Tag: ಲಕ್ಷ್ಮೀ ಹೆಬ್ಬಾಳ್ಕರ್

  • ಕೇದಾರದಿಂದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಶೀರ್ವಾದ ಮಾಡಲು ಬಂದಿದ್ದೇನೆ: ಕೇದಾರ ಪೀಠದ ಜಗದ್ಗುರು

    ಕೇದಾರದಿಂದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಶೀರ್ವಾದ ಮಾಡಲು ಬಂದಿದ್ದೇನೆ: ಕೇದಾರ ಪೀಠದ ಜಗದ್ಗುರು

    ಬೆಳಗಾವಿ: ಕೇದಾರದಿಂದ ಕರ್ನಾಟಕದ ಬೆಳಗಾವಿವರೆಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಶೀರ್ವಾದ ಮಾಡಲು ಬಂದಿದ್ದೇನೆ ಎಂದು ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ ಕೊಟ್ಟಿದ್ದಾರೆ.

    ಕೇದಾರ ಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕೇದಾರದಿಂದ ಕರ್ನಾಟಕದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಬಂದಿದ್ದೇವೆ. ಕೇದಾರನಾಥ ಕಳಿಸಿಕೊಟ್ಟಿದ್ದಕ್ಕೆ ನಾವು ಬಂದಿದ್ದೇವೆ. ನಾಲ್ಕು ತಿಂಗಳ ಕಾಲ ನಾವು ಕೇದಾರನಾಥದಲ್ಲೇ ಇರಬೇಕಾಗುತ್ತದೆ. ಆನಂತರ ಆರು ತಿಂಗಳು ನಿಯೋಜಿತ ಕಾರ್ಯಕ್ರಮಗಳಾಗುತ್ತವೆ ಎಂದು ತಿಳಿಸಿದ್ದಾರೆ.

    ಕೇದಾರನಾಥ ನಮಗೆ ಇಲ್ಲಿ ಕಳಿಸಿದ್ದಾನೆ ಇದೇ ಮುಖ್ಯ ಉದ್ದೇಶ. ರಾಜಕೀಯ ಭವಿಷ್ಯ ಹೇಳುವವರು ರಾಜಗುರುಗಳು. ಧರ್ಮದ ಭವಿಷ್ಯ ಹೇಳುವವರು ನಾವು ಧರ್ಮಗುರುಗಳು. ರಾಜ್ಯದಲ್ಲಿ ಮಾತನಾಡೋದು ಆ ರಾಜ್ಯಗಳಿಗೆ ಬಿಟ್ಟಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಂತ್ಯದವರೆಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡ್ತೇವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಲಕ್ಕಿಡಿಪ್‍ನಲ್ಲಿ ಗೆದ್ದರೂ, ಸೋತರೂ ಅಳುತ್ತೇನೆ ನಾನ್ಯಾರು ಬಲ್ಲಿರಾ!? – ನಾನೇ ಲಕ್ಕಿಡಿಪ್ ಸಿಎಂ ಹೆಚ್‍ಡಿಕೆ: ಬಿಜೆಪಿ

    ರಾಯಚೂರು ಜಿಲ್ಲೆಯಲ್ಲಿ ಮಹಾಪೂಜೆ ಮುಗಿಸಿ, ತುಮಕೂರು, ಚಿತ್ರದುರ್ಗದಲ್ಲಿ ಕಾರ್ಯಕ್ರಮವಿದೆ. ಬೆಳಗಾವಿ ಜಿಲ್ಲೆಯ ಮುತ್ನಾಳ ಮಠಕ್ಕೆ ಬರಬೇಕು ಎಂದು ಹಠ ಹಿಡಿದಿದ್ರು. ಭಕ್ತರ ಮನೆಗೆ ಕರೆದುಕೊಂಡು ಹೋಗಬೇಕು ಎಂದು ಹಠ ಹಿಡಿದಿದ್ರು. ಲಕ್ಷ್ಮೀ ಹೆಬ್ಬಾಳ್ಕರ್ ಭಕ್ತಿಯಿಂದ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

    [brid partner=56869869 player=32851 video=960834 autoplay=true]

  • ನಾನು ಡ್ಯಾನ್ಸ್ ಕಲಿತಿಲ್ಲ, ಬೇರೆಯವರನ್ನು ಕುಣಿಸೋದನ್ನು ಚೆನ್ನಾಗಿ ಕಲಿತಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್

    ನಾನು ಡ್ಯಾನ್ಸ್ ಕಲಿತಿಲ್ಲ, ಬೇರೆಯವರನ್ನು ಕುಣಿಸೋದನ್ನು ಚೆನ್ನಾಗಿ ಕಲಿತಿದ್ದೇನೆ: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ನಾನು ಡ್ಯಾನ್ಸ್ ಕಲಿತಿಲ್ಲ. ಆದರೆ, ಬೇರೆಯವರನ್ನು ಕುಣಿಸೊದನ್ನ ಚೆನ್ನಾಗಿ ಕಲಿತಿದ್ದೇನೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವ್ಯಂಗ್ಯವಾಡಿದರು.

