Tag: ಲಕ್ಷ್ಮೀ ಹೆಬ್ಬಾಳ್ಕರ್

  • ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ- ಸರ್ಕಾರ ಯಾವುದೇ ಕ್ರಮ ಕೈಗೊಳ್ತಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ- ಸರ್ಕಾರ ಯಾವುದೇ ಕ್ರಮ ಕೈಗೊಳ್ತಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ನಮ್ಮ ಸಮಾಜದ ಮಕ್ಕಳಿಗೆ ಶಿಕ್ಷಣ, ಉದ್ಯೋಗವಕಾಶಕ್ಕಾಗಿ 2ಎ ಮೀಸಲಾತಿಗೆ ಆಗ್ರಹಿಸಲಾಗುತ್ತಿದೆ. ಹೀಗಾಗಿ ಬೆಳಗಾವಿ ಸುವರ್ಣ ಸೌಧದಲ್ಲಿ ಡಿ.22ರಂದು 25 ಲಕ್ಷ ಜನರನ್ನು ಸೇರಿಸಿ ಉಗ್ರ ಹೋರಾಟ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 2 ವರ್ಷಗಳಿಂದ ಅಗ್ನಿಪರೀಕ್ಷೆ ನಡೆಯುತ್ತಿದೆ. ಸಮಾಜದ ಮಕ್ಕಳಿಗೆ ಶಿಕ್ಷಣ, ಉದ್ಯೋಗವಕಾಶಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ತಮ್ಮೆಲ್ಲರ ಬೆಂಬಲ ಸಿಗದಿದ್ದರೆ ಇಷ್ಟು ದೊಡ್ಡ ಹೋರಾಟ ಆಗುತ್ತಿರಲಿಲ್ಲ. ಯತ್ನಾಳ್ ಅಣ್ಣಾ ಸರ್ಕಾರದ ವಿರುದ್ಧ ತಮ್ಮ ಪಕ್ಷದ ವಿರುದ್ಧ ಮಾತನಾಡಿದರು. ರಾಜಕಾರಣದಲ್ಲಿ ಒಂದೇ ಸಮಾಜದಿಂದ ಏನು ಆಗಲ್ಲ. ಎಲ್ಲರನ್ನೂ ಕೂಡಿಸಿಕೊಂಡು ಹೋಗಬೇಕು. ಆದರೆ, ನಮ್ಮ ಸಮಾಜಕ್ಕೆ ಏನಾದರೂ ಕೊಡಬೇಕು. ಪಂಚಮಸಾಲಿ ಸಮುದಾಯದ ಮೀಸಲಾತಿ ರಾಜ್ಯ ಅಷ್ಟೇ ಅಲ್ಲ ರಾಷ್ಟ್ರೀಯ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ. ಗುಜರಾತ್‍ನಲ್ಲಿ ಪಾಟೀದಾರ್ ಸಮುದಾಯ ಮೀಸಲಾತಿ ಬಗ್ಗೆ ಚರ್ಚೆ ಆಗಿತ್ತು. ಅದಕ್ಕಿಂತ ದೊಡ್ಡ ಮಟ್ಟಿಗೆ ಚರ್ಚೆ ಪಂಚಮಸಾಲಿ ಸಮುದಾಯ ಬಗ್ಗೆ ಚರ್ಚೆ ಆಗುತ್ತಿದೆ ಎಂದರು.

    ಇದು ನಮ್ಮ ಕೊನೆ ಘಳಿಗೆ, ಜಾಸ್ತಿ ಶ್ರಮ ಹಾಕಬೇಕಿದೆ. ಡಿ.22ರ ವಿರಾಟ್ ಪಂಚಮಸಾಲಿ ಸಮಾವೇಶಕ್ಕೆ ಎಲ್ಲರೂ ಜನರ ಕರೆದುಕೊಂಡು ಬರಲು ಒಪ್ಪಿದ್ದಾರೆ. ಪಂಚಮಸಾಲಿ ಸಮುದಾಯ ಇಂದು ಜಾಗೃತವಾಗಿದೆ. ಡಿ.22ರೊಳಗೆ ಸಿಎಂ ನಿರ್ಣಯ ಕೈಗೊಳ್ಳದಿದ್ರೆ ಹೋರಾಟ ಮಾಡುತ್ತೇವೆ. ಆದರೆ ಇನ್ನೂವರೆಗೂ ಸರ್ಕಾರದಿಂದ ಏನೂ ಮೂವ್ಮೆಂಟ್ ಕಾಣುತ್ತಿಲ್ಲ. ನಮ್ಮ ಸಮಾಜಕ್ಕೆ ನ್ಯಾಯ ದೊರಕಿಸಿಕೊಡಲು ಹೋರಾಟ ಮಾಡುತ್ತಿದ್ದೇವೆ. ನಮ್ಮ ಗುರುಗಳಿಗೆ ಮರ್ಯಾದೆ ಇದೆಯೋ ಇಲ್ವೋ, ನಮ್ಮ ದೊಡ್ಡ ಸಮಾಜ ಬಗ್ಗೆ ಮರ್ಯಾದೆ ಇಲ್ವೋ ಅಂತಾ ಸಂಕಟವಾಗುತ್ತಿದೆ. ಯಾರು ನಮಗೆ ಮರ್ಯಾದೆ ಕೊಡ್ತಾರೆ ಅವರಿಗೆ ಜೈ ಏನ್ನೋಣ ಎಂದು ತಿಳಿಸಿದರು. ಇದನ್ನೂ ಓದಿ: ನರ್ಸಿಂಗ್ ಕಾಲೇಜಿನಲ್ಲಿ ಮಾಸ್ ಕಾಪಿ – 10 ಸಾವಿರ ವಸೂಲಿ ಮಾಡಿ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ

    ಜಗದ್ಗುರು ನಿಸ್ವಾರ್ಥತೆಯಿಂದ ನಮ್ಮ ಬೆನ್ನಿಗೆ ಇದ್ದಾರೆ. ವಿರಾಟ್ ಸಮಾವೇಶ ತಯಾರಿ ನೋಡಿ ಸಿಎಂ ಏನಾದರೂ ಮೂವ್ಮೆಂಟ್ ಮಾಡಬೇಕು. ಬೆಳಗಾವಿ ಗ್ರಾಮೀಣ ಭಾಗದಲ್ಲಿ ಬಾಗೇವಾಡಿ ಜನತೆ ಬಿಟ್ಟು ಬೇರೆ ಎಲ್ಲೂ ನಮ್ಮ ಸಮಾಜ ಇಲ್ಲ. ನನಗೆ ಕೊಟ್ಟ ಜವಾಬ್ದಾರಿ ನಾನು ನಿಭಾಯಿಸುತ್ತೇನೆ. ಹೋರಾಟದಲ್ಲಿ ಏನೇ ಸೇವೆ ಮಾಡಲು ಹೇಳಿದರೂ ಅಣಿಯಾಗುತ್ತೇನೆ. ನಾನು, ನನ್ನ ಸಹೋದರ, ನನ್ನ ಮಗ ಎಲ್ಲರೂ ಜವಾಬ್ದಾರಿ ನಿಭಾಯಿಸುತ್ತೇವೆ. ಸಿಎಂ ಹಾಗೂ ಸಂಬಂಧಪಟ್ಟವರ ಬಳಿ ತಾವು ಮಾತನಾಡಬೇಕು ಎಂದು ಯತ್ನಾಳ್‍ಗೆ ಮನವಿ ಮಾಡಿದರು. ಇದನ್ನೂ ಓದಿ: ರಾಯಚೂರಿನ 5 ವರ್ಷದ ಮಗುವಿನಲ್ಲಿ ಝಿಕಾ ವೈರಸ್ ಪತ್ತೆ

    Live Tv
    [brid partner=56869869 player=32851 video=960834 autoplay=true]

  • ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಖಾಡಕ್ಕಿಳಿಯುವ BJP ಅಭ್ಯರ್ಥಿ ಯಾರು ಅನ್ನೋದೆ ಸಸ್ಪೆನ್ಸ್!

    ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಖಾಡಕ್ಕಿಳಿಯುವ BJP ಅಭ್ಯರ್ಥಿ ಯಾರು ಅನ್ನೋದೆ ಸಸ್ಪೆನ್ಸ್!

    ಬೆಳಗಾವಿ: ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಫುಲ್ ಆಕ್ಟೀವ್ ಆಗಿದ್ದು ರಾಜಕೀಯ ವೈರಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರನ್ನ ಸೋಲಿಸಲು ಶತಾಯಗತಾಯ ಕಸರತ್ತು ನಡೆಸಿದ್ದಾರೆ.

    ಬೆಳಗಾವಿ (Belagavi) ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಸೋಲಿಸಲು ರಮೇಶ್ ಜಾರಕಿಹೊಳಿ ಮರಾಠಾ ಸಮುದಾಯದ (Marathi Community) ಶಿಷ್ಯನ ಜೊತೆ ಬಿಜೆಪಿ (BJP) ಹಿರಿಯ ನಾಯಕರನ್ನ ಭೇಟಿಯಾಗ್ತಿದ್ದಾರೆ. ಕಾಂಗ್ರೆಸ್ (Congress) ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮರಾಠ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಹೀಗಾಗಿ ಮರಾಠ ಸಮಾಜದ ಆಪ್ತ ನಾಗೇಶ್ ಮನ್ನೋಳಕರ್‌ಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಯತ್ನಿಸುತ್ತಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಇದನ್ನೂ ಓದಿ: ಮೈದಾನ ಖಾಲಿ ಇದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ – ಪರೋಕ್ಷವಾಗಿ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ

    ಅದಕ್ಕೆ ಪುಷ್ಟಿ ನೀಡುವಂತೆ ನಾಗೇಶ್ ಮನ್ನೋಳಕರ್ ಅವರನ್ನ ರಮೇಶ್ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಭೇಟಿ ಮಾಡಿಸುತ್ತಿದ್ದಾರೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಸೇರಿ ಹಲವು ನಾಯಕರ ಭೇಟಿಯಾಗಿ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

    ಹಿಂಡಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿರುವ ಶಿಷ್ಯ ನಾಗೇಶ್ ಮನ್ನೋಳಕರ್ ಜೊತೆ ಬೆಂಗಳೂರು, ದೆಹಲಿ, ನಾಗ್ಪುರಗೆ ರಮೇಶ್ ಜಾರಕಿಹೊಳಿ ಟೂರ್ ನಡೆಸಿದ್ದು ರಮೇಶ್ ಜಾರಕಿಹೊಳಿ ನಡೆಗೆ ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಚರ್ಚೆಗಳು ಪ್ರಾರಂಭವಾಗುತ್ತಿದೆ. ಸೋತ ಕ್ಷೇತ್ರದಲ್ಲೇ ಮತ್ತೆ ಗೆಲುವು ಸಾಧಿಸಲು ಮಾಜಿ ಶಾಸಕ ಸಂಜಯ್ ಪಾಟೀಲ್ ಕಸರತ್ತು ನಡೆಸುತ್ತಿದ್ದರೆ, ಮತ್ತೊಂದೆಡೆ ಕಟ್ಟಾ ಹಿಂದೂ ಕಾರ್ಯಕರ್ತ, ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ್ ಸಹ ಟಿಕೆಟ್ ರೇಸ್‌ನಲ್ಲಿದ್ದಾರೆ. ಇದನ್ನೂ ಓದಿ: ಚುನಾವಣೆ ಗೆಲ್ಲಲು BJP ಹಣ, ಹೆಂಡದ ಹೊಳೆ ಹರಿಸುತ್ತಿದೆ- ಡಿಂಪಲ್ ಯಾದವ್ ಕಿಡಿ

    ಇನ್ನೂ ಬೆಳಗಾವಿ ಗ್ರಾಮೀಣ ಕ್ಷೇತ್ರ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಗೋಕಾಕ್ ಸಾಹುಕಾರ್ ತಮ್ಮ ಶಿಷ್ಯನಿಗೆ ಟಿಕೆಟ್ ಕೊಡಿಸಲು ಮುಂದಾಗಿದ್ದಾರೆ. ಹೀಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಯಾರು ಅನ್ನೋದೇ ಇನ್ನೂ ಸಸ್ಪೆನ್ಸ್ ಆಗಿ ಉಳಿದುಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ನಮ್ಮ ಅಕ್ಕ ಲಕ್ಷ್ಮೀ ಹೆಬ್ಬಾಳ್ಕರ್ ಫುಲ್ ಟೈಮ್ ಪ್ಲೇಯರ್: MLC ಚನ್ನರಾಜ ಹಟ್ಟಿಹೊಳಿ

