Tag: ಲಕ್ಷ್ಮೇಶ್ವರ ಪೊಲೀಸ್ ಠಾಣೆ

  • ವಿದ್ಯಾರ್ಥಿನಿಯರ ಮೇಲೆ ಬಣ್ಣ ಎರಚಿದ ಕಿಡಿಗೇಡಿಗಳು – 8 ಮಂದಿ ಅಸ್ವಸ್ಥ

    ವಿದ್ಯಾರ್ಥಿನಿಯರ ಮೇಲೆ ಬಣ್ಣ ಎರಚಿದ ಕಿಡಿಗೇಡಿಗಳು – 8 ಮಂದಿ ಅಸ್ವಸ್ಥ

    ಗದಗ: ಹೋಳಿ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಮೊಟ್ಟೆ, ಸಗಣಿ, ಮರಳು, ರಾಸಾಯನಿಕ ಗೊಬ್ಬರ, ಪಿನಾಯಿಲ್, ಮದ್ಯಪಾನ, ಕಲುಷಿತ ಬಣ್ಣ, ಗಾಜಿನ ಪುಡಿ ಮಿಶ್ರಿತ ಬಣ್ಣ ಎಲ್ಲವನ್ನೂ ಮಿಶ್ರಣ ಮಾಡಿ ಎರಚಿದ ಪರಿಣಾಮ ದುರ್ವಾಸನೆಯಿಂದ ವಿದ್ಯಾರ್ಥಿನಿಯರು ಅಸ್ವಸ್ಥವಾದ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ (Laxmeshwara) ತಾಲೂಕಿನ ಸುವರ್ಣಗಿರಿ ತಾಂಡದಲ್ಲಿ ನಡೆದಿದೆ.

    8 ವಿದ್ಯಾರ್ಥಿನಿಯರು ಶಾಲೆಗೆ ಹೋರಟಿದ್ದರು. ಇದಕ್ಕಾಗಿಯೇ ಕಾದು ಕುಳಿತಿದ್ದ ಪೋಲಿ ಯುವಕರ ಗುಂಪು ವಿದ್ಯಾರ್ಥಿನಿಗಳು ಬಸ್ ಹತ್ತುವ ಸಂದರ್ಭದಲ್ಲಿ ಏಕಾಏಕಿ ಬಣ್ಣ ಎರಚಿತು. ಇದರ ದುರ್ವಾಸನೆಗೆ ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು. ಉಸಿರಾಟದ ತೊಂದರೆ, ಎದೆನೋವು, ಕಣ್ಣು ಉರಿ, ತಲೆನೋವು ಎಂದು ವಿದ್ಯಾರ್ಥಿನಿಯರು ಕಣ್ಣೀರಿಟ್ಟಿದ್ದರು. ಇದನ್ನೂ ಓದಿ: ಯುಪಿಯ ಪುರುಷನಿಗೆ ಪಾಕ್ ಏಜೆಂಟ್ ನೇಹಾ ಆಮಿಷ – ರಕ್ಷಣಾ ಇಲಾಖೆಯ ಮಾಹಿತಿ ಸೋರಿಕೆ ಮಾಡ್ತಿದ್ದವನ ಬಂಧನ

    ಕೂಡಲೇ ವಿದ್ಯಾರ್ಥಿಗಳನ್ನು ಲಕ್ಷ್ಮೇಶ್ವರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ವಿದ್ಯಾರ್ಥಿನಿಯರು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಬಸ್ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

    ಆಸ್ಪತ್ರೆಗೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದರು. ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ವಿದ್ಯಾರ್ಥಿನಿಯರ ಪೋಷಕರು ಒತ್ತಾಯಿಸಿದರು. ಘಟನೆಯ ಕುರಿತು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ – 23 ಆರೋಪಿಗಳಿಗೆ ಶಿಕ್ಷೆ ಪ್ರಕಟ

    ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ – 23 ಆರೋಪಿಗಳಿಗೆ ಶಿಕ್ಷೆ ಪ್ರಕಟ

    – 80 ಜನರು ನಿರಪರಾಧಿಗಳೆಂದು ಘೋಷಣೆ

    ಗದಗ: ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ (Laxmeshwar Police Station) ಬೆಂಕಿ ಹಚ್ಚಿದ ಪ್ರಕರಣದ 23 ಮಂದಿ ಆರೋಪಿಗಳಿಗೆ ಗದಗ (Gadag) ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ.

