Tag: ರೊಮೇನಿಯಾ

  • ಉಕ್ರೇನ್‍ನಿಂದ ರಕ್ಷಿಸುವಂತೆ ವೀಡಿಯೋ ಮಾಡಿ ಸಂಕಷ್ಟಕ್ಕೆ ಸಿಲುಕಿದ ಗ್ರಾ.ಪಂ. ಅಧ್ಯಕ್ಷೆ

    ಉಕ್ರೇನ್‍ನಿಂದ ರಕ್ಷಿಸುವಂತೆ ವೀಡಿಯೋ ಮಾಡಿ ಸಂಕಷ್ಟಕ್ಕೆ ಸಿಲುಕಿದ ಗ್ರಾ.ಪಂ. ಅಧ್ಯಕ್ಷೆ

    ಲಕ್ನೋ: ಉಕ್ರೇನ್‍ನಿಂದ ತನ್ನನ್ನು ರಕ್ಷಿಸುವಂತೆ ವೀಡಿಯೋ ಮಾಡಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯೊಬ್ಬರು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ವೈಶಾಲಿ ಯಾದವ್ ಸಂಕಷ್ಟಕ್ಕೆ ಸಿಲುಕಿರುವ ಗ್ರಾ.ಪಂ ಅಧ್ಯಕ್ಷೆ. ತೇರಾ ಪುರ್ಸಾಯಿಲಿ ಗ್ರಾಮ ಸಭಾ ಮುಖ್ಯಸ್ಥೆಯಾಗಿರುವ ಇವರು, ನಾನು ಉಕ್ರೇನಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದೇನೆ. ಹೀಗಾಗಿ ದಯವಿಟ್ಟು ನನ್ನನ್ನು ರಕ್ಷಿಸಿ ಎಂದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವೀಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ನಾನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟೀನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ

    ಗ್ರಾ.ಪಂ ಮುಖ್ಯಸ್ಥೆಯಾಗಿರುವ ಇವರು ಉನ್ನತ ಶಿಕ್ಷಣ ಪಡೆಯಲು ವಿದೇಶಕ್ಕೆ ತೆರಳುವಾಗ ಯಾವುದೇ ರೀತಿಯ ಅನುಮತಿಯನ್ನು ಪಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರ ಅನುಪಸ್ಥಿತಿಯಲ್ಲಿ ಗ್ರಾಮಸಭೆಯ ಖಾತೆಯನ್ನು ನಿರ್ವಹಣೆ ನಡೆಸುವ ಬಗ್ಗೆ ಹಾಗೂ ಖಾತೆಯಲ್ಲಿ ಹಣಕಾಸಿನ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ತನಿಖೆ ನಡೆಸಲು ಹರ್ದೋಯಿ ಮುಖ್ಯ ಅಭಿವೃದ್ಧಿ ಅಧಿಕಾರಿ ಆದೇಶಿಸಿದ್ದಾರೆ. ಇದನ್ನೂ ಓದಿ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು- ಆಸ್ಪತ್ರೆಗೆ ದಾಖಲು

    ಸದ್ಯ ವೈಶಾಲಿ ರೊಮೇನಿಯಾದಲ್ಲಿದ್ದು ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಗುವುದು. ಬಳಿಕ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

  • Russia-Ukraine Crisis: 4 ಬಸ್‍ಗಳಲ್ಲಿ 240 ವಿದ್ಯಾರ್ಥಿಗಳು ರೊಮೇನಿಯಾಗೆ ಶಿಫ್ಟ್

    Russia-Ukraine Crisis: 4 ಬಸ್‍ಗಳಲ್ಲಿ 240 ವಿದ್ಯಾರ್ಥಿಗಳು ರೊಮೇನಿಯಾಗೆ ಶಿಫ್ಟ್

    ಕೀವ್: ಉಕ್ರೇನ್‍ನಲ್ಲಿ ಭಾರತೀಯರನ್ನು ಪಾರುಮಾಡುವ ಸಾಹಸಗಳು ನಡೆಯುತ್ತಿವೆ. ರಷ್ಯಾ- ಉಕ್ರೇನ್ ಮೇಲೆ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಭಾರತೀಯರನ್ನು ರೊಮೇನಿಯಾಗೆ ಸ್ಥಳಾಂತರಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ.

    ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರು ಇಲ್ಲಿಯವರೆಗೆ ತಮ್ಮ ಜೀವ ಉಳಿಸಿಕೊಳ್ಳಲು ಮೆಟ್ರೋ ಸುರಂಗಗಳಲ್ಲಿ ಅಡಗಿ ಕುಳಿತಿದ್ದರು. ಇದೀಗ ಅಡಗಿ ಕುಳಿತಿದ್ದ 240 ವಿದ್ಯಾರ್ಥಿಗಳನ್ನು 4 ಬಸ್‍ಗಳಲ್ಲಿ ಉಕ್ರೇನ್-ರೊಮೇನಿಯಾ ಗಡಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ಭಾರತೀಯ ವಿದ್ಯಾರ್ಥಿಗಳ ರಕ್ಷಣಾ ಕಾರ್ಯಾಚರಣೆ ಭಾಗವಾಗಿ 1 ಸಾವಿರಕ್ಕೂ ಹೆಚ್ಚು ಜನರನ್ನು ಭಾರತಕ್ಕೆ ಏರ್‌ಲಿಫ್ಟ್ ಮಾಡಲು ಸಿದ್ಧತೆ ನಡೆಯುತ್ತಿದೆ. ಉಕ್ರೇನ್‍ನಲ್ಲಿ ಎಲ್ಲಾ ನಾಗರಿಕ ವಿಮಾನಯಾನವನ್ನು ಸ್ಥಗಿತಗೊಳಿಸಿರುವುದರಿಂದ ನೇರವಾಗಿ ಉಕ್ರೇನ್‍ನಿಂದ ಭಾರತಕ್ಕೆ ಮರಳಿ ಬರುವುದು ಅಸಾಧ್ಯವಾಗಿದೆ. ಹೀಗಾಗಿ ಭಾರತೀಯರನ್ನು ಕರೆತರಲು ಮೊದಲು ಅವರನ್ನು ರೊಮೇನಿಯಾಗೆ ಸ್ಥಳಾಂತರಿಸುವ ಅಗತ್ಯವಿದೆ. ಅಲ್ಲಿಂದ 13 ಕಿ.ಮೀ ನಡಿಗೆಯ ಮೂಲಕ ಏರ್‌ಲಿಫ್ಟ್ ಮಾಡಲಾಗುವ ಜಾಗದವರೆಗೆ ಹೋಗಬೇಕಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿರುವ ಕಲಬುರಗಿಯ ಐವರು ವಿದ್ಯಾರ್ಥಿಗಳು

    ರೊಮೇನಿಯಾ ಸರ್ಕಾರದೊಂದಿಗೆ ಭಾರತೀಯ ವಿದೇಶಾಂಗ ಇಲಾಖೆ ಸತತ ಸಂಪರ್ಕದಲ್ಲಿದೆ. ಏರ್ ಇಂಡಿಯಾ ವತಿಯಿಂದ 2 ವಿಮಾನಗಳನ್ನು ಈಗಾಗಲೇ ಕಳುಹಿಸಲಾಗಿದೆ. ಸದ್ಯ ಭಾರತೀಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿರುವ ಬಸ್ಸುಗಳು ರೊಮೇನಿಯಾ ತಲುಪಲು 800 ಕಿ.ಮೀ ಪ್ರಯಾಣಿಸಬೇಕಿದೆ. ಮೊದಲ ಹಂತದ ಸ್ಥಳಾಂತರ ಮುಕ್ತಾಯವಾಗಲು ಶನಿವಾರ ಮಧ್ಯಾಹ್ನದವರೆಗೂ ಸಮಯ ತಗುಲಬಹುದು ಎಂದು ವರದಿಗಳು ತಿಳಿಸಿವೆ.

  • ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ನವದೆಹಲಿ: ರಷ್ಯಾದ ಮಿಲಿಟರಿ ದಾಳಿಯಿಂದಾಗಿ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾ ಶುಕ್ರವಾರ ರೋಮೇನಿಯಾ ರಾಜಧಾನಿ ಬುಕಾರೆಸ್ಟ್‍ಗೆ 2 ವಿಮಾನಗಳನ್ನು ಕಳುಹಿಸಲು ಯೋಜಿಸಿದೆ.

