Tag: ಲಂಚ

  • ಕಾಂಗ್ರೆಸ್ ಸರ್ಕಾರದಿಂದ ಒಂದು ಸಾವಿರ ಕೋಟಿ ಲಂಚ ಸಂಗ್ರಹ: ಎನ್.ರವಿಕುಮಾರ್

    ಕಾಂಗ್ರೆಸ್ ಸರ್ಕಾರದಿಂದ ಒಂದು ಸಾವಿರ ಕೋಟಿ ಲಂಚ ಸಂಗ್ರಹ: ಎನ್.ರವಿಕುಮಾರ್

    ಬೆಂಗಳೂರು: ರಾಜ್ಯದಲ್ಲಿ ಶಿವಾನಂದ ಪಾಟೀಲ್, ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಯತೀಂದ್ರ ಹಾಗೂ ಇತರ ಸಚಿವರು ಹಣ ಸಂಗ್ರಹಿಸಿದ್ದಾರೆ. ಡಿ.ಕೆ.ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಹಣದ ವಹಿವಾಟು ನಡೆಯುತ್ತಿದೆ. ಇದೆಲ್ಲದರ ಕುರಿತು ಸಿಬಿಐ, ಇಡಿ ತನಿಖೆ ಮಾಡಬೇಕು ಎಂದು ಬಿಜೆಪಿ (BJP) ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ (N Ravikumar) ಆಗ್ರಹಿಸಿದರು.

    ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕರ್ನಾಟಕದಲ್ಲಿ ನಡೆದ ಐಟಿ ದಾಳಿ (IT Raid) ಸಂದರ್ಭದಲ್ಲಿ ಸಿಕ್ಕಿದ 94 ಕೋಟಿ ರೂ. ನಗದು ಮತ್ತು 8 ಕೋಟಿ ಮೌಲ್ಯದ ಚಿನ್ನ ಸಿಕ್ಕಿದ್ದು, 102 ಕೋಟಿ ರೂ. ಸ್ವತ್ತನ್ನು ವಶ ಪಡಿಸಿಕೊಂಡಿದ್ದಾರೆ. 1 ಸಾವಿರ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ, ನನ್ನ ನಡುವೆ ಏನೂ ಇಲ್ಲ: ಡಿಕೆಶಿ

    ಅಬಕಾರಿ, ಕೈಗಾರಿಕಾ ವಲಯ, ಎಲ್ಲಾ ಪೊಲೀಸ್ ಠಾಣೆಗಳಿಗೆ ಕಲೆಕ್ಷನ್ ಗುರಿ ಕೊಟ್ಟಿದ್ದಾರೆ. ಐಎಎಸ್, ಐಪಿಎಸ್, ಐಎಫ್‌ಎಸ್, ಕೆಎಎಸ್ ಸೇರಿ ಅಧಿಕಾರಿಗಳ ವರ್ಗಾವಣೆ ವೇಳೆ ಹಣ ಪಡೆದಿದ್ದಾರೆ. ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿ ವರ್ಗಾವಣೆಗೆ ಕನಿಷ್ಠ 1 ರಿಂದ 3 ಕೋಟಿ ಲಂಚ (Bribe) ಪಡೆದಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ITದಾಳಿ ಜಟಾಪಟಿ; ಕಲೆಕ್ಷನ್ ಟಾಸ್ಕ್ ಸ್ಲೇಟ್ ಹಿಡಿದ ಸಚಿವರ ಪೋಸ್ಟರ್ ಹಾಕಿ ಬಿಜೆಪಿ ಟಾಂಗ್

    ನೀರಾವರಿ, ಲೋಕೋಪಯೋಗಿ ಇಲಾಖೆ ಸೇರಿ ಬೆಂಗಳೂರಿನಲ್ಲಿ ವಿಪರೀತ ಹಣ ಸಂಗ್ರಹಿಸಿದ್ದಾರೆ. ಅಂತಹ ಸಾವಿರಾರು ಕೋಟಿ ಹಣವನ್ನು ಚುನಾವಣೆ (Election) ನಡೆಯುವ ಪಂಚ ರಾಜ್ಯಗಳಿಗೆ ಕಳುಹಿಸಿ ಕೊಡುತ್ತಿದ್ದಾರೆ. ಅದರಲ್ಲಿ ಎಷ್ಟು ಕಳುಹಿಸುತ್ತಾರೆ, ಎಷ್ಟು ಜೇಬಿಗೆ ಇಳಿಸುತ್ತಾರೆ ಎಂಬುದರ ತನಿಖೆಯೂ ಆಗಬೇಕಿದೆ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಇಳಿವಯಸ್ಸಿನಲ್ಲೂ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ ಗ್ರಾಪಂ ಸದಸ್ಯ

    ಸೋಮವಾರ ಮತ್ತು ಮಂಗಳವಾರ ಎಲ್ಲಾ ಜಿಲ್ಲಾ ಕೇಂದ್ರಗಳು, ತಾಲೂಕು ಕೇಂದ್ರಗಳಲ್ಲಿ ಸೇರಿ 117ಕ್ಕೂ ಹೆಚ್ಚು ಕಡೆ ಬಿಜೆಪಿ ಹೋರಾಟ ಮಾಡಿದೆ. ನಮ್ಮ ಹೋರಾಟ ಮುಂದುವರಿಯಲಿದೆ. ತನಿಖೆಗೆ ಕೊಡುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದರು. ಇದನ್ನೂ ಓದಿ: ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ: ಹರೀಶ್ ಪೂಂಜಾ

    ಕರ್ನಾಟಕ ಕಾಂಗ್ರೆಸ್‌ನ ಎಟಿಎಂ: ರಾಜ್ಯದಲ್ಲಿ 251ಕ್ಕಿಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಕುರಿತು ಒಂದು ಪೈಸೆ ಪರಿಹಾರ ನೀಡಿಲ್ಲ. ಬರ, ಬಿಸಿಲಿನಿಂದ ರಾಜ್ಯದ ಸಂಪೂರ್ಣ ಬೆಳೆ ನಾಶವಾಗಿದೆ. ಕರೆಂಟಿಲ್ಲದೆ ನೀರಾವರಿ ಬೆಳೆಯೂ ನಾಶವಾಗಿದೆ. ಇದರ ಬಗ್ಗೆಯೂ ಪರಿಹಾರ ಕೊಡುತ್ತಿಲ್ಲ. ಪ್ರತಿದಿನ ಕಾವೇರಿ ನೀರನ್ನು (Cauveri Water) ಹರಿಸುತ್ತಿದ್ದಾರೆ. ಅದನ್ನೂ ನಿಲ್ಲಿಸಿಲ್ಲ. ಕರ್ನಾಟಕ ಪೂರ್ತಿ ಎಟಿಎಂ ಆಗಿದೆ ಎಂದು ದೂರಿದರು. ತಮಿಳುನಾಡಿಗೆ ಕಾವೇರಿ ನೀರು ಮತ್ತು ಪಂಚರಾಜ್ಯಗಳಿಗೆ ಹಣದ ಹರಿವು ನಿರಂತರವಾಗಿ ಸಾಗಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮನೆಯೊಂದು ನೂರಾರು ಬಾಗಿಲು: ಮುನಿಸ್ವಾಮಿ ವ್ಯಂಗ್ಯ

