Tag: ಲವ್ ಲಿ

  • ಸ್ಟೆಫಿ ಪಟೇಲ್ ಜೊತೆ ಲಂಡನ್ ನಲ್ಲಿ ಕಾಣಿಸಿಕೊಂಡ ವಸಿಷ್ಠ ಸಿಂಹ

    ಸ್ಟೆಫಿ ಪಟೇಲ್ ಜೊತೆ ಲಂಡನ್ ನಲ್ಲಿ ಕಾಣಿಸಿಕೊಂಡ ವಸಿಷ್ಠ ಸಿಂಹ

    ನ್ನಡದ ಹೆಸರಾಂತ ನಟ ವಸಿಷ್ಠ ಸಿಂಹ ಲಂಡನ್ (London) ಗೆ ಹಾರಿದ್ದರು. ಲಂಡನ್ ಸುಂದರ ಸ್ಥಳಗಳಲ್ಲಿ ನಟಿ ಸ್ಟೆಫಿ ಪಟೇಲ್(Stefy patel) ಜೊತೆ ಕಾಣಿಸಿಕೊಂಡಿದ್ದಾರೆ. ಅರೇ.. ಹರಿಪ್ರಿಯಾ ಜೊತೆ ಮದುವೆಯಾಗಿರೋ ವಸಿಷ್ಠ.. ಆ ನಟಿಯ ಜೊತೆ ಅಲ್ಲೇಕೆ ಕಾಣಿಸಿಕೊಂಡರು ಅಂತ ಅಚ್ಚರಿ ಪಡಬೇಡಿ. ಈ ಜೋಡಿ ನಟನೆಯ ಲವ್ ಲಿ (Love Li)  ಸಿನಿಮಾದ ಶೂಟಿಂಗ್ ಲಂಡನ್ ನಲ್ಲಿ ನಡೆದಿದೆ. ಹಾಡೊಂದರ ಚಿತ್ರೀಕರಣಕ್ಕಾಗಿ ಚಿತ್ರತಂಡ ಅಲ್ಲಿಗೆ ಹಾರಿತ್ತು.

    ವಸಿಷ್ಠ ಸಿಂಹ (Vasishtha Simha) ನಟನೆ ಅಂತ ಬಂದ್ರೆ ರೋಸ್ ಹಿಡಿದು ಹೀರೋ ಆಗೋಕು ರೆಡಿ, ಲಾಂಗ್ ಹಿಡಿದು ವಿಲನ್ ಆಗೋಕೂ ಸೈ, ಅಷ್ಟೇ ಅಲ್ಲ ಗಾಯನಕ್ಕೂ ಸೈ ಎನಿಸಿಕೊಂಡಿರುವ ಕಂಚಿನ ಕಂಠದ ನಟ. ಶಿವಣ್ಣನ ಜೊತೆ ಟಗರು ನಲ್ಲಿ ಚಿಟ್ಟೆಯಾಗಿ ಮಿಂಚಿದ ವಸಿಷ್ಠ ಸಿಂಹ ಸ್ಟೈಲಿಶ್ ಲುಕ್ ನಲ್ಲಿ ‘ಲವ್ ಲಿ’ ಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್, ಅಪ್ ಡೇಟ್ ಗಳು ಕೂಡ ಗಮನ ಸೆಳೆಯುತ್ತಿವೆ.

    ವಸಿಷ್ಠ ಸಿಂಹನಿಗೆ ನಾಯಕಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ಕಾಣಿಸಿಕೊಂಡಿದ್ದಾರೆ.  ಹಿಂದಿ, ಕೊರಿಯನ್, ತಮಿಳು ಭಾಷೆಗಳ ಸಿನಿಮಾ ಮತ್ತು ವೆಬ್ ಸಿರೀಸ್ ಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್ ಗೆ ಇದು ಮೊದಲ ಕನ್ನಡ ಸಿನಿಮಾ.

