Tag: ಲಕ್ಷ್ಮೀ ಹೆಬ್ಬಾಳ್ಕರ್

  • ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ: ಲಕ್ಷ್ಮೀ ಹೆಬ್ಬಾಳ್ಕರ್

    ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ: ಲಕ್ಷ್ಮೀ ಹೆಬ್ಬಾಳ್ಕರ್

    ಮೈಸೂರು: ಶೀಘ್ರವೇ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು.

    ಮೈಸೂರು ದಸರಾ (Mysuru Dasara) ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದರು. ಇದನ್ನೂ ಓದಿ: ಸೆ.26ರಿಂದ 5 ದಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ – ಚಲುವರಾಯಸ್ವಾಮಿ

    ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು. ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು. ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು ಎಂಬ ಚಿಂತನೆಯನ್ನು ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೋಟ್ಯಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ನುಡಿದರು.

    ಶೀಘ್ರವೇ ಗೃಹಲಕ್ಷ್ಮಿ ಹೆಸರಲ್ಲಿ ಸಹಕಾರ ಸಂಘಗಳ ಸ್ಥಾಪನೆ
    ಮಹಿಳೆಯರಿಗೆ ಬ್ಯಾಂಕ್‌ಗಳಿಂದ ಸರಿಯಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಇದರಿಂದ ಅವರಿಗೆ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಕಷ್ಟವಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಸಿದೆ. ಈ ಮೂಲಕ ಮಹಿಳೆಯರಿಗೆ ಸಾಲ ಸೌಲಭ್ಯ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದು ತಿಳಿಸಿದರು.

    ಮಹಿಳೆಯರ ಸ್ವಾಭಿಮಾನ, ಸಮೃದ್ಧಿ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ ಹಬ್ಬ. ನವ ದೇವಿಯ ಆರಾಧನೆ ಮಾಡಿ, ದುಷ್ಟರ ವಿರುದ್ಧ ಶಿಷ್ಟರ ರಕ್ಷಣೆ ಮಾಡುವ ದೇವಿಯ ಆರಾಧನೆ ಮಾಡುವುದೇ ವಿಜಯದಶಮಿ. ಇಡೀ ವಿಶ್ವಕ್ಕೆ ಸಂಸ್ಕೃತಿಯ ರುಚಿಯನ್ನು ಕೊಟ್ಟವರು ಮಹಿಳೆಯರು. ಹಿಂದೆ ರಾಜರು ಆಳ್ವಿಕೆ ಮಾಡುತ್ತಿದ್ದರು. ಆದರೆ ಈಗ ಸರ್ಕಾರ ಬಹಳ ವಿಜೃಂಭಣೆಯಿಂದ ದಸರಾ ಆಚರಿಸುತ್ತಾ ಬರುತ್ತಿದೆ ಎಂದರು.

    ಐಸಿಡಿಎಸ್ ವ್ಯಾಪ್ತಿಗೆ ಬರುವ ಅಂಗನವಾಡಿ ಕೇಂದ್ರ ಆರಂಭವಾಗಿ ಐವತ್ತು ವರ್ಷ ಆಗಿದ್ದು, ಇದೀಗ ಸುವರ್ಣ ಮಹೋತ್ಸವ ಕಾರ್ಯಕ್ರಮ ಮಾಡಲು ಚಿಂತನೆ ನಡೆದಿದೆ. ಎಲ್‌ಕೆಜಿ, ಯುಕೆಜಿ ಆರಂಭಿಸುವ ಮೂಲಕ ಅಂಗನವಾಡಿಯನ್ನು ಮತ್ತೊಂದು ಹೆಜ್ಜೆ ಮುಂದಕ್ಕೆ ಕೊಂಡೊಯ್ಯಲಾಗುತ್ತಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರ್ ನಾಥ್, ಮಹಿಳಾ ದಸರಾ ಸಮಿತಿ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಹೇಶ್ ಬಾಬು ಸೇರಿದಂತೆ ಮಹಿಳಾ ದಸರಾ ಉಪ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಯತ್ನ: ಲಕ್ಷ್ಮೀ ಹೆಬ್ಬಾಳ್ಕರ್

    ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಯತ್ನ: ಲಕ್ಷ್ಮೀ ಹೆಬ್ಬಾಳ್ಕರ್

    ಉಡುಪಿ: ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಪ್ರಯತ್ನಗಳಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಆರೋಪಿಸಿದರು.

    ಉಡುಪಿ (Udupi) ಜಿಲ್ಲೆಯ ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ ಸಮಾಜದ ಕೋಮು ಸೌಹಾರ್ದತೆಯನ್ನು ಕೆಡಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: 4 ಶಂಕಾಸ್ಪದ ಸಾವುಗಳ ತನಿಖೆಗೆ ತಿಮರೋಡಿ ದೂರು, ವಿಠಲಗೌಡ ಆರೋಪವನ್ನು ಎಸ್‌ಐಟಿ ಪರಿಶೀಲಿಸಿ ಕ್ರಮ: ಪರಮೇಶ್ವರ್

    ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ. ರಾಜ್ಯ ಸರ್ಕಾರ ಬೀಳುತ್ತದೆ, ಗ್ಯಾರಂಟಿ ಯೋಜನೆಗಳು ಜಾರಿ ಆಗಲ್ಲ, ಒಂದು ವೇಳೆ ಜಾರಿಯಾದರೂ ನಾಲ್ಕು ತಿಂಗಳಿಗೆ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಅಪಪ್ರಚಾರ ಮಾಡಲಾಯಿತು. ರಾಜ್ಯದ ಜನತೆಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಇನ್ಮುಂದೆ ಮಲ್ಟಿಪ್ಲೆಕ್ಸ್ ಸೇರಿ ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ದರ ನಿಗದಿ; ಪ್ರತಿ ಟಿಕೆಟ್‍ಗೆ ಇಷ್ಟೇ ಬೆಲೆ

    ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ
    ಬಿಜೆಪಿ ಶಾಸಕ ಸಿ.ಟಿ.ರವಿ (CT Ravi) ವಿರುದ್ಧ ಎಫ್‌ಐಆರ್ ದಾಖಲಿಸಿರುವುದಕ್ಕೆ ವಿಪಕ್ಷಗಳು ಖಂಡಿಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಅವರು ದ್ವೇಷಪೂರಿತ ಭಾಷಣ ಮಾಡಿದರೆ ಕ್ರಮ ಕೈಗೊಳ್ಳಲು ವಿಧಾನಸಭೆಯಲ್ಲಿ ಶಾಸನ ತರಲಾಗಿದೆ. ದ್ವೇಷಪೂರಿತ ಭಾಷಣವನ್ನು ಬಿಜೆಪಿ-ಕಾಂಗ್ರೆಸ್ ನಾಯಕರು ಯಾರೇ ಆಗಲಿ ಕ್ರಮ ಕೈಗೊಳ್ಳಲಾಗುತ್ತದೆ. ನಾಳೆ ಕಾಂಗ್ರೆಸ್ಸಿಗರು ಮಾತನಾಡಿದರೂ ಕ್ರಮ ಆಗುತ್ತದೆ. ಕಾನೂನು ಎಲ್ಲರಿಗೂ ಒಂದೇ ಅಲ್ವಾ? ಶಾಂತಿಯನ್ನು ಕದಡುವ ಕೆಲಸ ಮಾಡಿದರೆ ಖಂಡಿತ ಎಫ್‌ಐಆರ್ ಆಗುತ್ತದೆ ಎಂದು ಹೇಳಿದರು.

    ಧರ್ಮಸ್ಥಳ ನಮ್ಮೆಲ್ಲರ ಆರಾಧ್ಯ ಸ್ಥಳ
    ನಾನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ. ಧರ್ಮಸ್ಥಳ (Dharmasthala) ನಮ್ಮೆಲ್ಲರ ಆರಾಧ್ಯ ಸ್ಥಳ, ಬಹಳಷ್ಟು ಭಕ್ತಿಯಿಂದ ನಡೆದುಕೊಳ್ಳುವ ಸ್ಥಳ. ಏನೆಲ್ಲಾ ಷಡ್ಯಂತ್ರ ಆಗಿದೆ, ಇದೆಲ್ಲಾ ಹೊರ ಬರುತ್ತೆ ಸ್ವಲ್ಪ ಕಾಯಿರಿ. ಎಸ್‌ಐಟಿ ತನ್ನ ಕೆಲಸ ಮಾಡುತ್ತಿದೆ. ಇದನ್ನು ಸಾರ್ವಜನಿಕವಾಗಿ ಹೇಳಲು ಬರಲ್ಲ. ಸ್ವಲ್ಪ ದಿನ ಕಾಯಿರಿ ಎಲ್ಲಾ ಸತ್ಯಾಸತ್ಯತೆ ಹೊರಬರುತ್ತದೆ ಎಂದರು.

  • ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

    ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ

    ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajanish) ಕುರಿತು ಅವಹೇಳನಕಾರಿ ಹೇಳಿಕೆ ಆರೋಪ ಹೊತ್ತಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebalkar) ಕಿಡಿಕಾರಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ (BJP) ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್‌ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿಕುಮಾರ್ (Ravi Kumar) ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಾಬಾನಗರದ ಬಳಿ ಹೊಸ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನಕ್ಕೆ ಎಂ.ಬಿ ಪಾಟೀಲ್ ಮನವಿ

    ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂತಹ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಬಿಜೆಪಿ ನಾಯಕರು ಮಹಿಳೆಯರಿಗೆ ಕೊಡುವ ಗೌರವ ಎಂತಹದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂತಹ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂತಹ ಹೇಳಿಕೆಗಳನ್ನು ನೀಡದೇ ಜವಾಬ್ದಾರಿಯಿಂದ ವರ್ತಿಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಮೀಕ್ಷೆ ಮಾಡದೇ ಜಾತಿಗಣತಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಕೇಸ್ – ಮೂವರು BBMP ನೌಕರರು ಅಮಾನತು