    2017 ಫೆ.5ರಂದು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದಿತ್ತು. ಅಕ್ರಮ ಮರಳು ಸಾಗಿಸುವ ವಾಹನ ತಡೆದು ಚಾಲಕ ಶಿವಪ್ಪ ಡೋಣಿ ಎಂಬಾತನಿಗೆ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ಬದಲಿ ವಿದ್ಯಾರ್ಥಿನಿಯಾಗಿ ಪರೀಕ್ಷೆಗೆ ಹಾಜರು – ʻಕೈʼ ಕಾರ್ಯಕರ್ತೆ ಸಂಪೂರ್ಣ ಪೊಲೀಸ್ ಕಸ್ಟಡಿಗೆ

    ಶಿವಪ್ಪ, ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದ ನಿವಾಸಿಯಾಗಿದ್ದ. ಶಿವಪ್ಪನಿಗೆ ಪೊಲೀಸರು ಹೊಡೆದು ಕಳುಹಿಸಿದ ನಂತರ ಆತನನ್ನು ಲಕ್ಷ್ಮೇಶ್ವರ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲು ಮಾಡಲಾಗಿತ್ತು. ಶಿವಪ್ಪ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ. ಮೃತನ ಕುಟುಂಬಸ್ಥರು ಪೊಲೀಸ್ ಠಾಣೆಯ ಮುಂದೆ ಮೃತದೇಹವನ್ನಿಟ್ಟು ಪ್ರತಿಭಟನೆ ಮಾಡಿದ್ದರು. ಇದನ್ನೂ ಓದಿ: ʻದಿ ಗ್ರೇಟ್ ಡಿಕೆಶಿʼ ಈಗ ಗ್ರೇಟರ್ ಬೆಂಗಳೂರು ತರ್ತಿದ್ದಾರೆ – ಮುನಿರತ್ನ ವ್ಯಂಗ್ಯ

    ಆ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ, ಪೊಲೀಸ್ ಠಾಣೆ ಹಾಗೂ ಕಚೇರಿಯಲ್ಲಿದ್ದ ಕಡತಗಳನ್ನು, ದಾಖಲೆಗಳನ್ನು, ಪೀಠೋಪಕರಣ, ಪೊಲೀಸ್ ಜೀಪ್ ಹಾಗೂ ಹತ್ತಾರು ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಠಾಣೆಯ ವಾಕಿಟಾಕಿ, ಕಂಪ್ಯೂಟರ್ ಸೇರಿದಂತೆ ಅನೇಕ ವಸ್ತುಗಳನ್ನು ದೋಚಿದ್ದರು. ಇದನ್ನೂ ಓದಿ: ಹಾಸನದಲ್ಲಿ ಪುಡಿ ರೌಡಿಗಳ ಅಟ್ಟಹಾಸ -‌ ಹೋಳಿ ಆಚರಣೆ ವೇಳೆ ಎರಡು ಗುಂಪಿನ ನಡುವೆ ಮಾರಾಮಾರಿ

    ಈ ಪ್ರಕರಣದಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ 112 ಜನರ ಮೇಲೆ ಕೇಸ್ ದಾಖಲು ಮಾಡಲಾಗಿತ್ತು. ಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿತ್ತು. 112 ಜನರ ಪೈಕಿ 8 ಜನ ಮೃತಪಟ್ಟಿದ್ದು, ಓರ್ವ ಬಾಲಪರಾಧಿಯಾಗಿದ್ದ. ಉಳಿದ 103 ಜನರ ಮೇಲೆ ತನಿಖೆ ಮುಂದುವರೆದಿತ್ತು. ಇದೀಗ ಪ್ರಕರಣದಲ್ಲಿ 23 ಜನರಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ. ಆರೋಪಿಗಳಿಗೆ ಯಾವೆಲ್ಲಾ ಶಿಕ್ಷೆ ವಿಧಿಸಿದೆ. ಶಿಕ್ಷೆ ಪ್ರಮಾಣ ಏಷ್ಟು ಎಂಬುದು ಮಾ. 24ರಂದು ಗೊತ್ತಾಗಲಿದೆ. ಇನ್ನುಳಿದ 80 ಜನರು ನಿರಪರಾಧಿಗಳೆಂದು ಕೋರ್ಟ್ ಘೋಷಿಸಿದೆ. ಇದನ್ನೂ ಓದಿ: ಜಿಎಸ್‌ಟಿ ಸೇರಿ ಯಾವ್ದೇ ತೆರಿಗೆ ಕಡಿಮೆ ಮಾಡಿ ಅಂತ ಸರ್ಕಾರವನ್ನ ಕೇಳಬೇಡಿ: ನಿತಿನ್‌ ಗಡ್ಕರಿ

    8 ವರ್ಷದ ನಂತರ ಪ್ರಕರಣದ ಆರೋಪಿಗಳಿಗೆ ಗದಗ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರ ಶೆಟ್ಟಿ ಅವರು ಶಿಕ್ಷೆ ಪ್ರಕಟಿಸಿದರು. ಶಿಕ್ಷೆಗೊಳಗಾದ 23 ಮಂದಿ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಸರ್ಕಾರಿ ಅಭಿಯೋಜಕರಾದ ಮಲ್ಲಿಕಾರ್ಜುನ ದೊಡ್ಡಗೌಡ `ಪಬ್ಲಿಕ್ ಟಿವಿ’ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ನಮ್ಮ ದೇವರು ನನ್ನನ್ನ ಕರೆಸಿಕೊಳ್ತಿದ್ದಾನೆ – ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ಯುವಕ ನೇಣಿಗೆ ಶರಣು

