Tag: ರೋಹಿಣಿ ಸಿಂಧೂರಿ

  • ರೋಹಿಣಿ-ರೂಪಾ ಗಲಾಟೆ ಪ್ರಕರಣ; ಸಿಂಧೂರಿಗೆ ರಿಲೀಫ್ ನೀಡಿದ ಹೈಕೋರ್ಟ್

    ರೋಹಿಣಿ-ರೂಪಾ ಗಲಾಟೆ ಪ್ರಕರಣ; ಸಿಂಧೂರಿಗೆ ರಿಲೀಫ್ ನೀಡಿದ ಹೈಕೋರ್ಟ್

    ಬೆಂಗಳೂರು: ಮಾನನಷ್ಟ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್ ದಾಖಲಿಸಿದ್ದ ಕೇಸ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೈಕೋರ್ಟ್‌ ವಿಚಾರಣೆ ಮುಂದೂಡಿದೆ.

    ಮಾ.12 ರ ವರೆಗೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಅರ್ಜಿ ವಿಚಾರಣಾ ಸಂದರ್ಭದಲ್ಲಿ ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾ.ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ.

    ಈ ಮೊದಲು ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್‌ಗೆ ರೂಪಾ‌ ಖಾಸಗಿ ದೂರು ಸಲ್ಲಿಸಿದ್ದರು. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಕೋರ್ಟ್ ನೋಟಿಸ್ ನೀಡಿತ್ತು. 2023ರ ಫೆ.19 ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದಾರೆ. ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದಾರೆ. ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ ತಮ್ಮ ವರ್ಗಾವಣೆಯಾಗಿದೆ. 6 ತಿಂಗಳ ವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಈ ಹೇಳಿಕೆಯಿಂದ ನನ್ನ ತಂಗಿ, ಪತಿ, ಮಕ್ಕಳೂ ಮಾನಸಿಕ ಯಾತನೆ ಅನುಭವಿಸಿದ್ದಾರೆ ಎಂದು ರೋಹಿಣಿ ವಿರುದ್ಧ ರೂಪಾ ಮಾನನಷ್ಟ ಮೊಕದ್ದಮೆ ಹೂಡಿದ್ದರು.

  • ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು- ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಸಿಂಧೂರಿ ಬಿಗಿಪಟ್ಟು

    ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು- ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಸಿಂಧೂರಿ ಬಿಗಿಪಟ್ಟು

    ನವದೆಹಲಿ: ನನ್ನ ವಿರುದ್ಧ ಮಾಡಿರುವ ಅವಹೇಳನಕಾರಿ ಪೋಸ್ಟ್ ಗಳನ್ನು ಸೋಶಿಯಲ್ ಮೀಡಿಯಾದಿಂದ ಡಿಲೀಟ್ ಮಾಡಬಹುದು. ಆದರೆ ಇಂತಹ ಪೋಸ್ಟ್ ಗಳಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ, ನಾನು ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವುದು ಹೇಗೆ? ಹೀಗಾಗಿ ಐಪಿಎಸ್ ಡಿ.ರೂಪಾ ಬೇಷರತ್ ಕ್ಷಮೆ ಕೇಳಬೇಕು ಎಂದು ಐಎಎಸ್ ರೋಹಿಣಿ ಸಿಂಧೂರಿ (IAS  Rohini Sinduri) ಪಟ್ಟು ಹಿಡಿದಿದ್ದಾರೆ.

