Tag: ರೋಹಿತ್ ಶರ್ಮಾ

  • ಸ್ಲಿಮ್‌ ಆಗಿರೊರೇ ಬೇಕಿದ್ರೆ ಮಾಡೆಲ್‌ ಆಯ್ಕೆ ಮಾಡಿಕೊಳ್ಳಿ – ರೋಹಿತ್‌ ದಪ್ಪ ಎಂಬ ಶಮಾ ಹೇಳಿಕೆಗೆ ಗವಾಸ್ಕರ್‌ ಆಕ್ಷೇಪ

    ಸ್ಲಿಮ್‌ ಆಗಿರೊರೇ ಬೇಕಿದ್ರೆ ಮಾಡೆಲ್‌ ಆಯ್ಕೆ ಮಾಡಿಕೊಳ್ಳಿ – ರೋಹಿತ್‌ ದಪ್ಪ ಎಂಬ ಶಮಾ ಹೇಳಿಕೆಗೆ ಗವಾಸ್ಕರ್‌ ಆಕ್ಷೇಪ

    ನವದೆಹಲಿ: ಕಾಂಗ್ರೆಸ್‌ ವಕ್ತಾರೆ ಶಮಾ ಮೊಹಮ್ಮದ್‌ (Shama Mohamed), ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಕುರಿತು ನೀಡಿದ ಹೇಳಿಕೆ ಈಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಕ್ರಿಕೆಟ್‌ ದಿಗ್ಗಜ ಸುನೀಲ್‌ ಗವಾಸ್ಕರ್‌ (Sunil Gavaskar) ಸಹ ಪ್ರತಿಕ್ರಿಯೆ ನೀಡಿದ್ದು, ಶಮಾ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಕ್ರಿಕೆಟ್‌ನಲ್ಲಿ ದೈಹಿಕ ಸಾಮರ್ಥ್ಯ ಇರಬೇಕು ನಿಜ. ಆದ್ರೆ ಅದೊಂದೇ ಮುಖ್ಯವಾಗುವುದಿಲ್ಲ. ನಾನು, ಈ ಮೊದಲೂ ಹೇಳಿದ್ದೇನೆ, ನೀವು ಸ್ಲಿಮ್‌ ಆಗಿರುವ ವ್ಯಕ್ತಿಗಳನ್ನ ಬಯಸಿದ್ರೆ ಮಾಡೆಲಿಂಗ್‌ಗೆ ಹೋಗಿ, ಎಲ್ಲಾ ಮಾಡೆಲ್‌ಗಳನ್ನ ಆಯ್ಕೆ ಮಾಡಿ ಅಂತ ಹೇಳಿರುವುದಾಗಿ ತಿಳಿಸಿದ್ದಾರೆ.

    ಕ್ರಿಕೆಟ್‌ನಲ್ಲಿ ಮಾನಸಿಕತೆಯೂ ಹೆಚ್ಚು ಮುಖ್ಯವಾಗುತ್ತದೆ, ಅದಕ್ಕಾಗಿ ಅವರು ಎಷ್ಟು ಚೆನ್ನಾಗಿ ಆಡುತ್ತಾರೆ ಅನ್ನೋದನ್ನು ನೋಡಬೇಕಾಗುತ್ತದೆ. ನಾವು ಸರ್ಫರಾಜ್‌ ಖಾನ್‌ ಬಗ್ಗೆ ಮಾತನಾಡಿದ್ದೇವೆ. ಅವರು ದಪ್ಪ ಇದ್ದಾರೆ ಅನ್ನೋ ಕಾರಣಕ್ಕೆ ಬಹಳ ಸಮಯದವರೆಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಲಿಲ್ಲ. ಆದ್ರೆ ಭಾರತ ತಂಡಕ್ಕೆ ಸೇರ್ಪಡೆಯಾದ ನಂತರ ಅವರ ಪ್ರದರ್ಶನ ಅಮೋಘವಾಗಿದೆ. ಕೊನೆಯಬಾರಿ ನ್ಯೂಜಿಲೆಂಡ್‌ ವಿರುದ್ಧ ಟೆಸ್ಟ್‌ ಪಂದ್ಯದಲ್ಲಿ ಆಡಿದಾಗಲೂ ಒಂದೇ ಇನ್ನಿಂಗ್ಸ್‌ನಲ್ಲಿ 150 ರನ್‌ ಗಳಿಸಿದ್ದರು ಎಂದು ಸ್ಮರಿಸಿದರು.

    ಶಮಾ ಹೇಳಿದ್ದೇನು?
    ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಶಮಾ, ರೋಹಿತ್ ಶರ್ಮಾ (Rohit Sharma) ದಪ್ಪಗಿದ್ದಾರೆ. ಅವರು ತೂಕ ಕಳೆದುಕೊಳ್ಳಬೇಕಾಗಿದೆ, ರೋಹಿತ್ ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ ಎಂದು ಬರೆದುಕೊಂಡಿದ್ದರು. ಶಮಾ ಹೇಳಿಕೆಗೆ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ವಿವಾದ ಜೋರಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಛೀಮಾರಿ ಹಾಕಿದ್ದು, ಟ್ವೀಟ್ ಡಿಲೀಟ್ ಮಾಡುವಂತೆ ತಾಕೀತು ಮಾಡಿತ್ತು.

    ಶಮಾ ಮೊಹಮ್ಮದ್ ಯಾರು?
    ಶಮಾ ಮೊಹಮ್ಮದ್ 1973ರ ಮೇ 17 ಕೇರಳದ ಕಣ್ಣೂರು ಜಿಲ್ಲೆಯ ಚೆರುಕಲ್ಲೈನಲ್ಲಿ ಜನಿಸಿದರು. ಶಮಾ ಮೊಹಮ್ಮದ್ ಕಾಂಗ್ರೆಸ್ ವಕ್ತಾರರಾಗಿರುವುದರ ಜೊತೆಗೆ ದಂತವೈದ್ಯರೂ ಆಗಿದ್ದಾರೆ. ಕೇರಳ ಮೂಲದ ವೈದ್ಯೆಯಾದ ಶಮಾ 2015 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಮೂಲಗಳ ಪ್ರಕಾರ ಶಮಾ ಕುವೈತ್‌ನ ಇಂಡಿಯನ್ ಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣ ಪೂರ್ಣಗೊಳಿಸಿದರು. ನಂತರ ಮಂಗಳೂರಿನ ಯೆನೆಪೊಯ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಡೆಂಟಲ್ ಸೈನ್ಸಸ್‌ನಲ್ಲಿ ಪದವಿ ಪಡೆದರು. 2018 ರಲ್ಲಿ ಕಾಂಗ್ರೆಸ್ ಅವರನ್ನು ಮೊದಲ ಬಾರಿಗೆ ತನ್ನ ರಾಷ್ಟ್ರೀಯ ಮಾಧ್ಯಮ ಪ್ಯಾನಲಿಸ್ಟ್ ಆಗಿ ನೇಮಿಸಿತು. ನಂತರ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ಮಾಡಲಾಯಿತು.

  • ಇಂದು ಭಾರತ Vs ಆಸೀಸ್‌ ಸೆಮಿಸ್‌ ಹಣಾಹಣಿ – 2023ರ ವಿಶ್ವಕಪ್‌ ಸೋಲಿನ ಸೇಡು ತೀರಿಸಿಕೊಳ್ಳುವುದೇ ರೋಹಿತ್‌ ಪಡೆ?

    ಇಂದು ಭಾರತ Vs ಆಸೀಸ್‌ ಸೆಮಿಸ್‌ ಹಣಾಹಣಿ – 2023ರ ವಿಶ್ವಕಪ್‌ ಸೋಲಿನ ಸೇಡು ತೀರಿಸಿಕೊಳ್ಳುವುದೇ ರೋಹಿತ್‌ ಪಡೆ?

    – ಮತ್ತೆ ಭಾರತಕ್ಕೆ ʻಹೆಡ್ಡೇಕ್‌ʼ ಆಗುತ್ತಾ?

    ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಇನ್ನೇನು ಅಂತಿಮಘಟ್ಟ ತಲುಪಿದೆ. ಇಂದು ನಡೆಯಲಿರೋ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಟೀಂ ಇಂಡಿಯಾ (Team India) ಹಾಗೂ ಆಸ್ಟ್ರೇಲಿಯಾ (Australia) ಮುಖಾಮುಖಿಯಾಗಲಿವೆ.

