Tag: ರೋಶನ್ ಮಹಾನಾಮ

  • ಪೆಟ್ರೋಲ್‍ಗಾಗಿ ಕ್ಯೂ ನಿಂತ ಜನರಿಗೆ ಟೀ, ಬನ್ ನೀಡಿದ ಮಾಜಿ ಕ್ರಿಕೆಟಿಗ

    ಪೆಟ್ರೋಲ್‍ಗಾಗಿ ಕ್ಯೂ ನಿಂತ ಜನರಿಗೆ ಟೀ, ಬನ್ ನೀಡಿದ ಮಾಜಿ ಕ್ರಿಕೆಟಿಗ

    ಕೊಲಂಬೋ: ಈಗಾಗಲೇ ಆರ್ಥಿಕ ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಲಂಕಾದಲ್ಲಿ ಪೆಟ್ರೋಲ್, ಡೀಸೆಲ್ ಅಭಾವ ಉಂಟಾಗಿದೆ. ಜನ ಸರದಿ ಸಾಲಿನಲ್ಲಿ ನಿಂತು ಪೆಟ್ರೋಲ್, ಡೀಸೆಲ್ ಖರೀದಿಗೆ ಮುಂದಾಗಿದ್ದಾರೆ. ಈ ವೇಳೆ ಜನಸಾಮಾನ್ಯರಿಗೆ ಚಹಾ ಮತ್ತು ಬನ್ ವಿತರಿಸಿ ಮಾಜಿ ಕ್ರಿಕೆಟಿಗ ರೋಶನ್ ಮಹಾನಾಮ ನೆರವಾಗಿದ್ದಾರೆ.

    SRILANKA

    ಈ ಬಗ್ಗೆ ಟ್ಟಿಟ್ಟರ್ ಮೂಲಕ ತಿಳಿಸಿರುವ ರೋಶನ್ ಮಹಾನಾಮ, ನಾವು ಇಂದು ಸಂಜೆ ಸ್ವಯಂ ಸೇವಕ ತಂಡದೊಂದಿಗೆ ವಿಜೆರಾಮ ಮಾವತಾ ಸುತ್ತಲಿನ ಪೆಟ್ರೋಲ್ ಬಂಕ್‍ನಲ್ಲಿ ಪೆಟ್ರೋಲ್‍ಗಾಗಿ ಸರದಿ ಸಾಲಿನಲ್ಲಿ ನಿಂತಿದ್ದ ಜನರಿಗೆ ಟೀ ಮತ್ತು ಬನ್‍ಗಳನ್ನು ವಿತರಿಸಲಾಯಿತು. ದಿನದಿಂದ ದಿನಕ್ಕೆ ಇಲ್ಲಿನ ಪರಿಸ್ಥಿತಿ ಹದಗೆಡುತ್ತಿದೆ. ಸರತಿ ಸಾಲುಗಳು ದಿನದಿಂದ ದಿನಕ್ಕೆ ಉದ್ದವಾಗುತ್ತಿದ್ದು, ಸರತಿ ಸಾಲಿನಲ್ಲಿ ನಿಲ್ಲುವ ಜನರಿಗೆ ಆರೋಗ್ಯ ಸಮಸ್ಯೆ ಕೂಡ ಕಾಡುತ್ತಿದೆ. ಹಾಗಾಗಿ ಜನರಿಗೆ ನೆವಾಗಲು ಮುಂದಾಗುವವರು ದ್ರವ ರೂಪದ ಆಹಾರವನ್ನು ಹೆಚ್ಚಾಗಿ ನೀಡಿ ಸಹಕರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಲೀಟರ್‌ ಪೆಟ್ರೋಲ್‌ಗೆ 420 ರೂ., ಡೀಸೆಲ್‌ಗೆ 400 ರೂ.

    ದ್ವೀಪ ರಾಷ್ಟ್ರ ತನ್ನ ಸ್ವಾತಂತ್ರ್ಯದ ಬಳಿಕ ಎಂದೂ ಸಂಭವಿಸದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಅಲ್ಲಿನ 2 ಕೋಟಿಗೂ ಅಧಿಕ ಜನರು ಆಹಾರ, ಇಂಧನ ಹಾಗೂ ಔಷಧಕ್ಕಾಗಿ ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಬಾಲ್ಯ ಸ್ನೇಹಿತ ಅಬ್ಬಾಸ್ ನೆನಪಿಸಿಕೊಂಡ ಮೋದಿ – ನೆಟ್ಟಿಗರಿಗೆ ಕುತೂಹಲ

    ದೇಶ ಭಾರೀ ಹಣದುಬ್ಬರ ಹಾಗೂ ಸುದೀರ್ಘ ವಿದ್ಯುತ್ ಕಡಿತವನ್ನೂ ಎದುರಿಸುತ್ತಿದೆ. ಈ ನಡುವೆ ಔಷಧಿಗಳು, ಅಡುಗೆ ಅನಿಲ, ಇಂಧನ ಮತ್ತು ಆಹಾರ ಸೇರಿದಂತೆ ಮೂಲಭೂತ ಅವಶ್ಯಕತೆಗಳ ಕೊರತೆಯೊಂದಿಗೆ ಆರ್ಥಿಕ ಸ್ಥಿತಿಯು ಹದಗೆಟ್ಟು ಜನ ಬೀದಿಗಿಳಿದು ಸರ್ಕಾರದ ವಿರುದ್ಧ ಸಮರ ಸಾರುತ್ತಿದ್ದಾರೆ. ಅಗತ್ಯ ವಸ್ತುಗಳ ಆಮದಿಗೆ ಬೇಕಾದ ವಿದೇಶಿ ಕರೆನ್ಸಿ ಕೊರತೆ ಈ ಬಿಕ್ಕಟ್ಟಿಗೆ ಪ್ರಮುಖ ಕಾರಣವಾಗಿದೆ. ಕೆಲದಿನಗಳ ಹಿಂದೆ ಭಾರತ ಶ್ರೀಲಂಕಾಗೆ ನೆರವಾಗಿತ್ತು.

    Live Tv