    ಡಿ.ರೂಪಾ ವಿರುದ್ಧ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ವಾದ ಮಂಡಿಸಿದ ರೋಹಿಣಿ ಸಿಂಧೂರಿ ಪರ ವಕೀಲರು, ಮಾನಹಾನಿಯಾಗುವ ರೀತಿಯಲ್ಲಿ ಪೋಸ್ಟ್ ಗಳನ್ನು ಮಾಡಲಾಗಿದೆ ಈ ಹಿನ್ನಲೆಯಲ್ಲಿ ಡಿ.ರೂಪಾ ಬೇಷರತ್ ಕ್ಷಮೆ ಕೋರುವಂತೆ ಒತ್ತಾಯಿಸಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಡಿ.ರೂಪಾ (D. Roopa) ಪರ ವಕೀಲರು, ರೋಹಿಣಿ ಸಿಂಧೂರಿ ಕೂಡಾ ಆರೋಪ ಮಾಡಿದ್ದಾರೆ. ಬುದ್ಧಿ ಭ್ರಮಣೆಯಾಗಿದೆ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ ಎಂದು ವಾದಿಸಿದರು. ಇದಕ್ಕೆ ಪ್ರತಿವಾದ ಮಂಡಿಸಿದ ಸಿಂಧೂರಿ ಪರ ವಕೀಲರು, ಹೌದು ಬುದ್ಧಿ ಭ್ರಮಣೆಯಾದವರು ಈ ರೀತಿ ಪೊಸ್ಟ್ ಮಾಡುತ್ತಾರೆ. ಆದರೆ ಅವರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಹೇಳಿಲ್ಲ ಅಂದ್ರು. ಇದನ್ನೂ ಓದಿ: ಅನ್ನಪೂರ್ಣಿ ಸಿನಿಮಾ: ನಯನತಾರಾ ವಿರುದ್ಧ ಪ್ರಕರಣ ದಾಖಲು

    ವಾದ-ಪ್ರತಿವಾದ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾ.ಎ.ಎಸ್ ಓಕಾ (S Oka), ನೀವು ಒಂದು ನಿರ್ಧಾರಕ್ಕೆ ಬರಬೇಕು ಒಂದು ತಿಂಗಳ ಸಮಯ ನೀಡಲಾಗುವುದು, ಸೋಶಿಯಲ್ ಮೀಡಿಯಾದಿಂದ ಎಲ್ಲ ಪೋಸ್ಟ್ ಡಿಲೀಟ್ ಮಾಡಬೇಕು. ನಿಮಗೆ ಒಳ್ಳೆಯ ಭವಿಷ್ಯವಿದೆ. ಉಜ್ವಲ ಭವಿಷ್ಯದ ಕಾರಣದಿಂದ ಪ್ರಕರಣ ಇತ್ಯರ್ಥಕ್ಕೆ ಯೋಚಿಸಿದ್ದೇವೆ. ಆದರೆ ಭಾವನೆಗಳು ಅಧಿಕವಾಗಿದ್ದರೆ ನಾವು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಇಬ್ಬರೂ ಅಧಿಕಾರಿಗಳಿಗೆ ಬುದ್ಧಿ ಮಾತು ಹೇಳಿದರು.

    ನ್ಯಾಯಧೀಶರ ಮಾತಿಗೆ ಒಪ್ಪದ ರೋಹಿಣಿ ಸಿಂಧೂರಿ ಪರ ವಕೀಲರು, ನಮಗೆ ಉಜ್ವಲ ಭವಿಷ್ಯವಿರಬಹುದು. ಆದರೆ ಈ ರೀತಿಯ ಮಾನಹಾನಿ ಮಾಡಿದರೆ ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವುದು ಹೇಗೆ?. ನಮ್ಮನ್ನು ಜನರು ಬೇರೆ ರೀತಿಯಲ್ಲೇ ನೋಡುತ್ತಾರೆ. ಈ ಹಂತದಲ್ಲಿ ಮೌನವಾಗಿರಲು ಸಾಧ್ಯವಿಲ್ಲ ಎಂದು ಹೇಳಿದರು.

    ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ ಎ.ಎಸ್ ಓಕಾ, ಮೌನವಾಗಿರಲು ಅಥವಾ ಅರ್ಜಿ ಹಿಂತೆಗೆದುಕೊಳ್ಳುವಂತೆ ನಾವು ನಿಮ್ಮನ್ನು ಒತ್ತಾಯಿಸುತ್ತಿಲ್ಲ. ಒಂದು ತಿಂಗಳು ಸಮಯ ನೀಡಲಾಗುವುದು ಫೆ.16ಕ್ಕೆ ಮುಂದಿನ ವಿಚಾರಣೆಗೆ ಪಟ್ಟಿ ಮಾಡಲಾಗುವುದು. ಅಲ್ಲಿಯ ತನಕ ಮಧ್ಯಂತರ ಆದೇಶ ಆದೇಶ ಮುಂದುವರಿಯಲಿದೆ. ಯಾರು ಯಾರ ವಿರುದ್ಧವೂ ಆರೋಪ ಪ್ರತ್ಯಾರೋಪ ಮಾಡಬಾರದು. ಸೋಶಿಯಲ್ ಮೀಡಿಯಾದಲ್ಲಿಯೂ ಪೋಸ್ಟ್ ಮಾಡುವಂತಿಲ್ಲ ಎಂದು ನ್ಯಾಯಾಧೀಶರು ಸೂಚಿಸಿದರು.

