Tag: ಲಂಚ

  • ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನಿಂದ ಲಂಚ ಪಡೆದ ಆರೋಪ – ಎಎಸ್‌ಐ ಅಮಾನತು

    ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನಿಂದ ಲಂಚ ಪಡೆದ ಆರೋಪ – ಎಎಸ್‌ಐ ಅಮಾನತು

    ಹುಬ್ಬಳ್ಳಿ: ಸಂಚಾರ ನಿಯಮ ಉಲ್ಲಂಘನೆ ಮಾಡಿದ ಬೈಕ್ ಸವಾರರೊಬ್ಬರಿಗೆ ರಶೀದಿ ನೀಡದೆ ಲಂಚದ (Bribe) ರೂಪದಲ್ಲಿ ಹಣ ಪಡೆದ ಆರೋಪದ ಮೇಲೆ ಉತ್ತರ ಸಂಚಾರ ಠಾಣೆ ಎಎಸ್‌ಐ (ASI) ರಮ್ಜಾನಬಿ ಅಳಗವಾಡಿ ಅವರನ್ನು ಅಮಾನತು ಮಾಡಲಾಗಿದೆ.

    ಹುಬ್ಬಳ್ಳಿ (Hubballi) ಹೊಸೂರಿನ ಗಾಳಿ ದುರ್ಗಮ್ಮ ದೇವಸ್ಥಾನದ ಎದುರು ಹೆಲ್ಮೆಟ್ ಧರಿಸದೆ ಬೈಕ್ ಸವಾರರೊಬ್ಬರು ತೆರಳುತ್ತಿದ್ದರು. ಅವರನ್ನು ತಡೆದು ದಂಡ ಪಾವತಿಸುವಂತೆ ಎಎಸ್‌ಐ ಹೇಳಿದ್ದರು. ಇದನ್ನೂ ಓದಿ: ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಜೆಡಿಎಸ್‌-ಬಿಜೆಪಿ ಹೊಂದಾಣಿಕೆ: ಕಾಲೆಳೆದ ಕಾಂಗ್ರೆಸ್‌

    ಸವಾರ ನೀಡಿದ ದಂಡದ ಶುಲ್ಕವನ್ನು ಎಎಸ್‌ಐ ಜೇಬಿಗೆ ಹಾಕಿಕೊಂಡು, ಅದಕ್ಕೆ ರಶೀದಿ ನೀಡಿರಲಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಮಾಹಿತಿ ತಿಳಿದ ತಕ್ಷಣ ಪ್ರಕರಣ ಮಾಹಿತಿ ಪಡೆದ ಪೊಲೀಸ್ ಕಮಿಷನರ್ ಸಂತೋಷ್ ಬಾಬು ಎಎಸ್‌ಐಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: KSRTC ನೌಕರ ಆತ್ಮಹತ್ಯೆ – ಮ್ಯಾನೇಜರ್ ಕಿರುಕುಳ ಆರೋಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೋಸ್ಟಿಂಗ್‌ ಪಡೆದ ಮೊದಲ ಸಲವೇ ಲಂಚ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಅರೆಸ್ಟ್‌

    ಪೋಸ್ಟಿಂಗ್‌ ಪಡೆದ ಮೊದಲ ಸಲವೇ ಲಂಚ ಪಡೆಯುತ್ತಿದ್ದ ಮಹಿಳಾ ಅಧಿಕಾರಿ ಅರೆಸ್ಟ್‌

    ರಾಂಚಿ: ಮೊದಲ ಪೋಸ್ಟಿಂಗ್‌ನಲ್ಲೇ ಲಂಚ ಪಡೆಯುತ್ತಿದ್ದ ಜಾರ್ಖಂಡ್‌ನ (Jharkhand) ಸಹಕಾರಿ ಇಲಾಖೆಯ ಮಹಿಳಾ ಅಧಿಕಾರಿಯನ್ನು (Women Officer) ಭ್ರಷ್ಟಾಚಾರ ನಿಗ್ರಹ ದಳ (ACB) ಬಂಧಿಸಿದೆ. ಈ ಅಧಿಕಾರಿ 8 ತಿಂಗಳ ಹಿಂದೆಯಷ್ಟೇ ಕೊಡೆರ್ಮಾದಲ್ಲಿ ಸಹಾಯಕ ರಿಜಿಸ್ಟ್ರಾರ್‌ ಆಗಿ ಮೊದಲ ಪೋಸ್ಟಿಂಗ್‌ ಹಾಕಿಸಿಕೊಂಡಿದ್ದರು.

    ಕೋಡೆರ್ಮಾ ವ್ಯಾಪಾರ ಸಹಕಾರ ಸಮಿತಿಯಿಂದ ಮಹಿಳಾ ಅಧಿಕಾರಿ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 10 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದಾಗ ಎಸಿಬಿ ತಂಡ ಆಕೆಯನ್ನು ಬಂಧಿಸಿದೆ. ಇದನ್ನೂ ಓದಿ: ಪರಿಹಾರ ಸಿಕ್ಕರೆ ಮಗನ ಕಾಲೇಜು ಶುಲ್ಕ ಕಟ್ಟಬಹುದು ಅಂತ ಬಸ್‌ಗೆ ಅಡ್ಡ ಬಂದ ಮಹಿಳೆ ಅಪಘಾತದಲ್ಲಿ ಸಾವು

    ಲಂಚ ಕೇಳಿದ ಹಿನ್ನೆಲೆಯಲ್ಲಿ ಸಮಿತಿಯ ಸದಸ್ಯ ರಾಮೇಶ್ವರ ಪ್ರಸಾದ್ ಯಾದವ್, ಎಸಿಬಿ ಡಿಜಿಗೆ ದೂರು ನೀಡಿದ್ದರು. ಎಸಿಬಿ ದೂರನ್ನು ಪರಿಶೀಲಿಸಿ ಆಕೆಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿಯಲು ಬಲೆ ಬೀಸಲಾಗಿತ್ತು.

