Tag: ರೋಡ್ ಶೋ

  • ಹಾನಗಲ್ ಗ್ಯಾಂಗ್ ರೇಪ್ | ಆರೋಪಿಗಳಿಗೆ ಜಾಮೀನು – ಜೈಲಿನಿಂದಲೇ 5 ಕಾರು, ಹಿಂಬಾಲಕರೊಂದಿಗೆ ರೋಡ್ ಶೋ

    ಹಾನಗಲ್ ಗ್ಯಾಂಗ್ ರೇಪ್ | ಆರೋಪಿಗಳಿಗೆ ಜಾಮೀನು – ಜೈಲಿನಿಂದಲೇ 5 ಕಾರು, ಹಿಂಬಾಲಕರೊಂದಿಗೆ ರೋಡ್ ಶೋ

    ಹಾವೇರಿ: ಹಾನಗಲ್(Hanagal) ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ 7 ಆರೋಪಿಗಳು ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳು ಭರ್ಜರಿ ರೋಡ್ ಶೋ ನಡೆಸಿರುವ ಘಟನೆ ಹಾವೇರಿ(Haveri) ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿ ಆಲೂರು ಪಟ್ಟಣದಲ್ಲಿ ನಡೆದಿದೆ.

    ಕಳೆದ 3 ದಿನಗಳ ಹಿಂದೆ ಹಾವೇರಿ ಸಬ್ ಜೈಲಿನಿಂದ ಅಕ್ಕಿ ಆಲೂರಿನವರೆಗೆ(Akki Alur) ಆರೋಪಿಗಳು ರೋಡ್ ಶೋ ನಡೆಸಿದ್ದಾರೆ. 5 ಕಾರುಗಳಲ್ಲಿ 20ಕ್ಕೂ ಹೆಚ್ಚು ಹಿಂಬಾಲಕರ ಜೊತೆ ಅಕ್ಕಿ ಆಲೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿರೋ ವೀಡಿಯೋಗಳು ವೈರಲ್ ಆಗಿದೆ. ಇದನ್ನೂ ಓದಿ: ಯೂಟ್ಯೂಬ್‌ ಸಂದರ್ಶನ ನೀಡಿ ತಗಲಾಕಿಕೊಂಡ ದಾಸ – ಕೋರ್ಟ್‌ನಿಂದ ದರ್ಶನ್‌, ವಿಜಯಲಕ್ಷ್ಮಿಗೆ ಸಮನ್ಸ್‌

    ಕಳೆದ 3 ದಿನಗಳ ಹಿಂದೆ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಹಾವೇರಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಸಂತ್ರಸ್ತೆ ಆರೋಪಿಗಳನ್ನು ಗುರುತಿಸಲು ವಿಫಲವಾದ ಹಿನ್ನಲೆ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಬೆಂಗಳೂರಲ್ಲಿ 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ದೃಢ

     ಎ1 ಆರೋಪಿ ಅಪ್ತಾಬ್ ಚಂದನಕಟ್ಟಿ, ಎ2 ಮದರ್ ಸಾಬ್ ಮಂಡಕ್ಕಿ, ಎ3 ಸಮಿವುಲ್ಲಾ ಲಾಲನವರ, ಎ4 ಮಹಮದ್ ಸಾದಿಕ್  ಅಗಸಿಮನಿ, ಎ8 ಶೊಯಿಬ್ ಮುಲ್ಲಾ, ಎ11 ತೌಸಿಪ್ ಚೋಟಿ, ಎ13 ರಿಯಾಜ್ ಸಾವಿಕೇರಿಗೆ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಬೆಂಗಳೂರು ಕಂಪನಿಯಿಂದ ದೇಶದ ಮೊದಲ ಎಐ ಆಧಾರಿತ ಆಟೋಪೈಲಟ್ ಕಾರು ಅಭಿವೃದ್ಧಿ

    2024, ಜನವರಿ 8ರಂದು ಹಾನಗಲ್ ಹೊರವಲಯದಲ್ಲಿ ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಜೈಲುಪಾಲಾಗಿದ್ದ 19 ಆರೋಪಿಗಳ ಪೈಕಿ 12 ಆರೋಪಿಗಳು 10 ತಿಂಗಳ ಹಿಂದೆಯೇ ಜಾಮೀನು ಪಡೆದಿದ್ದರು. ಆದರೆ ಪ್ರಮುಖ ಆರೋಪಿಗಳ ಜಾಮೀನು ಅರ್ಜಿಗಳನ್ನು ಹಲವು ಬಾರಿ ನ್ಯಾಯಾಲಯ ತಿರಸ್ಕರಿಸಿತ್ತು. ಸಂತ್ರಸ್ತೆ ಮ್ಯಾಜಿಸ್ಟ್ರೇಟ್ ಮುಂದೆ ನೀಡಿದ್ದ ಹೇಳಿಕೆಗಳನ್ನು ಉಳಿಸಿಕೊಳ್ಳಲು ವಿಫಲವಾದ ಹಿನ್ನಲೆ ಆರೋಪಿಗಳಿಗೆ ಈಗ ಜಾಮೀನು ಸಿಕ್ಕಿದೆ. ಇದನ್ನೂ ಓದಿ: ಮಂಗಳೂರು | ಮದುವೆಯ ವಿಚಾರಕ್ಕೆ ಕಿರಿಕ್ – ಸಂಧಾನಕ್ಕೆ ಬಂದಿದ್ದ ನೆಂಟನ ಬರ್ಬರ ಹತ್ಯೆ

    ಆರೋಪಿಗಳು ಜಾಮೀನು ಸಿಕ್ಕ ಬೆನ್ನಲ್ಲೇ ಕಾರಿನಲ್ಲಿ ರೋಡ್ ಶೋ ನಡೆಸಿರುವುದು ಜಿಲ್ಲೆಯ ಜನರ ಆಕ್ರೋಶ ಕಾರಣವಾಗಿದೆ. ಪೊಲೀಸ್ ಇಲಾಖೆ ಮತ್ತೆ ಪ್ರಕರಣ ದಾಖಲಿಸಿಕೊಂಡು ಜಾಮೀನು ರದ್ದು ಮಾಡುವಂತೆ ಜಿಲ್ಲೆಯ ಜನರು ಆಗ್ರಹಿಸಿದ್ದಾರೆ.

  • ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

    ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

    ನವದೆಹಲಿ: ಟಿ20 ವಿಶ್ವಕಪ್‌ ಕ್ರಿಕೆಟ್‌ (T20 World Cup) ಚಾಂಪಿಯನ್‌ ಟೀಂ ಇಂಡಿಯಾ (Team India) ಇಂದು ಬೆಳಗ್ಗೆ ತಾಯ್ನಾಡಿಗೆ ಆಗಮಿಸಿದೆ.

    ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ನಿಂದ ಹೊರಟಿದ್ದ ವಿಶೇಷ ವಿಮಾನ ದೆಹಲಿಯಲ್ಲಿರುವ (Delhi) ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗಿದೆ.

    ಜೂ. 1ರಂದು ಬಾರ್ಬಡೋಸ್‌ಗೆ ಭೀಕರ ಬೆರಿಲ್ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಭಾರತಕ್ಕೆ ಬರಲು ಆಗಿರಲಿಲ್ಲ. ಈಗ ವಿಶೇಷ​ ವಿಮಾನದ ಮೂಲಕ T20 ವಿಶ್ವಕಪ್​ ಟ್ರೋಫಿಯೊಂದಿಗೆ ಆಟಗಾರರೆಲ್ಲ ಆಗಮಿಸಿದರು.

     

     

    ಪದಕ ಧರಿಸಿ ಇಳಿದ ಆಟಗಾರರಿಗೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಸದ್ಯ ಆಟಗಾರರು ದೆಹಲಿಯಲ್ಲಿರುವ ಐಟಿಸಿ ಮೌರ್ಯ ಹೋಟೆಲಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಳಿಕ ಬೆಳಗ್ಗೆ 10 ಗಂಟೆಯ ವೇಳೆ ಪ್ರಧಾನಿ ಮೋದಿ (PM Narendra Modi) ಅವರ ನಿವಾಸಕ್ಕೆ ತೆರಳಲಿದ್ದಾರೆ.

    ಮೋದಿ ಭೇಟಿಯ ಬಳಿಕ ವಿಶೇಷ ವಿಮಾನದಲ್ಲಿ ಮುಂಬೈಗೆ ಆಟಗಾರರು ಆಗಮಿಸಲಿದ್ದಾರೆ.  ಸಂಜೆ 4 ಗಂಟೆಗೆ ಮುಂಬೈ ಮರೀನ್‌ ಡ್ರೈವ್‌ನಿಂದ ತೆರೆದ ವಾಹನದಲ್ಲಿ ವಾಂಖೆಡೆ ಸ್ಟೇಡಿಯಂವರೆಗೆ 2 ಕಿ.ಮೀ ರೋಡ್‌ ಶೋ  (Road Show) ನಡೆಯಲಿದೆ.

    ಇಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಯಕ ರೋಹಿತ್‌ ಶರ್ಮಾ (Rohit Sharma) ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಅವರಿಗೆ ಟಿ 20 ವಿಶ್ವಕಪ್ ಟ್ರೋಫಿಯನ್ನು ಹಸ್ತಾಂತರಿಸಲಿದ್ದಾರೆ.

  • ಶಂಕರಾಚಾರ್ಯರು ಸಂಚರಿಸಿದ್ದ ರಸ್ತೆಯಲ್ಲಿ ಮೋದಿ 6 ಕಿ.ಮೀ ರೋಡ್‌ ಶೋ – ಮಂಗಳವಾರವೇ ನಾಮಪತ್ರ ಸಲ್ಲಿಕೆ ಯಾಕೆ?

    ಶಂಕರಾಚಾರ್ಯರು ಸಂಚರಿಸಿದ್ದ ರಸ್ತೆಯಲ್ಲಿ ಮೋದಿ 6 ಕಿ.ಮೀ ರೋಡ್‌ ಶೋ – ಮಂಗಳವಾರವೇ ನಾಮಪತ್ರ ಸಲ್ಲಿಕೆ ಯಾಕೆ?

    ಲಕ್ನೋ: ಮಂಗಳವಾರ ನಾಮಪತ್ರ ಸಲ್ಲಿಸಲಿರುವ ಪ್ರಧಾನಿ ಮೋದಿ (PM Narendra Modi) ಇಂದೇ ಸ್ವಕ್ಷೇತ್ರ ವಾರಣಾಸಿಗೆ (Varanasi) ತೆರಳಿದ್ದು, ಭರ್ಜರಿ ರೋಡ್‌ಶೋ (Road Show) ನಡೆಸಿದ್ದಾರೆ. ಮಾಳವೀಯ ವೃತ್ತದಿಂದ ಆರಂಭವಾದ ರೋಡ್ ಶೋ ಕಾಶಿ ವಿಶ್ವನಾಥ ಧಾಮದವರೆಗೂ 6 ಕಿಲೋಮೀಟರ್ ಉದ್ದ ನಡೆಯಿತು.

    ಸಂತ ರವಿದಾಸ್ ಗೇಟ್, ಅಸ್ಸಿ ಘಾಟ್, ಶಿವಲೀಲಾ ಘಾಟ್, ಸೋನಾರ್‌ಪುರ, ಜಂಗಮವಾಡಿ, ಗೋದೌಲಿಯಾವನ್ನು ಮೋದಿ ರೋಡ್ ಶೋ ಹಾದು ಹೋಯ್ತು. 1200 ವರ್ಷಗಳ ಹಿಂದೆ ಶಂಕರಾಚಾರ್ಯರು (Shankaracharya) ಇದೇ ರಸ್ತೆಯಲ್ಲಿ ಓಡಾಡಿದ್ದರು ಎಂಬ ಪ್ರತೀತಿ ಇದೆ. ಮೋದಿ ಸಾಗಿದ ರಸ್ತೆಯಲ್ಲಿ 25 ದೇವಸ್ಥಾನಗಳು, 60ಕ್ಕೂ ಹೆಚ್ಚು ಆಶ್ರಮಗಳಿದ್ದು, ದಾರಿಯುದ್ದಕ್ಕೂ ಸಾವಿರಾರು ಮಂದಿ ಮೋದಿಗೆ ಹೂಮಳೆಯ ಸ್ವಾಗತ ನೀಡಿದರು.  ಇದನ್ನೂ ಓದಿ: ಹೇಮಂತ್‌ ಸೊರೆನ್‌ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ

    ಬಿಸ್ಮಿಲ್ಲಾ ಖಾನ್ ಕುಟುಂಬದ ಶಹನಾಯಿ ವಾದನವೂ ಇತ್ತು. ಕಲಾ ತಂಡಗಳ ವೈಭವವೂ ಕಂಡುಂತು. 5000ಕ್ಕೂ ಹೆಚ್ಚು ಮಹಿಳೆಯರು, ಗುಜರಾತಿಗಳು, ಮರಾಠಿಗಳು, ಬೆಂಗಾಲಿಗಳು, ತಮಿಳರು, ಪಂಜಾಬಿಗಳು. ಹೀಗೆ ದೇಶದ ಎಲ್ಲಾ ಭಾಗದ ಮಂದಿ ಮೋದಿ ರೋಡ್‌ಶೋನಲ್ಲಿ ಪಾಲ್ಗೊಂಡಿದರು.