    ನಮ್ಮ ಅಕ್ಕ ಲಕ್ಷ್ಮೀ ಹೆಬ್ಬಾಳ್ಕರ್ ಫುಲ್ ಟೈಮ್ ಪ್ಲೇಯರ್: MLC ಚನ್ನರಾಜ ಹಟ್ಟಿಹೊಳಿ

    ಬೆಳಗಾವಿ: ನಮ್ಮ ಅಕ್ಕ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಪಾರ್ಟ್ ಟೈಮ್ ಪ್ಲೇಯರ್ ಅಲ್ಲ, ಫುಲ್ ಟೈಮ್ ಪ್ಲೇಯರ್ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ (Ramesh Jarkiholi) ಎಂಎಲ್‍ಸಿ ಚನ್ನರಾಜ ಹಟ್ಟಿಹೊಳಿ (Channaraj Hattiholi) ಟಾಂಗ್ ನೀಡಿದ್ದಾರೆ.

    ಬೆಳಗಾವಿ (Belagavi) ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಚುನಾವಣೆ ತಯಾರಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಅಕ್ಕ ಹೋರಾಟದಿಂದ ರಾಜಕೀಯಕ್ಕೆ ಬಂದವರು. ನಿತ್ಯ ಜನರ ಕಷ್ಟಗಳಿಗೆ ಸ್ಪಂದನೆ ಮಾಡುವ ಕೆಲಸಗಾರರು. ರಾಜಕೀಯದಲ್ಲಿ ಪಾರ್ಟ್ ಟೈಮ್ ಪ್ಲೇಯರ್ಸ್ ಇರುತ್ತಾರೆ. ಫುಲ್ ಟೈಮ್ ಪ್ಲೇಯರ್ಸ್ ಸಹ ಇರುತ್ತಾರೆ. ಇವರು ಫುಲ್ ಟೈಮ್ ಪ್ಲೇಯರ್, ದಿನವೂ ಜನರಿಗೆ ಸಿಗ್ತಾರೆ, ಭೇಟಿಯಾಗ್ತಾರೆ, ಕೆಲಸ ಮಾಡ್ತಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅಂತಾ ಅಷ್ಟೇ ಅಲ್ಲ ರಾಜ್ಯದಲ್ಲಿ ಕೆಲಸಗಾರರಿಗೆ ಯಾವತ್ತೂ ಸೋಲಿಲ್ಲ. ಅವರ ಜೊತೆ ಜನ ಯಾವತ್ತೂ ಇರುತ್ತಾರೆ. ಈಗ ಪಾರ್ಟ್ ಟೈಮ್ ಪ್ಲೇಯರ್ಸ್‍ದ್ದೆ ಪ್ರಾಬ್ಲಮ್ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೈದಾನ ಖಾಲಿ ಇದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ – ಪರೋಕ್ಷವಾಗಿ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ

    ಗ್ರಾಮೀಣ ಕ್ಷೇತ್ರಕ್ಕೆ ಪಾರ್ಟ್ ಟೈಮ್ ಪ್ಲೇಯರ್ಸ್ ಬಂದು ಹೋಗೋದು ಎಫೆಕ್ಟ್ ಆಗುತ್ತಾ ಎಂದು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದರ ಬಗ್ಗೆ ನಾವು ಈ ಸಂದರ್ಭದಲ್ಲಿ ಏನೂ ಹೇಳಲ್ಲ. ಒಂದು ಪಕ್ಷದ ಕೆಲಸ ಮಾಡೋದು ಬೇರೆ. ನಮ್ಮ ಪಕ್ಷದ ಕೆಲಸ ನಾವು ಮಾಡ್ತಿದ್ದೇವೆ. ಅವರು ಅವರ ಪಕ್ಷದ ಕೆಲಸ ಮಾಡ್ತಿದ್ದಾರೆ. ಅದಕ್ಕೆ ಅವರ ಪಕ್ಷದ ನಾಯಕರು ಚಿಂತನೆ ಮಾಡಬೇಕು. ನಾವು ನಮ್ಮ ಪಕ್ಷದ ಕೆಲಸ ಮಾಡ್ತಿದ್ದೇವೆ. ರಾಜಕೀಯದಲ್ಲಿ ಯಾವತ್ತೂ ಶಿಸ್ತಿನಿಂದ ರಾಜಕೀಯ ಮಾಡಬೇಕು. ಅವರ ಶಿಸ್ತಿನಿಂದ ಅವರು ರಾಜಕೀಯ ಮಾಡಲಿ, ನಮ್ಮ ಶಿಸ್ತಿನಿಂದ ನಾವು ರಾಜಕೀಯ ಮಾಡುತ್ತೇವೆ. ಆ ಶಿಸ್ತು ಏಲ್ಲಾದರೂ ಏನಾದರೂ ಆದಾಗ ನಾವು ಉತ್ತರ ಕೊಡುತ್ತೇವೆ. ಇವತ್ತಿನವರೆಗೂ ಆ ಸಂದರ್ಭ ಏನೂ ಇಲ್ಲ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಚನ್ನರಾಜ ಹಟ್ಟಿಹೊಳಿ ಠಕ್ಕರ್ ನೀಡಿದ್ದಾರೆ. ಇದನ್ನೂ ಓದಿ: ಚಪ್ಪಲಿ ಹಾಕಿಕೊಂಡು ದೈವದ ದೀವಟಿಗೆ ನಿಂತ ತೇಜಸ್ವಿ ಸೂರ್ಯ- ಜನ ಆಕ್ರೋಶ

    Live Tv
    [brid partner=56869869 player=32851 video=960834 autoplay=true]

  • ಮೈದಾನ ಖಾಲಿ ಇದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ – ಪರೋಕ್ಷವಾಗಿ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ

    ಮೈದಾನ ಖಾಲಿ ಇದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ – ಪರೋಕ್ಷವಾಗಿ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ

    ಬೆಳಗಾವಿ: ‘ಮೈದಾನ್ ಓಪನ್ ಹೈ, ಖುಲ್ಲಾ ಹೈ, ಹಮ್ ಬಿ ತಯಾರ್ ಹೈ ಆಪ್ ಬೀ ಖುದೋ ಮೈದಾನ್ ಮೇ’ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ (Ramesh Jarkiholi) ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar)  ಮೈದಾನ ತಯಾರಿದೆ ಅಖಾಡಕ್ಕೆ ಧುಮುಕಿ ಎಂದು ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ.

    ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಆ್ಯಕ್ಟೀವ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್, “ಮೈದಾನ್ ಓಪನ್ ಹೈ, ಖುಲ್ಲಾ ಹೈ, ಹಮ್ ಬಿ ತಯಾರ್ ಹೈ ಆಪ್ ಬೀ ಖುದೋ ಮೈದಾನ್ ಮೇ” ಅಖಾಡ ತೆರೆದಿದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಚುನಾವಣೆ ಗೆಲ್ಲಲು BJP ಹಣ, ಹೆಂಡದ ಹೊಳೆ ಹರಿಸುತ್ತಿದೆ- ಡಿಂಪಲ್ ಯಾದವ್ ಕಿಡಿ

    ಎಲೆಕ್ಷನ್ ಗೆದ್ದ ಮರು ದಿನದಿಂದ ನಾನು ಎಲೆಕ್ಷನ್‍ಗೆ ತಯಾರಿ ನಡೆಸಿದ್ದೇನೆ. ಈಗ ಚುನಾವಣೆಗೆ 90 ದಿನ ಇದೆ ಅಂತಾ ತಯಾರಿ ನಡೆಸಿಲ್ಲ. ಈಗ ಬಂದು ನಾನು ಬಿಲ್ಲು, ಬಾಣ, ಬತ್ತಲಿಕೆ ಅಂತೆಲ್ಲಾ ಇಲ್ಲ. ಚುನಾವಣೆ ಗೆದ್ದ ಮಾರನೇ ನನ್ನ ದಿನವೇ ಹುಟ್ಟಿದ ದಿನವನ್ನು ನನ್ನ ಕ್ಷೇತ್ರದ ಜನರಿಗಾಗಿ ಚೇಂಜ್ ಮಾಡಿಕೊಂಡಿದ್ದೇನೆ. ನನಗೆ ಪುನರ್ಜನ್ಮ ಕೊಟ್ಟ ಕ್ಷೇತ್ರ ಅಂತಾ ಚೇಂಜ್ ಮಾಡಿಕೊಂಡಿದ್ದೇನೆ. ಜನರ ಮನಸ್ಸು ಯಾವ ರೀತಿ ಗೆಲ್ಲಬೇಕೆಂದು ಗೊತ್ತು. ನಾಲ್ಕೂವರೆ ವರ್ಷಗಳಿಂದ ಅದನ್ನೇ ಕೆಲಸದ ಮೂಲಕ ಮಾಡಿಕೊಂಡು ಬಂದಿದ್ದೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಇಕ್ಬಾಲ್ ಅನ್ಸಾರಿ ಹನುಮ ಮಾಲಾಧಾರಿಗಳಿಗೆ ಸ್ವಾಗತ ಕೋರಿ ಬ್ಯಾನರ್ – ಶ್ರೀರಾಮಸೇನೆ ಆಕ್ಷೇಪ

    ಗ್ರಾಮೀಣ ಕ್ಷೇತ್ರದ ಮೇಲೆ ಹಲವರು ಕಣ್ಣು ಹಾಕಿದ್ದಾರೆ ಎಂದು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಭವಿಷ್ಯ ಅಂತೂ ನಾನು ಹೇಳಲ್ಲ. ಮುಂದೆ ನೀವೇ ನೋಡ್ತಿರಲ್ಲ ಎಲೆಕ್ಷನ್ ರಿಸಲ್ಟ್, ಇನ್ನೂ ಕಾವು ಏರಬೇಕು. ಈಗ ನಮ್ಮ ತಮ್ಮ ಹೇಳ್ತಾನೆ ಕೇಳಿ, ಮೈದಾನ್ ಓಪನ್ ಹೈ, ಖುಲ್ಲಾ ಹೈ, ಹಮ್ ಬಿ ತಯಾರ್ ಹೈ ಆಪ್ ಬೀ ಖುದೋ ಮೈದಾನ್ ಮೇ ಎಂದು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಫುಲ್ ಆಕ್ಟೀವ್

    ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಫುಲ್ ಆಕ್ಟೀವ್

    ಬೆಳಗಾವಿ: ರಾಜಕೀಯ ಬದ್ಧವೈರಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಫುಲ್ ಆಕ್ಟೀವ್ ಆಗಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದಾರೆ.

    2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ (Belagavi) ಗ್ರಾಮೀಣ ಕ್ಷೇತ್ರದಲ್ಲಿ ಗೋಕಾಕ್ ಸಾಹುಕಾರ್ ಆಕ್ಟೀವ್ ಆಗಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಳೇ ದ್ವೇಷ ತೀರಿಸಿಕೊಳ್ಳಲು ಹೊಸ ಲೆಕ್ಕಾಚಾರವನ್ನು ರಮೇಶ್ ಜಾರಕಿಹೊಳಿ ಮಾಡುತ್ತಿದ್ದಾರೆ. ಮರಾಠಾ ಅಸ್ತ್ರ ಬಳಸಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ಪ್ಲ್ಯಾನ್ ಹಾಕಿದ್ದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಜಿಲ್ಲಾ ಪಂಚಾಯತ್‍ ಮುಖಂಡರೊಂದಿಗೆ ಸಭೆ ನಡೆಸುತ್ತಿದ್ದಾರೆ. ಇಂದು ಸಾಂಬ್ರಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮುಖಂಡರ ಸಭೆ ನಡೆಸಿದ್ದು ವಾರದಲ್ಲಿ ಮೂರು ದಿನ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರೌಂಡ್ಸ್ ಹಾಕುತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಒಂದಿಂಚೂ ಜಾಗ ಮಹಾರಾಷ್ಟ್ರಕ್ಕೆ ಹೋಗೋದಿಲ್ಲ: ಜೋಶಿ

