ಗದಗ: ಕಂದಾಯ ಇಲಾಖೆ ಕಂಪ್ಯೂಟರ್ ಆಪರೇಟರ್ ಓರ್ವ ಲಂಚ ಪಡೆಯುವ ವೇಳೆ ಎಸಿಬಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಜಿಲ್ಲೆಯ ಮುಂಡರಗಿಯಲ್ಲಿ ನಡೆದಿದೆ.
ಗದಗ ಎಸಿಬಿ, ಡಿವೈಎಸ್ಪಿ, ಎಮ್‍ವಿ ಮಲ್ಲಾಪೂರ ನೇತೃತ್ವದಲ್ಲಿ ಬುಧವಾರ ದಾಳಿ ನಡೆದಿದ್ದು, ಈ ವೇಳೆ ಮುಂಡರಗಿ ತಹಶಿಲ್ದಾರ್ ಕಚೇರಿಯ ಕಂದಾಯ ವಿಭಾಗದ ಕಂಪ್ಯೂಟರ್ ಆಪರೇಟರ್ ಎಮ್‍ಐ ಉಪ್ಪಾರಡ್ಡಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ: ಇಡಿಯಿಂದ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅರೆಸ್ಟ್
ಆರ್‍ಟಿಸಿ ಕಲಂ 11ರ ಜಮೀನು ಉತಾರದಲ್ಲಿ ಹೆಸರು ಬದಲಾವಣೆಗಾಗಿ ಫಲಾನುಭವಿಯಿಂದ 11 ಸಾವಿರ ರೂ. ಲಂಚ ಬೇಡಿಕೆ ಇಟ್ಟಿದ್ದರು. ಕಳೆದ ವಾರ ಫಲಾನುಭವಿಯಿಂದ 5 ಸಾವಿರ ರೂ. ಪಡೆದಿದ್ದು, ಇಂದು ಇನ್ನುಳಿದ 6 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಇದನ್ನೂ ಓದಿ: ನಟ ಚೇತನ್ ಬೆನ್ನಿಗೆ ನಿಂತ ರಮ್ಯಾ
ಉಪ್ಪಾರಡ್ಡಿಯನ್ನು ಎಸಿಬಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಈ ವೇಳೆ ಎಸಿಬಿ ಸಿಪಿಐ ದೇಸಾಯಿ ಹಾಗೂ ಸಿಬ್ಬಂದಿ ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಗದಗ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೋಪಾಲ್: ಆಸ್ಪತ್ರೆ ಸಿಬ್ಬಂದಿಗೆ ಲಂಚ ಕೊಡಲು ವಿಫಲರಾದ ಪರಿಣಾಮ ಮಹಿಳೆಯೊಬ್ಬರು ಮೃತ ಶಿಶುವಿಗೆ ರಸ್ತೆಯಲ್ಲೇ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ಭಿಂಡ್‌ನ ಜಿಲ್ಲಾಸ್ಪತ್ರೆ ಬಳಿ ನಡೆದಿದೆ. ಈ ಕುರಿತು ತನಿಖೆ ನಡೆಸಲು ಜಿಲ್ಲಾಡಳಿತ ತನಿಖಾ ಸಮಿತಿಯನ್ನು ರಚಿಸಿದೆ.
