Tag: ರೈಲು ಸಂಚಾರ

  • ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರಕ್ಕೆ ಅಸ್ತು – ಟಿಕೆಟ್ ಬುಕಿಂಗ್ ಆರಂಭ

    ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರಕ್ಕೆ ಅಸ್ತು – ಟಿಕೆಟ್ ಬುಕಿಂಗ್ ಆರಂಭ

    -ಸೆಪ್ಟೆಂಬರ್ ತಿಂಗಳಿಂದ ಪ್ರತಿ ವಾರ ವಿಶೇಷ ರೈಲು ಸಂಚಾರ

    ನವದೆಹಲಿ: ಕರ್ನಾಟಕಕ್ಕೆ (Karnataka) ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಗಣೇಶ ಹಬ್ಬದ ವೇಳೆ ಮತ್ತೊಂದು ವಿಶೇಷ ಕೊಡುಗೆ ನೀಡಿದ್ದು, ಹುಬ್ಬಳ್ಳಿ-ಜೋಧಪುರ್ (Hubli-Jodhpur) ನೇರ ರೈಲು ಸಂಚಾರಕ್ಕೆ ಅಸ್ತು ಎಂದಿದೆ.

    ಹುಬ್ಬಳ್ಳಿ-ಜೋಧಪುರ್ ವಿಶೇಷ ರೈಲು ಸೆಪ್ಟೆಂಬರ್ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಭರವಸೆ ನೀಡಿದ್ದಾರೆಂದು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದ್ದಾರೆ.ಇದನ್ನೂ ಓದಿ: ನಗರದ ಹಲವೆಡೆ ನಾಳೆ, ನಾಳಿದ್ದು ವಿದ್ಯುತ್ ವ್ಯತ್ಯಯ

    ಹುಬ್ಬಳ್ಳಿ-ಜೋಧಪುರ್ ನೂತನ ರೈಲು (ಸಂಖ್ಯೆ: 07359) ಹುಬ್ಬಳ್ಳಿಯಿಂದ ಸಂಜೆ 7:30ಕ್ಕೆ ತೆರಳಿ BGKT (ಭಗತ ಕಿ ಕೋಟಿ)ಗೆ ಬೆಳಿಗ್ಗೆ 5:30ಕ್ಕೆ ತಲುಪಲಿದೆ. ಸದ್ಯ ಪ್ರತಿ ರವಿವಾರ ಈ ರೈಲು ಸಂಚಾರವಿರಲಿದ್ದು, ಸೆಪ್ಟೆಂಬರ್ 28ರಿಂದ ಸಂಚಾರ ಆರಂಭಿಸಲಿದೆ.

    ಟಿಕೆಟ್ ಬುಕಿಂಗ್ ಶುರು:
    ನೂತನವಾಗಿ ಸಂಚಾರ ಆರಂಭವಾಗುತ್ತಿರುವ ಹುಬ್ಬಳ್ಳಿ-ಜೋಧಪುರ್ ರೈಲ್ವೆ ಸಂಚಾರಕ್ಕೆ ಪ್ರಯಾಣಿಕರಿಂದ ಈಗಾಗಲೇ ಟಿಕೆಟ್ ಬುಕಿಂಗ್ ಸಹ ಶುರುವಾಗಿದೆ. ರೈಲ್ವೆ ಇಲಾಖೆ ಸೆಪ್ಟೆಂಬರ್ 28, ಅಕ್ಟೋಬರ್ 05, ಅಕ್ಟೋಬರ್ 12, ಅಕ್ಟೋಬರ್ 19, ಅಕ್ಟೋಬರ್ 26ರಂದು ಪ್ರಯಾಣಕ್ಕೆ ಮುಂಗಡ ಟಿಕೆಟ್ ಬುಕಿಂಗ್ ಆರಂಭಿಸಿದೆ.

    ಹುಬ್ಬಳ್ಳಿ ಜನರ ಬಹುದಿನದ ಬೇಡಿಕೆ ಈಡೇರಿಕೆ:
    ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಉತ್ತರ ಕರ್ನಾಟಕ ಭಾಗದವರಿಂದ ಅನೇಕ ದಿನಗಳಿಂದಲೂ ಬಹು ಬೇಡಿಕೆಯಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸತತ ಪ್ರಯತ್ನದ ಫಲವಾಗಿ ಇದೀಗ ಸಾಕಾರಗೊಂಡಿದೆ.

    ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸೇರಿದಂತೆ ರಾಜ್ಯಕ್ಕೆ ವಿವಿಧ ರೈಲ್ವೆ ಯೋಜನೆಗಳನ್ನು ತರುವಲ್ಲಿ ಯಶಸ್ವಿಯಾಗಿರುವ ಸಚಿವ ಜೋಶಿ ಅವರು, ಇದೀಗ ಹುಬ್ಬಳ್ಳಿ-ಜೋಧಪುರ್ ವಿಶೇಷ ರೈಲು ಸಂಚಾರ ಆರಂಭಿಸುವಲ್ಲಿ ಸಹ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಗಮನ ಸೆಳೆದು ರೈಲು ಸಂಚಾರವನ್ನು ಸಾಕಾರಗೊಳಿಸುವಲ್ಲಿ ಸಫಲರಾಗಿದ್ದಾರೆ.

    ಬಹುಜನರ ಬೇಡಿಕೆಯಂತೆ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿ-ಜೋಧಪುರ್ ರೈಲು ಸಂಚಾರ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿ, ನಿರಂತರವಾಗಿ ಗಮನ ಸೆಳೆಯುತ್ತಲೇ ಇದ್ದರು. ಜೋಶಿ ಅವರ ಒತ್ತಾಸೆ, ಮನವಿಗೆ ಸ್ಪಂದಿಸಿ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ-ಜೋಧ್‌ಪುರಕ್ಕೆ ನೇರ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದಾರೆ.

    ರೈಲ್ವೆ ಸಚಿವರಿಗೆ ಜೋಶಿ ಧನ್ಯವಾದ:
    ತಮ್ಮ ಮನವಿ, ಒತ್ತಾಸೆಗೆ ಸ್ಪಂದಿಸಿ ಉತ್ತರ ಕರ್ನಾಟಕ ಭಾಗದ ಅದರಲ್ಲೂ ವಾಣಿಜ್ಯ ನಗರಿ ಹುಬ್ಬಳ್ಳಿ ರೈಲ್ವೆ ಯೋಜನೆ-ಸೌಲಭ್ಯಗಳಿಗೆ ವಿಶೇಷ ಆಸಕ್ತಿ ತೋರಿ ಅನುಮೋದಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.ಇದನ್ನೂ ಓದಿ: ಹದಗೆಟ್ಟ ಅನಾರೋಗ್ಯ.. ಉಲ್ಬಣಗೊಂಡ ಕ್ಯಾನ್ಸರ್: ಸಹಾಯ ಕೇಳಿ ಕಣ್ಣೀರಿಟ್ಟ KGF ಚಾಚಾ

  • ಮಳೆಯ ಆರ್ಭಟ: ಹಳಿ ತಪ್ಪುವ ಆತಂಕದಿಂದ 165 ರೈಲುಗಳ ಸಂಚಾರ ಸಂಪೂರ್ಣ ರದ್ದು

    ಮಳೆಯ ಆರ್ಭಟ: ಹಳಿ ತಪ್ಪುವ ಆತಂಕದಿಂದ 165 ರೈಲುಗಳ ಸಂಚಾರ ಸಂಪೂರ್ಣ ರದ್ದು

    ನವದೆಹಲಿ: ದೇಶಾದ್ಯಂತ ವಿವಿಧೆಡೆ ಮಳೆಯ ಆರ್ಭಟ ಜೋರಾಗಿದೆ. ನೈಸರ್ಗಿಕ ವಾತಾವರಣದ ಬದಲಾವಣೆ ಹಾಗೂ ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ ಇಂದು ವಿವಿಧೆಡೆಯಿಂದ ಸಂಚರಿಸಬೇಕಿದ್ದ ಒಟ್ಟು 165ಕ್ಕೂ ಹೆಚ್ಚು ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ಭಾರತೀಯ ರೈಲ್ವೆ ಇಂದು ಬೆಳಗ್ಗೆ ಪ್ರಕಟಿಸಿದೆ.