    ನಗರದ ಕೆಎಲ್‌ಇ ಸೆಂಟಿನೇರಿ ಜೀರಿಗೆ ಸಭಾಗೃಹದಲ್ಲಿ ರಾಜು ಪವಾರ್ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾಮಿಡಿ ಚಾರಿಟೇಬಲ್ ಶೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಣಬಹುದು. ಭಾಷೆ-ವೇಷ ಬೇರೆಯಾದರು ನಾವೆಲ್ಲರೂ ಭಾರತೀಯರೇ ಎಂದರು. ಇದನ್ನೂ ಓದಿ: ಗುಡ್ಡ ಕುಸಿತ- ಕರ್ನಾಟಕ, ಗೋವಾ ಸಂಪರ್ಕಿಸುವ ರಸ್ತೆ 5 ಘಂಟೆ ಬಂದ್

    ಕೊರೊನಾ ಕಾಲದಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ಕಾರ್ಯ ಶ್ಲಾಘನೀಯ. ಅವರಿಗೂ ಮನೋರಂಜನೆ ಸಿಗಲೆಂದು ರಾಜು ಪವಾರ್ ಆಯೋಜಿಸಿರುವ ಕಾರ್ಯಕ್ರಮ ಪ್ರಶಂಸನೀಯ. ನನಗೆ ಡ್ಯಾನ್ಸ್ ಮಾಡೋಕೆ ಬರಲ್ಲ. ಆದರೆ ನಾನು ಬೇರೆಯವರನ್ನು ಕುಣಿಸುತ್ತೇನೆ ಎನ್ನುತ್ತಲೇ ವಿರೋಧಿಗಳಿಗೆ ಅವರು ಟಾಂಗ್ ನೀಡಿದರು. ಇದನ್ನೂ ಓದಿ: ಶಾಸಕ ಜಮೀರ್‌ ಮನೆ ಮೇಲೆ ಎಸಿಬಿ ದಾಳಿ – ಸಿಎಂ ಹೇಳಿದ್ದೇನು?

    Live Tv
    [brid partner=56869869 player=32851 video=960834 autoplay=true]

  • ಯುವಕರ ಹೋರಾಟ ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಯುವಕರ ಹೋರಾಟ ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಅಗ್ನಿಪಥ್ ವಿರೋಧಿಸಿ ಸೇನಾಕಾಂಕ್ಷಿಗಳು ಬೆಳಗಾವಿಗೆ ಬರುವುದನ್ನು ತಡೆಹಿಡಿದಿದ್ದಕ್ಕೆ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ಹೊರಹಾಕಿದ್ದಾರೆ, ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದು ಎಲ್ಲರ ಅಧಿಕಾರ ಎಂದಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧೀಜಿಯವರು ಕಲಿಸಿ ಕೊಟ್ಟಂತಹ ಸತ್ಯಾಗ್ರಹ ಹೋರಾಟಕ್ಕೆ ನಾವೆಲ್ಲಾ ಬದ್ಧರಾಗಿದ್ದೇವೆ. ಕಾಂಗ್ರೆಸ್‌ನವರು ಕೂಡ ಅದನ್ನೇ ಬಯಸುತ್ತಾರೆ. ಹೋರಾಟ ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಅವರಿಗೆ ಗೊತ್ತಾಗಿರುವುದರಿಂದ ಪಥ ಸಂಚಲನ ಮಾಡಿ, ಬ್ಯಾರಿಕೇಡ್ ಹಾಕಿ ತಡೆದಿದ್ದಾರೆ. ಪ್ರತಿಯೊಂದು ಟೋಲ್ ನಾಕಾನಲ್ಲಿ ಜನರನ್ನು ತಡೆಯುತ್ತಿದ್ದಾರೆ. ಆದರೆ ಈ ರೀತಿ ಎಷ್ಟು ದಿನ ಮಾಡುತ್ತಾರೆ? ಎಷ್ಟು ದಿನ ಹೋರಾಟ ತಡೆಯಲು ಸಾಧ್ಯವಾಗುತ್ತದೆ? ಹೋರಾಟ ತಡೆಯಲು, ದಿಕ್ಕು ಬದಲಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ನನ್ನ ಜೀವಕ್ಕೆ ಅಪಾಯವಿದೆ, 4 ವಾರ ಕಾಲಾವಕಾಶ ನೀಡಿ: ಪೊಲೀಸರಿಗೆ ನೂಪುರ್ ಮೇಲ್

    ಉರಿಯುವ ಬೆಂಕಿಗೆ ಕಾಂಗ್ರೆಸ್ ತುಪ್ಪ ಸುರಿಯುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಹೆಬ್ಬಾಳ್ಕರ್, ಬಿಜೆಪಿಯವರಿಗೆ ಯುವಕರನ್ನು ಹಾಗೂ ಜನರನ್ನು ಎತ್ತಿ ಕಟ್ಟಿ ರೂಢಿ ಇದೆ. ಬೀಸುವ ಗಾಳಿಯನ್ನು ಯಾರಿಂದಲೂ ತಡೆಯಲು ಆಗುವುದಿಲ್ಲ. ಉರಿಯುವ ಸೂರ್ಯನನ್ನು ನಂದಿಸೋಕೆ ಆಗಲ್ಲ. ನಾನು ಯೋಜನೆ ವಿರುದ್ಧ ಎಂದು ಹೇಳಲ್ಲ. ಯೋಜನೆಯಲ್ಲಿ ಬದಲಾವಣೆ ಆಗಬೇಕಿದೆ. 8 ವರ್ಷದಲ್ಲಿ 16 ಕೋಟಿ ಕೆಲಸ ಕೊಡುತ್ತೇನೆ ಎಂದು ಪ್ರಧಾನಿ ವಾಗ್ದಾನ ಮಾಡಿದ್ದರು. ಪಕೋಡ ಮಾರಿ ಎಂದು ಹೇಳಿದ್ದರು. ಈಗ ಅಗ್ನಿಪಥದಲ್ಲಿ ಅಗ್ನಿವೀರರು ಎನ್ನುತ್ತಿದ್ದಾರೆ. ಅಗ್ನಿವೀರರಾಗಿ 4 ವರ್ಷ ಆದಮೇಲೆ ಅವರ ಭವಿಷ್ಯ ಏನು? 75 ವರ್ಷದ ರಕ್ಷಣಾ ಸಚಿವರು, 71 ವರ್ಷದ ಪ್ರಧಾನಿಗೆ ರಿಟೈರ್‌ಮೆಂಟ್ ಇಲ್ಲ. ನಮ್ಮವರೇ 76 ವರ್ಷದ ಪ್ರಕಾಶ್ ಹುಕ್ಕೇರಿ ಎಂಎಲ್‌ಸಿ ಆಗಿದ್ದಾರೆ. ಇದೀಗ ಯುವಕರು 21 ಅಥವಾ 25 ವರ್ಷಕ್ಕೆ ನಿವೃತ್ತಿಯಾದರೆ ಸಹಿಸಿಕೊಳ್ಳುತ್ತಾರಾ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಅಗ್ನಿಪಥ್ ಜಾರಿಯಿಂದ ದೇಶದ ಸೈನಿಕರ ಆತ್ಮಸ್ಥೈರ್ಯ ಕುಗ್ಗುತ್ತೆ: ಧೃವನಾರಾಯಣ್

