ಲಕ್ನೋ: ಉತ್ತರ ಪ್ರದೇಶದ (Uttar Pradesh) ಗೋಂಡಾ ಜಿಲ್ಲೆಯಲ್ಲಿ ನಡೆದಿರುವ ಭೀಕರ ರೈಲು ದುರಂತವು ಒಡಿಶಾದ ಬಾಲಸೋರ್, ಪಶ್ಚಿಮ ಬಂಗಾಳದ ದಾರ್ಜಿಲಿಂಗ್ ನಲ್ಲಿ ನಡೆದ ಭೀಕರ ರೈಲು ಅಪಘಾತವನ್ನೇ ನೆನಪಿಸಿದೆ. ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ರೈಲಿನ (Chandigarh-Dibrugarh Express Train) ಹಲವು ಕೋಚ್‌ಗಳು ಹಳಿ ತಪ್ಪಿದ್ದರಿಂದ ರೈಲು ಅಪಘಾತಕ್ಕೀಡಾಗಿದ್ದು, ನಾಲ್ವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಗೋಂಡಾದಲ್ಲಿ ನಡೆದಿದೆ.
ಬುಧವಾರ ರಾತ್ರಿ 11.35ಕ್ಕೆ ಚಂಡೀಗಢ ನಿಲ್ದಾಣದಿಂದ (Chandigarh Railway Station) ಹೊರಟಿದ್ದ ರೈಲು (ರೈಲು ಸಂಖ್ಯೆ 15904) ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು. ಮಾರ್ಗಮಧ್ಯೆ ಹಲವು ಕೋಚ್‌ಗಳು ಹಳಿ ತಪ್ಪಿದ ಪರಿಣಾಮ ದುರಂತರ ಸಂಭವಿಸಿದೆ. ಗೋಂಡಾ ಮತ್ತು ಜಿಲಾಹಿ ನಡುವಿನ ಪಿಕೌರಾ ಪ್ರದೇಶದಲ್ಲಿ ಅಪಘಾತ (Train Accident) ಸಂಭವಿಸಿದ್ದು, ನಾಲ್ವರು ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ
‼️HCM Dr @himantabiswa has been briefed about the derailment of Dibrugarh – Chandigarh express in Uttar Pradesh.
HCM is monitoring the situation and the Government of Assam is in touch with relevant authorities.
— Chief Minister Assam (@CMOfficeAssam) July 18, 2024
15 ಅಂಬುಲೆನ್ಸ್, 40 ವೈದ್ಯಕೀಯ ಸಿಬ್ಬಂದಿ ಸ್ಥಳಕ್ಕೆ ಹಾಜರ್:
ಘಟನೆ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿವೆ. ಅಲ್ಲದೇ 15 ಅಂಬುಲೆನ್ಸ್‌ಗಳೊಂದಿಗೆ 40 ಸದಸ್ಯರ ವೈದ್ಯಕೀಯ ತಂಡ ಸ್ಥಳಕ್ಕೆ ಬಂದಿದ್ದು, ಪ್ರಯಾಣಿಕರ ರಕ್ಷಣೆಗೆ ಮುಂದಾಗಿದ್ದಾರೆ. ಹೆಚ್ಚುವರಿ ಅಂಬುಲೆನ್ಸ್‌ಗಳನ್ನು ಸ್ಥಳಕ್ಕೆ ನಿಯೋಜನೆ ಮಾಡುವಂತೆ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಗ್ನಿವೀರರಿಗೆ 10% ಮೀಸಲಾತಿ – ಸ್ವಂತ ಉದ್ಯಮ ಆರಂಭಿಸುವವರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಘೋಷಣೆ
ಸ್ಥಳಕ್ಕೆ ಸಿಎಂ ಭೇಟಿ:
ಘಟನೆ ಸಂಭವಿಸಿದ ಕೂಡಲೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸ್ಥಳಕ್ಕಾಗಮಿಸಿದ್ದಾರೆ. ಜೊತೆಗೆ ಪರಿಹಾರ ಕ್ರಮಗಳನ್ನು ತ್ವರಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಸಿಎಂ ಭೇಟಿ ಬೆನ್ನಲ್ಲೇ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕಾಗಮಿಸಿ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಸೂಚನೆ ನೀಡಿದೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಭೂಕುಸಿತ ದುರಂತ – ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಕೇಂದ್ರ ಸಚಿವ ಹೆಚ್‌ಡಿಕೆ
– ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಳುಗಳಿಗೆ 50,000 ರೂ. ಪರಿಹಾರ ಘೋಷಣೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ (West Bengal Train Accident) ಸಂಭವಿಸಿದ ಭೀಕರ ರೈಲು ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ದುಃಖಕರವಾಗಿದೆ. ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
The railway accident in West Bengal is saddening. Condolences to those who lost their loved ones. I pray that the injured recover at the earliest. Spoke to officials and took stock of the situation. Rescue operations are underway to assist the affected. The Railways Minister Shri…
ಘಟನೆಯ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಂತ್ರಸ್ತರ ನೆರವಿಗಾಗಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅಪಘಾತ ನಡೆದ ಸ್ಥಳಕ್ಕೆ ತೆರಳಿದ್ದಾರೆ ಎಂದು ತಿಳಿಸಿದರು.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರಿಗೆ 50,000 ರೂ. ನೆರವು ನೀಡುವುದಾಗಿ ಪ್ರಧಾನಿ ಕಾರ್ಯಾಲಯ ಘೋಷಿಸಿದೆ. ಇನ್ನು ಈ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಕೂಡ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಘಟನೆ ಏನು?
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಗೂಡ್ಸ್ ರೈಲೊಂದು ಹಿಂಬದಿಯಿಂದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ (Kanchanjunga Express) ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸಾವಿನ ಸಂಖ್ಯೆ 8ಕ್ಕೆ ಏರಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಇಲ್ಲಿಯವರೆಗೆ ದೊರೆತ ಮಾಹಿತಿಯ ಪ್ರಕಾರ, ಗೂಡ್ಸ್ ರೈಲು ಸಿಗ್ನಲ್ ಅನ್ನು ಮೀರಿದ ಪರಿಣಾಮ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಮತ್ತು ಅಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿವೆ ಎಂದು ವರದಿಗಳು ತಿಳಿಸಿವೆ. ಜನರು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲು ರೈಲ್ವೆ ಇಲಾಖೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.
ನ್ಯೂಯಾರ್ಕ್: ಒಡಿಶಾದಲ್ಲಿ (Odisha) ಸಂಭವಿಸಿದ ಭೀಕರ ರೈಲು ದುರಂತದಿಂದ ಸಂತ್ರಸ್ತರಾದವರಿಗೆ ಭಾರತ (India) ಮೂಲದ 16 ವರ್ಷದ ಹುಡುಗಿಯೊಬ್ಬಳು ಆರ್ಥಿಕ ಸಹಾಯ ಮಾಡಿದ್ದಾಳೆ.
ಹುಡುಗಿಯನ್ನು ತನಿಷ್ಕಾ ಧರಿವಾಲ್ (Tanishka Dhariwal) ಎಂದು ಗುರುತಿಸಲಾಗಿದ್ದು, ಈಕೆ ಪ್ರಸ್ತುತ ಅಮೆರಿಕದಲ್ಲಿ (America) ನೆಲೆಸಿದ್ದಾಳೆ. ಸದ್ಯ ಸಂತ್ರಸ್ತರಿಗೆ ಸಹಾಯ ಮಾಡುವ ಮೂಲಕ ಸಣ್ಣ ವಯಸ್ಸಿನಲ್ಲಿ ಸಹಾಯ ಮಾಡುವ ಮನಸ್ಥಿತಿ ಬೆಳೆಸಿಕೊಂಡಿದ್ದಕ್ಕೆ ಎಲ್ಲೆಡೆಯಿಂದಲೂ ಶ್ಲಾಘನೆ ವ್ಯಕ್ತವಾಗುತ್ತಿದೆ.