    ಇತ್ತೀಚಿನ ಅಧಿಸೂಚನೆಯ ಪ್ರಕಾರ IRCTC ವೆಬ್‌ಸೈಟ್‌ನಲ್ಲಿ ಸುಮಾರು 37 ರೈಲುಗಳ ಸಂಚಾರವನ್ನು ರದ್ದುಗೊಳಿರುವುದಾಗಿ ತಿಳಿಸಿದೆ. ಈ ಪಟ್ಟಿಯಲ್ಲಿ ಪುಣೆ, ಪಠಾಣ್‌ಕೋಟ್, ಅಜಿಮ್‌ಗಂಜ್, ಬೊಕಾರೊ, ಸತಾರಾ ಮುಂತಾದ ಹಲವಾರು ಭಾರತೀಯ ನಗರಗಳಿಂದ ಚಲಿಸುವ ರೈಲುಗಳೂ ಸೇರಿವೆ. ಇದನ್ನೂ ಓದಿ: ಲೈಂಗಿಕ ಸಂಬಂಧ ಮದುವೆಯಲ್ಲಿ ಅಂತ್ಯವಾಗದ ಮಾತ್ರಕ್ಕೆ ಅತ್ಯಾಚಾರ ಆಗುವುದಿಲ್ಲ: ಹೈಕೋರ್ಟ್

    ವಿವಿಧೆಡೆ ರೈಲು ಸಂಚಾರಕ್ಕೆ ಅಡಚಣೆ, ಹಳಿ ತಪ್ಪುವ ಆತಂಕ ಹಾಗೂ ನೈಸರ್ಗಿಕ ಕಾರಣಗಳನ್ನು ಉಲ್ಲೇಖಿಸಿ ಭಾರತೀಯ ರೈಲ್ವೇ ಸುಮಾರು 8 ರೈಲುಗಳ ವೇಳಾಪಟ್ಟಿಯನ್ನು ಮರುಹೊಂದಿಸಿದೆ. ಈ ಕುರಿತಂತೆ ಯಾವುದೇ ಸಂದೇಹಗಳಿದ್ದರೂ enquiry.indianrail.gov.inಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬಹುದು ಎಂದು ತಿಳಿಸಿದೆ. ಇನ್ನೂ ನಿಗದಿತ ರೈಲುಗಳ ಅಗಮನ ಮತ್ತು ನಿರ್ಗಮನದ ಸಮಯವನ್ನು ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಎಫೆಕ್ಟ್- ಜನಶತಾಬ್ದಿ ಸೇರಿದಂತೆ ಹಲವು ರೈಲುಗಳ ಸಂಚಾರ ನಾಳೆಯಿಂದ ರದ್ದು

    ಕೊರೊನಾ ಎಫೆಕ್ಟ್- ಜನಶತಾಬ್ದಿ ಸೇರಿದಂತೆ ಹಲವು ರೈಲುಗಳ ಸಂಚಾರ ನಾಳೆಯಿಂದ ರದ್ದು

    ಹುಬ್ಬಳ್ಳಿ: ಜಾಗತಿಕ ಮಟ್ಟದಲ್ಲಿ ಮಾರಣಾಂತಿಕ ವೈರಸ್ ಎಂದು ಬಿಂಬಿತವಾಗಿರುವ ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೇ ಇಲಾಖೆ ಕೆಲವೊಂದು ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಆದೇಶವು ಇಂದಿನಿಂದ ಮಾರ್ಚ್ 31ರವರೆಗೂ ಜಾರಿಯಲ್ಲಿರಲಿದೆ.

    ಹುಬ್ಬಳ್ಳಿಯಿಂದ ಬೆಂಗಳೂರು ಹೋಗುವ ಗಾಡಿ ಸಂಖ್ಯೆ 12079/12080 ಜನಶತಾಬ್ದಿ ಎಕ್ಸ್‌ಪ್ರೆಸ್, ಮೈಸೂರು-ಯಲಹಂಕ-ಮೈಸೂರ ಮಾಲ್ಗುಡಿ ಸಂಚರಿಸಲಿರುವ ಗಾಡಿ ಸಂಖ್ಯೆ 16023/16024 ಮಾಲ್ಗುಡಿ ಎಕ್ಸ್‌ಪ್ರೆಸ್, ಯಶವಂತಪುರದಿಂದ ಪಂಢರಪುರ ಸಂಚರಿಸುವ ಗಾಡಿ ಸಂಖ್ಯೆ 16541/16542 ಯಶವಂತಪುರ ಎಕ್ಸ್‌ಪ್ರೆಸ್, ಬೆಂಗಳೂರಿನಿಂದ ಮೈಸೂರು ಸಂಚರಿಸಲಿರುವ ಗಾಡಿ ಸಂಖ್ಯೆ 16557/16558 ರಾಜಾರಾಣಿ ಎಕ್ಸ್‌ಪ್ರೆಸ್, ಶಿವಮೊಗ್ಗದಿಂದ ಯಶವಂತಪುರ ಸಂಚರಿಸುವ ಗಾಡಿ ಸಂಖ್ಯೆ 06539/06540 ನಾಲ್ಕು ದಿನಕ್ಕೊಮ್ಮೆ ಸಂಚರಿಸುವ ವಿಕ್ಲಿ ಎಕ್ಸ್‌ಪ್ರೆಸ್ ನಾಳೆಯಿಂದ ಸಂಚಾರ ನಿಲ್ಲಿಸಲಿವೆ.