  • 7 ತಿಂಗಳ ಬಳಿಕ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ.ರೂಪಾ ನಿಯೋಜನೆ

    7 ತಿಂಗಳ ಬಳಿಕ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ.ರೂಪಾ ನಿಯೋಜನೆ

    ಬೆಂಗಳೂರು: 7 ತಿಂಗಳ ಬಳಿಕ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಜೊತೆಗೆ ಐಪಿಎಸ್‌ ಅಧಿಕಾರಿ ಡಿ.ರೂಪಾಗೂ (D.Roopa Moudgil) ಸರ್ಕಾರ ಹುದ್ದೆ ನಿಯೋಜನೆ ಮಾಡಿದೆ. ಆಂತರಿಕ ಭದ್ರತಾ ವಿಭಾಗದ ಐಜಿಯಾಗಿ ರೂಪಾರನ್ನ ನಿಯೋಜಿಸಲಾಗಿದೆ.

    ರೋಹಿಣಿ ಸಿಂಧೂರಿ ಮತ್ತು ರೂಪಾ ಮೌದ್ಗಿಲ್‌ ಪರಸ್ಪರ ಕಿತ್ತಾಡಿಕೊಂಡಿದ್ದರು. ಆಗ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಆದರೆ ಯಾವುದೇ ಹುದ್ದೆಯನ್ನು ನೀಡಿರಲಿಲ್ಲ. ಇದಾದ 7 ತಿಂಗಳ ಬಳಿಕ ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ಗೆಜೆಟಿಯರ್‌ ಡಿಪಾರ್ಟ್‌ಮೆಂಟ್‌ನ ಮುಖ್ಯ ಸಂಪಾದಕರನ್ನಾಗಿ ನಿಯೋಜಿಸಲಾಗಿದೆ. ಇದನ್ನೂ ಓದಿ: ಕರ್ನಾಟಕ ಗೆಜೆಟಿಯರ್‌ಗೆ ರೋಹಿಣಿ ಸಿಂಧೂರಿ ಚೀಫ್ ಎಡಿಟರ್

    ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆಯಾದ ಬೆನ್ನಲ್ಲೇ ಡಿ.ರೂಪಾ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಯಾಗಿ ನಿಯುಕ್ತಿಗೊಳಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ನಾಟಕ ಗೆಜೆಟಿಯರ್‌ಗೆ ರೋಹಿಣಿ ಸಿಂಧೂರಿ ಚೀಫ್ ಎಡಿಟರ್

    ಕರ್ನಾಟಕ ಗೆಜೆಟಿಯರ್‌ಗೆ ರೋಹಿಣಿ ಸಿಂಧೂರಿ ಚೀಫ್ ಎಡಿಟರ್

    ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಕೊನೆಗೂ ಸರ್ಕಾರ ಹುದ್ದೆ ನೀಡಿದೆ. ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

    ಕಳೆದ ಕೆಲ ತಿಂಗಳ ಹಿಂದೆ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವೆ ಕಿತ್ತಾಟ ನಡೆದಿತ್ತು. ಈ ವೇಳೆ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ನೀಡದೆ ವರ್ಗಾವಣೆ ಮಾಡಿತ್ತು. ಕಳೆದ 6 ತಿಂಗಳಿನಿಂದ ಸರ್ಕಾರ ರೋಹಿಣಿ ಸಿಂಧೂರಿಗೆ ಯಾವುದೇ ಹುದ್ದೆ ನೀಡಿರಲಿಲ್ಲ. ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಬಯಲಾಗ್ತಿದ್ದಂತೆ ಬಿಜೆಪಿ ಟೀಕಿಸಿದ ಕಾಂಗ್ರೆಸ್

