Tag: ರೈಲ್ವೇ ಸಚಿವಾಲಯ

  • ರೈಲು ದುರಂತಕ್ಕೆ ಸಂಚು ಹೆಚ್ಚಾಗುತ್ತಿದ್ದಂತೆ 75 ಲಕ್ಷ AI ಕ್ಯಾಮೆರಾ ಖರೀದಿಗೆ ಮುಂದಾದ ಇಲಾಖೆ

    ರೈಲು ದುರಂತಕ್ಕೆ ಸಂಚು ಹೆಚ್ಚಾಗುತ್ತಿದ್ದಂತೆ 75 ಲಕ್ಷ AI ಕ್ಯಾಮೆರಾ ಖರೀದಿಗೆ ಮುಂದಾದ ಇಲಾಖೆ

    ನವದೆಹಲಿ: ಹಳಿಗಳ ಮೇಲೆ ವಸ್ತುಗಳು ಇರಿಸಿ ದುಷ್ಕೃತ್ಯ ಎಸಗುವ ಪ್ರಕರಣಗಳ ಹೆಚ್ಚಾಗುತ್ತಿದ್ದಂತೆ ಇವುಗಳಿಗೆ ಕಡಿವಾಣ ಹಾಕಲು ರೈಲ್ವೇ ಸಚಿವಾಲಯ (Railway Ministry) ಈಗ 75 ಲಕ್ಷ ಎಐ ಕ್ಯಾಮೆರಾ (Artificial Intelligence Camera) ಖರೀದಿಸಲು ಮುಂದಾಗಿದೆ.

    ರೈಲುಗಳನ್ನು ಹಳಿತಪ್ಪಿಸುವ ಪ್ರಯತ್ನಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲಾ ರೈಲುಗಳಲ್ಲಿ ಬಹು ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ಘೋಷಿಸಿದ್ದಾರೆ. ಇದನ್ನೂ ಓದಿ: ಭಾರತದ ರೈಲು, ಪೆಟ್ರೋಲ್ ಪೈಪ್‌ಲೈನ್‌ಗಳ ಮೇಲೆ ದಾಳಿ ಮಾಡಿ -ರಾಮೇಶ್ವರಂ ಕೆಫೆ ಸ್ಫೋಟ ಸಂಚುಕೋರನಿಂದ ಕರೆ

    ಇಂಜಿನ್ ಮತ್ತು ಗಾರ್ಡ್ ಕೋಚ್‌ನ ಮುಂಭಾಗ, ಹಿಂಭಾಗ, ಎರಡು ಬದಿಗಳಲ್ಲಿ, ಕೋಚ್‌ಗಳಲ್ಲಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಈ ಸಾಧನಗಳಿಂದ ತುಣುಕನ್ನು ಸಂಗ್ರಹಿಸಲು ಮತ್ತು ಪರಿಶೀಲಿಸಲು ಕೇಂದ್ರೀಯ ಡೇಟಾ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ.

    ಒಟ್ಟು 75 ಲಕ್ಷ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಇಲಾಖೆ ಮುಂದಾಗಿದೆ. ಕ್ಯಾಮೆರಾ ಅಳವಡಿಕೆಯೆ ಟೆಂಡರ್ ಪ್ರಕ್ರಿಯೆ ಮುಂದಿನ ಮೂರು ತಿಂಗಳೊಳಗೆ ಮುಕ್ತಾಯವಾಗಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಭಾರತೀಯ ರೈಲ್ವೆ ಮೇಲೆ ಆಗಂತುಕರ ಕಣ್ಣು – ಆಗಸ್ಟ್ ತಿಂಗಳಲ್ಲೇ 18 ಬಾರಿ ರೈಲು ಹಳಿ ತಪ್ಪಿಸಲು ಯತ್ನ

    40,000 ಕೋಚ್‌ಗಳು, 14,000 ಲೊಕೊಮೊಟಿವ್‌ಗಳು ಮತ್ತು 6,000 ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್‌ಗಳಲ್ಲಿ ಕ್ಯಾಮೆರಾ ಅಳವಡಿಸಲಾಗುತ್ತದೆ.