    ಬೆಳಗಾವಿ ಗ್ರಾಮೀಣ ಕ್ಷೇತ್ರದ ಮರಾಠಾ ಸಮುದಾಯದ ನಾಯಕರ ಜೊತೆ ನಿರಂತರ ಸಂಪರ್ಕ ಇಟ್ಟುಕೊಳ್ಳುತ್ತಿದ್ದು ಶತಾಯಗತಾಯ ಈ ಬಾರಿ ಚುನಾವಣೆಯಲ್ಲಿ ಲಕ್ಷೀ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು ನಡೆಸಿದ್ದಾರೆ. ಅದಕ್ಕಾಗಿ ಮರಾಠಾ ಸಮುದಾಯ ಮುಖಂಡನನ್ನು ಬಿಜೆಪಿ ನಾಯಕರಿಗೆ ಪರಿಚಯ ಮಾಡುತ್ತಿದ್ದು ಹಿಂಡಲಗಾ ಗ್ರಾಮಪಂಚಾಯತ್ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್‌ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಭೇಟಿ ಮಾಡಿಸಿದ್ದು ಜಿಲ್ಲಾ ರಾಜಕಾರಣದಲ್ಲಿ ರಮೇಶ್ ಜಾರಕಿಹೊಳಿ ನಡೆ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಸಿದ್ರಾಮುಲ್ಲಾಖಾನ್‍ಗೆ ಪ್ರಿಯವಾಗಿದ್ದು ಟಿಪ್ಪು ಟೋಪಿ ಅದನ್ನೇ ನಾನು ಹೇಳಿದ್ದು: ಸಿ.ಟಿ.ರವಿ

    Live Tv
    [brid partner=56869869 player=32851 video=960834 autoplay=true]

  • ಅಭಿವೃದ್ಧಿ ಕೆಲಸ ಮಾಡಿದ್ದರೆ ಟಿಫಿನ್ ಬಾಕ್ಸ್ ಹಂಚುವ ಅವಶ್ಯಕತೆ ಇರುತ್ತಿರಲಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಂಜಯ್ ಪಾಟೀಲ್ ಟಾಂಗ್

    ಅಭಿವೃದ್ಧಿ ಕೆಲಸ ಮಾಡಿದ್ದರೆ ಟಿಫಿನ್ ಬಾಕ್ಸ್ ಹಂಚುವ ಅವಶ್ಯಕತೆ ಇರುತ್ತಿರಲಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಂಜಯ್ ಪಾಟೀಲ್ ಟಾಂಗ್

    ಬೆಳಗಾವಿ: ಅಭಿವೃದ್ಧಿ ಕೆಲಸ ಮಾಡಿದ್ದರೆ ಟಿಫಿನ್ ಬಾಕ್ಸ್ (Tiffin Box) ಹಂಚುವ ಅವಶ್ಯಕತೆ ಇರುತ್ತಿರಲಿಲ್ಲ ಎನ್ನುವ ಮೂಲಕ ಬೆಳಗಾವಿ (Belagavi) ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಮತ್ತು ಅಂಜಲಿ ನಿಂಬಾಳ್ಕರ್‌ಗೆ (Anjali Nimbalkar) ಮಾಜಿ ಶಾಸಕ ಸಂಜಯ್ ಪಾಟೀಲ್  (Sanjay Patil) ಟಾಂಗ್ ನೀಡಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಂಚುವವರು ಹಂಚುತ್ತಾರೆ. ನಾನು ಸದ್ಯಕ್ಕೆ ಜಿಲ್ಲಾಧ್ಯಕ್ಷನಾಗಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ನಾನು ಗಂಡಸಾಗಿ ಹೇಗೆ ಹಳದಿ, ಕುಂಕುಮ ಕಾರ್ಯಕ್ರಮ ಮಾಡೋಕೆ ಆಗುತ್ತದೆ? ಕಾರ್ಯಕ್ರಮ ಮಾಡಲು ಎಲ್ಲರಿಗೂ ಸ್ವಾತಂತ್ರ‍್ಯವಿದೆ. ಎಲ್ಲರೂ ಏನು ಬೇಕಾದರೂ ಕಾರ್ಯಕ್ರಮ ಮಾಡಬಹುದು. ಎಲ್ಲರೂ ಅವರವರ ಕಾರ್ಯಕ್ರಮ ಮಾಡುತ್ತಾರೆ. ನಾನು ಪಕ್ಷದ ಜಿಲ್ಲಾಧ್ಯಕ್ಷನಾಗಿ ಪಕ್ಷ ಸಂಘಟನೆ ಬೆಳೆಸಲು ಪಕ್ಷದ ಕಾರ್ಯಕ್ರಮಗಳಲ್ಲಿ ಇರುತ್ತೇನೆ ಎಂದರು.

    ಗ್ರಾಮೀಣ ಕ್ಷೇತ್ರದಲ್ಲಿ ಟಿಫಿನ್ ಬಾಕ್ಸ್ ಹಂಚುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಟಿಫಿನ್ ಬಾಕ್ಸ್ ತೆಗೆದುಕೊಳ್ಳುವವರು, ತೆಗೆದುಕೊಳ್ಳುತ್ತಿರಬಹುದು. ಆದರೆ ಟಿಫಿನ್ ಬಾಕ್ಸ್ ಬಿಜೆಪಿ ಕಾರ್ಯಕರ್ತರು ಯಾರೂ ತೆಗೆದುಕೊಳ್ಳುವುದಿಲ್ಲ. ಚುನಾವಣೆ ಅಭಿವೃದ್ಧಿ ಮೇಲೆ ಆಗಬೇಕೇ ಹೊರತು. ಏನಾದರೂ ಹಂಚಿ ಆಗಬಾರದು. ಬಾಬಾಸಾಹೇಬ ಅಂಬೇಡ್ಕರ್ ಅವರು ಎಲ್ಲರಿಗೂ ಒಂದೇ ಮತ ಹಾಕುವ ಅಧಿಕಾರ ಕೊಟ್ಟಿದ್ದಾರೆ. ಆ ಮತವನ್ನು ಯಾರೂ ಮಾರಾಟ ಮಾಡಿಕೊಳ್ಳಬಾರದು ಎಂದು ತಿಳಿಸಿದರು. ಇದನ್ನೂ ಓದಿ: ನಾಳೆಯಿಂದ ಹಾಲು, ಮೊಸರಿನ ದರ 2 ರೂ. ಏರಿಕೆ