    ತೆಲಂಗಾಣದಲ್ಲಿ ಸಚಿವ ಶಿವಾನಂದ ಪಾಟೀಲ್ (Shivananda Patil) ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ರೂ. ಹಣದ ಮಳೆಯನ್ನು ಬರುವಂತೆ ಮಾಡಿದ್ದಾರೆ. ಸಂಗ್ರಹಿತ ಕೋಟಿಗಿಂತ ಹೆಚ್ಚು ಹಣ ಅವರು ಕುಳಿತಿದ್ದ ಕಡೆ ಕಾಲಿನಡಿ ರಾಶಿರಾಶಿ ರೀತಿ ಸಿಕ್ಕಿದೆ. ಇದರ ಕುರಿತು ಸಂಪೂರ್ಣ ತನಿಖೆ ಆಗಬೇಕು. ಹಣ ಎರಚಿದ್ದಾರೆ. ರಾಶಿರಾಶಿ ಹಣದ ಮೂಲ ತನಿಖೆ ಆಗಬೇಕು. ಈ ಕುರಿತು ಸಿಎಂ, ಡಿಸಿಎಂ ಸ್ಪಷ್ಟ ಹೇಳಿಕೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ದೆಹಲಿಯಲ್ಲಿ ಕರವೇ ಪ್ರತಿಭಟನೆ

    ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ನೈತಿಕತೆ ಇದ್ದರೆ ಮೊದಲು ರಾಜೀನಾಮೆ ಕೊಡಬೇಕು. ಹಣದ ಕುರಿತು ಹಾರಿಕೆ ಉತ್ತರವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಇಲ್ಲಿ ಬರ ಇದೆ ಅಂತಾ ಹೈದರಾಬಾದ್‍ನಲ್ಲಿ ಮದುವೆ ಮಾಡ್ಬಾರ್ದಾ?: ಶಿವಾನಂದ ಪಾಟೀಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 60 ಬಾರಿ ಚಿನ್ನ ಕಳ್ಳಸಾಗಾಣಿಕೆಗೆ ಸಹಾಯ – ಏರ್‌ಪೋರ್ಟ್ ಅಧಿಕಾರಿ ವಿರುದ್ಧ ಎಫ್‍ಐಆರ್

    60 ಬಾರಿ ಚಿನ್ನ ಕಳ್ಳಸಾಗಾಣಿಕೆಗೆ ಸಹಾಯ – ಏರ್‌ಪೋರ್ಟ್ ಅಧಿಕಾರಿ ವಿರುದ್ಧ ಎಫ್‍ಐಆರ್

    ತಿರುವನಂತಪುರಂ: ವಿಮಾನನಿಲ್ದಾಣದಲ್ಲಿ (Airport) 60ಕ್ಕೂ ಹೆಚ್ಚು ಬಾರಿ ಚಿನ್ನ ಕಳ್ಳಸಾಗಾಣೆದಾರರಿಗೆ ಸಹಾಯ ಮಾಡಲು ಲಂಚ (Bribe) ಪಡೆದ ಆರೋಪದ ಮೇಲೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

    ಆರೋಪಿಯನ್ನು ಸಿಐಎಸ್‍ಎಫ್ ಸಹಾಯಕ ಕಮಾಂಡೆಂಟ್ ನವೀನ್ ಕುಮಾರ್ ಎಂದು ತಿಳಿದು ಬಂದಿದೆ. ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದವರಿಗೆ ಸಹಾಯ ಮಾಡಲು ಯತ್ನಿಸಿದಾಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮಲಪ್ಪುರಂ ಪೊಲೀಸರು ಆತನ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಥೀಂ ಪಾರ್ಕ್‌ನಲ್ಲಿ ತಲೆ ಎತ್ತಿದ್ದ ಪರಶುರಾಮನ ಪ್ರತಿಮೆ ರಾತ್ರೋರಾತ್ರಿ ಮಾಯ!

    ಆರೋಪಿ ಕಸ್ಟಮ್ಸ್ ಅಧಿಕಾರಿ ಮತ್ತು ಲಗೇಜ್ ನಿರ್ವಹಿಸುವ ಹೊರಗುತ್ತಿಗೆ ಉದ್ಯೋಗಿ ಶರಫಲಿ ಎಂಬವನ ಸಹಾಯದಿಂದ ಸುಮಾರು 60 ಬಾರಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಸಹಾಯ ಮಾಡಿದ್ದಾನೆ. ಪ್ರತಿ ಬಾರಿ 60,000 ರೂ.ಗಳನ್ನು ಲಂಚವಾಗಿ ಪಡೆದಿದ್ದಾನೆ. ಅಲ್ಲದೇ ಆರೋಪಿ ಈ ವಿಚಾರವಾಗಿ ಸಾಗಾಣಿಕೆದಾರರೊಂದಿಗೆ ಸಂಪರ್ಕಿಸಲು ಮೂರು ಸಿಮ್‍ಗಳನ್ನು ಬಳಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಕರಣ ದಾಖಲಾದ ನಂತರ ಸಿಐಎಸ್‍ಎಫ್ ಮಹಾನಿರ್ದೇಶಕರು ಆರೋಪಿ ಅಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಅಕ್ಟೋಬರ್ 5ರಂದು ಚಿನ್ನ ಕಳ್ಳಸಾಗಾಣೆ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದರು. ತನಿಖೆ ವೇಳೆ ಅಧಿಕಾರಿಯ ಪಾತ್ರ ಬಯಲಾಗಿದೆ. ಇದನ್ನೂ ಓದಿ: ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣ – ಆರೋಪಿ ಪುಣೆಯಲ್ಲಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆನ್ಸಾರ್ ಮಂಡಳಿ ಲಂಚ ಪ್ರಕರಣ: ಸಿಬಿಐನಿಂದ ಎಫ್.ಐ.ಆರ್ ದಾಖಲು

    ಸೆನ್ಸಾರ್ ಮಂಡಳಿ ಲಂಚ ಪ್ರಕರಣ: ಸಿಬಿಐನಿಂದ ಎಫ್.ಐ.ಆರ್ ದಾಖಲು

    ಮಿಳಿನ ಖ್ಯಾತ ನಟ ವಿಶಾಲ್ (Vishal), ತಮ್ಮ ಸಿನಿಮಾಗೆ ಸೆನ್ಸಾರ್ (Censor) ಪ್ರಮಾಣ ಪತ್ರ ಪಡೆಯುವುದಕ್ಕಾಗಿ ಲಂಚ ನೀಡಬೇಕಾಯಿತು ಎನ್ನುವ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಮುಂಬೈನ ಸೆಂಟ್ರಲ್ ಬೋರ್ಡ್‍ ಆಫ್ ಫಿಲ್ಮ್ ಸರ್ಟಿಫಿಕೇಷನ್‍ (ಸಿಬಿಎಫ್.ಸಿ)ನಲ್ಲಿ ಲಂಚ ಪಡೆದಿದ್ದರು ಎನ್ನುವ ವಿಚಾರವನ್ನು ಸಾಕ್ಷಿ ಸಮೇತ ತಿಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಎಫ್.ಐ.ಆರ್ (FIR)  ದಾಖಲಾಗಿದೆ.