ಈಕೆ ಪ್ರಧಾನಮಂತ್ರಿ ಆರೈಕೆ ನಿಧಿಗಾಗಿ (PM Cares Fund) 8,27,500 ರೂ. (ಯುಎಸ್‍ಡಿ 10,000) ಸಂಗ್ರಹಿಸಿದ್ದಾಳೆ. ಅಲ್ಲದೆ ಈ ನಿಧಿಯ ಹಣವನನ್ನು ನ್ಯೂಯಾರ್ಕ್‍ನಲ್ಲಿರುವ ಇಂಡಿಯಾದ ಕಾನ್ಸುಲ್ ಜನರಲ್‍ಗೆ ಹಸ್ತಾಂತರಿಸಿದ್ದಾಳೆ. ಇದನ್ನೂ ಓದಿ: ಖ್ಯಾತ ನಿರ್ದೇಶಕ ಸಿದ್ದಿಕಿಗೆ ಹೃದಯಾಘಾತ, ಆರೋಗ್ಯ ಸ್ಥಿತಿ ಗಂಭೀರ
ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ತನಿಷ್ಕಾ, ಗೆಳೆಯರ ಜೊತೆ ಸೇರಿಕೊಂಡು ನಾನು ಗೋ ಫಂಡ್‍ಮಿ ಎಂಬ ಡಿಜಿಟಲ್ ಅಭಿಯಾನ ಆರಂಭಿಸಿದೆ. ನನ್ನ ಈ ಅಭಿಯಾನಕ್ಕೆ ಸಾಕಷ್ಟು ಮಂದಿ ಕೈ ಜೋಡಿಸಿದರು. ಬೇರೆ ಬೇರೆ ನಗರಗಳು, ಸ್ನೇಹಿತರು ಹಾಗೂ ಮನೆ ಮನೆಗೆ ತೆರಳಿ ಸುಮಾರು 8 ಲಕ್ಷಕ್ಕಿಂತಲೂ ಅಧಿಕ ಹಣ ಸಂಗ್ರಹಿಸಿದೆ ಎಂದರು.
ಒಟ್ಟಿನಲ್ಲಿ ತನಿಷ್ಕಾ ಮಾಡುತ್ತಿರುವ ಈ ಸಹಾಯದ ಹಿಂದೆ ಭಾವನೆಯೊಂದಿದೆ. ನನ್ನ ದೇಶ, ನನ್ನವರು ಎಂಬ ಭಾವನೆಯಿಂದ ತನಿಷ್ಕಾ ಈ ನಿರ್ಧಾರ ತೆಗೆದುಕೊಂಡಿದ್ದಾಳೆ. ಸದ್ಯ ತನಿಷ್ಕಾ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಒಡಿಶಾ ರೈಲು ದುರಂತ: 2023ರ ಜೂನ್ 2ರಂದು ಒಡಿಶಾದ ಬಾಲಸೋರ್‍ನಲ್ಲಿ ನಡೆದ ತ್ರಿವಳಿ ರೈಲು ಅಪಘಾತದಲ್ಲಿ 293 ಪ್ರಯಾಣಿಕರು ಮೃತಪಟ್ಟಿದ್ದರು. ಇದರಲ್ಲಿ 52 ಮೃತದೇಹಗಳನ್ನು ಯಾರೂ ಗುರುತಿಸದ ಕಾರಣ ಒಂದು ತಿಂಗಳು ಕಳೆದರೂ ಶವಗಳು ಭುವನೇಶ್ವರದ ಏಮ್ಸ್ ಆಸ್ಪತ್ರೆ ಶವಾಗಾರದಲ್ಲಿ ಅನಾಥವಾಗಿವೆ. ತ್ರಿವಳಿ ರೈಲು ದುರಂತಕ್ಕೆ ಮಾನವ ಲೋಪವೇ ಕಾರಣ ಎಂದು ವರದಿಯಾಗಿತ್ತು.
ಇಸ್ಲಾಮಾಬಾದ್: ಕರಾಚಿಯಿಂದ (Karachi) ರಾಲ್ಪಿಂಡಿಗೆ ತೆರಳುತ್ತಿದ್ದ ಹಜಾರಾ ಎಕ್ಸ್‌ಪ್ರೆಸ್ (Hazara Express) ರೈಲು ಭೀಕರ ದುರಂತಕ್ಕೀಡಾಗಿದೆ. ಘಟನೆಯಲ್ಲಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಪಾಕಿಸ್ತಾನದ (Pakistan) ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.
ಕರಾಚಿಯಿಂದ 275 ಕಿಲೋ ಮೀಟರ್ ದೂರದಲ್ಲಿರುವ ರಾವಲ್ಪಿಂಡಿಗೆ (Rawalpindi) ತೆರಳುತ್ತಿದ್ದ ಹಜಾರಾ ಎಕ್ಸ್‌ಪ್ರೆಸ್ ರೈಲಿನ ಒಟ್ಟು 10 ಬೋಗಿಗಳು ಹಳಿ ತಪ್ಪಿದೆ. ಘಟನೆಯಲ್ಲಿ ಈವೆರೆಗೆ 20 ಮಂದಿ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆದ್ರೆ ಘಟನೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಪ್ರಧಾನಿ ಅರೆಸ್ಟ್ – ಇಮ್ರಾನ್ ಖಾನ್‌ಗೆ 3 ವರ್ಷ ಜೈಲು, 5 ವರ್ಷ ರಾಜಕೀಯದಿಂದ ಬ್ಯಾನ್
ರೈಲ್ವೆ ಆಡಳಿತ ಮಂಡಳಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಪಾಕಿಸ್ತಾನ ಸೇನೆ ಕೂಡ ಕಾರ್ಯಾಚರಣೆಗೆ ಕೈಜೋಡಿಸಿದ್ದು, ಸಮೀಪದ ನೆಲೆಗಳಿಂದ ಹೆಚ್ಚಿನ ಸೈನಿಕರನ್ನ ಕರೆಸಿಕೊಳ್ಳಲಾಗಿದೆ. ಘಟನಾ ಸ್ಥಳಕ್ಕೆ ಸಮೀಪದಲ್ಲಿರುವ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಇತರ ಪ್ರಯಾಣಿಕರನ್ನ ನಿಗದಿತ ಸ್ಥಳಕ್ಕೆ ತಲುಪಿಸಲು ಪರ್ಯಾಯ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸ್ಥಳೀಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ
ಎರಡು ತಿಂಗಳ ಹಿಂದೆಯಷ್ಟೇ ಒಡಿಶಾ ರಾಜ್ಯದಲ್ಲಿ ನಡೆದ ಭೀಕರ ರೈಲು ದುರಂತ (Odisha Train Accident) ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿತ್ತು. ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಜೂನ್ 2ರ ಸಂಜೆ ಸರಕುಗಳ ರೈಲಿಗೆ ಡಿಕ್ಕಿ ಹೊಡೆದು ಅದರ ಹೆಚ್ಚಿನ ಕೋಚ್‍ಗಳು ಹಳಿತಪ್ಪಿದ್ದವು. ಈ ಅಪಘಾತದಲ್ಲಿ ಸುಮಾರು 288 ಮಂದಿ ಸಾವನ್ನಪ್ಪಿದ್ದರು ಅಲ್ಲದೇ 1,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಪಾಕಿಸ್ತಾನದಲ್ಲಿ ಸಂಭವಿಸಿರುವ ದುರಂತದಲ್ಲಿ ಸಂತ್ರಸ್ತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ.