    ಆಕೆ ಲಂಚ ತೆಗೆದುಕೊಳ್ಳುತ್ತಿರುವ ವೀಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದಿನ ಕ್ರಮಕ್ಕಾಗಿ ಎಸಿಬಿ ತಂಡ ಆಕೆಯನ್ನು ಹಜಾರಿಬಾಗ್‌ಗೆ ಕರೆದೊಯ್ದಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌; 4 ಉಗ್ರರ ಹತ್ಯೆ

    ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ. ಲಂಚ ಸ್ವೀಕರಿಸುತ್ತಿದ್ದ ವೇಳೆ ಶರ್ಮಾ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಸ್ ಖುಲಾಸೆ ಮಾಡಿಕೊಡಲು ಲಂಚ – ಲೋಕಾಯುಕ್ತ ಬಲೆಗೆ ಬಿದ್ದ ಹೆಡ್‌ ಕಾನ್‌ಸ್ಟೇಬಲ್‌

    ಕೇಸ್ ಖುಲಾಸೆ ಮಾಡಿಕೊಡಲು ಲಂಚ – ಲೋಕಾಯುಕ್ತ ಬಲೆಗೆ ಬಿದ್ದ ಹೆಡ್‌ ಕಾನ್‌ಸ್ಟೇಬಲ್‌

    ರಾಮನಗರ: ವಂಚನೆ ಕೇಸ್‌ವೊಂದನ್ನ ಖುಲಾಸೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಹೆಡ್‌ ಕಾನ್‌ಸ್ಟೇಬಲ್‌ (Head Constable) ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾನೆ.

    ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ಮಹೇಶ್ 50 ಸಾವಿರ ರೂ. ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ‌ ಖಾಸಗಿ ಹೋಟೆಲ್‌ನಲ್ಲಿ ಹಣ ಪಡೆಯುವಾಗ ಖಚಿತ ಮಾಹಿತಿ ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದನ್ನೂ ಓದಿ: JDS ಜೊತೆ ಮೈತ್ರಿ ವಿಚಾರ – ವರಿಷ್ಠರು, ದೊಡ್ಡಗೌಡ್ರ ನಡುವೆ ಮಾತುಕತೆಯಾಗಿದೆ ಎಂದ ಬೊಮ್ಮಾಯಿ

    ಚೀಟಿಂಗ್ ಪ್ರಕರಣ ಖುಲಾಸೆ ಮಾಡಿಕೊಡುವುದಾಗಿ 2.5 ಲಕ್ಷಕ್ಕೆ ಬೇಡಿಕೆ‌ ಇಟ್ಟಿದ್ದ ಮಹೇಶ್, ಈಗಾಗಲೇ 75 ಸಾವಿರ ಲಂಚ ಪಡೆದಿದ್ದ‌. ಇಂದು 50 ಸಾವಿರ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ‌. ಸದ್ಯ ಹೆಡ್ ಕಾನ್‌ಸ್ಟೇಬಲ್ ಮಹೇಶ್ ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಂಚ ನಾನೂ ಮುಟ್ಟಲ್ಲ, ನೀವೂ ಮುಟ್ಟಬೇಡಿ- ಅಧಿಕಾರಿಗಳಿಗೆ ಡಿಕೆಶಿ ಖಡಕ್ ಎಚ್ಚರಿಕೆ

    ಲಂಚ ನಾನೂ ಮುಟ್ಟಲ್ಲ, ನೀವೂ ಮುಟ್ಟಬೇಡಿ- ಅಧಿಕಾರಿಗಳಿಗೆ ಡಿಕೆಶಿ ಖಡಕ್ ಎಚ್ಚರಿಕೆ

    – ಭ್ರಷ್ಟಾಚಾರಮುಕ್ತ ಆಡಳಿತ ಕೊಡಿ ಎಂದ ಡಿಸಿಎಂ

    ರಾಮನಗರ: ನಾವು ಯಾರನ್ನೂ ಲಂಚ (Bribe) ಕೇಳಿಲ್ಲ, ಲಂಚ ತೆಗೆದುಕೊಳ್ಳುವುದೂ ಇಲ್ಲ. ನೀವೂ ಯಾರೂ ಲಂಚ ತೆಗೆದುಕೊಳ್ಳದೆ ಜನರ ಕೆಲಸ ಮಾಡಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D.K.Shivakumar) ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

    ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ನೇತೃತ್ವದಲ್ಲಿ ರಾಮನಗರದಲ್ಲಿ (Ramanagara) ನಡೆದ ಜಿಲ್ಲಾ ಮಟ್ಟದ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಧಿಕಾರಿಗಳಿಗೆ ಹಲವು ಸಲಹೆ ಸೂಚನೆ ನೀಡಿದರು. ಜನರ ಕೆಲಸ ಮಾಡುವ ಸಲುವಾಗಿ ಜನ ನಮಗೂ ನಿಮಗೂ ಅವಕಾಶ ಕೊಟ್ಟಿದ್ದಾರೆ. ಸಮಸ್ಯೆ ಬಗೆಹರಿಯದಿದ್ದಾಗ ಜನರು ರಾಜಕಾರಣಿಗಳ ಹತ್ತಿರ ಬರುತ್ತಾರೆ. ನೀವು ಕಾನೂನು ವಿರುದ್ಧವಾಗಿ ಕೆಲಸ ಮಾಡಬೇಡಿ. ಕಾನೂನು ಚೌಕಟ್ಟಿನಲ್ಲಿ ಜನರ ಕೆಲಸ ಮಾಡಿಕೊಡಿ ಎಂದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮೊಬೈಲ್ ಬಳಸುತ್ತಿಲ್ಲವಂತೆ!- ಕಾರಣ ಇಲ್ಲಿದೆ

    ಜನ ನಮ್ಮನ್ನು ಸುಮ್ಮನೆ ಆಯ್ಕೆ ಮಾಡಿಲ್ಲ. ರಾಜ್ಯದ ಆಡಳಿತದಲ್ಲಿ ಬದಲಾವಣೆ ಮಾಡುತ್ತೇವೆ, ಒಳ್ಳೆಯ ಆಡಳಿತ ಕೊಡುತ್ತೇವೆ ಎಂದು ಸರ್ಕಾರ ತಂದಿದ್ದಾರೆ. ಹಿಂದೆ ಮೈತ್ರಿ ಸರ್ಕಾರ ಇತ್ತು. ಆಮೇಲೆ ಬಿಜೆಪಿ (BJP) ಆಪರೇಷನ್ ಮಾಡಿ ಸರ್ಕಾರ ರಚನೆ ಮಾಡಿತು. ಆದರೆ ಯಾರೂ ಉತ್ತಮ ಆಡಳಿತ ಕೊಡಲಿಲ್ಲ. ಬಿಜೆಪಿ ಅವಧಿಯಲ್ಲಿ ಭ್ರಷ್ಟಾಚಾರ (Corruption) ಜಾಸ್ತಿ ಆಯಿತು. ಇದರಿಂದ ಜನ ರೋಸಿ ಹೋಗಿ ನಮ್ಮನ್ನು ಅಧಿಕಾರದಲ್ಲಿ ಕೂರಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಕೇಂದ್ರದ ಅಕ್ಕಿ ಬೇಕಿದ್ದರೆ ನಮ್ಮನ್ನು ಕೇಳಿಯೇ ಘೋಷಣೆ ಮಾಡ್ಬೇಕು: ಪ್ರಲ್ಹಾದ್ ಜೋಶಿ

    ನಾನು ಯಾರನ್ನೂ ವರ್ಗಾವಣೆ (Transfer) ಮಾಡುವುದಿಲ್ಲ. ನಿಮ್ಮ ಹತ್ತಿರ ಕೆಲಸ ಹೇಗೆ ಮಾಡಿಸಬೇಕು ಎಂದು ನನಗೆ ಗೊತ್ತಿದೆ. ವರ್ಗಾವಣೆ ಒಂದೇ ಸಮಸ್ಯೆಗೆ ಪರಿಹಾರ ಅಲ್ಲ. ನಮ್ಮ ಅನುಭವದಲ್ಲಿ ಕೆಲಸ ಹೇಗೆ ಮಾಡಿಸಬೇಕೆಂಬುದು ಗೊತ್ತಿದೆ, ಮಾಡಿಸುತ್ತೇನೆ. ಪ್ರತಿಯೊಬ್ಬರು ನಿಮ್ಮ ಸಂಪೂರ್ಣ ಮಾಹಿತಿ ಕೊಡಿ. ಎಲ್ಲಾ ಕಚೇರಿಯಲ್ಲೂ ಬಯೋಮೆಟ್ರಿಕ್ ಸಿಸ್ಟಮ್ ಇರಬೇಕು. ಎಷ್ಟು ಹೊತ್ತಿಗೆ ಆಫೀಸ್‌ಗೆ ಬರುತ್ತೀರಿ, ಹೋಗುತ್ತೀರಿ ಎಂದು ದಾಖಲಾಗಬೇಕು ಎಂದು ಸೂಚನೆ ನೀಡಿದರು. ಇದನ್ನೂ ಓದಿ: ಜುಲೈನಲ್ಲಿ ಮಂಡಿಸೋ ಬಜೆಟ್ ಗಾತ್ರ 30-35 ಸಾವಿರ ಕೋಟಿ ಹೆಚ್ಚಳ ಆಗುತ್ತೆ: ಸಿದ್ದರಾಮಯ್ಯ

