Tag: ರೋಜ್‌ಗಾರ್ ಮೇಳ

  • Rozgar Mela: 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

    Rozgar Mela: 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

    ನವದೆಹಲಿ: ರೋಜ್‍ಗಾರ್ ಮೇಳದ (Rozgar Mela) ಭಾಗವಾಗಿ ಶನಿವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನೂತನವಾಗಿ ಸರ್ಕಾರಿ ಸೇವೆಗೆ ಸೇರ್ಪಡೆಯಾದ 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಿದರು. ವರ್ಚುಯಲ್ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ವಲಯಗಳಲ್ಲಿ ನೇಮಕವಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿದರು.

    ಬಳಿಕ ಮಾತನಾಡಿದ ಅವರು, ಇಂದು 50,000ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗಗಳ ನೇಮಕಾತಿ ಪತ್ರ ನೀಡಲಾಗಿದೆ. ಇದು ಅವರ ಕುಟುಂಬಗಳಿಗೆ ಈ ಸಂದರ್ಭವು ದೀಪಾವಳಿಗಿಂತ ಸಂಭ್ರಮಕ್ಕಿಂತ ಕಡಿಮೆಯಲ್ಲ ಎಂದರು. ಕಳೆದ ವರ್ಷ ಅಕ್ಟೋಬರ್‍ನಲ್ಲಿ ‘ರೋಜ್‍ಗರ್ ಮೇಳ’ ಪ್ರಾರಂಭಿಸಲಾಗಿದೆ. ಕೇಂದ್ರ ಮತ್ತು ಎನ್‍ಡಿಎ ಆಡಳಿತದ ರಾಜ್ಯಗಳಲ್ಲಿ ‘ರೋಜ್‍ಗರ್ ಮೇಳ’ ಆಯೋಜಿಸಲಾಗುತ್ತಿದೆ. ಇದುವರೆಗೆ ಲಕ್ಷಾಂತರ ಯುವಕರಿಗೆ ನೇಮಕಾತಿ ನೀಡಲಾಗಿದೆ ಎಂದರು.

    ಇಂದು ಭಾರತವು ಮುನ್ನಡೆಯುತ್ತಿರುವ ದಿಕ್ಕು, ವೇಗ ಬದಲಾಗುತ್ತಿದೆ. ಉದ್ಯೋಗಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸಿದೆ. ಕೆಲ ದಿನಗಳ ಹಿಂದೆ ಕಚ್‍ನಲ್ಲಿರುವ ಗುಜರಾತ್‍ನ ಧೋರ್ಡೊ ಗ್ರಾಮವನ್ನು ವಿಶ್ವಸಂಸ್ಥೆಯು ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮವೆಂದು ಘೋಷಿಸಿತು. ಇದಕ್ಕೂ ಮೊದಲು ಕರ್ನಾಟಕದ ಹೊಯ್ಸಳ ದೇವಾಲಯಗಳು ಮತ್ತು ಪಶ್ಚಿಮ ಬಂಗಾಳದ ಶಾಂತಿನಿಕೇತನವನ್ನು ವಿಶ್ವ ಪರಂಪರೆಯ ತಾಣಗಳೆಂದು ಘೋಷಿಸಲಾಯಿತು. ಇದು ಉದ್ಯೋಗದ ಸಾಧ್ಯತೆಗಳನ್ನು ಮತ್ತು ಆರ್ಥಿಕತೆಯ ವಿಸ್ತರಣೆಯನ್ನು ಹೆಚ್ಚಿಸಿತು. ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಎಂದರೆ ಪ್ರತಿಯೊಂದು ಕ್ಷೇತ್ರಕ್ಕೂ ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೊಡಿಸೋದಾಗಿ ಚೈತ್ರಾ ಮಾದರಿಯಲ್ಲೇ ಕೋಟಿ ಕೋಟಿ ವಂಚನೆ- ಆರೋಪಿ ಅರೆಸ್ಟ್

    ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಯೋಜಿಸಲಾಗಿರುವ ‘ರೋಜ್‍ಗಾರ್ ಮೇಳ’ ಯುವಜನರಿಗೆ ನಮ್ಮ ಬದ್ಧತೆಗೆ ಸಾಕ್ಷಿಯಾಗಿದೆ. ನಮ್ಮ ಸರ್ಕಾರವು ಯುವಜನರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಿಷನ್ ಮೋಡ್‍ನಲ್ಲಿ ಕೆಲಸ ಮಾಡುತ್ತಿದೆ. ನಾವು ಉದ್ಯೋಗ ನೀಡುವುದು ಮಾತ್ರವಲ್ಲದೆ, ಇಡೀ ವ್ಯವಸ್ಥೆಯನ್ನು ಪಾರದರ್ಶಕಗೊಳಿಸುತ್ತಿದ್ದೇವೆ. ಇದು ಉದ್ಯೋಗ ಪ್ರಕ್ರಿಯೆಯಲ್ಲಿ ಜನರ ನಂಬಿಕೆಯನ್ನು ಹೆಚ್ಚಿಸಿದೆ ಎಂದರು.

    ನಾವು ನೇಮಕಾತಿ ಪ್ರಕ್ರಿಯೆಯನ್ನು ಸುಗಮಗೊಳಿಸಿದ್ದೇವೆ. ಮಾತ್ರವಲ್ಲದೆ ಕೆಲವು ಪರೀಕ್ಷೆಗಳನ್ನು ಪುನರ್ ರಚಿಸಿದ್ದೇವೆ. ನೇಮಕಾತಿ ಸಮಯ ಸಿಬ್ಬಂದಿ ಆಯ್ಕೆ ಆಯೋಗವನ್ನು ಅರ್ಧದಷ್ಟು ಕಡಿಮೆ ಮಾಡಲಾಗಿದೆ. ಈಗ ಹಿಂದಿ ಮತ್ತು ಇಂಗ್ಲಿಷ್ ಹೊರತುಪಡಿಸಿ 13 ಪ್ರಾದೇಶಿಕ ಭಾಷೆಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ತೆಗೆದುಕೊಳ್ಳಲಾಗಿದೆ. ಇದು ಭಾಷಾ ತಡೆಯನ್ನು ಎದುರಿಸಿದವರಿಗೆ ಅವಕಾಶವನ್ನು ನೀಡುತ್ತಿದೆ ಎಂದು ಹೇಳಿದರು.

    ಕ್ರೀಡಾ ಕ್ಷೇತ್ರವು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ನಮ್ಮ ಆಟಗಾರರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಐತಿಹಾಸಿಕ ಪ್ರದರ್ಶನಗಳನ್ನು ನೀಡುತ್ತಿದ್ದಾರೆ. ಕ್ರೀಡಾ ಕ್ಷೇತ್ರವು ಅಭಿವೃದ್ಧಿಗೊಂಡಾಗ ತರಬೇತುದಾರರು, ಫಿಸಿಯೋ, ರೆಫರಿಗಳಿಗೆ ಅವಕಾಶಗಳು ಸಿಗುತ್ತವೆ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ಯಾಂಕಿಂಗ್ ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಭಾರತವೂ ಒಂದು- ರೋಜ್‌ಗಾರ್ ಮೇಳದಲ್ಲಿ ಮೋದಿ ಮಾತು

    ಬ್ಯಾಂಕಿಂಗ್ ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಭಾರತವೂ ಒಂದು- ರೋಜ್‌ಗಾರ್ ಮೇಳದಲ್ಲಿ ಮೋದಿ ಮಾತು