    ಈಗಾಗಲೇ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೆ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದರಲ್ಲಿ ರೋಹಿಣಿ ಸಿಂಧೂರಿಗೂ ಹುದ್ದೆ ನೀಡಿದೆ. ಇದೀಗ ರೋಹಿಣಿ ಸಿಂಧೂರಿಗೆ ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರಾಗಿ ವರ್ಗಾವಣೆ ಮಾಡಿದೆ. ಇದನ್ನೂ ಓದಿ: ಯಾವುದೋ ಫೋನ್ ಬಂತೆಂದು ಕಾರ್ಯಕ್ರಮ ರದ್ದು ಮಾಡಿದ್ದ ಚೈತ್ರಾ ಕುಂದಾಪುರ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರೋಹಿಣಿ ಸಿಂಧೂರಿಗೆ ಸಂಕಷ್ಟ – ಅಕ್ರಮ ಎಸಗಿದ್ದು ಸಾಬೀತು!

    ರೋಹಿಣಿ ಸಿಂಧೂರಿಗೆ ಸಂಕಷ್ಟ – ಅಕ್ರಮ ಎಸಗಿದ್ದು ಸಾಬೀತು!

    ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಸಂಕಷ್ಟ ಎದುರಾಗಿದೆ. ಮೈಸೂರು ಜಿಲ್ಲಾಧಿಕಾರಿ (Mysuru DC) ಆಗಿದ್ದ ವೇಳೆ ಡಿಸಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆಗಿರುವುದು ಸಾಬೀತಾಗಿದೆ.

    ಸರ್ಕಾರದ ಪ್ರಾಥಮಿಕ ತನಿಖಾ ವರದಿ ಪ್ರಕಾರ ರೋಹಿಣಿ ಸಿಂಧೂರಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಡಿಪಿಎಆರ್ ಅಧೀನ ಕಾರ್ಯದರ್ಶಿ ಜೇಮ್ಸ್ ಥಾರಖನ್ ಪತ್ರ ಬರೆದಿದ್ದಾರೆ.  ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಮೈತ್ರಿ? – ಶಾ, ಹೆಚ್‌ಡಿಡಿ ಸಭೆಯ ಇನ್‌ಸೈಡ್‌ ಸ್ಟೋರಿ

    ಪತ್ರದಲ್ಲಿ ಪ್ರಾಥಮಿಕ ತನಿಖಾ ವರದಿಯ ಎಲ್ಲಾ ಅಂಶಗಳು ಉಲ್ಲೇಖ ಮಾಡಿದ್ದು, ಡಿಸಿ ನಿವಾಸ ನವೀಕರಣಕ್ಕೆ ಯಾವ ಅನುಮತಿ ಪಡೆದಿಲ್ಲ. ನವೀಕರಣಕ್ಕೆ ಬಳಸಿದ ಹಣಕ್ಕೂ ಆರ್ಥಿಕ ಇಲಾಖೆ ಅನುಮತಿ ಪಡೆದಿಲ್ಲ. ನಿಯಮ ಉಲ್ಲಂಘನೆ ಮಾಡಿದ್ದಾರೆ. ಬಟ್ಟೆ ಬ್ಯಾಗ್ ಖರೀದಿಯಲ್ಲೂ ಯಾವ ನಿಯಮಾವಳಿ ಪಾಲನೆ ಆಗಿಲ್ಲ ಎಂದು ನಮೂದು ಮಾಡಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾನಹಾನಿ ಕೇಸ್ ರದ್ದು ಕೋರಿ ಡಿ.ರೂಪಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

    ಮಾನಹಾನಿ ಕೇಸ್ ರದ್ದು ಕೋರಿ ಡಿ.ರೂಪಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

    ಬೆಂಗಳೂರು: ತಮ್ಮ ವಿರುದ್ಧ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ಮಾನಹಾನಿ ಕೇಸ್‌ ರದ್ದುಗೊಳಿಸುವಂತೆ ಕೋರಿದ್ದ ಡಿ. ರೂಪಾ ಮೌದ್ಗಿಲ್ (Roopa Moudgil) ಅವರ ಅರ್ಜಿಯನ್ನ ಹೈಕೋರ್ಟ್‌ ವಜಾಗೊಳಿಸಿದೆ.