    ಮಧ್ಯಾಹ್ನ 2:30ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, 2023ರ ಏಕದಿನ ವಿಶ್ವಕಪ್‌ ಫೈನಲ್‌ ಸೋಲಿಗೆ ಭಾರತ ಸೇಡು ತೀರಿಸಿಕೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಚಾಂಪಿಯನ್ಸ್‌ ಟ್ರೋಫಿಯಲ್ಲಿ (champions trophy) ಈವರೆಗೆ ಭಾರತ ಮತ್ತು ಆಸೀಸ್‌ ನಡುವೆ 4 ಪಂದ್ಯಗಳು ನಡೆದಿದ್ದು, 2 ರಲ್ಲಿ ಭಾರತ, 1ರಲ್ಲಿ ಆಸ್ಟ್ರೇಲಿಯಾ ಗೆದ್ದರೆ, 2009ರಲ್ಲಿ ಒಂದು ಪಂದ್ಯ ಮಳೆಗೆ ಬಲಿಯಾಗಿತ್ತು. ಇದನ್ನೂ ಓದಿ: ವರುಣ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ಬರ್ನ್‌ – ಭಾರತಕ್ಕೆ 44 ರನ್‌ಗಳ ಭರ್ಜರಿ ಜಯ

    ಪಿಚ್‌ ರಿಪೋರ್ಟ್‌ ಹೇಗಿದೆ?
    ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಬಳಸಿದ ಪಿಚ್‌ನಲ್ಲಿಯೇ ಈ ಪಂದ್ಯ ನಡೆಯಲಿದೆ. ಇನ್ನೂ ದುಬೈನ ಯಾವುದೇ ಅಂಗಳದಲ್ಲಿ ಪಂದ್ಯ ನಡೆದರೂ, ಪಂದ್ಯ ಸಾಗಿದಂತೆ ಪಿಚ್‌ ನಿಧಾನಗೊಳ್ಳುತ್ತದೆ. ಹೀಗಾಗಿ ಸ್ಪಿನ್‌ ಮಾಂತ್ರಿಕರು ಹೆಚ್ಚು ಪರಿಣಾಮಕಾರಿಯಾಗಲಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಟೀಂ ಇಂಡಿಯಾ ನಾಲ್ವರು ಸ್ಪಿನ್ನರ್‌ಗಳನ್ನ ಕಣಕ್ಕಿಳಿಸೋ ಸಾಧ್ಯತೆಯಿದೆ. ವರುಣ್ ಚಕ್ರವರ್ತಿ ಜೊತೆಗೆ ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಕಣಕ್ಕಿಳಿಯೋದು ಫಿಕ್ಸ್ ಆಗಿದೆ. ಸ್ಪೀಡ್ ಗನ್ ಮೊಹಮ್ಮದ್ ಶಮಿ ಜೊತೆಗೆ ಹಾರ್ದಿಕ್ ಪಾಂಡ್ಯ ವೇಗದ ಬೌಲಿಂಗ್‌ನಲ್ಲಿ ಜೊತೆಯಾಗಲಿದ್ದಾರೆ.

    ಇಬ್ಬನಿಯ ಸಮಸ್ಯೆ ಇಲ್ಲದಿರುವ ಕಾರಣ, ಟಾಸ್‌ ಗೆಲ್ಲುವ ತಂಡ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸುವ ಸಾಧ್ಯತೆ ಹೆಚ್ಚು. 270-280 ರನ್‌ ಗೆಲ್ಲುವ ಸ್ಕೋರ್‌ ಆಗಬಹುದು. ಆದ್ರೆ ಸದ್ಯ ಟೀಂ ಇಂಡಿಯಾ ಮೊದಲು ಬ್ಯಾಟ್‌ ಮಾಡಿದ್ರೆ 300 ರನ್‌ ಅಥವಾ ಮೊದಲು ಬೌಲಿಂಗ್‌ ಮಾಡಿದ್ರೆ ಆಸೀಸ್‌ ತಂಡವನ್ನು 250 ರನ್‌ಗಳಿಗೆ ಕಟ್ಟಿಹಾಕುವ ಯೋಚನೆಯಲ್ಲಿದೆ. ಸದ್ಯ ಸತತ 13 ಬಾರಿ ಟಾಸ್‌ ಸೋತಿರುವ ಟೀಂ ಇಂಡಿಯಾ ಈಬಾರಿಯಾದ್ರೂ ಟಾಸ್‌ ಗೆಲ್ಲುತ್ತಾ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ರೋಹಿತ್‌ ಶರ್ಮಾ ದಪ್ಪಗಿದ್ದಾರೆ – ಕಾಂಗ್ರೆಸ್‌ ವಕ್ತಾರೆ ಪೋಸ್ಟ್, ವಿವಾದದ ಬೆನ್ನಲ್ಲೇ ಪಕ್ಷದಿಂದ ಛೀಮಾರಿ

    ಇನ್ನೂ ಟೀಂ ಇಂಡಿಯಾ ಬ್ಯಾಟರ್‌ಗಳು ಫಾರ್ಮ್‌ನಲ್ಲಿ ಇರೋದ್ರಿಂದ ಆಸೀಸ್ ವಿರುದ್ಧ ರನ್ ಶಿಖರ ಕಟ್ಟುವ ಸಾಧ್ಯತೆಯಿದೆ. ಹಿಟ್‌ಮ್ಯಾನ್ ರೋಹಿತ್ ಶರ್ಮಾ, ಶುಭಮನ್ ಗಿಲ್, ಆರಂಭದಲ್ಲಿ ಬಿಗ್ ಇನ್ನಿಂಗ್ಸ್ ಕಟ್ಟಬೇಕಿದೆ. 3ನೇ ಕ್ರಮಾಂಕದಲ್ಲಿ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ್ರೆ, ಕನ್ನಡಿಗ ಅಕ್ಷರ್‌ ಪಟೇಲ್‌, ಕೆ.ಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಮ್ಯಾಚ್ ಫಿನಿಶರ್‌ಗಳಾಗಿ ಕಣಕ್ಕಿಳಿಯಲು ಕಾದುಕುಳಿತಿದ್ದಾರೆ. ಇದನ್ನೂ ಓದಿ: ಬೆತ್ ಮೂನಿ ಸ್ಫೋಟಕ ಬ್ಯಾಟಿಂಗ್‌ – ಯುಪಿ ವಿರುದ್ಧ ಗುಜರಾತ್‌ಗೆ 81 ರನ್‌ಗಳ ಭರ್ಜರಿ ಜಯ

    ʻಭಾರತಕ್ಕೆ ಹೆಡ್ಡೇಕ್‌ʼ
    ಟೀಂ ಇಂಡಿಯಾದಂತೆ ಆಸ್ಟ್ರೇಲಿಯಾ ಕೂಡ ಸಾಲಿಡ್ ಫಾರ್ಮ್‌ನಲ್ಲಿದೆ. ಅದ್ರಲ್ಲೂ ಐಸಿಸಿ ಟ್ರೋಫಿ ಟೂರ್ನಿಗಳಾದ್ರೆ, ಕಾಂಗರೂಗಳು ಎದುರಾಳಿ ತಂಡಗಳನ್ನು ಬೇಟೆಯಾಡೋದ್ರಲ್ಲಿ ಅನುಮಾನವೇ ಇಲ್ಲ. ಎಷ್ಟೇ ಟಾರ್ಗೆಟ್ ಆಗಿರಲಿ, ಎಂತಹದ್ದೇ ಸಂದರ್ಭ ಇರಲಿ, ಆಸೀಸ್ ಆಟಗಾರರು ವೀರಾವೇಶದಿಂದ ಹೋರಾಡ್ತಾರೆ. ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧ ನಡೆದ ಪಂದ್ಯವೂ ಇದಕ್ಕೆ ಸಾಕ್ಷಿಯಾಗಿದೆ. ಬುಮ್ರಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯುತ್ತಿರುವ ಭಾರತ ತಂಡಕ್ಕೆ ಟ್ರಾವಿಸ್‌ ಹೆಡ್‌ ಮತ್ತೆ ಕಾಡುತ್ತಾರಾ? ಅಥವಾ ಶಮಿ ಸಾರಥ್ಯ ಬೌಲಿಂಗ್‌ ಪಡೆ ಬಹುಬೇಗನೆ ವಿಕೆಟ್‌ ಪಡೆದು ಪೆವಿಲಿಯನ್‌ಗಟ್ಟುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

    ವಿಶ್ವಕಪ್ ಸೋಲಿಗೆ ತಿರುಗೇಟು ಕೊಡುತ್ತಾ ಟೀಂ ಇಂಡಿಯಾ..?
    ಇನ್ನೂ ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ 2023ರ ವಿಶ್ವಕಪ್ ಫೈನಲ್ ಪಂದ್ಯದ ಸೋಲು ಮರೆಯೋದಕ್ಕೆ ಸಾಧ್ಯವಿಲ್ಲ. ಒಂದೂವರೆ ವರ್ಷಗಳ ನಂತರ ಮತ್ತೊಂದು ಐಸಿಸಿ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತ-ಆಸ್ಟ್ರೇಲಿಯಾ ಮುಖಾಮುಖಿ ಎದುರಾಗ್ತಿವೆ. ಆಸ್ಟ್ರೇಲಿಯಾವನ್ನು ಸೋಲಿಸಿ ಸೇಡು ತೀರಿಸಿಕೊಳ್ಳೋಕೆ ಇದೊಂದು ಒಳ್ಳೆಯ ಅವಕಾಶ. ರೋಹಿತ್ ಶರ್ಮಾ ಪಡೆ ಆಸೀಸ್‌ನ್ನು ಸೋಲಿಸಿ ಸೇಡು ತೀರಿಸಿಕೊಳ್ಳುತ್ತದೆ ಎಂದು ಟೀಂ ಇಂಡಿಯಾ ಕ್ರಿಕೆಟ್ ಪ್ರೇಮಿಗಳು ನಿರೀಕ್ಷಿಸಿದ್ದಾರೆ.

  • ರೋಹಿತ್‌ ಶರ್ಮಾ ದಪ್ಪಗಿದ್ದಾರೆ – ಕಾಂಗ್ರೆಸ್‌ ವಕ್ತಾರೆ ಪೋಸ್ಟ್, ವಿವಾದದ ಬೆನ್ನಲ್ಲೇ ಪಕ್ಷದಿಂದ ಛೀಮಾರಿ

    ರೋಹಿತ್‌ ಶರ್ಮಾ ದಪ್ಪಗಿದ್ದಾರೆ – ಕಾಂಗ್ರೆಸ್‌ ವಕ್ತಾರೆ ಪೋಸ್ಟ್, ವಿವಾದದ ಬೆನ್ನಲ್ಲೇ ಪಕ್ಷದಿಂದ ಛೀಮಾರಿ

    – ನಾನು ಬಾಡಿ ಶೇಮಿಂಗ್ ಮಾಡಿಲ್ಲ ಎಂದ ಶಮಾ

    ಮುಂಬೈ: ಭಾರತ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮಾ (Rohit Sharma) ಕುರಿತು ಎಕ್ಸ್‌ ಪೋಸ್ಟ್‌ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್‌ ವಕ್ತಾರೆ ಶಮಾ ಮೊಹಮ್ಮದ್‌ (Shama Mohamed) ಸದ್ಯ ಸುದ್ದಿಯಲ್ಲಿದ್ದಾರೆ.

