Tag: ಲಕ್ಷ್ಮೀ ಹೆಬ್ಬಾಳ್ಕರ್

  • ಅವಧಿಪೂರ್ವ ವಿಧಾನಸಭೆ ಚುನಾವಣೆ ಬಂದರೆ ಎದುರಿಸಲು ಸಿದ್ಧ: ಲಕ್ಷ್ಮಿ ಹೆಬ್ಬಾಳ್ಕರ್

    ಅವಧಿಪೂರ್ವ ವಿಧಾನಸಭೆ ಚುನಾವಣೆ ಬಂದರೆ ಎದುರಿಸಲು ಸಿದ್ಧ: ಲಕ್ಷ್ಮಿ ಹೆಬ್ಬಾಳ್ಕರ್

    – ಅಭಿವೃದ್ದಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು

    ಬೆಳಗಾವಿ: ಅಭಿವೃದ್ದಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು. ಬೆಳಗಾವಿ ವಿಭಜನೆಯಾಗಿ ಮೂರು ಜಿಲ್ಲೆ ಆಗಬೇಕು ಇದಕ್ಕೆ ನಮ್ಮ ಪಕ್ಷಾತೀತ ಬೆಂಬಲ ಇದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ವಿಭಜನೆ ವಿಚಾರವಾಗಿ ಮಾತನಾಡಿ, ಅಭಿವೃದ್ದಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು. ಎಷ್ಟು ದೂರದಿಂದ ಬಂದು ತಮ್ಮ ಕೆಲಸ ಮಾಡಿಕೊಳ್ಳಬೇಕು. ಸಚಿವ ಉಮೇಶ್‌ ಕತ್ತಿ ನೇತೃತ್ವದ ನಿಯೋಗ ಸಿಎಂ ಬಳಿ ಹೋದರೆ ನಮ್ಮ ಬೆಂಬಲವಿದೆ. ಬೆಳಗಾವಿ ವಿಭಜನೆಯಾಗಿ ಮೂರು ಜಿಲ್ಲೆ ಆಗಬೇಕು ಇದಕ್ಕೆ ನಮ್ಮ ಪಕ್ಷಾತೀತ ಬೆಂಬಲ ಇದೆ ಎಂದಿದ್ದಾರೆ.

    ಈಗಾಗಲೇ ಬೆಳಗಾವಿ ತಾಲೂಕು ವಿಭಜನೆಗೆ ಮನವಿ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪ್ರತ್ಯೇಕ ತಾಲೂಕು ಮಾಡುತ್ತೇನೆ. ಅವಧಿ ಪೂರ್ವ ವಿಧಾನಸಭೆ ಚುನಾವಣೆ ಬಂದರೇ ಎದುರಿಸಲು ಸಿದ್ದ. ಕೆ.ಎಸ್ ಈಶ್ವರಪ್ಪ ವಿರುದ್ಧ ಶೇ.40 ಕಮಿಷನ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ಇದೊಂದು ವಿಚಿತ್ರವಾದ ಘಟನೆ ಎಂದು ಹೇಳಿದರು. ಇದನ್ನೂ ಓದಿ: ಮಸೀದಿ, ದೇವಸ್ಥಾನ, ಚರ್ಚ್‍ಗಳಲ್ಲಿ ಜೋರಾಗಿ ಮೈಕ್ ಹಾಕಿದ್ರೆ ಧರ್ಮಗಳ ನಡುವೆ ಸಂಘರ್ಷ ಆಗುತ್ತೆ: ಈಶ್ವರಪ್ಪ

    ಹಿಂಡಲಗಾ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ನಾನು ಶಾಸಕಿಯಾದ ಮೇಲೆ ಅನುದಾನಕ್ಕೆ ಎಲ್ಲರ ಬಳಿ ಕೇಳಿದೆ. ಕ್ಷೇತ್ರಕ್ಕೆ ಯಾವುದೇ ಅನುದಾನ ಬಂದರು ಶಾಸಕರು ಪೂಜೆ ಮಾಡಬೇಕು. ಟೆಂಡರ್ ಆದ ಬಳಿಕ ಕಾಮಗಾರಿ ಆರಂಭಿಸಬೇಕು. ಜಿಲ್ಲಾ ಪಂಚಾಯತ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೇಳಿದೆ. ಯಾವುದೇ ಅನುದಾನ ಬಿಡುಗಡೆ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಮನೊಬ್ಬ ಪ್ರಧಾನಿಯಾದರೆ ಶೇ.50ರಷ್ಟು ಹಿಂದೂಗಳು ಮತಾಂತರಗೊಳ್ಳುತ್ತಾರೆ: ಯತಿ ನರಸಿಂಹಾನಂದ್

