Tag: ರ್ಯಾಪಿಡೋ

  • ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌

    ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌

    ಬೆಂಗಳೂರು: ಖಾಸಗಿ ಬಸ್‌ಗಳನ್ನ (Private Bus) ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ನೀಡಬೇಕು, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನ ಆಗ್ರಹಿಸಿ ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದ ಖಾಸಗಿ ಸಾರಿಗೆ ಒಕ್ಕೂಟ ಮಧ್ಯಾಹ್ನದ ವೇಳೆಗೆಲ್ಲಾ ಬಂದ್ ವಾಪಸ್ ಪಡೆದಿದೆ.

    ಇಂದಿನ ಪ್ರತಿಭಟನೆಯಲ್ಲಿ ಪೊಲೀಸರು ಒಟ್ಟು 13 ಪ್ರಕರಣಗಳನ್ನ ದಾಖಲಿಸಿದ್ದಾರೆ. 13 ಕೇಸ್‌ ದಾಖಲಿಸಿ ಕಾನೂನು ಉಲ್ಲಂಘನೆ ಮಾಡಿದ 12 ಮಂದಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ – ಬೆಂಗಳೂರು ಬಂದ್ ವಾಪಸ್

    ಕೇಂದ್ರ ವಿಭಾಗದಲ್ಲಿ 1 ಕೇಸ್, ಆಗ್ನೇಯ ವಿಭಾಗದಲ್ಲಿ 1 ಕೇಸ್, ಉತ್ತರ ವಿಭಾಗದಲ್ಲಿ 2 ಕೇಸ್, ಈಶಾನ್ಯ ವಿಭಾಗದಲ್ಲಿ 2 ಕೇಸ್, ಹಾಗೂ ಪಶ್ಚಿಮ ವಿಭಾಗದಲ್ಲಿ 7 ಪ್ರಕರಣಗಳು ದಾಖಲಾಗಿವೆ. ಒಟ್ಟು 13 ಕೇಸ್‌ನಲ್ಲಿ 12 ಜನರನ್ನ ಅರೆಸ್ಟ್ ಮಾಡಿರುವ ನಗರ ಪೊಲೀಸರು (Bengaluru City Police) ವಿಚಾರಣೆಗೊಳಪಡಿಸಿದ್ದಾರೆ. ಇದನ್ನ ಹೊರತುಪಡಿಸಿದ್ರೆ ಬಹುತೇಕ ಬಂದ್ ಶಾಂತಿಯುತವಾಗಿ ನಡೆದಿದ್ದು, ಖಾಸಗಿ ಸಾರಿಗೆಗಳು ತಮ್ಮ ಬೇಡಿಕೆಯನ್ನ ಸರ್ಕಾರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಿದ್ದಾರೆ.

    ಸೋಮವಾರ ಮಧ್ಯಾಹ್ನ ಸಚಿವ ರಾಮಲಿಂಗಾರೆಡ್ಡಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿರುವುದಾಗಿ ಖಾಸಗಿ ಸಾರಿಗೆ ಒಕ್ಕೂಟ ತಿಳಿಸಿದೆ. ಇದನ್ನೂ ಓದಿ: ಫುಡ್‌ ಡೆಲಿವರಿ ಬಾಯ್ಸ್‌ ಸೇರಿದಂತೆ ಎಲ್ಲಾ ಗಿಗ್‌ ಕಾರ್ಮಿಕರಿಗೆ 4 ಲಕ್ಷ ವಿಮೆ ಘೋಷಣೆ

    ಪ್ರಮುಖ ಬೇಡಿಕೆ ಏನಿತ್ತು?
    – ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
    – 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
    – ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
    – 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
    – ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
    – ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
    – ಚಾಲಕರಿಗೆ ವಸತಿ ಯೋಜನೆ ನೀಡಬೇಕು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ – ಬೆಂಗಳೂರು ಬಂದ್ ವಾಪಸ್

    ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ – ಬೆಂಗಳೂರು ಬಂದ್ ವಾಪಸ್

    ಬೆಂಗಳೂರು: ಖಾಸಗಿ ಬಸ್‌ಗಳನ್ನ (Private Bus) ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ನೀಡಬೇಕು, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನ ಆಗ್ರಹಿಸಿ ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದ ಖಾಸಗಿ ಸಾರಿಗೆ ಒಕ್ಕೂಟ ಮಧ್ಯಾಹ್ನದ ವೇಳೆಗೆಲ್ಲಾ ಬಂದ್ ವಾಪಸ್ ಪಡೆದಿದೆ.

    ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಬೇಡಿಕೆಗಳನ್ನ ಈಡೇರಿಸುವ ಭರವಸೆ ನೀಡಿದ್ದಾರೆ. ಇದರಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿರುವುದಾಗಿ ಖಾಸಗಿ ಸಾರಿಗೆ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ತಿಳಿಸಿದ್ದಾರೆ. ಸೋಮವಾರ ಮಧ್ಯರಾತ್ರಿ 12 ಗಂಟೆವರೆಗೂ ಇದ್ದ ಬಂದ್ ಮಧ್ಯಾಹ್ನ 3 ಗಂಟೆ ವೇಳೆಗೆ ಕೈಬಿಡಲಾಗಿದೆ. ಇದರಿಂದ ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ಎಂದಿನಂತೆ ರಸ್ತೆಗಿಳಿದಿದ್ದು, ಬೆಂಗಳೂರಿನ ಜನ ನಿಟ್ಟುಸಿರು ಬಿಡುವಂತಾಗಿದೆ. ಇದನ್ನೂ ಓದಿ: ನಾಳೆಯಿಂದ ಬೆಂಗಳೂರಿನ ಗಾರ್ಡನ್‌ ಟರ್ಮಿನಲ್‌ನಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಟೇಕಾಫ್‌, ಲ್ಯಾಂಡಿಂಗ್‌

    ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನಾ ನಿರತರ ಮನವಿ ಸ್ವೀಕರಿಸಿ ಮಾತನಾಡಿರುವ ಸಚಿವ ರಾಮಲಿಂಗಾರೆಡ್ಡಿ, 37 ಸಂಘಟನೆಯವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೀರಿ. ನನ್ನನ್ನೂ ನಿಮ್ಮ ಜೊತೆ ಸೇರಿಸಿಕೊಳ್ಳಿ. ನಿಮ್ಮ ಬೇಡಿಕೆಗಳಲ್ಲಿ ಶಕ್ತಿ ಯೋಜನೆ ಹಾಗೂ ತೆರಿಗೆ ಎರಡು ಬೇಡಿಕೆ ನಮ್ಮ ಸರ್ಕಾರದಿಂದ ಆಗಿರುವ ಸಮಸ್ಯೆ. ಉಳಿದೆಲ್ಲಾ ಬೇಡಿಕೆಗಳು ಎಲ್ಲಾ ಹಿಂದಿನ ಸರ್ಕಾರದಲ್ಲಿ ಆಗಿರುವುದು. ಆದಾಗ್ಯೂ ಈ ಬೇಡಿಕೆಗಳನ್ನ ಈಡೇರಿಸುವುದಾಗಿ ಹೇಳಿದ್ದೇನೆ, ಈಡೇರಿಸುತ್ತೆನೆ ಎಂದು ಭರವಸೆ ನೀಡಿದ್ದಾರೆ.

    ಚಾಲಕರ ನಿಗಮ ಮಾಡಬೇಕು ಅಂತಾ ಬೇಡಿಕೆ ಇದೆ, ಖಂಡಿತವಾಗಿಯೂ ಮಾಡುತ್ತೇವೆ. ಇಂದಿರಾ ಕ್ಯಾಂಟಿನ್ ಓಪನ್ ಮಾಡ್ತೇವೆ. ಅಗ್ರಿಗೇಟರ್ ಆ್ಯಪ್ ಮಾಡಬೇಕೆಂಬ ಬೇಡಿಕೆಯಿದೆ. ಅದನ್ನೂ ಈಡೇರಿಸುತ್ತೇವೆ. ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡುವ ಬೇಡಿಕೆ ನಿಮ್ಮ ನಿಗಮ ಸ್ಥಾಪನೆಯಾದ್ರೆ ಕೊಡಬಹುದು. ಟ್ಯಾಕ್ಸಿ ಮಾಲೀಕರ ಸಂಘದ ಬೇಡಿಕೆಗಳನ್ನೂ ಮುಖ್ಯಮಂತ್ರಿಗಳ ಮುಂದಿಟ್ಟು ಪರಿಹಾರ ಒದಗಿಸುವ ಕೆಲಸ ಮಾಡ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ಮಧ್ಯೆ ಬಂದ ರ‍್ಯಾಪಿಡೋ ಬೈಕ್ ಸವಾರನಿಗೆ ಬಿತ್ತು ಗೂಸಾ

    ಸದ್ಯ ಓಲಾ, ಊಬರ್, ಬೈಕ್ ಟ್ಯಾಕ್ಸಿ ಬೇಡಿಕೆ ಕೋರ್ಟ್ನಲ್ಲಿದೆ. ನಾವು ಸೀನಿಯರ್ ಅಡ್ವೋಕೇಟ್ ನೇಮಿಸಿ ತೆರವು ಮಾಡುವ ಕೆಲಸ ಮಾಡ್ತೇವೆ. ಚಾಲಕರಿಗೆ ವಸತಿ ಯೋಜನೆ ಬೇಡಿಕೆ ಇದೆ ಜಮೀರ್ ಅಹಮದ್ ಅವರ ಜೊತೆ ಮಾತಾಡ್ತೆವೆ, ಚಾಲಕರ ಮಕ್ಕಳ ವಿಧ್ಯಾಭ್ಯಾಸಕ್ಕೆ 17 ಕೋಟಿ ರೂ. ಅನುದಾನ ಇಟ್ಟಿದ್ದೆವೆ, ಖಾಸಗಿ ವಾಹನಗಳನ್ನ ಕಿಮೀ ರೀತಿಯಲ್ಲಿ ತೆಗೆದುಕೊಳ್ಳೊ ಬೇಡಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಪ್ರಮುಖ ಬೇಡಿಕೆ ಏನಿತ್ತು?
    – ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
    – 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
    – ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
    – 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
    – ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
    – ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
    – ಚಾಲಕರಿಗೆ ವಸತಿ ಯೋಜನೆ ನೀಡಬೇಕು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bengaluru Bandh – ಇಂದು ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಮರ

    Bengaluru Bandh – ಇಂದು ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಮರ

    – ವಿವಿಧ ಬೇಡಿಕೆಗಳ ಈಡೇರಿಕೆಗೆ ಖಾಸಗಿ ಪಟ್ಟು

    ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ (Private Transport Association) ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ್ದು ಮಧ್ಯರಾತ್ರಿಯಿಂದಲೇ ಬಂದ್‌ ಬಿಸಿ ಶುರುವಾಗಿದೆ.

    ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯುತ್ತಿಲ್ಲ. ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಒಕ್ಕೂಟ ಆಯೋಜಿಸಿದೆ.

    ಬಂದ್ ಯಶಸ್ಸಿಗಾಗಿ ಖಾಸಗಿ ಸಾರಿಗೆ ಒಕ್ಕೂಟ ಪಣತೊಟ್ಟಿದೆ. ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಒಂದರಲ್ಲೇ 250ಕ್ಕೂ ಹೆಚ್ಚು ಬಸ್ ಸ್ತಬ್ದವಾಗಲಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ನೆರೆಯ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಇದರ ಪರಿಣಾಮ ಬೆಂಗಳೂರು ಜನಜೀವನದ ಮೇಲೆ ಸ್ವಲ್ಪ ಮಟ್ಟಿಗೆ ಬೀರುವ ಸಂಭವ ಇದೆ.  ಇದನ್ನೂ ಓದಿ: ಸನಾತನ ಧರ್ಮದವರನ್ನು ಕಾಗೆಗಳಿಗೆ ಹೋಲಿಸಿದ ಪ್ರಕಾಶ್ ರಾಜ್

    ಖಾಸಗಿ ಸಮರ ಎದುರಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು, ಸರ್ವಾಜನಿಕರಿಗೆ ಯಾವುದೇ ಸಮಸ್ಯೆ ಆಗದೇ ಇರಲು ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಲು ಇಲಾಖೆ ಪ್ಲಾನ್‌ ಮಾಡಿದೆ. ಬಂದ್‌ನಿಂದ ಜನರಿಗೆ ತೊಂದರೆ ಆಗುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೇಳಿದ್ದಾರೆ.

    ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿರುವ ಬೆಂಗಳೂರು ಬಂದ್ ಬಗ್ಗೆ ಆಟೋ ಚಾಲಕರು ಬೆಂಬಲ ನೀಡಿದ್ದಾರೆ. ಸಾರಿಗೆ ಒಕ್ಕೂಟ ಕರೆದಿರುವ ಬಂದ್‌ಗೆ ನಾವು ಬೆಂಬಲ ನೀಡುತ್ತೇವೆ. ಶಕ್ತಿಯೋಜನೆ (Shakti Scheme) ಜಾರಿಯಾದ  ದಿನದಿಂದ ನಮಗೆ ಸಮಸ್ಯೆ ಆಗುತ್ತಿದೆ. ಅಷ್ಟೇ ಅಲ್ಲದೇ ರ‍್ಯಾಪಿಡೋ ಬಂದ್ ಮಾಡುವ ನಿರ್ಧಾರ ಸರ್ಕಾರ ಮಾಡಬೇಕು. ಯಾವುದೇ ಟ್ಯಾಕ್ಸ್ ಕೊಡದೇ ಅವರು ಬಾಡಿಗೆ ಹೋಗುತ್ತಿದ್ದಾರೆ. ಹಾಗಾಗಿ ರ‍್ಯಾಪಿಡೋ ವಾಹನಗಳನ್ನ ಬಂದ್ ಮಾಡಬೇಕು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.

    ಪ್ರಮುಖ ಬೇಡಿಕೆಗಳೇನು?
    – ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
    – 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
    – ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
    – 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
    – ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
    – ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
    – ಚಾಲಕರಿಗೆ ವಸತಿ ಯೋಜನೆ ನೀಡಬೇಕು

    ಏನೆಲ್ಲಾ ಇರಲ್ಲ?
    ಆಟೋ, ಖಾಸಗಿ ಟ್ಯಾಕ್ಸಿ, ಏರ್‌ಪೋರ್ಟ್ ಟ್ಯಾಕ್ಸಿ, ಶಾಲೆಗಳ ಖಾಸಗಿ ವಾಹನ, ಖಾಸಗಿ ಬಸ್, ಗೂಡ್ಸ್ ವಾಹನ

    ಏನೆಲ್ಲಾ ಇರುತ್ತೆ?
    ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಸರ್ಕಾರಿ ಟ್ಯಾಕ್ಸಿ (ಕೆಎಸ್‌ಟಿಡಿಸಿ), ರೈಲು, ಖಾಸಗಿ ಶಾಲೆ, ಚಿತ್ರರಂಗದ ಚಟುವಟಿಕೆ


    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಟೋ ಚಾಲಕರ ನಿರ್ಲಕ್ಷ್ಯ ಆರೋಪ- ಬೇಡಿಕೆಗಳ ಈಡೇರಿಕೆಗೆ ಬಂದ್ ಎಚ್ಚರಿಕೆ ಕೊಟ್ಟ ಒಕ್ಕೂಟ

    ಆಟೋ ಚಾಲಕರ ನಿರ್ಲಕ್ಷ್ಯ ಆರೋಪ- ಬೇಡಿಕೆಗಳ ಈಡೇರಿಕೆಗೆ ಬಂದ್ ಎಚ್ಚರಿಕೆ ಕೊಟ್ಟ ಒಕ್ಕೂಟ

    ಬೆಂಗಳೂರು: ಬಜೆಟ್‍ನಲ್ಲಿ (Budget) ಆಟೋ (Auto) ಚಾಲಕರನ್ನು ನಿರ್ಲಕ್ಷಿಸಲಾಗಿದೆ ಎಂದು ಆಟೋ ಚಾಲಕರ ಸಂಘಟನೆಗಳ ಒಕ್ಕೂಟ ಆರೋಪಿಸಿದೆ. ಅಲ್ಲದೇ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಈಡೇರಿಸುವಂತೆ ಆಗ್ರಹಿಸಿದೆ.

    ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆಟೋ ಚಾಲಕರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಮಹಾರಾಷ್ಟ್ರ, ತೆಲಂಗಾಣ, ಒಡಿಶಾಗಳಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಬೈಕ್ ಟ್ಯಾಕ್ಸಿಗಳನ್ನು (Bike Taxi) ನಿಷೇಧಿಸಬೇಕು. ಇಲ್ಲದಿದ್ದರೆ ಸರ್ಕಾರಿ ಸಾರಿಗೆ ಹೊರತುಪಡಿಸಿ ಉಳಿದೆಲ್ಲ ಸಾರಿಗೆ ವ್ಯವಸ್ಥೆ ಸಂಪೂರ್ಣ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಯಮುನಾ ನದಿಯ ತಗ್ಗು ಪ್ರದೇಶದ ನಿವಾಸಿಗಳ ಸ್ಥಳಾಂತರಕ್ಕೆ ಕೇಜ್ರಿವಾಲ್ ಸೂಚನೆ

    ಸರ್ಕಾರಕ್ಕೆ 7 ದಿನಗಳ ಡೆಡ್ ಲೈನ್ ನೀಡಿರುವ ಸಂಘಟನೆ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದೆ. ಇಲ್ಲವಾದಲ್ಲಿ ಜು.28 ರಿಂದ ಅನಿರ್ಧಿಷ್ಟವಾಧಿ ಹೋರಾಟ ನಡೆಸಲಾಗುತ್ತದೆ. ರಾಜ್ಯಾದ್ಯಂತ 3.20 ಲಕ್ಷ ಹಾಗೂ ಬೆಂಗಳೂರಲ್ಲಿ 2.10 ಲಕ್ಷ ಆಟೋಗಳಿವೆ ಎಲ್ಲಾ ಆಟೋ ಚಾಲಕರು ಕೂಡ ಅಂದು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಲ್ಲಿರುವ 21 ಆಟೋ ಸಂಘಟನೆಗಳು ಭಾಗಿಯಾಗಲಿವೆ. ಖಾಸಗಿ ಬಸ್ ಒಕ್ಕೂಟ, ಶಾಲಾ ವಾಹನಗಳ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಲಿವೆ ಎಂದಿದ್ದಾರೆ.

