Tag: ರೋಸ್ ಅವೆನ್ಯೂ ಕೋರ್ಟ್

  • ಸಾಮಾಜಿಕ ಮಾಧ್ಯಮದಲ್ಲಿ ನೀಡುವ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು – ಇ.ಡಿ ಕಿವಿಹಿಂಡಿದ ದೆಹಲಿ ಕೋರ್ಟ್

    ಸಾಮಾಜಿಕ ಮಾಧ್ಯಮದಲ್ಲಿ ನೀಡುವ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು – ಇ.ಡಿ ಕಿವಿಹಿಂಡಿದ ದೆಹಲಿ ಕೋರ್ಟ್

    ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ನೀಡುವ ಮಾಹಿತಿ ನಿಖರವಾಗಿರಬೇಕು. ಈ ಮೂಲಕ ಇ.ಡಿ (ED) ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ (Rouse Avenue Court) ಎಚ್ಚರಿಸಿದೆ.

    ಈ ಕುರಿತು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಮಾತನಾಡಿ, ಇ.ಡಿ ವಾಸ್ತವ ಅಂಶಗಳನ್ನು ನೀಡುವಾಗ ದಾರಿತಪ್ಪಿಸುವ ರೀತಿಯಲ್ಲಿ ಅಥವಾ ಮಾನಹಾನಿ ಮಾಡುವ ರೀತಿಯಲ್ಲಿರಬಾರದು. ಒಂದು ವೇಳೆ ಹಾಗೆ ಮಾಡಿದರೆ ಅದು ಸಂಸ್ಥೆಯ ಘನತೆಗೆ ಧಕ್ಕೆ ಬರುತ್ತದೆ. ಜೊತೆಗೆ ಸಂಬಂಧಪಟ್ಟ ವ್ಯಕ್ತಿಯ ಘನತೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಹೆಚ್‌ಎನ್ ವ್ಯಾಲಿ ನೀರನ್ನ ಸಂಪುಟ ಸದಸ್ಯರಿಗೆ ಕುಡಿಸಿ ಶುದ್ಧತೆ ಸಾಬೀತುಪಡಿಸಲಿ: ಸಚಿವ ಸುಧಾಕರ್‌ ವಿರುದ್ಧ ಸಂಸದ ಸುಧಾಕರ್‌ ಸವಾಲ್‌

    ಇ.ಡಿಯಂತಹ ತನಿಖಾ ಸಂಸ್ಥೆಯು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವುದು ಹಾಗೂ ನ್ಯಾಯಯುತ, ಸಮಂಜಸ ಪ್ರಕ್ರಿಯೆಗಳನ್ನು ನಡೆಸುವ ಜವಾಬ್ದಾರಿ ಹೊಂದಿರುತ್ತದೆ. ಅದಲ್ಲದೇ ಇ.ಡಿಯು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳುವ ಮಾಹಿತಿಯೂ ನಿಖರವಾಗಿರಬೇಕು. ದಾರಿತಪ್ಪಿಸದ ಹಾಗೂ ರೋಚಕತೆಯಿಂದ ಮುಕ್ತವಾಗಿರಬೇಕು. ರಾಜಕೀಯವಾಗಿ ಪಕ್ಷಪಾತ ಮಾಡುವ ಉದ್ದೇಶದಿಂದ ಯಾವುದೇ ವಿಷಯವನ್ನು ಹಂಚಿಕೊಳ್ಳುವುದರಿಂದ ಸಂಸ್ಥೆಯ ಸಮಗ್ರತೆ ಹಾಳಾಗುತ್ತದೆ ಎಂದಿದ್ದಾರೆ.

    ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರು ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ನ್ಯಾಯಾಲಯ ತಿರಸ್ಕರಿಸಿ, ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

    ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ಬಾನ್ಸುರಿ ಸ್ವರಾಜ್ ಅವರು ಜೈನ್ ಅವರ ಮನೆಯಿಂದ ಇ.ಡಿಯು 1.8 ಕೆಜಿ ಚಿನ್ನ, 133 ಚಿನ್ನದ ನಾಣ್ಯಗಳು ಮತ್ತು 3 ಕೋಟಿ ರೂ. ನಗದು ವಶಪಡಿಸಿಕೊಂಡಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಬಾನ್ಸುರಿ ಅವರ ವಿರುದ್ಧ ಜೈನ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

    ಇ.ಡಿಯು ತನ್ನ ಎಕ್ಸ್ ಖಾತೆಯಲ್ಲಿ, 2022ರ ಜೂ.6ರಂದು ಪಿಎಂಎಲ್‌ಎ ಅಡಿಯಲ್ಲಿ ಸತ್ಯೇಂದರ್ ಜೈನ್ ಮತ್ತು ಇತರರ ಮನೆಯಲ್ಲಿ ಶೋಧ ನಡೆಸಿದೆ. ಈ ವೇಳೆ ವಿವಿಧ ಶಂಕಾಸ್ಪದ ದಾಖಲೆಗಳು, ಡಿಜಿಟಲ್ ದಾಖಲೆಗಳು ಸೇರಿದಂತೆ 2.85 ಕೋಟಿ ರೂ. ನಗದು ಮತು ಒಟ್ಟು 1.80 ಕೆಜಿ ತೂಕದ 133 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬರೆದುಕೊಂಡಿತ್ತು.

    ಈ ಕುರಿತು ಜೈನ್ ಅವರು ಮಾತನಾಡಿ, ನಮ್ಮ ಮನೆಯಿಂದ ಇ.ಡಿಯು ಯಾವುದೇ ನಗದು ಅಥವಾ ಚಿನ್ನವನ್ನು ವಶಪಡಿಸಿಕೊಂಡಿಲ್ಲ. ಇ.ಡಿ ನಡೆಸಿರುವ ಪಂಚನಾಮೆಯಲ್ಲಿಯೂ ಈ ಅಂಶ ಸ್ಪಷ್ಟವಾಗಿ ದಾಖಲಾಗಿದೆ. ಆದಾಗ್ಯೂ ಬಾನ್ಸುರಿ ಸ್ವರಾಜ್ ಅವರು ನಮ್ಮ ಮನೆಯಿಂದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ ಎಂದು ಆಪಾದಿಸಿದ್ದರು.

    ಪ್ರಕರಣವನ್ನು ಪರಿಗಣಿಸಿದ ನ್ಯಾಯಾಧೀಶರು, ಇ.ಡಿ ಹಂಚಿಕೊಂಡಿರುವ ಟ್ವೀಟ್‌ನ್ನು ಗಮನಿಸಿದರೆ ನಿಜಕ್ಕೂ ಜೈನ್ ಅವರ ಮನೆಯಿಂದ ಹಣ ವಶಪಡಿಸಿಕೊಂಡಿದ್ದಾರೆ ಎನ್ನಿಸುತ್ತದೆ. ಹೀಗಾಗಿ ಬಾನ್ಸುರಿ ಸ್ವರಾಜ್ ವಿರುದ್ಧ ಜೈನ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದೇ ವೇಳೆ ನ್ಯಾಯಾಧೀಶರು, ಇಂತಹ ವಿಷಯದಲ್ಲಿ ಜಾಗೃತಿ ವಹಿಸಿ ಎಂದು ಇ.ಡಿಗೆ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಟೀಕೆಯಿಂದ ಖಿನ್ನತೆಗೆ ಜಾರಿದ್ದೆ, ಆತ್ಮಹತ್ಯೆಗೆ ಯೋಚಿಸಿದ್ದೆ – ಮೌನ ಮುರಿದ ಚಹಲ್‌

