Tag: ಲಯ ಕೋಕಿಲ

  • ಹರ್ಷಿಕಾ ಪೂಣಚ್ಚ ನಟನೆಯ ‘ತಾಯ್ತ’ ಚಿತ್ರದ ಹಾಡು ಬಿಡುಗಡೆ

    ಹರ್ಷಿಕಾ ಪೂಣಚ್ಚ ನಟನೆಯ ‘ತಾಯ್ತ’ ಚಿತ್ರದ ಹಾಡು ಬಿಡುಗಡೆ

    ಟನಾಗಿ, ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಲಯಕೋಕಿಲ ಚೊಚ್ಚಲ ನಿರ್ದೇಶನದ ‘ತಾಯ್ತ’ (Taytha) ಚಿತ್ರಕ್ಕಾಗಿ ರಾಮ್ ನಾರಾಯಣ್ ಬರೆದಿರುವ ‘ಶಿವನೇ ಕಾಪಾಡು’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದ ಮೂರು ದೇವರುಗಳನ್ನು ಕುರಿತಾದ ಈ ಹಾಡನ್ನು ಮೂರು ಧರ್ಮದ ಗುರುಗಳು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

    ಸಾಧುಕೋಕಿಲ (Sadhu Kokila), ಉಷಾ ಕೋಕಿಲ, ಸಿರಿ ಮ್ಯೂಸಿಕ್ ಚಿಕ್ಕಣ್ಣ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಮ್ಮದು ಸಂಗೀತದ ಕುಟುಂಬ. ಬಹುತೇಕ ಎಲ್ಲರೂ ಸಂಗೀತಕ್ಕೆ ಸಂಬಂಧಿಸಿದ ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಿದ್ದೇವೆ‌. ನಮ್ಮ ಅಣ್ಣ ಲಯಕೋಕಿಲ ಈಗ ನಿರ್ದೇಶಕನಾಗಿದ್ದಾರೆ. ಅವರ ನಿರ್ದೇಶನದ ತಾಯ್ತ ಚಿತ್ರದ ಹಾಡೊಂದು ಇಂದು ಬಿಡುಗಡೆಯಾಗಿದೆ. ಅವರೆ ಸಂಗೀತ ನೀಡಿದ್ದಾರೆ. ನಾನು ಕೂಡ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರ ಯಶಸ್ವಿಯಾಗಲಿ ಎಂದು ಸಾಧುಕೋಕಿಲ ಹಾರೈಸಿದರು. ಇದನ್ನೂ ಓದಿ:‘ಕಾರ್ತಿಕೇಯ 2’ ನಿರ್ದೇಶಕನ ಜೊತೆ ಕೈ ಜೋಡಿಸಿದ ನಾಗಚೈತನ್ಯ

    ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಹಾರಾರ್ ಜಾನರ್ ಚಿತ್ರವಾಗಿದ್ದರೂ, ಕಾಮಿಡಿ ಹಾಗೂ ಥ್ರಿಲ್ಲರ್ ಕೂಡ ಇದೆ. ನಿರ್ಮಾಪಕ ಶಾಹಿದ್ ಅವರು ಕಥೆ ಬರೆದಿದ್ದಾರೆ. ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆ ಹಾಗೂ ನಿರ್ದೇಶನವನ್ನು ನಾನು ಮಾಡಿದ್ದೇನೆ. ರಿಯಾನ್ ಈ ಚಿತ್ರದ ನಾಯಕನಾಗಿ, ಹರ್ಷಿಕಾ ಪೂಣಚ್ಚ ನಾಯಕಿಯಾಗಿ ನಟಿಸಿದ್ದಾರೆ. ನನ್ನ ಮಗಳು ಭಾನುಪ್ರಿಯ ಕೂಡ ಅಭಿನಯಿಸಿದ್ದಾರೆ. ಕೆಲವರನ್ನು ಬಿಟ್ಟು, ಈ ಚಿತ್ರದಲ್ಲಿ ಅಭಿನಯಿಸಿರುವ ಎಲ್ಲರೂ ಹೊಸ ಕಲಾವಿದರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಇಂದು ಬಿಡುಗಡೆಯಾಗಿರುವ ಹಾಡನ್ನು ರಾಮ್ ನಾರಾಯಣ್ ಬರೆದಿದ್ದಾರೆ. ಅನುರಾಧ ಭಟ್ ಹಾಡಿದ್ದಾರೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ ಎಂದು ಲಯಕೋಕಿಲ (Laya Kokila) ತಿಳಿಸಿದರು.

    ನಾಯಕ ರಿಯಾನ್ (Riyana), ನಾಯಕಿ ಹರ್ಷಿಕಾ ಪೂಣಚ್ಚ (Harshika Poonachha), ನಟಿ ಭಾನುಪ್ರಿಯ, ಸೇರಿದಂತೆ ಅನೇಕ ಕಲಾವಿದರು ಹಾಗೂ ಹಾಡು ಬರೆದಿರುವ ರಾಮ್ ನಾರಾಯಣ್ ಮುಂತಾದವರು ತಾಯ್ತ ಚಿತ್ರದ ಕುರಿತು ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಹರ್ಷಿಕಾ ಪೂಣಚ್ಚ ‘ತಾಯ್ತ’ ಕಟ್ಟಿಸಿಕೊಂಡಿದ್ದು ಯಾಕೆ?