    ಬೆಸ್ಕಾಂ (BESCOM) ಅಧಿಕಾರಿಗಳು ಸರ್ಕಾರದ ಮಹತ್ವದ ಯೋಜನೆ ಗೃಹಜ್ಯೋತಿ (Gruhajyothi) ಬಗ್ಗೆ ಜನರಿಗೆ ಜಾಗೃತಿ ಮೂಡಿಸಿ. ಯರ‍್ಯಾರು ನೋಂದಣಿ ಆಗಿಲ್ಲ ಅದನ್ನು ನೋಂದಣಿ ಮಾಡಿಸಿ. ನೀವೇ ಖುದ್ದಾಗಿ ಭೇಟಿ ನೀಡಿ ನೋಂದಣಿ ಮಾಡಿಸಿ. ಬಿಜೆಪಿಯವರ ಕಾಲದಲ್ಲೇ ವಿದ್ಯುತ್ ದರ ಹೆಚ್ಚಳ ಆಗಿರೋದು. ಆದರೆ ನಮ್ಮ ಸರ್ಕಾರದ ವಿರುದ್ಧ ಅಪಪ್ರಚಾರ ಆಗುತ್ತಿದೆ. ಅದನ್ನು ಜನರಿಗೆ ತಿಳಿಸಬೇಕು. ನನ್ನ ಕನಸಿನ ಯೋಜನೆ ಒಂದಿದೆ. ಎರಡು-ಮೂರು ಪಂಚಾಯಿತಿ ಸೇರಿಸಿ ಒಳ್ಳೆಯ ಶಾಲೆ ಮಾಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಅತ್ಯುತ್ತಮ ಶಾಲೆ ನಿರ್ಮಾಣ ಆಗಬೇಕು. ನವೋದಯ ಮಾದರಿಯಲ್ಲಿ ಹಳ್ಳಿ ಮಕ್ಕಳಿಗೆ ಶಿಕ್ಷಣ ಸಿಗಬೇಕು. ಕ್ಲಸ್ಟರ್ ಮಟ್ಟದಲ್ಲಿ ಶಾಲೆ ನಿರ್ಮಾಣ ಆಗಬೇಕು. ಇದು ಇಡೀ ರಾಜ್ಯಕ್ಕೆ ಅನ್ವಯ ಆಗುವ ಹಾಗೆ ಯೋಜನೆ ಮಾಡುತ್ತೇವೆ. ರಾಮನಗರದಲ್ಲಿ ಪ್ರಾಯೋಗಿಕ ಆರಂಭ ಆಗಬೇಕು. ಇದಕ್ಕೆ ಶಿಕ್ಷಣ ಇಲಾಖೆ ಬೇಕಾದ ಸಿದ್ಧತೆ ಮಾಡಿಕೊಳ್ಳಿ ಎಂದು ತಿಳಿಸಿದರು. ಇದನ್ನೂ ಓದಿ: 10 ಕೆಜಿ ಅಕ್ಕಿ ಕೊಡದೇ ಇದ್ರೆ ಸಿದ್ದರಾಮಯ್ಯ ನಂ.1 ಸುಳ್ಳುಗಾರ ಎಂದು ತಿಳಿಸುತ್ತೇವೆ: ಎನ್ ರವಿಕುಮಾರ್

    ತಾಲೂಕು ಕಚೇರಿಗಳಲ್ಲಿ ಭ್ರಷ್ಟಾಚಾರದ ಬಗ್ಗೆ ಒಂದು ಬೋರ್ಡ್ ಹಾಕಬೇಕು. ಎಲ್ಲಾದರೂ ಲಂಚ ಕೇಳಿದರೆ ಯಾರನ್ನು ಸಂಪರ್ಕ ಮಾಡಬೇಕು, ಯಾರಿಗೆ ದೂರು ಕೊಡಬೇಕು ಎಂದು ಒಂದು ಬೋರ್ಡ್ ಹಾಕಿ. ಆಡಳಿತದಲ್ಲಿ ಭ್ರಷ್ಟಾಚಾರ ಮುಕ್ತ ಮಾಡಿ. ಜಿಲ್ಲೆಯಲ್ಲಿ ಕ್ರೈಂ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಿಬೇಕು. ಜಿಲ್ಲೆಯಲ್ಲಿ ಯಾವುದೇ ಪ್ರೈವೆಟ್ ಕ್ಲಬ್ ಇರಬಾರದು. ಮನೆಗಳಲ್ಲಿ, ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಟಿ ಮಾಡುವವರ ಮೇಲೆ ಗಮನ ಹರಿಸಬೇಕು. ಮಾದಕ ವಸ್ತುಗಳ ಬಳಕೆಗೆ ಕಡಿವಾಣ ಹಾಕಬೇಕು. ಅಲ್ಲದೇ ಬೆಂಗಳೂರಿನಿಂದ (Bengaluru) ಕಸ ತಂದು ಕನಕಪುರ ರಸ್ತೆ ಪಕ್ಕ ಹಾಕುತ್ತಿದ್ದಾರೆ. ಅದರ ಬಗ್ಗೆ ಗಮನಹರಿಸಿ ಎಲ್ಲಾ ಕಡೆ ಸಿಸಿ ಕ್ಯಾಮರಾ ಅಳವಡಿಕೆ ಮಾಡಿ ಎಂದು ಸೂಚಿಸಿದರು. ಇದನ್ನೂ ಓದಿ: ವಿಶ್ವ ಡ್ರಗ್ಸ್ ನಿಷೇಧ ದಿನ- ಶಾಲಾ ಕಾಲೇಜುಗಳಲ್ಲಿ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