    ಗ್ರಾಮದಲ್ಲಿ ಕಾಮಗಾರಿ ನಡೆದ ಬಗ್ಗೆ ಪರಿಶೀಲನೆ ನಡೆಸಬೇಕು. 108 ಕಾಮಗಾರಿ ಹುಡುಕಿ ಕೊಟ್ಟರೇ ನಾನು ಅವಾರ್ಡ್ ಕೊಡುತ್ತೇನೆ. ಕಳಪೆ ಕಾಮಗಾರಿ ಆಗಿದ್ದು, ಈಗ ಮಣ್ಣು ಸಹ ಸಿಗಲ್ಲ. ನನ್ನ ಗಮನಕ್ಕೆ ಯಾವುದೇ ಕಾಮಗಾರಿ ಬಗ್ಗೆ ತಂದಿಲ್ಲ. ಬಿಜೆಪಿ ಆಡಳಿತದ ಗ್ರಾಪಂ, ಗುತ್ತಿಗೆದಾರ ಸಹ ಬಿಜೆಪಿಯವನೇ, ಬಿಜೆಪಿಯವರೇ ಆರೋಪ ಮಾಡಿದ್ದಾರೆ. ಈ ಬಗ್ಗೆ ತನಿಖೆ ಆಗಬೇಕು. ನಮ್ಮ ಸರ್ಕಾರ ಬಂದರೆ ನಾನು ತನಿಖೆ ಮಾಡುತ್ತೇನೆ ಎಂದು ಹೇಳಿದರು.

  • ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಕುಂದಾನಗರಿಯ ನಂದಿಹಳ್ಳಿ ಗ್ರಾಮದಲ್ಲಿ 1.07 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು.

    ಕರ್ನಾಟಕ ನೀರಾವರಿ ನಿಗಮದ ವತಿಯಿಂದ 60 ಲಕ್ಷ ರೂ. ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ವತಿಯಿಂದ 28 ಲಕ್ಷ ರೂ.ಗಳ ವೆಚ್ಚದಲ್ಲಿ ನಂದಿಹಳ್ಳಿ ಗ್ರಾಮದಿಂದ ಯರಮಾಳವರೆಗೆ ರಸ್ತೆಯ ಅಭಿವೃದ್ಧಿ, ಲೋಕೋಪಯೋಗಿ ಇಲಾಖೆಯ ವತಿಯಿಂದ 12 ಲಕ್ಷ ರೂ. ಗಳ ವೆಚ್ಚದಲ್ಲಿ ನಂದಿಹಳ್ಳಿ ಗ್ರಾಮದಿಂದ ಬೊರಗಾಂವ ಗರ್ಲಗುಂಜಿ ರಸ್ತೆಯ ಅಭಿವೃದ್ಧಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್

    ಬ್ರಹ್ಮಲಿಂಗ ದೇವಸ್ಥಾನದ ಅಭಿವೃದ್ಧಿಗಾಗಿ ಶಾಸಕರ ಅನುದಾನದಲ್ಲಿ ದೇವಸ್ಥಾನದ ಸಮಿತಿಯವರಿಗೆ 7 ಲಕ್ಷ ರೂ. ಗಳ ಚೆಕ್‍ನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಲಾಯಿತು. ಜೊತೆಗೆ ನೂತನವಾಗಿ ನಿರ್ಮಾಣಗೊಂಡ ಪಶು ಆಸ್ಪತ್ರೆಯನ್ನು ಸಹ ಅವರು ಉದ್ಘಾಟಿಸಿದರು. ಇದನ್ನೂ ಓದಿ: ಹೆಲ್ಮೆಟ್ ಹಾಕಿದ್ರೆ ಸೇಫ್ಟಿ ಅಲ್ವಾ ಅದ್ಕೆ ಹಿಜಬ್ ಹಾಕಿದ್ರೆ ಸೇಫ್ಟಿ ಅಂದಿದ್ದು: ಜಮೀರ್ ಸಮರ್ಥನೆ

  • ಪಂಚಮಸಾಲಿಗಳ ಮಹಿಳಾ ಪೀಠಕ್ಕೆ ಬೆಂಬಲವಿಲ್ಲ: ವೀಣಾ ಕಾಶಪ್ಪನವರ

    ಪಂಚಮಸಾಲಿಗಳ ಮಹಿಳಾ ಪೀಠಕ್ಕೆ ಬೆಂಬಲವಿಲ್ಲ: ವೀಣಾ ಕಾಶಪ್ಪನವರ

    ಬೆಳಗಾವಿ: ಪೀಠಗಳಿಗಿಂತ ಮೀಸಲಾತಿಗೆ ಒತ್ತಡ ಹಾಕಲಿ, ಸತ್ಯಾಗ್ರಹ ಮಾಡಲಿ, ಹೋರಾಟ ಮಾಡಲಿ ಆದರೆ ಈ ಸಮಯದಲ್ಲಿ ಪೀಠ ಅಗತ್ಯವಿತ್ತಾ ಎಂದು ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ ವಾಗ್ದಾಳಿ ನಡೆಸಿದರು.