    ನಟಿ ಹರ್ಷಿಕಾ ಪೂಣಚ್ಚ ‘ತಾಯ್ತ’ ಕಟ್ಟಿಸಿಕೊಂಡಿದ್ದು ಯಾಕೆ?

    ಶಾಹಿದ್ ನಿರ್ಮಿಸಿರುವ, ಲಯ ಕೋಕಿಲ (Laya Kokila) ನಿರ್ದೇಶನದ ‘ತಾಯ್ತ’ (Taytha) ಚಿತ್ರದ ಟೀಸರ್ (Teaser) ಇತ್ತೀಚೆಗೆ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಹಿರಿಯ ನಿರ್ದೇಶಕ ಸಾಯಿಪ್ರಕಾಶ್, ನಟ ಧರ್ಮ ಮುಖ್ಯ ಅತಿಥಿಗಳಾಗಿ ಆಗಮಿಸಿ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು.

    ಯಾರಾದರೂ ತುಂಬಾ ಹೆದರಿಕೊಂಡಾಗ ‘ತಾಯ್ತ’ ಕಟ್ಟಿಸಿಕೊ ಎಂದು ಹೇಳುತ್ತಾರೆ. ನನ್ನ ಮೊದಲ ನಿರ್ದೇಶನದ ಚಿತ್ರಕ್ಕೆ ‘ತಾಯ್ತ’ ಎಂದು ಹೆಸರಿಟ್ಟಿದ್ದೀನಿ. ಇದು ಪ್ರೇಮಕಥೆಯಾದರೂ, ಇದರಲ್ಲಿ ಹಾರರ್, ಥ್ರಿಲ್ಲರ್, ಕಾಮಿಡಿ ಎಲ್ಲವೂ ಇದೆ. ಶಾಹಿದ್ ಈ ಚಿತ್ರದ ನಿರ್ಮಾಪಕರು. ರಿಯಾನ್ (Riyan) ಈ ಚಿತ್ರದ ನಾಯಕ. ಹರ್ಷಿಕಾ ಪೂಣಚ್ಛ ನಾಯಕಿ. ಸಾಧುಕೋಕಿಲ, ಪುಷ್ಪಸ್ವಾಮಿ, ಶಾಹಿದ್, ಶೋಭ್ ರಾಜ್ ಅವರ ಜೊತೆಗೆ ನಾನು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಸಂಗೀತ ಕೂಡ ನೀಡಿದ್ದೇನೆ. ಇಂದು ಟೀಸರ್ ಬಿಡುಗಡೆಯಾಗಿದೆ. ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ನನ್ನ‌ ಇಡೀ ಚಿತ್ರತಂಡಕ್ಕೆ ಧನ್ಯವಾದ ಎಂದರು ಲಯಕೋಕಿಲ.

    ಈ ಚಿತ್ರದ ಕಥೆ ಇಷ್ಟವಾಯಿತು. ಇದು ನನ್ನ ಮೊದಲ ಚಿತ್ರ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ರಿಯಾನ್. ಈ ಚಿತ್ರದಲ್ಲಿ ನಾನು ಖುಷಿ ಎಂಬ ಹೆಸರಿನ ಕಾಲೇಜು ವಿದ್ಯಾರ್ಥಿ ಪಾತ್ರದಲ್ಲಿ ನಟಿಸಿದ್ದೇನೆ. ಇದು ನಾನು ಅಭಿನಯಿಸಿರುವ ಮೊದಲ ಹಾರರ್ ಚಿತ್ರ. ಕಾಲೇಜ್ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಒಂದು ಸ್ಥಳಕ್ಕೆ ಹೋದಾಗ ಅಲ್ಲಿ ಏನೇನು ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು ಎಂದು ನಾಯಕಿ ಹರ್ಷಿಕಾ ಪೂಣಚ್ಚ  (Harshika Poonachcha)ತಿಳಿಸಿದರು. ಇದನ್ನೂ ಓದಿ: ಪಿಂಕ್ ಕಲರ್ ಡ್ರೆಸ್‌ನಲ್ಲಿ ದೀಪಿಕಾ ದಾಸ್ ಮಿಂಚಿಂಗ್

    ಕಥೆ ಇಷ್ಟವಾಗಿ, ನಿರ್ಮಾಣಕ್ಕೆ ಮುಂದಾದೆ. ಚಿಕ್ಕಮಗಳೂರು, ಬೇಲೂರು ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ನಾನು ಕೂಡ ನಟಿಸಿದ್ದೇನೆ. ಚಿತ್ರ ತರೆಗೆ ಬರಲು ಸಿದ್ದವಾಗಿದೆ ಎಂದರು ನಿರ್ಮಾಪಕ ಶಾಹಿದ್. ಹಿರಿಯ ನಟಿ ಪುಷ್ಪಸ್ವಾಮಿ ಸಹ ತಮ್ಮ ಪಾತ್ರದ ಕುರಿತು ಮಾತನಾಡಿದರು.