    ರೋಹಿತ್‌ ಶರ್ಮಾ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಶಮಾ, ರೋಹಿತ್‌ ಶರ್ಮಾ ದಪ್ಪಗಿದ್ದಾರೆ. ಅವರು ತೂಕ ಕಳೆದುಕೊಳ್ಳಬೇಕಾಗಿದೆ, ರೋಹಿತ್ ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ ಎಂದು ಬರೆದುಕೊಂಡಿದ್ದರು. ಶಮಾ ಹೇಳಿಕೆಗೆ ಬೆನ್ನಲ್ಲೇ ಬಿಜೆಪಿ (BJP) ನಾಯಕರು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

    ಕಾಂಗ್ರೆಸ್‌ ಪಕ್ಷದಿಂದ ಛೀಮಾರಿ
    ಶಮಾ ಎಕ್ಸ್‌ನಲ್ಲಿ ನೀಡಿದ ಹೇಳಿಕೆ ವಿವಾದ ಜೋರಾಗುತ್ತಿದ್ದಂತೆ ಕಾಂಗ್ರೆಸ್‌ ಪಕ್ಷ ಛೀಮಾರಿ ಹಾಕಿದ್ದು, ಟ್ವೀಟ್‌ ಡಿಲೀಟ್‌ ಮಾಡುವಂತೆ ತಾಕೀತು ಮಾಡಿದೆ. ಇದನ್ನೂ ಓದಿ: ಮಾ.24 ರಿಂದ 26ವರೆಗೂ ದೆಹಲಿ ಬಜೆಟ್ ಅಧಿವೇಶನ – ಸಾರ್ವಜನಿಕರಿಂದ ಸಲಹೆ ಕೇಳಿದ ಸಿಎಂ

    ಶಮಾ ಅವರ ಈ ಹೇಳಿಕೆ ವೈಯಕ್ತಿಕವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಪೋಸ್ಟ್ ಅನ್ನು ಡಿಲೀಟ್ ಮಾಡುವಂತೆ ಅವರಿಗೆ ಸೂಚಿಸಲಾಗಿದೆ. ಅಲ್ಲದೇ ಭವಿಷ್ಯದಲ್ಲಿ ಎಚ್ಚರಿಕೆ ವಹಿಸುವಂತೆಯೂ ತಿಳಿಸಲಾಗಿದೆ ಎಂದು ಕಾಂಗ್ರೆಸ್‌ನ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್‌ ಖೇರಾ ತಿಳಿಸಿದ್ದಾರೆ. ಇದನ್ನೂ ಓದಿ: World Wildlife Day – ಗಿರ್ ಅಭಯಾರಣ್ಯದಲ್ಲಿ ಮೋದಿ ಸಫಾರಿ

    ಶಮಾ ಮೊಹಮ್ಮದ್ ಯಾರು?
    ಶಮಾ ಮೊಹಮ್ಮದ್ 1973ರ ಮೇ 17 ಕೇರಳದ ಕಣ್ಣೂರು ಜಿಲ್ಲೆಯ ಚೆರುಕಲ್ಲೈನಲ್ಲಿ ಜನಿಸಿದರು. ಶಮಾ ಮೊಹಮ್ಮದ್ ಕಾಂಗ್ರೆಸ್ ವಕ್ತಾರರಾಗಿರುವುದರ ಜೊತೆಗೆ ದಂತವೈದ್ಯರೂ ಆಗಿದ್ದಾರೆ. ಕೇರಳ ಮೂಲದ ವೈದ್ಯೆಯಾದ ಶಮಾ 2015 ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಮೂಲಗಳ ಪ್ರಕಾರ ಶಮಾ ಕುವೈತ್‌ನ ಇಂಡಿಯನ್ ಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣ ಪೂರ್ಣಗೊಳಿಸಿದರು. ನಂತರ ಮಂಗಳೂರಿನ ಯೆನೆಪೊಯ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಡೆಂಟಲ್ ಸೈನ್ಸಸ್‌ನಲ್ಲಿ ಪದವಿ ಪಡೆದರು.

    2018 ರಲ್ಲಿ ಕಾಂಗ್ರೆಸ್ ಅವರನ್ನು ಮೊದಲ ಬಾರಿಗೆ ತನ್ನ ರಾಷ್ಟ್ರೀಯ ಮಾಧ್ಯಮ ಪ್ಯಾನಲಿಸ್ಟ್‌ ಆಗಿ ನೇಮಿಸಿತು. ನಂತರ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ಮಾಡಲಾಯಿತು. ಇದನ್ನೂ ಓದಿ: ಅಕ್ರಮವಾಗಿ ಇಸ್ರೇಲ್‌ ಪ್ರವೇಶಿಸಲು ಯತ್ನಿಸಿದ್ದ ಕೇರಳದ ವ್ಯಕ್ತಿ ಗುಂಡಿಗೆ ಬಲಿ

  • ಕಿವೀಸ್‌ ವಿರುದ್ಧ ಭಾರತ ಗೆದ್ದರೆ ಸೆಮಿಸ್‌ನಲ್ಲಿ ಬಲಿಷ್ಠ ಆಸೀಸ್‌ ಎದುರಾಳಿ – ಹೇಗಂತೀರಾ?

    ಕಿವೀಸ್‌ ವಿರುದ್ಧ ಭಾರತ ಗೆದ್ದರೆ ಸೆಮಿಸ್‌ನಲ್ಲಿ ಬಲಿಷ್ಠ ಆಸೀಸ್‌ ಎದುರಾಳಿ – ಹೇಗಂತೀರಾ?

    ದುಬೈ: ಲೀಗ್‌ ಸುತ್ತಿನ ಆರಂಭಿಕ ಎರಡೂ ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿ ಸೆಮಿಫೈನಲ್ಸ್‌ಗೆ ಪ್ರವೇಶ ಪಡೆದಿರುವ ಭಾರತ ಮತ್ತು ನ್ಯೂಜಿಲೆಂಡ್‌ (New Zealand) ತಂಡಗಳು ಇಂದು ಮುಖಾಮುಖಿಯಾಗುತ್ತಿವೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2:30ಕ್ಕೆ ಪಂದ್ಯ ಆರಂಭವಾಗಲಿದೆ. ಇಂದಿನ ಪಂದ್ಯದಲ್ಲಿ ಭಾರತ (Team India) ಗೆದ್ದರೆ, ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ, ಸೋತರೆ ದಕ್ಷಿಣ ಆಫ್ರಿಕಾ ವಿರುದ್ಧ ಕಾದಾಟಕ್ಕಿಳಿಯಲಿದೆ.

    ಎ-ಗುಂಪಿನಲ್ಲಿ ಸ್ಥಾನ ಪಡೆದಿರುವ ಭಾರತ – ಕಿವೀಸ್‌ ಈಗಾಗಲೇ ಸೆಮೀಸ್‌ ಪ್ರವೇಶಿಸಿರುವುದರಿಂದ ಈ ಪಂದ್ಯದ ಫಲಿತಾಂಶ ಯಾವುದೇ ಪ್ರಭಾವ ಬೀರುವುದಿಲ್ಲ. ಆದರೂ ಅಜೇಯವಾಗಿ ಸೆಮೀಸ್‌ ಪ್ರವೇಶಿಸುವ ಅವಕಾಶವನ್ನು ಪಂದ್ಯ ದಯಪಾಲಿಸಿದೆ. ಇದನ್ನೂ ಓದಿ: ಇಂದು ಭಾರತ Vs ಕಿವೀಸ್‌ ಹೈವೋಲ್ಟೇಜ್‌ ಕದನ – ಸ್ಪಿನ್ನರ್‌ಗಳ ಚಕ್ರವ್ಯೂಹ ಭೇದಿಸುವುದೇ ಟೀಂ ಇಂಡಿಯಾ?