    Live Tv

  • ಸುನೀಲ್ ಸಂಕ್, ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ: ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

    ಸುನೀಲ್ ಸಂಕ್, ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ: ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

    ಬೆಳಗಾವಿ: ವಾಯುವ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನೀಲ್ ಸಂಕ್ ಮತ್ತು ಶಿಕ್ಷಕರು ಪ್ರತಿನಿಧಿಯಾಗಿರುವ ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ವ್ಯಕ್ತಪಡಿಸಿದರು.

    ಬೆಳಗಾವಿ ನಗರದ ಮರಾಠಾ ಸಭಾಂಗಣದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇದೊಂದು ಅತ್ಯಂತ ಸೂಕ್ಷ್ಮ, ಬುದ್ಧಿವಂತರ ಚುನಾವಣೆಯಾಗಿದೆ. ಸ್ವತಂತ್ರ ಸಿಕ್ಕ ನಂತರ ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆಯಲು, ಅಭಿವೃದ್ಧಿ ಕಾಣಲು ಕಾಂಗ್ರೆಸ್ ಸರ್ಕಾರ ರೂಪಿಸಿದ ಶಿಕ್ಷಣ ನೀತಿಗೆ ಕಾರಣವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಕೊಡುಗೆ ನೀಡುವುದರ ಜೊತೆಗೆ ಕ್ರಾಂತಿಯನ್ನು ಮಾಡಿದೆ. ಸದ್ಯ ದೇಶ ಶಿಕ್ಷಣ ಕ್ಷೇತ್ರದಲ್ಲಿ ಇಷ್ಟೊಂದು ಮುಂದುವರೆಯಲು ಕಾಂಗ್ರೆಸ್ ಪಕ್ಷದ ನೀತಿ ಕಾರಣ ಎಂದರು. ಇದನ್ನೂ ಓದಿ: ಕ್ರಿಕೆಟ್ ಬ್ಯಾಟ್‍ನಿಂದ ಹೊಡೆದ ಪತ್ನಿ – ಕೋರ್ಟ್ ಮೊರೆ ಹೋದ ಪತಿ

    ಎಲ್ಲ ಕ್ಷೇತ್ರದಲ್ಲೂ ಅಪರಾ ಅನುಭವ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಶಿಕ್ಷಕರು ಕ್ಷೇತ್ರದ ಅಭ್ಯರ್ಥಿ ಆಗಿರುವ ಪ್ರಕಾಶ್ ಹುಕ್ಕೇರಿ ಆಯ್ಕೆ ಮಾಡಲಾಗಿದ್ದು, ಅವರ ಅನುಭವದ ಉಪಯೋಗ ಮಾಡಿಕೊಳ್ಳಬೇಕಿದೆ. ಬೆಳಗಾವಿಯಲ್ಲಿ ಭೀಮ್ಸ್ ಕಾಲೇಜು ಸ್ಥಾಪನೆ ಸೇರಿದಂತೆ ಪ್ರಕಾಶ್ ಹುಕ್ಕೇರಿ ಜಿಲ್ಲೆಗೆ ಕೊಡುಗೆ ನೀಡಿದ್ದಾರೆ. ಅವರು ಮಾಡಿದ ಕೆಲಸಗಳು ನಮಗೆ ಆದರ್ಶವಾಗಿವೆ ಎಂದು ತಿಳಿಸಿದರು.

    ಇಳಿವಯಸ್ಸಿನಲ್ಲೂ ಕ್ಷೇತ್ರದಲ್ಲಿ ಓಡಾಟ ಮಾಡುವ ಮೂಲಕ ಅಭಿವೃದ್ಧಿ ಕಾರ್ಯವನ್ನು ಮಾಡ್ತಿದ್ದಾರೆ. ಹೀಗಾಗಿ ಪದವೀಧರರ ಕ್ಷೇತ್ರದ ಅಭ್ಯರ್ಥಿ ಸುನೀಲ್ ಸಂಕ್ ಮತ್ತು ಶಿಕ್ಷಕರು ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಗೆಲ್ಲಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಬೆಂಗಳೂರಿನಲ್ಲಿದ್ದರೆ, ಈ ದೇವಸ್ಥಾನಕ್ಕೆ ಭೇಟಿ ಪಕ್ಕಾ 

  • KPCC ಸಭೆಗೆ ಶಾಸಕಿ ಹೆಬ್ಬಾಳ್ಕರ್, ನಿಂಬಾಳ್ಕರ್ ಗೈರು

    KPCC ಸಭೆಗೆ ಶಾಸಕಿ ಹೆಬ್ಬಾಳ್ಕರ್, ನಿಂಬಾಳ್ಕರ್ ಗೈರು

    ಬೆಳಗಾವಿ: ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆದ ಸಭೆಗೆ ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅಂಜಲಿ ನಿಂಬಾಳ್ಕರ್ ಗೈರಾಗಿದ್ದಾರೆ.