  • ಉದ್ಯೋಗಕ್ಕಾಗಿ ಭೂಮಿ ಪ್ರಕರಣ – ಮಾಜಿ ಸಿಎಂ ಲಾಲು ಪ್ರಸಾದ್, ಇಬ್ಬರು ಪುತ್ರರಿಗೆ ಜಾಮೀನು

    ಉದ್ಯೋಗಕ್ಕಾಗಿ ಭೂಮಿ ಪ್ರಕರಣ – ಮಾಜಿ ಸಿಎಂ ಲಾಲು ಪ್ರಸಾದ್, ಇಬ್ಬರು ಪುತ್ರರಿಗೆ ಜಾಮೀನು

    ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣದಲ್ಲಿ (Land For Job Case) ಆರ್‌ಜೆಡಿ (RJD) ಮುಖ್ಯಸ್ಥ ಮತ್ತು ಬಿಹಾರದ (Bihar) ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ (Lalu Prasad Yadav) ಮತ್ತು ಅವರ ಪುತ್ರರಾದ ತೇಜಸ್ವಿ ಯಾದವ್ (Tejashwi Yadav), ತೇಜ್ ಪ್ರತಾಪ್ ಯಾದವ್ (Tej Pratap Yadav) ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಜಾಮೀನು (Bail) ನೀಡಿದೆ.

    ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ತಲಾ 1 ಲಕ್ಷ ರೂ. ಬಾಂಡ್‌ಗಳ ಮೇಲೆ ಜಾಮೀನು ಮಂಜೂರು ಮಾಡಿದರು. ಎಲ್ಲಾ ಮೂವರು ಆರೋಪಿಗಳು ತಮ್ಮ ಪಾಸ್‌ಪೋರ್ಟ್‌ಗಳನ್ನು ಒಪ್ಪಿಸುವಂತೆ ನ್ಯಾಯಾಲಯ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ. ಇದನ್ನೂ ಓದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರವಾಸಿಗರ ಮಿನಿ ಬಸ್ ಏರಿದ ಚಿರತೆ

    ಪ್ರಕರಣದ ವಿಚಾರಣೆ ಹಿನ್ನೆಲೆ ಆರೋಪಿಗಳು ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರಾಗಿದ್ದರು. ಇದಕ್ಕೂ ಮುನ್ನ ಅವರ ವಿರುದ್ಧದ ಪೂರಕ ಆರೋಪಪಟ್ಟಿಯನ್ನು ಆಧರಿಸಿ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಅಂತಿಮ ವರದಿಯನ್ನು ಆಗಸ್ಟ್ 6 ರಂದು ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದನ್ನೂ ಓದಿ: ಕುರ್ಚಿ ಕಾದಾಟ ಮಧ್ಯೆ ಸತೀಶ್ ಜಾರಕಿಹೊಳಿಯನ್ನು ಭೇಟಿಯಾದ ವಿಜಯೇಂದ್ರ

    2004ರಿಂದ 2009ರವರೆಗೆ ಕೇಂದ್ರ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಯಾದವ್ ಮಧ್ಯಪ್ರದೇಶದ ಜಬಲ್‌ಪುರ ಮೂಲದ ರೈಲ್ವೆಯ ಪಶ್ಚಿಮ ಮಧ್ಯವಲಯದಲ್ಲಿ ಗ್ರೂಪ್-ಡಿ ಉದ್ಯೋಗಗಳಿಗೆ ಜನರನ್ನು ನೇಮಿಸಿದರು. ಇದಕ್ಕೆ ಬದಲಾಗಿ ಉಡುಗೊರೆ ರೂಪದಲ್ಲಿ ಅವರಿಂದ ಭೂಮಿ ಪಡೆದು ಲಾಲು ಪ್ರಸಾದ್ ತನ್ನ ಕುಟುಂಬದ ಮತ್ತು ಸಹಚರರ ಹೆಸರಿನಲ್ಲಿ ನೋಂದಣಿ ಮಾಡಿಸಿಕೊಂಡಿದ್ದರು. ಇದನ್ನೂ ಓದಿ: ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿತ: ಪೊಲೀಸರಿಂದ ಮಹಿಳೆಯ ರಕ್ಷಣೆ

