Tag: ರೋಣ

  • ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

    ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

    – ಮಾಡಳ್ಳಿ-ಗುಂಜಳ ರಸ್ತೆ ಸಂಚಾರ ಸ್ಥಗಿತ

    ಗದಗ: ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಲಕ್ಷ್ಮೇಶ್ವರ ತಾಲೂಕಿನ ಮಾಡಳ್ಳಿ ಬಳಿ ಸೇತುವೆಯೊಂದು ಕೊಚ್ಚಿ ಹೋಗಿ ಮಾಡಳ್ಳಿ – ಗುಂಜಳ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

    ಬಿಡದೇ ಸುರಿಯುತ್ತಿರುವ ಮಳೆಗೆ ಕಲ್ಲಿನ ಹಳೆಯ ಸೇತುವೆ ಕೊಚ್ಚಿಹೋಗಿದ್ದು, ಮಾಗಡಿ, ಮಾಡಳ್ಳಿ, ಗುಂಜಳದಿಂದ ಕುಂದಗೋಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದೀಗ ರೈತರು, ಪ್ರಯಾಣಿಕರು ಪರದಾಡುವಂತಾಗಿದೆ. ಇದನ್ನೂ ಓದಿ: ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

    ಜಿಲ್ಲೆಯಲ್ಲಿ ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರೋಣ ತಾಲೂಕಿನ ಬೆಳವಣಕಿ ಗ್ರಾಮದ ಬಳಿ ಸೇತುವೆ ಸಂಪೂರ್ಣ ಜಲಾವೃತವಾಗಿವೆ. ತುಂಬಿ ಹರಿಯುತ್ತಿರುವ ಬೆಳವಣಕಿ ಬಿಸಿ ಬೂದಿಹಳ್ಳದ ನೀರಿನ ರಭಸಕ್ಕೆ ರಸ್ತೆಗಳು ಕೊಚ್ಚಿ ಹೋಗಿವೆ. ಇದನ್ನೂ ಓದಿ: Mayday… unable to lift: ಕ್ಯಾಪ್ಟನ್‌ ಸುಮಿತ್‌ ಕೊನೆ ಕ್ಷಣದ ಆಡಿಯೋ ಲಭ್ಯ

    ಹರಿಯುವ ನೀರಲ್ಲಿ ಜನರು ಹುಚ್ಚಾಟ ಮಾಡುತ್ತಿದ್ದು, ನೀರಿನ ಸೆಳೆತದ ನಡುವೆಯೂ ಅತ್ತಿಂದಿತ್ತ ಸಂಚರಿಸುತ್ತಿದ್ದಾರೆ. ಕೊಚ್ಚಿಹೋದ ರಸ್ತೆಯಿಂದ ಬೆಳವಣಕಿ, ಬಳಗಾನೂರ ಗದಗ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ. ಮೇಲ್ಸೇತುವೆ ಮಾಡುವಂತೆ ಸಾರ್ವಜನಿಕರು ಸಾಕಷ್ಟು ಮನವಿ ಮಾಡಿದ್ರೂ ಸ್ಪಂದಿಸದೇ ಇರುವ ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

  • ಗದಗ, ಧಾರವಾಡದಲ್ಲಿ ಧಾರಾಕಾರ ಮಳೆ- ರಸ್ತೆ ಸಂಪರ್ಕ ಸಂಪೂರ್ಣ ಬಂದ್

    ಗದಗ, ಧಾರವಾಡದಲ್ಲಿ ಧಾರಾಕಾರ ಮಳೆ- ರಸ್ತೆ ಸಂಪರ್ಕ ಸಂಪೂರ್ಣ ಬಂದ್

    – ಪ್ರವಾಹದಿಂದ ಅಪಾರ ಪ್ರಮಾಣದ ಬೆಳೆ ನಾಶ

    ಗದಗ/ಧಾರವಾಡ: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಬೆಣ್ಣೆಹಳ್ಳ (Bennehalla) ಭೋರ್ಗರೆಯುತ್ತಿದೆ. ರೋಣ ತಾಲೂಕಿನ ಯಾವಗಲ್ ಬಳಿ ರಸ್ತೆ ಸಂಪರ್ಕ ಸಂಪೂರ್ಣ ಬಂದ್ ಆಗಿದೆ. ಪ್ರವಾಹದಿಂದ (Flood) ಬೆಳೆ ಕಳೆದುಕೊಂಡ ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ.

    ನರಗುಂದನಿಂದ ಯಾವಗಲ್ ಮಾರ್ಗವಾಗಿ ರೋಣ, ಗಜೇಂದ್ರಗಡ, ಕುಷ್ಟಗಿ ಮಾರ್ಗವಾಗಿ ಸಿಂಧನೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ ಬಂದ್ ಆಗಿದ್ದು, ಸೇತುವೆ ಮೇಲ್ಭಾಗದಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿದೆ. ಇದರಿಂದ ಕಳೆದ ಮೂರು-ನಾಲ್ಕು ದಿನಗಳಿಂದ ಪ್ರಯಾಣಿಕರು, ರೈತರು ಪರದಾಡುವಂತಾಗಿದೆ. ಜನರು ಹಳ್ಳ ದಾಟದಂತೆ ಭದ್ರತಾ ಸಿಬ್ಬಂದಿಗಳನ್ನು ಸಹ ನೇಮಿಸಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್‌

