Tag: ಲಲಿತ್‌ ಝಾ

  • ಸಂಸತ್ತಿನಲ್ಲಿ ಭದ್ರತಾ ಲೋಪ ಕೇಸ್‌ – ಭಾರತಕ್ಕೆ ಬೇಕಾಗಿರುವುದು ಬಾಂಬ್ ಎಂದು ಫೇಸ್ಬುಕ್‌ನಲ್ಲಿ ಬರೆದುಕೊಂಡಿದ್ದ ಮಾಸ್ಟರ್‌ಮೈಂಡ್‌

    ಸಂಸತ್ತಿನಲ್ಲಿ ಭದ್ರತಾ ಲೋಪ ಕೇಸ್‌ – ಭಾರತಕ್ಕೆ ಬೇಕಾಗಿರುವುದು ಬಾಂಬ್ ಎಂದು ಫೇಸ್ಬುಕ್‌ನಲ್ಲಿ ಬರೆದುಕೊಂಡಿದ್ದ ಮಾಸ್ಟರ್‌ಮೈಂಡ್‌

    ನವದೆಹಲಿ: ಸಂಸತ್ತಿನಲ್ಲಿ ಭದ್ರತಾ ಲೋಪ (Parliament Security Breach) ಪ್ರಕರಣದಲ್ಲಿ ಬಂಧಿತನಾಗಿರುವ ಮಾಸ್ಟರ್‌ಮೈಂಡ್ ಲಲಿತ್‌ ಝಾ (Lalit Jha) ಘಟನೆಗೂ ಕೆಲವು ತಿಂಗಳ ಮುನ್ನ ಫೇಸ್ಬುಕ್‌ನಲ್ಲಿ ʻಭಾರತಕ್ಕೆ ಬೇಕಾಗಿರುವುದು ಬಾಂಬ್ʼ ಎಂದು ಬಂಗಾಳಿ ಭಾಷೆಯಲ್ಲಿ ಬರೆದುಕೊಂಡಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

    ಆರೋಪಿ ಲಲಿತ್‌ ಝಾನನ್ನ ತನಿಖೆಗೆ ಒಳಪಡಿಸಿರುವ ಪೊಲೀಸರು (Delhi Police) ಆತನ ಸೋಶಿಯಲ್ ಮೀಡಿಯಾ ಹಿನ್ನೆಲೆಯನ್ನು ಪರಿಶೀಲಿಸಲು ಪ್ರತ್ಯೇಕ ತಂಡವನ್ನೂ ರಚಿಸಿದ್ದಾರೆ. ತನಿಖೆಯಲ್ಲಿ ವ್ಯವಸ್ಥೆಯ ವಿರುದ್ಧ ಝಾ ಅಸಮಾಧಾನ ವ್ಯಕ್ತಪಡಿಸಿದ ಪೋಸ್ಟ್‌ಗಳು ಪೊಲೀಸರ ಗಮನ ಸೆಳೆದಿವೆ. ಇದನ್ನೂ ಓದಿ: ಸಂಸತ್‌ನಲ್ಲಿ ಭದ್ರತಾ ಲೋಪ- 6ನೇ ಆರೋಪಿ ಅರೆಸ್ಟ್

    ದಬ್ಬಾಳಿಕೆ, ಅನ್ಯಾಯ ಮತ್ತು ಅರಾಜಕತೆಯ ವಿರುದ್ಧ ಪ್ರಬಲ ಧ್ವನಿ ಎತ್ತಲು ʻಭಾರತಕ್ಕೆ ಇಂದು ಬಾಂಬ್ ಅಗತ್ಯವಿದೆʼ ಎಂದು ಬಂಗಾಳಿ ಭಾಷೆಯಲ್ಲಿ ಬರೆದುಕೊಂಡಿದ್ದಾನೆ. ಇಂತಹದ್ದೇ ಹಲವು ಪೊಸ್ಟ್‌ಗಳು ಕಂಡುಬಂದಿವೆ. ಈ ಪೋಸ್ಟ್‌ಗಳನ್ನು ಬರೆಯುವ ಉದ್ದೇಶ ಏನಿರಬಹುದು ಎಂಬ ಮಾಹಿತಿಯನ್ನೂ ಪಡೆಯಲಾಗುತ್ತಿದೆ.