    ಜನರ ಪ್ರತಿಕ್ರಿಯೆ ನೋಡಿ ಪ್ರಧಾನಿ ಮೋದಿ ಫುಲ್ ಖುಷಿಯಾದರು. ಜನರತ್ತ ಕೈಬೀಸಿ, ಕಮಲದ ಚಿನ್ಹೆಯನ್ನು ತೋರಿಸಿದರು. ರೋಡ್‌ಶೋನಲ್ಲಿ ಮೋದಿ ಜೊತೆ ಸಿಎಂ ಯೋಗಿ ಆದಿತ್ಯನಾಥ್ ಸೇರಿ ಹಲವರು ಪಾಲ್ಗೊಂಡಿದ್ದರು. ರೋಡ್‌ ಶೋ ಅಂತ್ಯವಾದ ಬಳಿಕ ಕಾಶಿ ವಿಶ್ವೇಶ್ವರನಿಗೆ ಮೋದಿ ಪೂಜೆ ಸಲ್ಲಿಸಿದರು. 10 ವರ್ಷದಲ್ಲಿ ವಾರಣಾಸಿ ಹೇಗೆ ಬದಲಾಗಿದೆ ಎಂಬುದನ್ನು ಲೇಸರ್ ಶೋ ಮೂಲಕ ಪ್ರಸ್ತುತ ಪಡಿಸಲಾಯಿತು. ಇದನ್ನೂ ಓದಿ: ಮಂಗಳವಾರ ರೇವಣ್ಣ ಬಿಡುಗಡೆ – ಕೋರ್ಟ್‌ನಲ್ಲಿ ವಾದ, ಪ್ರತಿವಾದ ಹೇಗಿತ್ತು? ಜಾಮೀನು ಷರತ್ತು ಏನು?

    ಮಂಗಳವಾರ ಯಾಕೆ?
    ನಾಳೆ ಗಂಗಾ ಸಪ್ತಮಿ. ಹಿಂದೂಗಳ ಪಾಲಿಗೆ ಪವಿತ್ರವಾದ ದಿನ. ಈ ದಿನ ಬ್ರಹ್ಮನ ಕಮಂಡಲದಿಂದ ಗಂಗೆ ಜನಿಸಿದಳು ಎಂಬ ನಂಬಿಕೆಯಿದೆ. ಗಂಗಾ ಸಪ್ತಮಿಯಂದು ಶುಭ ಅಭಿಜಿನ್ ಲಗ್ನದಲ್ಲಿ ಮೋದಿ ನಾಮಪತ್ರ ಸಲ್ಲಿಸುವುದು ಶ್ರೇಯಸ್ಕರ ಎಂದು ಪಂಡಿತ್ ಗಣೇಶ್ವರ್ ಶಾಸ್ತ್ರಿ ಸೂಚಿಸಿದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ರಾಮಮಂದಿರ ಲೋಕಾರ್ಪಣೆಗೆ ಮಹೂರ್ತವನ್ನು ಇವರೇ ನೀಡಿದ್ದರು.

     

  • ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿ ಪರ ಇಂದು ನಟ ದರ್ಶನ್ ಪ್ರಚಾರ

    ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿ ಪರ ಇಂದು ನಟ ದರ್ಶನ್ ಪ್ರಚಾರ

    ರಡು ದಿನಗಳ ಹಿಂದೆಯಷ್ಟೇ ನಟ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಿದ್ದರು. ಇದೀಗ ಮತ್ತೋರ್ವ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲು ದರ್ಶನ್ ಒಪ್ಪಿಕೊಂಡಿದ್ದಾರೆ. ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ (DK Suresh)ಅವರ ಪರವಾಗಿ ದರ್ಶನ್ ಬಹೃತ್ ರೋಡ್ ಶೋ (Road Show)ನಡೆಸಲಿದ್ದಾರೆ.

    ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಯಶವಂತರ ಪುರ ಮಾರ್ಕೆಟ್, ಲಗ್ಗೆರೆ ಸರ್ಕಲ್, ಕೊಟ್ಟಿಗೆ ಪಾಳ್ಯ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಉತ್ತರಹಳ್ಳಿ, ವೀವರ್ಸ್ ಕಾಲೋನಿ, ಕೊಟ್ಟಿಗೆರೆ ವಾರ್ಡ್ ಗಳಲ್ಲಿ ಇಂದು ದರ್ಶನ್ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ.

    ಸುಮಲತಾ ಅಂಬರೀಶ್ ಹೇಳಿದ್ದೇನು?

    ಮಂಡ್ಯ (Mandya) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ನಟ ದರ್ಶನ್ ‍(Darshan) ಪ್ರಚಾರಕ್ಕೆ ಆಗಮಿಸಿದ್ದರು. ಈವೆಗೂ ನಟಿ, ಸಂಸದೆ ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸುತ್ತಾ ಬಂದಿದ್ದು ದರ್ಶನ್, ಈಗ ಸುಮಲತಾ ಬಿಜೆಪಿ ಪಕ್ಷವನ್ನು ಸೇರಿಕೊಂಡಿದ್ದರೂ, ಅಮ್ಮನ ಪಕ್ಷ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ದರ್ಶನ್ ಪ್ರಚಾರ ಮಾಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಸುಮಲತಾ (Sumalatha Ambarish) ಅವರೇ ದರ್ಶನ್ ಅವರನ್ನು ಕಾಂಗ್ರೆಸ್ ಪಕ್ಷದ ಪರವಾಗಿ ಕಳುಹಿಸಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಕುರಿತಂತೆ ಉಡುಪಿಯಲ್ಲಿ ಸುಮಲತಾ ಪ್ರತಿಕ್ರಿಯೆ ಕೊಟ್ಟಿದ್ದಾರೆ.

    ಉಡುಪಿಯಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಭಾಗಿಯಾದ ಸುಮಲತಾ, ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರದ ವಿಚಾರವಾಗಿ ಮಾತನಾಡಿದ್ದು, ಸುಮಲತಾ ಅವರೇ  ದರ್ಶನ್ ಅವರನ್ನ ಪ್ರಚಾರಕ್ಕೆ ಕಳಿಸಿದ್ದಾರೆ ಎಂಬ ಊಹಾಪೋಹದ ಈ ವಾದದಲ್ಲಿ ಸೆನ್ಸ್ ಲಾಜಿಕ್ ಎರಡು ಇಲ್ಲ. ದರ್ಶನ್ ರನ್ನ ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಹೋಗಬೇಡ ಎಂದು ಹೇಳಲ್ಲ. ನಾನು ನಿಂತಿದ್ದರೆ ದರ್ಶನ್ ನನ್ನ ಪರ ಪ್ರಚಾರ ಮಾಡುತ್ತಿದ್ದರು. ರಾಜಕೀಯವಾಗಿ ಬೇರೆಯವರ ಬಗ್ಗೆ ನಾವು ಪ್ರತಿದಿನ ಚರ್ಚೆ ಮಾಡಲ್ಲ. ಪ್ರತಿದಿನ ಫೋನು ಮಾಡಿ ಎಲ್ಲಿಗೆ ಹೋಗ್ತಿದ್ದೀಯ ಯಾರ ಪರ ಪ್ರಚಾರ ಮಾಡ್ತಿದ್ದೀಯಾ ಅಂತ ಕೇಳಲ್ಲ. ಪ್ರಚಾರ ಯಾರಿಗೆ ಮಾಡಬೇಕು ಅನ್ನೋದು ಅವರ ಇಚ್ಛೆ ಎಂದೆಲ್ಲ ಮಾತನಾಡಿದ್ದಾರೆ.

    ಮುಂದುವರೆದು ಮಾತನಾಡಿದ ಸುಮಲತಾ, ಹೋಗು ಹೋಗಬೇಡ ಅನ್ನಲು ನಾನು ಯಾರು? ಅಸೆಂಬ್ಲಿ ಚುನಾವಣೆಯಲ್ಲಿ ಮಂಡ್ಯದಲ್ಲಿ ದರ್ಶನ್ ಮದ್ದೂರಿನಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದರು. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದರು. ಪಾಂಡವಪುರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಪರ ಪ್ರಚಾರ ಮಾಡಿದರು. ಪಕ್ಷ ಮುಖ್ಯ ಅಲ್ಲ ನಿಂತಿರುವ ವ್ಯಕ್ತಿ ಮುಖ್ಯ ಎಂದು ದರ್ಶನ್ ಹೇಳುತ್ತಾ ಬಂದಿದ್ದಾರೆ. ವ್ಯಕ್ತಿ ನನಗೆ ಇಷ್ಟವಾದರೆ ಹೋಗ್ತೀನಿ ಅಂತ ಹೇಳಿದ್ದಾರೆ. ಆ ರೀತಿ ದರ್ಶನ್ ನನ್ನ ಕಳಿಸುವುದಾದರೆ ನಾನ್ಯಾಕೆ ಬಿಜೆಪಿ ಸೇರಬೇಕು. ನಾನು ಪಕ್ಷೇತರ ನೇರವಾಗಿ ಸಪೋರ್ಟ್ ಮಾಡಬಹುದಲ್ವಾ?. ನನಗೆ ಯಾರೂ ಏನನ್ನೂ ಫೋರ್ಸ್ ಮಾಡೋಕೆ ಆಗಲ್ಲ. ಈ ಪಕ್ಷಕ್ಕೆ ಸೇರು ಆ ಪಕ್ಷ ಬೇಡ ಅಂತ ಒತ್ತಡ ಮಾಡೋಕೆ ಆಗ್ತಿರ್ಲಿಲ್ಲ. ನಾನು ನನ್ನ ಇಚ್ಛೆಯಿಂದ ಬಿಜೆಪಿಗೆ ಬಂದಿದ್ದೇನೆ. ಬೇರೆ ಪಕ್ಷಕ್ಕೆ ಸಪೋರ್ಟ್ ಮಾಡು ಅಂತ ಹೇಳುವ ಪ್ರಶ್ನೆ ಬರಲ್ಲ ಎಂದಿದ್ದಾರೆ.

  • ಪ್ರಹ್ಲಾದ್‌ ಜೋಶಿ 2 ಲಕ್ಷಕ್ಕೂ ಹೆಚ್ಚು ಲೀಡ್ ಪಡೆದು ಗೆಲ್ತಾರೆ : ಬಿಎಸ್‌ವೈ ವಿಶ್ವಾಸ

    ಪ್ರಹ್ಲಾದ್‌ ಜೋಶಿ 2 ಲಕ್ಷಕ್ಕೂ ಹೆಚ್ಚು ಲೀಡ್ ಪಡೆದು ಗೆಲ್ತಾರೆ : ಬಿಎಸ್‌ವೈ ವಿಶ್ವಾಸ

    ಹುಬ್ಬಳ್ಳಿ: ಧಾರವಾಡ ಲೋಕಸಭಾ (Dharawad Lok Sabha Constituency) ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ (Prhlad Joshi) 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಭವಿಷ್ಯ ನುಡಿದಿದ್ದಾರೆ.

    ಹುಬ್ಬಳ್ಳಿ-ಧಾರವಾಡದಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನಾಮಪತ್ರ ಸಲ್ಲಿಕೆ ವೇಳೆ ರೋಡ್ ಶೋದಲ್ಲಿ (Road Show) ಪಾಲ್ಗೊಂಡು ಅವರು ಮಾತನಾಡಿದರು. ಇದನ್ನೂ ಓದಿ: ಭಾರತದ 2 ಲಕ್ಷಕ್ಕೂ ಹೆಚ್ಚು ಎಕ್ಸ್ ಖಾತೆಗಳ ನಿಷೇಧ

    ಧಾರವಾಡ ಕ್ಷೇತ್ರದಲ್ಲಿ ಸತತ 5ನೇ ಬಾರಿ ಕಣಕ್ಕಿಳಿದ ಪ್ರಹ್ಲಾದ್‌ ಜೋಶಿ ಅವರು 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ಶತಸಿದ್ಧ. ಇದರಲ್ಲಿ ಅನುಮಾನವೇ ಇಲ್ಲವೆಂದು ಬಿಎಸ್‌ವೈ ವಿಶ್ವಾಸ ವ್ಯಕ್ತಪಡಿಸಿದರು.