     

  • ಕೂದಲೆಳೆಯ ಅಂತರದಲ್ಲಿ ಹುಬ್ಬಳ್ಳಿಯಲ್ಲಿ ತಪ್ಪಿತು ದೊಡ್ಡ ದುರಂತ

    ಕೂದಲೆಳೆಯ ಅಂತರದಲ್ಲಿ ಹುಬ್ಬಳ್ಳಿಯಲ್ಲಿ ತಪ್ಪಿತು ದೊಡ್ಡ ದುರಂತ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

    ಹುಬ್ಬಳ್ಳಿ: ರೈಲ್ವೇ ಇಲಾಖೆ ಆಲಸ್ಯವೋ ಅಥವಾ ನಿರ್ಲಕ್ಷ್ಯವೋ ಗೊತ್ತಿಲ್ಲ ಸಂಭವಿಸಬಹುದಾಗಿದ್ದ ದೊಡ್ಡ ಅಪಘಾತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.

    ಅತ್ಯಂತ ಜನದಟ್ಟಣೆಯ ಪ್ರದೇಶ ಹಾಗೂ ಹುಬ್ಬಳ್ಳಿ-ಗದಗ ಎನ್‌ಎಚ್-63 ರಸ್ತೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಹುಬ್ಬಳ್ಳಿಯ ರೈಲ್ವೇ ನಿಲ್ದಾಣದ ( Hubballi Railway Station) ಬಳಿ ಬೃಹತ್ ಗಾತ್ರದ ಕಬ್ಬಿಣದ ಕಂಬ (Iron Pillar) ನೆಲಕ್ಕೆ ಅಪ್ಪಳಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮಧ್ಯಾಹ್ನ 12:30ರ ವೇಳೆಗೆ ಕಂಬ ಉರುಳಿ ಬೀಳುತ್ತಿರುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಅಂತರ್ಜಾತಿ ಪ್ರೇಮ – ಮಗಳ ಕತ್ತು ಹಿಸುಕಿ ಕೊಂದ ತಂದೆ

    ಸೇತುವೆ ಬಳಿ ಬೃಹತ್ ವಾಹನಗಳ ಪ್ರವೇಶ ನಿರ್ಬಂಧಿಸುವ ದೃಷ್ಟಿಯಿಂದ ಹಾಕಲಾಗಿದ್ದ ಕಬ್ಬಿಣದ ಬೃಹತ್ ಕಂಬ, ತುಕ್ಕು ಹಿಡಿದು ತನ್ನಷ್ಟಕ್ಕೆ ತಾನೆ ನೆಲಕ್ಕೆ ಬಿದ್ದಿದೆ. ಕಳೆದ ಮೂರು ತಿಂಗಳ ಹಿಂದೆ ಈ ರೀತಿಯ ದುರ್ಘಟನೆ ನಡೆದಿತ್ತು. ಆದರೂ ಎಚ್ಚೆತ್ತುಕೊಳ್ಳದ ರೇಲ್ವೆ ಇಲಾಖೆಯ ಅಧಿಕಾರಿಗಳು ಮತ್ತೊಮ್ಮೆ ನಿರ್ಲಕ್ಷ್ಯ ತೋರಿಸಿದ್ದಾರೆ.

    ಬಸ್, ಕಾರು, ದ್ವಿಚಕ್ರ ವಾಹನಗಳು ಹೋದ ಕೆಲವೇ ಕ್ಷಣಗಳಲ್ಲಿ ಕಂಬ ಉರುಳಿಬಿದ್ದಿದೆ. ಒಂದು ವೇಳೆ ಬಸ್ ಅಥವಾ ಕಾರು ಮೇಲೆ ಬಿದ್ದಿದ್ದರೆ ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು.

  • ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಣೆ

    ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಣೆ

    – ಪರಿಹಾರ ಘೋಷಿಸಿದ ಪಿಎಂಎನ್‌ಆರ್‌ಎಫ್, ರೈಲ್ವೇ ಇಲಾಖೆ ಹಾಗೂ ತಮಿಳುನಾಡು ಸರ್ಕಾರ

    ನವದೆಹಲಿ: ಒಡಿಶಾದಲ್ಲಿ (Odisha) ನಡೆದ ಭೀಕರ ರೈಲು ಅಪಘಾತದಿಂದಾಗಿ (Train Accident) 261 ಮಂದಿ ಸಾವನ್ನಪ್ಪಿದ್ದು, 900 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಪಿಎಂಎನ್‌ಆರ್‌ಎಫ್, ತಮಿಳುನಾಡು ಸರ್ಕಾರ ಹಾಗೂ ರೈಲ್ವೇ ಇಲಾಖೆ ಘಟನೆಗೆ ಸಂತಾಪ ಸೂಚಿಸಿ ಮೃತರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ (Compensation) ಘೋಷಿಸಿದೆ.

    ಶುಕ್ರವಾರ ಒಡಿಶಾದಲ್ಲಿ ನಡೆದ ರೈಲು ದುರಂತಕ್ಕೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಪರಿಹಾರ ಘೋಷಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ಘೋಷಿಸಿದೆ. ಇದನ್ನೂ ಓದಿ: ರೈಲು ದುರಂತ – ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ

    ಅದೇ ರೀತಿ ರೈಲ್ವೇ ಸಚಿವಾಲಯವು (Ministry of Railways) ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ., ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಅಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಿದೆ. ಈ ಕುರಿತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav), ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಮೃತರ ಕುಟುಂಬಕ್ಕೆ ಸಂತಾಪವನ್ನು ಸೂಚಿಸಿದ್ದಾರೆ. ಶನಿವಾರ ಮುಂಜಾನೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಅವರು, ಅಪಘಾತದ ಬಗ್ಗೆ ವಿವರವಾದ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಇದನ್ನೂ ಓದಿ: Odisha Train Accident; 48 ರೈಲು ಸಂಚಾರ ರದ್ದು, 39 ರೈಲುಗಳ ಮಾರ್ಗ ಬದಲಾವಣೆ

    ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ ರೈಲು ಅಪಘಾತದಲ್ಲಿ ಗಾಯಗೊಂಡ ಜನರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದು, ಒಡಿಶಾದಲ್ಲಿ ಇಂದು (ಶನಿವಾರ) ಶೋಕಾಚರಣೆಯನ್ನು ಘೋಷಿಸಿದ್ದಾರೆ. ಅಂತೆಯೇ ತಮಿಳುನಾಡು (Tamil Nadu) ಸರ್ಕಾರ ಅಪಘಾತಕ್ಕೀಡಾದ ತಮಿಳುನಾಡಿನ ಜನರಿಗೆ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ (M.K.Stalin) ಅವರು ದುರ್ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿ, ತಮಿಳುನಾಡು ಮೂಲದ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತ; ಸಂಚಾರ ರದ್ದಾಗಿ ಬೆಂಗ್ಳೂರಲ್ಲೇ ನಿಂತ ಬೆಂಗಳೂರು-ಗುವಾಹಟಿ ರೈಲು

    ದುರಂತಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi), ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೇರಿದಂತೆ ಅನೇಕ ಗಣ್ಯರು ವಿಷಾದ ವ್ಯಕ್ತಪಡಿಸಿದ್ದಾರೆ. ಅನೇಕ ಗಣ್ಯರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ದೊಡ್ಡಮಟ್ಟದ ಸದ್ದು ಕೇಳಿಬಂತು; ದುರಂತದ ಘನಘೋರ ದೃಶ್ಯ ಬಿಚ್ಚಿಟ್ಟ ಕನ್ನಡಿಗ