    ಉಕ್ರೇನ್‍ನ ವಾಯುಪ್ರದೇಶವನ್ನು ಗುರುವಾರ ಮುಚ್ಚಲಾಗಿದೆ. ಹೀಗಾಗಿ ಉಕ್ರೇನ್‍ನಲ್ಲಿ ಭಾರತಿಯ ಪ್ರಯಾಣಿಕರು ಮಾತ್ರವಲ್ಲದೇ ಇತರ ದೇಶದ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಇದನ್ನೂ ಓದಿ: ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!

    ಪ್ರಯಾಣಿಕರು ರಸ್ತೆಯ ಮೂಲಕ ಉಕ್ರೇನ್-ರೊಮೇನಿಯಾ ಗಡಿ ತಲುಪಿದರೆ, ಅಲ್ಲಿಂದ ಭಾರತ ಸರ್ಕಾರ ಅಧಿಕಾರಿಗಳು ಅವರನ್ನು ಬುಕಾರೆಸ್ಟ್‍ಗೆ ಕರೆದೊಯ್ಯಲಿದ್ದಾರೆ. ಬಳಿಕ ವಿಮಾನದ ಮೂಲಕ ಭಾರತಕ್ಕೆ ಹಿಂದಿರುಗಿಸುವಂತೆ ಏರ್ ಇಂಡಿಯಾ ಯೋಜಿಸಿದೆ. ಶನಿವಾರ 2 ಏರ್ ಇಂಡಿಯಾ ವಿಮಾನಗಳು ಬುಕಾರೆಸ್ಟ್‍ನಿಂದ ಹೊರಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 20 ಸಾವಿರ ಭಾರತೀಯರು ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದಾರೆ.

    ಉಕ್ರೇನ್ ರಾಜಧಾನಿ ಕೀವ್‍ನಿಂದ ರೊಮೇನಿಯಾ ಗಡಿಗೆ ಸುಮಾರು 600 ಕಿ.ಮೀ ದೂರ ಇದೆ. ರಸ್ತೆ ಮಾರ್ಗವಾಗಿ ಕೀವ್‍ನಿಂದ ರೊಮೇನಿಯಾ ಗಡಿ ತಲುಪಲು 8 ರಿಂದ 11 ಗಂಟೆ ತಗುಲಬಹುದು. ಉಕ್ರೇನ್-ರೊಮೇನಿಯಾ ಗಡಿಯಿಂದ ಬುಕಾರೆಸ್ಟ್ 500 ಕಿ.ಮೀ ಅಂತರದಲ್ಲಿದೆ. ಇದರ ಪ್ರಯಾಣಕ್ಕೆ ಸುಮಾರು 7 ರಿಂದ 9 ಗಂಟೆ ತಗುಲಬಹುದು. ಇದನ್ನೂ ಓದಿ: Russia-Ukraine War: ಉಕ್ರೇನ್ ಯೂನಿಫಾರ್ಮ್ ಧರಿಸಿ ರಷ್ಯಾ ಸೈನಿಕರ ಎಂಟ್ರಿ – ಸಿಕ್ಕ ಸಿಕ್ಕಲ್ಲಿ ರಕ್ತಪಾತ

    ಈಗಾಗಲೇ ಉಕ್ರೇನ್‍ನಲ್ಲಿ ರಷ್ಯಾ ಬಾಂಬುಗಳ ಸುರಿಮಳೆ ಹರಿಸಿದ್ದು, ನೂರಾರು ಸೈನಿಕರು ಸಾವನ್ನಪ್ಪಿದ್ದಾರೆ. ಹಲವು ದೇಶಗಳು ರಷ್ಯಾಗೆ ಯುದ್ಧ ನಿಲ್ಲಿಸುವಂತೆ ಮನವಿ ಮಾಡಿದ್ದರೂ ದಾಳಿ ನಿಲ್ಲುವಂತೆ ಕಾಣಿಸುತ್ತಿಲ್ಲ.