    ಬಿಜೆಪಿ ಅಭ್ಯರ್ಥಿಯಾಗಿ 5ನೇ ಬಾರಿ ಸ್ಪರ್ಧಿಸಿರುವ ಜೋಶಿ ಅವರು ಕಳೆದ ನಾಲ್ಕು ಅವಧಿಗಳಲ್ಲಿಯೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅತ್ಯಂತ ಪರಿಶ್ರಮಿ ನಾಯಕ ಎಂದು ಬಿಎಸ್‌ವೈ ಬಣ್ಣಿಸಿದರು. ಇದನ್ನೂ ಓದಿ: ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ


    ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿದಂತೆ ಕ್ಷೇತ್ರದಾದ್ಯಂತ ಅದ್ಭುತ ಅಭಿವೃದ್ಧಿ ಕಾರ್ಯಗಳನ್ನು ಪ್ರಹ್ಲಾದ ಜೋಶಿ ಮಾಡಿದ್ದಾರೆ. ರೈಲ್ವೆ ಮಾರ್ಗ, ನಿಲ್ದಾಣ ಹೀಗೆ ಅನೇಕ ಮಾದರಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

    ಈಗ 5ನೇ ಬಾರಿಯೂ ಕ್ಷೇತ್ರದ ಅಭಿವೃದ್ಧಿಗಾಗಿ ಜನ ಹಿಂದಿನ ಚುನಾವಣೆಗಳಿಗಿಂತ ಹೆಚ್ಚು ಲೀಡ್ ಕೊಟ್ಟು ಜೋಶಿ ಅವರನ್ನು ಗೆಲ್ಲಿಸಿಕೊಳ್ಳುತ್ತಾರೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.

  • ಮಂಗಳೂರು ಜನತೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

    ಮಂಗಳೂರು ಜನತೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

    ಮಂಗಳೂರು: ಲೋಕಸಭಾಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು ಮಂಗಳೂರಿಗೆ ಆಗಮಿಸಿ ಬೃಹತ್‌ ರೋಡ್‌ ಶೋದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಕಿಕ್ಕಿರಿದು ಜನ ಸೇರಿದ್ದರು. ಇದೀಗ ಪ್ರಧಾನಿಯವರು ಮಂಗಳೂರು (Mangaluru) ಜನತೆಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

    ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿಯವರು, ಮಂಗಳೂರಿನಲ್ಲಿ ನಡೆದ ರೋಡ್‌ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಮಂಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜನತೆಗೆ ನನ್ನ ಕೃತಜ್ಞತೆಗಳು. ಕರ್ನಾಟಕದ ಈ ಭಾಗ ಹಾಗೂ ನಮ್ಮ ಪಕ್ಷದ ನಡುವೆ ಬಲಿಷ್ಠ ಬಾಂಧವ್ಯವಿದೆ. ಉತ್ತಮ ಆಡಳಿತದ ನಮ್ಮ ಸಿದ್ಧಾಂತ ಮತ್ತು ನಮ್ಮ ಪ್ರಾಚೀನ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಆಚರಿಸುವ ನಮ್ಮ ಪ್ರಯತ್ನಗಳಿಗೆ ಜನತೆ ನಮ್ಮನ್ನು ವರ್ಷಗಳಿಂದ ಆಶೀರ್ವದಿಸಿದ್ದಾರೆ ಎಂದು ಹೇಳಿದ್ದಾರೆ.

    ಮತಬ್ಯಾಂಕ್‌ ರಾಜಕಾರಣದಲ್ಲಿ ಮುಳುಗಿ ಜನರನ್ನು ವಿಭಜಿಸುವ ಕಾಂಗ್ರೆಸ್ ಗೆ ಮತ ಹಾಕಲು ದಕ್ಷಿಣ ಕನ್ನಡಕ್ಕೆ ಸಾಧ್ಯವಿಲ್ಲ. ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಗುಂಪುಗಾರಿಕೆಯಲ್ಲಿ ನಿರತವಾಗಿದ್ದು, ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತಿದೆ. ಅವರಿಗೆ ಕರ್ನಾಟಕದ ಸಂಸ್ಕೃತಿಯ ಬಗ್ಗೆ ತಿಳುವಳಿಕೆ ಇಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹಿಂದುತ್ವದ ಭದ್ರಕೋಟೆಯಲ್ಲಿ‌ ಮೋದಿ‌‌ ಕಮಾಲ್- ಫೋಟೋಗಳಲ್ಲಿ ನೋಡಿ

    ನಾವು ಇಂದು ಬಿಡುಗಡೆ ಮಾಡಿದ ಸಂಕಲ್ಪ ಪತ್ರದಲ್ಲಿ ಮಂಗಳೂರು ಅಭಿವೃದ್ಧಿಗಾಗಿ ಸಾಕಷ್ಟು ಕುತೂಹಲಕಾರಿ ಅಂಶಗಳಿವೆ. ವಿಶೇಷವಾಗಿ ನಗರಾಭಿವೃದ್ಧಿ ಮೂಲಕ “ಸುಗಮ ಜೀವನ” ಕಲ್ಪಿಸುವುದು ಮತ್ತು ಇತರೆ ಕೆಲಸಗಳನ್ನು ಮಾಡುತ್ತೇವೆ. ಮೀನುಗಾರಿಕೆಯಂತಹ ಕ್ಷೇತ್ರಗಳಲ್ಲಿ ನಿರೂಪಿಸಲಾದ ದೃಷ್ಟಿಕೋನ ಕರಾವಳಿ ಆರ್ಥಿಕತೆಯನ್ನು ಪರಿವರ್ತಿಸುತ್ತದೆ ಎಂದು ಭರವಸೆ ನೀಡಿದರು.

    ಮೈಸೂರಿನಲ್ಲಿ ನಡೆದ ಬಿಜೆಪಿ ಸಮಾವೇಶದ ಬಳಿಕ ಪ್ರಧಾನಿಯವರು ಕಡಲನಗರಿ ಮಂಗಳೂರಿಗೆ ಆಗಮಿಸಿದರು. ಹಿಂದುತ್ವದ ಭದ್ರಕೋಟೆಗೆ ಆಗಮಿಸಿದ ಮೋದಿಯವರನ್ನು ಬಿಜೆಪಿ ನಾಯಕರು ಸ್ವಾಗತಿಸಿದರು. ಬಳಿಕ ಸುಮಾರು ೨ ಕಿ.ಮೀ ರೋಡ್‌ ಶೋದಲ್ಲಿ ಮೋದಿಯವರು ಭಾಗಿಯಾದರು. ಪ್ರಧಾನಿಯವರನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿತ್ತು. ಇಡೀ ಮಂಗಳೂರು ಕೇಸರಿಮಯವಾಗಿತ್ತು.