    ನಿಮ್ಮ ಪಕ್ಷದವರು ಯಾರೂ ಏನೂ ಹಂಚಿಲ್ಲವೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ನಮ್ಮವರು ಪುಸ್ತಕ ಹಂಚಿದ್ದಾರೆ. ಆದರೆ ಅವರು ಸಾರಾಯಿಯನ್ನು ಹಂಚುತ್ತಿಲ್ಲವಲ್ಲ. ಪುಸ್ತಕ ಹಂಚಬೇಕು, ಬಡವರ ಮಕ್ಕಳಿಗೆ ಕಲಿಸಬೇಕು. ಇದರಿಂದ ಅವರಿಗೆ ಜ್ಞಾನ ಬರುತ್ತದೆ. ಟಿಫಿನ್ ಬಾಕ್ಸ್ ಚುನಾವಣೆ ಸಂದರ್ಭದಲ್ಲಿ ಹಂಚುವುದು, ನಮಗೆ ಮತ ಹಾಕಬೇಕು ಎಂದು ಷರತ್ತು ಹಾಕುವುದು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗುಡಿ ಕಟ್ಟಲು 50 ಲಕ್ಷ ರೂ. ಕೊಡುತ್ತೇನೆ, ಒಂದೂ ಬೇರೆ ಟೇಬಲ್ ಹಾಕಬಾರದು ಎಂದು ಕಂಡಿಷನ್ ಹಾಕುತ್ತಿದ್ದಾರೆ. ನಾನು 10 ವರ್ಷ ಏನೂ ಕೆಲಸ ಮಾಡಿಲ್ಲ. ಇದನ್ನು ಜನರ ಮೇಲೆ ಬಿಡುತ್ತೇನೆ ಎಂದರು.

    ನಾನು ನಾಳೆ ಬೆಳಗ್ಗಿನ ವಿಚಾರಕ್ಕೆ ಗ್ಯಾರಂಟಿ ಕೊಡುವುದಿಲ್ಲ. ನಾಳೆ ಬೆಳಗ್ಗೆ ಏಳುತ್ತೇವೋ ಇಲ್ಲವೋ ಗೊತ್ತಿಲ್ಲ. ಅಂತಹ ಆಸೆ ಇರಬಾರದು. ಯಾರು ಅಭಿವೃದ್ಧಿ ಮಾಡುತ್ತಾರೆ, ಅವರು ಏನೂ ಹಂಚುವ ಅವಶ್ಯಕತೆ ಇಲ್ಲ ಎಂದು ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಂಜಯ್ ಪಾಟೀಲ್ ಟಾಂಗ್ ಕೊಟ್ಟರು. ಇದನ್ನೂ ಓದಿ: ವಿರೋಧಪಕ್ಷ ಮತಕ್ಕೋಸ್ಕರ ಭಯೋತ್ಪಾದನೆಗೆ ಸಪೋರ್ಟ್ ಮಾಡ್ತಿದೆ: ಪ್ರಮೋದ್ ಮುತಾಲಿಕ್

    Live Tv
    [brid partner=56869869 player=32851 video=960834 autoplay=true]

  • ವರ್ಕ್‌ ಆರ್ಡರ್‌ ಇಲ್ಲದೇ ಕಾಮಗಾರಿ – ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಪಂಚಾಯತ್‌ನಿಂದ ದೂರು

    ವರ್ಕ್‌ ಆರ್ಡರ್‌ ಇಲ್ಲದೇ ಕಾಮಗಾರಿ – ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಪಂಚಾಯತ್‌ನಿಂದ ದೂರು

    ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶಹೊರಹಾಕಿದ್ದಾರೆ.

    ಬೆಳಗಾವಿ ಡಿಸಿ ಕಚೇರಿ ಆವರಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನಿಲಜಿ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ನೀಟ್ ಪರೀಕ್ಷೆ: ಒಳಉಡುಪು ಕಳಚಿಡುವಂತೆ ಒತ್ತಾಯಿಸಿದ್ದ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ

    ಯಾವುದೇ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಬೇಕಾದರೆ ಮೊದಲಿಗೆ ಟೆಂಡರ್ ಕರೆಯಬೇಕು. ಅದಕ್ಕೆ ಅನುಮೋದನೆ ಸಿಗಬೇಕು. ಆದರೆ ಇದ್ಯಾವುದನ್ನು ಪಾಲಿಸದೇ ವರ್ಕ್ ಆರ್ಡರ್ ಇಲ್ಲದೇ ಇದ್ದರೂ ಶಾಸಕಿ ಪುತ್ರನಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದಲ್ಲದೇ ಸಂಬಂಧಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರ ಗಮನಕ್ಕೆ ತರದೇ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಡಿಸಿಗೆ ಒತ್ತಾಯಿಸಿದರು. ಇದನ್ನೂ ಓದಿ: ಪಠ್ಯ, ಪುಸ್ತಕ ಪರಿಷ್ಕರಣೆಗೆ ಮುಂದುವರಿದ ವಿರೋಧ- ತಮ್ಮ ಕವಿತೆಯನ್ನು ಬಳಸಬೇಡಿ: ರೂಪಾ ಹಾಸನ

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ RSS ಕಚೇರಿ ಮೇಲೆಯೇ ಭಾರತದ ಬಾವುಟ ಹಾರಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ RSS ಕಚೇರಿ ಮೇಲೆಯೇ ಭಾರತದ ಬಾವುಟ ಹಾರಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಭಾರತ ದೇಶಕ್ಕೆ ಸ್ವಾತಂತ್ರ‍್ಯ ಸಿಕ್ಕಿ 75 ವರ್ಷ ಆಗಿದೆ. ಆದರೆ ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ RSS ಕಚೇರಿ ಮೇಲೆಯೇ ಭಾರತದ ಬಾವುಟ ಹಾರಿಸಿಲ್ಲ ಎಂದು ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