    ಮೈಸೂರನಿಂದ ರೇಣುಗುಂಟಾ ಗಾಡಿ ಸಂಖ್ಯೆ 11065/11066 ಮೈಸೂರು ಎಕ್ಸ್‌ಪ್ರೆಸ್, ಸಾಯಿನಗರ ಶಿರಡಿ ಸಂಚರಿಸುವ ಗಾಡಿ ಸಂಖ್ಯೆ 16217/16218 ಮೈಸೂರು ಎಕ್ಸ್‌ಪ್ರೆಸ್, ಯಶವಂತಪುರದಿಂದ ಮೈಸೂರಿಗೆ ಸಂಚರಿಸುವ ಗಾಡಿ ಸಂಖ್ಯೆ 16565/16566 ಯಶವಂತಪುರ ವಿಕ್ಲಿ ಎಕ್ಸ್‌ಪ್ರೆಸ್, ಬೆಳಗಾವಿಯಿಂದ ಮೈಸೂರು ಹೋಗುವ ಗಾಡಿ ಸಂಖ್ಯೆ 17326 ವಿಶ್ವಮಾನವ ಎಕ್ಸ್‌ಪ್ರೆಸ್ ಹಾಗೂ ಮೈಸೂರಿನಿಂದ ಬೆಳಗಾವಿ ಹೋಗುವ ಗಾಡಿ ಸಂಖ್ಯೆ 17325 ವಿಶ್ವಮಾನವ ಎಕ್ಸ್‌ಪ್ರೆಸ್ ಗಾಡಿಗಳು ಮಾರ್ಚ್ 31ರ ವರೆಗೂ ತಾತ್ಕಾಲಿಕವಾಗಿ ರದ್ದುಗೊಳಿಸಿ ರೈಲ್ವೇ ಸಚಿವಾಲಯ ಆದೇಶ ಹೊರಡಿಸಿದೆ.

    ಹಣ ವಾಪಸ್ ಹೇಗೆ?:
    ಆನ್‍ಲೈನ್ ಮೂಲಕ ಮುಂಗಡ ಟಿಕೆಟ್ ಬುಕ್ ಮಾಡಿರುವ ಪ್ರಯಾಣಿಕರ ಬ್ಯಾಂಕ್ ಖಾತೆಗೆ ಹಣ ಜಮೆ ಆಗಲಿದೆ. ಈಗಾಗಲೇ ಕೌಂಟರ್ ನಲ್ಲಿ ಟಿಕೆಟ್ ಪಡೆದಿದ್ದರೆ ಅಂತಹ ಪ್ರಯಾಣಿಕರ ಮೊಬೈಲ್ ಸಂಖ್ಯೆಗೆ ಮೆಸೇಜ್ ಬರಲಿದೆ. ಆ ಬಳಿಕ ಅವರು ಪ್ರಯಾಣಿಕರು ಬಂದು ಹಣ ಪಡೆಯಬಹದು ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

  • ವರುಣನ ಆರ್ಭಟಕ್ಕೆ ಮುಂಬೈ ತತ್ತರ – ರೈಲು ಸಂಚಾರ ಸ್ಥಗಿತ

    ವರುಣನ ಆರ್ಭಟಕ್ಕೆ ಮುಂಬೈ ತತ್ತರ – ರೈಲು ಸಂಚಾರ ಸ್ಥಗಿತ

    ಮುಂಬೈ: ಭಾನುವಾರ ರಾತ್ರಿಯಿಂದ ಸುರಿದ ಭಾರೀ ಮಳೆಗೆ ಕನಸಿನ ನಗರಿ ತತ್ತರಿಸಿ ಹೋಗಿದ್ದು, ಬಹುತೇಕ ರಸ್ತೆಯೆಲ್ಲಾ ಜಲಾವೃತವಾಗಿ, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