  • ಕೇಜ್ರಿವಾಲ್ ಜಾಮೀನು ಪ್ರಕರಣ- ತುರ್ತು ಪರಿಹಾರ ನೀಡಲು ಸುಪ್ರೀಂ ನಕಾರ

    ಕೇಜ್ರಿವಾಲ್ ಜಾಮೀನು ಪ್ರಕರಣ- ತುರ್ತು ಪರಿಹಾರ ನೀಡಲು ಸುಪ್ರೀಂ ನಕಾರ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ (Delhi Highcourt) ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಹೈಕೋರ್ಟ್ ಆದೇಶದವರೆಗೂ ಕಾಯುವಂತೆ ನ್ಯಾ. ಮನೋಜ್ ಮಿಶ್ರಾ ನೇತೃತ್ವದ ದ್ವಿ ಸದಸ್ಯ ಪೀಠ ಸೂಚಿಸಿದೆ.

    ರೋಸ್ ಅವೆನ್ಯೂ ಕೋರ್ಟ್ ನೀಡಿದ ಜಾಮೀನಿಗೆ ತಡೆ ನೀಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್, ಸುಪ್ರೀಂಕೋರ್ಟ್‌ಗೆ (Supreme Court) ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶಕ್ಕಾಗಿ ಕಾಯದೇ ಹೈಕೋರ್ಟ್ ಆದೇಶವನ್ನು ನೋಡದೆ ತಡೆಹಿಡಿಯಬಹುದಾದರೆ, ನಿಮ್ಮ ಹೈಕೋರ್ಟ್ ಆದೇಶವನ್ನು ಏಕೆ ತಡೆಹಿಡಿಯಬಾರದು ಎಂದು ಪ್ರಶ್ನಿಸಿದರು‌.

    ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ಮನೋಜ್ ಮಿಶ್ರಾ, ಹೈಕೋರ್ಟ್ ತಪ್ಪು ಮಾಡಿದ್ದರೆ ಅದನ್ನು ಪುನರಾವರ್ತಿಸಬೇಕೇ? ಎಂದು ಮರು ಪ್ರಶ್ನಿಸಿತು. ವಾದ ಮುಂದುವರಿಸಿದ ಸಿಂಘ್ವಿ, ಅಂತಿಮ ಆದೇಶವನ್ನು ಶೀಘ್ರದಲ್ಲೇ ನಿರೀಕ್ಷಿಸಬಹುದು ಎಂದು ಪೀಠ ಸೂಚಿಸಿತು ಮತ್ತು ಎಲ್ಲಾ ಪಕ್ಷಗಳು ತಾಳ್ಮೆಯಿಂದ ಕಾಯುವಂತೆ ಹೇಳಿತು. ಆದೇಶ ಬರುವ ಮುನ್ನವೇ ಹೈಕೋರ್ಟ್ ತಡೆ ನೀಡಿದೆ ಎಂದು ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ – ಮೊದಲ ದಿನವೇ ಪ್ರತಿಭಟನೆಯ ಬಿಸಿ!