    ಸರ್ಕಾರ ಐದು ಗ್ಯಾರಂಟಿಗಳ (Guarantee Scheme) ಘೋಷಣೆ ಮಾಡಿದೆ. ಉಚಿತ ಬಸ್ ಯೋಜನೆಗೆ ಕೆಲವೇ ದಿನಗಳಲ್ಲಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುತ್ತಾರೆ. ಗೃಹಜ್ಯೋತಿಯ ನೋಂದಣಿ ಕೂಡಾ ನಡೆಯುತ್ತಿದೆ. ಕೆಲವು ಕಡೆ ಹಣ ವಸೂಲಿ ಮಾಡುತ್ತಿರುವುದು ಕೇಳಿಬರುತ್ತಿದೆ. ಈ ಬಗ್ಗೆ ಅಧಿಕಾರಿಗಳು ಎಚ್ಚರವಹಿಸಿ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ ಆಗುತ್ತಿದೆ. ಗ್ರಾಮ ಒನ್, ಡಿಜಿಟಲ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಹಾಕಬೇಕು. ಗೃಹಲಕ್ಷ್ಮಿ ಯೋಜನೆ ಅರ್ಜಿ ಸಂಪೂರ್ಣ ಉಚಿತ. ಯಾವುದೇ ಕಾರಣಕ್ಕೂ ಯಾರೂ ಹಣ ಕೊಡಬಾರದು. ಎಲ್ಲಾ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಲಹೆ ನೀಡಿದರು. ಇದನ್ನೂ ಓದಿ: ಪೊಲೀಸರು ನನ್ನನ್ನ ಒದ್ದು ಒಳಗೆ ಹಾಕಿದ್ರು – ಇಂಟರೆಸ್ಟಿಂಗ್‌ ಸಂಗತಿ ಹಂಚಿಕೊಂಡ ಸಿಎಂ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • 40 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

    40 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

    ಮಂಡ್ಯ: 40 ಸಾವಿರ ರೂ. ಲಂಚ (Bribery) ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ (Tehsildar) ಒಬ್ಬರು ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವ ಘಟನೆ ಮಂಡ್ಯ (Mandya) ಜಿಲ್ಲೆಯಲ್ಲಿ ನಡೆದಿದೆ. ಪಾಂಡವಪುರ ತಹಶೀಲ್ದಾರ್ ಸೌಮ್ಯಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

    ವಿಎ ವರ್ಗಾವಣೆ ವಿಚಾರಕ್ಕೆ ಸೌಮ್ಯಾ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ವಿಎ ಮರಿಸ್ವಾಮಿ ಅವರನ್ನು ಗುಮ್ಮನಹಳ್ಳಿಯಿಂದ ದೊಡ್ಡಮ್ಮನಹಳ್ಳಿಗೆ ವರ್ಗಾವಣೆ ಮಾಡಲು ತಹಶೀಲ್ದಾರ್ ಸೌಮ್ಯಾ ಲಂಚ ಕೇಳಿದ್ದರು. ಈ ಬಗ್ಗೆ ಮರಿಸ್ವಾಮಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದನ್ನೂ ಓದಿ: ಕೋವಿನ್ ಪೋರ್ಟಲ್ ಡೇಟಾ ಲೀಕ್ ಪ್ರಕರಣ – ಅಪ್ರಾಪ್ತ ಸೇರಿ ಇಬ್ಬರ ಬಂಧನ

    ಗುರುವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತಹಶೀಲ್ದಾರ್ ಕಚೇರಿಯಲ್ಲಿ 40 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದಾಗ ಸೌಮ್ಯಾ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: 13 ಬಾರಿ ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ ಕೊಡೋಕೆ ಆಗಲ್ಲ: ಸಿದ್ದುಗೆ ಡಿವಿಎಸ್ ಟಾಂಗ್

  • ಲಂಚ ಮುಕ್ತ ಕರ್ನಾಟಕ ಮಾಡುತ್ತೇವೆ: ಡಿಕೆಶಿ ಶಪಥ

    ಲಂಚ ಮುಕ್ತ ಕರ್ನಾಟಕ ಮಾಡುತ್ತೇವೆ: ಡಿಕೆಶಿ ಶಪಥ

    ಬೆಂಗಳೂರು: ಲಂಚ (Corruption) ಮುಕ್ತ ಕರ್ನಾಟಕವನ್ನಾಗಿ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K Shivakumar) ಇಂದು ಶಪಥ ಮಾಡಿದರು.

    ನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ (Congress Protest) ವೇಳೆ ಮಾತನಾಡಿದ ಅವರು, ಯಾರೂ ಲಂಚ ಕೇಳಬಾರದು. ಲಂಚ ಕೇಳದೆ ಕೆಲಸ ಮಾಡಿಕೊಡಬೇಕು. ನಾವು ಕಾಲ್ ಸೆಂಟರ್ ಮಾಡ್ತೀವಿ. ನಮ್ಮ ಕಾರ್ಯಕರ್ತರು ಲಂಚ ಕೇಳಿದ್ರೂ ಕೇಸ್ ಹಾಕೋದೇ. ಲಂಚ ಮುಕ್ತ ಕರ್ನಾಟಕ ಆಗಬೇಕು ಎಂದು ಒತ್ತಿ ಹೇಳಿದರು.

    ಉಚಿತ ವಿದ್ಯುತ್ (200 Free Unit) ಗೆ ನೋಂದಣಿ ಆರಂಭ ಆಗಿದೆ. ಬಹಳ ಆತುರಪಡಬೇಡಿ, ನೂಕುನುಗ್ಗಲು ಮಾಡಬೇಡಿ. ಸರ್ವರ್ ಕೂಡ ಕಡಿಮೆ ಆಗಿದೆ. ಅದಕ್ಕೆ ಗೃಹಲಕ್ಷ್ಮಿ ಯೋಜನೆಗೆ ನಾವು ಸ್ವಲ್ಪ ಟೈಮ್ ತೆಗೆದುಕೊಂಡಿದ್ದೀವಿ. ನಮ್ಮ ಕಾರ್ಯಕರ್ತರು ಪಕ್ಷ ಬೇಧ ಮರೆತು ಎಲ್ಲರಿಗೂ ಕೊಡಬೇಕು. ಬೇಡ ಅಂದೋರಿಗೆ ಬೇಡ, ಬೇಕು ಅಂದೋರಿಗೆ ಕೊಡೋಣ ಎಂದರು.