    ವಿಶಾಲ್ ಅವರ ಭ್ರಷ್ಟಾಚಾರ ಆರೋಪಕ್ಕೆ ಕೂಡಲೇ ಸ್ಪಂದಿಸಿದ್ದ ಸರಕಾರ, ಅಧಿಕಾರಿಯೊಬ್ಬರನ್ನು ನೇಮಿಸಿ ತನಿಖೆಗೆ ಆದೇಶಿಸಿತ್ತು. ಇದೀಗ ಆರೋಪಿಗಳ ಸ್ಥಳ ಮತ್ತು ಮುಂಬೈನ ನಾಲ್ಕ ಕಡೆ ಸಿಬಿಐ ಶೋಧ ಕಾರ್ಯ ನಡೆಸಿದಿ ಎಫ್.ಐ.ಆರ್ ಅನ್ನು ದಾಖಲಿಸಿದೆ.

    ಮೊನ್ನೆಯಷ್ಟೇ ವಿಶಾಲ್, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ (ಸಿ.ಬಿ.ಎಫ್.ಸಿ) ಮೇಲೆ ಗುರುತರ ಆರೋಪ ಮಾಡಿದ್ದರು. ತಾವು ತಮ್ಮ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಪಡೆಯುವುದಕ್ಕಾಗಿ 6.50 ಲಕ್ಷ ರೂಪಾಯಿಯನ್ನು ನೀಡಿರುವುದಾಗಿ ಅವರು ಹೇಳಿಕೊಂಡಿದ್ದರು. ಯಾರಿಗೆ ಎಷ್ಟೆಲ್ಲ ಹಣ ನೀಡಲಾಗಿದೆ ಎಂದು ವಿವರ ಸಮೇತ ವಿಡಿಯೋ ಮಾಡಿದ್ದರು. ಸೆನ್ಸಾರ್ ಮಂಡಳಿಯ ಅಧಿಕಾರಿಗಳಾದ ಎಂ.ರಾಜನ್ ಎನ್ನುವವರು ಮೂರು ಲಕ್ಷ ಮತ್ತು ಜೀಜಾ ರಾಮದಾಸ್ ಎನ್ನುವವರಿಗೆ 3.5 ಲಕ್ಷ ರೂಪಾಯಿಯನ್ನು ಬ್ಯಾಂಕ್ ಖಾತೆಗೆ ಹಾಕಿರುವ ವಿವರವನ್ನು ವಿಶಾಲ್ ಹೇಳಿದ್ದರು.

    ಸಾಕ್ಷಿ ಸಮೇತವಾಗಿ ವಿಶಾಲ್ ವಿಡಿಯೋ ಮಾಡಿ ಅದನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಗಳಿಗೆ ಟ್ಯಾಗ್ ಮಾಡಿದ್ದರು. ಇದರ ಗಂಭೀರತೆಯನ್ನು ಅರಿತ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಕೂಡಲೇ ತನಿಖೆಗೆ ಆದೇಶ ಮಾಡಿದೆ. ಸಿ.ಬಿ.ಎಫ್.ಸಿಯ ಹಿರಿಯ ಅಧಿಕಾರಿಯನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ, ತನಿಖೆಗೆ ಆದೇಶ ಮಾಡಿದೆ. ಈ ಕುರಿತು ಇದೊಂದು ದುರಾದೃಷ್ಟ ಸಂಗತಿ ಎಂದು ವಿಷಾದ ವ್ಯಕ್ತ ಪಡಿಸಿತ್ತು.

     

    ಲಂಚಮುಕ್ತ ಆಡಳಿತ ಕೊಡಬೇಕು ಎನ್ನುವುದು ನಮ್ಮ ಗುರಿ. ಆದರೆ, ಇಂತಹ ಬೆಳವಣಿಗೆ ನಡೆದಿದ್ದು ನೋವು ತಂದಿದೆ. ವಿಶಾಲ್ ಅವರು ವಿಡಿಯೋ ಹಾಕಿದ 24 ಗಂಟೆಯೊಳಗೆ ತನಿಖೆಗೆ ಆದೇಶ ಮಾಡಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು ಎಂದು ಸಚಿವಾಲಯ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ. ವಿಶಾಲ್ ಅವರಿಗೆ ಟ್ಯಾಗ್ ಮಾಡಲಾಗಿತ್ತು. ಇದೀಗ ಹಣ ಪಡೆದ ಆರೋಪ ಹೊತ್ತಿರುವ ಅಧಿಕಾರಿಗಳ ಮೇಲೆ ಎಫ್.ಐ.ಆರ್ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ವಿಶಾಲ್ ಸೆನ್ಸಾರ್ ಮಂಡಳಿ ಲಂಚ ಪ್ರಕರಣ: ತನಿಖೆಗೆ ಆದೇಶಿಸಿದ ಸಚಿವಾಲಯ

    ನಟ ವಿಶಾಲ್ ಸೆನ್ಸಾರ್ ಮಂಡಳಿ ಲಂಚ ಪ್ರಕರಣ: ತನಿಖೆಗೆ ಆದೇಶಿಸಿದ ಸಚಿವಾಲಯ

    ನಿನ್ನೆಯಷ್ಟೇ ತಮಿಳಿನ ಖ್ಯಾತ ನಟ ವಿಶಾಲ್, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ (ಸಿ.ಬಿ.ಎಫ್.ಸಿ) ಮೇಲೆ ಗುರುತರ ಆರೋಪ ಮಾಡಿದ್ದರು. ತಾವು ತಮ್ಮ ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಪಡೆಯುವುದಕ್ಕಾಗಿ 6.50 ಲಕ್ಷ ರೂಪಾಯಿಯನ್ನು ನೀಡಿರುವುದಾಗಿ ಅವರು ಹೇಳಿಕೊಂಡಿದ್ದರು. ಯಾರಿಗೆ ಎಷ್ಟೆಲ್ಲ ಹಣ ನೀಡಲಾಗಿದೆ ಎಂದು ವಿವರ ಸಮೇತ ವಿಡಿಯೋ ಮಾಡಿದ್ದರು. ಸೆನ್ಸಾರ್ ಮಂಡಳಿಯ ಅಧಿಕಾರಿಗಳಾದ ಎಂ.ರಾಜನ್ ಎನ್ನುವವರು ಮೂರು ಲಕ್ಷ ಮತ್ತು ಜೀಜಾ ರಾಮದಾಸ್ ಎನ್ನುವವರಿಗೆ 3.5 ಲಕ್ಷ ರೂಪಾಯಿಯನ್ನು ಬ್ಯಾಂಕ್ ಖಾತೆಗೆ ಹಾಕಿರುವ ವಿವರವನ್ನು ವಿಶಾಲ್ ಹೇಳಿದ್ದರು.