    ಪ್ರತಿಯೊಂದನ್ನು ರಾಜಕೀಯವಾಗಿ ನೋಡಲು ಬರಲ್ಲ. 75 ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವವನ್ನು ರಾಜಕಾರಣದಿಂದ ನೋಡುವುದಿಲ್ಲ. ರಾಜಕೀಯೇತರವಾಗಿ ನೋಡುತ್ತೇನೆ. ರಾಷ್ಟ್ರಪತಿಯಾಗಿ ದಲಿತ ಮಹಿಳೆ ಗೆದ್ದಿದ್ದಾರೆ. ವಿಶ್ವದ ಅತ್ಯಂತ ಬಲಿಷ್ಠ ಪ್ರಜಾಪ್ರಭುತ್ವ ದೇಶದ ಪ್ರಥಮ ಪ್ರಜೆ ಆಗಿದ್ದಾರೆ. ಅವರಿಗೆ ಅಭಿನಂದಿಸುತ್ತೇನೆ ಎಂದರು. ಇದನ್ನೂ ಓದಿ: ಮೋದಿ-ಯೋಗಿಗೆ ಕುಟುಂಬವಿಲ್ಲ, ಆದರೆ ನಮಗಿದೆ: ಉಮೇಶ್ ಕತ್ತಿ

    ಸಿದ್ದರಾಮೋತ್ಸವದ ಬಗ್ಗೆ ಮಾತನಾಡಿದ ಹೆಬ್ಬಾಳ್ಕರ್, ಇದು ರಾಜಕೀಯ ಕಾರ್ಯಕ್ರಮ ಎನ್ನುವುದಕ್ಕಿಂತ ಪಕ್ಷದ ಅಭಿಮಾನಿಗಳು, ಸಿದ್ದರಾಮಯ್ಯನವರ ಅಭಿಮಾನಿಗಳು ಸೇರಿಕೊಂಡು ಮಾಡುತ್ತಿರುವ ಕಾರ್ಯಕ್ರಮ. ಸಿದ್ದರಾಮಯ್ಯ ಅಮೃತ ಮಹೋತ್ಸವ ರಾಜಕಾರಣ ಮಾಡೋದಕ್ಕಲ್ಲ. ಸಿದ್ದರಾಮಯ್ಯ ಸಾಹೇಬರಿಗೆ 75 ವರ್ಷ ಆಗಿದೆ. ಅದರಲ್ಲಿ 40 ವರ್ಷ ರಾಜಕಾರಣದಲ್ಲೇ ಕಳೆದಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಬೆಳಗಾವಿಯಿಂದ 50 ಸಾವಿರ ಜನರು ಹೋಗುತ್ತಾರೆ ಎಂದರು. ಇದನ್ನೂ ಓದಿ: ಟಾಕಳೆ ವಿರುದ್ಧ ಕೈ ಕಾರ್ಯಕರ್ತೆ ಅತ್ಯಾಚಾರ ಆರೋಪ – ನವ್ಯಶ್ರೀ ವೈದ್ಯಕೀಯ ತಪಾಸಣೆಗೆ ಕರೆದೊಯ್ದ ಪೊಲೀಸ್

    Live Tv
    [brid partner=56869869 player=32851 video=960834 autoplay=true]

  • ಸತೀಶ್ ಜಾರಕಿಹೊಳಿ ಜೊತೆಗೆ ವೇದಿಕೆ ಮೇಲೆಯೇ ಸೆಲ್ಫಿ ಕ್ಲಿಕ್ಕಿಸಿಕೊಂಡ ಶಾಸಕಿ ಹೆಬ್ಬಾಳ್ಕರ್

    ಸತೀಶ್ ಜಾರಕಿಹೊಳಿ ಜೊತೆಗೆ ವೇದಿಕೆ ಮೇಲೆಯೇ ಸೆಲ್ಫಿ ಕ್ಲಿಕ್ಕಿಸಿಕೊಂಡ ಶಾಸಕಿ ಹೆಬ್ಬಾಳ್ಕರ್

    ಚಿಕ್ಕೋಡಿ: ರಾಜಕಾರಣಿಗಳ ಜೊತೆಗೆ ಅವರ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದು ಸಹಜ. ಆದರೆ ರಾಜ್ಯದ ಪ್ರಭಾವಿ ರಾಜಕಾರಣಿ ಎಂದು ಗುರುತಿಸಿಕೊಳ್ಳುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.

    ಬೆಳಗಾವಿ ಜಿಲ್ಲೆಯಲ್ಲಿ ಹಾರೂಗೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಮಹೇಶ ತಮ್ಮಣ್ಣವರ ಅವರ ಸೈಕಲ್ ಜಾಥಾದ ಸಮಾರೋಪ ಸಮಾರಂಭದಲ್ಲಿ ವೇದಿಕೆ ಮೇಲೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸತೀಶ ಜಾರಕಿಹೊಳಿ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು, ಇದೀಗ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: 1950ರಲ್ಲೇ ಈದ್ಗಾ ಮೈದಾನ ಮೈಸೂರು ಸಂಸ್ಥಾನದ ಅಧೀನಕ್ಕೆ ಒಳಪಟ್ಟಿತ್ತು: ದಾಖಲೆ ರಿಲೀಸ್

    ವೇದಿಕೆ ಮೇಲೆ ಸುಮಾರು 5 ನಿಮಿಷಗಳ ಕಾಲ ವಿವಿಧ ಪೋಸ್ ನೀಡಿ ತಮ್ಮ ಫೋನ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸ ಪಟ್ಟಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ರೀಲ್ಸ್ ಮಾಡಿ, ಮಿಂಚಿದ ಗೋಲ್ಡನ್ ಕ್ವೀನ್ ಅಮೂಲ್ಯ

    ಕುಡಚಿ ವಿಧಾನಸಭಾ ಕೇತ್ರದ ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಹಾರೂಗೇರಿಯಲ್ಲಿ ಬೃಹತ್ ಸೈಕಲ್ ಜಾಥಾದ ಸಮಾರೋಪ ಸಮಾವೇಶ ಆಯೋಜನೆ ಮಾಡಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಮೊದಲು ಯಡಿಯೂರಪ್ಪ ಸಾಹೇಬರಿಗೆ ಮರ್ಯಾದೆ ಕೊಡಲಿ: ಬಿಎಸ್‌ವೈಯನ್ನು ಹಾಡಿ ಹೊಗಳಿದ ಹೆಬ್ಬಾಳ್ಕರ್

    ಮೊದಲು ಯಡಿಯೂರಪ್ಪ ಸಾಹೇಬರಿಗೆ ಮರ್ಯಾದೆ ಕೊಡಲಿ: ಬಿಎಸ್‌ವೈಯನ್ನು ಹಾಡಿ ಹೊಗಳಿದ ಹೆಬ್ಬಾಳ್ಕರ್

    ಬೆಳಗಾವಿ: ಮೊದಲು ಮಾಜಿ ಸಿಎಂ ಯಡಿಯೂರಪ್ಪ ಸಾಹೇಬರಿಗೆ ಕೊಡುವಂತಹ ಮರ್ಯಾದೆ ಕೊಡಲಿ ಎಂದು ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿಗೆ ಟಾಂಗ್ ಕೊಟ್ಟರು.

    ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಡಿ.ಕೆ.ಶಿವಕುಮಾರ್ ಅವರಿಗೆ ಭಿನ್ನಮತವಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಆರೋಪಕ್ಕೆ ನಾನೂ ಉತ್ತರ ಕೊಡಲಿಕ್ಕೆ ಆಗಲ್ಲ. ಅವರ ಮನೆಯನ್ನ ಮೊದಲು ಸರಿ ಮಾಡಿಕೊಳ್ಳಲಿ. ಮೊದಲು ಯಡಿಯೂರಪ್ಪ ಸಾಹೇಬರಿಗೆ ಕೊಡುವಂತಹ ಮರ್ಯಾದೆ ಕೊಡಲಿ ಎಂದು ಟೀಕಿಸಿದರು. ಇದನ್ನೂ ಓದಿ: ದೇವಸ್ಥಾನದ ಆವರಣದಲ್ಲಿ ಮಾಂಸ ಎಸೆದ ದುಷ್ಕರ್ಮಿಗಳು- 3 ಮಾಂಸದ ಅಂಗಡಿಗಳಿಗೆ ಬೆಂಕಿ

    ದಕ್ಷಿಣ ಭಾರತ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಬರಲಿಕ್ಕೆ ಯಡಿಯೂರಪ್ಪ ಸಾಹೇಬ್ರು ಕಾರಣರಾಗಿದ್ದಾರೆ. ಮೊದಲು ಅವರಿಗೆ ಕೊಡುವಂತಹ ಗೌರವ ಸ್ಥಾನಮಾನ ಕೊಡಲಿ. ಮೊದಲು ಅವರ ಎಡೆಯಲ್ಲಿ ಬಿದ್ದಿರೋದನ್ನ ತಗೆದು ಸುಧಾರಿಸಿಕೊಳ್ಳಲಿ. ಆಮೇಲೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲಿ ಎಂದು ಯಡಿಯೂರಪ್ಪ ಅವರನ್ನ ಹಾಡಿ ಹೊಗಳಿದರು.

    ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಿಎಂ ರೇಸ್‍ಗಾಗಿ ಹೊಡೆದಾಟ ನಡೆಯುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ಕೊಟ್ಟ ಅವರು, ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಅನ್ನೋ ರೀತಿ ಇದಾಗಿದೆ. ಮೊದಲು ನಮ್ಮ ಪಕ್ಷ 125 ಶಾಸಕರು ಆಯ್ಕೆಯಾಗಲಿ. ಶಾಸಕಾಂಗ ಸಭೆಯಲ್ಲಿ ತೀರ್ಮಾನ ಆಗಲಿ, ಹೈಕಮಾಂಡ್ ತೀರ್ಮಾನ ಆಗಲಿ. ಈಗಲೇ ಯಾರು ಗುದ್ದಾಡುತ್ತಿಲ್ಲ, ಜಿದ್ದಿಗೆ ಬಿದ್ದಿಲ್ಲ ಎಂದು ಸ್ಪಷ್ಟನೆ ಕೊಟ್ಟರು.

    ಸಿದ್ದರಾಮೋತ್ಸವ ಅವರ ಹುಟ್ಟುಹಬ್ಬವನ್ನು ಎಲ್ಲರೂ ಕೂಡ ತುಂಬು ಮನಸ್ಸಿನಿಂದ ಮಾಡ್ತಾ ಇದ್ದೇವೆ. ರಾಜಕೀಯದಲ್ಲಿ 40 ವರ್ಷ ಏರಿಳಿತ ಕಂಡ ಒಬ್ಬ ನಾಯಕನ 75ನೇ ಹುಟ್ಟುಹಬ್ಬ ಎಲ್ಲರೂ ಸೇರಿ ಮಾಡ್ತಾ ಇದ್ದೇವೆ. ಇದಕ್ಕೆ ನಮ್ಮ ಪಕ್ಷದಲ್ಲಿ ಯಾವುದೇ ವಿರೋಧವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಉಚಿತ ಬೈಕ್ ಅಂಬುಲೆನ್ಸ್ – 5 ತಿಂಗಳಿನಿಂದ ವ್ಯಕ್ತಿಯಿಂದ ಫ್ರೀ ಸರ್ವೀಸ್

    ಸಿದ್ದರಾಮಯ್ಯ ನಾನೇ ಸಿಎಂ ಆಗುತ್ತೇನೆಂಬ ಹೇಳಿಕೆಗೆ ಉತ್ತರ ಕೊಟ್ಟ ಅವರು, ನಾನೇ ಸಿಎಂ ಆಗ್ತೇನೆಂದು ಸಿದ್ದರಾಮಯ್ಯ ಅವರು ಇಂಗಿತ ವ್ಯಕ್ತಪಡಿಸಿದ್ದು, ನಾವೆಲ್ಲೂ ಕೇಳಿಲ್ಲ. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಮುಂಚೆಯಿಂದನೂ ಒಂದು ಪದ್ಧತಿ ಇದೆ. ಶಾಸಕರು ಆಯ್ಕೆಯಾಗಬೇಕು, ಶಾಸಕರ ಸಭೆ, ಹೈಕಮಾಂಡ್ ತೀರ್ಮಾನವಾಗಬೇಕು. ರಿಸಲ್ಟ್ ಬಂದಿಲ್ಲ ಈಗಲೇ ಅದನ್ನ ಹೇಳಲಿಕ್ಕೆ ಆಗಲ್ಲ. ಸಿದ್ದರಾಮಯ್ಯ ಸಾಹೇಬ್ರು ಇದನ್ನೆ ಹೇಳಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡರು.

    Live Tv
    [brid partner=56869869 player=32851 video=960834 autoplay=true]