    ಅಕ್ರಮ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳನ್ನ ನಿಷೇಧಿಸಬೇಕು. ಶಕ್ತಿ ಯೋಜನೆಯಿಂದ ಆಟೋ ಚಾಲಕರು ನಷ್ಟ ಅನುಭವಿಸುತ್ತಿದ್ದಾರೆ. ಆಟೋ ಚಾಲಕನಿಗೆ ಪ್ರತಿ ತಿಂಗಳು 10,000 ರೂ. ಪರಿಹಾರ ನೀಡಬೇಕು. ಅಸಂಘಟಿತ ವಾಣಿಜ್ಯ ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಆಟೋ ಟ್ಯಾಕ್ಸಿ ಚಾಲಕರಿಗೆ 2 ಲಕ್ಷ ರೂ. ಸಾಲ ಸೌಲಭ್ಯ ನೀಡಬೇಕು. ಎಲೆಕ್ಟ್ರಿಕ್ ಆಟೋಗಳನ್ನು ರ‍್ಯಾಪಿಡೋ, ಓಲಾ, ಊಬರ್ ಕಂಪನಿಗೆ ನೊಂದಣಿ ಮಾಡುವುದರನ್ನ ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಸ್ಸಿನೊಳಗೆ ನುಗ್ಗಿ, ಪೊಲೀಸರ ಮೇಲೆ ಖಾರದ ಪುಡಿ ಎರಚಿ ಆರೋಪಿಗೆ ಗುಂಡಿಟ್ಟು ಹತ್ಯೆ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿಯಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಸುಪ್ರೀಂ ತಡೆ

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬೈಕ್ ಟ್ಯಾಕ್ಸಿ (Bike Taxi) ಸಂಚಾರಕ್ಕೆ ಅನುಮತಿ ನೀಡಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ (Supreme Court) ಸೋಮವಾರ ತಡೆ ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂತಿಮ ನೀತಿಯನ್ನು ರೂಪಿಸುವವರೆಗೆ ದೆಹಲಿಯ ರಸ್ತೆಗಳಲ್ಲಿ ಬೈಕ್ ಟ್ಯಾಕ್ಸಿಗಳು ಸಂಚರಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ.

    ಬೈಕ್ ಟ್ಯಾಕ್ಸಿಗಳನ್ನು ನಡೆಸುವ ರ‍್ಯಾಪಿಡೋ (Rapido) ಮತ್ತು ಉಬರ್‌ಗಳಿಗೆ (Uber) ದೆಹಲಿಯಲ್ಲಿ ಕಾರ್ಯನಿರ್ವಹಿಸಲು ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ದೆಹಲಿ (Delhi) ಸರ್ಕಾರ ಸಲ್ಲಿಸಿದ ಎರಡು ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ಮತ್ತು ರಾಜೇಶ್ ಬಿಂದಾಲ್ ಅವರ ರಜಾಕಾಲದ ಪೀಠ ಈ ಮಧ್ಯಂತರ ತಡೆ ನೀಡಿದೆ. ಇದನ್ನೂ ಓದಿ: ಮತ್ತೆ ಬೀದಿಗಿಳಿದ ರೈತರು- ದೆಹಲಿ, ಚಂಡೀಗಢ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

    ಸರ್ಕಾರ ಅಂತಿಮ ನೀತಿಯನ್ನು ಪ್ರಕಟಿಸುವವರೆಗೂ ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ನಿರ್ದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಆಪ್ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

    ದೆಹಲಿ ಸರ್ಕಾರದ ಪರ ಹಿರಿಯ ವಕೀಲ ಮನೀಶ್ ವಶಿಷ್ಟ್ ವಾದ ಮಂಡಿಸಿದರು. ಈ ವೇಳೆ ಅಂತಿಮ ನೀತಿಯನ್ನು ಪ್ರಕಟಿಸುವವರೆಗೆ ಸರ್ಕಾರದ ನೋಟಿಸ್‍ಗೆ ತಡೆ ನೀಡುವ ಹೈಕೋರ್ಟ್‍ನ ನಿರ್ಧಾರ ರ‍್ಯಾಪಿಡೋ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಅನುಮತಿಸಿದಂತಿದೆ. ದೆಹಲಿ ಸರ್ಕಾರವು ಈ ವರ್ಷದ ಆರಂಭದಲ್ಲಿ ಬೈಕ್ ಟ್ಯಾಕ್ಸಿಗಳು ದೆಹಲಿಯಲ್ಲಿ ಸಂಚರಿಸದಂತೆ ಎಚ್ಚರಿಕೆ ನೀಡಿತ್ತು ಮತ್ತು ಉಲ್ಲಂಘಿಸಿದರೆ ಒಟ್ಟು 1 ಲಕ್ಷ ರೂ.ಗಳ ವರೆಗೂ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿತ್ತು ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದನ್ನೂ ಓದಿ: ಎಚ್ಚರಿಕೆಯ ನಡುವೆಯು ಪ್ರವಾಸಿಗರ ಹುಚ್ಚಾಟ – ಮುರುಡೇಶ್ವರದಲ್ಲಿ ಸಮುದ್ರದ ಪಾಲಾದ ಯುವಕ, ಇಬ್ಬರ ರಕ್ಷಣೆ