    ಸಾಕ್ಷಿ ಸಮೇತವಾಗಿ ವಿಶಾಲ್ ವಿಡಿಯೋ ಮಾಡಿ ಅದನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಗಳಿಗೆ ಟ್ಯಾಗ್ ಮಾಡಿದ್ದರು. ಇದರ ಗಂಭೀರತೆಯನ್ನು ಅರಿತ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಕೂಡಲೇ ತನಿಖೆಗೆ ಆದೇಶ ಮಾಡಿದೆ. ಸಿ.ಬಿ.ಎಫ್.ಸಿಯ ಹಿರಿಯ ಅಧಿಕಾರಿಯನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ, ತನಿಖೆಗೆ ಆದೇಶ ಮಾಡಿದೆ. ಈ ಕುರಿತು ಇದೊಂದು ದುರಾದೃಷ್ಟ ಸಂಗತಿ ಎಂದು ವಿಷಾದ ವ್ಯಕ್ತ ಪಡಿಸಿದೆ.

    ಲಂಚಮುಕ್ತ ಆಡಳಿತ ಕೊಡಬೇಕು ಎನ್ನುವುದು ನಮ್ಮ ಗುರಿ. ಆದರೆ, ಇಂತಹ ಬೆಳವಣಿಗೆ ನಡೆದಿದ್ದು ನೋವು ತಂದಿದೆ. ವಿಶಾಲ್ ಅವರು ವಿಡಿಯೋ ಹಾಕಿದ 24 ಗಂಟೆಯೊಳಗೆ ತನಿಖೆಗೆ ಆದೇಶ ಮಾಡಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು ಎಂದು ಸಚಿವಾಲಯ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ. ವಿಶಾಲ್ ಅವರಿಗೆ ಟ್ಯಾಗ್ ಮಾಡಲಾಗಿದೆ.

    ಏನಿದು ಪ್ರಕರಣ?

    ಸಿನಿಮಾಗಳಿಗೆ ಪ್ರಮಾಣಪತ್ರ ನೀಡುವ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ (ಸಿಬಿಎಫ್‍ಸಿ) (Censor Board) ಅಥವಾ ಸೆನ್ಸಾರ್ ಮಂಡಳಿಗಳ ಮೇಲೆ ಒಂದಿಲ್ಲೊಂದು ಆರೋಪಗಳು ಬರುತ್ತಲೇ ಇವೆ. ಇದೀಗ ತಮಿಳಿನ (Tamil) ಹೆಸರಾಂತ ನಟ ವಿಶಾಲ್ (Vishal) ಗುರುತರ ಆರೋಪವೊಂದನ್ನು ಮಾಡಿದ್ದರು. ತಮ್ಮ ತಮಿಳು ಚಿತ್ರದ ಹಿಂದಿ ಆವೃತ್ತಿಗೆ ಪ್ರಮಾಣ ಪತ್ರ ನೀಡಲು ಮುಂಬೈ ಸಿಬಿಎಫ್‍ಸಿ ಅಧಿಕಾರಿಗಳು ಲಂಚ ಕೇಳಿದ್ದರು ಎಂದು ಆರೋಪ ಮಾಡಿದ್ದರು. 

     

    ತಮಿಳು ನಟನೆಯ ಮಾರ್ಕ್ ಆಂಟೋನಿ (Mark Antony)ರಿಲೀಸ್ ಆಗಿ, ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಸಿನಿಮಾದ ಹಿಂದಿ ಆವೃತ್ತಿಗೆ ಪ್ರಮಾಣ ಪತ್ರ ಪಡೆಯಲು ಚಿತ್ರತಂಡ ಮುಂದಾಗಿದೆ. ಈ ಸಿನಿಮಾಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಬರೋಬ್ಬರಿ 6.50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂದು ವಿಶಾಲ್ ಹೇಳಿದ್ದರು. ಈ ಕುರಿತು ಸಾಕ್ಷಿ ಸಮೇತ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.

    ಹಿಂದಿಯಲ್ಲಿ ಚಿತ್ರವನ್ನು ಡಬ್ ಮಾಡಿ ಬಿಡುಗಡೆ ಮಾಡಲು ನಿರ್ಧಾರ ಮಾಡಿದೆವು. ತಾಂತ್ರಿಕ ಕಾರಣಗಳಿಂದಾಗಿ ಹಿಂದಿಯಲ್ಲಿ ಚಿತ್ರವನ್ನು ರೆಡಿ ಮಾಡಲು ಕಷ್ಟವಾಯಿತು. ಬಿಡುಗಡೆ ದಿನಾಂಕ ತೀರಾ ಹತ್ತಿರವಿದ್ದ ಕಾರಣದಿಂದಾಗಿ ಬೇಗ ಪ್ರಮಾಣ ಪತ್ರ ನೀಡುವಂತೆ ವಿನಂತಿಸಿದೆವು. ಆದರೆ, ಅಧಿಕಾರಿಗಳು ಬೇಗ ಪ್ರಮಾಣ ಪತ್ರ ಬೇಕು ಅಂದರೆ ಲಂಚ ನೀಡಿ ಎಂದರು ಎಂದು ವಿಶಾಲ್ ಮಾತನಾಡಿದ್ದರು.

     

    ಮತ್ತೊಂದು ಅಚ್ಚರಿಯ ಸಂಗತಿ ಅಂದರೆ, ಚಿತ್ರತಂಡವು ಅವರು ಕೇಳಿದ ಹಣವನ್ನು ಲಂಚದ ರೂಪದಲ್ಲಿ ನೀಡಿರುವುದಾಗಿಯೂ ವಿಶಾಲ್ ಹೇಳಿಕೊಂಡಿದ್ದರು. ತಾವು ಹಣ ಕಳುಹಿಸಿದ ಬ್ಯಾಂಕ್ ಖಾತೆಯ ವಿವರವನ್ನೂ ಅವರು ಹಂಚಿಕೊಂಡಿದ್ದರು. ನಿಮಗೆ ಯಾವುದೇ ದಾರಿ ಕಾಣದೇ ಹಣವನ್ನು ಕೊಡಬೇಕಾಯಿತು ಎಂದು ಅವರು ಹೇಳಿಕೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿನಿಮಾ ಸೆನ್ಸಾರ್ ಮಾಡಲು ಲಂಚ ಕೇಳಿದ ಆರೋಪ : ಸಾಕ್ಷಿ ನೀಡಿದ ನಟ ವಿಶಾಲ್