    ಲಿಂಗಾಯತ ಪಂಚಮಸಾಲಿ 4ನೇ ಮಹಿಳಾ ಪೀಠ ಸ್ಥಾಪನೆ ಸಿದ್ಧತೆ ವಿಚಾರವಾಗಿ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೀಠದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಜನರಿಗೂ ಗೊತ್ತಿದೆ. ಮೀಸಲಾತಿಗಾಗಿ ಮಹಿಳೆಯರಿಂದ ಹೋರಾಟ ಮುಂದುವರೆಯುತ್ತದೆ. ಗ್ರಾಮಗಳಲ್ಲಿ ಮಹಿಳೆಯರು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದೇವೆ. ಆದರೆ ನಾಲ್ಕನೇ ಪೀಠ ಮಹಿಳಾ ಪೀಠ ಮಾಡುತ್ತಾರೆ ಎನ್ನುವ ಮಾಹಿತಿ ಇದೆ ಎಂದು ಹೇಳಿದರು.

    ಕಿಶೋರಿ ಎನ್ನುವವರು ಈಗ ನಾಲ್ಕನೇ ಪೀಠ, ಮಹಿಳಾ ಪೀಠ ಮಾಡುತ್ತಿದ್ದಾರೆ. ಹೀಗಾಗಿ ನಾವು ಅವರನ್ನು ಕೈ ಬಿಟ್ಟಿದ್ದೇವೆ. ಇದನ್ನು ಮಹಿಳಾ ಘಟಕವು ವಿರೋಧಿಸುತ್ತದೆ. ನಮಗೆ ನಾಲ್ಕನೇ ಪೀಠದ ಅವಶ್ಯಕತೆ ಇಲ್ಲ. ನಾವು ಆ ಪೀಠಕ್ಕೆ ಬೆಂಬಲ ನೀಡುತ್ತಿಲ್ಲ. ಜನರ ಹಾದಿ ತಪ್ಪಿಸಲು ಹೊರಟಿದ್ದಾರೆ. ಇನ್ನೂ ನನ್ನ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ. ನಾವು ಆ ಪೀಠಕ್ಕೆ ಬೆಂಬಲ ನೀಡಲ್ಲ ಎಂದು ಸ್ಪಷ್ಟ ಪಡಿಸಿದರು. ಇದನ್ನೂ ಓದಿ: ನಕಲಿ ಸಮಾಜವಾದ: ಅಖಿಲೇಶ್‌ ಯಾದವ್‌ ಪಕ್ಷದ ವಿರುದ್ಧ ಮೋದಿ ವಾಗ್ದಾಳಿ

  • ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆಯಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

    ಪಣಜಿ: ಗೋವಾ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರದಿಂದ ಬಹಳಷ್ಟು ಭ್ರಷ್ಟಾಚಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಬಿಜೆಪಿ ಅವರಿಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ಗೋವಾದ ಎರಡು ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಾರೆ. ಆದರೆ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಗೋವಾ ಬಿಜೆಪಿ ಸರ್ಕಾರ ಬಹಳಷ್ಟು ಹಗರಣ, ಭ್ರಷ್ಟಾಚಾರ ಮಾಡಿದೆ ಎಂದು ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ನೇಮಿಸಿದ ರಾಜ್ಯಪಾಲರು ಈ ಹೇಳಿಕೆಯನ್ನು ನೀಡಿದ್ದಾರೆ. ಇದಕ್ಕಿಂತ ಏನಾದರೂ ಸಾಕ್ಷಿ ಬೇಕಾ? ಅಂಗೈ ಹುಣ್ಣಿಗೆ ಕನ್ನಡಿ ಬೇಕಾ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.

    ಗೋವಾದ ಪ್ರಬುದ್ಧ ಮತದಾರರು ಭ್ರಮನಿರಸನಗೊಂಡಿದ್ದಾರೆ. ಹತ್ತು ವರ್ಷದಿಂದ ಬಿಜೆಪಿಯವರು ಏನ್ ಮಾತನಾಡಿದ್ದಾರೋ ಅದನ್ನು ಮಾಡಿಲ್ಲ. ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಜನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ ತನ್ನ ಬೊಕ್ಕಸ ತುಂಬಲು ಬಡವರ ಜೇಬಿಗೆ ಕತ್ತರಿ ಹಾಕ್ತಿದೆ: ಚರಣ್ ಸಿಂಗ್ ಸಪ್ರಾ

    ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಹೆಚ್ಚು ಪ್ರಚಾರ ನಡೆಸುತ್ತಿದೆ. ಈ ಬಾರಿ ಶಿವಸೇನೆ, ಆಪ್ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ. ಇದನ್ನೂ ಓದಿ: ರೈತರು ದೀರ್ಘ ಹೋರಾಟಕ್ಕೆ ಸಿದ್ಧರಾಗಿ: ರಾಕೇಶ್ ಟಿಕಾಯತ್

  • ರಮೇಶ್ ಜಾರಕಿಹೊಳಿಯನ್ನು ರಾಕ್ಷಸನಿಗೆ ಹೋಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್

    ರಮೇಶ್ ಜಾರಕಿಹೊಳಿಯನ್ನು ರಾಕ್ಷಸನಿಗೆ ಹೋಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ರಾಕ್ಷಸನಿಗೆ ಹೋಲಿಸಿದ್ದಾರೆ.