    ನಾವು ಈಗ ಆದೇಶವನ್ನು ನೀಡಿದರೆ ಸಮಸ್ಯೆಯಾಗಬಹುದು ಒಂದು ದಿನ ಕಾಯುವುದರಲ್ಲಿ ಏನು ಸಮಸ್ಯೆ ಎಂದು ಪೀಠ ಕೇಳಿತು. ಈ ವೇಳೆ ಕೇಜ್ರಿವಾಲ್ (Arvind Kejriwal) ಪರ ವಾದ ಮಂಡಿಸಿದ ಮತ್ತೋರ್ವ ಹಿರಿಯ ವಕೀಲ ವಿಕ್ರಮ್ ಚೌಧರಿ, ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಸುಪ್ರೀಂ ಕೋರ್ಟ್‌ನ ಮೇ 10 ರ ಆದೇಶವನ್ನು ಉಲ್ಲೇಖಿಸಿದರು. ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿಯೂ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ, ತನಿಖೆಯ ದಿಕ್ಕು ತಪ್ಪಿಸಿಲ್ಲ, ಸಾಕ್ಷ್ಯಗಳ ಮೇಲೆ ಪರಿಣಾಮ ಬೀರಿಲ್ಲ ಎಂದರು.

    ಇಡಿ ಪರ ವಕೀಲ ಎಎಸ್‌ಜಿ ರಾಜು ಪ್ರತಿವಾದ ಮಂಡಿಸಿ, ವಿಚಾರಣಾ ನ್ಯಾಯಾಲಯದ ಜಾಮೀನು ಆದೇಶ ವಿಕೃತವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯವು ಈ ಪ್ರಕರಣದಲ್ಲಿ ಹೈಕೋರ್ಟ್ ಮೇಲೆ ಒತ್ತಡ ಹೇರಲು ಬಯಸುವುದಿಲ್ಲ, ಒಂದೇರೆಡು ದಿನಗಳು ಕಾಯಿರಿ, ಈ ಮಧ್ಯೆ ಹೈಕೋರ್ಟ್‌ನ ಆದೇಶ ಜಾರಿಯಾದರೆ ಅದನ್ನು ದಾಖಲೆಗೆ ತರಬಹುದು ಎಂದೂ ಹೇಳಿತು. ಕೇಜ್ರಿವಾಲ್ ಅವರ ಮನವಿಯನ್ನು ಜೂನ್ 26 ಬುಧವಾರ ಮತ್ತೆ ಕೈಗೆತ್ತಿಕೊಳ್ಳಲಾಗುವುದು ತಿಳಿಸಿತು.

  • ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ- ತೀರ್ಪು ಕಾಯ್ದಿರಿಸಿದ ಕೋರ್ಟ್

    ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ- ತೀರ್ಪು ಕಾಯ್ದಿರಿಸಿದ ಕೋರ್ಟ್

    ನವದೆಹಲಿ: 2021-22ರ ದೆಹಲಿ ಅಬಕಾರಿ ನೀತಿಗೆ (Delhi Excise Policy) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಳೆದ ತಿಂಗಳು ಬಂಧನಕ್ಕೊಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಾಮಾನ್ಯ ಜಾಮೀನು (Bail) ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗುರುವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ರೋಸ್ ಅವೆನ್ಯೂ ಕೋರ್ಟ್ ನ್ಯಾಯಾಧೀಶರಾದ ನಿಯಯ್ ಬಿಂದು ಎರಡು ದಿನಗಳ ಕಾಲ ಈ ಪ್ರಕರಣದ ಸುದೀರ್ಘ ವಿಚಾರಣೆ ಆಲಿಸಿ ಇಂದು ಈ ಪ್ರಕರಣದ ಆದೇಶಗಳನ್ನು ಕಾಯ್ದಿರಿಸಿದರು.