    1971-72ರಲ್ಲಿ ನಿರ್ಮಾಣವಾದ ಈ ಕಿರಿದಾದ ಸೇತುವೆ ಮೇಲ್ದರ್ಜೆಗೆ ಏರಿಸಬೇಕು. ಬೆಣ್ಣೆಹಳ್ಳ ಒತ್ತುವರಿ ತೆರವುಗೊಳಿಸಬೇಕು. ಪದೇಪದೆ ಪ್ರವಾಹ ಹಾಗೂ ಬೆಳೆ ಹಾನಿ ಆಗುವುದನ್ನು ತಪ್ಪಿಸಬೇಕು ಎಂಬುದು ಈ ಭಾಗದ ಜನರ ಕೂಗಾಗಿದೆ. ಬೆಣ್ಣೆಹಳ್ಳ ಪ್ರವಾಹದಿಂದ ಬೆಳೆ ಕಳೆದುಕೊಂಡ ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆ ವೈದ್ಯೆಯ ಯಡವಟ್ಟಿಗೆ ಬಾಣಂತಿ ಬಲಿ!

  • ಗದಗ| ಭಾರೀ ಮಳೆಗೆ ಮಲಪ್ರಭಾ ನದಿ, ಬೆಣ್ಣೆಹಳ್ಳದಲ್ಲಿ ಪ್ರವಾಹ- ಅಪಾರ ಪ್ರಮಾಣದ ಬೆಳೆ ಜಲಾವೃತ

    ಗದಗ| ಭಾರೀ ಮಳೆಗೆ ಮಲಪ್ರಭಾ ನದಿ, ಬೆಣ್ಣೆಹಳ್ಳದಲ್ಲಿ ಪ್ರವಾಹ- ಅಪಾರ ಪ್ರಮಾಣದ ಬೆಳೆ ಜಲಾವೃತ

    ಗದಗ: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೆಣ್ಣೆಹಳ್ಳ (Bennehalla) ಹಾಗೂ ಮಲಪ್ರಭಾ ನದಿಯಲ್ಲಿ (Malaprabha River) ಪ್ರವಾಹ ಎದುರಾಗಿದೆ. ರೋಣ ತಾಲೂಕಿನ ಮೆಣಸಗಿ ಬಳಿ ಅನೇಕ ಜಮೀನುಗಳು ಜಲಾವೃತವಾಗಿದ್ದು, ಬೆಳೆ ಕಳೆದುಕೊಂಡ ರೈತರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ.

    ಮೆಕ್ಕೆಜೋಳ, ಕಬ್ಬು, ಸೂರ್ಯಕಾಂತಿ, ಶೇಂಗಾ, ಜೋಳ ಸೇರಿದಂತೆ ಅನೇಕ ಬೆಳೆಗಳು ಜಲಾವೃತವಾಗಿವೆ. ಅಪಾರ ಪ್ರಮಾಣದ ಬೆಳೆನಾಶದಿಂದ ರೈತರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಫಸಲು ಕಟಾವಿಗೆ ಬಂದ ಸಂದರ್ಭದಲ್ಲಿ ನೀರಲ್ಲಿ ಮುಳುಗಡೆಯಾಗಿದೆ. ನೀರಲ್ಲಿ ಹಾನಿಯಾದ ಫಸಲು ಹೊರ ತೆಗೆಯಲು ರೈತರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಇನ್ನೊಬ್ಬರ ಬದುಕನ್ನು ಹಾಳು ಮಾಡೋರಿಗೆ ಸದ್ಬುದ್ಧಿ ಬರಲಿ: ಸಿಎಂ

    ಕಳೆದ ಒಂದು ವರ್ಷದಲ್ಲಿ ಮೂರು ಬಾರಿ ಪ್ರವಾಹ ಬಂದು 3 ಬಾರಿಯೂ ಬೆಳೆ ಹಾನಿಯಾಗಿದೆ. ಸರ್ಕಾರದಿಂದ ನಯಾಪೈಸೆ ಪರಿಹಾರ ಬಂದಿಲ್ಲ. ಎಕರೆಗೆ ಹತ್ತಾರು ಸಾವಿರ ರೂಪಾಯಿ ಖರ್ಚುಮಾಡಿ ಸಾಲದ ಸುಳಿಗೆ ಸಿಲುಕುವಂತಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಬೆಳೆಯೂ ಇಲ್ಲ. ಇತ್ತ ಸರ್ಕಾರದಿಂದ ಪರಿಹಾರವೂ ಇಲ್ಲ ಎಂದು ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವುದು ಭಾರತದ ಹಿಂದೂಗಳಿಗೂ ಒಂದು ಪಾಠ: ಮೋಹನ್‌ ಭಾಗವತ್‌

  • ರಥೋತ್ಸವದ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವು

    ರಥೋತ್ಸವದ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವು

    ಗದಗ: ರಥೋತ್ಸವದ (Chariot Festival) ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವನ್ನಪ್ಪಿದ್ದು, ಓರ್ವನಿಗೆ ಗಾಯವಾದ ಘಟನೆ ಜಿಲ್ಲೆಯ ರೋಣ (Rona) ಪಟ್ಟಣದಲ್ಲಿ ನಡೆದಿದೆ.