  • ರ‍್ಯಾಪಿಡೋ ಬೈಕ್‌ ಸವಾರನಿಂದ ಲೈಂಗಿಕ ಕಿರುಕುಳ – ಬೇಸತ್ತ ಯುವತಿ ಬೈಕ್‌ನಿಂದ ಜಂಪ್‌

    ರ‍್ಯಾಪಿಡೋ ಬೈಕ್‌ ಸವಾರನಿಂದ ಲೈಂಗಿಕ ಕಿರುಕುಳ – ಬೇಸತ್ತ ಯುವತಿ ಬೈಕ್‌ನಿಂದ ಜಂಪ್‌

    ಬೆಂಗಳೂರು: ರ‍್ಯಾಪಿಡೋ (Rapido) ಬೈಕ್‌ ಸವಾರನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದಿರುವ ಘಟನೆ ಯಲಹಂಕದ ಹೊರವಲಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಠಾಣಾ (Yelahanka Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ದೊಡ್ಡಗೌಡರ ಕೋಟೆಗೆ ಇಂದು ಯುಪಿ ಸಿಎಂ ಎಂಟ್ರಿ – ಎಲ್ಲೆಲ್ಲಿ ಏನೇನು ಕಾರ್ಯಕ್ರಮ?

    ಏನಿದು ಘಟನೆ?
    ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡ್ತಿದ್ದ ಯುವತಿ ಇದೇ ತಿಂಗಳ ಏಪ್ರಿಲ್‌ 21 ರಂದು ಯಲಹಂಕದಿಂದ ಇಂದಿರಾನಗರಕ್ಕೆ ತೆರಳಲು ರ‍್ಯಾಪಿಡೋ ಬುಕ್‌ ಮಾಡಿದ್ದಾಳೆ. ಬೈಕ್‌ (Rapido Bike) ಸವಾರ ಓಟಿಪಿ ಪಡೆಯುವ ನೆಪದಲ್ಲಿ ಮೊಬೈಲ್‌ ಕಸಿದಿದ್ದಾನೆ. ಬಳಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ಬೇಸತ್ತ ಯುವತಿ ಚಲಿಸುತ್ತಿದ್ದ ಬೈಕ್‌ನಿಂದ ಜಿಗಿದಿದ್ದಾಳೆ. ಇದನ್ನೂ ಓದಿ: ಇಂದಿರಾ ಗಾಂಧಿಯ ಪ್ರತಿರೂಪ ಎಂದಿದ್ದಕ್ಕೆ ಮಹಿಳೆಗೆ ಪ್ರೀತಿಯ ಅಪ್ಪುಗೆ ನೀಡಿದ ಪ್ರಿಯಾಂಕಾ

    ನಂತರ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇರೆಗೆ ಕೇಸ್‌ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಆಂಧ್ರಪ್ರದೇಶ ಮೂಲದ ದೀಪಕ್‌ ರಾವ್‌ನನ್ನ ಬಂಧಿಸಿದ್ದಾರೆ. ಯಲಹಂಕ ಉಪನಗರ ಪೊಲೀಸರಿಂದ ತನಿಖೆ ಮುಂದುವರಿದಿದೆ.

  • ಸೋಮವಾರ ಬೆಂಗಳೂರಿನಲ್ಲಿ ಸಂಪೂರ್ಣ ಆಟೋ ಬಂದ್

    ಸೋಮವಾರ ಬೆಂಗಳೂರಿನಲ್ಲಿ ಸಂಪೂರ್ಣ ಆಟೋ ಬಂದ್

    ಬೆಂಗಳೂರು: ಅನಧಿಕೃತ ರ‍್ಯಾಪಿಡೋ ಬೈಕ್ ಟ್ಯಾಕ್ಸಿ (Rapido bike taxi) ನಿಷೇಧಕ್ಕೆ ಆಗ್ರಹಿಸಿ ಸೋಮವಾರ ಸಂಪೂರ್ಣ ಆಟೋ ಸಂಚಾರ ಬಂದ್ ಮಾಡಲು ಆಟೋ ಚಾಲಕರು ನಿರ್ಧರಿಸಿದ್ದಾರೆ. ಭಾನುವಾರ ಮಧ್ಯರಾತ್ರಿ 12 ರಿಂದ 24 ಗಂಟೆಗಳ ಕಾಲ ನಗರದಲ್ಲಿ ಆಟೋ ಸಂಚಾರ ಸ್ಥಗಿತಗೊಳ್ಳಲಿದೆ.

    ಸೋಮವಾರ ಬೆಳಗ್ಗೆ 11 ಗಂಟೆಗೆ ಕಪ್ಪುಪಟ್ಟಿ ಧರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (Basavaraj Bommai) ರೇಸ್ ಕೋರ್ಸ್ ನಿವಾಸಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ತೀರ್ಮಾನಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಮೂರು ದಿನಗಳ ಡೆಡ್‍ಲೈನ್ ನೀಡಿ, ಆಟೋ ಚಾಲಕರು ಕಪ್ಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ

     

     

    ಬೈಕ್ ಟ್ಯಾಕ್ಸಿಯಿಂದ ನಮಗೆ ಬಾಡಿಗೆ ಸಿಗುತ್ತಿಲ್ಲ. ನಮ್ಮ ಜೀವನಕ್ಕೆ ತೊಂದರೆಯಾಗಿದೆ. ಯೆಲ್ಲೋ ಬೋರ್ಡ್ ಹಾಕಿಕೊಂಡು ಬೈಕ್ ಟ್ಯಾಕ್ಸಿ ಸೇವೆ ಸೇವೆ ನೀಡಲಿ ಎಂದು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಗರದ 21 ಆಟೋ ಚಾಲಕರ ಸಂಘಟನೆಗಳು (Auto Rickshaw Drivers Union) ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದು, 2 ಲಕ್ಷದ 10 ಸಾವಿರ ಆಟೋಗಳ ಸಂಚಾರ ಬಂದ್ ಆಗುವ ಸಾಧ್ಯತೆಯಿದೆ. ಓಲಾ (Ola), ಊಬರ್‌ನಲ್ಲೂ (Ubar) ಆಟೋ ಸೇವೆ ಲಭ್ಯವಿರುವುದಿಲ್ಲ.