    ಬೆಳಗಾವಿ ತಾಲೂಕಿನ ಮಾವಿನಕಟ್ಟಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಭಾಷಣ ಮಾಡಿದ ಅವರು, 2 ವರ್ಷದ ಹಿಂದೆಯೇ ನಾಲ್ಕೂವರೆ ಕೋಟಿ ರೂಪಾಯಿ ಟೆಂಡರ್ ಆಗಿ ವರ್ಕ್ ಆರ್ಡರ್ ಆಗಿದ್ದು, ದುರ್ದೈವದಿಂದ ಆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಬಿತ್ತು. ಇದಾದ ಬಳಿಕ ರಮೇಶ್ ಜಾರಕಿಹೊಳಿಯವರು ನೀರಾವರಿ ಮಂತ್ರಿ ಆದರು. ಅವರು ನೀರಾವರಿ ಮಂತ್ರಿ ಆದ ತಕ್ಷಣ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಮಂಜೂರಾದ ಎಲ್ಲ ಅನುದಾನ ನಿಲ್ಲಿಸಿದರು ಎಂದು ಆರೋಪಿಸಿದರು.

    ಈ ಎಲ್ಲ ಕಾರ್ಯಗಳಿಗೆ ಸಾಕ್ಷಿ ಎಂಜಿನಿಯರ್. ಆದರೆ ಅವರು ಸರ್ಕಾರದ ಪ್ರತಿನಿಧಿ ಆಗಿದ್ದರಿಂದ ಅವರು ಏನೂ ಹೇಳುವುದಕ್ಕೆ ಆಗಲ್ಲ. 15 ದಿನಗಳ ಹಿಂದೆ ನಾನು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಮಾಡಿದೆ. ಅವರು ನಮಗೆ ಅನುಕೂಲ ಮಾಡಿಕೊಟ್ಟರು. ಅದಕ್ಕಾಗಿ ಈ ರಸ್ತೆ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ

    ಮಾವಿನಕಟ್ಟಿ ಮಗಳಾಗಿ ನಾನು ಹೇಳಿದ ಕೆಲಸ ಮಾಡಿದ್ದೇನೆ. ಒಮ್ಮೊಮ್ಮೆ ಸೂರ್ಯನಿಗೂ ಗ್ರಹಣ ಹಿಡಿಯುತ್ತೆ, ಚಂದ್ರನಿಗೂ ಗ್ರಹಣ ಹಿಡಿಯುತ್ತೆ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್ ಯಾವ ಗಿಡದ ತಪ್ಪಲ? ರಾಕ್ಷಸರು ಜೀವನದಲ್ಲಿ ಬಂದು ಹೋಗುತ್ತಿರುತ್ತಾರೆ. ಆದರೆ ಸೂರ್ಯ ಸೂರ್ಯನೇ, ಚಂದ್ರ ಚಂದ್ರನೇ ನಿಮ್ಮ ಆಶೀರ್ವಾದ ಇರುವ ತನಕ ನಾನು ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: ಚರಣ್‍ಜಿತ್ ಸಿಂಗ್ ಚನ್ನಿ ಅಪ್ರಾಮಾಣಿಕ ವ್ಯಕ್ತಿ: ಅರವಿಂದ್ ಕೇಜ್ರಿವಾಲ್

  • ನಾನು ವಿಪಕ್ಷ ಶಾಸಕಿ ಅನ್ನಿಸಿಲ್ಲ, ಬೊಮ್ಮಾಯಿ, BSYಗೆ ನಮಸ್ಕಾರ: ಲಕ್ಷ್ಮಿ ಹೆಬ್ಬಾಳ್ಕರ್‌

    ನಾನು ವಿಪಕ್ಷ ಶಾಸಕಿ ಅನ್ನಿಸಿಲ್ಲ, ಬೊಮ್ಮಾಯಿ, BSYಗೆ ನಮಸ್ಕಾರ: ಲಕ್ಷ್ಮಿ ಹೆಬ್ಬಾಳ್ಕರ್‌

    ಬೆಳಗಾವಿ: ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ರಾಜ್ಯ ಬಿಜೆಪಿ ಸರ್ಕಾರವನ್ನು ಕೊಂಡಾಡಿದ್ದಾರೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಗುಣಗಾನ ಮಾಡಿದರು. ನಾನು ವಿರೋಧ ಪಕ್ಷದ ಶಾಸಕಿ ಅಂತ ನನಗೆ ಅನ್ನಿಸಿಲ್ಲ ಎಂದು ಹೇಳಿದರು.