     

    ‘ಲವ್ ಲಿ’ ಚಿತ್ರಕ್ಕೆ ಚೇತನ್ ಕೇಶವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು, ರೌಡಿಸಂ ಕಥಾಹಂದರವೂ ಚಿತ್ರದಲ್ಲಿದೆ. ಚಿತ್ರವನ್ನು  ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಹರೀಶ್ ಕೊಮ್ಮೆ ಸಂಕಲನ, ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ‘ಲವ್ ಲಿ’ ಚಿತ್ರಕ್ಕಿದೆ.

  • ‘ಲವ್ ಲಿ’ ಟೈಟಲ್ ಸಾಂಗ್ ರಿಲೀಸ್: ವಸಿಷ್ಠ ಸಿಂಹ ಹೀರೋ

    ‘ಲವ್ ಲಿ’ ಟೈಟಲ್ ಸಾಂಗ್ ರಿಲೀಸ್: ವಸಿಷ್ಠ ಸಿಂಹ ಹೀರೋ

    ಸಿಷ್ಠ ಸಿಂಹ (Vasishtha) ನಾಯಕರಾಗಿ ಅಭಿನಯಿಸಿರುವ ‘ಲವ್ ಲಿ’ (Love Lee) ಚಿತ್ರದ ಟೈಟಲ್ ಹಾಡು (Title Song) ಇತ್ತೀಚೆಗೆ ಬಿಡುಗಡೆಯಾಗಿದ್ದು, ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವಿಶೇಷವಾದ ಈ ಗೀತೆಯನ್ನು ಬಿಡುಗಡೆ ಮಾಡಲು ಮುಖ್ಯ ಅತಿಥಿಗಳಾಗಿ  ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ, ನೆನಪಿರಲಿ ಪ್ರೇಮ್, ಪ್ರಿಯಂಕಾ ಉಪೇಂದ್ರ ಹಾಗೂ ಹರಿಪ್ರಿಯ ಆಗಮಿಸಿದ್ದರು. ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್ ನಲ್ಲಿ ರವೀಂದ್ರ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಕಥೆ ಬರೆದು ಮೊದಲಬಾರಿ ನಿರ್ದೇಶನ ಮಾಡಿದ್ದಾರೆ ಯುವ ಪ್ರತಿಭೆ ಚೇತನ್ ಕೇಶವ್.

    ‘ನಿರ್ಮಾಪಕರ ಸಹಕಾರದಿಂದ ಸಿನಿಮಾ ಇಷ್ಟು ಚೆನ್ನಾಗಿ ಬಂದಿದೆ. ಸಾಂಗ್ ನಂತೆ ಸಿನಿಮಾ ಕೂಡ ಕಲರ್ ಫುಲ್ ಆಗಿ ಬಂದಿದೆ. ಪ್ರೀತಿಯಲ್ಲಿ ಏನೆಲ್ಲಾ ಇರುತ್ತೆ ಎಂಬುದೇ ಸಿನಿಮಾ. ಮೊದಲ ಭಾಗದಲ್ಲಿ ರೋಮ್ಯಾಂಟಿಕ್ ಕಥೆ ಇದ್ದರೆ, ದ್ವಿತೀಯಾರ್ಧದಲ್ಲಿ ಕಂಟೆಂಟ್ ಬಗ್ಗೆ ಹೇಳಲಾಗಿದೆ. ನಾನು 9 ವರ್ಷದಿಂದ ಚಿತ್ರರಂಗದಲ್ಲಿದ್ದೀನಿ. ನಿರ್ದೇಶಕ ನರ್ತನ್ ಜೊತೆ ‘ಮಫ್ತಿ’ ಚಿತ್ರಕ್ಕೆ ಕೆಲಸ ಮಾಡಿದ್ದೇನೆ. ಸ್ಕೂಲ್ ದಿನಗಳಿಂದ ನನಗೆ ಸಿನಿಮಾ ಮಾಡುವ ಆಸೆ. ಉಪೇಂದ್ರ, ರವಿಚಂದ್ರನ್ ಅವರು ನನಗೆ ಸ್ಫೂರ್ತಿ. ಆದರೆ ನಾನು ಹೆಚ್ಚಾಗಿ ಆ್ಯಕ್ಷನ್ ಸಿನಿಮಾಗೆ ಕೆಲಸ ಮಾಡಿದ್ದೇನೆ. ಹಾಗಾಗಿ ಈ ಚಿತ್ರದಲ್ಲಿ ಮಾಸ್ , ಕ್ಲಾಸ್ ಎರಡನ್ನೂ ಬಳಸಿದ್ದೇನೆ.  ಚಿತ್ರದಲ್ಲಿ ಸೋಷಿಯಲ್ ಮೆಸೇಜ್ ಕೂಡ ಇದೆ. ಮಂಗಳೂರು, ಬೆಂಗಳೂರು ಉಡುಪಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನು ಲಂಡನ್ ನಲ್ಲಿ ಒಂದು ಸಾಂಗ್ ಶೂಟಿಂಗ್ ಮಾಡಲು ಯೋಜನೆ ಹಾಕಲಾಗಿದೆ.  ರೌಡಿಸಂ, ಲವ್, ಡ್ರಾಮಾ ಹಾಗೂ ಫ್ಯಾಮಿಲಿ ಜಾನರ್ ನಲ್ಲಿ ಸಿನಿಮಾ ಸಾಗುತ್ತದೆ. ಪ್ರೀತಿ, ನಂಬಿಕೆ ಮೇಲೆ ಸಂಬಂಧಗಳು ಮುಖ್ಯ. ಅವುಗಳನ್ನು ಹೇಗೆ ಉಳಿಸಿಕೊಳ್ಳಬೇಕು? ಎಂಬುದು ಕಥೆಯಲ್ಲಿ ಇದೆ. ಸಿನಿಮಾ ಪ್ರೇಕ್ಷಕರಿಗೆ ಕನೆಕ್ಟ್ ಆಗುತ್ತದೆ. ಚಿತ್ರದಲ್ಲಿ ಮೂರು ಆ್ಯಕ್ಷನ್, ನಾಲ್ಕು ಹಾಡುಗಳಿವೆ’ ಎಂದು ನಿರ್ದೇಶಕ ಚೇತನ್ ಕೇಶವ್ (Chetan Keshav) ಮಾಹಿತಿ ನೀಡಿದರು.