ಭಿಂಡ್‌ನ ರಾಜುಪುರ ಗ್ರಾಮದ ನಿವಾಸಿ ಆರು ತಿಂಗಳ ಗರ್ಭಿಣಿ ಕಲ್ಲೋ ಅವರು ತಡರಾತ್ರಿ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ತಕ್ಷಣ ಪತಿ ಹಾಗೂ ಪತ್ತೆ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಆಸ್ಪತ್ರೆ ಸಿಬ್ಬಂದಿ 5,000 ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ತಮ್ಮ ಹಣವಿಲ್ಲ ಎಂದು ಹೇಳಿದಾಗ, ಬೇರೆ ಕಡೆ ಅಲ್ಟ್ರಾಸೌಂಡ್ ಮಾಡಿಸುವಂತೆ ಕುಟುಂಬದವರಿಗೆ ಸಿಬ್ಬಂದಿ ತಿಳಿಸಿದ್ದಾರೆ. ಆಸ್ಪತ್ರೆಯಿಂದ ಹೊರ ಬಂದ ಕೂಡಲೇ ಮಗು ಜನಿಸಿತ್ತು. ಆದರೆ ಶಿಶು ಮೃತಪಟ್ಟಿತ್ತು. ಇದನ್ನೂ ಓದಿ: ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಕೋವಿಶೀಲ್ಡ್, ಕೋವ್ಯಾಕ್ಸಿನ್ ಲಭ್ಯ
ನಾವು ಭಿಂಡ್ ಜಿಲ್ಲಾಸ್ಪತ್ರೆಗೆ ಬಂದಾಗ, ಕರ್ತವ್ಯದಲ್ಲಿದ್ದ ಶುಶ್ರೂಷಾಧಿಕಾರಿಗಳು ನನ್ನ ಸೊಸೆಗೆ ವೈದ್ಯಕೀಯ ಚಿಕಿತ್ಸೆ ಪ್ರಾರಂಭಿಸುವ ಮೊದಲು ನಮ್ಮಿಂದ 5,000 ಲಂಚ ಕೇಳಿದರು. ನಾವು ಬಡವರು, ಹಣ ಇಲ್ಲ ಎಂದು ಹೇಳಿದಾಗ, ಸಿಬ್ಬಂದಿ ನಮ್ಮೆಲ್ಲರನ್ನು ಆಸ್ಪತ್ರೆಯಿಂದ ಹೊರಹಾಕಿದರು. ಆಸ್ಪತ್ರೆಯ ಹೊರಗೆ ಅಲ್ಟ್ರಾಸೌಂಡ್ ಪರೀಕ್ಷೆ ಮಾಡಿಸುವಂತೆ ಹೇಳಿದ್ದರು ಎಂದು ಮಹಿಳೆ ಅತ್ತೆ ಮಿಥಿಲೇಶ್ ಮಿರ್ಧಾ ಆರೋಪಿಸಿದ್ದಾರೆ.
ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಭ್ರೂಣವು ಗರ್ಭಾಶಯದೊಳಗೆ ಸಾವನ್ನಪ್ಪಿದೆ. ರೋಗಿಯ ಸಂಬಂಧಿಕರಿಗೆ ಕರ್ತವ್ಯದಲ್ಲಿದ್ದ ಸಿಬ್ಬಂದಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ರೋಗಿಯ ಸಂಬಂಧಿಕರು ತೃಪ್ತರಾಗದೇ ಆಸ್ಪತ್ರೆಯಿಂದ ಹೊರಟಿದ್ದರು. ಯಾರೂ ಅವರನ್ನು ಆಸ್ಪತ್ರೆಯಿಂದ ಹೊರದೂಡಿಲ್ಲ ಎಂದು ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಅನಿಲ್ ಗೋಯಲ್ ತಿಳಿಸಿದ್ದಾರೆ.
ಕೊಲೆ, ಕೊಲೆ ಸುಪಾರಿ, ಜಮೀನು ವಿವಾದಗಳು, ಸೇರಿದಂತೆ 25 ಕ್ಕೂ ಹೆಚ್ಚು ಪ್ರಕರಣಗಳ ಆರೋಪಿ ಆಗಿರುವ ರೌಡಿ ಜೆಸಿಬಿ ನಾರಾಯಣ ಜೈಲಿನಲ್ಲಿ ಮೋಜು, ಮಸ್ತಿ ಮಾಡುತ್ತಿರುವ ಎಕ್ಸ್ಕ್ಲೂಸಿವ್ ವೀಡಿಯೋ ಪಬ್ಲಿಕ್ ಟಿವಿ ಲಭ್ಯವಾಗಿದೆ. ಇದನ್ನೂ ಓದಿ: ಪಂಜಾಬ್‍ನಲ್ಲಿ ಕಾಳಿ ವಿಗ್ರಹ ವಿರೂಪಗೊಳಿಸಲು ಯತ್ನ