    -70,000ಕ್ಕೂ ಹೆಚ್ಚು ಹೊಸ ನೇಮಕಾತಿ ಪತ್ರಗಳ ವಿತರಣೆ

    ನವದೆಹಲಿ: ಮುಂದಿನ 25 ವರ್ಷಗಳು ಭಾರತಕ್ಕೆ (India) ಅತ್ಯಂತ ಮಹತ್ವದ್ದಾಗಿದೆ. ಭಾರತವು ಬ್ಯಾಂಕಿಂಗ್ (Banking) ಕ್ಷೇತ್ರವನ್ನು ಬಲಿಷ್ಠವೆಂದು ಪರಿಗಣಿಸಿರುವ ದೇಶಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

    ರೋಜ್‌ಗಾರ್ ಮೇಳದ (Rozgar Mela) ಅಡಿಯಲ್ಲಿ 70,000ಕ್ಕೂ ಹೆಚ್ಚು ಹೊಸ ನೇಮಕಾತಿ ಪತ್ರಗಳನ್ನು (Appointment Letter) ಪ್ರಧಾನಿ ನರೇಂದ್ರ ಮೋದಿ ವಿತರಿಸಿದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿ ನೇಮಕಾತಿ ಪತ್ರಗಳನ್ನು ನೀಡಿದರು. ಬಳಿಕ ಮಾತನಾಡಿದ ಅವರು, 9 ವರ್ಷಗಳ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ನಮ್ಮ ಬ್ಯಾಂಕಿಂಗ್ ಕ್ಷೇತ್ರವು ನಾಶವಾಗಿತ್ತು. ಇಂದು ನಾವು ಡಿಜಿಟಲ್ ವಹಿವಾಟು ಮಾಡಲು ಸಮರ್ಥರಾಗಿದ್ದೇವೆ ಎಂದರು. ಇದನ್ನೂ ಓದಿ: 5 ವರ್ಷಗಳಲ್ಲಿ ಕಾನೂನು ಹೋರಾಟಕ್ಕೆ ಕೇಂದ್ರ ಖರ್ಚು ಮಾಡಿದ್ದೆಷ್ಟು?

    ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಿ ನೌಕರನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಸಂಕಲ್ಪವನ್ನು ದೇಶದ ಜನತೆ ಕೈಗೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಎರಡು ಪ್ರಮುಖ ಮಸೀದಿಗಳ ತೆರವಿಗೆ ರೈಲ್ವೆ ಇಲಾಖೆ ನೋಟೀಸ್

    9 ವರ್ಷಗಳ ಹಿಂದೆ 140 ಕೋಟಿ ಜನರಿಗೆ ಫೋನ್ ಬ್ಯಾಂಕಿಂಗ್ ಇರಲಿಲ್ಲ. 2014ರಿಂದ ನಾವು ನಮ್ಮ ಬ್ಯಾಂಕಿಂಗ್ ಕ್ಷೇತ್ರವನ್ನು ಪುನರುಜ್ಜೀವನಗೊಳಿಸಿದ್ದೇವೆ. ದೇಶದಲ್ಲಿ ಸರ್ಕಾರಿ ಬ್ಯಾಂಕ್‌ಗಳ ನಿರ್ವಹಣೆಯನ್ನು ನಾವು ಬಲಪಡಿಸಿದ್ದೇವೆ. ನಾವು ಹಲವಾರು ಸಣ್ಣ ಬ್ಯಾಂಕ್‌ಗಳನ್ನು ಸಂಯೋಜಿಸಿ ದೊಡ್ಡ ಬ್ಯಾಂಕ್‌ಗಳನ್ನು ರಚಿಸಿದ್ದೇವೆ. ಸರ್ಕಾರವು ‘ದಿವಾಳಿ ಸಂಹಿತೆ’ ಕಾನೂನನ್ನು ಮಾಡಿದೆ. ಇದರಿಂದ ಯಾವುದೇ ಬ್ಯಾಂಕ್ ಕನಿಷ್ಠ ನಷ್ಟವನ್ನು ಮಾತ್ರ ಅನುಭವಿಸಬಹುದು ಎಂದರು. ಇದನ್ನೂ ಓದಿ: ಪ.ಬಂಗಾಳದಲ್ಲಿಯೂ ನಡೆದಿತ್ತು ಮಹಿಳೆಯರಿಬ್ಬರ ಅರೆಬೆತ್ತಲೆ ಮೆರವಣಿಗೆ- ವೀಡಿಯೋ ವೈರಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 70,000 ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