    ಮುಂಬೈ ನಗರದ ಅಂಧೇರಿ, ಕುರ್ಲಾ, ಬಾಂದ್ರಾ, ಚಾರ್ನಿ ರಸ್ತೆ, ಸಾಂತಾ ಕ್ರೂಸ್, ಬಿಕೆಸಿ, ಥಾಣೆ, ರಾಯ್ಗಡ್ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ರಸ್ತೆ ಮತ್ತು ರೈಲ್ವೇ ಹಳಿಗಳು ಜಲಾವೃತಗೊಂಡಿದ್ದು, ರೈಲು ಸಂಚಾರ ಸ್ಥಗಿತಗೊಂದಿದೆ. ಇದೇ ರೀತಿ ಇನ್ನೂ ಕೆಲವು ದಿನಗಳು ಮಳೆ ಮುಂದುವರಿಯಲಿದ್ದು, ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

    ಭಾನುವಾರ ರಾತ್ರಿ ಮುಂಬೈನಲ್ಲಿ 360 ಮಿಲಿ ಮೀಟರ್ ನಷ್ಟು ಧಾರಾಕಾರ ಮಳೆ ಆಗಿದೆ. ಅಲ್ಲದೆ ಇಂದು ಬೆಳಗಿನ ಜಾವ ಮುಂಬೈಯ ಪಲ್ಗರ್ ಪ್ರದೇಶದಲ್ಲಿ 4 ಗಂಟೆಯಿಂದ 5 ಗಂಟೆಯವರೆಗೆ ಅಂದರೆ 1 ಗಂಟೆಯಲ್ಲಿ 100 ಮಿಲಿ ಮೀಟರ್ ನಷ್ಟು ಮಳೆ ಸುರಿದಿರುವುದು ದಾಖಲಾಗಿದೆ.

    “ಪಶ್ಚಿಮ ರೈಲ್ವೇ ವಿಭಾಗದ 13 ರೈಲುಗಳ ಸಂಚಾರವನ್ನು ಇಂದು ಮಳೆಯ ಕಾರಣದಿಂದ ರದ್ದುಪಡಿಸಲಾಗಿದೆ” ಎಂದು ಎಎನ್‍ಐ ವರದಿ ಮಾಡಿದೆ.

    ಪಾಲ್ಗಾಟ್ ಪ್ರದೇಶದ ರೈಲ್ವೆ ಹಳಿಗಳು ಜಲಾವೃತಗೊಂಡಿದ್ದರಿಂದ ಮುಂಬೈ-ವಲ್ಸಾಡ್-ಸೂರತ್ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಎರಡು ದಿನದಲ್ಲಿ ಬರೋಬ್ಬರಿ 500 ಮಿ.ಮಿ ಗಿಂತ ಹೆಚ್ಚು ಮಳೆಯಾಗಿದ್ದು, ನಗರದ ಬಹುತೇಕ ರಸ್ತೆಗಳಲ್ಲಿ ನೀರು ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಹೀಗಾಗಿ ಟ್ರಾಫಿಕ್ ನಿಯಂತ್ರಿಸಲು 500ಕ್ಕೂ ಅಧಿಕ ಸಂಚಾರಿ ಪೊಲೀಸರು ಕರ್ತವ್ಯದಲ್ಲಿ ನಿರತರಾಗಿದ್ದಾರೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

    ರೈಲ್ವೇ ಹಳಿಗಳ ಮೇಲೂ ನೀರು ನಿಂತಿರುವುದರಿಂದ ಪಲ್ಗರ್ ಮಾರ್ಗದಲ್ಲಿ ಸಂಚರಿಸುವ ರೈಲುಗಳು ಗಂಟೆಗೆ 30 ಕಿ.ಮಿ ವೇಗದಲ್ಲಿ ಮಾತ್ರ ಚಲಿಸಬೇಕು ಎಂದು ರೈಲ್ವೇ ಇಲಾಖೆ ಸೂಚಿಸಿದೆ.