ಸೆರೆಮನೆಯನ್ನೇ ತನ್ನ ಅಡ್ಡ ಮಾಡಿಕೊಂಡಿರುವ ಜೆಸಿಬಿ ನಾರಾಯಣ ಇಸ್ಪೀಟ್ ಆಟವಾಡುತ್ತಾ, ಮದ್ಯ ಸೇವಿಸುತ್ತಾ ಕೂಲ್ ಆಗಿ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾನೆ. ಇನ್ನೂ ನಾರಾಯಣನಿಗೆ ಜೈಲು ಸಿಬ್ಬಂದಿಯೇ ಮುಂದೆ ನಿಂತು ಎಲ್ಲವನ್ನು ಸಪ್ಲೈ ಮಾಡುತ್ತಿರುವ ಸಂಪೂರ್ಣ ಚಿತ್ರಣ ಪಬ್ಲಿಕ್ ಟಿವಿ ಬಯಲು ಮಾಡಿದೆ. ಇದನ್ನೂ ಓದಿ:ಉತ್ತರಾಖಂಡ ಚುನಾವಣೆ: ರಾಮನಗರದಿಂದ ಮಾಜಿ ಸಿಎಂ ಹರೀಶ್ ರಾವತ್ ಕಣಕ್ಕೆ
ಜೈಲಿನಲ್ಲಿದ್ದರೂ ರಾಜ ಮಾರ್ಯಾದೆ ಪಡೆಯುತ್ತಿರುವ ಜೆಸಿಬಿ ನಾರಾಯಣ ತನಗೆ ಬೇಕಾದ ಸೌಲಭ್ಯಗಳನ್ನು ಕೊಠಡಿಯಲ್ಲಿ ಕುಳಿತ ಜಾಗದಲ್ಲಿಯೇ ಪಡೆದುಕೊಳ್ಳುತ್ತಿದ್ದಾನೆ. ಈತ ಇರುವ ಕೋಣೆಯಲ್ಲಿ ಎಣ್ಣೆ, ಕಾರ್ಡ್ಸ್, ಟಿವಿ, ಮೊಬೈಲ್, ಮಂಚ, ಸೋಫಾ, ಫ್ಯಾನ್ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲಾಗಿದೆ. ಈ ಎಲ್ಲ ವೈಭವಗಳನ್ನು ಪಡೆಯಲು ನಾರಾಯಣ ಜೈಲು ಸಿಬ್ಬಂದಿಗೆ ವಾರಕ್ಕೆ 2,100ರೂ. ಹಣವನ್ನು ಲಂಚವಾಗಿ ನೀಡುತ್ತಿರುವ ಸತ್ಯ ಬಯಲಾಗಿದ್ದು, ಹಣ ನೀಡುತ್ತಿರುವ ವೀಡಿಯೋ ಕೂಡಾ ಬಹಿರಂಗವಾಗಿದೆ.
ನಾರಾಯಣ ಸದಾ ತನ್ನೊಟ್ಟಿಗೆ ಮೊಬೈಲ್ ಫೋನ್ ಇಟ್ಟುಕೊಂಡಿದ್ದು, ಜೈಲಿನ ಒಳಗೆ ಕುಳಿತುಕೊಂಡು ಯಾರಿಗಾದರೂ ಕೊಲೆಗೆ ಸ್ಕೆಚ್ ಹಾಕಬೇಕು ಅಂದರೆ ಹಾಕುತ್ತಾನೆ. ಜೊತೆಗೆ ಹೊರಗಡೆ ಈತನ ಬಗ್ಗೆ ಯಾರಾದರೂ ಮಾತನಾಡಿದರೆ ಬೆದರಿಕೆಯೊಡ್ಡುತ್ತಾನೆ. ರಿಯಲ್ ಎಸ್ಟೇಟ್ ಡೀಲ್ ಕೂಡ ಜೈಲಿನೊಳಗೆ ಕುದುರಿಸುತ್ತಾನೆ. ಈ ಎಲ್ಲದರ ಮಧ್ಯೆ ಜೈಲು ಸಿಬ್ಬಂದಿ ನಾರಾಯಣನೊಂದಿಗೆ ಒಟ್ಟು ಮೂರು ಜನ ಇದ್ದೀರಾ.. ತಲೆಗೆ 400 ರೂಪಾಯಿ ಕೊಡಿ.. ಒಟ್ಟು 1200 ರೂಪಾಯಿ ಕೊಡು.. ಅವನೆಲ್ಲಿ ಒಳಗೆ ಇದ್ದಾನಾ? ಒಳಗೆ ಕುಳಿತುಕೊಂಡು ಏನು ಮಾಡುತ್ತಿದ್ದಾನೆ. ದುಡ್ಡು ಕೊಡಿ. ಗಲಾಟೆ ಏನು ಮಾಡಿಕೊಳ್ಳಬೇಡಿ ಎಂದೆಲ್ಲಾ ಸಂಭಾಷಣೆ ನಡೆಸುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ದೇಶದಲ್ಲಿ 2,55,874 ಕೊರೊನಾ ಕೇಸ್ – ಪಾಸಿಟಿವಿಟಿ ರೇಟ್ ಶೇ.15.52ಕ್ಕೆ ಇಳಿಕೆ