    70,000 ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

    ನವದೆಹಲಿ: ರೋಜಗಾರ್ ಮೇಳದ (Rozgar Mela) ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) 70,000 ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು, ರೈಲ್ವೆ, ಅಂಚೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಭರ್ತಿಯಾದ ನೌಕರರಿಗೆ ನೇಮಕಾತಿ ಪತ್ರ ನೀಡಿದರು.

    ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಅಜಾದಿ ಕಾ ಅಮೃತ್ ಕಾಲ ಪ್ರಾರಂಭವಾಗಿರುವ ಹಿನ್ನಲೆ ಈ ಅವಧಿಯಲ್ಲಿ ಸರ್ಕಾರಿ ಸೇವೆಗಳಿಗೆ ಸೇರ್ಪಡೆಯಾಗುವವರು ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿ ಹೊಂದಿರುತ್ತಾರೆ. ರೋಜಗಾರ್ ಮೇಳ ಎನ್‌ಡಿಎ – ಬಿಜೆಪಿ ಸರ್ಕಾರದ ಹೊಸ ಗುರುತು ಎಂದರು. ಇದನ್ನೂ ಓದಿ: ಟ್ವಿಟ್ಟರ್‌ ಕಾನೂನು ಪಾಲನೆ ಮಾಡದೇ ನಿರಂತರ ಉಲ್ಲಂಘನೆ ಮಾಡುತ್ತಿತ್ತು: ರಾಜೀವ್‌ ಚಂದ್ರಶೇಖರ್‌

    ಈ ವೇಳೆ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ರಾಜಕೀಯ ಭ್ರಷ್ಟಾಚಾರ, ಯೋಜನೆಗಳಲ್ಲಿನ ಅವ್ಯವಹಾರಗಳು, ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ಅವರ ಗುರುತು ಎಂದು ವಾಗ್ದಾಳಿ ನಡೆಸಿದರು.

    ಹಿಂದೆ ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರವನ್ನು ರಾಜವಂಶದ ಪಕ್ಷ ಉತ್ತೇಜಿಸಿತ್ತು. ಕೆಲವು ಪಕ್ಷಗಳು ವಿವಿಧ ಹುದ್ದೆಗಳಿಗೆ ತಮ್ಮದೇ ಆದ ದರ ಕಾರ್ಡ್ ನಿಗದಿಪಡಿಸಿತ್ತು. ಈ ಮೂಲಕ ಯುವಕರನ್ನು ಲೂಟಿ ಮಾಡಲಾಗುತ್ತಿತ್ತು. ಯುವಕರ ಉಜ್ವಲ ಭವಿಷ್ಯವನ್ನು ಕಾಪಡುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಬಿಜೆಪಿಯಲ್ಲಿ ಮುಸುಕಿನ ಗುದ್ದಾಟ – ರಾಜ್ಯಾಧ್ಯಕ್ಷ, ಪ್ರತಿಪಕ್ಷ ನಾಯಕ ಆಯ್ಕೆ ನೆನೆಗುದಿಗೆ