ಭುವನೇಶ್ವರ: ಇತ್ತೀಚೆಗಷ್ಟೇ ಭೀಕರ ರೈಲು ದುರಂತ (Odisha Train Accident) ಸಂಭವಿಸಿದ್ದ ಒಡಿಶಾದಲ್ಲಿ (Odisha) ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು 12 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
Bhubaneswar | Odisha CM Naveen Patnaik has expressed deep grief over the death of the people in the bus accident in Ganjam District and has announced ex-gratia of Rs. 3 lakh to all the deceased: CMO https://t.co/ndkGUZnYNZ
ಒಡಿಶಾದಿಂದ ಸುಮಾರು 35 ಕಿಮೀ ದೂರದಲ್ಲಿರುವ ಬರ್ಹಾಂಪುರ-ತಪ್ತಪಾಣಿ ರಸ್ತೆಯ ದಿಗಪಹಂಡಿ ಪ್ರದೇಶದ ಬಳಿ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ ಎಂದು ಬರ್ಹಾಂಪುರ ಪೊಲೀಸ್ ವರಿಷ್ಠಾಧಿಕಾರಿ ಎಂ. ಶರವಣ ವಿವೇಕ್ ತಿಳಿಸಿದ್ದಾರೆ.
ಬರ್ಹಾಂಪುರದಲ್ಲಿ ವಿವಾಹಮಹೋತ್ಸವ ಮುಗಿಸಿಕೊಂಡು ಪ್ರಯಾಣಿಕರು ದಿಗಪಹಂಡಿ ಬಳಿಕ ಖಂಡದೇಲಿಗೆ ಹಿಂದಿರುಗುತ್ತಿದ್ದರು, ಈ ವೇಳೆ ಅಪಘಾತ ಸಂಭವಿಸಿದೆ. ಇದರಲ್ಲಿ ಒಂದೇ ಕುಟುಂಬದ 7 ಮಂದಿ ಸೇರಿ 12 ಮಂದಿ ಮೃತಪಟ್ಟಿದ್ದಾರೆ. 7 ಮಂದಿ ಗಾಯಗೊಂಡಿದ್ದು, ಅವರನ್ನ ಎಂಕೆಸಿಜಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಡ್ರಗ್ಸ್ ಗಾಗಿ ಪೆಡ್ಲರ್ ಜೊತೆ ಅನೈತಿಕ ಸಂಬಂಧ: ಹೆಂಡತಿ ವಿರುದ್ಧವೇ ಸ್ಯಾಂಡಲ್ ವುಡ್ ನಟ ದೂರು
ಅಪಘಾತದಲ್ಲಿ ಗಾಯಗೊಂಡ ಪ್ರತಿಯೊಬ್ಬರ ಚಿಕಿತ್ಸೆಗೆ ಒಡಿಶಾ ಸರ್ಕಾರ (Odisha Government) ತಲಾ 30 ಸಾವಿರ ರೂ. ಪರಿಹಾರ ಮಂಜೂರು ಮಾಡಿದೆ. ಸದ್ಯ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮರೆಯದ ರೈಲು ದುರಂತ:
ಇತ್ತೀಚೆಗಷ್ಟೇ ಒಡಿಶಾದ ಬಾಲಾಸೋರ್ ಬಳಿ ಪ್ರಯಾಣಿಕರಿದ್ದ ಎರಡು ರೈಲು ಹಾಗೂ ಸರಕು ತುಂಬಿದ್ದ ಒಂದು ರೈಲು ಅಪಘಾತಕ್ಕೀಡಾಗಿದ್ದವು. ಈ ಭೀಕರ ದುರಂತದಲ್ಲಿ ಸುಮಾರು 275 ಮಂದಿ ದುರ್ಮರಣಕ್ಕೀಡಾಗಿದ್ದರು. 1,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಬೆಚ್ಚಿಬೀಳಿಸುವಂತಹ ದುರಂತಕ್ಕೆ ವಿಶ್ವಾದ್ಯಂತ ವಿಷಾದ ವ್ಯಕ್ತವಾಗಿತ್ತು. ಅಪಘಾತವು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ನಂತರ ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಲಾಗಿತ್ತು.
ನವದೆಹಲಿ: ಒಡಿಶಾ ರೈಲು ದುರಂತದ (Odisha Train Tragedy) ತನಿಖೆ ಚುರುಕುಗೊಂಡಿದ್ದು ಕೇಂದ್ರೀಯ ತನಿಖಾ ದಳದ (CBI) ವಿಚಾರಣೆಯ ಎದುರಿಸಿದ್ದ ಜ್ಯೂನಿಯರ್ ಎಂಜಿನಿಯರ್ (Signal Junior Engineer) ಕುಟುಂಬದೊಂದಿಗೆ ನಾಪತ್ತೆಯಾಗಿದ್ದಾರೆ.
ಸೊರೋ ಸೆಕ್ಷನ್ ಸಿಗ್ನಲ್ ಆಫೀಸರ್ ಅಮೀರ್ ಖಾನ್ (Amir Khan) ಅವರನ್ನು ಈ ಹಿಂದೆ ಸಿಬಿಐ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿತ್ತು. ಮತ್ತಷ್ಟು ವಿಚಾರಣೆ ನಡೆಸಲು ಸೋಮವಾರ ಸಿಬಿಐ ಅಧಿಕಾರಿಗಳು ಅಮೀರ್ ಖಾನ್ ಮನೆಗೆ ತೆರಳಿದ್ದಾಗ ಮನೆಯಲ್ಲಿ ಯಾರೂ ಇರಲಿಲ್ಲ ಮತ್ತು ಬೀಗ ಜಡಿಯಲಾಗಿತ್ತು. ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಸಿಬಿಐ ಈಗ ಅಮೀರ್ ನೆಲೆಸಿದ್ದ ಬಾಡಿಗೆ ಮನೆಯನ್ನು ಸೀಲ್ ಮಾಡಿದೆ. ಅಷ್ಟೇ ಅಲ್ಲದೇ ಮನೆಯ ಮೇಲೆ ನಿಗಾ ಇಡಲು ಇಬ್ಬರು ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬಾಲಾಸೋರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಆಧಾರದಲ್ಲಿ ಸಿಬಿಐ ತನಿಖೆ ನಡೆಸುತ್ತಿದೆ. ಕೆಲ ದಿನಗಳ ಹಿಂದೆ ಬಹನಾಗಾ ರೈಲ್ವೆ ನಿಲ್ದಾಣ, ಅಲ್ಲಿನ ಪ್ಯಾನಲ್ ರೂಂ, ರೆಕಾರ್ಡ್ ರೂಂ, ರಿಲೇ ರೂಂ ಪರಿಶೀಲನೆ ನಡೆಸಿ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿತ್ತು. ಇದನ್ನೂ ಓದಿ: ಒಡಿಶಾ ದುರಂತ – AI ತಂತ್ರಜ್ಞಾನ ಬಳಸಿ ಛಿದ್ರಗೊಂಡ ಮೃತದೇಹಗಳನ್ನು ರೈಲ್ವೇ ಪತ್ತೆ ಹಚ್ಚಿದ್ದು ಹೇಗೆ?