    ರಾಮಲಿಂಗಾರೆಡ್ಡಿಯವರ ಮನೆಯ ಹೆಂಗಸರು ಬಸ್‍ನಲ್ಲಿ ಓಡಾಡಲ್ಲ ಅಂದ್ರೆ ಬೇಡ. ನಾರಾಯಣಸ್ವಾಮಿ ನಿಮ್ಮ ಮನೆಯವರನ್ನ ಕರೆದುಕೊಂಡು ಓಡಾಡಿ. ನಮ್ಮ ಮನೆಯವರು ಬೇಕಾದ್ರೂ ಅರ್ಜಿ ಹಾಕಲಿ ನಾನು ಬೇಡ ಎನ್ನಲ್ಲ. ಎರಡು ಸಾವಿರ ಬೇಕು, ಸಂಸಾರ ನಡೆಸಬೇಕು ಅಂತಿದ್ರೆ ಅರ್ಜಿ ಹಾಕಿಕೊಳ್ಳಲಿ ಎಂದು ಡಿಕೆಶಿ ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ – ಸರ್ಕಾರದ ವಿರುದ್ಧ ಅಶೋಕ್‌ ಕಿಡಿ

    ಕೇಂದ್ರ ಸರ್ಕಾರ (Central Govt) ನಮಗೆ ಅಕ್ಕಿ (Rice) ಕೊಡ್ತೀವಿ ಎಂದಿದ್ರು. ಪುಕ್ಸಟ್ಟೆ ಅಲ್ಲ, ಕಾಸು ಕಟ್ಟಿಸಿಕೊಂಡು ಕೊಡೋದು. ಈಗ ಎಫ್‍ಸಿಐ ನಿಂದ ರದ್ದು ಮಾಡಿದ್ದಾರೆ. ಒಂದು ಕಾಳು ಕಡಿಮೆ ಆದ್ರೂ ತೆಗೆದುಕೊಳ್ಳಬೇಡಿ ಅಂತಾ ಯಡಿಯೂರಪ್ಪ, ಬೊಮ್ಮಾಯಿ ಹೇಳ್ತಿದ್ದಾರೆ. ನಮ್ಮ ಯುವಕರಿಗೆ ಇನ್ನೂ ಉದ್ಯೋಗ ಕೊಡಿಸಿಲ್ಲ ನೀವು. ರೈತರ ಆದಾಯ ಯಾಕೆ ಡಬಲ್ ಮಾಡಲಿಲ್ಲ. 15 ಲಕ್ಷ ಯಾಕೆ ಹಾಕಿಸಲಿಲ್ಲ. ಇದರ ವಿರುದ್ಧ ಮೊದಲು ಪ್ರತಿಭಟನೆ ಮಾಡಬೇಕು ಎಂದು ವಾಗ್ದಾಳಿ ನಡೆಸಿದರು.

    ಒಬ್ಬೊಬ್ಬರು ಒಂದೊಂದು ಮಾತಾಡೋದು. ಅಶೋಕ್.. ಓ ಚಕ್ರವರ್ತಿಯವರು ಮಾತಾಡ್ತಾರೆ. ಪಾಪ ಚಕ್ರವರ್ತಿ ನಮ್ಮೂರಿಗೆ ಬಂದಿದ್ರು. ಸಾಮ್ರಾಟ್ ಅಶೋಕ್ ಅವರು ಬಂದಿದ್ದರು ಎಂದು ಇದೇ ವೇಳೆ ಆರ್ ಅಶೋಕ್ (R Ashok) ಬಗ್ಗೆ ಡಿಕೆಶಿ ವ್ಯಂಗ್ಯವಾಡಿದರು.

  • ವಿದ್ಯುತ್ ಸಂಪರ್ಕ ನೀಡಲು 2 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಎಇಇ

    ವಿದ್ಯುತ್ ಸಂಪರ್ಕ ನೀಡಲು 2 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಎಇಇ

    ಮಡಿಕೇರಿ: 49 ಕೆವಿ ಸಾಮರ್ಥ್ಯದ ವಿದ್ಯುತ್ ಸಂಪರ್ಕ ನೀಡಲು 2 ಲಕ್ಷ ರೂ. ಲಂಚ (Bribery) ಪಡೆಯುತ್ತಿದ್ದ ವೇಳೆ ಸೆಸ್ಕ್‌ನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಅವರನ್ನು ಲೋಕಾಯುಕ್ತ ಪೊಲೀಸರು (Lokayukta Police) ಗುರುವಾರ ರಾತ್ರಿ ಬಂಧಿಸಿದ್ದಾರೆ.