    ಸಿನಿಮಾ ಸೆನ್ಸಾರ್ ಮಾಡಲು ಲಂಚ ಕೇಳಿದ ಆರೋಪ : ಸಾಕ್ಷಿ ನೀಡಿದ ನಟ ವಿಶಾಲ್

    ಸಿನಿಮಾಗಳಿಗೆ ಪ್ರಮಾಣಪತ್ರ ನೀಡುವ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್ (ಸಿಬಿಎಫ್‍ಸಿ) (Censor Board) ಅಥವಾ ಸೆನ್ಸಾರ್ ಮಂಡಳಿಗಳ ಮೇಲೆ ಒಂದಿಲ್ಲೊಂದು ಆರೋಪಗಳು ಬರುತ್ತಲೇ ಇವೆ. ಇದೀಗ ತಮಿಳಿನ (Tamil) ಹೆಸರಾಂತ ನಟ ವಿಶಾಲ್ (Vishal) ಗುರುತರ ಆರೋಪವೊಂದನ್ನು ಮಾಡಿದ್ದಾರೆ. ತಮ್ಮ ತಮಿಳು ಚಿತ್ರದ ಹಿಂದಿ ಆವೃತ್ತಿಗೆ ಪ್ರಮಾಣ ಪತ್ರ ನೀಡಲು ಮುಂಬೈ ಸಿಬಿಎಫ್‍ಸಿ ಅಧಿಕಾರಿಗಳು ಲಂಚ ಕೇಳಿದ್ದರು ಎಂದು ಆರೋಪ ಮಾಡಿದ್ದಾರೆ.

    ತಮಿಳು ನಟನೆಯ ಮಾರ್ಕ್ ಆಂಟೋನಿ (Mark Antony)ರಿಲೀಸ್ ಆಗಿ, ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಕೆ ಪಡೆದುಕೊಂಡಿದೆ. ಈ ಸಿನಿಮಾದ ಹಿಂದಿ ಆವೃತ್ತಿಗೆ ಪ್ರಮಾಣ ಪತ್ರ ಪಡೆಯಲು ಚಿತ್ರತಂಡ ಮುಂದಾಗಿದೆ. ಈ ಸಿನಿಮಾಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಬರೋಬ್ಬರಿ 6.50 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು ಎಂದು ವಿಶಾಲ್ ಹೇಳಿದ್ದಾರೆ. ಈ ಕುರಿತು ಸಾಕ್ಷಿ ಸಮೇತ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ಹಿಂದಿಯಲ್ಲಿ ಚಿತ್ರವನ್ನು ಡಬ್ ಮಾಡಿ ಬಿಡುಗಡೆ ಮಾಡಲು ನಿರ್ಧಾರ ಮಾಡಿದೆವು. ತಾಂತ್ರಿಕ ಕಾರಣಗಳಿಂದಾಗಿ ಹಿಂದಿಯಲ್ಲಿ ಚಿತ್ರವನ್ನು ರೆಡಿ ಮಾಡಲು ಕಷ್ಟವಾಯಿತು. ಬಿಡುಗಡೆ ದಿನಾಂಕ ತೀರಾ ಹತ್ತಿರವಿದ್ದ ಕಾರಣದಿಂದಾಗಿ ಬೇಗ ಪ್ರಮಾಣ ಪತ್ರ ನೀಡುವಂತೆ ವಿನಂತಿಸಿದೆವು. ಆದರೆ, ಅಧಿಕಾರಿಗಳು ಬೇಗ ಪ್ರಮಾಣ ಪತ್ರ ಬೇಕು ಅಂದರೆ ಲಂಚ ನೀಡಿ ಎಂದರು ಎಂದು ವಿಶಾಲ್ ಮಾತನಾಡಿದ್ದಾರೆ.

     

    ಮತ್ತೊಂದು ಅಚ್ಚರಿಯ ಸಂಗತಿ ಅಂದರೆ, ಚಿತ್ರತಂಡವು ಅವರು ಕೇಳಿದ ಹಣವನ್ನು ಲಂಚದ ರೂಪದಲ್ಲಿ ನೀಡಿರುವುದಾಗಿಯೂ ವಿಶಾಲ್ ಹೇಳಿಕೊಂಡಿದ್ದಾರೆ. ತಾವು ಹಣ ಕಳುಹಿಸಿದ ಬ್ಯಾಂಕ್ ಖಾತೆಯ ವಿವರವನ್ನೂ ಅವರು ಹಂಚಿಕೊಂಡಿದ್ದಾರೆ. ನಿಮಗೆ ಯಾವುದೇ ದಾರಿ ಕಾಣದೇ ಹಣವನ್ನು ಕೊಡಬೇಕಾಯಿತು ಎಂದು ಅವರು ಹೇಳಿಕೊಂಡಿದ್ದಾರೆ.

    ವಿಶಾಲ್ ಆಡಿದ ಮಾತುಗಳಿಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ಲಂಚ ತೆಗೆದುಕೊಳ್ಳುವುದು ಎಷ್ಟು ಅಪರಾಧವೋ, ಕೊಡುವುದು ಕೂಡ ಅಷ್ಟೇ ಅಪರಾಧ. ಹಾಗಾಗಿ ಕೊಟ್ಟಿರುವ ಚಿತ್ರತಂಡಕ್ಕೆ ಮತ್ತು ತೆಗೆದುಕೊಂಡಿರುವ ಅಧಿಕಾರಿಗಳಿಗೆ ಯಾವ ರೀತಿಯಲ್ಲಿ ಶಿಕ್ಷೆ ಕಾದಿದೆ ನೋಡಬೇಕು ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೋಕಾಯುಕ್ತ ಬಲೆಗೆ ಬಿದ್ದ ಸೈಬರ್ ಕ್ರೈಂ ಠಾಣೆ ಹೆಡ್ ಕಾನ್‌ಸ್ಟೇಬಲ್‌

    ಲೋಕಾಯುಕ್ತ ಬಲೆಗೆ ಬಿದ್ದ ಸೈಬರ್ ಕ್ರೈಂ ಠಾಣೆ ಹೆಡ್ ಕಾನ್‌ಸ್ಟೇಬಲ್‌

    ಬೆಂಗಳೂರು: ಲಂಚ (Bribe) ಸ್ವೀಕರಿಸುವಾಗ ಬೆಂಗಳೂರು ಗ್ರಾಮಾಂತರ ಸೈಬರ್‌ ಠಾಣೆ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ.