    ದೇಶದಲ್ಲಿ ಉದ್ಯೋಗಾವಕಾಶಗಳ ಕುರಿತು ಮಾತನಾಡಿ, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಹೊಸ ಉದ್ಯೋಗಾವಕಾಶಗಳು ಬರುತ್ತಿವೆ. ‘ಸ್ಟಾರ್ಟ್ಅಪ್ ಇಂಡಿಯಾ’ ಮತ್ತು ‘ಸ್ಟ್ಯಾಂಡ್-ಅಪ್ ಇಂಡಿಯಾ’ ಯೋಜನೆಗಳು ಭಾರತದ ಯುವಜನರ ಸಾಮರ್ಥ್ಯವನ್ನು ಹೆಚ್ಚಿಸಿವೆ. ಒಂದು ದಶಕದ ಹಿಂದೆಗೆ ಹೋಲಿಸಿದರೆ ಈಗ ಭಾರತ ಹೆಚ್ಚು ಸ್ಥಿರ, ಸುರಕ್ಷಿತ ಮತ್ತು ಬಲಿಷ್ಠ ದೇಶವಾಗಿದೆ. ನಿರ್ಣಾಯಕತೆಯು ಭಾರತ ಸರ್ಕಾರದ ಗುರುತಾಗಿದೆ ಎಂದು ಪ್ರತಿಪಾದಿಸಿದರು.

  • ಯುವಜನತೆಗೆ ಕೇಂದ್ರ ಸರ್ಕಾರ 10 ಲಕ್ಷ ಉದ್ಯೋಗ ಒದಗಿಸುವ ಕೆಲಸ ಮಾಡ್ತಿದೆ – ಮೋದಿ

    ಯುವಜನತೆಗೆ ಕೇಂದ್ರ ಸರ್ಕಾರ 10 ಲಕ್ಷ ಉದ್ಯೋಗ ಒದಗಿಸುವ ಕೆಲಸ ಮಾಡ್ತಿದೆ – ಮೋದಿ

    ಗಾಂಧೀನಗರ: ಕೇಂದ್ರ ಸರ್ಕಾರ ಯುವಜನತೆಗೆ ಹತ್ತು ಲಕ್ಷ ಉದ್ಯೋಗಗಳನ್ನು ಒದಗಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

    ಗುಜರಾತ್ (Gujarat) ಸರ್ಕಾರವು ಇಲ್ಲಿ ಆಯೋಜಿಸಿದ್ದ ‘ರೋಜ್‌ಗಾರ್ ಮೇಳ’ (Rozgar Mela)ದ ವೀಡಿಯೊ ಸಂದೇಶದಲ್ಲಿ, ಯುವಜನತೆಗೆ ಸರ್ಕಾರಿ ಉದ್ಯೋಗಗಳ ಸಂಖ್ಯೆಯೂ ಹೆಚ್ಚಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತೆಲಂಗಾಣದಲ್ಲಿ ಆಪರೇಷನ್ ಕಮಲಕ್ಕೆ ಯತ್ನ – ಅಮಿತ್ ಶಾರನ್ನು ಬಂಧಿಸಿ: ಮನೀಶ್ ಸಿಸೋಡಿಯಾ

    ಬಿಜೆಪಿ (BJP) ಆಡಳಿತವಿರುವ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ಸಮಾರಂಭದಲ್ಲಿ ಸುಮಾರು 5,000 ಜನರು ಗುಜರಾತ್ ಪಂಚಾಯತ್ ಸೇವಾ ಮಂಡಳಿಯಿಂದ ನೇಮಕಾತಿ ಪತ್ರಗಳನ್ನು ಪಡೆದರೆ, 8,000 ಜನರಿಗೆ ಗುಜರಾತ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಮಂಡಳಿ ಮತ್ತು ಲೋಕರಕ್ಷಕ ನೇಮಕಾತಿ ಮಂಡಳಿಯಿಂದ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನೇಮಕಾತಿ ಪತ್ರ ವಿತರಿಸಿದರು.