    ಐಪಿಎಸ್‌ ಅಧಿಕಾರಿ ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣದ ಅರ್ಜಿಯನ್ನು ಹೈಕೋರ್ಟ್‌ ಸೋಮವಾರ (ಆ.21) ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಆದರೆ ಪ್ರಕರಣ ರದ್ದು ಕೋರಿದ್ದ ಡಿ.ರೂಪಾ‌ ಮೌದ್ಗಿಲ್ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಹೈಕೋರ್ಟ್ ನಲ್ಲಿ ರೂಪಾ ಮೌದ್ಗಿಲ್ ಗೆ ಹಿನ್ನಡೆ ಉಂಟಾಗಿದ್ದು, ಮತ್ತೆ ಸಂಕಷ್ಟ ಎದುರಾಗಿದೆ. ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ಹೈಕೋರ್ಟ್ ನಕಾರ ಮಾಡಿದೆ.

    ಪ್ರಕರಣದ ಹಿನ್ನೆಲೆ ಏನು?
    ರೂಪಾ ಮೌದ್ಗಿಲ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ (Rohini Sindhuri) ಅವರು ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಕೋರ್ಟ್ ರೂಪಾ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು, ಆ ನಂತರ ಕೋರ್ಟ್‌ಗೆ ಹಾಜರಾಗಿ ರೂಪಾ ಜಾಮೀನು ಪಡೆದಿದ್ದರು. ಇದನ್ನೂ ಓದಿ: ಇಬ್ಬರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ- ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ

    ಏನಿದು ವಿವಾದ?
    ಸೋಷಿಯಲ್‌ ಮೀಡಿಯಾ ಮತ್ತು ಮಾಧ್ಯಮಗಳ ಮೂಲಕ ಐಎಎಸ್‌ ಅಧಿಕಾರಿ (IAS Officer) ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರು ಬಹಿರಂಗವಾಗಿ ಕಿತ್ತಾಟಕ್ಕೆ ಇಳಿದಿದ್ದರು. ರೋಹಿಣಿ ವಿರುದ್ಧ ರೂಪಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪ ಮಾಡಿದ್ದರು. ಬಳಿಕ ಇಬ್ಬರ ನಡುವೆ ಕಿತ್ತಾಟ ಜೋರಾಗಿತ್ತು. ಮುನೀಶ್‌ ಮೌದ್ಗಿಲ್‌ ಹೆಸರನ್ನೂ ರೂಪಾ ಆರೋಪಗಳಲ್ಲಿ ಉಲ್ಲೇಖಿಸಿದ್ದರು. ಅಧಿಕಾರಿಗಳು ಹೀಗೆ ಬಹಿರಂಗವಾಗಿ ಕಿತ್ತಾಡಬಾರದು ಎಂದು ಹಿರಿಯ ಅಧಿಕಾರಿಗಳು, ಸಚಿವರು ಸಲಹೆ ನೀಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಇಬ್ಬರಿಗೂ ಯಾವುದೇ ಹುದ್ದೆ ತೋರಿಸದೇ ವರ್ಗಾವಣೆ ಮಾಡಲಾಗಿತ್ತು. ಇದನ್ನೂ ಓದಿ: ಡಿ.ರೂಪಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರೋಹಿಣಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • IAS ವರ್ಸಸ್‌ IPS: ರೂಪಾ ಮೌದ್ಗಿಲ್‌ಗೆ ಜಾಮೀನು

    IAS ವರ್ಸಸ್‌ IPS: ರೂಪಾ ಮೌದ್ಗಿಲ್‌ಗೆ ಜಾಮೀನು

    ಬೆಂಗಳೂರು: ತನ್ನ ವಿರುದ್ಧ ಐಎಎಸ್‌ (IAS) ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದ ಐಪಿಎಸ್‌ (IPS) ಅಧಿಕಾರಿ ರೂಪಾ ಮೌದ್ಗಿಲ್‌ಗೆ (Roopa Moudgil) ಜಾಮೀನು ಸಿಕ್ಕಿದೆ.