    ಎಂ.ಲೋಕೇಶ್‌ ಬಂಧನಕ್ಕೊಳಗಾದ ಹೆಡ್‌ ಕಾನ್‌ಸ್ಟೇಬಲ್.‌ ವ್ಯಕ್ತಿಯೊಬ್ಬರಿಂದ 25,000 ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಹಾವೇರಿಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ಪ್ರಕರಣ – ಮೂವರು ಕಾರ್ಮಿಕರು ಸಜೀವ ದಹನ

    ಚಾರ್ಜ್‌ಶೀಟ್‌ನಲ್ಲಿ ಆರೋಪಿ ಹೆಸರನ್ನ ಕೈ ಬಿಡಲಿಕ್ಕೆ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಪ್ಪತೈದು ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದಾರೆ.

    ರಮೇಶ್ ಎಂಬಾತನ ವಿರುದ್ಧ ಅತ್ತಿಬೆಲೆ ಠಾಣೆಯಲ್ಲಿ ಜಾತಿನಿಂದನೆ, ಅತ್ಯಾಚಾರ ಕೇಸ್ ದಾಖಲಾಗಿತ್ತು. ಪ್ರಕರಣದಲ್ಲಿ ರಮೇಶ್‌ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ರಮೇಶ್ ತಾಯಿ ರೂಪಾ ಎಂಬವರ ಬಳಿ ಹೆಡ್‌ ಕಾನ್‌ಸ್ಟೇಬಲ್‌ ಲೋಕೇಶ್‌ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇದನ್ನೂ ಓದಿ: CWRC ಶಿಫಾರಸ್ಸು ಎತ್ತಿ ಹಿಡಿದ CWMA – ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಸಾಧ್ಯತೆ

    ಲೋಕೇಶ್ ವಿರುದ್ಧ ಆರೋಪಿ ತಾಯಿ, ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಡಿವೈಎಸ್ಪಿ ಗಿರೀಶ್ ಆನಂದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಲೋಕೇಶ್‌ರನ್ನು ಬಂಧಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪತಿ ಲಂಚ ಪಡೆದಿದ್ದಕ್ಕೆ ಜೈಪುರ ಮೇಯರ್‌ ವಜಾ

    ಪತಿ ಲಂಚ ಪಡೆದಿದ್ದಕ್ಕೆ ಜೈಪುರ ಮೇಯರ್‌ ವಜಾ

    ಜೈಪುರ: ಪತಿ ಲಂಚ ಪಡೆದು ಬಂಧನಕ್ಕೊಳಗಾದ ಬೆನ್ನಲ್ಲೇ ಜೈಪುರ ಮೇಯರ್‌ (Jaipur Mayor) ಮುನೇಶ್‌ ಗುರ್ಜಾರ್‌ ಅವರನ್ನು ರಾಜಸ್ಥಾನ (Rajasthan) ಸರ್ಕಾರ ವಜಾಗೊಳಿಸಿದೆ. ಈ ಬೆಳವಣಿಗೆಯು ಕಾಂಗ್ರೆಸ್‌ಗೆ (Congress) ಮುಜುಗರ ತಂದಿದೆ.

    ಜೈಪುರ ಹೆರಿಟೇಜ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಆಗಿರುವ ಮುನೇಶ್ ಗುರ್ಜಾರ್ ಅವರ ಪತಿ ಸುಶೀಲ್ ಗುರ್ಜರ್ ಅವರನ್ನು ನಿನ್ನೆ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳವು, ಭೂ ಗುತ್ತಿಗೆಗೆ ಸಂಬಂಧಿಸಿದಂತೆ 2 ಲಕ್ಷ ರೂ. ಲಂಚ ಪಡೆದ ಆರೋಪದಲ್ಲಿ ಬಂಧಿಸಿದೆ. ಪರಿಣಾಮವಾಗಿ ಗುರ್ಜರ್ ಅವರನ್ನು ನಾಗರಿಕ ಸಂಸ್ಥೆಯ ಸ್ಥಾನದಿಂದ ವಜಾಗೊಳಿಸಲಾಗಿದೆ. ಇದನ್ನೂ ಓದಿ: ಚೆನ್ನೈನ ಬೈಕ್ ರೇಸ್‌ನಲ್ಲಿ ಅಪಘಾತ – ಬೆಂಗಳೂರು ಮೂಲದ 13ರ ಪ್ರತಿಭೆ ದುರ್ಮರಣ

    ಮೇಯರ್ ನಿವಾಸದಲ್ಲಿ ಅವರ ಪತಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಈ ಪ್ರಕರಣದಲ್ಲಿ ಮೇಯರ್ ಶಾಮೀಲಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಪ್ರಕರಣದ ತನಿಖೆಯ ಮೇಲೆ ಪ್ರಭಾವ ಬೀರಬಹುದು ಎಂಬ ಕಾರಣಕ್ಕೆ ಮೇಯರ್‌ ವಜಾಗೊಂಡಿದ್ದಾರೆ.

    ಲಂಚ ಪಡೆದ ಪ್ರಕರಣದಲ್ಲಿ ಎಸಿಬಿ ಸುಶೀಲ್ ಗುರ್ಜಾರ್ ಸಹಿತ ಇಬ್ಬರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ. ಸುಶೀಲ್ ಗುರ್ಜರ್ ತನ್ನ ಸಹಾಯಕರಾದ ನಾರಾಯಣ್ ಸಿಂಗ್ ಮತ್ತು ಅನಿಲ್ ದುಬೆ ಮೂಲಕ ಪ್ಲಾಟ್‌ಗಾಗಿ ಗುತ್ತಿಗೆ ಅರ್ಜಿಯನ್ನು ತ್ವರಿತವಾಗಿ ಅಂಗೀಕರಿಸಲು ದೂರುದಾರರಿಂದ 2 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಅಧಿಕಾರಿಗಳು ಬಲೆ ಬೀಸಿ ಬಂಧಿಸಿದ್ದಾರೆ. ಇದನ್ನೂ ಓದಿ: ಆನ್‌ಲೈನ್‌ನಲ್ಲೇ ಪಾಕಿಸ್ತಾನದ ವಧುವನ್ನು ವರಿಸಿದ ರಾಜಸ್ಥಾನದ ವರ

    ಸುಶೀಲ್ ಗುರ್ಜರ್ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 40 ಲಕ್ಷಕ್ಕೂ ಹೆಚ್ಚು ನಗದು ಪತ್ತೆಯಾಗಿದೆ. ನಾರಾಯಣ ಸಿಂಗ್ ಅವರ ಮನೆಯಲ್ಲಿ 8 ಲಕ್ಷಕ್ಕೂ ಹೆಚ್ಚು ನಗದು ಪತ್ತೆಯಾಗಿದೆ. ನೋಟುಗಳನ್ನು ಎಣಿಸಲು ಬ್ಯಾಂಕ್‌ನಿಂದ ಎಣಿಕೆ ಯಂತ್ರ ತರಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಂಚಕ್ಕೆ ಬೇಡಿಕೆಯಿಟ್ಟು ಕೇರಳದಲ್ಲಿ ಅರೆಸ್ಟ್‌ ಆಗಿರುವ ಬೆಂಗಳೂರು ನಾಲ್ವರು ಪೊಲೀಸರು ಸಸ್ಪೆಂಡ್‌