    ವಿಚಾರಣೆ ವೇಳೆ ವಾದ ಮಂಡಿಸಿದ ಇ.ಡಿ ಪರ ವಕೀಲ ಎಎಸ್‌ಜಿ ಎಸ್‌ವಿ ರಾಜು, 2021-22ರ ದೆಹಲಿ ಮದ್ಯ ನೀತಿಯಲ್ಲಿ ಉದ್ದೇಶಪೂರ್ವಕವಾಗಿ ಲೋಪದೋಷಗಳನ್ನು ಮಾಡಲು ಕಿಕ್‌ಬ್ಯಾಕ್ ಪಡೆಯಲಾಗಿದೆ. ಈ ಹಣವನ್ನು ಗೋವಾ ಚುನಾವಣೆಗೆ ಬಳಸಿದೆ. ಇದಕ್ಕೆ ಪೂರಕವಾದ ಎಲ್ಲಾ ಸಾಕ್ಷಿಗಳು ಇ.ಡಿ ಬಳಿ ಇದೆ. ಗೋವಾದಲ್ಲಿ ಅರವಿಂದ್ ಕೇಜ್ರಿವಾಲ್ ತಂಗಿದ್ದ ಹೋಟೆಲ್ ಬಾಡಿಗೆ ಒಂದು ಲಕ್ಷ ರೂಪಾಯಿಯನ್ನು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯೊಬ್ಬರು ಪಾವತಿಸಿದ್ದಾರೆ. ಅವರು ಕಿಕ್‌ಬ್ಯಾಕ್ ರೂಪದಲ್ಲಿ ಬಂದ ಸುಮಾರು 40 ಕೋಟಿಯನ್ನು ಪಡೆದುಕೊಂಡಿದ್ದಾರೆ. ಇದನ್ನು ಹೊರತುಪಡಿಸಿ ಇನ್ನಷ್ಟು ಸಾಕ್ಷಿಗಳಿದೆ ಎಂದರು.  ಇದನ್ನೂ ಓದಿ: 3,133 ಮೆಟ್ರಿಕ್ ಟನ್ ಕುಸುಬೆ ಬೆಳೆಯನ್ನು ಬೆಂಬಲ ಬೆಲೆಗೆ ಖರೀದಿಸಲು ಕೇಂದ್ರ ಒಪ್ಪಿಗೆ – ಟಿಬಿ ಜಯಚಂದ್ರ

    ಇ.ಡಿ ಗಾಳಿಯಲ್ಲಿ ಗುಂಡು ಹಾರಿಸುತ್ತಿಲ್ಲ. ತಮ್ಮ ತನಿಖೆಯಲ್ಲಿ ಅಸಮರ್ಪಕ ದಾಖಲೆಗಳನ್ನು ಇಟ್ಟುಕೊಂಡಿದೆ. ಕಿಕ್‌ಬ್ಯಾಕ್ ರೂಪದಲ್ಲಿ ಪಡೆದ ಹಣ ಫೋಟೋಗಳು ಲಭ್ಯವಿದೆ. ಇದೇ ಹಣವನ್ನು ಗೋವಾ ಚುನಾವಣಾ ಪ್ರಚಾರಕ್ಕೆ ಬಳಸಿದೆ. ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮೊಬೈಲ್ ಪಾಸ್‌ವರ್ಡ್ ನೀಡಲು ನಿರಾಕರಿಸುತ್ತಿದ್ದಾರೆ. ಹೀಗಾಗಿ ಪ್ರತಿಕೂಲವಾದ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಅವರು ತಮ್ಮ ಫೋನ್ ಪಾಸ್‌ವರ್ಡ್ ಹೇಳಿದರೆ ಇನ್ನಷ್ಟು ಮಾಹಿತಿ ಸಿಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟಿಸ್

    ಕೇಜ್ರಿವಾಲ್ ಅವರು ವೈಯಕ್ತಿಕವಾಗಿ ಯಾವುದೇ ಅಪರಾಧದಲ್ಲಿ ಭಾಗಿಯಾಗದಿದ್ದರೂ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ವಿಚಾರಣೆ ನಡೆಸಬಹುದು. ಅವರು ನೇರವಾಗಿ ಅಪರಾಧ ಮಾಡದೇ ಇರಬಹುದು. ಆದರೆ ಎಎಪಿ ಪಕ್ಷದ ವ್ಯವಹಾರಗಳಿಗೆ ಜವಾಬ್ದಾರರಾಗಿರುತ್ತಾರೆ. ಒಂದು ವೇಳೆ ಎಎಪಿ ಅಪರಾಧದಲ್ಲಿ ತಪ್ಪಿತಸ್ಥರಾಗಿದ್ದರೆ ಸೆಕ್ಷನ್ 70 ಪಿಎಂಎಲ್‌ಎ ಪ್ರಕಾರ ಅವರು ತಪ್ಪಿತಸ್ಥರಾಗುತ್ತಾರೆ ಎಂದು ಎಸ್‌ವಿ ರಾಜು ವಾದಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿದ್ದರಾಮಯ್ಯ