ಮೂಲಗಳ ಪ್ರಕಾರ, ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ದುರಂತದಲ್ಲಿ ಬಹನಾಗಾ ಬಜಾರ್‌ನ ಸ್ಟೇಷನ್ ಮಾಸ್ಟರ್ ಸೇರಿದಂತೆ ಐವರು ರೈಲ್ವೆ ನೌಕರರು ಭಾಗಿಯಾಗಿರುವ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಇತರ ನಾಲ್ವರು ಉದ್ಯೋಗಿಗಳು ಸಿಗ್ನಲಿಂಗ್ ಸಂಬಂಧಿತ ಕೆಲಸದ ಜವಾಬ್ದಾರಿಯನ್ನು ಹೊಂದಿದ್ದರು ಮತ್ತು ಅಪಘಾತದ ಸಮಯದಲ್ಲಿ ಕರ್ತವ್ಯದಲ್ಲಿದ್ದರು.
ಜೂನಿಯರ್ ಎಂಜಿನಿಯರ್ ಪಾತ್ರವೇನು?
ಭಾರತೀಯ ರೈಲ್ವೇಯಲ್ಲಿ ಟ್ರ್ಯಾಕ್ ಸರ್ಕ್ಯೂಟ್‌ಗಳು, ಪಾಯಿಂಟ್ ಯಂತ್ರಗಳು ಮತ್ತು ಇಂಟರ್‌ಲಾಕಿಂಗ್ ಸಿಸ್ಟಮ್‌ಗಳು ಸೇರಿದಂತೆ ಸಿಗ್ನಲಿಂಗ್ ಉಪಕರಣಗಳ ಸ್ಥಾಪನೆ, ನಿರ್ವಹಣೆ ಮತ್ತು ದುರಸ್ತಿಯ ಜವಾಬ್ದಾರಿಯನ್ನು ಜೂನಿಯರ್ ಎಂಜಿನಿಯರ್ ನೋಡಿಕೊಳ್ಳುತ್ತಾರೆ. ರೈಲು ಸುರಕ್ಷಿತವಾಗಿ ಹಳಿಯಲ್ಲಿ ಸಂಚರಿಸಬಹುದೇ? ಬೇಡವೇ ಎಂಬುದನ್ನು ಖಾತರಿ ಪಡಿಸುವಲ್ಲಿ ಜೆಇ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ.
ರೈಲ್ವೇ ಅಧಿಕಾರಿಗಳು ಹೇಳೋದು ಏನು?
ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ (Electronic Interlocking) ವ್ಯವಸ್ಥೆಯಲ್ಲಿನ ಉದ್ದೇಶಪೂರ್ವಕ ಹಸ್ತಕ್ಷೇಪವೇ ಈ ದುರ್ಘಟನೆಗೆ ಕಾರಣ ಎನ್ನುವುದು ರೈಲ್ವೇ ಅಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ರೈಲು ಹಳಿಯಲ್ಲಿ ಸಂಚರಿಸಬೇಕೇ? ಬೇಡವೇ ಎಂಬ ತೀರ್ಮಾನಕ್ಕೆ ಬರಬೇಕಾದರೆ ಹಲವು ಷರತ್ತುಗಳಿವೆ. ಈ ಷರತ್ತುಗಳು ಪೂರೈಸಿದ ಬಳಿಕವೇ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ಹಳಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಎಲ್ಲವೂ ಸರಿಯಿದೆ ಎಂಬ ತೀರ್ಮಾನಕ್ಕೆ ಬಂದ ನಂತರ ಗ್ರೀನ್ ಸಿಗ್ನಲ್ ನೀಡಲಾಗುತ್ತದೆ.
ಒಂದು ವೇಳೆ ಹಳಿಯಲ್ಲಿ ಸಣ್ಣಪುಟ್ಟ ಸಮಸ್ಯೆ ಇದ್ದರೂ ಯಾವುದೇ ಕಾರಣಕ್ಕೂ ಗ್ರೀನ್ ಸಿಗ್ನಲ್ ಬರುವುದೇ ಇಲ್ಲ. ಬದಲಾಗಿ ರೆಡ್ ಸಿಗ್ನಲ್ ಕಾಣಿಸುತ್ತಿದೆ. ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ವ್ಯವಸ್ಥೆ ಬಹಳ ಚೆನ್ನಾಗಿದ್ದು ಸಣ್ಣ ದೋಷವಿದ್ದರೂ ರೆಡ್ ಸಿಗ್ನಲ್ ತೋರಿಸುತ್ತದೆ. ಅಷ್ಟು ಸುಲಭವಾಗಿ ಈ ವ್ಯವಸ್ಥೆಯನ್ನು ಹಾಳುಮಾಡಲು ಸಾಧ್ಯವಿಲ್ಲ. ಭೌತಿಕವಾಗಿ ಹಾಳು ಮಾಡದ ಹೊರತು ಗ್ರೀನ್ ಸಿಗ್ನಲ್ ಬಾರಲು ಸಾಧ್ಯವೇ ಇಲ್ಲ ಎನ್ನುವುದು ರೈಲ್ವೇ ಅಧಿಕಾರಿಗಳ ವಾದ. ಇದನ್ನೂ ಓದಿ: 1 ಫೋನ್ ಕರೆ.. 9 ಅಧಿಕಾರಿಗಳು..; ಒಡಿಶಾ ರೈಲು ದುರಂತದ ಬಳಿಕ ಏನೇನಾಯ್ತು? – ಇಲ್ಲಿದೆ ಪಿನ್ ಟು ಪಿನ್ ಮಾಹಿತಿ
ಏನಿದು ಇಂಟರ್‌ಲಾಕಿಂಗ್ ಸಿಸ್ಟಮ್?
ರೈಲು ಯಾವ ನಿಲ್ದಾಣಕ್ಕೆ ಯಾವ ಟ್ರ್ಯಾಕ್ ಮೂಲಕ ಹೋಗಬೇಕೆಂದು ಎಂಬುದನ್ನು ಇಂಟರ್‌ಲಾಕಿಂಗ್ ಸಿಸ್ಟಮ್ ಮೂಲಕ ನಿರ್ಧಾರ ಮಾಡಲಾಗುತ್ತದೆ. ಮಾರ್ಗ ಬದಲಾವಣೆ, ಹಳಿಯಿಂದ ಹಳಿಗೆ ರೈಲು ಸಂಚಾರ ಮಾರ್ಗವನ್ನು ಇಂಟರ್‌ಲಾಕಿಂಗ್ ಸಿಸ್ಟಮ್ ಮೂಲಕವೇ ಬದಲಾಯಿಸಲಾಗುತ್ತದೆ.
ಅಪಘಾತ ಹೇಗಾಯ್ತು?