    ರೋಣದ ವೀರಭದ್ರೇಶ್ವರ ಜಾತ್ರೆ ಅಂಗವಾಗಿ ಇಂದು ಮಹಾ ರಥೋತ್ಸವ ನಡೆಯಿತು. ಈ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯವಾಗಿದೆ. ಮೃತ ಭಕ್ತರು ರೋಣ ಮೂಲದ ನಿವಾಸಿಗಳು ಎನ್ನಲಾಗಿದೆ. ಮಲ್ಲಪ್ಪ ಲಿಂಗನಗೌಡ (55) ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇನ್ನೋರ್ವ ಮೃತನ ಹೆಸರು ತಿಳಿದು ಬಂದಿಲ್ಲ. ಮುಖದ ಮೇಲೆ ರಥದ ಗಾಲಿ ಹರಿದಿರುವುದರಿಂದ ಮುಖ ನಜ್ಜುಗುಜ್ಜಾಗಿ ವ್ಯಕ್ತಿಯ ಗುರುತು ಪತ್ತೆ ಸಿಗದಂತಾಗಿದೆ. ಇದನ್ನೂ ಓದಿ: ನಿಮ್ಮ ಸೇವೆಗೆ ದೇವರು ನನ್ನ ಕಳುಹಿಸಿದ್ದಾನೆ: ಮೋದಿ

    ರಥ ಎಳೆಯುವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾದ ಹಿನ್ನೆಲೆ ಘಟನೆ ನಡೆದಿದೆ. ರಥಕ್ಕೆ ಎಸೆಯುವ ಬಾಳೆ ಹಣ್ಣು ಹಾಗೂ ಉತ್ತತ್ತಿ ಆಯ್ದುಕೊಳ್ಳುವ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿ ರಥದ ಗಾಲಿಗೆ ಸಿಲುಕಿದ್ದಾರೆ. ಓರ್ವನ ಮುಖ ಹಾಗೂ ಮತ್ತೋರ್ವನ ಮರ್ಮಾಂಗದ ಮೇಲೆ ರಥದ ಚಕ್ರ ಹರಿದು ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬರ ಪರಿಹಾರ ಹಣ ಬಿಡುಗಡೆ – ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

    ಈ ವೀರಭದ್ರೇಶ್ವರನ ಜಾತ್ರೆಗೆ ರೋಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಲಕ್ಷಾಂತರ ಭಕ್ತ ಸಾಗರವೇ ಸೇರುತ್ತದೆ. ಈ ದುರ್ಘಟನೆ ನಂತರ ಜನರನ್ನು ಚದುರಿಸಲು ಪೊಲೀಸರು ಕೆಲಕಾಲ ಹರಸಾಹಸ ಪಡಬೇಕಾಯಿತು. ಇನ್ನೋರ್ವನ ಗುರುತು ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚುನಾವಣಾ ಅಕ್ರಮಕ್ಕೆ ಆಯೋಗ ಕೊಕ್ಕೆ – 8,889 ಕೋಟಿ ಮೌಲ್ಯದ ನಗದು, ಡ್ರಗ್ಸ್‌, ಮದ್ಯ ಜಪ್ತಿ!

  • ಗದಗ, ನರಗುಂದ, ರೋಣ ಕೈ ಅಭ್ಯರ್ಥಿಗಳ ಆಯ್ಕೆ ಅಂತಿಮ – ಸ್ವಪಕ್ಷ ಆಕಾಂಕ್ಷಿಗಳಿಂದಲೇ ಅಪಪ್ರಚಾರ

    ಗದಗ, ನರಗುಂದ, ರೋಣ ಕೈ ಅಭ್ಯರ್ಥಿಗಳ ಆಯ್ಕೆ ಅಂತಿಮ – ಸ್ವಪಕ್ಷ ಆಕಾಂಕ್ಷಿಗಳಿಂದಲೇ ಅಪಪ್ರಚಾರ

    – ಶಿರಹಟ್ಟಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಗೌಪ್ಯ

    ಗದಗ: ನಿರೀಕ್ಷೆಯಂತೆ ಜಿಲ್ಲೆಯ ಗದಗ (Gadag Constituency), ರೋಣ (Rona Constituency) ಹಾಗೂ ನರಗುಂದ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಪಟ್ಟಿ (Congress Candidate List)  ಘೋಷಣೆಯಾಗಿದ್ದು, ಶಿರಹಟ್ಟಿ ಕ್ಷೇತ್ರ ಮಾತ್ರ ಗೌಪ್ಯವಾಗಿ ಉಳಿದಿದೆ.