    “ಧನ್ತೇರಸ್‌ನ ಶುಭ ದಿನದಂದು ನಾವು ರಾಷ್ಟ್ರಮಟ್ಟದಲ್ಲಿ ರೋಜ್‌ಗಾರ್ ಮೇಳವನ್ನು ನಡೆಸಿದ್ದೇವೆ. ಅಲ್ಲಿ ನಾವು 75,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ್ದೇವೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಕೋಸ್ಟ್ ಗಾರ್ಡ್ ಭದ್ರತಾ ಶಕ್ತಿ ಹೆಚ್ಚಿಸಲು ಕೇಂದ್ರ ಸರ್ಕಾರ ಪ್ಲ್ಯಾನ್‌ – ಮನೋಜ್ ಬಾಡ್ಕರ್

    ಕೇಂದ್ರ ಸರ್ಕಾರವು 10 ಲಕ್ಷ ಉದ್ಯೋಗಗಳನ್ನು ಒದಗಿಸುವ ಕೆಲಸ ಮಾಡುತ್ತಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಹ ಅಭಿಯಾನದೊಂದಿಗೆ ಸಂಬಂಧ ಹೊಂದುತ್ತಿವೆ. ಯುವಕರಿಗೆ ನೀಡುವ ಸರ್ಕಾರಿ ಉದ್ಯೋಗಗಳ ಸಂಖ್ಯೆ ಗಣನೀಯವಾಗಿ ಏರುತ್ತದೆ ಎಂದು ಭರವಸೆಯ ನುಡಿಗಳನ್ನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರೋಜ್‌ಗಾರ್ ಮೇಳಕ್ಕೆ ಮೋದಿ ಚಾಲನೆ- 75,000 ಯುವಕರಿಗೆ ಸಿಕ್ತು ಸರ್ಕಾರಿ ಉದ್ಯೋಗ

    ರೋಜ್‌ಗಾರ್ ಮೇಳಕ್ಕೆ ಮೋದಿ ಚಾಲನೆ- 75,000 ಯುವಕರಿಗೆ ಸಿಕ್ತು ಸರ್ಕಾರಿ ಉದ್ಯೋಗ

    ನವದೆಹಲಿ: ಕೊವೀಡ್ (Corona) ನಂತರ ಹೆಚ್ಚಳವಾಗಿದ್ದ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ರೋಜ್‌ಗಾರ್ ಮೇಳಕ್ಕೆ (Rozgar Mela) ಚಾಲನೆ ನೀಡಿದರು. ಈ ಮೂಲಕ 2023ರ ವೇಳೆಗೆ 10 ಲಕ್ಷ ಸರ್ಕಾರಿ ಉದ್ಯೋಗ ನೀಡುವ ಗುರಿ ಹೊಂದಿರುವ ನಮೋ ಸರ್ಕಾರ ಮಿಷನ್ ಮೋಡ್ ನೇಮಕಾತಿಗೆ ಸೂಚನೆ ನೀಡಿದೆ.

    ನಿರುದ್ಯೋಗ ಸಮಸ್ಯೆ ಭಾರತವನ್ನು ಸಾಕಷ್ಟು ಬಾಧಿಸುತ್ತಿದೆ. ಕೋವಿಡ್ ಬಳಿಕ ಈ ಸಮಸ್ಯೆ ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಾಪಿಸಿದೆ. ಯುವಕರು ಕೆಲಸ ಇಲ್ಲದೇ ಪರಿತಪಿಸುತ್ತಿದ್ದಾರೆ. ಈ ನಿರುದ್ಯೋಗ ಸಮಸ್ಯೆಯನ್ನೇ ಮುಂದಿಟ್ಟುಕೊಂಡು ವಿಪಕ್ಷಗಳು ಕೇಂದ್ರ ಸರ್ಕಾರವನ್ನು ಟಾರ್ಗೆಟ್ ಮಾಡುತ್ತಿವೆ.

    ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಹೊತ್ತಲ್ಲಿ ದೇಶದ ಯುವಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಮೂಲಕ ದೇಶದಲ್ಲಿ ಮುಂದಿನ 18 ತಿಂಗಳು ಅಂದರೆ 2023ರ ವೇಳೆಗೆ 10 ಲಕ್ಷ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಪೂರಕ ಎನ್ನುವಂತೆ ಇಂದು 75 ಸಾವಿರ ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಪತ್ರವನ್ನು ಹಂಚಿಕೆ ಮಾಡಿದರು.