25ಕ್ಕೂ ಹೆಚ್ಚು ಕೇಸ್‍ಗಳಿರುವ ಜೆಸಿಬಿ ನಾರಾಯಣನ ಮೇಲೆ ಕಳೆದ ಡಿಸೆಂಬರ್ ನಲ್ಲಿ ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಐವರು ರೌಡಿಗಳು ಹಲ್ಲೆ ನಡೆಸಲು ಯತ್ನಿಸಿದ್ದರು. ಆದರೆ ಅದೃಷ್ಟವಶಾತ್ ಜೆಸಿಬಿ ನಾರಾಯಣ ಪಾರಾಗಿದ್ದ. ಅದಾದ ನಂತರ ಇಲ್ಲಿವರೆಗೂ ಯಾವುದೇ ಕೇಸ್‍ಗಳು ದಾಖಲಾಗಿಲ್ಲ. ಇದನ್ನೂ ಓದಿ: ವರ್ಕೌಟ್ ವೇಳೆ ವೃದ್ಧ ದಂಪತಿ ಕಿಸ್ಸಿಂಗ್ ವೀಡಿಯೋ ವೈರಲ್
ಬೆಳಗಾವಿ: ಮಟಕಾ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುವ ವೇಳೆ ಇಬ್ಬರು ಪೊಲೀಸ್ ಪೇದೆಗಳು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಳೆದ ಶುಕ್ರವಾರ ಕೆಲಸಕ್ಕೆಂದು ಖಾನಾಪುರಕ್ಕೆ ತೆರೆಳಿದ ಬೆಳಗಾವಿ ಮೂಲದ ಪರಶುರಾಮ ಗಾಡಿವಡ್ಡರ ಮೇಲೆ ಮಟಕಾ ಪ್ರಕರಣ ದಾಖಲಿಸುವುದಾಗಿ ಇಬ್ಬರು ಪೊಲೀಸ್ ಪೇದೆಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದೇ ಇರಲು ರೂ.50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ರೂ.15,000ಕ್ಕೆ ವ್ಯವಹಾರ ಕುದುರಿಸಿದ್ದರು. ಲಂಚ ಕೇಳಿದ್ದಕ್ಕೆ ಸಂಬಂಧಪಟ್ಟಂತೆ ಪರಶುರಾಮ ಗಾಡಿವಡ್ಡರ ಸೋಮವಾರ ಎಸಿಬಿಗೆ ದೂರು ನೀಡಿದ್ದರು. ಇದನ್ನೂ ಓದಿ:ಜನರಿಗೆ ತೊಂದ್ರೆ ಕೊಡೋದ್ರಿಂದ ಸರ್ಕಾರಕ್ಕೆ ಲಾಭವೂ, ಇಲ್ಲ ನಷ್ಟವೂ ಇಲ್ಲ: ಸುಧಾಕರ್
ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು, ಲಂಚ ಪಡೆಯುವಾಗ ದಾಳಿ ನಡೆಸಿ ಇಬ್ಬರೂ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಕುರಿತು ಪ್ರಕರಣದ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್
ಮಡಿಕೇರಿ: ಜಾಗದ ದಾಖಲಾತಿಗಳನ್ನು ಸರಿಪಡಿಸುವ ಸಾಲುವಾಗಿ ತಾಲೂಕು ಕಚೇರಿಯ ಕಂದಾಯ ಅಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ತಾಲೂಕು ಕಚೇರಿ ಬಳಿ ನಡೆದಿದೆ.