    ನಗರದ ಸಂಕಂ ಹೋಟೆಲ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಸಚಿವ ಎ.ಬಿ.ಪಾಟೀಲ್, ವೀರಕುಮಾರ್ ಪಾಟೀಲ್ ಹಾಜರಾಗಿದ್ದು, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಹಾಗೂ ಮಹಾಂತೇಶ ಕೌಜಲಗಿ ಗೈರಾಗಿದ್ದಾರೆ. ಇದನ್ನೂ ಓದಿ: ನಮ್ಮಲ್ಲಿ ಯಾವುದೇ ಬಣ ಇಲ್ಲ, ಹೈಕಮಾಂಡ್‌ ಹೇಳಿದ್ದೇ ಅಂತಿಮ: ಪರಿಷತ್‌ ಟಿಕೆಟ್‌ ಬಗ್ಗೆ ಡಿಕೆಶಿ ಮಾತು

    ಕಾಂಗ್ರೆಸ್ ಪಕ್ಷದಲ್ಲೂ ಬಣ ರಾಜಕೀಯ ಶುರುವಾಗಿರುವ ಅನುಮಾನ ಮೂಡುತ್ತಿದೆ. ಇನ್ನೂ ಕಾಂಗ್ರೆಸ್ ಪಕ್ಷದಿಂದ ಮೇ 25ಕ್ಕೆ ನಾಮಪತ್ರ ಸಲ್ಲಿಕೆಗೆ ನಿರ್ಧರಿಸಲಾಗಿದೆ. ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ, ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನಿಲ್ ಸಂಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದನ್ನೂ ಓದಿ: ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

    ಇನ್ನು ನಾಮಪತ್ರ ಸಲ್ಲಿಕೆ ವೇಳೆ ಪಾಲ್ಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗುತ್ತದೆ. ಇಂದಿನ ಸಭೆಯಲ್ಲಿ ಮತದಾರರನ್ನು ಸೆಳೆಯಲು ಏನೆಲ್ಲಾ ರೂಪು ರೇಷೆಗಳನ್ನು ಸಿದ್ಧಪಡಿಸಬೇಕು ಎಂಬುದರ ಬಗ್ಗೆ ಚರ್ಚಿಸಲಾಯಿತು.

  • ರಮೇಶ್ ಜಾರಕಿಹೊಳಿ ಮಾತ್ರವಲ್ಲ ಹೆಬ್ಬಾಳ್ಕರ್ ಕೂಡಾ ಸಾಲ ಉಳಿಸಿಕೊಂಡಿದ್ದಾರೆ : ಸೋಮಶೇಖರ್

    ರಮೇಶ್ ಜಾರಕಿಹೊಳಿ ಮಾತ್ರವಲ್ಲ ಹೆಬ್ಬಾಳ್ಕರ್ ಕೂಡಾ ಸಾಲ ಉಳಿಸಿಕೊಂಡಿದ್ದಾರೆ : ಸೋಮಶೇಖರ್

    ಬೆಳಗಾವಿ: ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆಯಿಂದ 600 ಕೋಟಿ ಸಾಲ ಬಾಕಿ ಆರೋಪದ ವಿಚಾರವಾಗಿ ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.

    ರಮೇಶ್ ಜಾರಕಿಹೊಳಿ ಅಷ್ಟೇ ಅಲ್ಲ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ ಸಾಲವೂ ಬಾಕಿ ಇದೆ. ಜೆಡಿಎಸ್‍ನ ಬಂಡೆಪ್ಪ ಕಾಶೆಂಪೂರ್ ಸೇರಿ ಹಲವರು ಬಾಕಿ ಉಳಿಸಿಕೊಂಡಿದ್ದಾರೆ. ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು 6 ಸಾವಿರ ಕೋಟಿಗೂ ಹೆಚ್ಚು ಸಾಲ ಬಾಕಿ ಉಳಿಸಿಕೊಂಡಿವೆ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಅವರು ಪರೋಕ್ಷವಾಗಿ ಟಾಂಗ್ ನೀಡಿದರು. ಇದನ್ನೂ ಓದಿ: ವಂಶಾಡಳಿತ ರಾಜಕಾರಣಕ್ಕೆ ಬಿಜೆಪಿಯಲ್ಲಿ ಸ್ಥಾನವಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

    ರಾಜ್ಯದಲ್ಲಿ 21 ಡಿಸಿಸಿ ಬ್ಯಾಂಕ್‍ಗಳು ಇದೆ. ಅದರಲ್ಲಿ 16 ಡಿಸಿಸಿ ಬ್ಯಾಂಕ್ ರಿವ್ಯೂ ಮಾಡಿದ್ದೇನೆ. ಇವತ್ತು ಬೆಳಗಾವಿ ಡಿಸಿಸಿ ಬ್ಯಾಂಕ್ ನೋಟಿಸ್ ಮಾಡೋದಕ್ಕೆ ಬಂದಿದ್ದೇನೆ. ರಮೇಶ್ ಒಬ್ಬರೇ ಸಾಲ ಪಡೆದಿಲ್ಲ. 23 ಸಕ್ಕರೆ ಕಾರ್ಖಾನೆಗೂ ಸಾಲ ಕೊಟ್ಟಿದ್ದೇವೆ. ಅಪೆಕ್ಸ್ ಬ್ಯಾಂಕ್‍ಗೆ ಗಂಭೀರವಾಗಿ ಹೇಳಿದ್ದೇವೆ. ನೋಟಿಸ್ ನೀಡಿ ವಸೂಲಾತಿ ಮಾಡುತ್ತಿದ್ದಾರೆ. ಒಟ್ಟಾರೆ 23 ಜನ ಸಾಲ ಪಡೆದಿದ್ದಾರೆ ಎಂದರು.