    ಲಂಚಕ್ಕೆ ಬೇಡಿಕೆಯಿಟ್ಟು ಕೇರಳದಲ್ಲಿ ಅರೆಸ್ಟ್‌ ಆಗಿರುವ ಬೆಂಗಳೂರು ನಾಲ್ವರು ಪೊಲೀಸರು ಸಸ್ಪೆಂಡ್‌

    ಬೆಂಗಳೂರು: ವಂಚನೆ ಪ್ರಕರಣದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟು ಕೇರಳ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಬೆಂಗಳೂರಿನ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

    ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌, ಹೆಡ್‌ ಕಾನ್‌ಸ್ಟೇಬಲ್‌ಗಳಾದ ವಿಜಯ್‌ ಕುಮಾರ್‌, ಶಿವಾನಿ, ಕಾನ್‌ಸ್ಟೇಬಲ್‌ ಸಂದೇಶ್‌ ಅಮಾನತುಗೊಂಡಿದ್ದಾರೆ. ಎಸಿಪಿ ವರದಿ ಆಧರಿಸಿ ಈ ನಾಲ್ವರನ್ನೂ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ಕೇರಳದ ಕೊಚ್ಚಿಯಲ್ಲಿ ಕರ್ನಾಟಕ ಪೊಲೀಸರ ಅರೆಸ್ಟ್‌ – ಲಂಚಕ್ಕೆ ಬೇಡಿಕೆಯಿಟ್ಟು ಲಾಕ್‌ ಆದ ಬೆಂಗಳೂರು ಪೊಲೀಸರು

    ಏನಿದು ಪ್ರಕರಣ?
    ಕೇರಳದಲ್ಲಿ ಕರ್ನಾಟಕದ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌ ಸೇರಿದಂತೆ ನಾಲ್ವರು ಪೊಲೀಸರನ್ನು ಬಂಧಿಸಲಾಗಿತ್ತು. ಆರೋಪಿಯನ್ನು ಬಂಧನ ಮಾಡದೇ ಇರಲು 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಕರ್ನಾಟಕದ ಪೊಲೀಸರನ್ನು ಕೇರಳದ ಕೊಚ್ಚಿಯಲ್ಲಿ ಅರೆಸ್ಟ್‌ ಮಾಡಲಾಗಿತ್ತು.

    ಬಂಧಿತರು ಬೆಂಗಳೂರು ವೈಟ್‌ ಫೀಲ್ಡ್‌ ಸೆನ್‌ ಪೊಲೀಸರಾಗಿದ್ದಾರೆ. ಇವರನ್ನು ಕೊಚ್ಚಿಯ ಕಲಂಚೇರಿ ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್‌ ವಂಚನೆ ಕೇಸ್‌ ರಿಕವರಿಗೆ ಹೋಗಿದ್ದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ. ಇದನ್ನೂ ಓದಿ: ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ

    ಉದ್ಯೋಗ ಕೊಡಿಸುವುದಾಗಿ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಮೋಸವಾಗಿತ್ತು. ಚಂದಕ್ ಶ್ರೀಕಾಂತ್ ಎಂಬಾತ ಈ ಸಂಬಂಧ ದೂರು ಕೊಟ್ಟಿದ್ದ. ಆನ್‌ಲೈನ್ ಮೂಲಕ 26 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದ. ಈ ಪ್ರಕರಣ ತನಿಖೆಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ನಡೆಸುತ್ತಿದ್ದರು. ಮೊದಲಿಗೆ ಮಡಿಕೇರಿಯ ಐಸಾಕ್ ಬಗ್ಗೆ ಸುಳಿವು ಸಿಕ್ಕಿತ್ತು. ಅಲ್ಲಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್‌ನಲ್ಲಿ 2 ಕೋಟಿ ವರ್ಗಾವಣೆಯಾಗಿರುವುದು ಪತ್ತೆಯಾಯಿತು. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್ ಮತ್ತು ತಂಡ ಕೇರಳಕ್ಕೆ ಹೊರಟಿತ್ತು.

    ನೌಶಾದ್ ಎಂಬವನಿಂದ ಆನ್‌ಲೈನ್ ಫ್ರಾಡ್ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಅರೆಸ್ಟ್ ಮಾಡಲು ತೆರಳಿದ್ದ ವೈಟ್ ಫೀಲ್ಡ್ ಸಿಇಎನ್ ಪೊಲೀಸರು, ಬಂಧಿಸದೇ ಇರಲು 3 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ನೌಶಾದ್‌ ಕಲ್ಲಂಚೇರಿ ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣದಲ್ಲಿ ತನಿಖೆಗೆ ಎಂದು ಬಂದಿರುವುದಾಗಿ ಬೆಂಗಳೂರು ಪೊಲೀಸರು ತಿಳಿಸಿದ್ದರು. ಆದರೂ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ಎಫ್‌ಐಆರ್‌ ದಾಖಲಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇರಳದ ಕೊಚ್ಚಿಯಲ್ಲಿ ಕರ್ನಾಟಕ ಪೊಲೀಸರ ಅರೆಸ್ಟ್‌ – ಲಂಚಕ್ಕೆ ಬೇಡಿಕೆಯಿಟ್ಟು ಲಾಕ್‌ ಆದ ಬೆಂಗಳೂರು ಪೊಲೀಸರು

    ಕೇರಳದ ಕೊಚ್ಚಿಯಲ್ಲಿ ಕರ್ನಾಟಕ ಪೊಲೀಸರ ಅರೆಸ್ಟ್‌ – ಲಂಚಕ್ಕೆ ಬೇಡಿಕೆಯಿಟ್ಟು ಲಾಕ್‌ ಆದ ಬೆಂಗಳೂರು ಪೊಲೀಸರು

    ಬೆಂಗಳೂರು: ಕೇರಳದಲ್ಲಿ ಕರ್ನಾಟಕದ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌ ಸೇರಿದಂತೆ ನಾಲ್ವರು ಪೊಲೀಸರನ್ನು ಬಂಧಿಸಲಾಗಿದೆ. ಆರೋಪಿಯನ್ನು ಬಂಧನ ಮಾಡದೇ ಇರಲು 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಕರ್ನಾಟಕದ ಪೊಲೀಸರನ್ನು ಕೇರಳದ ಕೊಚ್ಚಿಯಲ್ಲಿ ಅರೆಸ್ಟ್‌ ಮಾಡಲಾಗಿದೆ.