    ಕ್ಷಮೆಯಾಚನೆಗೆ ಪಟ್ಟು
    ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು. ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

  • ಆರ್‌ಸಿಬಿ ಗೆಲ್ಲಲೆಂದು ಚಾಮುಂಡೇಶ್ವರಿಯಲ್ಲಿ ವಿಶೇಷ ಪ್ರಾರ್ಥನೆ ಮಾಡ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್

    ಆರ್‌ಸಿಬಿ ಗೆಲ್ಲಲೆಂದು ಚಾಮುಂಡೇಶ್ವರಿಯಲ್ಲಿ ವಿಶೇಷ ಪ್ರಾರ್ಥನೆ ಮಾಡ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್

    ಬೆಂಗಳೂರು: ಆರ್‌ಸಿಬಿ (RCB) ಕಪ್ ಗೆಲ್ಲಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ವಿಶೇಷ ಪ್ರಾರ್ಥನೆ ಮಾಡ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು.

    ನಾಳೆ ಆರ್‌ಸಿಬಿ ಫೈನಲ್ ಪಂದ್ಯ ಎದುರಿಸುತ್ತಿರುವ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ನಾನು ಕಿಕ್ರೆಟ್‌ನ ದೊಡ್ಡ ಅಭಿಮಾನಿ. ಈ ಬಾರಿ ಫೈನಲ್‌ನಲ್ಲಿ ಆರ್‌ಸಿಬಿ ಆಟಗಾರರಿಗೆ ದೇವರು ಶಕ್ತಿ ಕೊಡಲಿ ಎಂದು ಪ್ರಾರ್ಥನೆ ಮಾಡ್ತೇನೆ ಎಂದರು. ಇದನ್ನೂ ಓದಿ: ಈ ಬಾರಿ ಕಳೆಯಲಿದೆಯೇ ಫೈನಲ್‌ ಕಂಟಕ? – ಕಪ್‌ ಗೆದ್ದು ಅಭಿಮಾನಿಗಳಿಗೆ ಔತಣ ಕೊಡಲಿದೆಯೇ ಆರ್‌ಸಿಬಿ?

    ಈ ಐಪಿಎಲ್ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ (Virat Kohli) ಸೇರಿದಂತೆ ಎಲ್ಲರೂ ತುಂಬಾ ಚೆನ್ನಾಗಿ ಆಡಿದ್ದಾರೆ. ಆರ್‌ಸಿಬಿ ಗೆಲ್ಲಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ನಾನು ವಿಶೇಷ ಪ್ರಾರ್ಥನೆ ಮಾಡುತ್ತೇನೆ. ಆರ್‌ಸಿಬಿ ಒಂದಲ್ಲ ಎರಡಲ್ಲ, ನಾಲ್ಕು ಬಾರಿ ಫೈನಲ್‌ಗೆ ಬಂದಿದೆ. ಆದರೆ ಈ ಬಾರಿ `ಕಪ್ ನಮ್ದೇ’ ಎಂದು ಹೇಳಿ ಆರ್‌ಸಿಬಿ ಫ್ಯಾನ್‌ಗಳನ್ನು ಹುರಿದುಂಬಿಸಿದರು. ಇದನ್ನೂ ಓದಿ: ಈ ವರ್ಷ ಟ್ರೋಫಿ ಗೆಲ್ಲೋಕೆ ಶ್ರೇಯಸ್‌ ಅಯ್ಯರ್‌ ಅರ್ಹರು – ರಾಜಮೌಳಿ

    ಜೂ. 03ರಂದು ಗುಜರಾತ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಫೈನಲ್ ಟ್ರೋಫಿಗೆ ಗುದ್ದಾಡಲಿದೆ. ಇದೀಗ ಎಲ್ಲೆಡೆ ಆರ್‌ಸಿಬಿ ಫ್ಯಾನ್ಸ್‌ಗಳಿಂದ ಈ ಸಲ `ಕಪ್ ನಮ್ದೇ’ ಎಂಬ ಜಯಘೋಷ ಕೇಳುತ್ತಿದೆ.

  • ಸಿ.ಟಿ ರವಿ, ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣದಲ್ಲಿ ನನ್ನ ನಿರ್ಧಾರ ನೂರಕ್ಕೆ ನೂರು ಸರಿಯಿದೆ: ಹೊರಟ್ಟಿ

    ಸಿ.ಟಿ ರವಿ, ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರಕರಣದಲ್ಲಿ ನನ್ನ ನಿರ್ಧಾರ ನೂರಕ್ಕೆ ನೂರು ಸರಿಯಿದೆ: ಹೊರಟ್ಟಿ

