ಥಳಗಳಲ್ಲಿ ಕಪ್ಪು ಬಾವುಟ ಹಾರಿಸಲು ನಿರ್ಧಾರ ಮಾಡಿದ್ದಾರೆ. ಇದರೊಂದಿಗೆ ಪಂಜಾಬ್‍ನ ರೈತರು ಕಪ್ಪು ಬಣ್ಣದ ಟರ್ಬನ್‍ಗಳನ್ನು ಧರಿಸುವ ಮೂಲಕ ಕರಾಳ ದಿನ ಆಚರಣೆಗೆ ಬೆಂಬಲ ಸೂಚಿಸುತ್ತಿದ್ದಾರೆ. 2020ರ ನವೆಂಬರ್ 26ರಂದು ದೆಹಲಿ ಚಲೋ ಹೆಸರಿನಲ್ಲಿ ಹೋರಾಟ ಆರಂಭಿಸಿದ್ದ ರೈತರು, ದೆಹಲಿ ಪ್ರವೇಶಕ್ಕೆ ಅನುಮತಿ ಸಿಗದ ಹಿನ್ನಲೆಯಲ್ಲಿ ಗಡಿಗಳಲ್ಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ಸತತವಾಗಿ 6 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರು, ಕೇಂದ್ರದ 3 ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಪಟ್ಟುಹಿಡಿದಿದ್ದಾರೆ.

    ಈ ನಡುವೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ ಹಲವು ಸುತ್ತಿನ ಮಾತುಕತೆಗಳು ಕೂಡ ವಿಫಲವಾಗಿದೆ. ಹಾಗಾಗಿ ಇಂದಿನಿಂದ ಕರಾಳ ದಿನ ಆಚರಿಸಲು ರೈತ ಸಂಘಟನೆಗಳು ಈಗಾಗಲೇ ನಿರ್ಧಾರ ಮಾಡಿದ್ದಾರೆ. ಕೊರೊನಾ ನಡುವೆಯೂ ದೆಹಲಿ ಗಡಿಯಲ್ಲಿ ಕಪ್ಪು ಬಾವುಟ ಹಿಡಿದು ರೈತರು ಹೋರಾಟ ಮುಂದುವರಿಸಿದ್ದಾರೆ. ಇತ್ತ ಪೊಲೀಸರು ಕೂಡ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿಭಾಗದಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

  • ರೈತನಾಯಕ ರಾಕೇಶ್ ಟಿಕಾಯತ್ 80 ಕೋಟಿ ಆಸ್ತಿಯ ಒಡೆಯ

    ರೈತನಾಯಕ ರಾಕೇಶ್ ಟಿಕಾಯತ್ 80 ಕೋಟಿ ಆಸ್ತಿಯ ಒಡೆಯ

    – ಆರಂಭದಲ್ಲಿ ದೆಹಲಿ ಕಾನ್‍ಸ್ಟೇಬಲ್ ಹುದ್ದೆ
    – ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ

    ನವದೆಹಲಿ: ಕೃಷಿ ಕಾಯ್ದೆಯ ವಿರುದ್ಧ ಉತ್ತರ ಪ್ರದೇಶದ ಘಾಜಿಪುರ ಗಡಿಯಲ್ಲಿ ಹೋರಾಟ ಮಾಡುತ್ತಿರುವ ಭಾರತ್ ಕಿಸಾನ್ ಯೂನಿಯನ್ ಸಂಘಟನೆಯ ನಾಯಕನಾಗಿ ಗುರುತಿಸಿಕೊಂಡಿರುವ ರಾಕೇಶ್ ಟಿಕಾಯತ್ 80 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವ ವಿಚಾರ ಈಗ ಪ್ರಕಟವಾಗಿದೆ.