    ಕಾಂಗ್ರೆಸ್ (Congress) ಮೊದಲ ಹಾಗೂ 2ನೇ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಇತರ ಪ್ರಬಲ ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಶುರುವಾಗಿದೆ. ಅವರವರ ರಾಜಕೀಯ ಗಾಡ್ ಫಾದರ್, ಮಠಾಧೀಶರ ಮೂಲಕ ರಾಜ್ಯ ಮುಖಂಡರ ಒತ್ತಡ ಹೇರುವ ಪ್ರಕ್ರಿಯೆ ತೀತ್ರಗೊಂಡಿದೆ. ಪ್ರಬಲ ಟಿಕೆಟ್ ಆಕಾಂಕ್ಷಿಗಳು ಸ್ವಪಕ್ಷೀಯರ ವಿರುದ್ಧವೇ ಕ್ಷೇತ್ರದಲ್ಲಿ ಅಪಪ್ರಚಾರಕ್ಕೆ ಕೈಹಾಕಿದ್ದಾರೆ. ಪ್ರತಿಸ್ಪರ್ಧಿಯ ನೈತಿಕ ಬಲ ಕುಗ್ಗಿಸುವ ಚಾಣಾಕ್ಷ ರಾಜಕೀಯ ನಡೆ ಎಗ್ಗಿಲ್ಲದೇ ಸಾಗಿದೆ. ಆಕಾಂಕ್ಷಿಗಳ ಪರ ಜಿಲ್ಲಾ ಪ್ರಭಾವಿ ಮುಖಂಡರು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿರುವುದೂ ಅಲ್ಲಗೆಳೆಯುವಂತಿಲ್ಲ. ಇದನ್ನೂ ಓದಿ: ಅನಿರೀಕ್ಷಿತ ಬೆಳವಣಿಗೆಗಳಿಂದ ರಾಷ್ಟ್ರೀಯ ಪಕ್ಷಗಳು ವಿಲವಿಲ – ರೋಣ ಕ್ಷೇತ್ರದಲ್ಲಿ ಸಹೋದರರ ಸವಾಲ್

    ಟಿಕೆಟ್ ವಿಚಾರದಲ್ಲಿ ಗೊಂದಲವಿಲ್ಲದ ಕ್ಷೇತ್ರಗಳನ್ನ ಆಯ್ಕೆ ಮಾಡಿಕೊಂಡಿರುವ ಕಾಂಗ್ರೆಸ್, ಪಕ್ಷ ತನ್ನ ಮೊದಲ ಹಾಗೂ 2ನೇ ಪಟ್ಟಿ ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಜಿಲ್ಲೆಯ ಗದಗದಿಂದ ಹೆಚ್.ಕೆ ಪಾಟೀಲ, ರೋಣದಿಂದ ಜಿ.ಎಸ್ ಪಾಟೀಲ ಹಾಗೂ ನರಗುಂದ ಕ್ಷೇತ್ರದಿಂದ ಬಿ.ಆರ್ ಯಾವಗಲ್ ಹೆಸರು ಘೋಷಣೆಯಾಗಿದೆ. ಶಿರಹಟ್ಟಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಗೆ ಅಧಿಕೃತ ಮುದ್ರೆ ಹೆಚ್.ಕೆ ಪಾಟೀಲ ಅವರು ಒತ್ತಬೇಕಿದೆ. ಅವರ ಅಭಿಪ್ರಾಯದ ಮೇಲೆಯೇ ಶಿರಹಟ್ಟಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಆಗಲಿದೆ ಎನ್ನಲಾಗಿದೆ. ಶಿರಹಟ್ಟಿಯಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ವಿಚಾರದಲ್ಲಿ ಹಿಂದೆಂದಿಗಿಂತಲೂ ಈ ಬಾರಿ ಗೊಂದಲ ಸೃಷ್ಟಿಯಾಗಿದ್ದು, ರಾಷ್ಟ್ರೀಯ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದೆ. ಇದನ್ನೂ ಓದಿ: ಜೀವ ಬೆದರಿಕೆ ಹಿನ್ನೆಲೆ ದುಬಾರಿ ಬುಲೆಟ್ ಪ್ರೂಫ್ ಕಾರು ಖರೀದಿಸಿದ ಸಲ್ಮಾನ್

    ಕ್ಷೇತ್ರದಲ್ಲಿ 14 ಜನ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಎಸ್ಸಿ ಮೀಸಲು ಕ್ಷೇತ್ರವಾದ್ದರಿಂದ ಮೋಚಿ, ಮಾದಿಗ, ಲಂಬಾಣಿ ಸಮುದಾಯದ ಆಕಾಂಕ್ಷಿಗಳು ಹೆಚ್ಚು ತವಕದಲ್ಲಿದ್ದಾರೆ. ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮೋಚಿಗ ಸಮುದಾಯದ ನಾಯಕ. ಮೊದಲ ಬಾರಿ ಅದೃಷ್ಟ ಪರೀಕ್ಷೆಗೆ ಸಜ್ಜಾಗಿರುವ ಮಾದಿಗ ಸಮುದಾಯದ ಸುಜಾತಾ ದೊಡ್ಡಮನಿ ಹಾಗೂ ಅಂಬಣ್ಣ ಆರೋಲಿಕರ್ ಕಾಂಗ್ರೆಸ್ಸಿನ ಪ್ರಬಲ ಆಕಾಂಕ್ಷಿಗಳು. ಜಾತಿ ಲೆಕ್ಕಾಚಾರ ಕ್ಷೇತ್ರದಲ್ಲಿ ಮೋಚಿಗ ಸಮುದಾಯದ 1,500 ಮತಗಳಿದ್ದು, 22,000 ಮಾದಿಗ ಮತಗಳಿವೆ. 25,000 ಲಂಬಾಣಿ ಮತಗಳಿದ್ದು, ದೇವಪ್ಪ ಲಂಬಾಣಿ ಸಹ ಅರ್ಜಿ ಹಾಕಿದ್ದಾರೆ. ಹೀಗಾಗಿ ಸುಜಾತಾ ದೊಡ್ಡಮನಿ, ಅಂಬಣ್ಣ ಆರೋಲಿಕರ್ ಇವರು ಕೆ.ಹೆಚ್? ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ ಪರಮೇಶ್ವರ ಬಳಗದವರು. ಇನ್ನೂ ರಾಮಕೃಷ್ಣ ದೊಡ್ಡಮನಿ, ದೇವಪ್ಪ ಲಂಬಾಣಿ ಸಿದ್ದರಾಮಯ್ಯ ಬಳಗದಿಂದ ಸಹಜವಾಗಿ ಟಿಕೆಟ್ ಬೇಡಿಕೆಯಿಟ್ಟಿದ್ದಾರೆ. ಇನ್ನೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯನ್ನು ನೋಡಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಘೋಷಿಸಲಿದೆ ಎನ್ನಲಾಗಿದೆ.