    ರೋಡ್‌ ಶೋ ವೇಳೆ ರಸ್ತೆಯ ಇಕ್ಕೆಲಗಳಲ್ಲಿಯೂ ಹೂಮಳೆ ಸುರಿಸಲಾಯಿತು. ನೆಚ್ಚಿನ ಪ್ರಧಾನಿಯನ್ನು ಕಂಡು ಅಭಿಮಾನಿಗಳು ಹುಚ್ಚೆದ್ದು ಕುಣಿದರು. ನಾರಾಯಣ ಗುರು ಸರ್ಕಲ್‌ನಿಂದ ನವಭಾರತ್‌ ವೃತ್ತದವರೆಗೆ ಪ್ರಾನಿಯವರು ತೆರೆದ ವಾಹನದಲ್ಲಿ ರೋಡ್‌ ಶೋ ನಡೆಸಿದರು. ಈ ವೇಳೆ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಜೇಶ್‌ ಚೌಟ ಹಾಗೂ ಉಡುಪಿ- ಚಿಕ್ಕಮಗಳೂರು ಅಭ್ಯರ್ಥಿ ಶ್ರೀನಿವಾಸ ಪೂಜಾರಿ ಸಾಥ್‌ ನೀಡಿದರು.

  • ಹಿಂದುತ್ವದ ಭದ್ರಕೋಟೆಯಲ್ಲಿ‌ ಮೋದಿ‌‌ ಕಮಾಲ್- ಫೋಟೋಗಳಲ್ಲಿ ನೋಡಿ

    ಹಿಂದುತ್ವದ ಭದ್ರಕೋಟೆಯಲ್ಲಿ‌ ಮೋದಿ‌‌ ಕಮಾಲ್- ಫೋಟೋಗಳಲ್ಲಿ ನೋಡಿ

    ಮಂಗಳೂರು: ಲೋಕಸಭಾ ಚುನಾವಣೆಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭಾನುವಾರ ಮಂಗಳೂರಿಗೆ ಆಗಮಿಸಿ ಬೃಹತ್‌ ರೋಡ್‌ ಶೋದಲ್ಲಿ ಭಾಗಿಯಾದರು. ಈ ವೇಳೆ ಪ್ರಧಾನಿಯವರಿಗೆ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಬ್ರಜೇಶ್‌ ಚೌಟ ಹಾಗೂ ಉಡುಪಿ- ಚಿಕ್ಕಮಗಳೂರು ಅಭ್ಯರ್ಥಿ ಶ್ರೀನಿವಾಸ ಪೂಜಾರಿ ಸಾಥ್‌ ನೀಡಿದರು. ಈ ರೋಡ್‌ ಶೋದ ಫೋಟೋಗಳು ಇಲ್ಲಿವೆ..

    ಪ್ರಧಾನಿಗೆ ದೇವರ ಮೂರ್ತಿ ಇರುವ ಪ್ರಭಾವಳಿ ನೀಡಿದ ಬಿಜೆಪಿ ಅಭ್ಯರ್ಥಿ ಬ್ರಜೇಶ್‌ ಚೌಟ.

    ಮಂಗಳೂರಿನ ಹೃದಯ ಭಾಗ ನಾರಾಯಣ ಗುರು ಸರ್ಕಲ್‌ನಿಂದ ರೋಡ್‌ ಶೋ ಆರಂಭ.

     ಪ್ರಧಾನಿ ಮೋದಿ ಕಂಡು ಖುಷಿ ವ್ಯಕ್ತಪಡಿಸಿದ ಅಭಿಮಾನಿಗಳು.

    ಸೇರಿದ ಜನಸ್ತೋಮ ಕಂಡು ನಗೆ ಬೀರಿದ ಪ್ರಧಾನಿ ನರೇಂದ್ರ ಮೋದಿ.

    ನೆಚ್ಚಿನ ಪ್ರಧಾನಿ ನೋಡುತ್ತಿದ್ದಂತೆಯೇ ಖುಷಿಯಿಂದ ಕಿರುಚಾಡಿದ ಯುವತಿಯರು.

    ರೋಡ್‌ ಶೋನಲ್ಲಿ ಪ್ರಧಾನಿಗೆ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಬ್ರಜೇಶ್‌ ಚೌಟ ಸಾಥ್‌.

    ಪ್ರಧಾನಿಯನ್ನು ಕಣ್ತುಂಬಿಕೊಳ್ಳಲು ಕಿಕ್ಕಿರಿದು ಸೇರಿದ ಜನ.

    ರೋಡ್‌ ಶೋ ವೇಳೆ ಮೋದಿ ತಮ್ಮ ಕಡೆ ಬರುತ್ತಿದ್ದಂತೆಯೇ ಪುಷ್ಪವೃಷ್ಟಿಗೈದ ಅಭಿಮಾನಿಗಳು.

    ನೆರೆದ ಜನಸಾಗರ ಕಂಡು ಮೂಕವಿಸ್ಮಿತರಾದ ಪ್ರಧಾನಿ ನರೇಂದ್ರ ಮೋದಿ.

    ರೋಡ್‌ ಶೋ ವೇಳೇ ಪ್ರಧಾನಿಯತ್ತ ಕೈ ಬೀಸಿದ ಮಹಿಳಾ ಮಣಿಗಳು.

    ತಮ್ಮ ಅಚ್ಚುಮೆಚ್ಚಿನ ಪ್ರಧಾನಿ ಕಂಡು ಸಂಭ್ರಮಿಸಿದ ಯುವಕರು.

    ಪ್ರಧಾನಿ ನರೇಂದ್ರ ಮೋದಿಗೆ ಹೂಮಳೆ ಸುರಿಸಿದ ಮಹಿಳಾ ಅಭಿಮಾನಿಗಳು.

     

     

  • ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ- ನಮೋ ನೋಡಲು ಜನಸಾಗರ

    ಮಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ- ನಮೋ ನೋಡಲು ಜನಸಾಗರ

    ಮಂಗಳೂರು: ಮೈಸೂರಿನಲ್ಲಿ ಸಮಾವೇಶದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿಯವರನ್ನು ಬಿಜೆಪಿ ನಾಯಕರು ಅದ್ಧೂರಿಯಾಗಿ ಸ್ವಾಗತ ಕೋರಿದರು. ಬಳಿಕ ಅಲ್ಲಿಂದ ಕಾರಿನ ಮೂಲಕ ನಗರಕ್ಕೆ ಆಗಮಿಸಿದ್ದಾರೆ.