ತಾಲೂಕು ಕಚೇರಿಯ ಅಧಿಕಾರಿ ವಿನೋದ್ ಲಂಚ ಪಡೆದಾತ. ಕುಶಾಲನಗರ ತಾಲೂಕಿನ ಶುಂಠಿಕೊಪ್ಪ ಹೋಬಳಿಯ ಅಂದಗೋವೆ ನಿವಾಸಿ ಬೆಳ್ಳಿಯಪ್ಪ ಆಸ್ತಿ ದಾಖಲಾತಿಗಳನ್ನು ಸರಿಪಡಿಸಲು ತಾಲೂಕು ಕಚೇರಿಗೆ ಬಂದಿದ್ದರು. ಈ ವೇಳೆ ಶಿರಸ್ತೆದಾರ ವಿನೋದ್ ಅವರು 14.5 ಲಕ್ಷ ಲಂಚ ನೀಡಲು ಬೇಡಿಕೆ ಇಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಬೆಳ್ಳಿಯಪ್ಪ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಇಂದು ವಿನೋದ್ ತಾಲೂಕು ಕಚೇರಿ ಬಳಿ ಇರುವ ಟೀ ಕ್ಯಾಂಟೀನ್ ಬಳಿ ಹಣ ಸ್ವೀಕರಿಸುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಲಂಚ ಸ್ವೀಕರಿಸಿದ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಿ, ವಿನೋದ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ:ಹಿಂದೂ ಮಹಿಳೆ, ಮುಸ್ಲಿಂ ವ್ಯಕ್ತಿ ರೈಲಿನಲ್ಲಿ ಪ್ರಯಾಣ – ಲವ್ ಜಿಹಾದ್ ಅಂತ ಠಾಣೆಗೆ ಎಳೆದೊಯ್ದ ಭಜರಂಗದಳ ಸದಸ್ಯರು
ತಿರುನಂತಪುರಂ: ಅಧಿಕಾರಿಗಳು ಹಣದ ಜೊತೆಗೆ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಪ್ರಕರಣ ಕೇರಳದ ವಲಯಾರ್ ಆರ್‌ಟಿಒ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.
ಅಧಿಕಾರಿಗಳು ಲಾರಿಗಳ ಮೂಲಕ ಬರುತ್ತಿದ್ದ ಕುಂಬಳಕಾಯಿ, ಕಿತ್ತಳೆಯಂತಹ ತರಕಾರಿ ಮತ್ತು ಹಣ್ಣುಗಳನ್ನು ಲಂಚವಾಗಿ ಸ್ವೀಕರಿಸುತ್ತಿದ್ದರು. ಲಂಚವಾಗಿ ದೊರೆತ ಆ ತರಕಾರಿ ಮತ್ತು ಹಣ್ಣುಗಳನ್ನು ಆರ್‌ಟಿಒ ಚೆಕ್‌ಪೋಸ್ಟ್‌ನಲ್ಲಿ ಇರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹಂಚಿಕೊಳ್ಳುತ್ತಿದ್ದರು.