    ಮೊದಲಿನಂತೆ ಕಾಂಗ್ರೆಸ್? `ಮೋಚಿ'(ಎಡಗೈ) ಸಮುದಾಯಕ್ಕೆ ಮಣೆ ಹಾಕಿದ್ದಲ್ಲಿ ಬಿಜೆಪಿಯು ಮಾದಿಗ ಮತ್ತು ಲಂಬಾಣಿ ಸಮುದಾಯಕ್ಕೆ ಮಣೆ ಹಾಕಬಹುದು. ಒಂದು ವೇಳೆ ಮಾದಿಗ(ಎಡಗೈ) ಸಮುದಾಯದ ಸುಜಾತ ಅಥವಾ ಅಂಬಣ್ಣ ಅವರಿಗೆ ಕಾಂಗ್ರೆಸ್ ಮಣೆ ಹಾಕಿದ್ದಲ್ಲಿ ಮಹಿಳೆಯ ಪ್ರತಿಸ್ಪಧಿಯಾಗಿ ಗದಗ ನಗರಸಭೆ ಅಧ್ಯೆ ಉಷಾ ದಾಸರ ಅವರನ್ನ ಅಭ್ಯಥಿರ್ಯಾಗಿ ಬಿಜೆಪಿ ಪರಿಗಣಿಸಲೂಬಹುದು ಎಂಬ ಮಾತುಗಳು ಕ್ಷೇತ್ರದಲ್ಲಿ ಚರ್ಚೆಯಲ್ಲಿವೆ.

    ಬಿಜೆಪಿಗೆ ಹೋಲಿಸಿದರೆ, ಕಾಂಗ್ರೆಸ್ ಪಕ್ಷದಲ್ಲಿ ಒಳ ಬೇಗುದಿ ಕಡಿಮೆಯಿದೆ. ಆದ್ರೆ ರೋಣ ಮತ್ತು ಗದಗ ಕ್ಷೇತ್ರದ ಬಿಜೆಪಿಯಲ್ಲಿ ಸ್ವಪಕ್ಷೀಯರಿಂದಲೇ ಒಳಸಂಚು ರೂಪಿಸುತ್ತಿದ್ದು, ಅಭ್ಯರ್ಥಿಗಳಿಗೆ ಅಪಾಯ ತಂದೊಡ್ಡಲು ಪ್ರತ್ಯೇಕ ಗುಂಪು ಸೃಷ್ಟಿಸಲಾಗುತ್ತಿದೆ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಒಳ ಬೇಗುದಿ ಹೆಚ್ಚಾಗಿದ್ದು, ಶಿರಹಟ್ಟಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ನಂತರ ಮತ್ತಷ್ಟು ವ್ಯಾಪಿಸುತ್ತಾ ಎಂಬುದನ್ನ ಕಾದುನೋಡಬೇಕಿದೆ.

  • ‘ಖಾನಾವಳಿ ಚೆನ್ನಿ’ಯಾದ ಅಗ್ನಿಸಾಕ್ಷಿ ಚಂದ್ರಿಕಾ : ವೃತ್ತಿ ರಂಗಭೂಮಿಗೆ ಜಿಗಿದ ‘ಸತ್ಯ’ ನಟಿ

    ‘ಖಾನಾವಳಿ ಚೆನ್ನಿ’ಯಾದ ಅಗ್ನಿಸಾಕ್ಷಿ ಚಂದ್ರಿಕಾ : ವೃತ್ತಿ ರಂಗಭೂಮಿಗೆ ಜಿಗಿದ ‘ಸತ್ಯ’ ನಟಿ

    ವೃತ್ತಿ ರಂಗಭೂಮಿಯಿಂದ ಸಿನಿಮಾ ರಂಗಕ್ಕೆ ಬಂದವರು ಹೆಚ್ಚು. ಆದರೆ, ಸಿನಿಮಾ ಮತ್ತು ಕಿರುತೆರೆಯಲ್ಲಿ ಪಾಪ್ಯುಲರ್ ಆದವರು ಮತ್ತೆ ವೃತ್ತಿ ರಂಗಭೂಮಿಯತ್ತ ಮುಖವೆತ್ತಿ ಕೂಡ ನೋಡುವುದಿಲ್ಲ. ಆದರೆ, ಅಗ್ನಿಸಾಕ್ಷಿ, ಸತ್ಯ ಸೇರಿದಂತೆ ಹಲವು ಪಾಪ್ಯುಲರ್ ಧಾರಾವಾಹಿಯಲ್ಲಿ ನಟಿಸಿದ ಚಂದ್ರಿಕಾ ಇದೀಗ ವೃತ್ತಿ ರಂಗಭೂಮಿಯತ್ತ ಮುಖ ಮಾಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಮನೆಮಾತಾಗಿರುವ ‘ಖಾನಾವಳಿ ಚೆನ್ನಿ’ ನಾಟಕದಲ್ಲಿ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