    ತಲಾ 4 ಅಂಕ ಗಳಿಸಿದ್ದರೂ ರನ್‌ರೇಟ್‌ ಆಧಾರದಲ್ಲಿ ಕಿವೀಸ್‌ ಎ-ಗುಂಪಿನ ಅಗ್ರಸ್ಥಾನದಲ್ಲಿದ್ದರೆ, ಭಾರತ 2ನೇ ಸ್ಥಾನದಲ್ಲಿದೆ. ಭಾನುವಾರದ ಪಂದ್ಯದಲ್ಲಿ ಭಾರತ ಗೆದ್ದರೇ ತನ್ನ ಗುಂಪಿನಿಂದ ಅಗ್ರಸ್ಥಾನಿಯಾಗಿ ಹೊಮ್ಮಲಿದೆ. ಇದನ್ನೂ ಓದಿ: Champions Trophy: ಸೋತ ಇಂಗ್ಲೆಂಡ್‌ ಟೂರ್ನಿಯಿಂದ ಔಟ್‌ – ಗೆದ್ದ ದ. ಆಫ್ರಿಕಾ ಸೆಮಿಗೆ ಎಂಟ್ರಿ

    ಭಾರತ ಗೆದ್ದರೆ ಸೆಮಿಸ್‌ನಲ್ಲಿ ಆಸೀಸ್‌ ಎದುರಾಳಿ:
    ಇತ್ತ ಬಿ-ಗುಂಪಿನಲ್ಲಿ 5 ಅಂಕ ಪಡೆದಿರುವ ದಕ್ಷಿಣ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ,‌ ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದೆ. ಅಂಕಪಟ್ಟಿಯ ಪ್ರಕಾರ ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ಹಾಗೂ ಬಿ ಗುಂಪಿಯಲ್ಲಿ 2ನೇ ಸ್ಥಾನ ಪಡೆದ ಪಂದ್ಯಕ್ಕೆ ಹಾಗೂ ಎ-ಗುಂಪಿಯನ 2ನೇ ಸ್ಥಾನ ಪಡೆದ ತಂಡಕ್ಕೆ ಮತ್ತು ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡಗಳ ನಡುವೆ ಸೆಣಸಾಟ ನಡೆಯಲಿದೆ. ಹೀಗಾಗಿ ಭಾರತ ಇಂದಿನ ಪಂದ್ಯದಲ್ಲಿ ಬಲಿಷ್ಠ ಆಸೀಸ್‌ ತಂಡವನ್ನು ಎದುರಿಸಲೀದೆ.

    ಮರುಕಳಿಸುವುದೇ 2023ರ ವಿಶ್ವಕಪ್‌ ನೆನಪು:
    2023ರಲ್ಲಿ ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್‌ ಟೂರ್ನಿ ಫೈನಲ್‌ನಲ್ಲಿ ಭಾರತ, ಆಸೀಸ್‌ ತಂಡಗಳು ಮುಖಾಮುಖಿಯಾಗಿದ್ದವು. ಅಂದು ಪ್ಯಾಟ್‌ ಕಮ್ಮಿನ್ಸ್‌ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಅಂದು ಭಾರತ ಆಸೀಸ್‌ ಬಿಗಿ ಬೌಲಿಂಗ್‌ ಹಿಡಿತಕ್ಕೆ ತತ್ತರಿಸಿ 240 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡಿತ್ತು. ಆದ್ರೆ ಟ್ರಾವಿಸ್‌ ಹೆಡ್‌ ಅವರ ಶತಕದಾಟದಿಂದಾಗಿ ಭಾರತಕ್ಕೆ ಸೋಲಾಯಿತು. ಇದು ಇಡೀ ಭಾರತೀಯರಿಗೆ ನೋವುಂಟುಮಾಡಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಭಾರತಕ್ಕೆ ಅವಕಾಶ ಸಿಗುವುದೇ ಅನ್ನೋದನ್ನ ಕಾದುನೋಡಬೇಕಿದೆ.

  • ಇಂದು ಭಾರತ Vs ಕಿವೀಸ್‌ ಹೈವೋಲ್ಟೇಜ್‌ ಕದನ – ಸ್ಪಿನ್ನರ್‌ಗಳ ಚಕ್ರವ್ಯೂಹ ಭೇದಿಸುವುದೇ ಟೀಂ ಇಂಡಿಯಾ?

    ಇಂದು ಭಾರತ Vs ಕಿವೀಸ್‌ ಹೈವೋಲ್ಟೇಜ್‌ ಕದನ – ಸ್ಪಿನ್ನರ್‌ಗಳ ಚಕ್ರವ್ಯೂಹ ಭೇದಿಸುವುದೇ ಟೀಂ ಇಂಡಿಯಾ?

    ದುಬೈ: ತಮ್ಮ ಪಾಲಿನ ಎರಡೂ ಪಂದ್ಯಗಳನ್ನು ಗೆದ್ದು ಸೆಮಿಫೈನಲ್ಸ್‌ಗೆ ಪ್ರವೇಶ ಪಡೆದಿರುವ ಭಾರತ ಮತ್ತು ಬಲಿಷ್ಠ ನ್ಯೂಜಿಲೆಂಡ್‌ (IND vs NZ) ತಂಡಗಳು ಪ್ರಸಕ್ತ ಚಾಂಪಿಯನ್ಸ್‌ ಟ್ರೋಫಿಯಲ್ಲಿ (icc champions trophy) ಸೂಪರ್‌ ಸಂಡೇ ಲೀಗ್‌ ಸುತ್ತಿನ ಕೊನೆಯ ಪಂದ್ಯಗಳನ್ನಾಡಲಿವೆ.

    ಎ-ಗುಂಪಿನಲ್ಲಿ ಸ್ಥಾನ ಪಡೆದಿರುವ ಇವೆರಡೂ ತಂಡಗಳು ಈಗಾಗಲೇ ಸೆಮೀಸ್‌ ಪ್ರವೇಶಿಸಿರುವುದರಿಂದ ಈ ಪಂದ್ಯದ ಫಲಿತಾಂಶ ಯಾವುದೇ ಪ್ರಭಾವ ಬೀರುವುದಿಲ್ಲ. ಆದರೂ ಅಜೇಯವಾಗಿ ಸೆಮೀಸ್‌ ಪ್ರವೇಶಿಸುವ ಅವಕಾಶವನ್ನು ಪಂದ್ಯ ದಯಪಾಲಿಸಿದೆ. ಉಭಯ ತಂಡಗಳು ಈವರೆಗೆ 118 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 60 ಪಂದ್ಯಗಳಲ್ಲಿ ಭಾರತ, 50 ಪಂದ್ಯಗಳಲ್ಲಿ ನ್ಯೂಜಿಲೆಂಡ್‌ (New Zealand) ಗೆಲುವು ಸಾಧಿಸಿದೆ. 7 ಪಂದ್ಯಗಳು ಫಲಿತಾಂಶವಿಲ್ಲದೇ ರದ್ದಾದ್ರೆ, 1 ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ.

    ತಲಾ 4 ಅಂಕ ಗಳಿಸಿದ್ದರೂ ರನ್‌ರೇಟ್‌ ಆಧಾರದಲ್ಲಿ ಕಿವೀಸ್‌ ಎ-ಗುಂಪಿನ ಅಗ್ರಸ್ಥಾನದಲ್ಲಿದ್ದರೆ, ಭಾರತ 2ನೇ ಸ್ಥಾನದಲ್ಲಿದೆ. ಭಾನುವಾರದ ಪಂದ್ಯದಲ್ಲಿ ಭಾರತ (Team India) ಗೆದ್ದರೇ ತನ್ನ ಗುಂಪಿನಿಂದ ಅಗ್ರಸ್ಥಾನಿಯಾಗಿ ಹೊಮ್ಮಲಿದೆ. ವಿಜೇತ ತಂಡ ಸೆಮೀಸ್‌ ಪಂದ್ಯವನ್ನು ಆತ್ಮವಿಶ್ವಾಸದಿಂದ ಎದುರಿಸುವ ಅವಕಾಶವನ್ನು ಪಡೆದುಕೊಳ್ಳಲಿದೆ.

    ಸ್ಪಿನ್ನರ್‌ಗಳ ಚಕ್ರವ್ಯೂಹ ಭೇದಿಸುವುದೇ ಭಾರತ?
    ಹಿಂದಿನ ಪಂದ್ಯಗಳ ಗೆಲುವಿನ ಹೊರತಾಗಿಯೂ ಟೀಂ ಇಂಡಿಯಾ ಬ್ಯಾಟರ್‌ಗಳು ಸ್ಪಿನ್‌ ಬೌಲಿಂಗ್‌ನಲ್ಲಿ ರನ್‌ ಗಳಿಸಲು ತಿಣುಕಾಡಿರುವುದು ತಂಡಕ್ಕೆ ಹಿನ್ನಡೆಯಾಗಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಸ್ಪಿನ್ನರ್‌ಗಳಾದ ಮೆಹಿದಿ ಹಸನ್‌ ಮಿರಾಜ್‌ (0/37) ಮತ್ತು ರಿಷಾದ್‌ ಹೊಸೈನ್‌ (2/38) ಅವರ ಬೌಲಿಂಗ್‌ ದಾಳಿ ಎದುರಿಸುವ ಸಂದರ್ಭ ಭಾರತೀಯ ಬ್ಯಾಟರ್‌ಗಳು ಎಚ್ಚರಿಕೆಯ ಆಟ ಪ್ರದರ್ಶಿಸಿದ್ದರು.

    ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ʻಮಿಸ್ಟರಿ ಸ್ಪಿನ್ನರ್‌ʼ ಎಂದೇ ಬಿರುದಾಂಕಿತ ಲೆಗ್‌ ಸ್ಪಿನ್ನರ್‌ ಅಬ್ರಾರ್‌ ಅಹಮದ್‌ (1/28) ಅವರ ಎಸೆತಗಳನ್ನು ಎದುರಿಸುವಾಗಲೂ ಅದೇ ಎಚ್ಚರಿಕೆ ಮತ್ತು ಸುರಕ್ಷಿತ ಆಟಕ್ಕೆ ರೋಹಿತ್‌ ಪಡೆ ಮುಂದಾಗಿತ್ತು. ಪ್ರತೀ ಎಸೆತಗಳನ್ನು ಕೊಹ್ಲಿ ಎಚ್ಚರಿಕೆಯಿಂದ ಎದುರಿಸುತ್ತಿದ್ದರು. ಆದ್ರೆ ಮಿಚೆಲ್‌ ಸ್ಯಾಂಟ್ನರ್‌ ನೇತೃತ್ವದಲ್ಲಿ ಬಲಿಷ್ಠ ಸ್ಪಿನ್‌ ಪಡೆಯನ್ನು ಹೊಂದಿರುವ ಕಿವೀಸ್‌ನಿಂದ ಭಾರತ ಕಠಿಣ ಸವಾಲನ್ನು ನಿರೀಕ್ಷಿಸಬಹುದಾಗಿದೆ.