    ರೂಪಾ ಮೌದ್ಗಿಲ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ರೋಹಿಣಿ ಸಿಂಧೂರಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ತನ್ನ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಬೇಕು ಎಂದು ರೂಪಾ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ರೋಹಿಣಿ ಜೊತೆ ಕಿತ್ತಾಟ – ಮಾತನಾಡದಂತೆ ರೂಪಾಗೆ ನೀಡಿದ್ದ ತಡೆ ತೆರವು

    ಪ್ರಕರಣಕ್ಕೆ ಸಂಬಂಧಿಸಿದಂತೆ 24 ನೇ ಎಸಿಎಂಎಂ ಕೋರ್ಟ್ ಹಾಲ್‌ಗೆ ಇಂದು ಐಪಿಎಸ್‌ ಅಧಿಕಾರಿ ರೂಪಾ ಹಾಜರಾದರು. ಕೋರ್ಟ್‌ಗೆ ಹಾಜರಾಗಿ ಜಾಮೀನು ರೂಪಾ ಜಾಮೀನು ಪಡೆದುಕೊಂಡಿದ್ದಾರೆ. ಪ್ರಕರಣದ ವಿಚಾರಣೆಯನ್ನು ಜೂನ್ 22 ಕ್ಕೆ ಮುಂದೂಡಲಾಗಿದೆ.

    ಸೋಷಿಯನ್‌ ಮೀಡಿಯಾ ಮತ್ತು ಮಾಧ್ಯಮಗಳ ಮೂಲಕ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರು ಬಹಿರಂಗವಾಗಿ ಕಿತ್ತಾಟಕ್ಕೆ ಇಳಿದಿದ್ದರು. ರೋಹಿಣಿ ವಿರುದ್ಧ ರೂಪಾ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪ ಮಾಡಿದ್ದರು. ಬಳಿಕ ಇಬ್ಬರ ನಡುವೆ ಕಿತ್ತಾಟ ಜೋರಾಗಿತ್ತು. ಮುನೀಶ್‌ ಮೌದ್ಗಿಲ್‌ ಹೆಸರನ್ನೂ ರೂಪಾ ಆರೋಪಗಳಲ್ಲಿ ಉಲ್ಲೇಖಿಸಿದ್ದರು. ಅಧಿಕಾರಿಗಳು ಹೀಗೆ ಬಹಿರಂಗವಾಗಿ ಕಿತ್ತಾಡಬಾರದು ಎಂದು ಹಿರಿಯ ಅಧಿಕಾರಿಗಳು, ಸಚಿವರು ಸಲಹೆ ನೀಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಇಬ್ಬರಿಗೂ ಯಾವುದೇ ಹುದ್ದೆಯನ್ನು ತೋರಿಸದೇ ವರ್ಗಾವಣೆ ಮಾಡಲಾಗಿತ್ತು. ಇದನ್ನೂ ಓದಿ: ರೂಪಾ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಿದ ರೋಹಿಣಿ

    ರೂಪಾ ಪತಿ ಮುನೀಶ್‌ ಮೌದ್ಗಿಲ್‌ ಅವರನ್ನು ಸಹ ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತರ ಹುದ್ದೆಯಿಂದ ವರ್ಗಾವಣೆ ಮಾಡಲಾಗಿತ್ತು.

  • ರೋಹಿಣಿ ಜೊತೆ ಕಿತ್ತಾಟ – ಮಾತನಾಡದಂತೆ ರೂಪಾಗೆ ನೀಡಿದ್ದ ತಡೆ ತೆರವು

    ರೋಹಿಣಿ ಜೊತೆ ಕಿತ್ತಾಟ – ಮಾತನಾಡದಂತೆ ರೂಪಾಗೆ ನೀಡಿದ್ದ ತಡೆ ತೆರವು

    ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಐಪಿಎಸ್ ಅಧಿಕಾರಿ ಡಿ ರೂಪಾ (D roopa) ಮಾತನಾಡದಂತೆ ವಿಧಿಸಲಾಗಿದ್ದ ತಡೆಯನ್ನು ತೆರವುಗೊಳಿಸಲಾಗಿದೆ.