    ಖಾಸಗಿ ಹವಾಮಾನ ವರದಿ ಪ್ರಕಾರ, ಜುಲೈ 3ರ ರಾತ್ರಿಯಿಂದ ಮಳೆ ಹೆಚ್ಚಾಗಲಿದ್ದು, ಬಂಗಾಳ ಕೊಲ್ಲಿಯಿಂದ ಆರಂಭಗೊಂಡು ಪಶ್ಚಿಮ ಘಟ್ಟದತ್ತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

  • ಗಮನಿಸಿ, ಬೆಂಗ್ಳೂರಿನಿಂದ ಸಕಲೇಶಪುರದವರೆಗೂ ಈಗ ರೈಲಿನಲ್ಲಿ ಸಂಚರಿಸಬಹುದು

    ಗಮನಿಸಿ, ಬೆಂಗ್ಳೂರಿನಿಂದ ಸಕಲೇಶಪುರದವರೆಗೂ ಈಗ ರೈಲಿನಲ್ಲಿ ಸಂಚರಿಸಬಹುದು

    ಹಾಸನ: ಆಗಸ್ಟ್ ತಿಂಗಳಿನಲ್ಲಿ ಬಿದ್ದ ಭಾರೀ ಮಳೆಯಿಂದ ಭೂ ಕುಸಿತ ಸಂಭವಿಸಿ ಸ್ಥಗಿತಗೊಂಡಿದ್ದ ಹಾಸನ ಸಕಲೇಶಪುರ ರೈಲು ಸಂಚಾರ ಪುನಃ ಆರಂಭವಾಗಿದೆ.

    ರೈಲ್ವೆ ಮಾರ್ಗದ ಮೇಲೆ ಕಲ್ಲು ಬಂಡೆ ಮತ್ತು ಗುಡ್ಡಗಳನ್ನು ತೆರವುಗೊಳಿಸಲಾಗಿದೆ. ಈಗ ಸಕಲೇಶಪುರದವರೆಗಿನ ಮಾರ್ಗವನ್ನು ದುರಸ್ತಿ ಮಾಡಲಾಗಿದೆ. ಹೀಗಾಗಿ ಬೆಂಗಳೂರಿನಿಂದ ಸಕಲೇಶಪುರಕ್ಕೆ ರೈಲು ಸಂಚಾರ ಆರಂಭಗೊಂಡಿದೆ. ಸೋಮವಾರ ರಾತ್ರಿ ಒಂದು ರೈಲು ಆಗಮಿಸಿದ್ದರೆ, ಮಂಗಳವಾರ ಮತ್ತೊಂದು ರೈಲು ಸಕಲೇಶಪುರದತ್ತ ಹೊರಟಿದೆ.

    ವಿಪರೀತ ಮಳೆ ಸುರಿದ ಪರಿಣಾಮ ತೆರವು ಕಾರ್ಯಕ್ಕೆ ಅಡ್ಡಿಯಾಗಿತ್ತು. ಸಕಲೇಶಪುರದಿಂದ ಸುಬ್ರಹ್ಮಣ್ಯ(ನೆಟ್ಟಣ) ನಿಲ್ದಾಣದವರೆಗಿನ ಮಾರ್ಗದಲ್ಲಿ ಇನ್ನು ಗುಡ್ಡ ಮತ್ತು ಬಂಡೆ ಕಲ್ಲುಗಳಿವೆ. ಇವುಗಳ ದುರಸ್ತಿ ಪೂರ್ಣಗೊಂಡ ಬಳಿಕ ಮಂಗಳೂರು- ಬೆಂಗಳೂರು ರೈಲು ಸಂಚಾರ ಮತ್ತೆ ಆರಂಭವಾಗಲಿದೆ. ಈಗ ಇರುವ ಪರಿಸ್ಥಿತಿಯೇ ಹೀಗೆಯೇ ಮುಂದುವರಿದರೆ ಅಕ್ಟೋಬರ್ ಮಧ್ಯ ಭಾಗ ಅಥವಾ ಕೊನೆಯಲ್ಲಿ ಸಕಲೇಶಪುರ- ಸುಬ್ರಹ್ಮಣ್ಯ ಮಧ್ಯೆ ರೈಲು ಸಂಚರಿಸುವ ಸಾಧ್ಯತೆಯಿದೆ. ಒಂದು ವೇಳೆ ಮತ್ತೆ ಮಳೆ ಸುರಿದರೆ ತೆರವು ಕಾರ್ಯ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಫೆಬ್ರವರಿ ಅಂತ್ಯಕ್ಕೆ ಹಾಸನ ಟು ಬೆಂಗಳೂರು ನೇರ ರೈಲು ಸಂಚಾರ ಆರಂಭ?