    ರಾಣೇಬೆನ್ನೂರು ಮಂಜುನಾಥ ನಾಟ್ಯ ಸಂಘವು ರೋಣ ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಿರುವ ‘ಖಾನಾವಳಿ ಚೆನ್ನಿ’ ನಾಟಕವು ಜೂನ್ 11 ಮತ್ತು 12 ರಂದು ಎರಡೆರಡು ಪ್ರದರ್ಶನಗಳನ್ನು ಆಯೋಜನೆ ಮಾಡಲಾಗಿದೆ. ಇದು ಈ ನಾಟಕದ ಹಾಸ್ಯ ಪಾತ್ರಧಾರಿ ಶ್ರೀದೇವಿ ಅವರ ಮದುವೆ ಸಹಾರ್ಥವಾಗಿ ನಡೆಯಲಿದೆ. ಹಾಗಾಗಿ ಚಂದ್ರಿಕಾ ಪ್ರಮುಖ ಪಾತ್ರವನ್ನು ಮಾಡಲು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದ ಮೊದಲ ವಿಮರ್ಶೆ ಮಾಡಿದ ನಟ ರಮೇಶ್ ಅರವಿಂದ್

    ನಾಟಕದ ಕುರಿತು ಮಾತನಾಡಿರುವ ಸಂಘದ ಮಾಲೀಕರಾದ ನಾಗರತ್ನ ಚಿಕ್ಕಮಠ ಮಾತನಾಡಿ, “ಕವಿ ಬಿ.ಆರ್. ಅರಶಿನಗೋಡೆ ಅವರು ಬರೆದಿರುವ ಖಾನಾವಳಿ ಚೆನ್ನಿ ಹೆಸರಾಂತ ಹಾಸ್ಯ ನಾಟಕ. ಈ ನಾಟಕವನ್ನು ರೋಣದಲ್ಲಿ ಆಯೋಜನೆ ಮಾಡಲಾಗಿದೆ. ಖ್ಯಾತ ಧಾರಾವಾಹಿ ಕಲಾವಿದೆ ಚಂದ್ರಿಕಾ ಅವರು ಪ್ರಧಾನ ಪಾತ್ರ ಮಾಡುತ್ತಿದ್ದರೆ, ಜ್ಯೂನಿಯರ್ ಯಶ್ ಕೂಡ ಈ ನಾಟಕದಲ್ಲಿ ಮತ್ತೊಂದು ಪಾತ್ರ ಮಾಡುತ್ತಿದ್ದಾರೆ. ಸಂಘದ ಕಲಾವಿದೆ ಶ್ರೀದೇವಿ ಅವರ ಮದುವೆಗಾಗಿ ಇದನ್ನು ಆಯೋಜನೆ ಮಾಡಲಾಗಿದೆ’ ಎಂದರು.

    ಖಾನಾವಳಿ ಚೆನ್ನಿ ನಾಟಕದಲ್ಲಿ ಹಾಸ್ಯದ ಜೊತೆ ಡಬಲ್ ಮೀನಿಂಗ್ ಡೈಲಾಗ್ ಕೂಡ ಇವೆ. ಚೆನ್ನಿಯ ಪಾತ್ರದ ಸುತ್ತ ಇಡೀ ನಾಟಕ ಕಟ್ಟಲಾಗಿದೆ. ಈಗಾಗಲೇ ಈ ನಾಟಕ ಉತ್ತರ ಕರ್ನಾಟಕದಲ್ಲಿ ಸಾವಿರಾರು ಪ್ರಯೋಗಗಳನ್ನು ಕಂಡಿದೆ. ಹೆಸರಾಂತ ಕಲಾವಿದೆಯರು ಈಗಾಗಲೇ ಚೆನ್ನಿ ಪಾತ್ರವನ್ನು ಮಾಡಿದ್ದಾರೆ. ಪ್ರತಿ ಪ್ರಯೋಗವೂ ಯಶಸ್ಸು ಕಂಡಿರುವುದು ನಾಟಕದ ಹೆಗ್ಗಳಿಕೆ ಕೂಡ.

  • ಕುರಿಗಾಹಿ ಮೇಲೆ ಹಲ್ಲೆ ನಡೆಸಿ ಕುರಿ ಕದ್ದ ಖದೀಮರು

    ಕುರಿಗಾಹಿ ಮೇಲೆ ಹಲ್ಲೆ ನಡೆಸಿ ಕುರಿ ಕದ್ದ ಖದೀಮರು

    ಗದಗ: ರೋಣ ತಾಲೂಕಿನ ಅಸೂಟಿ ಹೊರ ವಲಯದಲ್ಲಿ ಕುರಿಗಾಹಿ ಮೇಲೆ ಹಲ್ಲೆ ನಡೆಸಿ ಕುರಿ ಕಳ್ಳತನ ಮಾಡಿರೋ ಘಟನೆ ನಡೆದಿದೆ.