    ಪಾಕ್‌ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಕಿವೀಸ್‌ನ ಮಿಚೆಲ್‌ ಸ್ಯಾಂಟ್ನರ್‌ (66ಕ್ಕೆ 3), ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಮೈಕೆಲ್‌ ಬ್ರೇಸ್‌ವೆಲ್‌ (28ಕ್ಕೆ 4) ಎದುರಾಳಿ ತಂಡದ ಬ್ಯಾಟರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ್ದರು. ಹೀಗಾಗಿ ಬ್ಯಾಟಿಂಗ್‌ ಲಯಕ್ಕೆ ಮರಳಿರುವ ಕಿಂಗ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆ.ಎಲ್‌ ರಾಹುಲ್‌, ಶುಭಮನ್‌ ಗಿಲ್‌ ಅವರಿಂದ ಉತ್ತಮ ಪ್ರದರ್ಶನವನ್ನು ತಂಡ ನಿರೀಕ್ಷಿಸಿದೆ.

    ನ್ಯೂಜಿಲೆಂಡ್‌ ಬ್ಯಾಟರ್‌ಗಳ ವಿರುದ್ಧ ರಣತಂತ್ರ
    ಟೀಂ ಇಂಡಿಯಾ ಈವರೆಗೆ ಕಣಕ್ಕಿಳಿಸಿರುವ ಮೂವರು ಸ್ಪಿನ್ನರ್‌ಗಳಾದ ರವೀಂದ್ರ ಜಡೇಜ, ಅಕ್ಷರ್‌ ಪಟೇಲ್‌ ಮತ್ತು ಕುಲ್ದೀಪ್‌ ಯಾದವ್‌ ಹೆಚ್ಚು ವಿಕೆಟ್‌ಗಳನ್ನು ಪಡೆಯದೇ ಇದ್ದರೂ ಎದುರಾಳಿ ಬ್ಯಾಟರ್‌ಗಳನ್ನು ನಿಯಂತ್ರಿಸಿದ್ದಾರೆ. ಅದರಲ್ಲೂ ಪಾಕ್‌ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್‌ ರಿಜ್ವಾನ್‌ ಮತ್ತು ಸೌದ್‌ ಶಕೀಲ್‌ ನೂರಕ್ಕೂ ಹೆಚ್ಚು ರನ್‌ಗಳ ಜೊತೆಯಾಟ ನೀಡಿದರೂ 11-34 ಓವರ್‌ಗಳ ಅವಧಿಯಲ್ಲಿ ಪಾಕ್‌ ರನ್‌ ಗಳಿಕೆ ಹೆಚ್ಚಿಸಲು ಹರಸಾಹಸ ಪಟ್ಟಿತು. ಅದಕ್ಕೆ ಕಾರಣವಾಗಿದ್ದು ಭಾರತೀಯ ಸ್ಪಿನ್‌ ಬೌಲಿಂಗ್‌ ಪಡೆ.

    ನ್ಯೂಜಿಲೆಂಡ್‌ನ ಕೇನ್‌ ವಿಲಿಯಮ್ಸನ್‌, ವಿಲ್‌ ಯಂಗ್‌, ಟಾಮ್‌ ಲಾಥಮ್‌, ಡಿವೋನ್‌ ಕಾನ್ವೆ ಮತ್ತು ರಚಿನ್‌ ರವೀಂದ್ರ ಅವರು ಸ್ಪಿನ್‌ ದಾಳಿಯನ್ನು ಸಮರ್ಥವಾಗಿ ಎದುರಿಸಬಲ್ಲವರಾಗಿದ್ದಾರೆ. ಸದ್ಯ ಇಂದಿನ ಪಂದ್ಯದ ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

  • Champions Trophy | ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಶುಭಮನ್ ಗಿಲ್ ನಾಯಕ?

    Champions Trophy | ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಶುಭಮನ್ ಗಿಲ್ ನಾಯಕ?

    ಅಬುಧಾಬಿ: 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಾ.2ರಂದು ನಡೆಯಲಿರುವ ಭಾರತ ಹಾಗೂ ನ್ಯೂಜಿಲೆಂಡ್ ಪಂದ್ಯಕ್ಕೆ ಶುಭಮನ್ ಗಿಲ್ (Shubman Gill) ನಾಯಕತ್ವ ವಹಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

    ಭಾನುವಾರ ನಡೆಯಲಿರುವ ಗ್ರೂಪ್ `ಎ’ ಅಂತಿಮ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ ಫೆ.23 ರಂದು ನಡೆದ ಭಾರತ ಹಾಗೂ ಪಾಕಿಸ್ತಾನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿದ್ದರು. ಈ ಹಿನ್ನೆಲೆ ರೋಹಿತ್ ಶರ್ಮಾ ಪಂದ್ಯದಿಂದ ಹೊರಗುಳಿಯುವ ನಿರ್ಧಾರ ಕೈಗೊಂಡಲ್ಲಿ ಶುಭಮನ್ ಗಿಲ್ ಭಾರತ ತಂಡವನ್ನು ಮುನ್ನಡೆಸುವಸಾಧ್ಯತೆಯಿದೆ.ಇದನ್ನೂ ಓದಿ:ಕಾಪು ಶ್ರೀಹೊಸ ಮಾರಿಗುಡಿ ಕಂಡು ನಿಬ್ಬೆರಗಾದ ನಟಿ ಶಿಲ್ಪಾ ಶೆಟ್ಟಿ 

    ಜ.18 ಘೋಷಣೆಯಾದ ಚಾಂಪಿಯನ್ಸ್ ಟ್ರೋಫಿಯ ಭಾರತ ತಂಡದಲ್ಲಿ ನಾಯಕನಾಗಿ ರೋಹಿತ್ ಶರ್ಮಾ ಹಾಗೂ ಉಪನಾಯಕನಾಗಿ ಶುಭಮನ್ ಗಿಲ್ ಆಯ್ಕೆಯಾಗಿದ್ದರು. ಇದೀಗ ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಶುಭಮನ್ ಗಿಲ್ ನಾಯಕತ್ವ ವಹಿಸುವ ಸಾಧ್ಯತೆಗಳಿವೆ.

    ಕಳೆದ ವರ್ಷ ಜುಲೈನಲ್ಲಿ ಜಿಂಬಾಬ್ವೆ ವಿರುದ್ಧದ 5 ಟಿ20 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸುವ ಮೂಲಕ ಶುಭಮನ್ ಗಿಲ್ ನಾಯಕತ್ವಕ್ಕೆ ಪಾದಾರ್ಪಣೆ ಮಾಡಿದ್ದರು. ಇದೀಗ ಮೊದಲ ಬಾರಿಗೆ ಏಕದಿನ ಪಂದ್ಯದಲ್ಲಿ ನಾಯಕತ್ವ ವಹಿಸುವ ಸಾಧ್ಯತೆಗಳಿವೆ. ಇತ್ತೀಚಿನ ದಿನಗಳಲ್ಲಿ ಭರ್ಜರಿ ಫಾರ್ಮ್ನಲ್ಲಿರುವ ಗಿಲ್, ಐಸಿಸಿ ಏಕದಿನ ಬ್ಯಾಟ್ಸ್ಮನ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ ಮತ್ತು 2025ರಲ್ಲಿ ಇದುವರೆಗೆ ಆಡಿದ 50 ಓವರ್‌ಗಳ 5 ಪಂದ್ಯಗಳಲ್ಲಿ 2 ಶತಕ ಮತ್ತು 2 ಅರ್ಧಶತಕಗಳಿಂದ ಒಟ್ಟು 406 ರನ್ ಗಳಿಸಿದ್ದಾರೆ.

    ಬಾಂಗ್ಲಾದೇಶ ಮತ್ತು ಪಾಕಿಸ್ತಾನ ವಿರುದ್ಧ ಆಡಿದ ಮೊದಲ ಎರಡು `ಗ್ರೂಪ್ ಎ’ ಪಂದ್ಯಗಳಲ್ಲಿ ಗೆದ್ದು ಭಾರತ ಈಗಾಗಲೇ 2025ರ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ, ಗಿಲ್ ಅಜೇಯರಾಗಿ 101 ಗಳಿಸಿದ್ದರು. ಈ ಮೂಲಕ 46.3 ಓವರ್‌ಗಳಲ್ಲಿ 229 ರನ್‌ಗಳ ಗುರಿಯನ್ನು ತಲುಪಲು ಸಹಾಯ ಮಾಡಿದರು ಮತ್ತು ಭಾನುವಾರ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ, ವಿರಾಟ್ ಕೊಹ್ಲಿ 100 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ಮೂಲಕ 42.3 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 242 ರನ್‌ಗಳನ್ನು ಬೆನ್ನೆಟ್ಟಿತು.ಇದನ್ನೂ ಓದಿ: ಸಿಎಂ, ಕಾಂಗ್ರೆಸ್ ಹೆದರಿಸಲು ಡಿಕೆಶಿ ಹಿಂದುತ್ವದ ವೇಷ ಹಾಕಿದ್ದಾರೆ: ಮುನಿರತ್ನ

     

     

  • ಪಾಕ್ ವಿರುದ್ಧ ಭಾರತದ ಗೆಲುವಿಗಾಗಿ ವಿಶೇಷ ಪೂಜೆ- ಬೆಂಗಳೂರು ಕ್ರೀಡಾಭಿಮಾನಿಗಳಿಂದ ಶುಭ ಹಾರೈಕೆ