    ಪ್ರತಾಪ್ ಎಂಬುವವರು ಕೊಡಗಿನ ಕುಶಾಲನಗರದಲ್ಲಿ ಎಲೆಕ್ಟ್ರಾನಿಕ್ ವಾಹನಗಳ ಚಾರ್ಜಿಂಗ್ ಕೇಂದ್ರ ತೆರೆಯಲು ಅರ್ಜಿ ಸಲ್ಲಿಸಿದ್ದರು. 49 ಕೆವಿ ಸಾಮರ್ಥ್ಯದ ವಿದ್ಯುತ್ ಸಂಪರ್ಕ ನೀಡಲು ಅಶೋಕ್ 5 ಲಕ್ಷ ರೂ. ಲಂಚ ಕೇಳಿದ್ದರು. ಇದರ ಮೊದಲ ಕಂತಿನ ಹಣವಾಗಿ 2 ಲಕ್ಷ ರೂ. ಪಡೆಯುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಲಾಯಿತು ಎಂದು ಲೋಕಾಯುಕ್ತ ಮೈಸೂರು ವಿಭಾಗದ ಎಸ್‌ಪಿ ಸುರೇಶ್ ಬಾಬು ತಿಳಿಸಿದರು. ಇದನ್ನೂ ಓದಿ: ಸಿದ್ದು ಪ್ರಮಾಣವಚನ ವೇಳೆ ವೇದಿಕೆಯಲ್ಲಿ ಕ್ರಿಮಿನಲ್‌ ಹಿನ್ನಲೆಯುಳ್ಳ ವ್ಯಕ್ತಿ – ತನಿಖೆಗೆ ರಾಜ್ಯಪಾಲರ ಪತ್ರ

    ಲೋಕಾಯುಕ್ತ ಮಡಿಕೇರಿಯ ಡಿವೈಎಸ್‌ಪಿ ಪವನ್ ಕುಮಾರ್ ಇನ್‌ಸ್ಪೆಕ್ಟರ್‌ಗಳಾದ ಲೋಕೇಶ್, ಮಂಜುನಾಥ ಕಾರ್ಯಾಚರಣೆ ತಂಡದಲ್ಲಿದ್ದರು. ಇದನ್ನೂ ಓದಿ: ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸರು – ತಪ್ಪಾಯ್ತು ಬಿಟ್ಬಿಡಿ ಅಣ್ಣಾ ಎಂದು ಸಾರ್ವಜನಿಕರಲ್ಲಿ ಕ್ಷಮೆ

  • ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸರು – ತಪ್ಪಾಯ್ತು ಬಿಟ್ಬಿಡಿ ಅಣ್ಣಾ ಎಂದು ಸಾರ್ವಜನಿಕರಲ್ಲಿ ಕ್ಷಮೆ

    ಲಂಚ ತೆಗೆದುಕೊಳ್ಳುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸರು – ತಪ್ಪಾಯ್ತು ಬಿಟ್ಬಿಡಿ ಅಣ್ಣಾ ಎಂದು ಸಾರ್ವಜನಿಕರಲ್ಲಿ ಕ್ಷಮೆ

    ತುಮಕೂರು: ಹೈವೆಯಲ್ಲಿ ಕುರಿ ಸಾಗಿಸುತ್ತಿದ್ದ ಕಂಟೇನರ್ ವಾಹನವನ್ನು ಪೊಲೀಸರು (Police) ಅಡ್ಡಗಟ್ಟಿ ಚಾಲಕನಿಂದ ಹಣ ವಸೂಲಿ ಮಾಡುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ.

    ತುಮಕೂರು (Tumakuru) ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಹೈವೆಯಲ್ಲಿ ಹೋಗುತಿದ್ದ ಕಂಟೇನರ್ ತಡೆದು ಹಣ ಪೀಕುತಿದ್ದ ದೃಶ್ಯವನ್ನು ಸಾರ್ವಜನಿಕರು ಮೊಬೈಲಿನಲ್ಲಿ ಸೆರೆಹಿಡಿದಿದ್ದಾರೆ. ಪೊಲೀಸರು ಲಂಚ (Bribery) ಪಡೆಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಶಾಲೆಯಲ್ಲಿ ಅಬಯಾ ಧರಿಸಬಾರದು ಎಂದಿದ್ದಕ್ಕೆ ಪ್ರಿನ್ಸಿಪಾಲ್‌ಗೆ ಭಯೋತ್ಪಾದಕರಿಂದ ಬೆದರಿಕೆ

    ಕಳ್ಳಂಬೆಳ್ಳ ಠಾಣೆಯ ಎಎಸ್‌ಐ ಚಿದಾನಂದಸ್ವಾಮಿ, ಚಿಕ್ಕಹನುಮಯ್ಯ ಹಣ ವಸೂಲಿ ಮಾಡಿದ ಪೊಲೀಸರು. ಸಾರ್ವಜನಿಕರು ವೀಡಿಯೋ ಸಹಿತ ರೆಡ್ ಹ್ಯಾಂಡ್ ಆಗಿ ಹಿಡಿದಾಗ ನಮ್ಮಿಂದ ತಪ್ಪಾಗಿದೆ ಬಿಟ್ ಬಿಡಿ ಅಣ್ಣಾ ಎಂದು ಕ್ಷಮೆ ಕೇಳಿದ್ದಾರೆ.