    ಕಾರವಾರ: ಸಿ.ಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪ್ರಕರಣವನ್ನು ಪರಿಷತ್ತಿನ ನೀತಿ ನಿರೂಪಣಾ ಸಮಿತಿಗೆ ನೀಡಲಾಗಿದೆ. ಅವರು ವೀಡಿಯೋ ಸೇರಿದಂತೆ ಇತರೆ ದಾಖಲೆಗಳನ್ನು ಪರಿಶೀಲಿಸಿ ವರದಿ ನೀಡಿದ ಬಳಿಕ ತಿರ್ಮಾನ ಕೈಗೊಳ್ಳಲಾಗುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

    ಶಿರಸಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ ಉಪ ಸಭಾಪತಿಗಳು ಅಧ್ಯಕ್ಷರಾಗಿರುವ ಸದನದ ನೀತಿ ನಿರೂಪಣಾ ಸಮಿತಿಗೆ ಪ್ರಕರಣವನ್ನು ವಹಿಸಲಾಗಿದೆ. ಅದರಲ್ಲಿ ಸಿ.ಟಿ ರವಿಯೂ ಸದಸ್ಯರಾಗಿದ್ದರು. ಅವರನ್ನು ಈಗ ಹೊರಗೆ ಇಡಲಾಗಿದೆ. ಸಮಿತಿಯವರು ಸದನದ ಆಡಿಯೋ, ವೀಡಿಯೋ ಪರಿಶೀಲನೆ ಮಾಡಲಿದ್ದಾರೆ. ಮಾಧ್ಯಮದವರೂ ಸಹ ವೀಡಿಯೋ ನೀಡಿದ್ದಾರೆ. ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ಅಲ್ಲಿಂದ ವರದಿ ಬಂದ ನಂತರದಲ್ಲಿ ಪ್ರಕರಣದ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.‌

    ಮೊದಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಿ.ಟಿ ರವಿ ವಿರುದ್ಧ ಅವಾಚ್ಯ ಪದ ಬಳಸಿದ ಕುರಿತು ದೂರು ದಾಖಲಿಸಿದ್ದರು. ಬಳಿಕ ಸಿ.ಟಿ ರವಿಯವರೂ ಸಹ ಪ್ರತಿ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿ ಈಗಾಗಲೇ ಸಮಿತಿಗೆ ಸತ್ಯಾಸತ್ಯತೆ ಪರಿಶೀಲನೆಗೆ ತಿಳಿಸಲಾಗಿದೆ. ಅಲ್ಲಿನ ವರದಿ ಆಧರಿಸಿ ಮುಂದಿನ ಕ್ರಮ ಆಗಲಿದೆ. ಸಭಾಪತಿಗಳು ನ್ಯಾಯಾಧೀಶರ ಸ್ಥಾನದಲ್ಲಿ ಕುಳಿತುಕೊಂಡಂತೆ. ಅವರು ಪಕ್ಷಪಾತ ಮಾಡಬಾರದು. ಸಿ.ಟಿ ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣದಲ್ಲಿ ನಾನು ತೆಗೆದುಕೊಂಡ ನಿರ್ಧಾರವನ್ನು ಬಿಹಾರದ ಶಾಸಕಸಭೆಯಲ್ಲೂ ಶ್ಲಾಘಿಸಲಾಗಿದೆ. ನಿರ್ಧಾರವು ನೂರಕ್ಕೆ ನೂರರಷ್ಟು ಸರಿಯಿದೆ. ಯಾರೇ ನಿರ್ಧಾರ ತಪ್ಪು ಎಂದರೂ ಅದು ಅವರ ಅಭಿಪ್ರಾಯ ಎಂದು ಪ್ರತಿಕ್ರಿಯಿಸಿದರು.

    ಸಭಾಪತಿಯಾಗಿ ಯಾವ ಪಕ್ಷದ ಪರವಾಗಿಯೂ ಇಲ್ಲ. ನಿಷ್ಪಕ್ಷಪಾತವಾಗಿ ಕಾರ್ಯ ಮಾಡುತ್ತಿದ್ದೇನೆ. ಯಾರಿಂದಲೂ ಒಂದೇ ಒಂದು ದೂರು ಇಲ್ಲ. ಸಭಾಪತಿಯಾಗಿ ಆಯ್ಕೆ ಆದ ತಕ್ಷಣ ನನ್ನ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಅಂದೇ ರಾಜೀನಾಮೆ ನೀಡಿದ್ದೇನೆ. ಸಾಂವಿಧಾನಿಕ ಹುದ್ದೆ ಸಭಾಪತಿ, ಸಭಾಧ್ಯಕ್ಷ ಎಂಬುದು ಸರ್ಕಾರ ಬದಲಾದ ತಕ್ಷಣ ಬದಲಾಯಿಸುವುದು, ಅವಿಶ್ವಾಸ ಮಾಡುವುದು ಒಳ್ಳೆಯ ಸಂಪ್ರದಾಯ ಅಲ್ಲ. ನನ್ನನ್ನು ಬದಲಾಯಿಸುತ್ತಾರೆ ಎಂಬ ವರದಿಗಳನ್ನೂ ಮಾಧ್ಯಮಗಳಲ್ಲಿ ನೋಡಿದ್ದೇನೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಸಭಾಪತಿ ಪಕ್ಷಾತೀತವಾಗಿ ಇರಬೇಕು. ನಾನೂ ಸಭಾಪತಿಯಾಗಿ ಹಾಗೇ ಇದ್ದೇನೆ. ವೈಯಕ್ತಿಕವಾಗಿ ಯಾರೆ ಏನೇ ಹೇಳಿದರೂ ನಾನು ಮಾತನಾಡುವುದಿಲ್ಲ ಎಂದರು.

  • ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ ಕೇಸ್ – ಸಿಎಂ ಪುತ್ರ ಯತೀಂದ್ರಗೆ ಸಿಐಡಿ ನೋಟಿಸ್

    ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ ಕೇಸ್ – ಸಿಎಂ ಪುತ್ರ ಯತೀಂದ್ರಗೆ ಸಿಐಡಿ ನೋಟಿಸ್

    ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ವಿರುದ್ಧ ಆಕ್ಷೇಪಾರ್ಹ ಪದಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯಗೆ (Yathindra Siddaramaiah) ಸಿಐಡಿ ನೋಟಿಸ್ ನೀಡಲಾಗಿದೆ.ಇದನ್ನೂ ಓದಿ: ರಮೇಶ್ ಕುಮಾರ್ ಅರಣ್ಯ ಭೂಮಿ ವಿವಾದ| ಜಂಟಿ ಸರ್ವೆ ಮುಕ್ತಾಯ – ಒಮ್ಮತಕ್ಕೆ ಬಾರದ ಅರಣ್ಯ, ಕಂದಾಯ ಇಲಾಖೆ

    ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ (Belagavi Winter Session) ನಡೆದ ಗಲಾಟೆ ಸಂದರ್ಭದಲ್ಲಿ ಸದನದ ಒಳಗೆ ಯತೀಂದ್ರ ಸಿದ್ದರಾಮಯ್ಯ ಇದ್ದರು ಅನ್ನೋ ಕಾರಣಕ್ಕೆ ನೋಟಿಸ್ ನೀಡಲಾಗಿದೆ.

    ಸಿಐಡಿ (CID) ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ತಿಳಿಸಿದ್ದಾರೆ. ಇನ್ನೂ ಯತೀಂದ್ರ ಅವರ ಜೊತೆಗೆ ಎಂಎಲ್‌ಸಿ ಡಿಬಿ ಶ್ರೀನಿವಾಸ್ ಅವರು ಇದ್ದ ಕಾರಣಕ್ಕಾಗಿ ಅವರಿಗೂ ಕೂಡ ನೋಟಿಸ್ ನೀಡಿ, ಶುಕ್ರವಾರ (ಜ.17) ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.ಇದನ್ನೂ ಓದಿ: ಬೀದರ್‌ನಲ್ಲಿ ಎಟಿಎಂ ಹಣ ದರೋಡೆ ಕೇಸ್‌ – ಹೈದರಾಬಾದ್‌ನಲ್ಲೂ ಫೈರಿಂಗ್‌, ದರೋಡೆಕೋರರು ಎಸ್ಕೇಪ್‌

  • ಸಿದ್ದರಾಮಯ್ಯ ಎಲ್ಲಿಯವರೆಗೆ ಇರ್ತಾರೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    ಸಿದ್ದರಾಮಯ್ಯ ಎಲ್ಲಿಯವರೆಗೆ ಇರ್ತಾರೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂತಹದಲ್ಲ. ಧೀಮಂತ ಮತ್ತು ಗಟ್ಟಿ ನಾಯಕತ್ವ ಸಿದ್ದರಾಮಯ್ಯನವರಿಗೆ (CM Siddaramaiah) ಇದೆ. ಹಾಗಾಗಿ, ಅವರು ಎಲ್ಲಿಯವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎನ್ನುತ್ತಾರೋ, ಅಲ್ಲಿಯವರೆಗೆ ನಮ್ಮ ಶಾಸಕರ ಬೆಂಬಲ ಇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalakr) ಹೇಳಿದರು.

    ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ತಾವಾಗಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿರುವ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಆ ಚರ್ಚೆ ಎಲ್ಲಾ ನಗಣ್ಯ. ಮುಡಾ ಹಗರಣದಲ್ಲಿ (MUDA Scam) ಬಿಜೆಪಿಯವರು ಸುಳ್ಳು ದಾಖಲೆ ಹುಟ್ಟಿಸಿ ಏನೋ ಮಾಡುತ್ತಿದ್ದಾರೆ. ಇಂಥ ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ, 135 ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತ ಸಂದರ್ಭದಲ್ಲಿ, ಇದೆಲ್ಲಾ ಬಾಲಿಷ. ಈ ವಿಚಾರದಲ್ಲಿ ನಾನು ಹೆಚ್ಚಿಗೆ ಏನೂ ಮಾತನಾಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗ್ಳೂರಿನ ಯುವಕ ದುರ್ಮರಣ – ಐವರು ಅಸ್ವಸ್ಥ