    BRIBE

    ನಗರದ ಡಿಸಿಸಿ ಬ್ಯಾಂಕ್‍ನಿಂದ ಒಟ್ಟು 1,024 ಕೋಟಿ ರೂ. ಸಾಲ ನೀಡಲಾಗಿದೆ. ಯಾರಿಗೆ ಸಾಲ ಕೊಟ್ಟಿದ್ದಾರೆ? ಯಾರು ಮರುಪಾವತಿಸಿಲ್ಲ. ಅವರಿಗೆ ನೋಟಿಸ್ ನೀಡಲಾಗಿದೆ. ಅಪೆಕ್ಸ್ ಬ್ಯಾಂಕ್ ಗಂಭಿರವಾಗಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನವರೂ ನಮ್ಮಲ್ಲಿ ಸಾಲ ಪಡೆದಿದ್ದಾರೆ. ಕಾಂಗ್ರೆಸ್‍ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಖಾನೆ ಸಾಲ ತೆಗೆದುಕೊಂಡಿದೆ. ಜೆಡಿಎಸ್‍ನಿಂದ ಬಂಡೆಪ್ಪ ಕಾಂಶೆಪೂರ್ ಸಾಲ ತೆಗೆದುಕೊಂಡಿದ್ದಾರೆ. ಎಸ್. ಆರ್ ಪಾಟೀಲ್ ಕೂಡ ಸಾಲ ತೆಗೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

    ಯಾರೂ ಸಾಲ ಕಟ್ಟಿಲ್ಲ ಅವರಿಗೆ ನೋಟಿಸ್ ನೀಡಲಾಗುತ್ತಿದೆ. ಯಾರದು ಎಷ್ಟು ಸಾಲ ಬಾಕಿ ಇದೆ ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸಲಾಗುವುದು. ಇದರಲ್ಲಿ ರಾಜಕೀಯವೇನಿಲ್ಲ, ಮುಚ್ಚು ಮರೆಯೂ ಇಲ್ಲ ಎಂದು ತಿಳಿಸಿದರು.

  • ದಾಖಲೆಗಳಿದ್ರೆ ಇವತ್ತೆ ಬಿಡುಗಡೆ ಮಾಡಬೇಕು – ರಮೇಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲ್

    ದಾಖಲೆಗಳಿದ್ರೆ ಇವತ್ತೆ ಬಿಡುಗಡೆ ಮಾಡಬೇಕು – ರಮೇಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲ್

    ಬೆಳಗಾವಿ: ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ನಾನು ಹೃದಯದಿಂದ ಸ್ವಾಗತ ಮಾಡುತ್ತೇನೆ. ಸೋವಾರದವರೆಗೆ ಕಾಯುವುದು ಬೇಡ ದಾಖಲೆಗಳಿದ್ದರೆ, ಇಂದೇ ಬಿಡುಗಡೆ ಮಾಡಲಿ ಎಂದು ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.

    ನಗರದಲ್ಲಿ ಸಿಡಿ ಹಿಂದೆ ಇರುವ ಮಹಾನಾಯಕ ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಕಾರಣ, ಅವರ ದಾಖಲೆ ಬಿಡುಗಡೆ ಮಾಡುವುದರ ಬಗ್ಗೆ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ನಾನು ಹೃದಯದಿಂದ ಸ್ವಾಗತ ಮಾಡುತ್ತೇನೆ. ಸೋವಾರದವರೆಗೆ ಕಾಯುವುದು ಬೇಡ. ಧಾರವಾಹಿಯಲ್ಲಿ ಕುತೂಹಲ ಕ್ರಿಯೇಟ್ ಮಾಡುವ ರೀತಿ ಮಾಡಬೇಡಿ. ದಾಖಲೆಗಳಿದ್ದರೆ, ಇವತ್ತೆ ಬಿಡುಗಡೆ ಮಾಡಬೇಕು. ಈ ಘಳಿಗೆಯಲ್ಲಿ ಬಿಡುಗಡೆ ಮಾಡಬೇಕು. ಬೇಜವಾಬ್ದಾರಿ ಹೇಳಿಕೆಯಿಂದ ಗೊಂದಲ ಸೃಷ್ಟಿ ಆಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

    ಸಂತೋಷ್ ಪಾಟೀಲ್ ಮನೆಗೆ ನಿರಾಣಿ ಹೋಗಿ ಬಂದಿದ್ದಾರೆ. ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೊಳ್ಕರ್ ಎರಡು ಸಲ ಈಶ್ವರಪ್ಪ ಬಳಿ ಕರೆದುಕೊಂಡು ಹೋಗಿದ್ದೆ ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಕೆಲಸ ಆಗಿದೆ ಎಂದಿದ್ದಾರೆ. ಬಿಜೆಪಿ ಪದಾಧಿಕಾರಿಗಳು ಸಂತೋಷ್ ನಮ್ಮ ಕಾರ್ಯಕರ್ಯ ಅಲ್ಲ ಎಂದಿದ್ದಾರೆ. ಎಲ್ಲಾ ಗೊಂದಲ ಬಿಜೆಪಿ ಪಕ್ಷದಲ್ಲಿ ಇದೆ. ಇದನ್ನು ಮೊದಲು ಸರಿ ಮಾಡಲಿ ಎಂದಿದ್ದಾರೆ.