    ಕಳೆದೆರಡು ತಿಂಗಳ ಹಿಂದೆ ಇಬ್ಬರು ಉನ್ನತ ಮಹಿಳಾ ಅಧಿಕಾರಿಗಳ ನಡುವಿನ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿಣಿ ವಿರುದ್ಧ ಮಾತನಾಡದಂತೆ ರೂಪಾಗೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು. ಈ ಮಧ್ಯಂತರ ಆದೇಶವನ್ನು ರೂಪಾ ಪ್ರಶ್ನಿಸಿದ್ದು, ಇದೀಗ ನ್ಯಾಯಾಲಯ ಪ್ರತಿಬಂಧಕಾಜ್ಞೆಯನ್ನು ತೆರವುಗೊಳಿಸಿದೆ. ಇದನ್ನೂ ಓದಿ: ರಾಜ್ಯ ನಾಯಕರು ತಂದ ಪಟ್ಟಿ ನೋಡಿ ಮೋದಿ ಕೆಂಡ : ಬಿಜೆಪಿ ಸಭೆಯಲ್ಲಿ ಏನಾಯ್ತು?

    ಈ ಹಿಂದೆ ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ಸಲ್ಲಿಸಿದ್ದರು. ರೋಹಿಣಿ ವಿರುದ್ಧ ಇರುವ ಆರೋಪ ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ವೇಳೆ ರೂಪಾ ಅವರಿಂದ ವೈಯಕ್ತಿಕ ಮಟ್ಟದಲ್ಲಿ ವಾಗ್ದಾಳಿಗೆ ತುತ್ತಾಗಿದ್ದ ರೋಹಿಣಿಗೆ ಕೋರ್ಟ್ ಮೂಲಕ ಬಿಗ್ ರಿಲೀಫ್ ಸಿಕ್ಕಿತ್ತು.

    ರೂಪಾಗೆ ಸೋಷಿಯಲ್ ಮೀಡಿಯಾ ಸೇರಿದಂತೆ ಯಾವುದೇ ರೀತಿಯ ಮಾಧ್ಯಮಗಳಲ್ಲಿ ರೋಹಿಣಿ ವಿರುದ್ಧ ಮಾನಹಾನಿಕರ ಹೇಳಿಕೆ, ಬರಹಗಳನ್ನು ಪೋಸ್ಟ್ ಮಾಡದಂತೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿತ್ತು. ಇದನ್ನೂ ಓದಿ: ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಯಾವುದೇ ಕಾರಣಕ್ಕೂ ಗೆಲ್ಲಲ್ಲ: HDK

  • ರೂಪಾ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಿದ ರೋಹಿಣಿ

    ರೂಪಾ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಿದ ರೋಹಿಣಿ

    ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ (D Roopa) ವಿರುದ್ಧ ಐಎಎಸ್ ಅಧಿಕಾರ ರೋಹಿಣಿ ಸಿಂಧೂರಿ (Rohini Sindhuri) ಒಂದರ ಮೇಲೊಂದು ಕಾನೂನು ಸಮರ ಮಾಡುತ್ತಿದ್ದಾರೆ. ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲು ಮಾಡಿರುವ ರೋಹಿಣಿ ಈಗ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದಾರೆ.

    ಈಗಾಗಲೇ ಸಿಟಿ ಸಿವಿಲ್ ಕೋರ್ಟ್ ರೋಹಿಣಿ ಸಿಂಧೂರಿ ವಿರುದ್ಧ ಯಾವುದೇ ಹೇಳಿಕೆ ನೀಡಬಾರದು, ತಮ್ಮ ಫೇಸ್‌ಬುಕ್ ಅಲ್ಲಿಯೂ ಯಾವುದೇ ಪೋಸ್ಟ್ ಹಾಕಬಾರದು ಎಂದು ಐಪಿಎಸ್ ರೂಪಾ ಅವರಿಗೆ ಆದೇಶ ನೀಡಿತ್ತು. ಆದರೆ ರೂಪಾ ಅವರು ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಪೋಸ್ಟ್‌ಗಳನ್ನು ಮಾಡಿದ್ದು, ಈ ಹಿನ್ನೆಲೆಯಲ್ಲಿ ರೋಹಿಣಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಮಧ್ಯಂತರ ರಿಲೀಫ್‌ – ಷರತ್ತು ಏನು?