    ಇದೇ ಮೊದಲ ಬಾರಿಗೆ ಪ್ರಧಾನಿಯವರು ರೋಡ್‌ ಶೋ (Moo Road Show In Mangaluru) ನಡೆಸುತ್ತಿದ್ದಾರೆ. ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಆರಂಭವಾಗಲಿರುವ ರೋಡ್‌ ಶೋ ನವಭಾರತ ವೃತ್ತದವರೆಗೆ ನಡೆಯಲಿದೆ. ನಾರಾಯಣಗುರು ವೃತ್ತದ ಬಳಿ ಅರ್ಚಕರು ಮಂತ್ರ ಘೋಷವನ್ನು ಮೊಳಗಿಸುತ್ತಿದ್ದಾರೆ. ಜೊತೆಗೆ ವೃತ್ತದ ಬಳಿ ಚೆಂಡೆ ಕೊಂಬು ವಾದನ, ಶಂಖ ನಾದಗಳು ಮೇಳೈಸುತ್ತಿವೆ. ಇದನ್ನೂ ಓದಿ: ಮೋದಿ ಇರೋವರೆಗೆ ಹಿಂದೂ ಧರ್ಮ, ಸನಾತನ ಧರ್ಮದ ನಾಶ ಅಸಾಧ್ಯ: ಪ್ರಧಾನಿ

    ವಿವಿಧ ಭಾಗಗಳಿಂದ ರೋಡ್ ಶೋಗೆ ಮೋದಿ ಅಭಿಮಾನಿಗಳು ಬಂದಿದ್ದಾರೆ. ಪ್ರಧಾನಿಯವರನ್ನು ಕಣ್ತುಂಬಿಕೊಳ್ಳಲು ಈಗಾಗಲೇ ಜನಸಾಗರವೇ ನೆರೆದಿದೆ. ಎರಡು ಕಿಲೋಮೀಟರ್ ರಸ್ತೆಯಲ್ಲಿ ಜನರು ಕಿಕ್ಕಿರಿದು ತುಂಬಿದ್ದಾರೆ. ಅಲ್ಲದೇ ಮಹಾನಗರ ಪಾಲಿಕೆ ಜಂಕ್ಷನ್ ಭರ್ತಿಯಾಗಿದೆ. ಎರಡು ಕಿಲೋಮೀಟರ್ ರಸ್ತೆಯ ಎರಡು ಬದಿಯಲ್ಲಿಯೂ ಜನಸಾಗರವೇ ನೆರೆದಿದೆ. ಅಭಿಮಾನಿಗಳು ಮೋದಿಗೆ ಜೈಕಾರ ಹಾಕುತ್ತಿದ್ದಾರೆ. ಮೋದಿ ಮುಖವಾಡ,  ಧ್ವಜ, ಕೇಸರಿ ಟೋಪಿ ಧರಿಸಿಕೊಂಡು ಘೋಷಣೆ ಕೂಗುತ್ತಿದ್ದಾರೆ.

  • ಮೋದಿ ರೋಡ್ ಶೋ ವೇಳೆ ಪುಷ್ಪವೃಷ್ಟಿಗೆ ಕೋಲಾರದಿಂದ 2 ಟನ್ ಚೆಂಡು ಹೂವು!

    ಮೋದಿ ರೋಡ್ ಶೋ ವೇಳೆ ಪುಷ್ಪವೃಷ್ಟಿಗೆ ಕೋಲಾರದಿಂದ 2 ಟನ್ ಚೆಂಡು ಹೂವು!

    ಮಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಮಂಗಳೂರಿನಲ್ಲಿ ನಡೆಸುವ ರೋಡ್ ಶೋ ವೇಳೆ ಪುಪ್ಪವೃಷ್ಟಿಗೆ ಭರ್ಜರಿ ತಯಾರಿ ನಡೆದಿದೆ. ಮಂಗಳೂರಿನ ಮೋದಿ ಅಭಿಮಾನಿಗಳು ಕೋಲಾರದಿಂದ (Kolar) ಎರಡು ಟನ್ ಚೆಂಡು ಹೂವುಗಳನ್ನ ತರಿಸಿಕೊಂಡಿದ್ದಾರೆ.

    ಸದ್ಯ ನಗರದ ಸಂಘನಿಕೇತನ ಕಾರ್ಯಾಲಯದಲ್ಲಿ ಹೂವುಗಳ ದಳ ಬಿಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಮಹಿಳಾ ಕಾರ್ಯಕರ್ತರು ಶನಿವಾರ ರಾತ್ರಿಯಿಂದಲೇ ಹೂವಿನ ದಳ ಬಿಡಿಸೋ ಕೆಲಸ ಆರಂಭಿಸಿದ್ದು ಸಂಜೆ ರೋಡ್ ಶೋ (Modi Road Show in Mangaluru) ವೇಳೆ ನೆರೆದ ಮೋದಿ ಅಭಿಮಾನಿಗಳಿಗೆ ಇದನ್ನ ಕೊಡಲಿದ್ದಾರೆ. ರೋಡ್ ಶೋದಲ್ಲಿ ಸಾಗಿ ಬರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಹೂವಿನ ಮಳೆಗೈಯುವ ತಯಾರಿ ನಡೆಸಲಾಗಿದೆ. ಇದನ್ನೂ ಓದಿ: ಸಿಎಂ ತವರಲ್ಲಿಂದು ನಮೋ ಘರ್ಜನೆ – ಮೈಸೂರಲ್ಲಿ ಎಲ್ಲೆಲ್ಲಿ ಮಾರ್ಗ ಬದಲಾವಣೆ?

    ಪೊಲೀಸ್ ಇಲಾಖೆ ಹೈ ಅಲರ್ಟ್: ಮಂಗಳೂರಿನಲ್ಲಿ ಮೊದಲ ಬಾರಿಗೆ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಮೋದಿ ಆಗಮನ ಹಿನ್ನೆಲೆ ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಗೋಷಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

    ಏರ್ ಪೋರ್ಟ್ ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆಗೂ ಬಿಗಿ ಭದ್ರತೆ ಒದಗಿಸಲಾಗುತ್ತದೆ. ವಿಮಾನ ನಿಲ್ದಾಣದಿಂದ ಲೇಡಿಹಿಲ್ ವರೆಗೂ ವಿಶೇಷ ಭದ್ರತೆ ಕೈಗೊಳ್ಳಲಾಗಿದೆ. ಸುಮಾರು 2,500 ಸಾವಿರ ಪೊಲೀಸ್ ಸಿಬ್ಬಂದಿ, 10 ಜನ ಎಸ್ಪಿ ಹಾಗೂ ಹೆಚ್ಚುವರಿ ಎಸ್ಪಿ ರಾಂಕ್ ಅಧಿಕಾರಿಗಳು, 250 ಡಿವೈಎಸ್ ಪಿ ಮತ್ತು ಪಿಎಸ್ ಐ ಯಾರ್ಂಕ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ ಎಂದರು.