    ನಿಮ್ಮ ಪಾದಕ್ಕೆ ನಮಸ್ಕಾರ: ಜನಪ್ರಿಯ ಮುಖ್ಯಮಂತ್ರಿ ಬೊಮ್ಮಾಯಿ ಎಂದು ತಮ್ಮ ಭಾಷಣದಲ್ಲಿ ಹೇಳಿದ ಹೆಬ್ಬಾಳ್ಕರ್, ಅಧಿವೇಶನ ನಡೆಯುತ್ತಿದ್ದರೂ ನಮ್ಮ‌ ಕ್ಷೇತ್ರಕ್ಕೆ ಬಂದು ಸಮಯ ಕೊಟ್ಟಿದಕ್ಕೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ‌ ಪಾದಗಳಿಗೆ ಮುಟ್ಟಿ ನಮಸ್ಕಾರ ಮಾಡ್ತೀನಿ. ನಿಮ್ಮ ಕಾಳಜಿ ಹೀಗೆ ಇರಲಿ ಎಂದು ಹೆಬ್ಬಾಳ್ಕರ್‌ ಮನವಿ ಮಾಡಿದರು. ಇದನ್ನೂ ಓದಿ: ಮಹಿಳಾ ಗಾರ್ಮೆಂಟ್ಸ್ ನೌಕರರಿಗೆ ಗುಡ್ ನ್ಯೂಸ್ – ಉಚಿತ ಬಸ್ ಪಾಸ್‌ಗೆ ಅರ್ಜಿ ಆಹ್ವಾನ

    ಇನ್ನಷ್ಟು ಸಹಾಯ ಮಾಡಿ: ಸುವರ್ಣ ಸೌಧ ಇರುವ ಬೆಳಗಾವಿಯ ಈ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಬೆಳಗಾವಿ ಎರಡನೇ ರಾಜಧಾನಿ ಆಗಿದ್ದರೂ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಇದೆ. ನನ್ನ ಕ್ಷೇತ್ರದ ಕೆಲಸಕ್ಕೆ ಫಂಡ್ ಸಿಕ್ಕಿದೆ. ಯಡಿಯೂರಪ್ಪ ಸರ್ಕಾರ ಇದ್ದಾಗ್ಲೂ ಅಷ್ಟೇ, ಬೊಮ್ಮಾಯಿಯವರ ಸರ್ಕಾರವಿದ್ದಾಗ್ಲೂ ಅಷ್ಟೇ ಎಂದು ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್‌, ನನ್ನ ಕ್ಷೇತ್ರದ ಕೆರೆ ತುಂಬಿಸುವ ಕೆಲಸಕ್ಕೆ ಸಹಾಯ ಮಾಡಿ ಎಂದು ವೇದಿಕೆಯಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಡಿಕೆಶಿಗೆ ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ: ಕೆ.ಎಸ್ ಈಶ್ವರಪ್ಪ

  • ಕೈ ನಾಯಕರು, ಕಾರ್ಯಕರ್ತರ ಪಾದವನ್ನು ಮುಟ್ಟಿ ಧನ್ಯವಾದ ತಿಳಿಸುತ್ತೇನೆ: ಹೆಬ್ಬಾಳ್ಕರ್

    ಕೈ ನಾಯಕರು, ಕಾರ್ಯಕರ್ತರ ಪಾದವನ್ನು ಮುಟ್ಟಿ ಧನ್ಯವಾದ ತಿಳಿಸುತ್ತೇನೆ: ಹೆಬ್ಬಾಳ್ಕರ್

    ಬೆಳಗಾವಿ: ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಾವು ಈ ವಿಜಯವನ್ನು ಸಾಧಿಸಿದ್ದೇವೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