    ನಾವೂ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ‘ಕೈ’ ನಾಯಕರ ಹೇಳಿಕೆ ಬಗ್ಗೆ ಮಾತನಾಡಿ, ನಾನು ಓರ್ವ ಜವಾಬ್ದಾರಿಯುತ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತಿದ್ದೇನೆ. ನಮ್ಮದು ಶಿಸ್ತಿನ ಪಕ್ಷ. ಪಕ್ಷದ ಹೈಕಮಾಂಡ್ ಮತ್ತು ಶಾಸಕರು ಇದನ್ನು ನಿರ್ಣಯಿಸುತ್ತಾರೆ. ಅಲ್ಲಿ, ಇಲ್ಲಿ, ಗಲ್ಲಿಯಲ್ಲಿ ಮಾತನಾಡುವ ವಿಷಯಗಳು ಇವಲ್ಲ ಎಂದು ಪರೋಕ್ಷವಾಗಿ ತಮ್ಮದೇ ನಾಯಕರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು. ಇದನ್ನೂ ಓದಿ: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ: ಸಿದ್ದರಾಮಯ್ಯ

    ಧೀಮಂತ ಮತ್ತು ಗಟ್ಟಿ ನಾಯಕತ್ವ ನಮಗಿದೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಬಹಳ ಒಳ್ಳೆಯ ಕೆಲಸ ಮಾಡುತ್ತಿದೆ. ನಾವೆಲ್ಲಾ ಅವರ ಜೊತೆಗಿದ್ದೇವೆ. ಬೇರೆ ಏನೇ ಇದ್ದರೂ ಅದನ್ನು ಹೈಕಮಾಂಡ್ ವಿಚಾರ ಮಾಡುತ್ತದೆ. ಎಲ್ಲಿಯವರೆಗೆ ಹೈಕಮಾಂಡ್ ಸಿದ್ದರಾಮಯ್ಯ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಇರಬೇಕು ಎಂದು ಬಯಸುತ್ತದೆಯೋ, ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಸಿದ್ದರಾಮಯ್ಯ ಪರ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು. ಇದನ್ನೂ ಓದಿ: ಯಾವುದೇ ಬೆಂಬಲವನ್ನು ನೀಡಿಲ್ಲ- ಪಿ.ಟಿ.ಉಷಾ ವಿರುದ್ಧ ಫೋಟೋ ಕ್ಲಿಕ್ಕಿಸಿದ ಬಗ್ಗೆ ಫೋಗಟ್ ಕಿಡಿ

  • ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್: ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

    ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್: ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

    ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಹಂಚಿಕೆ ಆಗಿದ್ದ ಆಕ್ಸಿಜನ್‍ನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ (Jagadish Shettar) ಕೊಡುಗೆ ಏನಿದೆ? ಈಗ ಇಲ್ಲಿಗೆ ಬಂದು ಕರ್ಮ ಭೂಮಿ ಎನ್ನುತ್ತಿದ್ದಾರೆ. ನಾವೇನು ಹುಚ್ಚರಾ? ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡಲು ಬಂದಿದ್ದೀರಾ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ವಾಗ್ದಾಳಿ ನಡೆಸಿದ್ದಾರೆ.

    ಗೋಕಾಕ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಬೆಳಗಾವಿಗೆ ಏನು ಮಾಡಿದ್ದಾರೆ? ಬೆಳಗಾವಿ ದೊಡ್ಡ ಜಿಲ್ಲೆ, ಜನಸಂಖ್ಯೆ ಹೆಚ್ಚಿದೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಗೆ ಆಕ್ಸಿಜನ್ ಹಂಚಿಕೆ ಮಾಡಿದ್ದನ್ನು ಹುಬ್ಬಳ್ಳಿ -ಧಾರವಾಡಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಇದೇ ಕರ್ಮ ಭೂಮಿಯಾ? ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಇಲ್ಲಿಗೆ ಏನು ಮಾಡಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ತೆರಿಗೆ ಮೌಲ್ಯಮಾಪನ ಕೇಸ್‌ – ಹೈಕೋರ್ಟ್‌ನಲ್ಲೂ ಹಿನ್ನಡೆ, 4 ಅರ್ಜಿ ವಜಾ

    ಆರು ಬಾರಿ ಹುಬ್ಬಳ್ಳಿ ಜನರು ಅವರನ್ನು ಆಯ್ಕೆ ಮಾಡಿ ಕಳುಹಿಸಿದ್ದರು. ವಿರೋಧ ಪಕ್ಷದ ನಾಯಕರಾದರು, ಮಂತ್ರಿಯಾದರು, ಮುಖ್ಯಮಂತ್ರಿಯಾದರು, ಬಿಜೆಪಿ ಅಧ್ಯಕ್ಷರಾದರು. ಎಲ್ಲವನ್ನೂ ಅನುಭವಿಸಿದ್ದಂತವರನ್ನು ಹುಬ್ಬಳ್ಳಿ- ಧಾರವಾಡ ಜನರು ಹೊರಗೆ ಹಾಕಿದ್ದಾರೆ. ಈಗ ಇಲ್ಲಿಗೆ ಬಂದು ಕರ್ಮ ಭೂಮಿ ಎನ್ನಲು ಏನಿದೆ? ಬೆಳಗಾವಿಗೆ ನಿಮ್ಮ ಕೊಡುಗೆ ಏನಾದರೂ ಇದೆಯಾ? ನಾಚಿಕೆಯಾಗಬೇಕು ನಿಮಗೆ ಎಂದು ಕಿಡಿಕಾರಿದ್ದಾರೆ.