ಈ ಬಗ್ಗೆ ಸಾಕಷ್ಟು ದೂರುಗಳು ಬಂದಿದ್ದವು. ಇದರಿಂದಾಗಿ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಅಧಿಕಾರಿಗಳ ಮತ್ತು ಸಿಬ್ಬಂದಿ ಚಲಾಕಿತನದ ಬಗ್ಗೆ ಸುಳಿವು ಪಡೆದುಕೊಂಡ ಡಿವೈಎಸ್‌ಪಿ ಮತ್ತು ತಂಡ ಶಬರಿಮಲೆಗೆ ತೆರಳುವಂತೆ ನಟಿಸಿ ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಆರೋಪಿಗಳು ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ: ಲಾರಿ, ಬಸ್ ಮುಖಾಮುಖಿ ಡಿಕ್ಕಿ- 6 ಮಂದಿ ಸ್ಥಳದಲ್ಲೇ ಸಾವು
ಆನೇಕಲ್: ವೈಟ್‌ಫೀಲ್ಡ್ ಠಾಣೆಯ ಎಎಸ್‌ಐ ದೇವರಾಜ್ ಅವರು ಬಾಬು ಎಂಬುವರಿಂದ 10 ಸಾವಿರ ರೂ. ಲಂಚ ಪಡೆಯುತ್ತಿರುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಆರೋಪಿ ದೇವರಾಜ್ ಅವರು ಸಿಮೆಂಟ್ ಮತ್ತು ಸ್ಟೀಲ್ ಅಂಗಡಿ ಮಾಲೀಕರ ವಾಹನ ರಸ್ತೆಯಲ್ಲಿ ಕಂಡಾಕ್ಷಣ ಅದನ್ನು ವಶ ಪಡಿಸಿಕೊಂಡು ಠಾಣೆಗೆ ತರುತ್ತಿದ್ದರು. ನಂತರ ಆ ವಾಹನವನ್ನು ಬಿಡಿಸಿಕೊಳ್ಳಲು ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು. ಹಣ ನೀಡದಿದ್ದರೆ ಮಾಲೀಕರು ಕಳ್ಳ ಸಾಗಣೆ ಮಾಡುತ್ತಿದ್ದಾರೆ ಎಂದು ಕೇಸು ದಾಖಲು ಮಾಡುವುದಾಗಿ ಹೆದರಿಸಿ ಹಣ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಮೊದಲಿನಿಂದಲೂ ಕೇಳಿಬಂದಿತ್ತು.
ಬಾಬು ಅವರು ಸ್ಟೀಲ್ ವ್ಯಾಪಾರ ಮತ್ತು ಸ್ಟೀಲ್ ಸರಬರಾಜು ಮಾಡುವ ವಾಹನಗಳನ್ನು ಹೊಂದಿದ್ದರು. ಇವರಿಂದಲೂ ಸಾಕಷ್ಟು ಬಾರಿ ಹಣ ವಸೂಲಿ ಮಾಡಿದ್ದಾರೆ. ಬ್ಯಾಂಕ್ ಲೋನ್ ಕಟ್ಟಲು ಹಣ ಬೇಕು. 50 ಸಾವಿರ ರೂ. ಕೊಡು ಎಂದು ಆಗಾಗ ಕಾಲ್ ಮಾಡಿ ಹಿಂಸೆ ಕೊಡುತ್ತಿದ್ದರು. ಇದರಿಂದ ಬೇಸತ್ತ ಬಾಬು ಎಸಿಬಿ ಮೊರೆ ಹೋಗಿದ್ದಾರೆ. ಇಂದು ಟ್ರ‍್ಯಾಪ್ ಮಾಡಿಸಿ ಬಲೆಗೆ ಬೀಳಿಸಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಬೆಳತ್ತೂರು ಪರಮೇಶ್ ತಿಳಿಸಿದರು.
ಕಳೆದ ಏಳು ಎಂಟು ವರ್ಷಗಳಿಂದ ಹಣ ವಸೂಲಿ ಮಾಡಿ ಎರಡು ಎಕರೆ ಜಮೀನು, ಬಗಲುಗುಂಟೆ ವ್ಯಾಪ್ತಿಯಲ್ಲಿ ನಾಲ್ಕು ಸೈಟ್ ಖರೀದಿ ಮಾಡಿದ್ದಾರೆ. ತೊಂಡೆ ಕೊಪ್ಪದಲ್ಲಿ ಐಶಾರಾಮಿ ಬಂಗಲೆ ಕಟ್ಟಿದ್ದಾನೆ ಎಂದು ಪರಮೇಶ್ ಆರೋಪಿಸಿದ್ದಾರೆ. ಇದನ್ನೂ ಓದಿ: ಸ್ಟಾರ್‌ಲಿಂಕ್ ಇಂಡಿಯಾದ ಮುಖ್ಯಸ್ಥ ಸಂಜಯ್ ಭಾರ್ಗವ ರಾಜೀನಾಮೆ
ಡಿಸಿಪಿ ಕಚೇರಿ ಕೆಳಗೆ ಇರುವ ಠಾಣೆಯಲ್ಲೇ ಇಷ್ಟೊಂದು ಭ್ರಷ್ಟಾಚಾರ ನಡೆಯುತ್ತಿದೆ. ಇನ್ನೂ ಬೇರೆ ಕಡೆ ಯಾವ ರೀತಿ ಭ್ರಷ್ಟಾಚಾರ ನಡೆಯಬಹುದು ಎಂದ ಅವರು, ಸದ್ಯದಲ್ಲೇ ಮತ್ತೊಬ್ಬ ಅಧಿಕಾರಿಯ ಬಣ್ಣ ಬಯಲು ಮಾಡುವುದಾಗಿ ತಿಳಿಸಿದರು.