    ಬುಧವಾರ ರೋಹಿಣಿ ಸಿಂಧೂರಿ ಅರ್ಜಿ ಸಲ್ಲಿಸಿದ್ದು, ಗುರುವಾರ ಈ ಬಗ್ಗೆ ವಿಚಾರಣೆ ನಡೆಯಲಿದೆ. ರೂಪಾ ವಿರುದ್ಧ ಸಿಂಧೂರಿ ಮತ್ತೊಂದು ಕಾನೂನು ಹೋರಾಟ ಮಾಡುತ್ತಿದ್ದು, ಇದು ಎಲ್ಲಿವರೆಗೆ ಹೋಗಿ ತಲುಪಲಿದೆಯೋ ನೋಡಬೇಕಿದೆ. ಇದನ್ನೂ ಓದಿ: ದುಡ್ಡು ಕೊಟ್ಟು ಮೋದಿ ರೋಡ್ ಶೋಗೆ ಜನ ಕರೆಸುತ್ತಾರೆ – ಸಿದ್ದರಾಮಯ್ಯ ಕಿಡಿ

  • ರೋಹಿಣಿ ವಿರುದ್ಧ ನಿಲ್ಲದ ಸಮರ – ಮತ್ತೆ ಪೋಸ್ಟ್‌ ಹಂಚಿಕೊಂಡ ರೂಪಾ

    ರೋಹಿಣಿ ವಿರುದ್ಧ ನಿಲ್ಲದ ಸಮರ – ಮತ್ತೆ ಪೋಸ್ಟ್‌ ಹಂಚಿಕೊಂಡ ರೂಪಾ

    ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧ ಮಾತನಾಡಬಾರದು, ಸಾಮಾಜಿಕ ಜಾಲತಾಣದಲ್ಲಿ (Social Media) ವೈಯಕ್ತಿಕ ಮಾನಹಾನಿ ಮಾಡಬಾರದು ಎಂದು ಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಸಾಮಾಜಿಕ ಜಾಲತಾಣದಲ್ಲಿ ರೂಪಾ (IPS Roopa) ಮತ್ತೆ ಪೋಸ್ಟ್‌ ಹಾಕುವುದನ್ನು ಮುಂದುವರಿಸಿದ್ದಾರೆ.

    ರೋಹಿಣಿ ಸಿಂಧೂರಿ ವಿರುದ್ದ ಸರ್ಕಾರದ ಕೆಲವು ಕ್ರಮಗಳ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು.  ಈ ಮಾಧ್ಯಮ ವರದಿಯ ಕೆಲವು ಪೋಸ್ಟ್‌ಗಳನ್ನು ತಮ್ಮ ಫೇಸ್ ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ದಯವಿಟ್ಟು ನನ್ನನ್ನು ಜೈಲಿಂದ ಹೊರಗೆ ಕಳಿಸ್ಬೇಡಿ – ಎನ್‌ಕೌಂಟರ್ ಭೀತಿಗೆ ನ್ಯಾಯಾಲಯ ಮೊರೆ ಹೋದ UP ಗ್ಯಾಂಗ್‌ಸ್ಟರ್

    ರೋಹಿಣಿ ಸಿಂಧೂರಿ ಅವರು ಡಿ. ರೂಪಾ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಮಂಗಳವಾರ ಪತಿ ಸುಧೀರ್ ರೆಡ್ಡಿ (Sudhir Reddy) ಜೊತೆ ಖುದ್ದು 24ನೇ ಎಸಿಎಂಎಂ ಕೋರ್ಟ್‌ಗೆ (ACMM Court) ಹಾಜರಾಗಿದ್ದ ರೋಹಿಣಿ ಸಿಂಧೂರಿ, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು.

    ತಡೆಯಾಜ್ಞೆ ಇದ್ದರೂ, ರೂಪಾ ಸಾಮಾಜಿಕ ಜಾಲತಾಣದಲ್ಲಿ (Social Media) ಪೋಸ್ಟ್ ಹಾಕುತ್ತಲೇ ಇದ್ದಾರೆ. ಅವಹೇಳನ ಬರವಣಿಗೆ ಪೋಸ್ಟ್ ಮಾಡುತ್ತಿದ್ದಾರೆ. ಕೆಲವೊಮ್ಮೆ ಮಾತನಾಡಿದರೆ ಪರವಾಗಿಲ್ಲ, ಪದೇ ಪದೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು.

    ರೋಹಿಣಿ ಹೇಳಿಕೆ ಆಧರಿಸಿ ಡಿ.ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಕೋರ್ಟ್ ಮಾರ್ಚ್ 3ಕ್ಕೆ ವಿಚಾರಣೆ ಮುಂದೂಡಿದೆ.