    ಗೋ ಬ್ಯಾಕ್ ಶೆಟ್ಟರ್ ಎನ್ನುವುದು ಅವರ ಪಕ್ಷದ ಕಾರ್ಯಕರ್ತರೇ ಮಾಡುತ್ತಿರುವ ಅಭಿಯಾನ, ಅವರ ಪಕ್ಷದ ಕಾರ್ಯಕರ್ತರ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ. ಮೋದಿಯವರು ಎಲ್ಲೋ ಹೋಗಿ ಚುನಾವಣೆಗೆ ನಿಂತಿದ್ದಾರೆ ಎಂದು ತಮ್ಮ ಬೆಳಗಾವಿ ಸ್ಪರ್ಧೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇವರೇನು ಮೋದಿಯಷ್ಟು ದೊಡ್ಡವರಾ? ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ದಾಳಿಯ ಸಂಚುಕೋರ ಅರೆಸ್ಟ್‌

  • ಡಿಕೆಶಿ ಸ್ವಾಗತಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಹೋಗದಿರುವುದು ಎಂಟನೇ ಅದ್ಭುತ: ಮುನಿರತ್ನ ವ್ಯಂಗ್ಯ

    ಡಿಕೆಶಿ ಸ್ವಾಗತಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಹೋಗದಿರುವುದು ಎಂಟನೇ ಅದ್ಭುತ: ಮುನಿರತ್ನ ವ್ಯಂಗ್ಯ

    ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರಿಗೆ ಬೆಳಗಾವಿಯಲ್ಲಿ ಸ್ವಾಗತಿಸಲು ಸತೀಶ್ ಜಾರಕಿಹೊಳಿ (Satish Jarkiholi) ಹೋಗದಿರುವುದರಲ್ಲಿ ಯಾವುದೇ ವಿಶೇಷತೆ ಇಲ್ಲ. ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೋಗದಿರುವುದು ಎಂಟನೇ ಅದ್ಭುತ ಎಂದು ಶಾಸಕ ಮುನಿರತ್ನ (Munirathna) ವ್ಯಂಗ್ಯವಾಡಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮತ್ತೆ ಬಣ ರಾಜಕೀಯ ಶುರುವಾಗಿದೆ. ಅಲ್ಲಿ ರಾಜಕಾರಣ ಶುರುವಾದಾಗಲೆಲ್ಲ ಸರ್ಕಾರಗಳಿಗೆ ಗಂಡಾಂತರ ಬಂದಿದೆ. ಸಮ್ಮಿಶ್ರ ಸರ್ಕಾರ ಉರುಳಿದ್ದೇ ಅಲ್ಲಿನ ರಾಜಕಾರಣದಿಂದ. ಅಲ್ಲಿ ಶುರುವಾಗಿ ರಾಜ್ಯ ರಾಜಧಾನಿಯಲ್ಲಿ ಮುಕ್ತಾಯಗೊಳ್ಳುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

    ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ನನ್ನ ಕ್ಷೇತ್ರಕ್ಕೆ 126 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು. ಆದರೆ ಈಗಿನ ಸರ್ಕಾರ ಅದನ್ನು ವಾಪಸ್ ಪಡೆದು ಬೇರೆ ಕ್ಷೇತ್ರಗಳಿಗೆ ನೀಡಿದೆ. ನಮ್ಮ ಅನುದಾನ ಬೇರೆ ಕ್ಷೇತ್ರಗಳಿಗೆ ಹೇಗೆ ಕೊಡ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ.

    ನನ್ನ ಕ್ಷೇತ್ರದ ಕಾಮಗಾರಿಗಳ ಪಟ್ಟಿಯನ್ನು ಡಿಸಿಎಂ ಕೇಳಿದ್ದರು. ನಾನು ಆ ವಿವರವನ್ನು ಸಲ್ಲಿಸಿದ್ದೇನೆ. ಡಿ.ಕೆ ಶಿವಕುಮಾರ್ ಅವರ ಬಗ್ಗೆ ನನಗೆ ನಂಬಿಕೆ ಇದೆ. ಅನುದಾನ ವಾಪಾಸ್ ಬಂದೇ ಬರುತ್ತದೆ. ಅನುದಾನ ವಾಪಸ್ ಬರದಿದ್ದರೆ ಮುಂದೆ ಏನು ಮಾಡಬೇಕೆಂದು ತಿಳಿಸುತ್ತೇನೆ. ಅದಕ್ಕಾಗಿ ಮತ್ತೆ ಪ್ರತಿಭಟನೆ ಮಾಡುವುದಾಗಲಿ, ಕಾಲು ಹಿಡಿಯುವುದಾಗಲಿ ಮಾಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಾಣೆಯಾಗಿದ್ದ ಲಾಯರ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥ ಪೂರೈಕೆ ಮಾಡಿದ್ರೆ ಕಠಿಣ ಕ್ರಮ- ಲಕ್ಷ್ಮಿ ಹೆಬ್ಬಾಳ್ಕರ್

    ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥ ಪೂರೈಕೆ ಮಾಡಿದ್ರೆ ಕಠಿಣ ಕ್ರಮ- ಲಕ್ಷ್ಮಿ ಹೆಬ್ಬಾಳ್ಕರ್

    ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ (Anganwadi Centers) ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಎಚ್ಚರಿಕೆ ನೀಡಿದರು.

    ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾರಾಯಣಸ್ವಾಮಿ ವಿಷಯ ಪ್ರಸ್ತಾಪ ಮಾಡಿದರು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಪದಾರ್ಥಗಳ ಕಳಪೆ ಗುಣಮಟ್ಟದ ಪೂರೈಕೆಯಲ್ಲಿ ಆಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಇದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಅಂತ ನಾರಾಯಣಸ್ವಾಮಿ ಆಗ್ರಹಿಸಿದರು. ಇದನ್ನೂ ಓದಿ: ಮೊಟ್ಟೆ ವಿತರಣೆ ಬಗ್ಗೆ ನಿಗಾವಹಿಸಲು ಸ್ಪೆಷಲ್‌ ಟಾಸ್ಕ್‌ ಫೋರ್ಸ್‌ ರಚನೆ ಮಾಡ್ತೀವಿ – ಲಕ್ಷ್ಮಿ ಹೆಬ್ಬಾಳ್ಕರ್

    ಇದಕ್ಕೆ ಉತ್ತರಿಸಿದ ಸಚಿವೆ, ರಾಜ್ಯದಲ್ಲಿ 67,570 ಅಂಗನವಾಡಿ ಕೇಂದ್ರಗಳು ಮತ್ತು 2,329 ಮಿನಿ ಅಂಗನವಾಡಿ ಕೇಂದ್ರಗಳು ಸೇರಿ ಒಟ್ಟು 69,899 ಅಂಗನವಾಡಿ ಕೇಂದ್ರಗಳಿವೆ. 39,50,179 ಮಕ್ಕಳು ಇಲ್ಲಿ ದಾಖಲಾಗಿ ಸೌಲಭ್ಯ ಪಡೆಯುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಆಗುವ ಆಹಾರ ಪದಾರ್ಥ ಕಳಪೆ ಗುಣಮಟ್ಟ ಆಗಿರೋದು ಗಮನಕ್ಕೆ ಬಂದಿದೆ. ಕಲಬುರಗಿಯಲ್ಲಿ ಇಂತಹ ಕೇಸ್ ಗಮನಕ್ಕೆ ಬಂದಿದೆ. ಈ ಕೇಂದ್ರಕ್ಕೆ ನೊಟೀಸ್ ನೀಡಲಾಗಿದೆ. ಕಳಪೆ ಮೊಟ್ಟೆ ಪ್ರಕರಣಗಳೂ ನನ್ನ ಗಮನಕ್ಕೆ ಬಂದಿದೆ. ಈ‌ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕೆಂಪು ಸುಂದರಿ ಜಾಗಕ್ಕೆ ಹುಣಸೆ ಹಣ್ಣು ಎಂಟ್ರಿ- ಡಿಮ್ಯಾಂಡ್ ಬೆನ್ನಲ್ಲೇ ದರ ಏರಿಕೆ

    ಮಗುವಿನ ಆರೋಗ್ಯಕ್ಕಾಗಿ ಸರ್ಕಾರ ದಿನಕ್ಕೆ 8 ರೂ. ಕೊಡುತ್ತಿದೆ. ನಾನೇ ಒಂದು ಅಂಗನವಾಡಿ ಕೇಂದ್ರಕ್ಕೆ ಹೋಗಿ‌‌ ನೋಡಿದೆ. ನನಗೇ ನಾಚಿಕೆ ಆಯ್ತು. ನಾನು ವಿಸಿಟ್ ಮಾಡಿದ ಕೇಂದ್ರ‌ ಮುಚ್ಚಿಸಿದ್ದೇನೆ. ಯಾರೇ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದರೂ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ತೀವಿ. ಇಲಾಖೆಯಲ್ಲಿ ವಿಕೇಂದ್ರೀಕರಣದಿಂದ ಸಮಸ್ಯೆ ಅಗ್ತಿದೆ. ಹೀಗಾಗಿ ಏಕೀಕೃತ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ತೀವಿ ಎಂದು ವಿವರಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]