    ಹಾಸನ: ಜಿಲ್ಲೆಯ ಬಹುವರ್ಷಗಳ ಕನಸಾದ ಹಾಸನ ಟು ಬೆಂಗಳೂರು ನೇರ ಪ್ರಯಾಣಿಕರ ರೈಲು ಸಂಚಾರ ಫೆಬ್ರವರಿ ಅಂತ್ಯದ ವೇಳೆಗೆ ಆರಂಭಗೊಳ್ಳುವ ನಿರೀಕ್ಷೆಯಿದೆ. ನೆಲಮಂಗಲದಿಂದ ಶ್ರವಣಬೆಳಗೋಳದವರೆಗೆ 4 ದಿನಗಳ ಕಾಲ ತಪಾಸಣೆ ನಡೆಸಿದ ರೈಲ್ವೆ ಸುರಕ್ಷತಾ ಆಯುಕ್ತರ ತಂಡ ಹೊಸ ಮಾರ್ಗ ರೈಲು ಓಡಾಟಕ್ಕೆ ಸೇಫ್ ಎಂದು ತಿಳಿಸಿದೆ.

    ಈಗಾಗಲೇ ಕಾಮಗಾರಿ ಪೂರ್ಣವಾಗಿದ್ದು ಹಳಿ ಜೋಡಣೆ, ಸೇತುವೆ, ರೈಲ್ವೆ ನಿಲ್ದಾಣ ಮತ್ತು ಸಿಗ್ನಲ್ ವ್ಯವಸ್ಥೆ ಬಗ್ಗೆ ರೈಲ್ವೆ ಸುರಕ್ಷತಾ ಆಯುಕ್ತರ ತಂಡ ತಪಾಸಣೆ ನಡೆಸಿದೆ. ಗಂಟೆಗೆ 110 ಕಿಲೋ ಮೀಟರ್ ವೇಗದಲ್ಲಿ ಶ್ರವಣಬೆಳಗೋಳದಿಂದ ನೆಲಮಂಗಲದ ವರೆಗೆ ಪ್ರಾಯೋಗಿಕ ರೈಲು ಸಂಚಾರ ಸಹ (ಸ್ಪೀಡ್ ಟ್ರಯಲ್) ನಡೆಸಲಾಗಿದೆ. ರೈಲ್ವೆ ಸುರಕ್ಷತಾ ಆಯುಕ್ತರು ಹೊಸ ಮಾರ್ಗದಲ್ಲಿ ರೈಲು ಹಳಿಯ ಸ್ಥಿತಿಗತಿ ನಮಗೆ ತೃಪ್ತಿಕರವಾಗಿದೆ. ಕೆಲವು ಕಡೆ ಸಣ್ಣಪುಟ್ಟ ಸಮಸ್ಯೆಗಳಿವೆ. ಅವುಗಳನ್ನು ಆದಷ್ಟು ಶೀಘ್ರ ಸರಿಪಡಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

    ಹೊಸ ಮಾರ್ಗದಲ್ಲಿ ರೈಲು ಸಂಚಾರ ಆರಂಭವಾದರೆ ಹಾಸನ-ಬೆಂಗಳೂರು ನಡುವಿನ ಅಂತರ 167 ಕಿಮೀ ಗೆ ಕುಗ್ಗಲಿದೆ. ಶೇ. ನೂರರಷ್ಟು ಎಲ್ಲವೂ ಸರಿಯಾದ ನಂತರ ಹೊಸ ಮಾರ್ಗದಲ್ಲಿ ರೈಲು ಓಡಾಟವನ್ನು ಅಧಿಕೃತಗೊಳಿಸಲಾಗುವುದು ಎಂದಿರುವುದು ಈ ತಿಂಗಳಾಂತ್ಯಕ್ಕೆ ನೇರ ರೈಲು ಕನಸು ನನಸಾಗಲಿದೆ ಎಂಬ ಆಸೆಯನ್ನು ಇನ್ನಷ್ಟು ಬಲಗೊಳಿಸಿದೆ.