    ಕಳೆದ ಎರಡು ತಿಂಗಳಿನಿಂದ 40 ಕ್ಕೂ ಹೆಚ್ಚು ಸಂಘಟನೆಗಳು ಕೇಂದ್ರದ ಕೃಷಿ ಕಾಯ್ದೆಯನ್ನು ವಿರೋಧಿಸಿ ಪಟ್ಟು ಬಿಡದೆ ಹೋರಾಟ ನಡೆಸುತ್ತಿದೆ. ಇದರೊಂದಿಗೆ ಜನವರಿ 26ರಂದು ನಡೆದ ಹಿಂಸಾಚಾರದ ಬಳಿಕ ಕೆಲವು ರೈತ ಸಂಘಟನೆಗಳು ಹೋರಾಟದಿಂದ ಹಿಂದೆ ಸರಿದರೆ ಇತ್ತ ರಾಕೇಶ್ ಟಿಕಾಯತ್ ಮುಂದಾಳತ್ವದಲ್ಲಿ ಬಿಕೆಯು ಪಟ್ಟು ಬಿಡದೇ ದಿನೇ ದಿನೇ ವಿಭಿನ್ನರೀತಿಯ ಪ್ರತಿಭಟನೆ ಮಾಡುತ್ತಿದೆ.

    ಹೊಸ ಹೊಸ ಪ್ರತಿಭಟನೆಯ ಮೂಲಕ ಬಾರಿ ಚರ್ಚೆಗೆ ಕಾರಣರಾಗಿರುವ ರೈತ ಸಂಘದ ನಾಯಕನಾಗಿ ಗುರುತಿಸಿಕೊಂಡಿರುವ ಟಿಕಾಯತ್ ಅವರ ಆಸ್ತಿ ವಿವರ ಇದೀಗ ಬಾರಿ ಸದ್ದು ಮಾಡುತ್ತಿದೆ. ಮಾಧ್ಯಮವೊಂದು ವರದಿ ಮಾಡಿರುವಂತೆ ಟಿಕಾಯತ್ ಬರೋಬ್ಬರಿ 80 ಕೋಟಿ ಒಡೆಯನಾಗಿದ್ದು, ಉತ್ತರ ಪ್ರದೇಶ, ಮಹಾರಾಷ್ಟ್ರ, ದುಬೈ, ಉತ್ತರ್‍ಖಾಂಡ್, ದೆಹಲಿ ಸೇರಿದಂತೆ, ಪ್ರಮುಖ 13 ನಗರಗಳಲ್ಲಿ ಕೋಟಿ ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ ಎಂದು ವರದಿಯಾಗಿದೆ.

    ಮುಜಾಫರನಗರ, ಲಲಿತ್‍ಪುರ, ಝಾನ್ಸಿ, ಲಖಿಮ್‍ಪುರ ಖೇರಿ, ಬಿಜ್ನೂರ್, ಬದನ್, ಡೆಲ್ಲಿ, ನೊಯ್ಡಾ, ಘಾಜಿಪುರ, ಡೆಹ್ರಾಡೊನ್, ರೊರ್ಕೀ, ಹರಿದ್ವಾರ ಮತ್ತು ಮುಂಬೈನಲ್ಲಿ ಟಿಕಾಯತ್ ತಮ್ಮ ಆಸ್ತಿಯನ್ನು ಹೊಂದಿದ್ದಾರೆ.

    ಟಿಕಾಯತ್ ರೈತ ನಾಯಕನಾಗವುದರೊಂದಿಗೆ ಉದ್ಯಮಿ ಆಗಿದ್ದಾರೆ. ಪೆಟ್ರೋಲ್ ಬಂಕ್, ಶೋರೂಮ್ ಸೇರಿದಂತೆ ಅನೇಕ ಉದ್ಯಮಗಳನ್ನು ನಡೆಸುತ್ತಿದ್ದಾರೆ.