    ನವೆಂಬರ್ 5ರ ಪೊಸ್ಟ್‌ನಲ್ಲಿ, ತಮ್ಮ ಹಿನ್ನೆಲೆಯನ್ನು ಲೆಕ್ಕಿಸದೆ ತಮ್ಮ ಹಕ್ಕುಗಳಿಗಾಗಿ ಮಾತನಾಡುವ ಜನರನ್ನು ಅನಿವಾರ್ಯವಾಗಿ ಕಮ್ಯುನಿಸ್ಟ್ ಎಂದು ಘೋಷಿಸಲ್ಪಡುತ್ತಾರೆ ಎಂದು ಬರೆದುಕೊಂಡಿದ್ದಾರೆ. ಕೇವಲ‌ ಪೊಸ್ಟ್ ಮಾತ್ರವಲ್ಲದೇ ಲಲಿತ್ ಸಂವಾದ ನಡೆಸಿದ ವ್ಯಕ್ತಿಗಳ ಬಗ್ಗೆ ಅವರ ಹಿನ್ನೆಲೆ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಇದನ್ನೂ ಓದಿ: ಸಂಸತ್‌ ದಾಳಿಗೆ ಪ್ರಧಾನಿ ಮೋದಿ ನೀತಿಗಳೇ ಕಾರಣ: ರಾಹುಲ್‌ ಗಾಂಧಿ ಆರೋಪ

    ಬುಧವಾರ ನಡೆದ ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ 5ನೇ ಆರೋಪಿ ಲಲಿತ್ ಝಾ, ದೆಹಲಿ ಪೊಲೀಸರ ಮುಂದೆ ಗುರುವಾರ ಶರಣಾದನು. ಇಡೀ ಪ್ರಕರಣದ ಮಾಸ್ಟರ್‌ಮೈಂಡ್ ಎಂದು ಲಲಿತ್ ಝಾ ನನ್ನ ನಂಬಲಾಗಿದೆ. ಇತರೆ ಆರೋಪಿಗಳ ಕುರಿತ ಸಾಕ್ಷ್ಯ ನಾಶ ಮಾಡಿರುವ ಆರೋಪಗಳೂ ಕೇಳಿ‌ಬಂದಿವೆ. ಇದನ್ನೂ ಓದಿ: ಕೊರೊನಾ ಭೀತಿ ಮತ್ತೆ ಶುರು; ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ 

  • ಸಂಸತ್ ಮೇಲಿನ ದಾಳಿಯ ಪ್ರಮುಖ ರೂವಾರಿ ಲಲಿತ್ ಝಾ 7 ದಿನ ಪೊಲೀಸ್ ಕಸ್ಟಡಿಗೆ

    ಸಂಸತ್ ಮೇಲಿನ ದಾಳಿಯ ಪ್ರಮುಖ ರೂವಾರಿ ಲಲಿತ್ ಝಾ 7 ದಿನ ಪೊಲೀಸ್ ಕಸ್ಟಡಿಗೆ

    ನವದೆಹಲಿ: ಸಂಸತ್ ಮೇಲಿನ ದಾಳಿಯ ಪ್ರಮುಖ ರೂವಾರಿ ಎಂದೇ ಕರೆಸಿಕೊಳ್ಳುತ್ತಿರುವ ಲಲಿತ್ ಝಾ (Lalit Jha) ಹೆಚ್ಚಿನ ವಿಚಾರಣೆಗೆ ಏಳು ದಿನಗಳ ಕಾಲ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಲಲಿತ್ ಝಾನನ್ನು ಶುಕ್ರವಾರ ಪಟಿಯಾಲ ಕೋರ್ಟ್ (Patiala Court) ಮುಂದೆ ಹಾಜರುಪಡಿಸಲಾಯಿತು, ಘಟನೆಯ ಪ್ರಮುಖ ಆರೋಪಿಯಾಗಿದ್ದು, ವಿಚಾರಣೆಗೆ ಹದಿನೈದು ದಿನಗಳ ಸಮಯಬೇಕು ಎಂದು ಪೊಲೀಸರ ಪರ ವಕೀಲರು ಮನವಿ ಮಾಡಿದರು.