    ಆರ್‌ಟಿಓದಿಂದ ರ‍್ಯಾಪಿಡೋ ಬ್ಯಾನ್ ಮಾಡಲು ಸಾರಿಗೆ ಸಚಿವ ಶ್ರೀರಾಮುಲು (Sriramulu) ವರದಿ ಕೇಳಿದ್ದಾರೆ. ವರದಿ ಕೈ ಸೇರಿದ ತಕ್ಷಣ, ಚುನಾವಣೆಯೊಳಗೆ ಚಾಲಕರಿಗೆ ಸಿಹಿ ಸುದ್ದಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ಹುಚ್ಚಾಟಕ್ಕೆ ಬೈಕ್ ಸವಾರ ಬಲಿ

  • ಡ್ರಾಪ್ ನೆಪದಲ್ಲಿ ನಡೀತು ಗ್ಯಾಂಗ್ ರೇಪ್- ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೈಶಾಚಿಕ ಕೃತ್ಯ

    ಡ್ರಾಪ್ ನೆಪದಲ್ಲಿ ನಡೀತು ಗ್ಯಾಂಗ್ ರೇಪ್- ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೈಶಾಚಿಕ ಕೃತ್ಯ

    ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಗ್ಯಾಂಗ್ ರೇಪ್ ನಡೆದಿರುವುದು ಬೆಳಕಿಗೆ ಬಂದಿದೆ.

    ಎಲೆಕ್ಟ್ರಾನಿಕ್ ಸಿಟಿ (Electronic City) ನೀಲಾದ್ರಿ ನಗರದ ಬಳಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೇರಳ ಮೂಲದ ಯುವತಿ ಮೇಲೆ ಇಬ್ಬರು ಯುವಕರು ರೇಪ್ ಮಾಡಿದ್ದಾರೆ. ರ‍್ಯಾಪಿಡೋ ಬೈಕ್ ಪಿಕಪ್ ಮಾಡೋ ಸವಾರ ಹಾಗೂ ಆತನ ಸ್ನೇಹಿತನಿಂದ ಅತ್ಯಾಚಾರ ನಡೆದಿದೆ. ಸದ್ಯ ಯುವತಿ ದೂರಿನ ಮೇರೆಗೆ ಗ್ಯಾಂಗ್ ರೇಪಿಸ್ಟ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.

    ನಡೆದಿದ್ದೇನು..?: ಬಿಟಿಎಂ ಲೇಔಟ್‍ (BTM Layout) ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಯುವತಿ ಕೆಲಸ ಮಾಡುತ್ತಿದ್ದಾಳೆ. ಹೀಗಾಗಿ ಕೆಲಸ ಮುಗಿದ ಬಳಿಕ ಗುರುವಾರ ರಾತ್ರಿ ರ‍್ಯಾಪಿಡೋ ಬೈಕ್ (Rapido Bike) ಮಾಡಿದ್ದಳು. ಬಿಟಿಎಂ ಲೇಔಟ್‍ನಿಂದ ನೀಲಾದ್ರಿ ನಗರಕ್ಕೆ ರ‍್ಯಾಪಿಡೋ ಬೈಕ್ ಬುಕ್ಕಿಂಗ್ ಮಾಡಿದ್ದಳು. ಬೈಕ್ ಹುಡುಗ ಪಿಕ್‍ಅಪ್ ವೇಳೆ ಯುವತಿ ಮದ್ಯಪಾನ ಮಾಡಿದ್ದಳು. ನೀಲಾದ್ರಿ ನಗರ ತಲುಪುವ ಹೊತ್ತಿಗೆ ಅರೆ ಪ್ರಜ್ಞಾವಸ್ಥೆಯಲ್ಲಿದ್ದಳು. ಇದನ್ನೂ ಓದಿ: ಹಸುವಿನೊಂದಿಗೆ ಲೈಂಗಿಕ ತೃಷೆ ತೀರಿಸಿಕೊಳ್ಳುತ್ತಿದ್ದ ಪಾಪಿ ಜೈಲುಪಾಲು

    ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ರ‍್ಯಾಪಿಡೋ ಯುವಕ ಡ್ರಾಪ್ ಪಾಯಿಂಟ್‍ನಲ್ಲಿ ಬಿಡಲಿಲ್ಲ. ಅಲ್ಲದೆ ಇದೇ ಸಂದರ್ಭದಲ್ಲಿ ಆತ ತನ್ನ ಸ್ನೇಹಿತನನ್ನು ಕೂಡ ಸ್ಥಳಕ್ಕೆ ಕರೆಸಿಕೊಳ್ಳುತ್ತಾನೆ. ನಂತರ ಇಬ್ಬರು ನೀಲಾದ್ರಿ ನಗರದ ತನ್ನ ರೂಮ್‍ಗೆ ಕರೆದೊಯ್ದು ಯುವತಿ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ. ಪ್ರಜ್ಞೆ ಬಂದ ಬಳಿಕ ಯುವತಿಯನ್ನು ಬಿಟ್ಟು ಕಳುಹಿಸಿದ್ದಾರೆ. ಅಲ್ಲದೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ.

    ಘಟನೆ ಬಳಿಕ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ಯುವತಿ ದೂರು ಕೊಟ್ಟಿದ್ದಾಳೆ. ಸದ್ಯ ದೂರು ಆಧರಿಸಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಓಲಾ, ಉಬರ್ ಕಂಪನಿಗಳಿಗೆ ದಂಡ ಪ್ರಯೋಗ ಹೇಗಿರಲಿದೆ?

    ಓಲಾ, ಉಬರ್ ಕಂಪನಿಗಳಿಗೆ ದಂಡ ಪ್ರಯೋಗ ಹೇಗಿರಲಿದೆ?