    ಇನ್ನೊಂದು ಕಡೆ ಪೊಲೀಸ್ ಇಲಾಖೆ ವಿರುದ್ಧ ಜನಾಕ್ರೋಶ ಕೇಳಿಬರುತ್ತಿದ್ದು, ಇಂತಹ ದೊಡ್ಡ ಅಪರಾಧ ಕೃತ್ಯ ನಡೆದಿದೆ. 112 ಜನರಲ್ಲಿ ಕೇವಲ 23 ಜನರಿಗೆ ಮಾತ್ರ ಶಿಕ್ಷೆ ಪ್ರಕಟವಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದರಲ್ಲಿ ಪ್ರಭಾವಿಗಳ ಕೈವಾಡ ಇದೆ ಎಂಬ ಆರೋಪದ ಮಾತುಗಳು ಕೇಳಿ ಬರುತ್ತಿವೆ.

  • ಆಕ್ರೋಶದ ಬೆಂಕಿಗೆ ಲಕ್ಷ್ಮೇಶ್ವರ ಠಾಣೆ ಧಗಧಗ – 25 ದುಷ್ಕರ್ಮಿಗಳ ಬಂಧನ

    ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಲಾಕಪ್ ಡೆತ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಠಾಣೆಗೆ ಬೆಂಕಿಹಚ್ಚಿ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ 25 ಮಂದಿ ದುಷ್ಕರ್ಮಿಗಳನ್ನ ಗದಗ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ.

    ಈ ಗಲಾಟೆಯಲ್ಲಿ ಅಕ್ರಮ ಮರಳು ದಂಧೆಕೊರರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ 25 ಜನ ದುಷ್ಕರ್ಮಿಗಳನ್ನು ವಿಚಾರಣೆಗಾಗಿ ಕರೆತರಲಾಗಿದ್ದು, ವೀಡಿಯೋ ದೃಶ್ಯಗಳನ್ನ ನೋಡಿ ಇನ್ನುಳಿದ ಆರೋಪಿಗಳ ಬಂಧಿಸುವ ಕಾರ್ಯ ಇಂದು ನಡೆಯಲಿದೆ. ಈ ಮಧ್ಯೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮಧ್ಯಾಹ್ನದವರೆಗೆ ನಿಷೇಧಾಜ್ಞೆ ಮುಂದುವರೆದಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಪೊಲೀಸ್ ಬಿಗಿ ಬಂದುಬಸ್ತ್ ಕಲ್ಪಿಸಲಾಗಿದೆ. ಎಸ್‍ಪಿ, ಡಿಎಸ್‍ಪಿ, ಸಿಪಿಐ, ಪಿಎಸ್‍ಐ, ಕೆ.ಎಸ್.ಆರ್.ಪಿ ಹಾಗೂ ಡಿಆರ್ ತುಕಡಿಗಳನ್ನ ನಿಯೋಜನೆ ಮಾಡಲಾಗಿದೆ.

    ಪಟ್ಟಣ್ಣದಲ್ಲಿ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳು ಎಂದಿನಂತೆ ಪ್ರಾರಂಭವಾಗಿವೆ. ಸ್ಥಳಕ್ಕೆ ಎಡಿಜಿಪಿ ರಾಘವೇಂದ್ರ ಔರಾಧಕರ್ ಭೇಟಿ ನೀಡಿ ಪರಿಶೀಲನೆ ಮಾಡುವ ಸಾಧ್ಯತೆಗಳಿವೆ.

    ಏನಿದು ಪ್ರಕರಣ?: ಅಕ್ರಮ ಮರಳುದಂಧೆ ಆರೋಪದ ಮೇಲೆ ಶಿವಾನಂದ ಗಾಣಿಗೇರ ಪೊಲೀಸರ ವಶದಲ್ಲಿದ್ದರು. ತೀವ್ರ ವಿಚಾರಣೆಯಲ್ಲಿದ್ದ ಶಿವಾನಂದ ಠಾಣೆಯಲ್ಲೇ ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಶಿವಾನಂದ ಸಂಬಧಿಕರು ಪೊಲಿಸರು ಲಾಕಪ್ ಡೆತ್ ಮಾಡಿರುವುದಾಗಿ ಆರೋಪಿಸಿ ಭಾನುವಾರದಂದು ಠಾಣೆಗೆ ಬೆಂಕಿ ಹಚ್ಚಿದ್ದರು.