ಒಡಿಶಾ ಬಾಲಸೋರ್‌ನ ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ 4 ಹಳಿಗಳು ಇವೆ. ಈ ಪೈಕಿ ಎರಡು ಮುಖ್ಯ ಅಥವಾ ಮೇನ್ ಹಳಿಗಳು ಆಗಿದ್ದರೆ ಇನ್ನು ಎರಡು ಲೂಪ್ ಹಳಿಗಳು. ಎಕ್ಸ್‌ಪ್ರೆಸ್ ರೈಲುಗಳ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದೇ ಇರಲು ಗೂಡ್ಸ್ ರೈಲುಗಳನ್ನು ನಿಲ್ದಾಣದ ಲೂಪ್ ಲೈನಿನಲ್ಲಿ ನಿಲ್ಲಿಸಿರುತ್ತಾರೆ. ಅದೇ ರೀತಿಯಾಗಿ ಒಂದು ಹಳಿಯಲ್ಲಿ ಗೂಡ್ಸ್ ರೈಲನ್ನು ನಿಲ್ಲಿಸಲಾಗಿತ್ತು. ಸಂಜೆಯ ವೇಳೆ ವೇಗವಾಗಿ ಮುಖ್ಯ ಹಳಿಯಲ್ಲಿ ಬರುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಸಿಸ್ಟಂನಿಂದ ಗೂಡ್ಸ್ ರೈಲು ನಿಂತಿದ್ದ ಹಳಿಯನ್ನು ಪ್ರವೇಶಿಸಿ ಗುದ್ದಿದೆ. ಈ ರೈಲು ಡಿಕ್ಕಿ ಹೊಡೆಯುವ ಸಮಯದಲ್ಲೇ ಇನ್ನೊಂದು ಮುಖ್ಯ ಹಳಿಯಲ್ಲಿ ಬೆಂಗಳೂರಿನಿಂದ ಹೌರಾಗೆ ಹೊರಟಿದ್ದ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಂದಿದೆ. ಗೂಡ್ಸ್ ರೈಲಿಗೆ ಗುದ್ದಿದ ರಭಸಕ್ಕೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಯಶವಂತಪುರದಿಂದ ಹೊರಟಿದ್ದ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿದೆ.
ಅನುಮಾನ ಯಾಕೆ?
ಪಾರಾದೀಪ್‌ನಿಂದ ಮುಖ್ಯ ಲೈನ್‌ನಲ್ಲಿ ತೆರಳುತ್ತಿದ್ದ ಗೂಡ್ಸ್ ರೈಲನ್ನು ಕೋರಮಂಡಲ್ ರೈಲಿಗೆ ದಾರಿ ಮಾಡಿಕೊಡಲು ಬಹನಾಗ್ ನಿಲ್ದಾಣದಲ್ಲಿ ಲೂಪ್ ಲೈನ್‌ಗೆ ತರಲಾಗಿತ್ತು. ಕೋರಮಂಡಲ್‌ಗೆ ಮುಖ್ಯ ಲೈನ್‌ನಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಇದನ್ನು ತ್ರೂ ಲೈನ್ ಎನ್ನುತ್ತಾರೆ. ಹೀಗೆ ಸಿಗ್ನಲ್ ನೀಡಿದಾಗ ಹಳಿ ಬಳಿಯ ಪಾಯಿಂಟ್ ಬದಲಾಗಬೇಕು. ಕೋರಮಂಡಲ್ ಮುಖ್ಯ ಲೈನ್‌ನಲ್ಲಿ ತೆರಳುವಂತೆ ತ್ರೂ ಆಗಬೇಕು. ಆದರೆ ತ್ರೂ ಆಗಿಲ್ಲ. ಸಿಗ್ನಲ್ ಮತ್ತು ಪಾಯಿಂಟ್ ನಡುವೆ ಲೋಪ ಉಂಟಾಗಿದೆ.
ಸಿಗ್ನಲ್ ಸರಿಯಾಗಿದ್ದರೂ ಪಾಯಿಂಟ್ ಬದಲಾಗದ ಕಾರಣ ಗೂಡ್ಸ್ ಇದ್ದ ಲೂಪ್ ಲೈನ್‌ಗೆ ಕೋರಮಂಡಲ್ ರೈಲು ಪ್ರವೇಶಿಸಿದೆ. ಇಲ್ಲಿ ಸಿಗ್ನಲ್ ಕೊಟ್ಟರೂ ರೈಲು ಲೂಪ್ ಲೈನ್‌ನಲ್ಲಿ ಹೋಗಿದ್ದು ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆ.
ಇದು ವಿಧ್ವಂಸಕ ಕೃತ್ಯವೆ?
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಈ ದುರ್ಘಟನೆಗೆ ಕಾರಣರಾದ ತಪ್ಪಿತಸ್ಥರು ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ. ಇದು ವಿಧ್ವಂಸಕ ಕೃತ್ಯ ಎಂದು ಖಚಿತವಾಗದ ಹೊರತು ಮೋದಿ ಈ ಪದವನ್ನು ಬಳಸುವ ಸಾಧ್ಯತೆ ಇಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.
ಈ ಹಿಂದೆ ಸಿಡಿಎಸ್ ಬಿಪಿನ್ ರಾವತ್ ಅವರ ಹೆಲಿಕಾಪ್ಟರ್ ಪತನಗೊಂಡ ಸಮಯದಲ್ಲಿ ಸರ್ಕಾರದ ಕಡೆಯಿಂದ ಯಾವುದೇ ಈ ರೀತಿಯ ಹೇಳಿಕೆ ಬಂದಿರಲಿಲ್ಲ. ಆದರೆ ಇಲ್ಲಿ ಪ್ರಧಾನಿ ಬಾಯಿಯಿಂದಲೇ ಈ ಹೇಳಿಕೆ ಬಂದಿದೆ. ಪ್ರಾಥಮಿಕ ತನಿಖೆ ಮತ್ತು ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದೆ ಎನ್ನಲಾಗುತ್ತಿದೆ.
ಕೇಂದ್ರ ಸರಕಾರದ ವಿರುದ್ಧ ಮತ್ತೆ ಗುಡುಗಿದ್ದಾರೆ ನಟ ಕಿಶೋರ್ (Kishor). ಒಡಿಶಾದಲ್ಲಿ (Odisha) ನಡೆದ ಭೀಕರ ರೈಲು (train) ದುರಂತದ ಬಗ್ಗೆ ಪೋಸ್ಟ್ ಮಾಡಿರುವ ಅವರು, ಇನ್ನೂರಕ್ಕೂ ಹೆಚ್ಚು ಜನರ ಸಾವಿಗೆ ನೇರವಾಗಿ ಕೇಂದ್ರ ಸರಕಾರವೇ ಹೊಣೆ ಎಂದು ಅವರು ಬಣ್ಣಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಇಂಗ್ಲಿಷ್ ಪತ್ರಿಕೆಯಲ್ಲಿ ಬಂದ ವರದಿಯನ್ನು ಪೋಸ್ಟ್ ಮಾಡಿ, ಅದರೊಂದಿಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ.