    ಇದೇ ಸಂದರ್ಭದಲ್ಲಿ ನಾಯಕ ವಸಿಷ್ಠ ಸಿಂಹ ಮಾತನಾಡಿ, ‘ನನ್ನನ್ನು ತುಂಬಾ ಕಾಡಿದಂತಹ ಸಿನಿಮಾ ಇದು. ಈಗ ಈ ಹಾಡಿನಿಂದ ಪ್ರಮೋಷನ್ ಶುರು ಮಾಡಿದ್ದು, ಆಗಸ್ಟ್ ನಲ್ಲಿ ಸಿನಿಮಾ ರಿಲೀಸ್ ಮಾಡುವ ಯೋಜನೆ ಇದೆ. ಇದು ಸುಂದರ ಪ್ರೇಮಕಥೆಯ ಚಿತ್ರ. ಕಥೆ ಕೇಳಿದಾಗ ತುಂಬಾ ಇಷ್ಟ ಆಯ್ತು.  ನಿರ್ಮಾಪಕರು ಸೇರಿದಂತೆ ಚಿತ್ರತಂಡದ ಸಹಕಾರಕ್ಕೆ ಧನ್ಯವಾದ ಎಂದರು. ಇದನ್ನೂ ಓದಿ:ವರುಣ್, ಲಾವಣ್ಯ ನಿಶ್ಚಿತಾರ್ಥದಲ್ಲಿ ನಿಹಾರಿಕಾ ಪತಿ ಗೈರು- ಡಿವೋರ್ಸ್ ಸುದ್ದಿಗೆ ಸಿಕ್ತು ಸಾಕ್ಷಿ

    ನಂತರ ನಾಯಕಿ ಸ್ಟೇಪಿ ಪಟೇಲ್ ‘ನಾನು ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದು ಕನ್ನಡ ಮೊದಲ ಸಿನಿಮಾ. ಒಳ್ಳೆ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ. ನಾನು ಇನ್ನಷ್ಟು ಸಿನಿಮಾ ಮಾಡಲು ನಿಮ್ಮ ಆಶಿರ್ವಾದ ಬೇಕು. ನಾನು ಈ ಚಿತ್ರದಲ್ಲಿ ಜನನಿ ಎಂಬ ಪಾತ್ರ ನಿರ್ವಹಿಸಿದ್ದೇನೆ’ ಎಂದು ಹೇಳಿದರು.