    ಬೆಂಗಳೂರು: ಓಲಾ (Ola) , ಉಬರ್ (Uber), ರ‍್ಯಾಪಿಡೋ ಆಪ್ ಆಧಾರಿತ ಆಟೋಗಳ ಸುಲಿಗೆಗೆ ಬ್ರೇಕ್ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯಿಂದ ಎರಡು ವಾಟ್ಸ್‌ಪ್‌ ನಂಬರ್‌ಗಳು ಈಗಾಗಲೇ ಬಿಡುಗಡೆಯಾಗಿದೆ. ಇಲಾಖೆ ಸಾರ್ವಜನಿಕರಿಗೆ ಸಹಾಯವಾಣಿ ನಂಬರ್ ನೀಡಿದ್ದು, ಆ ಮೂಲಕ ದೂರು ಸ್ವೀಕರಿಸಲಿದೆ. ಜೊತೆಗೆ ನಿಯಮ ಮೀರಿ ಓಲಾ, ಉಬರ್ ಕಾರ್ಯನಿರ್ವಹಿಸಿದರೆ, ಇಲಾಖೆ ದಂಡ ಪ್ರಯೋಗ ಮಾಡಲಿದೆ. ಅದು ಹೇಗೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

    ಓಲಾ, ಉಬರ್, ರ‍್ಯಾಪಿಡೋ ಆಟೋಗಳು ಒಂದೊಮ್ಮೆ ನಿಯಮ ಮೀರಿ ಚಾಲಕರು ಆಪ್ ಆನ್ ಮಾಡಿ ಸೇವೆ ನೀಡಿದರೆ, 5 ಸಾವಿರ ದಂಡವನ್ನು (Fine) ಕಂಪನಿ ಕಟ್ಟಬೇಕಾಗಲಿದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಇನ್ನೂ ಸಾರಿಗೆ ಇಲಾಖೆ ಕೂಡ ಫೀಲ್ಡ್‌ಗೆ ಇಳಿಯಲಿದೆ. ಅಗ್ರಿಗೇಟರ್ ಲೈಸೆನ್ಸ್ ಪಡೆಯುವವರೆಗೂ ಓಲಾ, ಉಬರ್ ಅಡಿ ತ್ರಿಚಕ್ರ ವಾಹನಗಳು ಓಡಾಡುವಂತಿಲ್ಲ. ನಿಯಮ ಉಲ್ಲಂಘನೆ ಮಾಡಿದರೆ ಅಂತಹ ಆಟೋಗಳನ್ನ (Auto) ಪತ್ತೆ ಹಚ್ಚಿ 5 ಸಾವಿರ ದಂಡ ವಿಧಿಸಲಿದೆ.

    ಓಲಾ, ಉಬರ್ ಆಟೋ ಓಡಿಸಿದರೆ ಸಾರ್ವಜನಿಕರು ಕೂಡ ನೇರವಾಗಿ ದೂರು ನೀಡಬಹುದಾಗಿದೆ. ಅಥವಾ ಸಾರಿಗೆ ಇಲಾಖೆಯಿಂದ ನೀಡಿರುವ ಸಹಾಯವಾಣಿ 9449863426 ನಂಬರ್‍ಗೆ ಪ್ರಯಾಣಿಕರೂ ಕೂಡ ದೂರು ನೀಡಬಹುದು. ಇದಕ್ಕಾಗಿ ಈಗಾಗಲೇ ಸಾರಿಗೆ ಇಲಾಖೆ ಸಹ ಹೆಲ್ಪ್‍ಲೈನ್ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಕೂಡ ದೂರು ಸಲ್ಲಿಸಲು ಅವಕಾಶ ನೀಡಿದೆ. ಇನ್ನೂ ಸಾರಿಗೆ ಇಲಾಖೆಯ ನಿರ್ಧಾರವನ್ನು ಆಟೋ ಚಾಲಕರು ಸ್ವಾಗತಿಸಿದ್ದಾರೆ. ನಮ್ಮ ಆಟೋಗಳನ್ನ ಬೇಕಾದ್ರೆ ಪರಿಶೀಲನೆ ಮಾಡಲಿ, ಸರ್ಕಾರದ ಆದೇಶದಂತೆ ಆಪ್ ಬಳಸಲ್ಲ ಎಂದಿದ್ದಾರೆ. ಇದನ್ನೂ ಓದಿ: ಮುಂದಿನ‌ ವಾರಾಂತ್ಯದಲ್ಲಿ ದೆಹಲಿಗೆ ಸಿಎಂ ಭೇಟಿ

    ಸಾರಿಗೆ ಇಲಾಖೆಯ ನಿರ್ಧಾರವನ್ನು ಆಟೋ ಚಾಲಕರು ಸ್ವಾಗತಿಸಿದ್ದಾರೆ. ನಮ್ಮ ಆಟೋಗಳನ್ನು ಬೇಕಾದರೆ ಪರಿಶೀಲನೆ ಮಾಡಲಿ, ಸರ್ಕಾರದ ಆದೇಶದಂತೆ ಆಪ್ ಬಳಸಲ್ಲ ಎಂದಿದ್ದಾರೆ. ಆದರೂ ಇನ್ನೂ ಲೈಸನ್ಸ್ ಇಲ್ಲದಿದ್ರೂ ಓಲಾ, ಉಬರ್ ಸೇವೆ ನಗರದಲ್ಲಿ ಮುಂದುವರಿದಿದೆ. ಗ್ರಾಹಕರಿಗೆ ಆಪ್‍ಗಳಲ್ಲಿ ತಪ್ಪು ಮಾಹಿತಿ ನೀಡಿ, ಸುಲಿಗೆ ಮಾಡ್ತಿದೆ. ದೂರದ ಪ್ರಯಾಣವನ್ನ ಕಡಿಮೆ ಕಿಲೋ ಮೀಟರ್ ಅಂತರ ತೋರಿಸಿ ಗ್ರಾಹಕರಿಗೆ ವಂಚನೆ ಮಾಡಲಾಗುತ್ತಿರುವುದು ದುರಂತವಾಗಿದೆ. ಇದನ್ನೂ ಓದಿ: ಬೆಂಗ್ಳೂರಿನ ಹಾಟ್‌ಸ್ಪಾಟ್‌ನಲ್ಲಿ ಪ್ರಿಪೇಯ್ಡ್ ಕೌಂಟರ್ – ಆಟೋ ಚಾಲಕರ ಮಾಸ್ಟರ್ ಪ್ಲ್ಯಾನ್‌