ಭೋಪಾಲ್: ಗ್ರಾಮ ಪಂಚಾಯಿತಿ ಸದಸ್ಯ 15 ಲಕ್ಷ ರೂ. ಲಂಚ ಪಡೆಯುವುದು ಸಾಮಾನ್ಯ. ಅದನ್ನು ಭ್ರಷ್ಟಾಚಾರ ಎನ್ನಲಾಗದು ಎಂದು ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ವಿವಾದಾತ್ಮಕ ಹೇಳಿಕೆ ನೀಡಿದರು.
ಮಧ್ಯಪ್ರದೇಶದ ರೇವಾದಲ್ಲಿ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯ 15 ಲಕ್ಷ ರೂ.ಗಿಂತ ಅಧಿಕ ಹಣ ಪಡೆದಾಗ ಮಾತ್ರ ಅದು ಭ್ರಷ್ಟಾಚಾರವಾಗುತ್ತದೆ. ಆಗ ಮಾತ್ರ ದೂರು ನೀಡಲು ಬನ್ನಿ ಎಂದು ತಿಳಿಸಿದರು.
ಜನರು ಗ್ರಾಪಂ ಸದಸ್ಯ ಲಂಚ ಪಡೆಯುತ್ತಾನೆ ಎಂದು ದೂರು ನೀಡಲು ಬರುತ್ತಾರೆ. ಆದರೆ ಆತ ಚುನಾವಣೆಯಲ್ಲಿ ಗೆಲ್ಲಲು 7 ಲಕ್ಷ ರೂ. ಖರ್ಚು ಮಾಡುತ್ತಾನೆ. ಗೆದ್ದ ನಂತರ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲು ಲಕ್ಷಾಂತರ ಹಣ ಖರ್ಚು ಮಾಡಬೇಕಾಗುತ್ತದೆ. ಹಣದುಬ್ಬರ ಕಾರಣದಿಂದ ಇನ್ನೊಂದು ಲಕ್ಷ ರೂ. ಹೆಚ್ಚಿರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಹಾರ್ನ್ ಹಾಕುವುದನ್ನು ಕಮ್ಮಿ ಮಾಡಿ – 32 ವರ್ಷಗಳಿಂದ ಸಂದೇಶ ಸಾರ್ತಿದ್ದಾರೆ ಸೈಲೆಂಟ್ ಕ್ರುಸೇಡರ್
ಉತ್ತರ ಪ್ರದೇಶದ ಕಾನ್ಪುರದ ಜಿಲ್ಲಾ ನ್ಯಾಯಾಲಯವು ತೆರಿಗೆ ವಂಚನೆ ಪ್ರಕರಣದಲ್ಲಿ ವ್ಯಾಪಾರಿ ಪಿಯೂಷ್ ಜೈನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಇದಾದ ಒಂದು ದಿನದ ನಂತರ ಸಂಸದರು ಈ ಹೇಳಿಕೆ ನೀಡಿದ್ದಾರೆ. ಜೈನ್ ಬಂಧನದ ಬಗ್ಗೆ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ಮಾತಿನ ಸಮರ ನಡೆಯುತ್ತಿದೆ. ಎರಡೂ ಪಕ್ಷಗಳು ಜೈನ್ ಅವರೊಂದಿಗೆ ಸಂಪರ್ಕ ಹೊಂದಿವೆ ಎಂಬ ಆರೋಪವಿದೆ. ಇದನ್ನೂ ಓದಿ: ಪ್ರಧಾನಿ ಭದ್ರತೆಗಾಗಿ 12 ಕೋಟಿಯ ದುಬಾರಿ ಕಾರು- ವಿಶೇಷತೆ ಏನು..?