ರೈಲ್ವೆ ಮಂತ್ರಿ ಈಗ ಹೋಗಿ ನಿಂತು ಕ್ಯಾಮೆರಾ ಮುಂದೆ ಕಣ್ಣೀರು ಸುರಿಸುವ ನಾಟಕ ಬಿಟ್ಟು, ಇಂದಿಗೂ ಖಾಲಿಯಿರುವ 3 ಲಕ್ಷಕ್ಕೂ ಹೆಚ್ಚು ರೈಲ್ವೆ ನೌಕರರನ್ನು 1500ಕ್ಕೂ ಹೆಚ್ಚು ರೈಲ್ವೆ ಸುರಕ್ಷತೆಗೆ ಬೇಕಾದ ಖಾಲಿಯಾಗೇ ಉಳಿದಿರುವ ಹುದ್ದೆಗಳನ್ನು ತುಂಬಿ, ಹಳಿ ನಿರ್ವಹಣೆ ಸಮಪರ್ಕವಾಗಿಸಬಹುದಿತ್ತೆ? ಎಂದು ಕಿಶೋರ್ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:ದೀರ್ಘಕಾಲದ ಗೆಳತಿಯೊಂದಿಗೆ ಹಸೆಮಣೆ ಏರಿದ ಅಭಿಷೇಕ್
ಮುಂದುವರೆದು ಬರೆದಿರುವ ಕಿಶೋರ್, ‘ಕೋಟ್ಯಂತರ ರೂಪಾಯಿ ವ್ಯಯಿಸಿ ತಿಂಗಳಿಗೊಂದು ರೈಲಿಗೆ ಹಸಿರು ನಿಶಾನೆ ತೋರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಬದಲು, ಕವಚ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ಕೊಟ್ಟು ಎಲ್ಲೆಡೆ ಅಳವಡಿಸಬಹುದಿತ್ತೆ? ಹಾಗೆ ನೋಡಿದರೆ ಕಳೆದ ಆರೇಳು ವರ್ಷಗಳಲ್ಲಿ ಸಾವಿರಕ್ಕೂ ಹೆಚ್ಚು ರೈಲುಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದರೂ, 2021ರ ಸಿಎಜಿ ರಿಪೋರ್ಟನ್ನು ಕಡೆಗಣಿಸಿ, ಸುರಕ್ಷತೆಗಿಂತ ದೇಶದ ಸ್ವತ್ತನ್ನು ಮಾರಿ ದುಡ್ಡು ಮಾಡುವುದರಲ್ಲೇ ನಿರತವಾದ ಸರ್ಕಾರವೇ ಈ ದುರಂತಕ್ಕೆ ಕಾರಣವಲ್ಲವೆ?’ ಎಂದು ಪ್ರಶ್ನೆ ಮಾಡಿದ್ದಾರೆ.
ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ, ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ. ಎಂತ ವಿಪರ್ಯಾಸ. ಇಲ್ಲಿ ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ. ಅಪಘಾತಗಳನ್ನೂ ದುರಂತಗಳನ್ನೂ ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ ಎಂದು ಅವರು ಬರೆದಿದ್ದಾರೆ.
ನವದೆಹಲಿ: ಬರೋಬ್ಬರಿ 275 ಮಂದಿಯ ಜೀವ ಬಲಿ ಪಡೆದ ಬಾಲಸೋರ್ ತ್ರಿವಳಿ ರೈಲು ದುರಂತ (Odisha Train Tragedy) ಪ್ರಕರಣ ಇಡೀ ದೇಶವನ್ನೆ ಆಘಾತಕ್ಕೀಡು ಮಾಡಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಪೋಸ್ಟ್ ಮಾರ್ಟಂ ನಡೆಯುತ್ತಿದ್ದು, ಘಟನೆಗೆ ಅಸಲಿ ಕಾರಣಗಳೇನು ಎಂಬುದು ಒಂದೊಂದಾಗಿಯೇ ಬಯಲಿಗೆ ಬರುತ್ತಿದೆ.
ದೇಶ ಕಂಡ 3ನೇ ಅತಿ ದೊಡ್ಡ ರೈಲು ಅಪಘಾತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸಿಗ್ನಲಿಂಗ್ ಮತ್ತು ಎಲೆಕ್ಟ್ರಾನಿಕ್ ಇಂಟರ್‌ಲಾಕ್ ಸಿಸ್ಟಮ್ ಕಾರಣದಿಂದ ಈ ಘೋರ ದುರಂತ ಸಂಭವಿಸಿದೆ ಎಂಬ ಮಾಹಿತಿ ರೈಲ್ವೇ ಇಲಾಖೆಯ ಪ್ರಾಥಮಿಕ ವರದಿಯಲ್ಲಿದೆ.
ಮುಖ್ಯವಾದ ಹಳಿ ಸರಿಯಿದ್ದರೂ ಇದ್ದಕ್ಕಿಂದ್ದಂತೆ ಗೂಡ್ಸ್ ರೈಲು ನಿಂತಿದ್ದ ಲೂಪ್ ಲೈನ್‌ಗೆ ಕೋರಮಂಡಲ್ ಎಕ್ಸ್‌ಪ್ರೆಸ್ ಬಂದಿದ್ದು ಯಾಕೆ? ಇಂಟರ್‌ಲಾಕ್ ಸಿಸ್ಟಂ ಬದಲಾಗಿದ್ದು ಯಾಕೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ. ಹಲವು ಅನುಮಾನಗಳು ಎದ್ದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ಹೆಗಲಿಗೆ ವಹಿಸಲಾಗಿದೆ.
ಆಗಿರುವ ತಪ್ಪನ್ನು ಖುದ್ದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡಾ ಒಪ್ಪಿಕೊಂಡಿದ್ದಾರೆ. ದುರಂತಕ್ಕೆ ಕಾರಣ ಏನೆಂದು ಗೊತ್ತಾಗಿದೆ. ಯಾರು ಕಾರಣ ಎಂಬುದನ್ನು ಪತ್ತೆ ಹಚ್ಚಲಾಗಿದೆ. ಕ್ರಮವಷ್ಟೇ ಬಾಕಿ ಉಳಿದಿದೆ ಎಂದು ರೈಲ್ವೇ ಮಂತ್ರಿ ಹೇಳಿಕೊಂಡಿದ್ದಾರೆ.
ಯಾಕೆ ಅನುಮಾನ?
ಪ್ರಧಾನಿ ನರೇಂದ್ರ ಮೋದಿ ಅವರು ಈ ದುರ್ಘಟನೆಗೆ ಕಾರಣರಾದ ತಪ್ಪಿತಸ್ಥರು ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ. ಇದು ವಿಧ್ವಂಸಕ ಕೃತ್ಯ ಎಂದು ಖಚಿತವಾಗದ ಹೊರತು ಮೋದಿ ಈ ಪದವನ್ನು ಬಳಸುವ ಸಾಧ್ಯತೆ ಇಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.
ಈ ಹಿಂದೆ ಸಿಡಿಎಸ್ ಬಿಪಿನ್ ರಾವತ್ ಅವರ ಹೆಲಿಕಾಪ್ಟರ್ ಪತನಗೊಂಡ ಸಮಯದಲ್ಲಿ ಸರ್ಕಾರದ ಕಡೆಯಿಂದ ಯಾವುದೇ ಈ ರೀತಿಯ ಹೇಳಿಕೆ ಬಂದಿರಲಿಲ್ಲ. ಆದರೆ ಇಲ್ಲಿ ಪ್ರಧಾನಿ ಬಾಯಿಯಿಂದಲೇ ಈ ಹೇಳಿಕೆ ಬಂದಿದೆ. ಪ್ರಾಥಮಿಕ ತನಿಖೆ ಮತ್ತು ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದೆ ಎನ್ನಲಾಗುತ್ತಿದೆ.
ಘೋರ ದುರಂತಕ್ಕೆ ಕಾರಣಗಳೇನು?
ಭೀಕರ ರೈಲ್ವೆ ಅಪಘಾತಕ್ಕೆ 2 ಮುಖ್ಯ ಕಾರಣಗಳಿವೆ ಎನ್ನಲಾಗಿದೆ. ಅವುಗಳಲ್ಲಿ ಮೊದಲನೆಯದ್ದು ಇಂಟರ್‌ಲಾಕ್ ಸಿಸ್ಟಂ ವೈಫಲ್ಯ. ಯಾವುದೇ ರೈಲು ಯಾವ ನಿಲ್ದಾಣಕ್ಕೆ ಯಾವ ಟ್ರ‍್ಯಾಕ್‌ನ ಮೂಲಕ ಹೋಗಬೇಕು, ನಿರ್ಗಮಿಸಬೇಕು ಎಂಬುದನ್ನು ಇಂಟರ್ ಲಾಕ್‌ನ ಮೂಲಕ ನಿರ್ಧಾರ ಮಾಡಲಾಗುತ್ತದೆ. ಮಾರ್ಗ ಬದಲಾವಣೆಗೂ ಇಂಟರ್ ಲಾಕ್ ಸಿಸ್ಟಮ್ ಅನ್ನೇ ಬಳಸಲಾಗುತ್ತಿದೆ. ಇದರಲ್ಲಿ ದೋಷವಿರುವ ಬಗ್ಗೆ ಕಿರಿಯ ಅಧಿಕಾರಿಗಳು ಫೆಬ್ರವರಿ 9 ರಂದೆ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದರು. ಆದರೂ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿರಲಿಲ್ಲ ಎನ್ನಲಾಗುತ್ತಿದೆ.