    ವಿಧಾನ ಪರಿಷತ್ ಚುನಾವಣೆಯಲ್ಲಿ ಸಹೋದರ ಚನ್ನರಾಜ ಹಟ್ಟಿಹೋಳಿ ಗೆಲುವಿನ ನಂತರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ ಅವರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಾವು ಈ ವಿಜಯವನ್ನು ಸಾಧಿಸಿದ್ದೇವೆ. ಒಗ್ಗಟ್ಟಿನಿಂದ ಕೆಲಸ ಮಾಡಿದ್ದಕ್ಕೆ ನಾವೂ ಇವತ್ತು ಚುನಾವಣೆಯಲ್ಲಿ ಗೆದಿದ್ದೇವೆ. ನಮ್ಮ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಪಾದವನ್ನು ಮುಟ್ಟಿ ಧನ್ಯವಾದ ತಿಳಿಸುತ್ತೇನೆ. ಈ ಚುನಾವಣೆ ನನಗೆ ಪ್ರತಿಷ್ಠೆಯಾಗಿತ್ತು. ನನಗೆ ಮೊದಲಿನಿಂದಲೂ ಗೆಲ್ಲುವ ನಿರೀಕ್ಷೆ ಇತ್ತು. ಪ್ರಕಾಶ್ ಹುಕ್ಕೇರಿ, ಗಣೇಶ್ ಹುಕ್ಕೇರಿ, ಅಂಜಲಿ ನಿಂಬಾಳ್ಕರ್, ಎ.ಬಿ ಪಾಟೀಲ್, ಕಾಕಾ ಸಾಹೇಬ್ ಪಾಟೀಲ್, ವೀರ್ ಕುಮಾರ್ ಪಾಟೀಲರು, ಮಹೇಶ್ ತಮ್ಮಣ್ಣ, ಮೋಹಿತೆ, ವಿಶ್ವಾಸ್ ವೈದ್ಯ ಹೀಗೆ ಪ್ರತಿಯೊಬ್ಬರು ಸಹ ಕೆಲಸ ಮಾಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಹಣ ಬಲದ ಎದುರು ಜನ ಬಲಕ್ಕೆ ಸೋಲು: ಎಚ್‌ಡಿಕೆ

    ಇದೇ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸೋಲಿಸಬೇಕೆಂದು ಲಖನ್ ಜಾರಕಿ ಹೊಳಿ ಅವರು ಸ್ಪರ್ಧಿಸಿದ್ದ ಬಗ್ಗೆ ಪ್ರತಿಕ್ರಿಯಿಸಿದ ಅವರು ನಾವು ಕಣದಲ್ಲಿ ಇದ್ದ 6 ಮಂದಿಯನ್ನು ಒಂದೇ ದೃಷ್ಟಿಯಿಂದ ನೋಡಿದ್ದೇವೆ. ಮೊದಲ ದಿನದಿಂದ ಇಲ್ಲಿಯವರೆಗೂ ಅವರು ಏನೇ ಮಾತನಾಡಿದ್ದರು ಅದ್ಯಾವುದಕ್ಕೂ ನಾವು ತಲೆ ಕೆಡಿಸಿಕೊಂಡಿಲ್ಲ. ಸಂಘಟಿತವಾಗಿ ಚುನಾವಣೆ ಪ್ರಚಾರ ಮಾಡಿದ್ದೇವು. ಅದರ ಫಲವೇ ಇಂದು ನಮ್ಮ ಗೆಲುವು. ಸಮಾಜ ನನ್ನ ಕೈ ಹಿಡಿದಿದೆ. ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಪಕ್ಷದ ನೇತೃತ್ವ ಇಂದು ವಿಜಯ ಶಾಲಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸಾಹುಕಾರನಿಗೆ ಸವಾಲು ಹಾಕಿ ಎರಡನೇ ಬಾರಿ ಗೆದ್ದ ಹೆಬ್ಬಾಳ್ಕರ್‌

  • ವಿರೋಧಿಗಳ ಒತ್ತಡ, ಧಮ್ಕಿಗೆ ಹೆದರದೇ ಮತ ಚಲಾಯಿಸಿ: ಲಕ್ಷ್ಮೀ ಹೆಬ್ಬಾಳ್ಕರ್

    ವಿರೋಧಿಗಳ ಒತ್ತಡ, ಧಮ್ಕಿಗೆ ಹೆದರದೇ ಮತ ಚಲಾಯಿಸಿ: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ನಾನು ಯಾರನ್ನೂ ಟೂರ್‌ಗೆ ಕಳಿಸುತ್ತಿಲ್ಲ, ವಿರೋಧಿಗಳ ಒತ್ತಡ, ಧಮ್ಕಿಗೆ ಹೆದರದೇ ಮತ ಚಲಾಯಿಸಿ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

     

    ವಿಧಾನಪರಿಷತ್ ಚುನಾವಣೆ ಡಿಸೆಂಬರ್ 10 ರಂದು ನಡೆಯುತ್ತಿದೆ. ಕೆಲವು ಜನರು ಲಕ್ಷ್ಮೀ ಹೆಬ್ಬಾಳ್ಕರ್ ಟೂರ್‌ಗೆ ಕರೆದಿದ್ದಾರೆ ಎಂದು ಹೇಳಿ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನಾನು ಯಾವ ಜನರನ್ನು ಟೂರ್‌ಗೆ ಕಳಿಸುತ್ತಿಲ್ಲ. ತಾವು ಕೂಡ ಯಾಮಾರಬೇಡಿ. ಇಲ್ಲಿಯೇ ಇದ್ದು, ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಕೊಟ್ಟಿರುವ ತಮ್ಮ ಹಕ್ಕನ್ನು ಚಲಾಯಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:  ಚಂದ್ರನ ಮೇಲೆ ಗುಡಿಸಲು? – ಫೋಟೋ ಶೇರ್ ಮಾಡಿದ ವಿಜ್ಞಾನಿಗಳು