     

    ಸಂತೋಷ್ ಪಾಟೀಲ್ ಕೆಲಸ ಮಾಡುವಾಗ ರಮೇಶ್ ಜಿಲ್ಲಾ ಉಸ್ತುವಾರಿ ಮಂತ್ರಿ ಆಗಿದ್ದರು. ನಾನು ಹತ್ತು ಸಾರಿ ಅವರನ್ನು ಕರೆಸುವ ಯತ್ನ ಮಾಡಿದೆ. ತಾಲೂಕು ಪಂಚಾಯತ್ ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡಿದೆ. ಆದರೆ ಅವನು ಬರಲೇ ಇಲ್ಲ. ನಾನು ಬಿಜೆಪಿ, ಬಿಜೆಪಿ ಎನ್ನುತ್ತಲೇ ಇದ್ದ. ನಾನು ರಮೇಶ್ ಜಾರಕಿಹೊಳಿ ಫಾಲೋವರ್ ಎನ್ನುತ್ತಿದ್ದ. ಯಾರು ಕೆಲಸ ಮಾಡಿಸಿದರು, ಯಾರು ಪ್ರಚೋದನೆ ಮಾಡಿದರು. ಯಾರ ಕುಮ್ಮಕ್ಕು, ಆಶ್ವಾಸನೆ ಮೇಲೆ ಸಂತೋಷ್ ಪಾಟೀಲ್ ಮಾಡಿದ್ದರು. ಬಿಜೆಪಿ ಸಂಘಟನೆ ಆಗಲಿ ಅಂತ ಕೆಲಸ ಮಾಡಿರಬಹುದು ಎಂದು ಹೇಳಿದ್ದಾರೆ.

    108 ಕಾಮಗಾರಿ ಕಳಪೆ ಎಂಬ ಹೇಳಿಕೆ ವಿಚಾರ: ಟ್ರೋಲ್ ಮಾಡಲಿ ನಾನು ಸ್ವಾಗತ ಮಾಡುತ್ತೇನೆ. ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ. ಇಲಾಖೆ ಅಧಿಕಾರಿಗಳ ಜವಾಬ್ದಾರಿ ಇದೆಯಲ್ಲ. ಜಿಲ್ಲಾ ಪಂಚಾಯತಿ ಸಿಇಓ ಅವರನ್ನು ಮೂರು ಸಲ ಭೇಟಿಯಾಗಿದ್ದೇನೆ. ನನ್ನ ಗಮನಕ್ಕೆ ಬಂದಿದ್ದರಿಂದಲೇ ನಾನು ಓಡಾಡಿದ್ದೇನೆ. ಯಾವ ಇಲಾಖೆಯಿಂದ ಕೆಲಸ ಆಗಿದೆ, ಕಾಮಗಾರಿ ಆಗಿದೆ. ಅದು ಕಳಪೆನಾ ಏನು ಅಂತ ಎಂಬುವುದು ಅವರ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಈಶ್ವರಪ್ಪ ಭರವಸೆ ಮೇಲೆ ಸಂತೋಷ್ ಪಾಟೀಲ್ ಕೆಲಸ ಮಾಡಿದ್ದಾನೆ. ಈ ಬಗ್ಗೆ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧವು ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

  • ರಾಮನ ಭಜನೆ ಮಾಡೋರ ಹೃದಯ ಇಷ್ಟೊಂದು ಕಠೋರವಾಯ್ತಾ: ಲಕ್ಷ್ಮಿ ಹೆಬ್ಬಾಳ್ಕರ್

    ರಾಮನ ಭಜನೆ ಮಾಡೋರ ಹೃದಯ ಇಷ್ಟೊಂದು ಕಠೋರವಾಯ್ತಾ: ಲಕ್ಷ್ಮಿ ಹೆಬ್ಬಾಳ್ಕರ್

    ಬೆಳಗಾವಿ: 24 ಗಂಟೆ ರಾಮನ ಭಜನೆ ಮಾಡೋರು, ದೇವರ ಪೂಜಿಸುವವರ ಹೃದಯ ಇಷ್ಟೊಂದು ಕಠೋರವಾಯ್ತಾ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶ್ನಿಸಿದರು.

    ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಅಂತ್ಯಕ್ರಿಯೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಸಂತೋಷ್‌ ತಾಯಿ, ಪತ್ನಿ ಕುಟುಂಬಸ್ಥರು ಊಟ, ನಿದ್ರೆ ಇಲ್ಲದೇ ಸಂಕಷ್ಟದಲ್ಲಿದ್ದರು. ಹೀಗಾಗಿ ಸಮಾಧಾನದಿಂದ ಸಂತೋಷ್‌ ಅಂತ್ಯಕ್ರಿಯೆ ನಡೆಯಲಿ ಅಂತಾ ಸುಮ್ಮನಾಗಿದ್ದೇವೆ ಎಂದರು.

    ಸಂತೋಷ್‌ ಪಾಟೀಲ್ ಬಿಜೆಪಿ ಕಾರ್ಯಕರ್ತ. ಬಿಎಸ್‌ವೈ ಹಾಗೂ ಮೋದಿ ಅವರ ಅಪ್ಪಟ ಅಭಿಮಾನಿಯಾಗಿದ್ದರು. ಆದರೆ ಸೌಜನ್ಯಕ್ಕೂ ಹಾಗೂ ಮಾನವೀಯತೆ ದೃಷ್ಟಿಯಿಂದಲೂ ಯಾವೊಬ್ಬ ಬಿಜೆಪಿ ಮುಖಂಡನೂ ಇಲ್ಲಿ ಬಂದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿಲ್ಲ. ಬಿಜೆಪಿ ಅವರು ಇಷ್ಟೊಂದು ಕಠೋರ ಆಗಿ ಬಿಟ್ರಾ ಎಂದು ಹರಿಹಾಯ್ದರು. ಇದನ್ನೂ ಓದಿ: ಪ್ರಾಥಮಿಕ ತನಿಖೆ ಮುಗಿಯುವವರೆಗೆ ಈಶ್ವರಪ್ಪ ವಿರುದ್ಧ ಕ್ರಮವಿಲ್ಲ: ಸಿಎಂ

    ಕೊನೆಪಕ್ಷ ಸಂತೋಷ್ ಕುಟುಂಬಸ್ಥರಿಗೆ 4 ಕೋಟಿ ಕಾಮಗಾರಿ ಬಿಲ್ ತಕ್ಷಣ ರಿಲೀಸ್ ಮಾಡಿ, 1 ಕೋಟಿ ಪರಿಹಾರ ನೀಡಬೇಕು. ಸಂತೋಷ್ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು  ಮನವಿ ಮಾಡಿದರು.