ಅಪಘಾತಕ್ಕೆ 2ನೇ ಕಾರಣ ಸಿಗ್ನಲಿಂಗ್ ವ್ಯವಸ್ಥೆಯ ದೋಷ. ಪಾರಾದೀಪ್‌ನಿಂದ ಮುಖ್ಯ ಲೈನ್‌ನಲ್ಲಿ ತೆರಳುತ್ತಿದ್ದ ಗೂಡ್ಸ್ ರೈಲನ್ನು ಕೋರಮಂಡಲ್ ರೈಲಿಗೆ ದಾರಿ ಮಾಡಿಕೊಡಲು ಬಹನಾಗ್ ನಿಲ್ದಾಣದಲ್ಲಿ ಲೂಪ್ ಲೈನ್‌ಗೆ ತರಲಾಗಿತ್ತು. ಲೂಪ್ ಲೈನ್ ಅನ್ನು ರೆಡ್‌ನಲ್ಲಿ ಇರಿಸಿ, ಕೋರಮಂಡಲ್‌ಗೆ ಮುಖ್ಯ ಲೈನ್‌ನಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಇದನ್ನು ತ್ರೂ ಲೈನ್ ಎನ್ನುತ್ತಾರೆ. ಹೀಗೆ ಸಿಗ್ನಲ್ ನೀಡಿದಾಗ ಹಳಿ ಬಳಿಯ ಪಾಯಿಂಟ್ ಬದಲಾಗಬೇಕು. ಕೋರಮಂಡಲ್ ಮುಖ್ಯ ಲೈನ್‌ನಲ್ಲಿ ತೆರಳುವಂತೆ ತ್ರೂ ಆಗಬೇಕು. ಆದರೆ ತ್ರೂ ಆಗಿಲ್ಲ. ಸಿಗ್ನಲ್ ಮತ್ತು ಪಾಯಿಂಟ್ ನಡುವೆ ಲೋಪ ಉಂಟಾಗಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತದ ತನಿಖೆ ಸಿಬಿಐ ಹೆಗಲಿಗೆ
ಸಿಗ್ನಲ್ ಸರಿಯಾಗಿದ್ದರೂ ಪಾಯಿಂಟ್ ಬದಲಾಗದ ಕಾರಣ ಗೂಡ್ಸ್ ಇದ್ದ ಲೂಪ್ ಲೈನ್‌ಗೆ ಕೋರಮಂಡಲ್ ಕೂಡ ಎಂಟ್ರಿ ಕೊಟ್ಟಿದೆ. ಇಲ್ಲಿ ಸಿಗ್ನಲ್ ಕೊಟ್ಟರೂ ರೈಲು ಲೂಪ್ ಲೈನ್‌ನಲ್ಲಿ ಹೋಗಿದ್ದಕ್ಕೆ ಕಾರಣವೇನು? ಸ್ಟೇಷನ್ ಮಾಸ್ಟರ್ ನಿರ್ಲಕ್ಷ್ಯವೆ? ಎಂಬ ಪ್ರಶ್ನೆ ಎದ್ದಿದೆ. ಏಕೆಂದರೆ ಸಿಗ್ನಲ್ ನೀಡುವುದು ಹಾಗೂ ಪಾಯಿಂಟ್ ಬದಲಿಸುವ ಜವಾಬ್ದಾರಿ ಸ್ಟೇಷನ್ ಮಾಸ್ಟರ್‌ದೇ ಆಗಿರುತ್ತದೆ.
ಅಪಘಾತ ಹೇಗಾಯ್ತು?
ಒಡಿಶಾ ಬಾಲಸೋರ್‌ನ ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ 4 ಹಳಿಗಳು ಇವೆ. ಈ ಪೈಕಿ ಎರಡು ಮುಖ್ಯ ಅಥವಾ ಮೇನ್ ಹಳಿಗಳು ಆಗಿದ್ದರೆ ಇನ್ನು ಎರಡು ಲೂಪ್ ಹಳಿಗಳು. ಎಕ್ಸ್‌ಪ್ರೆಸ್ ರೈಲುಗಳ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದೇ ಇರಲು ಗೂಡ್ಸ್ ರೈಲುಗಳನ್ನು ನಿಲ್ದಾಣದ ಲೂಪ್ ಲೈನಿನಲ್ಲಿ ನಿಲ್ಲಿಸಿರುತ್ತಾರೆ. ಅದೇ ರೀತಿಯಾಗಿ ಒಂದು ಹಳಿಯಲ್ಲಿ ಗೂಡ್ಸ್ ರೈಲನ್ನು ನಿಲ್ಲಿಸಲಾಗಿತ್ತು. ಸಂಜೆಯ ವೇಳೆ ವೇಗವಾಗಿ ಮುಖ್ಯ ಹಳಿಯಲ್ಲಿ ಬರುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಸಿಸ್ಟಂನಿಂದ ಗೂಡ್ಸ್ ರೈಲು ನಿಂತಿದ್ದ ಹಳಿಯನ್ನು ಪ್ರವೇಶಿಸಿ ಗುದ್ದಿದೆ. ಈ ರೈಲು ಡಿಕ್ಕಿ ಹೊಡೆಯುವ ಸಮಯದಲ್ಲೇ ಇನ್ನೊಂದು ಮುಖ್ಯ ಹಳಿಯಲ್ಲಿ ಬೆಂಗಳೂರಿನಿಂದ ಹೌರಾಗೆ ಹೊರಟಿದ್ದ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಂದಿದೆ. ಗೂಡ್ಸ್ ರೈಲಿಗೆ ಗುದ್ದಿದ ರಭಸಕ್ಕೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಯಶವಂತಪುರದಿಂದ ಹೊರಟಿದ್ದ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿದೆ. ಇದನ್ನೂ ಓದಿ: ಒಡಿಶಾ ರೈಲ್ವೆ ದುರಂತ – ಅನಾಥರಾದ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ವಹಿಸಿಕೊಂಡ ಅದಾನಿ ಗ್ರೂಪ್
ನವದೆಹಲಿ: ಅಪಘಾತ ನಡೆದಮಾರ್ಗದಲ್ಲಿ ಒಂದು ವೇಳೆ ಕವಚ್ (Kavach) ಸಕ್ರಿಯವಾಗಿದ್ದರೂ ಮೂರು ರೈಲು ದುರಂತವನ್ನು (Odisha Train Tragedy) ತಪ್ಪಿಸಲು ಸಾಧ್ಯವಿರಲಿಲ್ಲ ಎಂದು ರೈಲು ಮಂಡಳಿಯ ಸದಸ್ಯೆ ಜಯ ವರ್ಮ ಸಿನ್ಹಾ ಹೇಳಿದ್ದಾರೆ.