    ಪಾಕ್ ವಿರುದ್ಧ ಭಾರತದ ಗೆಲುವಿಗಾಗಿ ವಿಶೇಷ ಪೂಜೆ- ಬೆಂಗಳೂರು ಕ್ರೀಡಾಭಿಮಾನಿಗಳಿಂದ ಶುಭ ಹಾರೈಕೆ

    ಬೆಂಗಳೂರು: ಭಾರತ, ಪಾಕಿಸ್ತಾನ (Ind vs Pak) ಮಾತ್ರವಲ್ಲ ಇಡೀ ವಿಶ್ವವೇ ಇಂದಿನ ಹೈ ವೋಲ್ಟೇಜ್ ಮ್ಯಾಚ್‌ಗಾಗಿ ಕಾಯ್ತಿದೆ. ಇಂದು ದುಬೈ ಕ್ರೀಡಾಂಗಣದಲ್ಲಿ ನಡೆಯಲಿರುವ ಲೀಗ್ ಮ್ಯಾಚ್ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ (Cricket Fans) ಫೈನಲ್ ಮ್ಯಾಚ್ ರೀತಿ ಫೀಲ್ ಕೊಡ್ತಿದೆ. ಟ್ರೋಫಿಗಿಂತ ಇವತ್ತು ಬದ್ಧವೈರಿಗಳ ವಿರುದ್ಧ ಜಯಭೇರಿ ಬಾರಿಸೋದು ಮುಖ್ಯ ಅನ್ನೋದು ಕೋಟ್ಯಂತರ ಅಭಿಮಾನಿಗಳ ಆಶಯವಾಗಿದೆ. ಟೀಂ ಇಂಡಿಯಾ (Team India) ಗೆಲುವಿಗಾಗಿ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.

    ಇವತ್ತು ಮಧ್ಯಾಹ್ನ ಯಾವಾಗ ಆಗುತ್ತೋ, ಮ್ಯಾಚ್ ಯಾವಾಗ ಶುರುವಾಗುತ್ತೋ ಅಂತ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಒಂದೇ ಒಂದು ಬಾಲ್ ಕೂಡ ಮಿಸ್ ಮಾಡ್ದೇ ನೋಡಬೇಕು, ಭಾರತ-ಪಾಕಿಸ್ತಾನದ ವಿರುದ್ಧ ಅಬ್ಬರಿಸಿ ಬೊಬ್ಬಿರೋ ಆಟವನ್ನ ನೋಡಬೇಕು ಅಂತಾ ಎಲ್ಲರೂ ಕಾಯ್ತಿದ್ದಾರೆ. ಇದನ್ನೂ ಓದಿ: ಪ್ರೀತಿಸುತ್ತಿದ್ದ ಹುಡುಗಿ ಕೈಕೊಟ್ಟಿದ್ದಕ್ಕೆ ಸಿಟ್ಟು; ಆಕೆಯ ಗಂಡನಿಗೆ ಇರಿದು ಹತ್ಯೆ ಮಾಡಿದ ಪಾಗಲ್‌ ಪ್ರೇಮಿ

    ಇಂಡಿಯಾ ಪಾಕ್ ಮ್ಯಾಚ್ ಅಂದ್ರೇನೇ ವರ್ಲ್ಡ್ ಕಫ್ ಫೈನಲ್ ಮ್ಯಾಚ್ ಅನ್ನೋ ಫೀಲ್ ಇರುತ್ತೆ. ಇವತ್ತು ಭಾರತ ಪಾಕಿಸ್ತಾನದ ವಿರುದ್ಧ ಗೆದ್ದು ಬೀಗಬೇಕು ಅನ್ನೋ ಬಯಕೆಯಿಂದ ಬ್ಯಾಟರಾಯನಪುರದ ಯುವಕರು ತಮ್ಮ ಗ್ರಾಮದೇವತೆಯ ಪೂಜೆ ಮಾಡಿದ್ದಾರೆ. ಮ್ಯಾಚ್‌ನಲ್ಲಿ ಭಾರತದ ಆಟಗಾರರು ಇನ್ನಷ್ಟು ಸ್ಟ್ರಾಂಗ್ ಆಗಿ ಆಡಲಿ, 2017ರ ಸೇಡನ್ನ ತೀರಿಸಿಕೊಳ್ಳಲಿ ಅನ್ನೋ ಆಸೆಯಿಂದ ಗ್ರಾಮದೇವತೆ ದೊಡ್ಡಮ್ಮ ಮಹೇಶ್ವರಮ್ಮ ದೇವಿಗೆ ಭಾರತ ಕ್ರಿಕೆಟ್ ತಂಡದ ಹೆಸರಲ್ಲಿ ಅರ್ಚನೆ ಮಾಡಿಸಿದ್ದಾರೆ. ಭಾರತ ಗೆದ್ದೇ ಗೆಲ್ಲುತ್ತೆ ಅಂತಾ ಶುಭ ಹಾರೈಸಿದ್ದಾರೆ.

    ಪಾಕಿಸ್ತಾನದ ವಿರುದ್ಧ ಭಾರತದ ಗೆಲುವಿಗಾಗಿ ಇಂದು ಸಹ ನಗರದ ವಿವಿಧ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ. ಗಾಳಿ ಆಂಜನೇಯ ದೇವಸ್ಥಾನ, ಅಣ್ಣಮ್ಮ ದೇವಸ್ಥಾನ ಸೇರಿ ವಿವಿಧ ಮೈದಾನಗಳಲ್ಲಿ ಭಾರತ ತಂಡ, ಆಟಗಾರರಿಗೆ ಅಭಿಮಾನಿಗಳು ಪೂಜೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನವೇ ಭಾರತಕ್ಕೆ ಆಘಾತ – ಪ್ರಾಕ್ಟೀಸ್ ವೇಳೆ ಕೊಹ್ಲಿಗೆ ಮೊಣಕಾಲು ಗಾಯ

    ಒಟ್ಟಾರೆ ಇದು ಬರೀ ಈ ಯುವಕರ ಆಸೆಯಲ್ಲ, ಇಡೀ ಭಾರತೀಯರ ಆಸೆ ಕೂಡ ಆಗಿದೆ. ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲಲಿ, ಇಂದು ಪಾಕಿಸ್ತಾನವನ್ನ ಬಗ್ಗು ಬಡಿಯಲಿ.. ನಮ್ಮ ಕಡೆಯಿಂದಲೂ ಟೀಮ್ ಇಂಡಿಯಾಗೆ ಆಲ್ ದಿ ಬೆಸ್ಟ್. ಇದನ್ನೂ ಓದಿ: ಪಾಕಿಸ್ತಾನಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ – ಸೋತರೆ ಬಹುತೇಕ ಮನೆಗೆ 

  • ಏಕದಿನ ಕ್ರಿಕೆಟ್‌ನಲ್ಲಿ ತೆಂಡೂಲ್ಕರ್ ಹಿಂದಿಕ್ಕಿದ ರೋಹಿತ್ ಶರ್ಮಾ – 11,000 ರನ್ ಪೂರೈಸಿ ದಾಖಲೆ

    ಏಕದಿನ ಕ್ರಿಕೆಟ್‌ನಲ್ಲಿ ತೆಂಡೂಲ್ಕರ್ ಹಿಂದಿಕ್ಕಿದ ರೋಹಿತ್ ಶರ್ಮಾ – 11,000 ರನ್ ಪೂರೈಸಿ ದಾಖಲೆ

    ದುಬೈ: ಏಕದಿನ ಕ್ರಿಕೆಟ್‌ನಲ್ಲಿ (ODI) 11,000 ರನ್ ಗಳಿಸುವ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊಸ ಮೈಲುಗಲ್ಲು ಸೃಷ್ಟಿಸಿದ್ದಾರೆ. ರೋಹಿತ್ 261ನೇ ಇನ್ನಿಂಗ್ಸ್‌ನಲ್ಲಿ 11,000 ರನ್ ಪೂರೈಸಿ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ.

    ಗುರುವಾರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಚಾಂಪಿಯನ್ಸ್ ಟ್ರೋಫಿ (Champions Trophy) ಪಂದ್ಯದಲ್ಲಿ ರೋಹಿತ್ ಶರ್ಮಾ ಈ ಮಹತ್ವದ ಮೈಲಿಗಲ್ಲು ತಲುಪಿದ್ದಾರೆ. ಈ ಪಂದ್ಯದಲ್ಲಿ 12 ರನ್‌ಗಳಿಸುತ್ತಿದ್ದಂತೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 11,000 ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ 11,000 ರನ್ ವೇಗವಾಗಿ ಪೂರೈಸಿದ ಬ್ಯಾಟ್ಸ್‌ಮನ್ ಸಾಲಿನಲ್ಲಿ 2ನೇ ಸ್ಥಾನಕ್ಕೆ ಶರ್ಮಾ ಜಿಗಿದಿದ್ದಾರೆ. ಇದನ್ನೂ ಓದಿ: ಗಿಲ್‌ ಶತಕದಾಟ, ಶಮಿ ಬೆಂಕಿ ಬೌಲಿಂಗ್ – ಬಾಂಗ್ಲಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

    ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 222 ಇನ್ನಿಂಗ್ಸ್‌ಗಳಲ್ಲಿ 11,000 ರನ್ ಪೂರೈಸುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. 276ನೇ ಇನ್ನಿಂಗ್ಸ್‌ನಲ್ಲಿ 11,000 ರನ್ ಪೂರೈಸಿ ಸಚಿನ್ ಎರಡನೇ ಸ್ಥಾನದಲ್ಲಿದ್ದರು. ಇದೀಗ ರೋಹಿತ್ ಶರ್ಮಾ ಅವರ ದಾಖಲೆ ಮುರಿದು ಎರಡನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಸ್ಟಾರ್ಕ್‌ ದಾಖಲೆ ಉಡೀಸ್‌ – ಕಡಿಮೆ ಎಸೆತಗಳಲ್ಲಿ 200 ವಿಕೆಟ್‌ ಪಡೆದು ಶಮಿ ರೆಕಾರ್ಡ್‌

    ಚಾಂಪಿಯನ್ಸ್ ಟ್ರೋಫಿಯ ಇಂದಿನ ಪಂದ್ಯದಲ್ಲಿ ನಾಲ್ಕನೇ ಓವರ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ ಹಿಟ್‌ಮ್ಯಾನ್ ವಿಶೇಷ ಮೈಲಿಗಲ್ಲು ತಲುಪಿದರು. ಕೊಹ್ಲಿ 11,831 ಎಸೆತಗಳಲ್ಲಿ 11,000 ರನ್ ಪೂರೈಸಿದ್ದರೆ, ರೋಹಿತ್ ಶರ್ಮಾ 11,868 ಎಸೆತಗಳಲ್ಲಿ 11,000 ರನ್ ಕಲೆಹಾಕಿದ್ದಾರೆ. ಇದನ್ನೂ ಓದಿ: ಬ್ಯಾಂಕ್ ಹಗರಣ – ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬಿಗ್ ರಿಲೀಫ್!

  • ಇಂದಿನಿಂದ ಚಾಂಪಿಯನ್ಸ್ ಟ್ರೋಫಿ – ಭಾರತದ ಮೂವರು ʻಚಾಂಪಿಯನ್ಸ್‌ʼಗೆ ಕೊನೇ ಟೂರ್ನಿ!

    ಇಂದಿನಿಂದ ಚಾಂಪಿಯನ್ಸ್ ಟ್ರೋಫಿ – ಭಾರತದ ಮೂವರು ʻಚಾಂಪಿಯನ್ಸ್‌ʼಗೆ ಕೊನೇ ಟೂರ್ನಿ!

    ಇಸ್ಲಾಮಾಬಾದ್‌: 8 ರಾಷ್ಟ್ರಗಳು ಭಾಗವಹಿಸಿರುವ ಐಸಿಸಿ ಪ್ರಾಯೋಜಿತ ಚಾಂಪಿಯನ್ಸ್ ಟ್ರೋಫಿ (Champions Trophy 2025) ಕ್ರೀಡಾಕೂಟ ಇಂದಿನಿಂದ ಶುರುವಾಗುತ್ತಿದೆ. ಮೊದಲ ಪಂದ್ಯ ಆತಿಥೇಯ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ (Pak vs NZ) ವಿರುದ್ಧ ಕರಾಚಿ ಮೈದಾನದಲ್ಲಿ ಮಧ್ಯಾಹ್ನ 2:30ಕ್ಕೆ ಆರಂಭವಾಗಲಿದೆ.

    ಎ- ಗುಂಪಿನಲ್ಲಿ ಭಾರತ, ನ್ಯೂಜಿಲೆಂಡ್‌, ಪಾಕಿಸ್ತಾನ, ಬಾಂಗ್ಲಾದೇಶ ಇದ್ದರೆ, ಬಿ-ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್‌ ತಂಡಗಳಿವೆ. ಭಾರತ ತನ್ನ ಮೊದಲ ಪಂದ್ಯವನ್ನು ದುಬೈನಲ್ಲಿ ಫೆ.20ರಂದು ಬಾಂಗ್ಲಾದೇಶದ ವಿರುದ್ಧ ಆಡಲಿದೆ ಮತ್ತು ಪಾಕಿಸ್ತಾನದ ವಿರುದ್ದದ ಹೈವೋಲ್ಟೇಜ್ ಪಂದ್ಯ ಫೆ.23ರ ಸೂಪರ್‌ ಸಂಡೇನಲ್ಲಿ ನಡೆಯಲಿದೆ.

    ನೇರ ಪ್ರಸಾರ ಎಲ್ಲಿ?
    ಸ್ಟಾರ್ ಸ್ಫೋಟ್ಸ್‌ ವಾಹಿನಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ. ಜಿಯೋಹಾಟ್‌ಸ್ಟಾರ್ (ಆಪ್‌) ಚಾಂಪಿಯನ್ಸ್ ಟ್ರೋಫಿ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಮಾಡಲಿದೆ.

    ಭಾರತದ ಮೂವರಿಗೆ ಕೊನೆಯ ಆಟ?
    ಹೌದು. ಏಕದಿನ ಮಾದರಿಯ ಚಾಂಪಿಯನ್ಸ್‌ ಟ್ರೋಫಿ ಟೀಂ ಇಂಡಿಯಾ (Team India) ದಿಗ್ಗಜರಾದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರಿಗೆ ಕೊನೆಯ ಟೂರ್ನಿ ಆಗುವ ಎಲ್ಲಾ ಸಾಧ್ಯತೆಗಳೂ ಇವೆ. ಕಳೆದ ವರ್ಷಾಂತ್ಯದಲ್ಲಿ ಆಸೀಸ್‌ ವಿರುದ್ಧ ಬಾರ್ಡರ್‌ ಗವಾಸ್ಕರ್‌ ಟೆಸ್ಟ್‌ ಟ್ರೋಫಿಯಲ್ಲಿ ಭಾರತ ಹೀನಾಯ ಸೋಲು ಕಂಡ ಬಳಿಕ ರೋಹಿತ್‌ ಟೆಸ್ಟ್‌, ಏಕದಿನ ಕ್ರಿಕೆಟ್‌ಗೂ ವಿದಾಯ ಹೇಳೋದಕ್ಕೆ ಮುಂದಾಗಿದ್ದರು. ಆದ್ರೆ ಬಿಸಿಸಿಐ ಒತ್ತಾಯದ ಮೇರೆಗೆ ಮುಂದುವರಿದಿದ್ದಾರೆ ಎಂದು ವರದಿಯಾಗಿದೆ. 2013ರಲ್ಲಿ ಎಂ.ಎಸ್‌ ಧೋನಿ ನಾಯಕತ್ವದಲ್ಲಿ ಭಾರತ ಟ್ರೋಫಿಗೆ ಮುತ್ತಿಟ್ಟಾಗಲೂ ಈ ಮೂವರು ಟೂರ್ನಿಯಲ್ಲಿದ್ದರು. ಈ ಬಾರಿ ಟ್ರೋಫಿ ಗೆದ್ದು ಗೆಲುವಿನ ವಿದಾಯ ಹೇಳುವರೇ ಎಂಬುದನ್ನು ಕಾದುನೋಡಬೇಕಿದೆ.

    ಕೊಹ್ಲಿ, ರೋಹಿತ್‌ ಫಾರ್ಮ್‌ನದ್ದೇ ಚಿಂತೆ:
    2024ರ ಟಿ20 ವಿಶ್ವಕಪ್‌ ಟೂರ್ನಿ ಬಳಿಕ ರೋಹಿತ್‌, ಕೊಹ್ಲಿ, ಜಡ್ಡು ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಆದ್ರೆ ಏಕದಿನ, ಟೆಸ್ಟ್‌ ಮಾದರಿಯ ಕ್ರಿಕೆಟ್‌ನಲ್ಲಿ ಮುಂದುವರಿದಿದ್ದಾರೆ. ಜಡೇಜಾ ಎಂದಿನಂತೆ ತಮ್ಮ ಬೌಲಿಂಗ್‌, ಬ್ಯಾಟಿಂಗ್‌ನಲ್ಲಿ ಸಾಮರ್ಥ್ಯ ಪ್ರದರ್ಶನ ತೋರಿದ್ದಾರೆ. ಆದ್ರೆ ಕಳೆದ ವರ್ಷಾಂತ್ಯದಲ್ಲಿ ಆಸೀಸ್‌ ವಿರುದ್ಧ ನಡೆದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಶತಕ ಸಿಡಿಸಿದ್ದ ಕೊಹ್ಲಿ ಬಳಿಕ ಕಳಪೆ ಫಾರ್ಮ್‌ ಮುಂದುವರಿಸಿದ್ರು. ರಣಜಿ ಕ್ರಿಕೆಟ್‌ನಲ್ಲೂ ತಮ್ಮ ಸಾಮರ್ಥ್ಯ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದರು. ಮತ್ತೊಂದೆಡೆ ಆಸೀಸ್‌ ವಿರುದ್ಧದ ಟೆಸ್ಟ್‌ನಿಂದ ನಿರಂತರ ಕಳಪೆ ಫಾರ್ಮ್‌ ಮುಂದುವರಿಸಿದ್ದರು. ಆದ್ರೆ ಇಂಗ್ಲೆಂಡ್‌ ವಿರುದ್ಧ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ರು, ಅದೇ ರೀತಿ ಸರಣಿಯ 3ನೇ ಪಂದ್ಯದಲ್ಲಿ ಕೊಹ್ಲಿ ಕೂಡ ಅರ್ಧಶತಕ ಸಿಡಿಸಿ ಟೀಕೆಗಳಿಗೆ ಬ್ಯಾಟ್‌ ಮೂಲಕ ಉತ್ತರ ಕೊಟ್ಟರು. ಇದೀಗ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅದೇ ಫಾರ್ಮ್‌ ಮುಂದುವರಿಸಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