    Live Tv
    [brid partner=56869869 player=32851 video=960834 autoplay=true]

  • ಓಲಾ, ಉಬರ್, ರ್‍ಯಾಪಿಡೋ ಸುಲಿಗೆ- ಪ್ರಯಾಣಿಕರಿಗೂ ಬ್ಲೇಡ್, ಚಾಲಕರಿಗೂ ಕತ್ತರಿ

    ಓಲಾ, ಉಬರ್, ರ್‍ಯಾಪಿಡೋ ಸುಲಿಗೆ- ಪ್ರಯಾಣಿಕರಿಗೂ ಬ್ಲೇಡ್, ಚಾಲಕರಿಗೂ ಕತ್ತರಿ

    ಬೆಂಗಳೂರು: ಓಲಾ(OLA), ಉಬರ್ (Uber), ರ್‍ಯಾಪಿಡೋ (Rapido) ಆಪ್ ಆಧಾರಿತ ಆಟೋಗಳ ಸುಲಿಗೆಗೆ ಬ್ರೇಕ್ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ. ಆಟೋಗಳನ್ನ ಸೀಜ್ ಮಾಡಲು ಹೊರಟಿದ್ದ ಸಾರಿಗೆ ಇಲಾಖೆಯ ವಿರುದ್ಧ ದೊಡ್ಡ ಪ್ರತಿಭಟನೆಯೇ ನಡೆದಿದೆ.

    ಹೌದು. ಓಲಾ, ಉಬರ್, ರ್‍ಯಾಪಿಡೋ ಆಪ್ ಆಧಾರಿತ ಆಟೋಗಳಿಂದ ಹಾಡಹಗಲೇ ಜನರಿಂದ ಸುಲಿಗೆ ನಡೀತಾ ಇದೆ. ಸಾರಿಗೆ ಇಲಾಖೆ ಖಡಕ್ ಎಚ್ಚರಿಕೆ ಕೊಟ್ಟಿದ್ರೂ ನಿಂತಿಲ್ಲ ಇವರುಗಳ ಸುಲಿಗೆ. `ಆಟೋ’ಟೋಪದ ಬಗ್ಗೆ ಪಬ್ಲಿಕ್ ಟಿವಿ ವರದಿಗಾರರು ವಾಸ್ತವ ಚಿತ್ರಣವನ್ನ ತೆರೆದಿಟ್ಟಿದ್ದಾರೆ.

    ಓಲಾ, ಉಬರ್, ರ್‍ಯಾಪಿಡೋ ಕಂಪನಿಗಳಿಗೆ ಈಗಾಗಲೇ ನೋಟಿಸ್ ನೀಡಿ ಕೊಟ್ಟ ಗಡುವು ಕೂಡ ಮುಗಿದಿದೆ. ಆದರೆ ಓಲಾ, ಉಬರ್ ಕಂಪನಿಗಳು ಹೆಚ್ಚುವರಿ ಹಣ ವಸೂಲಿ ಮಾಡ್ತಿಲ್ಲ ಅಂತ ವಾದ ಮಾಡ್ತಿದೆ. ನಾಳೆ ಸಂಜೆ ಓಲಾ, ಉಬರ್ ಆಟೋಗಳ ಭವಿಷ್ಯ ನಿರ್ಧಾರವಾಗಲಿದ್ದು, ಸಭೆ ಬಳಿಕ ಸಾರಿಗೆ ಇಲಾಖೆ (Transport Department) ಅಂತಿಮ ನಿರ್ಣಯ ಗೊತ್ತಾಗಲಿದೆ. ಇದನ್ನೂ ಓದಿ: ಬಿಜೆಪಿ ಸುಳ್ಳಿನ ಫ್ಯಾಕ್ಟರಿ, ಮೋದಿ ಒಳ್ಳೆಯ ನಾಟಕವಾಡುತ್ತಾರೆ: ಸಿದ್ದರಾಮಯ್ಯ

    ಆಪ್ ಆಧಾರಿತ ಆಟೋ (Auto)ಗಳ ವಿರುದ್ಧ ಸಾರಿಗೆ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಓಲಾ, ಉಬರ್, ರ್‍ಯಾಪಿಡೋ ಆಪ್ ಮೂಲಕ ಆಟೋ ಓಡಿಸಿದ್ರೆ ಜಪ್ತಿ ಮಾಡೋದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಈ ಬೆನ್ನಲ್ಲೇ ಜಯನಗರ ಆರ್‌ಟಿಓ ಅಧಿಕಾರಿಗಳು ಆಪ್ ಆಧಾರಿತ ಆಟೋ ಚಾಲಕನಿಗೆ ಗೆ 6 ಸಾವಿರ ರೂ. ದಂಡದ ರಶೀದಿಯನ್ನ ಕೊಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ ಆಟೋ ಚಾಲಕರು ಜಯನಗರ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಸಿದ್ರು.

    ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಆಟೋಗಳನ್ನ ಸೀಜ್ ಮಾಡುವ ಸಾರಿಗೆ ಇಲಾಖೆಯ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿವೆ. ಆಟೋಗಳನ್ನ ಸೀಜ್ ಮಾಡಿದ್ರೆ, ಸಿಎಂ, ಸಾರಿಗೆ ಸಚಿವರ ಮನೆಗಳಿಗೆ ಮುತ್ತಿಗೆ ಹಾಕ್ತೇವೆ ಅಂತ ಆಪ್ ಆಧಾರಿತ ಆಟೋ ಚಾಲಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]