    ರೋಣದ ಬಸಪ್ಪ ಹುಡೇದ್ ಕುಟುಂಬಕ್ಕೆ ಸೇರಿದ 190 ಕ್ಕೂ ಹೆಚ್ಚು ಕುರಿಗಳನ್ನ ಅಸೂಟಿ ಗ್ರಾಮದ ಬಳಿ ಜಮೀನಲ್ಲಿ ನಿಲ್ಲಿಸಲಾಗಿತ್ತು. ಇದನ್ನ ಗಮನಿಸಿದ್ದ ಐವರು ದುಷ್ಕರ್ಮಿಗಳು ರಾತ್ರಿ ಕಳ್ಳತನಕ್ಕೆ ಹೊಂಚು ಹಾಕಿ ತಡರಾತ್ರಿ ವೇಳೆ ಮುಸುಕು ಧರಿಸಿ ಕುರಿ ದೊಡ್ಡಿಗೆ ನುಗ್ಗಿದ್ದಾರೆ. ಇದನ್ನೂ ಓದಿ: ನಾನೇ ಮುಖ್ಯಮಂತ್ರಿಯಾಗಿದ್ರೂ ಕಾಲಮಿತಿಯಲ್ಲಿ ಮೀಸಲಾತಿ ತರಲಾಗುವುದಿಲ್ಲ: ಸಿ.ಸಿ.ಪಾಟೀಲ್

    ದೊಡ್ಡಿ ಬಳಿ ಮಲಗಿದ್ದ ಕುರಿಗಾಹಿ 14 ವರ್ಷದ ಮುತ್ತಪ್ಪ ಹುಡೇದ್ ಅನ್ನೋ ಬಾಲಕನ ಕೈ ಕಾಲು ಕಟ್ಟಿ ಹಾಕಿದ್ದಾರೆ. ಈ ವೇಳೆ ಬಾಲಕನ ಜೊತೆಗಿದ್ದ ಮಂಜಪ್ಪ, ಪರಪ್ಪ ಅನ್ನೋರನ್ನ ಸ್ಥಳದಿಂದ ಓಡಿಸಿದ್ದಾರೆ. ನಂತರ 50 ಕ್ಕೂ ಹೆಚ್ಚು ಕುರಿಗಳನ್ನ ತಾವು ತಂದಿದ್ದ ವಾಹನದಲ್ಲಿ ಲೋಡ್ ಮಾಡಿ ತೆಗೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಭಾರತೀಯ ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿ: ಬೊಮ್ಮಾಯಿ

    ಕುರಿಗಾಹಿ ಬಾಲಕನ್ನ ಕೈ ಕಾಲು ಕಟ್ಟಿ, ಬಾಯಲ್ಲಿ ಮಣ್ಣು ತುಂಬಿ ವಿಕೃತಿ ಮೆರೆದಿದ್ದಾರೆ. ಸದ್ಯ ಗಾಯಾಳು ಬಾಲಕನನ್ನು ರೋಣ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಕುರಿ ಕಳ್ಳತನ ಮಾಡಿರೋ ಖದೀಮರನ್ನ ಅರೆಸ್ಟ್ ಮಾಡಬೇಕು ಅಂತಾ ಕುರಿಗಾಹಿ ಕುಟುಂಬಸ್ಥರು ಆಗ್ರಹಿಸಿದ್ದಾರೆ.

    ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುರಿಗಳ ಖದೀಮರಿಗಾಗಿ ರೋಣ ಪೊಲೀಸರು ಬಲೆ ಬೀಸಿದ್ದಾರೆ.

     

  • ವಸತಿ ಶಾಲೆ ನಾಲ್ವರು ವಿದ್ಯಾರ್ಥಿಗಳು, ಓರ್ವ ಸಿಬ್ಬಂದಿಗೆ ಕೊರೊನಾ

    ವಸತಿ ಶಾಲೆ ನಾಲ್ವರು ವಿದ್ಯಾರ್ಥಿಗಳು, ಓರ್ವ ಸಿಬ್ಬಂದಿಗೆ ಕೊರೊನಾ

    ಗದಗ: ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ನಾಲ್ಕು ಜನ ವಿದ್ಯಾರ್ಥಿಗಳು ಹಾಗೂ ಓರ್ವ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿರುವ ಘಟನೆ ಗದಗದ ರೋಣ ಪಟ್ಟಣದಲ್ಲಿ ಕಂಡುಬಂದಿದೆ.

    175ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಬಹುತೇಕ ಮಕ್ಕಳಲ್ಲಿ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿದೆ. ಮೊದಲು ಓರ್ವ ಅಡುಗೆ ಸಿಬ್ಬಂದಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದೆ. ಕೂಡಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮಕ್ಕಳಿಗೆ ಪರೀಕ್ಷೆ ಮಾಡಿದಾಗ ನಾಲ್ಕು ವಿದ್ಯಾರ್ಥಿಗಳಿಗೆ ಕೊರೊನಾ ಕಾಣಿಸಿಕೊಂಡಿದೆ.

    ನೂರಾರು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಆತಂಕ ಶುರುವಾಗಿದೆ. ಈಗ ವಸತಿ ಶಾಲೆಯ ಎಲ್ಲಾ ಸಿಬ್ಬಂದಿ ಹಾಗೂ ಮಕ್ಕಳಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ರೋಣ ಪಟ್ಟಣದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲೇ ಕ್ವಾರಂಟೈನ್ ಮಾಡಲಾಗಿದೆ.