    ಈ ನಡುವೆ ಲಂಚ ಸ್ವೀಕಾರ ಮಾಡಿದ ಇಬ್ಬರೂ ಪೊಲೀಸರನ್ನು ಅಮಾನತುಗೊಳಿಸಿ ಎಸ್‌ಪಿ ರಾಹುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರೈಲು ದುರಂತದ ಬಳಿಕ ಒಡಿಶಾದಲ್ಲಿ ಒಂದಿಲ್ಲೊಂದು ಅವಘಡ – ರೈಲು ಬೋಗಿಯಲ್ಲಿ ಆಕಸ್ಮಿಕ ಬೆಂಕಿ

  • ಕರ್ತವ್ಯ ಸಮಯದಲ್ಲಿ ಲಂಚ ಪಡೆದ ಮಹಿಳಾಧಿಕಾರಿ – ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

    ಕರ್ತವ್ಯ ಸಮಯದಲ್ಲಿ ಲಂಚ ಪಡೆದ ಮಹಿಳಾಧಿಕಾರಿ – ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

    ತುಮಕೂರು: ಕರ್ತವ್ಯ ಸಮಯದಲ್ಲಿ ಲಂಚ (Bribe) ಪಡೆದಿದ್ದ ಮಹಿಳಾಧಿಕಾರಿಗೆ ಮುದ್ರಾಂಕ ಇಲಾಖೆ (Department Of Stamps) ಆಯುಕ್ತರು ಕಡ್ಡಾಯ ನಿವೃತ್ತಿಗೊಳಿಸಿ (Retirement) ಆದೇಶ ಹೊರಡಿಸಿದ್ದಾರೆ.

    ಗುಬ್ಬಿ (Gubbi) ತಾಲೂಕಿನ ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಯಶೋಧ ವಿರುದ್ಧ ಆದೇಶ ಹೊರಡಿಸಲಾಗಿದೆ. ಈಕೆ ಕರ್ತವ್ಯದ ಸಮಯದಲ್ಲಿ ಲಂಚ ಪಡೆದುಕೊಂಡಿದ್ದರು. ಲಂಚ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದನ್ನೂ ಓದಿ: ಕರ್ನಾಟಕ ಸೇರಿದಂತೆ 3 ರಾಜ್ಯಗಳ 25 ಕಡೆ ಎನ್‌ಐ ದಾಳಿ – 17.50 ಲಕ್ಷ ಜಪ್ತಿ

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋವನ್ನು ಆಧರಿಸಿ ತನಿಖೆ ನಡೆಸಲಾಗಿತ್ತು. ತನಿಖೆಯಲ್ಲಿ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆ ಕಡ್ಡಾಯ ನಿವೃತ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ವರುಣಾರ್ಭಟ – ರಾಜಧಾನಿಗೆ 2 ದಿನ ಯೆಲ್ಲೋ ಅಲರ್ಟ್

  • ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ನಗರಸಭೆ ಸಹಾಯಕ ಎಂಜಿನಿಯರ್

    ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ನಗರಸಭೆ ಸಹಾಯಕ ಎಂಜಿನಿಯರ್

    ಗದಗ: ಸಹಾಯಕ ಎಂಜಿನಿಯರ್ (Assistant Engineer) ಓರ್ವ 1.50 ಲಕ್ಷ ರೂ. ಲಂಚ (Bribe) ಪಡೆಯುವ ವೇಳೆ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವ ಘಟನೆ ಗದಗದಲ್ಲಿ (Gadag) ನಡೆದಿದೆ.

    ಗದಗ ಬೆಟಗೇರಿ (Betageri) ನಗರಸಭೆ ಸಹಾಯಕ ಎಂಜಿನಿಯರ್ ವೀರೇಂದ್ರ ಸಿಂಗ್ ಕಾಟೇವಾಲ ಲೋಕಾಯುಕ್ತದ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವ್ಯಕ್ತಿ. ಗುತ್ತಿಗೆದಾರ ಅಬ್ದುಲ್ ಮನಿಯಾರ್ ಎಂಬವರು ರಸ್ತೆ ಕಾಮಗಾರಿ ಮಾಡಿದ್ದರು. ಅದರ 9 ಲಕ್ಷ ರೂ. ಬಿಲ್ ಪಾಸ್ ಮಾಡಲು 1.50 ಲಕ್ಷ ರೂ. ಕೊಡುವಂತೆ ಎಂಜಿನಿಯರ್ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು, ಗುತ್ತಿಗೆದಾರರಿಂದ ಲಂಚ ಪಡೆದು ಬೈಕ್‌ನ ಸೈಡ್‌ಬ್ಯಾಗ್‌ನಲ್ಲಿ ಇಡುವ ವೇಳೆ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ:‌ ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ – ಮಿಥುನ್ ರೈ ಕಾರ್ ಮೇಲೆ ಕಲ್ಲು ತೂರಾಟ

    ಲೋಕಾಯುಕ್ತ ಎಸ್ಪಿ ಸತೀಶ್, ಡಿವೈಎಸ್ಪಿ ಶಂಕರ್ ರಾಗಿ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ರವಿ ನೇತೃತ್ವದ ತಂಡ ದಾಳಿ ಮಾಡಿದೆ. ಸಿಕ್ಕಿಬಿದ್ದ ಬಳಿಕ ವೀರೇಂದ್ರ ಅಧಿಕಾರಿಗಳಿಗೆ ಹಣ ಹಸ್ತಾಂತರ ಮಾಡಿ ನಂತರ ಅಲ್ಲಿಂದ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬರೋಬ್ಬರಿ 2 ಲಕ್ಷ ಮೌಲ್ಯದ 40 ಕೆ.ಜಿ ಕೂದಲು ದರೋಡೆ!