    ವಾಹನ ಸಂಚಾರ, ಪಾಕಿರ್ಂಗ್ ಸೇರಿದಂತೆ ಸಂಚಾರ ವ್ಯವಸ್ಥೆಗೆ ಬದಲಾವಣೆ ಮಾಡಲಾಗಿದೆ. ರೋಡ್ ಶೋ ಆರಂಭವಾಗುವ 2 ಗಂಟೆ ಮುನ್ನ ನಿಬಂಧನೆಗಳು ಜಾರಿಗೊಳಿಸಲಾಗುತ್ತದೆ. ರೋಡ್ ಶೋ ಸುತ್ತಮುತ್ತದ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ ಮಾಡಲಾಗುತ್ತದೆ. 3 ದಿನದಿಂದ ಭದ್ರತೆಯ ದೃಷ್ಟಿಕೋನದಲ್ಲಿ ನಿರಂತರ ಡ್ರೋನ್ ಸರ್ವೇ ನಡೆಸಿದ್ದೇವೆ ಎಂದು ಅಗರ್ವಾಲ್ ತಿಳಿಸಿದ್ದಾರೆ.

  • ಪ್ರವಾಸಿಗರಿಲ್ಲದೇ ಪರದಾಟ- ಭಾರತದಲ್ಲಿ ರೋಡ್‌ ಶೋಗೆ ಮಾಲ್ಡೀವ್ಸ್‌ ಪ್ಲಾನ್‌

    ಪ್ರವಾಸಿಗರಿಲ್ಲದೇ ಪರದಾಟ- ಭಾರತದಲ್ಲಿ ರೋಡ್‌ ಶೋಗೆ ಮಾಲ್ಡೀವ್ಸ್‌ ಪ್ಲಾನ್‌

    ಮಾಲೆ:‌ ಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಮುನಿಸಿನ ನಡುವೆ ಪ್ರವಾಸಿಗರನ್ನು ಮರಳಿ ಸೆಳೆಯಲು ಭಾರತದಲ್ಲಿ ರೋಡ್‌ಶೋಗಳನ್ನು ನಡೆಸುವುದಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮ ಸಂಸ್ಥೆ (Maldivian tourism body) ಹೇಳಿದೆ.

    ಈ ಸಂಬಂಧ ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟ್ರಾವೆಲ್ ಏಜೆಂಟ್ಸ್ ಮತ್ತು ಟೂರ್ ಆಪರೇಟರ್ಸ್ (MATATO) ಅವರು ಮಾಲೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತದ ಪ್ರಮುಖ ನಗರಗಳಲ್ಲಿ ಸಮಗ್ರ ರೋಡ್ ಶೋಗಳನ್ನು (Road Show In India) ನಡೆಸುವುದರ ವಿಚಾರವಾಗಿ ಪ್ರಸ್ತಾಪಿಸಿದ್ದಾರೆ.

    ಇತ್ತೀಚೆಗೆ ಗಮನಾರ್ಹ ಕುಸಿತ ಕಂಡ ಪ್ರವಾಸೋದ್ಯಮ ಸಂಸ್ಥೆಯನ್ನು ಮತ್ತಷ್ಟು ಉತ್ತೇಜಿಸಲು ಭಾರತದಾದ್ಯಂತದ ಪ್ರಮುಖ ಪ್ರವಾಸಿ ಸಂಘಗಳು ಮತ್ತು ಉದ್ಯಮದ ಪಾಲುದಾರರೊಂದಿಗೆ ಪಾಲುದಾರಿಕೆಯನ್ನು ಹೊಂದಲು ಅವರು ಎದುರು ನೋಡುತ್ತಿದ್ದಾರೆ ಎಂದು MATATO ತಿಳಿಸಿರುವುದಾಗಿ ವರದಿಯಾಗಿದೆ.

    ಪ್ರಸ್ತುತ ಭಾರತದ ಪ್ರಮುಖ ನಗರಗಳಲ್ಲಿ ಸಮಗ್ರ ರೋಡ್ ಶೋಗಳನ್ನು ಪ್ರಾರಂಭಿಸಲು ಮತ್ತು ಮುಂಬರುವ ತಿಂಗಳುಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಯೋಜನೆಗಳು ನಡೆಯುತ್ತಿವೆ ಎಂದು ಮಾಲ್ಡೀವ್ಸ್ ಪ್ರವಾಸೋದ್ಯಮ ಸಂಸ್ಥೆ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.  ಇದನ್ನೂ ಓದಿ: ಮೋದಿಯನ್ನು ಟೀಕಿಸಿದ ಮಾಲ್ಡೀವ್ಸ್‌ಗೆ ಶಾಕ್ – ಭಾರತೀಯ ಪ್ರವಾಸಿಗರ ಸಂಖ್ಯೆ 33%ರಷ್ಟು ಕುಸಿತ

    ಪ್ರವಾಸಿಗರ ಕುಸಿತ ಏಕೆ..?: ಜನವರಿ 6 ರಂದು ಲಕ್ಷ ದ್ವೀಪಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಲ್ಡೀವ್ಸ್‌ನ ಮೂವರು ಸಚಿವರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಮಾಲ್ಡೀವ್ಸ್‌ಗೆ ಭೇಟಿ ನೀಡುವವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತ 6ನೇ ಸ್ಥಾನಕ್ಕೆ ಕುಸಿದಿತ್ತು.

    ಮಾಲ್ಡೀವ್ಸ್‌ನ ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶಕ್ಕೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಪ್ರಸ್ತುತ ಮಾಲ್ಡೀವ್ಸ್‌ಗೆ ಭೇಟಿ ನೀಡುವವರ ಪಟ್ಟಿಯಲ್ಲಿ ಚೀನಾ 71,995 ಪ್ರವಾಸಿಗರೊಂದಿಗೆ ಅಗ್ರಸ್ಥಾನ ಪಡೆದುಕೊಂಡಿದೆ. ಇದರ ನಂತರದಲ್ಲಿ ಬ್ರಿಟನ್‌ (66,999), ರಷ್ಯಾ (66,803), ಇಟಲಿ (61,379), ಜರ್ಮನಿ (52,256) ದೇಶಗಳಿವೆ. ಭಾರತ 37,417 ಪ್ರವಾಸಿಗರೊಂದಿಗೆ 6ನೇ ಸ್ಥಾನದಲ್ಲಿದೆ.