  • ಮಗನ ಸಾವಿನ ಸುದ್ದಿ ಕೇಳಿ ತಂದೆಗೆ ಹೃದಯಾಘಾತ

    ಮಗನ ಸಾವಿನ ಸುದ್ದಿ ಕೇಳಿ ತಂದೆಗೆ ಹೃದಯಾಘಾತ

    -ತಿಥಿ ಕಾರ್ಯಕ್ಕೆ ಹೊರಟಿದ್ದ ಕುಟುಂಬಕ್ಕೆ ಆಘಾತ

    ಗದಗ: ಮಗನ ಸಾವಿನ ಸುದ್ದಿ ಕೇಳಿ ತಂದೆಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿ ನಡೆದಿದೆ. ತಂದೆ-ಮಗ ಒಂದೇ ದಿನ ಸಾವಿನ ಮನೆ ಪ್ರವೇಶಿಸಿರುವ ಸುದ್ದಿ ಕೇಳಿ ಇಡೀ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

    ಕುಬೇರಪ್ಪ ಹೊಸಮನಿ (60) ಮತ್ತು ಪ್ರವೀಣ್ ಹೊಸಮನಿ (25) ಮೃತ ತಂದೆ-ಮಗ. ನಿವೃತ್ತ ಶಿಕ್ಷಕರಾಗಿದ್ದ ಕುಬೇರಪ್ಪ ಹೊಸಮನಿ ಅಣ್ಣನ ಮಗನಾದ ಪ್ರವೀಣ್ ನನ್ನು ತಮ್ಮ ಬಳಿಯೆಲ್ಲಿಯೇ ಇರಿಸಿಕೊಂಡು ನೋಡಿಕೊಳ್ಳುತ್ತಿದ್ದರು. ಪ್ರವೀಣ್ ಶಿಕ್ಷಣ ಸೇರಿದಂತೆ ಎಲ್ಲ ಜವಾಬ್ದಾರಿಗಳನ್ನು ಕುಬೇರಪ್ಪ ತೆಗೆದುಕೊಂಡಿದ್ದರು.

    ಮನೆಯ ಒಡತಿಯ ತಿಥಿ ಕಾರ್ಯ ಹಿನ್ನೆಲೆಯಲ್ಲಿ ಪ್ರವೀಣ್ ಮನೆಯ ಸ್ವಚ್ಛತೆ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತದಿಂದ ಪ್ರವೀಣ್ ಸಾವನ್ನಪ್ಪಿದ್ದರು. ಇತ್ತ ಮಗನ ಸಾವಿನ ಸುದ್ದಿ ಕೇಳಿದ ಕೂಡಲೇ ಕುಬೇರಪ್ಪ ಅವರಿಗೂ ಹೃದಯಾಘಾತವಾಗಿದ್ದು, ಮಗನನ್ನು ಹಿಂಬಾಲಿಸಿದ್ದಾರೆ. ಕುಟುಂಬಸ್ಥರು ತಂದೆ-ಮಗನ ಅಂತ್ಯಕ್ರಿಯೆ ಒಂದೇ ಸ್ಥಳದಲ್ಲಿ ಸಿದ್ಧತೆ ನಡೆಸಿಕೊಂಡಿದ್ದಾರೆ. ಒಂದೇ ದಿನ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರು ತೀವ್ರ ಅಘಾತಕ್ಕೊಳಗಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.

     

  • ಅತ್ಯಾಚಾರಕ್ಕೆ ಯತ್ನ- ಆತ್ಮಹತ್ಯೆಗೆ ಶರಣಾದ ವಿಕಲಾಂಗ ಚೇತನ ಮಹಿಳೆ

    ಅತ್ಯಾಚಾರಕ್ಕೆ ಯತ್ನ- ಆತ್ಮಹತ್ಯೆಗೆ ಶರಣಾದ ವಿಕಲಾಂಗ ಚೇತನ ಮಹಿಳೆ

    ಗದಗ: ಅತ್ಯಾಚಾರ ಯತ್ನಕ್ಕೊಳಗಾದ ಮಹಿಳೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನಲ್ಲಿ ನಡೆದಿದೆ.

    ಜೂನ್ 4ರಂದು ಮಹಿಳೆ ಕುರಿ ಮೇಯಿಸಲು ಹೋಗಿದ್ದರು. ಈ ವೇಳೆ ಯಾರು ಇಲ್ಲದ ಸಂದರ್ಭದಲ್ಲಿ ಸ್ಥಳೀಯ ಬಸಪ್ಪ ಕಂಬಳಿ ಎಂಬಾತ ಅತ್ಯಾಚಾರಕ್ಕೆ ಮುಂದಾಗಿದ್ದನು ಎಂಬ ಆರೋಪ ಕೇಳಿ ಬಂದಿದೆ. ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಸಂತ್ರಸ್ತೆ ವಿಷ ಸೇವಿಸಿದ್ದರು. ಕೂಡಲೇ ಕುಟುಂಬಸ್ಥರು ಮಹಿಳೆಯನ್ನು ಗದಗನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿ ದ್ದಾರೆ.

    ಪೊಲೀಸರು ಆರೋಪಿ ಬಸಪ್ಪನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆ ಸಂಬಂಧ ಗಜೇಂದ್ರಗಡ ತಾಲೂಕಿನ ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.