    ಘಟನೆಯ ವಿವರ ನೀಡಿದ ಪಬ್ಲಿಕ್ ಪ್ರಾಸಿಕ್ಯೂಟರ್ ಅಖಂಡ ಪ್ರತಾಪ್ ಸಿಂಗ್ ಇಂದು ದೆಹಲಿ ಪೊಲೀಸರ ಪರವಾಗಿ ಹಾಜರಾಗಿ ಝಾನನ್ನು ಹದಿನೈದು ದಿನಗಳ ಕಸ್ಟಡಿಗೆ ಕೋರಿದರು. ಆದರೆ ಪಟಿಯಾಲ ಹೌಸ್ ಕೋರ್ಟ್ ನ್ಯಾಯಾಧೀಶರು ಏಳು ದಿನಗಳ ಪೊಲೀಸ್ ಕಸ್ಟಡಿಗೆ (Police Custody) ನೀಡುವುದಾಗಿ ಹೇಳಿದರು.

    ಘಟನೆಯ ಬಳಿಕ ರಾಜಸ್ಥಾನದಲ್ಲಿ ತಲೆ ಮರೆಸಿಕೊಂಡಿದ್ದ ಲಲಿತ್ ಝಾ  ಗುರುವಾರ ರಾತ್ರಿ ಏಕಾಏಕಿ ಕರ್ತವ್ಯಪಥ್ ಪೊಲೀಸ್ ಠಾಣೆಗೆ ಬಂದು ಶರಣಾದನು. ಆತನನ್ನು ಬಂಧಿಸಿದ ಪೊಲೀಸರು ಪ್ರಕರಣ ತನಿಖೆ ನಡೆಸುತಿರುವ ಸ್ಪೇಷಲ್ ಟೀಂಗೆ ಹಸ್ತಾಂತರ ಮಾಡಿದರು. ಶನಿವಾರ ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ಸಬ್ದರ್‍ಜಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಬಳಿಕ ಕೋರ್ಟ್ ಮುಂದೆ ಹಾಜರುಪಡಿಸಿದರು. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣ – ಮಾಸ್ಟರ್‌ಮೈಂಡ್‌ ಲಲಿತ್‌ ಬಂಧನ

    ಪಶ್ಚಿಮ ಬಂಗಾಳ ಮೂಲದ ಲಲಿತ್ ಝಾ ಪ್ರಮುಖ ಆರೋಪಿಯಾಗಿದ್ದು, ಈ ಮೊದಲು ಬಂಧಿತರಾಗಿರುವ ಮನೋರಂಜರ್, ಸಾಗರ್ ಶರ್ಮಾ, ಅಮುಲ್ ಶಿಂಧೆ, ನೀಲಂಕೌರ್ ಗೆ ಸಂಸತ್‍ನಲ್ಲಿ ದಾಳಿ ನಡೆಸಲು ಪ್ರೇರೆಪಿಸಿದ್ದಾರೆ ಎನ್ನಲಾಗಿದೆ. ಗುರುಗ್ರಾಮ ಮನೆಯೊಂದರಲ್ಲಿ ಎಲ್ಲರಿಗೂ ತರಬೇತಿ ನೀಡಿ ಜವಬ್ದಾರಿ ಹಂಚಿಕೆ ಮಾಡಿದ್ದ ಎನ್ನಲಾಗಿದೆ. ದಾಳಿ ಬೆನ್ನಲೆ ತಲೆಮರೆಸಿಕೊಂಡು ರಾಜಸ್ಥಾನಕ್ಕೆ ತೆರಳಿದ್ದ ಲಲಿತ್ ಝಾ, ಇತರೆ ಆರೋಪಿಗಳನ್ನು ನಾಶ ಮಾಡಿ ಸಾಕ್ಷ್ಯ ನಾಶಕ್ಕೆ ಪ್ರಯತ್ನ ಮಾಡಿದ್ದಾನೆ ಎಂದು ಮೂಲಗಳು ಹೇಳಿವೆ.

  • ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣ – ಮಾಸ್ಟರ್‌ಮೈಂಡ್‌ ಲಲಿತ್‌ ಬಂಧನ

    ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣ – ಮಾಸ್ಟರ್‌ಮೈಂಡ್‌ ಲಲಿತ್‌ ಬಂಧನ

    – ತಾನಾಗಿಯೇ ಪೊಲೀಸ್ ಠಾಣೆಗೆ ಬಂದು ಸರೆಂಡರ್‌

    ನವದೆಹಲಿ: ಸಂಸತ್ತಿನಲ್ಲಿ ಬುಧವಾರ ನಡೆದ ಭದ್ರತಾ ಉಲ್ಲಂಘನೆಯ ಮಾಸ್ಟರ್‌ಮೈಂಡ್‌ ಲಲಿತ್‌ ಝಾನನ್ನು (Lalit Jha) ದೆಹಲಿ ಪೊಲೀಸರು (New Delhi) ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಕೋಲ್ಕತ್ತಾ ಮೂಲದ ಶಿಕ್ಷಕ ಎರಡು ದಿನಗಳ ಕಾಲ ಪರಾರಿಯಾಗಿದ್ದ. ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಜಿಗಿದ ಇಬ್ಬರು ಯುವಕರು ಹಳದಿ ಬಣ್ಣದ ಹೊಗೆ ಸಿಂಪಡಿಸಿದ್ದರು. ಭದ್ರತಾ ಉಲ್ಲಂಘನೆಗಾಗಿ ಐವರನ್ನು ಬುಧವಾರ ಬಂಧಿಸಲಾಗಿತ್ತು. ಇದನ್ನೂ ಓದಿ: ಅಶಿಸ್ತಿನ ವರ್ತನೆ – ಲೋಕಸಭೆಯ 14 ಸಂಸದರು ಸಸ್ಪೆಂಡ್‌

    ಸಾಗರ್‌, ಮನೋರಂಜನ್‌, ಅಮೋಲ್‌ ಮತ್ತು ನೀಲಂ ಅವರನ್ನು ಸ್ಥಳದಲ್ಲೇ ವಶಕ್ಕೆ ಪಡೆಯಲಾಗಿತ್ತು. ಅವರ ಜೊತೆ ಕೈಜೋಡಿಸಿದ್ದ ಮತ್ತೊಬ್ಬ ಆರೋಪಿ ವಿಶಾಲ್‌ನನ್ನು ಬಳಿಕ ವಿಚಾರಣೆಗೆ ಒಳಪಡಿಸಲಾಗಿತ್ತು. ಆರೋಪಿಗಳು ಸಂಸತ್ತಿಗೆ ಬರುವ ಮೊದಲು ವಿಶಾಲ್‌ ಅವರ ಗುರುಗ್ರಾಮದ ಮನೆಯಲ್ಲೇ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರಕರಣದ ಪ್ರಮುಖ ಆರೋಪಿ ಲಲಿತ್‌ ಝಾ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈಗ ಪ್ರಕರಣದ ಮಾಸ್ಟರ್‌ಮೈಂಡ್‌ನನ್ನು ಬಂಧಿಸಿದ್ದಾರೆ. ಲಲಿತ್‌ ಝಾ ತಾನಾಗಿಯೇ ಠಾಣೆಗೆ ಬಂದು ಸರೆಂಡರ್‌ ಆಗಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರಾಜ್ಯಸಭೆಯಿಂದ ಅಮಾನತು