    ಸಹ ನಿರ್ಮಾಪಕರಾದ ಬಾಲಕೃಷ್ಣ ಜಿ.ಎನ್, ಕೃಷ್ಣ, ಬೇಬಿ ವಂಶಿಕಾ ತಮ್ಮ ಅನುಭವ ಹಂಚಿಕೊಂಡರು. ಅಥಿತಿಗಳಾಗಿ ಆಗಮಿಸಿದ್ದ ರವಿಚಂದ್ರನ್ ಅಭುವನಾಸ್ ಯೂಟ್ಯೂಬ್ ಚಾನೆಲ್ ಗೆ ಚಾಲನೆ ನೀಡಿ ಚಿತ್ರ ‘ಲವ್ ಲಿ’ ಆಗಿರುತ್ತದೆ. ಹೊಸಬರಲ್ಲಿ ಉತ್ಸಾಹವಿದ್ದು, ಹಾಡು ಚೆನ್ನಾಗಿ ಬಂದಿದೆ. ತಂಡಕ್ಕೆ ಒಳ್ಳೆಯದಾಗಲಿ’ ಎಂದರು.

    ಹಾಡು ಬಿಡುಗಡೆ ಮಾಡಿದ ಉಪೇಂದ್ರ ಅವರು ಮಾತನಾಡಿ ‘ಸಾಂಗ್ ಇಂಪಾಗಿದ್ದು, ಇಂಟ್ರೆಸ್ಟ್ ಆಗಿ ಕೂಡ ಇದೆ.  ಸಾಂಗ್ ನೋಡುತ್ತಿದ್ದರೆ ನಂಗೆ ಸಿನಿಮಾ ನೋಡಬೇಕು ಅನಿಸುತ್ತಿದೆ’ ಎಂದರು.  ನೆನಪಿರಲಿ ಪ್ರೇಮ್ ‘ತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು. ಪ್ರಿಯಂಕಾ ಉಪೇಂದ್ರ ಹಾಗೂ ಹರಿಪ್ರಿಯ ಅವರು ಹಾಡಿನ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದರು.

  • ‘ಲವ್ ಲಿ’ ಎನ್ನುತ್ತಾ ಡಬ್ಬಿಂಗ್ ಕೆಲಸದಲ್ಲಿ ತೊಡಗಿದ ವಸಿಷ್ಠ ಸಿಂಹ

    ‘ಲವ್ ಲಿ’ ಎನ್ನುತ್ತಾ ಡಬ್ಬಿಂಗ್ ಕೆಲಸದಲ್ಲಿ ತೊಡಗಿದ ವಸಿಷ್ಠ ಸಿಂಹ

    ಸಿಷ್ಠ ಸಿಂಹ (Vasishtha Simha) ನಟನೆಯ ಬಹು ನಿರೀಕ್ಷಿತ ಚಿತ್ರ ‘ಲವ್ ಲಿ’ (Love Li). ಆರಂಭದಿಂದಲು ಸಿನಿ ಪ್ರೇಕ್ಷಕರ ಗಮನ ಸೆಳೆಯುತ್ತಿರುವ ಈ ಚಿತ್ರಕ್ಕೆ ಚೇತನ್ ಕೇಶವ್ (Chetan Samiksha) ಆಕ್ಷನ್ ಕಟ್ ಹೇಳಿದ್ದಾರೆ. ಕಮರ್ಶಿಯಲ್ ರೊಮ್ಯಾಂಟಿಕ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅದ್ದೂರಿಯಾಗಿ ನಿರ್ಮಾಣವಾಗುತ್ತಿದ್ದು, ಸದ್ಯ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಡಬ್ಬಿಂಗ್ ನಲ್ಲಿ (Dubbing) ನಿರತವಾಗಿದೆ.