#WATCH | The goods train did not get derailed. Since the goods train was carrying iron ores, the maximum damage of the impact was on Coromandel Express. This is the reason for a huge number of deaths and injuries. The derailed bogies of Coromandel Express came on the down line,… pic.twitter.com/DnjheT8NSn
ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಮಾರ್ಗದಲ್ಲಿ ಕವಚ್ ವ್ಯವಸ್ಥೆ ಇರಲಿಲ್ಲ ಎಂಬ ಆರೋಪ ಸಂಬಂಧಿಸಿದಂತೆ ರೈಲ್ವೆ ಮಂಡಳಿಯ ಕಾರ್ಯಾಚರಣೆ ಮತ್ತು ವ್ಯಾಪಾರ ಅಭಿವೃದ್ಧಿ ಸದಸ್ಯೆ ಜಯ ವರ್ಮ ಸಿನ್ಹಾ ಮಾತನಾಡಿ, ವೇಗವಾಗಿ ಚಲಿಸುವ ವಾಹನದ ಮುಂದೆ ಇದ್ದಕ್ಕಿದ್ದಂತೆ ಅಡಚಣೆ ಸೃಷ್ಟಿಯಾದರೆ ಪ್ರಪಂಚದ ಯಾವುದೇ ತಂತ್ರಜ್ಞಾನವು ಆ ಅಪಘಾತವನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಏನಿದು ಕವಚ್? ಹೇಗೆ ಕೆಲಸ ಮಾಡುತ್ತೆ?
#WATCH | Safety is the top priority for Railways. We are making sure that the evidence does not get tampered & that any witness does not get affected. The driver of the train who sustained serious injuries said that the train moved forward only after it received a 'Green' signal.… pic.twitter.com/6zER9dRAUl
#WATCH | Sandeep Mathur, Principal Executive Director of Signalling and Jaya Varma Sinha, Member of Operation and Business Development, Railway Board explains the functioning of interlocking. pic.twitter.com/gQ1XuZbBv3
ಗೂಡ್ಸ್ ರೈಲು ಹಳಿ ತಪ್ಪಿರಲಿಲ್ಲ. ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್ (Coromandel Express) ಬೋಗಿಗಳು ಇನ್ನೊಂದು ಮುಖ್ಯ ಹಳಿ ಮೇಲೆ ಬಿದ್ದ ಪರಿಣಾಮ ಗರಿಷ್ಠ ಮಟ್ಟದ ಸಾವು ನೋವು ಸಂಭವಿಸಿದೆ. ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಬೋಗಿಗಳು ಗಂಟೆಗೆ 126 ಕಿ.ಮೀ ವೇಗದಲ್ಲಿ ಬರುತ್ತಿದ್ದ ಯಶವಂತಪುರ ಎಕ್ಸ್‌ಪ್ರೆಸ್ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿದೆ ಎಂದು ತಿಳಿಸಿದರು.
ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ (Electronic Interlocking) ಸಮಯದಲ್ಲಿ ಉಂಟಾದ ಬದಲಾವಣೆಯಿಂದ ಅಪಘಾತ ಸಂಭವಿಸಿರುವುದು ತಿಳಿದು ಬಂದಿದೆ. ಈ ಬದಲಾವಣೆಯನ್ನು ಯಾರು ಮಾಡಿದ್ದಾರೆ ಮತ್ತು ಅದು ಹೇಗೆ ಸಂಭವಿಸಿತು ಎಂಬುದನ್ನು ಸರಿಯಾದ ತನಿಖೆಯ ನಂತರ ಕಂಡುಹಿಡಿಯಲಾಗುವುದು ಎಂದು ಅಧಿಕಾರಿಗಳು ಹೇಳಿದರು.
ಅಪಘಾತ ಹೇಗಾಯ್ತು?
ಒಡಿಶಾ ಬಾಲಸೋರ್‌ನ ಬಹನಾಗ ಬಜಾರ್ ರೈಲು ನಿಲ್ದಾಣದಲ್ಲಿ 4 ಹಳಿಗಳು ಇವೆ. ಈ ಪೈಕಿ ಎರಡು ಮುಖ್ಯ ಅಥವಾ ಮೇನ್ ಹಳಿಗಳು ಆಗಿದ್ದರೆ ಇನ್ನು ಎರಡು ಲೂಪ್ ಹಳಿಗಳು. ಎಕ್ಸ್‌ಪ್ರೆಸ್ ರೈಲುಗಳ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದೇ ಇರಲು ಗೂಡ್ಸ್ ರೈಲುಗಳನ್ನು ನಿಲ್ದಾಣದ ಲೂಪ್ ಲೈನಿನಲ್ಲಿ ನಿಲ್ಲಿಸಿರುತ್ತಾರೆ. ಅದೇ ರೀತಿಯಾಗಿ ಒಂದು ಹಳಿಯಲ್ಲಿ ಗೂಡ್ಸ್ ರೈಲನ್ನು ನಿಲ್ಲಿಸಲಾಗಿತ್ತು. ಸಂಜೆಯ ವೇಳೆ ವೇಗವಾಗಿ ಮುಖ್ಯ ಹಳಿಯಲ್ಲಿ ಬರುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ನಿಂದಾಗಿ ಗೂಡ್ಸ್ ರೈಲು ನಿಂತಿದ್ದ ಹಳಿಯನ್ನು ಪ್ರವೇಶಿಸಿ ಗುದ್ದಿದೆ. ಈ ರೈಲು ಡಿಕ್ಕಿ ಹೊಡೆಯುವ ಸಮಯದಲ್ಲೇ ಇನ್ನೊಂದು ಮುಖ್ಯ ಹಳಿಯಲ್ಲಿ ಬೆಂಗಳೂರಿನಿಂದ ಹೌರಾಗೆ ಹೊರಟಿದ್ದ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಬಂದಿದೆ. ಗೂಡ್ಸ್ ರೈಲಿಗೆ ಗುದ್ದಿದ ರಭಸಕ್ಕೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಯಶವಂತಪುರದಿಂದ ಹೊರಟಿದ್ದ ರೈಲಿನ ಕೊನೆಯ ಎರಡು ಬೋಗಿಗಳ ಮೇಲೆ ಬಿದ್ದ ಪರಿಣಾಮ ಸಾವು ನೋವು ಹೆಚ್ಚಾಗಿದೆ.
ಇಸ್ಲಾಮಾಬಾದ್: ಭಾರತದ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ (Odisha Train Crash) ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆಯಾಗಿದ್ದು 900ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ 650ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ತ್ರಿಪಲ್ ರೈಲು ದುರಂತಕ್ಕೆ ಪಾಕಿಸ್ತಾನ (Pakistan) ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto Zardari) ಹಾಗೂ ಅಫ್ಘಾನಿಸ್ತಾನದ ತಾಲಿಬಾನ್‌ನ (Taliban) ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಂತಾಪ ಸೂಚಿಸಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತ ಹೇಗಾಯ್ತು..? ಘಟನೆಗೆ ಕಾರಣ ಏನು..?
ಭಾರತದ ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಹೆಚ್ಚಿನ ಸಾವು ನೋವಾಗಿರುವುದು ತಿಳಿದು ದುಃಖವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ಕೊಡಲಿ. ರೈಲು ದುರಂತದಲ್ಲಿ ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಶುಭ ಹಾರೈಸಿವೆ. ಅಷ್ಟೇ ಅಲ್ಲದೇ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ, ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಸೇರಿದಂತೆ ದೇಶ-ವಿದೇಶ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ದೊಡ್ಡಮಟ್ಟದ ಸದ್ದು ಕೇಳಿಬಂತು; ದುರಂತದ ಘನಘೋರ ದೃಶ್ಯ ಬಿಚ್ಚಿಟ್ಟ ಕನ್ನಡಿಗ