    ಈ ವೇಳೆ ಮಾತನಾಡಿದ ಅವರು, ಗ್ರೂಪ್ ಎ ಮತ್ತು ಬಿ (ಗೆಜೆಟೆಡ್), ಗ್ರೂಪ್ ಬಿ (ನಾನ್ ಗೆಜೆಟೆಡ್) ಮತ್ತು ಸಿ ಗುಂಪಿನಲ್ಲಿ ವಿವಿಧ ಹಂತಗಳಲ್ಲಿ ವಿಂಗಡಿಸಲಾಗಿದೆ. ಅವರನ್ನು ಕೇಂದ್ರ ಸಶಸ್ತ್ರ ಪಡೆಗಳ ಸಿಬ್ಬಂದಿ, ಸಬ್ ಇನ್ಸ್‌ಪೆಕ್ಟರ್‌ಗಳು, ಕಾನ್ಸ್‌ಟೇಬಲ್‍ಗಳು, ಎಲ್‍ಡಿಸಿಗಳು, ಸ್ಟೆನೋಗ್ರಾಫರ್‌ಗಳು, ಪಿಎಗಳು, ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ಗಳು ಮತ್ತು ಎಂಟಿಎಸ್ ಹುದ್ದೆಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

    38 ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದೆ. ಇವುಗಳಿಗೆ ತ್ವರಿತವಾಗಿ ನೇಮಕಾತಿ ಮಾಡಲಾಗುವುದು. ಸರ್ಕಾರಿ ಉದ್ಯೋಗಗಳು ಮಾತ್ರವಲ್ಲದೇ ಸ್ಕಿಲ್ ಇಂಡಿಯಾ ಮೂಲಕ ಯುವಕರನ್ನು ಸದೃಢ ಮಾಡಲಾಗುತ್ತಿದೆ. 8 ಕೋಟಿ ಮಹಿಳೆಯರು ಸ್ವಸಹಾಯ ಗುಂಪುಗಳ ಮೂಲಕ ಸರ್ಕಾರದ ನೆರವು ಪಡೆದು ಆರ್ಥಿಕವಾಗಿ ಬಲಿಷ್ಠರಾಗಿದ್ದಾರೆ ಎಂದರು.

    ಕೊರೊನಾ ನಂತರ ವಿಶ್ವಾದ್ಯಂತ ಹಲವಾರು ದೇಶಗಳು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳ ಹೊಡೆತವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ಯುವಜನರಿಗೆ ಗರಿಷ್ಠ ಉದ್ಯೋಗವಕಾಶವನ್ನು ಸೃಷ್ಟಿಸಲು ಕೇಂದ್ರವು ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಿಂದ ನಾವು ವಿಚಲಿತರಾಗಿದ್ದೇವೆ – ಪ್ರಹ್ಲಾದ್ ಜೋಶಿ

    ಜಾಗತಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂಬುದು ಸತ್ಯ. ಹಲವಾರು ದೇಶಗಳಲ್ಲಿ ಹೆಚ್ಚಿನ ಹಣದುಬ್ಬರ ಹಾಗೂ ನಿರುದ್ಯೋಗದಂತಹ ಸಮಸ್ಯೆಗಳು ಉತ್ತುಂಗದಲ್ಲಿದೆ. ಆದರೆ ಭಾರತವು ಈ ಸಮಸ್ಯೆಗಳಿಂದ ನಮ್ಮ ದೇಶವನ್ನು ರಕ್ಷಿಸಲು ಹೊಸ ಉಪಕ್ರಮಗಳು ಮತ್ತು ಕೆಲವು ಅಪಾಯಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ದೀಪಾವಳಿಗೆ ಪ್ರಧಾನಿಯಿಂದ ಸಿಕ್ತು ಬಂಪರ್ ಆಫರ್- 75,000 ಯುವಕರಿಗೆ ಉದ್ಯೋಗ

    Live Tv
    [brid partner=56869869 player=32851 video=960834 autoplay=true]