    ಬಂಧಿತರು ಬೆಂಗಳೂರು ವೈಟ್‌ ಫೀಲ್ಡ್‌ ಸೆನ್‌ ಪೊಲೀಸರಾಗಿದ್ದಾರೆ. ಇವರನ್ನು ಕೊಚ್ಚಿಯ ಕಲಂಚೇರಿ ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್‌ ವಂಚನೆ ಕೇಸ್‌ ರಿಕವರಿಗೆ ಹೋಗಿದ್ದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸರ್ವೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ

    ಏನಿದು ಪ್ರಕರಣ?
    ಉದ್ಯೋಗ ಕೊಡಿಸುವುದಾಗಿ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಮೋಸವಾಗಿತ್ತು. ಚಂದಕ್ ಶ್ರೀಕಾಂತ್ ಎಂಬಾತ ಈ ಸಂಬಂಧ ದೂರು ಕೊಟ್ಟಿದ್ದ. ಆನ್‌ಲೈನ್ ಮೂಲಕ 26 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದ. ಈ ಪ್ರಕರಣ ತನಿಖೆಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ನಡೆಸುತ್ತಿದ್ದರು. ಮೊದಲಿಗೆ ಮಡಿಕೇರಿಯ ಐಸಾಕ್ ಬಗ್ಗೆ ಸುಳಿವು ಸಿಕ್ಕಿತ್ತು. ಅಲ್ಲಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್‌ನಲ್ಲಿ 2 ಕೋಟಿ ವರ್ಗಾವಣೆಯಾಗಿರುವುದು ಪತ್ತೆಯಾಯಿತು. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್ ಮತ್ತು ತಂಡ ಕೇರಳಕ್ಕೆ ಹೊರಟಿತ್ತು.

    ನೌಶಾದ್ ಎಂಬವನಿಂದ ಆನ್‌ಲೈನ್ ಫ್ರಾಡ್ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಅರೆಸ್ಟ್ ಮಾಡಲು ತೆರಳಿದ್ದ ವೈಟ್ ಫೀಲ್ಡ್ ಸಿಇಎನ್ ಪೊಲೀಸರು, ಬಂಧಿಸದೇ ಇರಲು 3 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ನೌಶಾದ್‌ ಕಲ್ಲಂಚೇರಿ ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣದಲ್ಲಿ ತನಿಖೆಗೆ ಎಂದು ಬಂದಿರುವುದಾಗಿ ಬೆಂಗಳೂರು ಪೊಲೀಸರು ತಿಳಿಸಿದ್ದರು. ಆದರೂ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ಎಫ್‌ಐಆರ್‌ ದಾಖಲಿಸಲಾಗಿದೆ. ಇನ್‌ಸ್ಪೆಕ್ಟರ್‌ ಶಿವಪ್ರಕಾಶ್, ಶಿವಾನಿ, ವಿಜಯ್ ಕುಮಾರ್, ಸಂದೇಶ್ ಬಂಧನಕ್ಕೊಳಗಾಗಿದ್ದಾರೆ. ಇದನ್ನೂ ಓದಿ: ನೀರಿನ ಟ್ಯಾಂಕ್ ಬಿದ್ದು ಇಬ್ಬರು ಸಾವು, ಇಬ್ಬರ ಸ್ಥಿತಿ ಚಿಂತಾಜನಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೋಕಾಯುಕ್ತ ಬಲೆಗೆ ಸಿಕ್ಕಿ ಬೀಳುತ್ತಲೇ 5,000 ರೂ. ಲಂಚವನ್ನು ಜಗಿದು ನುಂಗಿದ ಕಂದಾಯ ಅಧಿಕಾರಿ

    ಲೋಕಾಯುಕ್ತ ಬಲೆಗೆ ಸಿಕ್ಕಿ ಬೀಳುತ್ತಲೇ 5,000 ರೂ. ಲಂಚವನ್ನು ಜಗಿದು ನುಂಗಿದ ಕಂದಾಯ ಅಧಿಕಾರಿ

    ಭೋಪಾಲ್: ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲಂಚ (Bribe) ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ (Lokayukta) ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಈ ವೇಳೆ ಅವರು ಲಂಚವಾಗಿ ಸ್ವೀಕರಿಸಿದ 5,000 ರೂ. ಹಣವನ್ನು ಜಗಿದು ನುಂಗಿರುವ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

    ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ನಿಯೋಜಿಸಲಾಗಿದ್ದ ಕಂದಾಯ ಇಲಾಖೆಯ ಅಧಿಕಾರಿ ಗಜೇಂದ್ರ ಸಿಂಗ್ ಲಂಚದ ಹಣವನ್ನು ಜಗಿದು ನುಂಗಿರುವ ವ್ಯಕ್ತಿ. ಭೂ ಪ್ರಕರಣದ ದೂರುದಾರರಾದ ಚಂದನ್ ಸಿಂಗ್ ಲೋಧಿ ಅವರಿಗೆ ಗಜೇಂದ್ರ ಸಿಂಗ್ 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ಲೋಧಿ ಲೋಕಾಯುಕ್ತ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದಾರೆ.

    ಈ ಬಗ್ಗೆ ತನಿಖೆ ನಡೆಸಿದ ಜಬಲ್ಪುರದ ಲೋಕಾಯುಕ್ತ ಪೊಲೀಸರ ತಂಡ ಗಜೇಂದ್ರ ಸಿಂಗ್ ಖಾಸಗಿ ಕಚೇರಿಗೆ ತಲುಪಿದೆ. ಗಜೇಂದ್ರ ಸಿಂಗ್ ಲೋಧಿ ಅವರಿಂದ ಲಂಚವನ್ನು ಸ್ವೀಕರಿಸುತ್ತಲೇ ದಾಳಿ ನಡೆಸಿ ಕಂದಾಯ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಆದರೆ ಈ ವೇಳೆ ಗಜೇಂದ್ರ ಸಿಂಗ್ ತಾನು ಸ್ವೀಕರಿಸಿದ 5,000 ರೂ. ಮೊತ್ತದ ಲಂಚವನ್ನು ಜಗಿದು ನುಂಗಿದ್ದಾರೆ. ಇದನ್ನೂ ಓದಿ: ವ್ಯಕ್ತಿಯ ತಲೆ ಮೇಲೆ ಒದ್ದು, ಮೂತ್ರ ವಿಸರ್ಜನೆ ಮಾಡಿ ದರ್ಪ – ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ

    ತಕ್ಷಣವೇ ಗಜೇಂದ್ರ ಸಿಂಗ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸಾಕಷ್ಟು ಪ್ರಯತ್ನಗಳ ನಂತರ ಲಂಚದ ನೋಟುಗಳನ್ನು ಅವರ ಬಾಯಿಯಿಂದ ತಿರುಳಿನ ರೂಪದಲ್ಲಿ ಹೊರತೆಗೆಯಲಾಗಿದೆ. ಸದ್ಯ ಗಜೇಂದ್ರ ಸಿಂಗ್ ಆರೋಗ್ಯ ಸ್ಥಿರವಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ನೋಂದಣಿ ವೇಳೆ ಹಣ ವಸೂಲಿ – 3 ಸೈಬರ್ ಕೇಂದ್ರ ಮಾಲೀಕರ ವಿರುದ್ಧ ಕೇಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]