    ಮಾಧ್ಯಮಗಳಿಗೆ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಯಾವುದೇ ಒತ್ತಡಕ್ಕೆ, ಧಮ್ಕಿಗೆ ತಾವು ಹೆದರುವ ಅವಶ್ಯಕತೆ ಇಲ್ಲ. ನ್ಯಾಯಯುತವಾದ ಚುನಾವಣೆಯನ್ನು ನಾವು ಮಾಡೋಣ. ಎಲ್ಲರೂ ನನಗೆ ಸಹಾಯ, ಸಹಕಾರ, ಆಶೀರ್ವಾದ ಮಾಡಿ. ನಿಮ್ಮ ಜೊತೆಗೆ ಮನೆ ಮಗಳಾಗಿ ಯಾವತ್ತೂ ಇರುತ್ತೇನೆ. ನನ್ನ ತಮ್ಮ, ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಮುಖಂಡರು ತಮ್ಮ ಜೊತೆಗೆ ಯಾವಾಗಲೂ ಇರುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: UAEಯಲ್ಲಿ ನಾಲ್ಕೂವರೆ ದಿನ ಮಾತ್ರ ಕೆಲಸ – ಶನಿವಾರ, ಭಾನುವಾರ ವೀಕೆಂಡ್

  • ಹಾನಗಲ್‍ನಲ್ಲಿ ಒಳ್ಳೆಯ ಹೃದಯವಂತ ಶಾಸಕನ ಪಡೆದುಕೊಂಡಿದ್ದೀರಿ: ಲಕ್ಷ್ಮೀ ಹೆಬ್ಬಾಳ್ಕರ್

    ಹಾನಗಲ್‍ನಲ್ಲಿ ಒಳ್ಳೆಯ ಹೃದಯವಂತ ಶಾಸಕನ ಪಡೆದುಕೊಂಡಿದ್ದೀರಿ: ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಹಾನಗಲ್‍ನಲ್ಲಿ ಒಬ್ಬ ಒಳ್ಳೆಯ ಹೃದಯವಂತ ಶಾಸಕನ ಪಡೆದುಕೊಂಡಿದ್ದೀರಿ ಎಂದು ಹೇಳುವ ಮೂಲಕವಾಗಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಉಪಚುನಾವಣೆಯ ಗೆಲುವನ್ನು ಸಂಭ್ರಮಿಸಿದ್ದಾರೆ.

    ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೆಬ್ಬಾಳ್ಕರ್ ಪ್ರಬುದ್ಧ ಮತದಾರರಿಗೆ ಅಭಿನಂದನೆ ಸಲ್ಲಿಸಲು ಬಯಸುವೆ. ಎಲೆಕ್ಷನ್ ಓಡಾಡುವ ವೇಳೆ ರಿಸಲ್ಟ್ ಗೊತ್ತಾಗುವ ಮಟ್ಟಿಗೆ ಮತದಾರರಲ್ಲಿ ಕ್ಲಿಯಾರಿಟಿ ಇತ್ತು. ಹಾನಗಲ್‍ನಲ್ಲಿ ಒಬ್ಬ ಒಳ್ಳೆಯ ಹೃದಯವಂತ ಶಾಸಕನ ಪಡೆದುಕೊಂಡಿದ್ದೀರಿ. ಹಾನಗಲ್ ಮತದಾರರ ಪಾದಗಳಿಗೆ ನಮಸ್ಕಾರ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗೂಗಲ್ ಸರ್ಚ್‍ನಲ್ಲಿ ಸಿಕ್ಕ ಫ್ಲಿಪ್ಕಾರ್ಟ್ ನಂಬರ್ – ಕರೆ ಮಾಡಿ 2 ಲಕ್ಷ ಕಳ್ಕೊಂಡ

    ಹಾನಗಲ್ ಕ್ಷೇತ್ರದಲ್ಲಿ ಬಹಳಷ್ಟು ನಮ್ಮ ಸಮಾಜದವರು ಇದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಲಿಂಗಾಯತ ಸಮುದಾಯದ ಮತದಾರರಿದ್ದಾರೆ. ಶ್ರೀ ನಿವಾಸ್ ಮಾನೆ ಮರಾಠ ಸಮುದಾಯದವರು, ಕಡಿಮೆ ಅಂದರು ಸುಮಾರು 2 ಸಾವಿರ ವೋಟ್ ಇರಬಹುದು, ಇರಲಿಕ್ಕನೂ ಇಲ್ಲ. ಆದರೆ ಜಾತಿ ಎಲ್ಲಿಯೂ ಕೆಲಸ ಮಾಡಲ್ಲ, ಇದನ್ನ ನಾವು ತಿಳಿದುಕೋಳ್ಳಬೇಕಾಗುತ್ತೆ. ಶಾಸಕ ಜನರ ಕಷ್ಟ ಸುಖದಲ್ಲಿ ಸ್ಪಂದಿಸಿದರೆ ಈ ರೀತಿ ರಿಸಲ್ಟ್ ಕೊಡತ್ತಾರೆ ಅನ್ನೋದಕ್ಕೆ ಒಂದು ಉದಾಹರಣೆ. ನಮ್ಮಂತ ರಾಜಕಾರಣಿಗಳು ಕಲಿಯಬೇಕಾಗಿದೆ. ಜಾತಿ ಹಣ ತೊಲ್ಬಲಕ್ಕಿಂತ ಜನರ ಮನಸ್ಸು ಗೆಲ್ಲೂ ಕೆಲಸ ಶ್ರೀನಿವಾಸ್ ಮಾನೆ ಮಾಡಿದ್ದಾರೆ. ಆ ರಿಸಲ್ಟ್ ಇವತ್ತು ನಮಗೆ ಬಂದಿದೆ ಎಂದು ಹೇಳಿದರು. ಇದನ್ನೂ ಓದಿ: ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ

  • ಚಂಡಿಕಾ ಯಾಗದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ

    ಚಂಡಿಕಾ ಯಾಗದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಹುಕ್ಕೇರಿ ಹಿರೇಮಠದ ದಸರಾ ಉತ್ಸವ ಕಾರ್ಯಕ್ರಮದ ನಿಮಿತ್ಯ ಆಯೋಜನೆ ಮಾಡಿದ್ದ ಚಂಡಿಕಾ ಯಾಗದಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿ ಸರಸ್ವತಿ ಮಹಾಮಂಡಲಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

    lakshmi hebbalkar

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾ ಉತ್ಸವ ನಮ್ಮ ಸಂಸ್ಕøತಿಯ ಪ್ರತೀಕವಾಗಿದೆ. 9 ದಿನಗಳ ಕಾಲ ನಡೆಯುವ ಭಾವಕ್ಯತೆಯ ಸಂಕೇತವಾಗಿರುವ ಹುಕ್ಕೇರಿ ದಸರಾ ಉತ್ಸವದ ಚಂಡಿಕಾ ಯಾಗದಲ್ಲಿ ಭಾಗಿಯಾಗಿದ್ದು ನನ್ನ ಪುಣ್ಯ. ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ನಮ್ಮ ಪ್ರತಿಯೊಂದು ಕಾರ್ಯಕ್ಕೂ ಸಲಹೆ ನೀಡಿ ತಿದ್ದಿ ಬುದ್ಧಿ ಹೇಳಿ ಹೆಚ್ಚು ಸಾಮಾಜಿಕ ಕಾರ್ಯ ಮಾಡಲು ಸ್ಫೂರ್ತಿ ತುಂಬುತ್ತಿದ್ದಾರೆ ಎಂದರು. ಇದನ್ನೂ ಓದಿ: ಮಕ್ಕಳಿಗೆ ಲಸಿಕೆ ಭಾಗ್ಯ- 2 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ

    lakshmi hebbalkar

    ಇದೇ ವೇಳೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ್ ಅವರು ಸೌಮ್ಯ ಸ್ವಭಾವದ ನಾಯಕಿ. ಅವರ ತಾಳ್ಮೆ ಸಾಮಾಜಿಕ ಕಾರ್ಯ ಅನುಪಮವಾದ ಅವರು ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಮತ್ತು ಬೆಳಗಾವಿ ಗ್ರಾಮೀಣ ಭಾಗದ ಜನರ ಕಷ್ಟದಲ್ಲಿ ಭಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಇನ್ನಷ್ಟು ಅಧಿಕಾರ ಸಿಗಲಿ ಎಂದು ಹಾರೈಸಿದರು. ಇದನ್ನೂ ಓದಿ: ನಾಪತ್ತೆಗೂ ಮುನ್ನ ಖತರ್ನಾಕ್ ಪ್ಲಾನ್ ಮಾಡಿದ್ದ ಯುವತಿ, ಮಕ್ಕಳು

    lakshmi hebbalkar

    ಶ್ರೀ ಸಂಪತ್ತಕುಮಾರ ಶಾಸ್ತ್ರಿಗಳ ವೈದಿಕತ್ವದಲ್ಲಿ ನೂರಾ ಎಂಟು ವಟುಗಳ ವೇದ ಪಠಣದೊಂದಿಗೆ ಚಂಡಿಕಾ ಯಾಗ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಹುಕ್ಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ರೇಖಾ ಚಿಕ್ಕೋಡಿ ಅಕ್ಷರ ದಾಸೋಹ ಅಧಿಕಾರಿ ಶ್ರಿಶೈಲ ಹಿರೇಮಠ, ಮುರುಗೇಶ್ ಅಥಣಿ ಸುರೇಶ್ ಜಿನರಾಳಿ ಹಾಗೂ ಚನ್ನಪ್ಪ ಗಜಬರ ಉಪಸ್ಥಿತರಿದ್ದರು.