    ಇ.ಡಿ ಆರೋಪಕ್ಕೆ ಅರವಿಂದ್ ಕೇಜ್ರಿವಾಲ್ ಪರ ವಕೀಲ ವಿಕ್ರಮ್ ಚೌಧರಿ ಆಕ್ಷೇಪ ವ್ಯಕ್ತಪಡಿಸಿದರು. ಇ.ಡಿ ಒಂದು ಸ್ವತಂತ್ರ ಸಂಸ್ಥೆಯೇ ಅಥವಾ ಕೆಲವು ರಾಜಕೀಯ ಯಜಮಾನರ ಕೈಯಲ್ಲಿ ಆಟವಾಡುತ್ತಿದೆಯೇ? ಇ.ಡಿ ಊಹೆಯ ಆಧಾರದ ಮೇಲೆ ತನ್ನ ಎಲ್ಲಾ ತೀರ್ಮಾನಗಳನ್ನು ತೆಗೆದುಕೊಳ್ಳುತ್ತದೆ. ಅವರು ಇನ್ನೂ ವಸ್ತುಗಳನ್ನು ಸಂಗ್ರಹಿಸುತ್ತಿದ್ದರೆ ಅದು ಅಂತ್ಯವಿಲ್ಲದ ತನಿಖೆಯಾಗುತ್ತದೆ. ಇದನ್ನೂ ಓದಿ: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳ ಮೂಲದ ಅರ್ಚಕ ಹೃದಯಾಘಾತದಿಂದ ಸಾವು

    ಎಎಪಿಯ ರಾಷ್ಟ್ರೀಯ ಸಂಚಾಲಕ ಮತ್ತು ಅದಕ್ಕಾಗಿಯೇ ಪಕ್ಷವು ಮಾಡಿದ ಪ್ರತಿಯೊಂದಕ್ಕೂ ಜವಾಬ್ದಾರಾಗುತ್ತಾರೆ ಎಂದು ಅವರು ಹೇಳುತ್ತಾರೆ. ಇದು ಊಹಾಪೋಹಗಳು, ಪೂರ್ವಾಗ್ರಹ. ಸಾಕ್ಷಿ ಇಲ್ಲದೇ 100 ಕೋಟಿ ಲಂಚ ಸ್ವೀಕರಿಸಲಾಗಿದೆ ಎಂದು ಹೇಳಿಕೆ ನೀಡುತ್ತಲೇ ಇದ್ದಾರೆ ಎಂದು ಚೌಧರಿ ವಾದಿಸಿದರು. ಕೇಜ್ರಿವಾಲ್ ಅವರನ್ನು ವಿಶೇಷ ವ್ಯಕ್ತಿ ಎಂದು ಪರಿಗಣಿಸಬೇಡಿ. ಅವರು ವಿಶೇಷ ವ್ಯಕ್ತಿ ಎಂದು ಪರಿಗಣಿಸಲು ಬಯಸುವುದಿಲ್ಲ. ಆದರೆ ದಯವಿಟ್ಟು ಸಾಮಾನ್ಯ ವ್ಯಕ್ತಿಯಂತೆ ಪರಿಗಣಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಪಾರ್ಟ್ಮೆಂಟ್‌ನಿಂದ ಬಿದ್ದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಆತ್ಮಹತ್ಯೆ!