  • ಮುಂಬೈ ಸೆಂಟ್ರಲ್ – ಗಾಂಧಿನಗರ ಶತಾಬ್ದಿ ಎಕ್ಸ್‍ಪ್ರೆಸ್‍ನಲ್ಲಿ ವಿಸ್ಟಾಡೋಮ್ ಕೋಚ್

    ಮುಂಬೈ ಸೆಂಟ್ರಲ್ – ಗಾಂಧಿನಗರ ಶತಾಬ್ದಿ ಎಕ್ಸ್‍ಪ್ರೆಸ್‍ನಲ್ಲಿ ವಿಸ್ಟಾಡೋಮ್ ಕೋಚ್

    ಮುಂಬೈ: ಭಾರತೀಯ ರೈಲ್ವೇಯ ಪಶ್ಚಿಮ ವಲಯವು ಮುಂಬೈ ಸೆಂಟ್ರಲ್-ಗಾಂಧಿನಗರ ಶತಾಬ್ದಿ ಎಕ್ಸ್‍ಪ್ರೆಸ್ ರೈಲಿಗೆ ವಿಸ್ಟಾಡೋಮ್ ಕೋಚ್ ಅನ್ನು ಏಪ್ರಿಲ್ 11 ರಿಂದ ಮಾರ್ಚ್ 10 ರವರೆಗೆ ತಾತ್ಕಾಲಿಕ ಆಧಾರದ ಮೇಲೆ ಸೇರಿಸಲಾಗಿದೆ. ಇದು ಸುಂದರವಾದ ಮಾರ್ಗದ 360 ಡಿಗ್ರಿ ವಿಹಂಗಮ ನೋಟವನ್ನು ನೀಡುತ್ತದೆ.

    ವಿಶೇಷ ಕೋಚ್‍ನ ವೀಡಿಯೋವನ್ನು ರೈಲ್ವೇ ಸಚಿವಾಲಯವು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ವಿಶಾಲವಾದ ಗಾಜಿನ ಕಿಟಕಿಗಳು ಮತ್ತು ಗಾಜಿನ ಛಾವಣಿಗಳ ಮೂಲಕ ಹೊರಗಿನ ನೋಟವನ್ನು ವೀಕ್ಷಿಸುವುದನ್ನು ಕಾಣಬಹುದು. ಇದನ್ನೂ ಓದಿ: ಭಾರತದೊಂದಿಗೆ ಶಾಂತಿಯುತ, ಸಹಕಾರಿ ಬಾಂಧವ್ಯ ಬಯಸುತ್ತೇವೆ: ಮೋದಿಗೆ ಪಾಕ್ ಪ್ರಧಾನಿ ಪ್ರತಿಕ್ರಿಯೆ

    ದೊಡ್ಡ ಗಾಜಿನ ಕಿಟಕಿಗಳು ಮತ್ತು ಗಾಜಿನ ಛಾವಣಿಗಳು ಸುಂದರವಾದ ಮಾರ್ಗದ ವಿಹಂಗಮ ನೋಟವನ್ನು ಒದಗಿಸುತ್ತದೆ. ವೀಡಿಯೋ ಸಮೇತ ರೈಲ್ವೆ ಸಚಿವಾಲಯ ಟ್ವೀಟ್ ಮಾಡಿದೆ. ಇದನ್ನೂ ಓದಿ: ಪಾಕಿಸ್ತಾನದ ನೂತನ ಪ್ರಧಾನಿಗೆ ಮೋದಿ ಅಭಿನಂದನೆ

    ಐಆರ್‍ಸಿಟಿಸಿ ವೆಬ್‍ಸೈಟ್ ಮೂಲಕ ರೈಲು ಸಂಖ್ಯೆ 02009/02010 ರಲ್ಲಿ ವಿಸ್ಟಾಡೋಮ್ ಕೋಚ್‍ಗಳಲ್ಲಿ ಪ್ರಯಾಣಿಸಲು ಬುಕ್ಕಿಂಗ್ ಮಾಡಬಹುದಾಗಿದೆ.