    ಮೂಲತಃ ಉತ್ತರ ಪ್ರದೇಶದ ಮುಜಾಫರನಗರದ ಸಿಸಾವುಲಿ ಪಟ್ಟಣದಲ್ಲಿ ಹುಟ್ಟಿದ ರಾಕೇಶ್ ಟಿಕಾಯತ್, ರೈತ ಹೋರಾಟ ಕುಟುಂಬದ ಕುಡಿಯಾಗಿದ್ದಾರೆ. ಬಿಕೆಯು ಸಹ ಸಂಸ್ಥಾಪಕ ಮಹೇಂದ್ರ ಸಿಂಗ್ ಟಿಕಾಯತ್ ಅವರ ಮಗನಾಗಿ ಜನಿಸಿ ಇದೀಗ ಬಿಕೆಯು ವಕ್ತಾರರಾಗಿ ರೈತ ಹೋರಾಟವನ್ನು ಮಾಡುತ್ತಿದ್ದರೆ, ಇವರ ಹಿರಿಯಣ್ಣ ನರೇಶ್ ಟಿಕಾಯತ್ ಬಿಕೆಯುನ ರಾಷ್ಟ್ರೀಯ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರೊಂದಿಗೆ ರಾಕೇಶ್ ಟಿಕಾಯತ್‍ಗೆ ಇಬ್ಬರು ಹೆಣ್ಣುಮಕ್ಕಳಿದ್ದು ಅವರು ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ ಅವರೂ ಕೂಡ ರೈತರ ಪ್ರತಿಭಟನೆಗೆ ಸಹಕಾರ ಮಾಡುತ್ತಿದ್ದು ಫೆಬ್ರವರಿ 8ರಂದು ಮೆಲ್ಬೋರ್ನ್‍ನಲ್ಲಿ ನಡೆದ ರೈತ ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದರು ಎಂದು ವರದಿಯಾಗಿದೆ.

    ರಾಕೇಶ್ ಟಿಕಾಯತ್ ಮಾಸ್ಟರ್ ಡಿಗ್ರಿ ಪದವಿಧರರಾಗಿದ್ದು. ಮೀರತ್ ವಿಶ್ವವಿದ್ಯಾಲಯದಲ್ಲಿ ಎಂಎ ಪದವಿ ಪಡೆದು 1992 ರಲ್ಲಿ ದೆಹಲಿ ಪೊಲೀಸ್ ಇಲಾಖೆಯಲ್ಲಿ ಕಾನ್‍ಸ್ಟೇಬಲ್ ಆಗಿ ಕೆಲಸ ಮಾಡಿ ನಂತರ ಸಬ್ ಇನ್ಸ್‍ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗಲೇ ವೃತ್ತಿ ತೊರೆದು ಬಿಕೆಯು ಸಂಘಟನೆಯಲ್ಲಿ ತೊಡಗಿಕೊಂಡು 2018ರಿಂದ ವಕ್ತಾರರಾಗಿ ರೈತರ ಪರ ಕೆಲಸ ಮಾಡುತ್ತಿದ್ದರು.

    ಈ ಹಿಂದೆ ಹರಿದ್ವಾರ, ಉತ್ತರಖಾಂಡ್, ದೆಹಲಿ ಕಿಸಾನ್ ಕ್ರಾಂತಿಯಾತ್ರೆಯಾ ನಾಯಕರಾಗಿ ಗುರುತಿಸಿಕೊಂಡಿದ್ದ ಟಿಕಾಯತ್, 2007ರಲ್ಲಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಖತಾವುಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 2014ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಆರ್‍ ಜೆ ಡಿ  ಪಕ್ಷದಿಂದ ಅಮ್ರೋಹ ಕ್ಷೇತ್ರದಿಂದ ಆಕಾಡಕ್ಕೆ ಇಳಿದಿದ್ದರು.

    ಟಿಕಾಯತ್ ಇಷ್ಟೆಲ್ಲ ಸಾಧನೆಯೊಂದಿಗೆ ಜೆಂಕೆಯೊಂದನ್ನು ಸೆರೆ ಹಿಡಿದ ಆರೋಪವನ್ನು ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ಕಾನೂನಿನ ಪ್ರಕಾರ ಜಿಂಕೆಯನ್ನು ಸೆರೆ ಹಿಡಿದರೆ 7 ವರ್ಷ ಜೈಲು ಶಿಕ್ಷೆ, 25 ಸಾವಿರ ದಂಡವನ್ನೂ ಕಟ್ಟಬೇಕಾಗುತ್ತದೆ.