    ಗಂಭೀರ್‌ ನಾಯಕತ್ವಕ್ಕೂ ಸವಾಲು:
    2024ರ ಟಿ20 ವಿಶ್ವಕಪ್‌ ಟೂರ್ನಿ ಬಳಿಕ ಟೀಂ ಇಂಡಿಯಾ ಮುಖ್ಯಕೋಚ್‌ ಆಗಿ ಗೌತಮ್‌ ಗಂಭೀರ್‌ ಅಧಿಕಾರ ವಹಿಸಿಕೊಂಡನಂತರ ಭಾರತ ಏಕದಿನ ಹಾಗೂ ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಂಪೂರ್ಣ ನೆಲ ಕಚ್ಚಿತ್ತು. ಶ್ರೀಲಂಕಾ ವಿರುದ್ಧ ಏಕದಿನ ಸರಣಿ, ನ್ಯೂಜಿಲೆಂಡ್‌, ಆಸೀಸ್‌ ವಿರುದ್ಧದ ಸರಣಿಗಳನ್ನು ಸೋತಿತ್ತು. ಬಿಸಿಸಿಐ ಆಟಗಾರರಿಗೆ ಕಟ್ಟುನಿಟ್ಟಿನ ನಿಯಮಗಳನ್ನು ವಿಧಿಸಿದ ಬಳಿಕ ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧ ನಡೆಸಿದ್ದ ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡಿಕೊಂಡಿತ್ತು. ಇನ್ನೂ ಗಂಭೀರ್‌ ನೇತೃತ್ವದಲ್ಲಿ ಭಾರತ ಎದುರಿಸುತ್ತಿರುವ ಮೊದಲ ಐಸಿಸಿ ಟೂರ್ನಿ ಇದಾಗಿದೆ. ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಟ್ರೋಫಿ ಗೆಲುವು ಅನಿವಾರ್ಯವೂ ಆಗಿದೆ.

  • ಭಾರತಕ್ಕೆ ರನ್‌ಗಳ ʻಅಭಿಷೇಕʼ – ಇಂಗ್ಲೆಂಡ್‌ ವಿರುದ್ಧ 4-1 ಅಂತರದಲ್ಲಿ ಸರಣಿ ಜಯ

    ಭಾರತಕ್ಕೆ ರನ್‌ಗಳ ʻಅಭಿಷೇಕʼ – ಇಂಗ್ಲೆಂಡ್‌ ವಿರುದ್ಧ 4-1 ಅಂತರದಲ್ಲಿ ಸರಣಿ ಜಯ

    – ಸರಣಿಯ ಕೊನೇ ಪಂದ್ಯದಲ್ಲಿ 150 ರನ್‌ಗಳ ಭರ್ಜರಿ ಗೆಲುವು

    ಮುಂಬೈ: ಸೂಪರ್‌ ಸಂಡೆ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ (England) ವಿರುದ್ಧ ನಡೆದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ (Team India) 150 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ 5 ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಲ್ಲಿ ಗೆದ್ದುಕೊಂಡಿದೆ. ಅಲ್ಲದೇ 2019ರ ಬಳಿಕ ಒಂದೇ ಒಂದು ಟಿ20 ಸರಣಿಯನ್ನೂ ಸೋಲದ ಭಾರತ ಗೆಲುವಿನ ಪರಂಪರೆಯನ್ನು ಮುಂದುವರಿಸಿದೆ.

    ಗೆಲುವಿಗೆ 248 ರನ್‌ಗಳ‌ ಬೃಹತ್‌ ಗುರಿ ಪಡೆದ ಇಂಗ್ಲೆಂಡ್‌ 10.3 ಓವರ್‌ಗಳಲ್ಲೇ 97 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು.

    ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಇಂಗ್ಲೆಂಡ್‌ ಮೊದಲ ಓವರ್‌ನಿಂದಲೇ ಪ್ರತಿದಾಳಿ ನಡೆಸಲು ಶುರು ಮಾಡಿತು. ಆರಂಭಿಕ ಆಟಗಾರ ಫಿಲ್‌ ಸಾಲ್ಟ್‌ 2 ಬೌಂಡರಿ, 1 ಸಿಕ್ಸರ್‌ನೊಂದಿಗೆ 17 ರನ್‌ ಚಚ್ಚಿದರು. ಇದರಿಂದ ಇಂಗ್ಲೆಂಡ್‌ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದ್ರೆ 4ನೇ ಓವರ್‌ನಲ್ಲಿ ಮೊದಲ ಎಸೆತದಲ್ಲೇ ಬೆನ್‌ ಡಕೆಟ್‌ ವಿಕೆಟ್‌ ಬೀಳುತ್ತಿದ್ದಂತೆ ಇಂಗ್ಲೆಂಡ್‌ ಆಟಗಾರರು ಪೆವಿಲಿಯನ್‌ ಪರೇಡ್‌ ನಡೆಸಿದರು.

    ಇಂಗ್ಲೆಂಡ್‌ ಪರ ಏಕಾಂಗಿ ಹೋರಾಟ ನಡೆಸಿದ ಫಿಲ್‌ ಸಾಲ್ಟ್‌ 23 ಎಸೆತಗಳಲ್ಲಿ 53 ರನ್‌ (3 ಸಿಕ್ಸರ್‌, 7 ಬೌಂಡರಿ) ಗಳಿಸಿದ್ರೆ ಉಳಿದೆಲ್ಲ ಆಟಗಾರರು ಅಲ್ಪ ಮೊತ್ತಕ್ಕೆ ನೆಲ ಕಚ್ಚಿದರು. ಇನ್ನೂ ಇಂಗ್ಲೆಂಡ್‌ ವಿರುದ್ಧ ಸಂಘಟಿತ ಬೌಲಿಂಗ್‌ ದಾಳಿ ನಡೆಸಿದ ಟೀಂ ಇಂಡಿಯಾ ಪರ ಮೊಹಮ್ಮದ್‌ ಶಮಿ 3 ವಿಕೆಟ್‌ ಕಿತ್ತರೆ, ವರುಣ್‌ ಚಕ್ರವರ್ತಿ, ಶಿವಂ ದುಬೆ, ಅಭಿಷೇಕ್‌ ಶರ್ಮಾ (Abhishek Sharma), ತಲಾ 2 ವಿಕೆಟ್‌ ಹಾಗೂ ರವಿ ಬಿಷ್ಣೋಯಿ ಒಂದು ವಿಕೆಟ್‌ ಪಡೆದು ಮಿಂಚಿದರು.

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಬೃಹತ್ ಮೊತ್ತವನ್ನೇ ಕಲೆ ಹಾಕಿತು. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ನಡೆಸಿದೆ. ಒಂದರ ಮೇಲೆ ಒಂದರಂತೆ ಲೀಲಾಜಾಲವಾಗಿ ಸಿಕ್ಸರ್ ಸಿಡಿಸಿದ ಅಭಿಷೇಕ್ ಶರ್ಮಾ, ಕೇವಲ 37 ಎಸೆತಗಳಲ್ಲಿ ಶತಕ ಸಿಡಿಸಿದರು.

    ಇದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ ಶತಕ ಸಿಡಿಸಿದ ಭಾರತ ತಂಡದ ಎರಡನೇ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಂಡರು. ಜೊತೆಗೆ ಟಿ20 ಕ್ರಿಕೆಟ್‌ನಲ್ಲಿ ತಮ್ಮ 2ನೇ ಶತಕ ದಾಖಲಿಸಿದರು. ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್ ಕಂಡು ವಾಖೆಂಡೆ ಮೈದಾನದಲ್ಲಿ ನೆರೆದಿದ್ದ ಪ್ರೇಕ್ಷಕರು ಸಂಭ್ರಮಿಸಿದರು. ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವ ಮೂಲಕ ಸಂಜು ಸ್ಯಾಮ್ಸನ್‌ ಇಂಗ್ಲೆಂಡ್ ಬೌಲರ್‌ಗಳ ಮೇಲೆ ಪ್ರಹಾರ ನಡೆಸಿದರು.

    ಅಂತಿಮವಾಗಿ ಭಾರತ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 247 ರನ್ ಕಲೆಹಾಕಿತು. ಭಾರತದ ಪರ ಅಭಿಷೇಕ್‌ ಶರ್ಮಾ 135 ರನ್‌ (54 ಎಸೆತ, 13 ಸಿಕ್ಸರ್‌, 7 ಬೌಂಡರಿ), ಶಿವಂ ದುಬೆ 30 ರನ್‌, ತಿಲಕ್‌ ವರ್ಮಾ 24 ರನ್‌, ಸಂಜು ಸ್ಯಾಮ್ಸನ್‌ 16 ರನ್‌, ಅಕ್ಷರ್‌ ಪಟೇಲ್‌ 15 ರನ್‌, ಸೂರ್ಯಕುಮಾರ್‌ ಯಾದವ್‌ 2 ರನ್‌, ಹಾರ್ದಿಕ್‌ ಪಾಂಡ್ಯ ಮತ್ತು ರಿಂಕು ಸಿಂಗ್‌ ತಲಾ 9 ರನ್‌ ಗಳಿಸಿದ್ರು.

    ಇಂಗ್ಲೆಂಡ್ ಪರ ಬ್ರೇಯ್ಸನ್ ಕರ್ಸ್ ಮೂರು ವಿಕೆಟ್ ಹಾಗೂ ಮಾರ್ಕ್ ವುಡ್ ಎರಡು ವಿಕೆಟ್ ಕಿತ್ತರು. ಜೋಪ್ರಾ ಆರ್ಚರ್, ಜೇಮೀ ಓವರ್ಟನ್ ಮತ್ತು ಆದಿಲ್ ರಶೀದ್ ಒಂದೊಂದು ವಿಕೆಟ್ ಪಡೆದರು.