ಬೆಂಗಳೂರು: ಚಾರ್ಜ್ ಶೀಟ್ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಎಫ್‌ಐಆರ್ ದಾಖಲಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಇನ್ಸ್ ಪೆಕ್ಟರ್ ಜಯರಾಜ್ ಹಾಗೂ ಎಎಸ್‌ಐ ಶಿವಕುಮಾರ್ ಆರೋಪಿಗಳು. ಜಯರಾಜ್ ಈ ಹಿಂದೆ ಕೆಆರ್ ಪುರಂ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು. ಸದ್ಯ ಸಿಐಡಿಯಲ್ಲಿ ಇನ್ಸ್ ಪೆಕ್ಟರ್ ಜಯರಾಜ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕೌಟುಂಬಿಕ ಕಲಹದಲ್ಲಿ ಪತಿ ವಿರುದ್ಧ ಪತ್ನಿ ದೂರು ದಾಖಲಿಸಿದ್ದರು. ಪತ್ನಿಯ ದೂರಿನನ್ವಯ ಗಂಡ ಸಂಜು ರಾಜನ್‌ನನ್ನು ಕೆಆರ್ ಪುರಂ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಬಳಿಕ ಜಾಮೀನು ಪಡೆದು ಸಂಜು ರಾಜನ್ ಜೈಲಿನಿಂದ ಬಿಡುಗಡೆಯಾಗಿದ್ದರು.
ಈ ಹಿನ್ನೆಲೆಯಲ್ಲಿ ಪ್ರತಿವಾರ ಠಾಣೆಗೆ ಆಗಮಿಸಿ ಸಹಿ ಮಾಡಲು 500 ರಿಂದ 10 ಸಾವಿರದವರಗೆ ಪೊಲೀಸರು ಲಂಚ ಪಡೆಯುತ್ತಿದ್ದರು. ಬೇಗ ಚಾರ್ಜ್ ಶೀಟ್ ಮಾಡಲು 80 ಸಾವಿರ ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಾಜಪೇಯಿ ಜನ್ಮ ದಿನಾಚರಣೆ ಆಚರಿಸಿದ ರಮೇಶ್ ಜಾರಕಿಹೊಳಿ
ಪೊಲೀಸ್ ಇಲಾಖೆಯವರು ಲಂಚವನ್ನು ತೆಗೆದುಕೊಂಡು ಯಾವುದೇ ಕೆಲಸವಾಗಿರಲಿ ಪರಿಣಾಮಕಾರಿಯಾಗಿ ನಿರ್ವಹಿಸುತ್ತಾರೆ. ಆದರೆ ಬೇರೆ ಇಲಾಖೆಯ ಜನ ಲಂಚ ತೆಗೆದುಕೊಂಡರೂ ಸಹ ಯಾವುದೇ ಕೆಲಸ ಮಾಡಿಕೊಡುವದಿಲ್ಲ. ಕೊರೊನಾ ಸಾಂಕ್ರಾಮಿಕ ರೋಗವಿದ್ದರೂ ಸಹ ತಮ್ಮ ಜೀವವನ್ನು ಲೆಕ್ಕಿಸದೇ ಸಾಮಾನ್ಯಕ್ಕಿಂತ ಹೆಚ್ಚಿನ ಕೆಲಸ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಐಪಿಎಲ್ 2022 ಹರಾಜು – 5 ವಿದೇಶಿ ವಿಕೆಟ್ ಕೀಪರ್‌ಗಳ ಮೇಲೆ ಫ್ರಾಂಚೈಸಿಗಳ ಕಣ್ಣು
ಪೊಲೀಸ್ ಭಾಷಣದ ಈ ವೀಡಿಯೋವು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ. ಈ ವಿಡಿಯೋಗೆ ಪ್ರತಿಕ್ರಿಯೆ ನೀಡಿದ ಉನ್ನಾವೋ ಪೊಲೀಸ್ ಸಂಪೂರ್ಣ ವಿಷಯದ ಬಗ್ಗೆ ತನಿಖೆ ನಡೆಸಿ ವರದಿಯನ್ನು ನೀಡುವಂತೆ ಜಿಲ್ಲಾಡಳಿತ ಸೂಚಿಸಿದೆ ಎಂದು ಟ್ವೀಟ್ ಮಾಡಿದೆ.