    ನಿನ್ನೆ ಸಂತೋಷ್‌ ಮೃತದೇಹವನ್ನು ಪೋಸ್ಟಮಾರ್ಟ್‌ಂ ಮಾಡಿದ್ದರು. ಸಂತೋಷ್ ಮೊಬೈಲ್‍ನಲ್ಲಿ ಎಲ್ಲಾ ಸಾಕ್ಷ್ಯಗಳು ಸಿಕ್ಕಿದೆ ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮೇಲೆ ಕೇಸ್ ದಾಖಲಾಗಿದೆ. ಆದರೆ ಅವರನ್ನು ಈವರೆಗೂ ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಂತೋಷ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರಿಂದಲೇ ಹೈಡ್ರಾಮಾ

    ಅವರನ್ನು ಬಂಧಿಸಲು ಮೊಬೈಲ್‍ನಲ್ಲಿ ಎಲ್ಲಾ ಸಾಕ್ಷಿ ಇದೆ. ಸಾಕ್ಷಿ ಏನಾದರೂ ತಿರುಚಲು ನಿಂತಿದ್ದೀರಾ? ಸಂತೋಷ್ ಮೃತರಾಗಿದ್ದಾರೆ. ಅವನು ಮರಳಿ ಬರುವುದಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಈಶ್ವರಪ್ಪ ಅವರನ್ನು ಮಂತ್ರಿಗಿರಿಯಿಂದ ವಜಾ ಗೊಳಿಸುವುದಷ್ಟೇ ಅಲ್ಲ, ಈಶ್ವರಪ್ಪ ಅವರಿಗೆ ಶಿಕ್ಷೆ ಆಗಬೇಕು. ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

    ಮಾಜಿ ಸಿಎಂ ಬಿಎಸ್‍ವೈ ಗಮನಕ್ಕೆ ಎಲ್ಲಾ ಇದೆ. ಬಿಎಸ್‍ವೈ ಕಟ್ಟಾ ಅಭಿಮಾನಿ, ನಮ್ಮ ಸಮಾಜದ ಹಿರಿಯ ಮುಖಂಡರು ಅಂತಾ ಅವರ ಹೆಸರು ಮೆಸೇಜ್‍ನಲ್ಲಿ ಉಲ್ಲೇಖಿಸಿದ್ದಾರೆ. ಯಡಿಯೂರಪ್ಪರವರು ಅಂತ್ಯಕ್ರಿಯೆಗೆ ಬರಬಹುದಾಗಿತ್ತು. ಹಿರಿಯರಿದ್ದಾರೆ ಇನ್ನೊಬ್ಬರನ್ನಾದರೂ ಕಳಿಸಬಹುದಾಗಿತ್ತು. ಅವರಿಗೆ ಪಕ್ಷ ಮುಖ್ಯ ಅಲ್ಲ, ರಾಜಕಾರಣ ಮುಖ್ಯ. ಈ ಹೊಲಸು ರಾಜಕಾರಣಕ್ಕೆ ಅದೆಷ್ಟು ಜನರ ಬಲಿ ಪಡೀತಾರೋ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಜಾತ್ಯಾತೀತವಾಗಿ ನಾವು ಒಂದೇ ಕೇಳ್ತಿದೀವಿ ಅವನು ಬಿಜೆಪಿ ಕಾರ್ಯಕರ್ತರೀ. ಅವನು ಸಾವನ್ನಪ್ಪಿದಾಗ ಕೊರಳಲ್ಲಿ ಕೇಸರಿ ಶಾಲು ಹಾಕಿಕೊಂಡಿದ್ದ. ಅಷ್ಟೊಂದು ಬಿಜೆಪಿ ಕಟ್ಟರ್ ಅಭಿಮಾನಿಗೆ ನಿಮ್ಮ ಮನಸ್ಸು ಕರಗಲಿಲ್ವಾ? ನಿಮ್ಮ ಹೊಲಸ್ಸು ರಾಜಕಾರಣ ಬದಿಗಿಡಿ ಅವರ ಕುಟುಂಬಕ್ಕೆ ಪರಿಹಾರ ನೀಡಿ ಎಂದು ಆಗ್ರಹಿಸಿದರು.

  • ಸಂತೋಷ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರಿಂದಲೇ ಹೈಡ್ರಾಮಾ

    ಸಂತೋಷ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರಿಂದಲೇ ಹೈಡ್ರಾಮಾ

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟಿಲ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರ ಮಧ್ಯೆಯೇ ಕೈ ಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನಡೆದಿದೆ.