  • 36 ವರ್ಷದ ಹಿಂದಿನ ವಿಐಪಿ ಸಂಸ್ಕೃತಿಗೆ ರೈಲ್ವೇ ಇಲಾಖೆಯಲ್ಲಿ ಬ್ರೇಕ್

    36 ವರ್ಷದ ಹಿಂದಿನ ವಿಐಪಿ ಸಂಸ್ಕೃತಿಗೆ ರೈಲ್ವೇ ಇಲಾಖೆಯಲ್ಲಿ ಬ್ರೇಕ್

    ನವದೆಹಲಿ: ರೈಲ್ವೆ ಇಲಾಖೆಯಲ್ಲಿ ಕಳೆದ ಮೂರುವರೆ ದಶಕಗಳಿಂದ ಪಾಲಿಸಿಕೊಂಡು ಬರುತ್ತಿದ್ದ ವಿಐಪಿ ಸಂಸ್ಕೃತಿಗೆ ಬ್ರೇಕ್ ಬಿದ್ದಿದೆ.

    ರೈಲ್ವೇ ಬೋರ್ಡ್ ಅಧ್ಯಕ್ಷ ಮತ್ತು ಬೋರ್ಡ್ ಇತರ ಸದಸ್ಯರು ಭೇಟಿಗೆಂದು ಆಗಮಿಸುವ ಮತ್ತು ನಿರ್ಗಮಿಸುವ ಸಮಯದಲ್ಲಿ ಕಡ್ಡಾಯವಾಗಿ ಜನರಲ್ ಮ್ಯಾನೇಜರ್ ಗಳು ಸ್ಥಳದಲ್ಲೇ ಇರಲೇಬೇಕೆಂಬ 36 ವರ್ಷ ಹಿಂದಿನ ಶಿಷ್ಟಾಚಾರಕ್ಕೆ ಸಚಿವಾಲಯ ತೆರೆ ಎಳೆದಿದೆ.

    ಸೆಪ್ಟೆಂಬರ್ 28 ಕ್ಕೆ ಆದೇಶ ಪ್ರಕಟವಾಗಿದ್ದು, ರೈಲ್ವೇ ಅಧಿಕಾರಿಗಳ ಭೇಟಿ ವೇಳೆ ಇನ್ನು ಮುಂದೆ ಯಾವುದೇ ಬೊಕ್ಕೆ ಅಥವಾ ಹೂ ಗುಚ್ಛಗಳನ್ನು ನೀಡಬಾರದು ಎಂದು ರೈಲ್ವೇ ಬೋರ್ಡ್ ಅಧ್ಯಕ್ಷ ಅಶ್ವನಿ ಲೊಹನಿ ತಿಳಿಸಿದ್ದಾರೆ.

    ಕಚೇರಿಯಲ್ಲಿ ಅಲ್ಲದೇ ಅಧಿಕಾರಿಗಳು ಈ ಶಿಷ್ಟಾಚಾರವನ್ನು ಮನೆಯಲ್ಲೂ ಪಾಲಿಸಬೇಕು. ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿರುವ ರೈಲು ಸಿಬ್ಬಂದಿಯನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸೂಚಿಸಲಾಗಿದೆ.

    ಸಮಾರು 30 ಸಾವಿರಕ್ಕೂ ಅಧಿಕ ಟ್ರ್ಯಾಕ್ ಮನ್ ಗಳು ಹಿರಿಯ ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅಧಿಕಾರಿಗಳ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 6 ಸಾವಿರ – 7 ಸಾವಿರ ರೈಲ್ವೇ ಸಿಬ್ಬಂದಿ ಮರಳಿ ತಮ್ಮ ಮೂಲಕ ಕೆಲಸಕ್ಕೆ ನಿಯೋಜನೆಗೊಂಡಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

    ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರು ಹಿರಿಯ ಅಧಿಕಾರಿಗಳಿಗೆ, ನೀವು ದುಬಾರಿ ವರ್ಗದ ಬೋಗಿಗಳಲ್ಲೇ ಪ್ರಯಾಣಿಸದೇ ಸ್ಲೀಪರ್ ಮತ್ತು ಎಸಿ ತ್ರಿ ಟಯರ್ ಬೋಗಿಗಳಲ್ಲಿ ಪ್ರಯಾಣಿಸಬೇಕು. ಈ ಮೂಲಕ ಪ್ರಯಾಣಿಕರ ಕಷ್ಟಗಳನ್ನು ತಿಳಿದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.