    ಸಂತೋಷ್ ಮೃತದೇಹವನ್ನು ಬೆಳಗಾವಿಯಲ್ಲಿರುವ ಅವರ ಮನೆ ಮುಂದೆ ದರ್ಶನಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಶಾಸಕಿ ಮಾತನಾಡಿ, ಸಂತೋಷ್ ಆತ್ಮಹತ್ಯೆಗೆ ನ್ಯಾಯ ಸಿಗಬೇಕು. ಜೊತೆಗೆ ಪರಿಹಾರ ಸಿಗಬೇಕು. ಅಲ್ಲಿಯವರೆಗೂ ಸಂತೋಷ್ ಅವರ ಮೃತದೇಹವನ್ನು ಕದಲಿಸುವುದು ಬೇಡಾ ಎಂದು ಹೇಳಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿದ್ದ ಸಂತೋಷ್ ಸಂಬಂಧಿಗಳು ಅಂತ್ಯಕ್ರಿಯೆ ಮಾಡೋಣ. ಸಂತೋಷ್ ಮೃತದೇಹ ಇಟ್ಟು ಪ್ರತಿಭಟನೆ ಮಾಡುವುದು ಬೇಡ ಎಂದಿದ್ದರು. ಆ ಬಳಿಕ ಸಂತೋಷ್ ಪಾಟೀಲ್ ಸಂಬಂಧೀಕರ ಮಧ್ಯೆಯೇ ಕೈಕೈ ಮಿಲಾಯಿಸುವ ಹಂತಕ್ಕೆ ವಾಗ್ವಾದ ನಡೆದಿದೆ. ಕೂಡಲೇ ಅಲ್ಲಿದ್ದ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಇಬ್ಬರನ್ನೂ ಶಾಂತ ಪಡಿಸಿದರು. ಇದನ್ನೂ ಓದಿ: ಸಂತೋಷ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆಗ್ರಹ

    ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮನೆಯಿಂದ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಸಂತೋಷ್ ಪಾಟೀಲ್ ಅವರ ಮೃತದೇಹ ರವಾನೆ ಆಗಿದೆ. ಗ್ರಾಮದ ಹೊರವಲಯದ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಗ್ರಾಮದ ಪ್ರಮುಖ ರಸ್ತೆಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಮಾಡಲಿದ್ದು, ಲಿಂಗಾಯತ ವಿಧಿ ವಿಧಾನದಂತೆ ನೆರವೇರಲಿರುವ ಸಂತೋಷ ಪಾಟೀಲ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉಡುಪಿ ಹೋಟೆಲ್‍ನಲ್ಲಿ ಪಂಚನಾಮೆ

  • ಸಾವಿನ ಮನೇಲಿ ರಾಜಕಾರಣ ಮಾಡೋ ಅನಿವಾರ್ಯ ಅರುಣ್ ಸಿಂಗ್ ಅವರಿಗಿದೆ, ನಮಗಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಸಾವಿನ ಮನೇಲಿ ರಾಜಕಾರಣ ಮಾಡೋ ಅನಿವಾರ್ಯ ಅರುಣ್ ಸಿಂಗ್ ಅವರಿಗಿದೆ, ನಮಗಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಅರುಣ್ ಸಿಂಗ್ ಅವರಿಗೆ ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯವಿದೆ, ಆದರೆ ಕಾಂಗ್ರೆಸ್ ಪಕ್ಷದವರಿಗೆ ಅದರ ಅನಿವಾರ್ಯವಿಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

    ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು ಅಂತ ಆಗ್ರಹಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಇದನ್ನೂ ಓದಿ: IPL ಬೆಟ್ಟಿಂಗ್ ದಾಳಿ ವೇಳೆ ಪೊಲೀಸರಿಗೆ ಹೆದರಿ ಓಡುವಾಗ ವ್ಯಕ್ತಿ ಬಿದ್ದು ಸಾವು

    Eshwarappa

    ಈ ವೇಳೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತರು ನಗರದ ಆರ್‌ಟಿಓ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಿದರು. ಪ್ರತಿಭಟನೆಯಲ್ಲಿ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಶಾಸಕ ಅಶೋಕ ಪಟ್ಟಣ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.

    ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಇದರಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಾಗಿದೆ. ಇವತ್ತು ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕುಟುಂಬದ ಜೊತೆಗೆ ನಿಂತಿದೆ, ಇದು ರಾಜಕೀಯವಲ್ಲ. ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯ ನಮ್ಮ ಪಕ್ಷಕ್ಕೆ ಬಂದಿಲ್ಲ ಎಂದರು. ಇದನ್ನೂ ಓದಿ: ಮಸೀದಿಯಿಂದ ಧ್ವನಿವರ್ಧಕ ತೆಗೆಸುವುದು ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ: ಸಂಜಯ್‌ ನಿರುಪಮ್‌

    ಸದ್ಯ ನನಗೆ ಬಂದಿರುವ ಮಾಹಿತಿ ಪ್ರಕಾರ ಕೆ.ಎಸ್.ಈಶ್ವರಪ್ಪನವರ ಮಗ ಮತ್ತೊಬ್ಬ ಪ್ರಭಾವಿ ಶಾಸಕರು ಸಂತೋಷ್‍ಗೆ ಧಮ್ಕಿ ಹಾಕಿದ್ದಾರೆ. ಆ ಮೆಸೇಜ್ ಕೂಡ ನನಗೆ ಬಂದಿದೆ. ನಮ್ಮ ಪಕ್ಷದ ಹಿರಿಯ ನಾಯಕರು ಬಂದ ಮೇಲೆ ಆ ಪ್ರಭಾವಿ ಶಾಸಕನ ಹೆಸರನ್ನು ಬಹಿರಂಗ ಮಾಡುತ್ತಾರೆ ಎಂದು ಹೇಳಿದರು.

    ಅರುಣ್ ಸಿಂಗ್ ಅವರಿಗೆ ಸಾವಿನ ಮನೆಯಲ್ಲಿ ರಾಜಕಾರಣ ಮಾಡುವ ಅನಿವಾರ್ಯವಿದೆ. ಭ್ರಷ್ಟಾಚಾರ, ಬೆಲೆ ಏರಿಕೆ ಮುಖವಾಡ ಡೈವರ್ಟ್ ಮಾಡಲು ಶಿವಮೊಗ್ಗದಲ್ಲಿ 144 ಸೆಕ್ಸನ್ ಇದ್ದರೂ ಈಶ್ವರಪ್ಪ ಮೆರವಣಿಗೆಯಲ್ಲಿ ಭಾಗಿಯಾಗಿ ರಾಜಕೀಯ ಬಣ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.