    ಲಂಡನ್ ನಲ್ಲಿ ಸೆರೆ ಹಿಡಿಯುವ ಸಾಂಗ್ ವೊಂದನ್ನು ಹೊರತು ಪಡಿಸಿ ಚಿತ್ರದ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಲವ್ ಲಿ ಟೀಂ ಕಳೆದ ಏಳು ದಿನದಿಂದ ಡಬ್ಬಿಂಗ್ ನಲ್ಲಿ ತೊಡಗಿದೆ. ವಸಿಷ್ಠ ಸಿಂಹ, ಸ್ಟೆಫಿ ಪಟೇಲ್, ದತ್ತಣ್ಣ, ರಂಗಾಯಣ ರಘು, ಅಚ್ಯುತ್ ಕುಮಾರ್, ವಂಶಿಕಾ, ಸೂರಜ್ ಚಿತ್ರದ ಡಬ್ಬಿಂಗ್ ಪೋಷನ್ ಕಂಪ್ಲೀಟ್ ಮಾಡಿದ್ದಾರೆ. ಐದು ದಿನಗಳ ಡಬ್ಬಿಂಗ್ ಕೆಲಸ ಬಾಕಿ ಇದೆ ಎಂದು ನಿರ್ದೇಶಕ ಚೇತನ್ ಕೇಶವ್ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಟ ಗೋಪಿಚಂದ್‌ಗೆ ಸ್ಯಾಂಡಲ್‌ವುಡ್‌ ನಿರ್ದೇಶಕ ಎ.ಹರ್ಷ ಆ್ಯಕ್ಷನ್ ಕಟ್

    ‘ಲವ್ ಲಿ’ ಚೇತನ್ ಕೇಶವ್ ಅವರ ಮೊದಲ ಸಿನಿಮಾ ವೆಂಚರ್. ಕಮರ್ಶಿಯಲ್ ರೊಮ್ಯಾಂಟಿಕ್ ಲವ್ ಸ್ಟೋರಿ ಜೊತೆಗೆ ರೌಡಿಸಂ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ವಸಿಷ್ಠ ಸಿಂಹ ಡಿಫ್ರೆಂಟ್ ಶೇಡ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಸ್ಟೆಫಿ ಪಟೇಲ್ ನಟಿಸುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಸಿನಿಮಾ ಸ್ಯಾಂಪಲ್ ಗಳು ಭರವಸೆ ಮೂಡಿಸಿದ್ದು, ಅದ್ದೂರಿಯಾಗಿ ಸಿನಿಮಾ ನಿರ್ಮಾಣ ಮಾಡಲಾಗಿದೆ. ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಡಬ್ಬಿಂಗ್ ಕೆಲಸ ಮುಗಿಯುತ್ತಿದ್ದಂತೆ ಹಾಡಿನ ಚಿತ್ರೀಕರಣಕ್ಕೆ ಲಂಡನ್ ತೆರೆಳಲಿದೆ.

    ಸುಬ್ಬಲಕ್ಷ್ಮಿ ಸಂಸಾರ ಸೀರಿಯಲ್ ಖ್ಯಾತಿಯ ಸಮೀಕ್ಷಾ (Samiksha), ಸಾಧುಕೋಕಿಲ, ದತ್ತಣ್ಣ, ಅಚ್ಯುತ್ ಕುಮಾರ್, ವಂಶಿಕಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಒಳಗೊಂಡ ದೊಡ್ಡ ತಾರಾಬಳಗ ‘ಲವ್ ಲಿ’ ಚಿತ್ರದಲ್ಲಿದೆ. ಎಂ.ಆರ್ ರವೀಂದ್ರ ಕುಮಾರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಸಿನಿಮಾಗೆ ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿದೆ.

  • ವಸಿಷ್ಠ ಸಿಂಹ ಅಭಿನಯದ ಸಿನಿಮಾಗೆ ಕೋಟಿ ವೆಚ್ಚದ ಸೆಟ್

    ವಸಿಷ್ಠ ಸಿಂಹ ಅಭಿನಯದ ಸಿನಿಮಾಗೆ ಕೋಟಿ ವೆಚ್ಚದ ಸೆಟ್

    ಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾ ಸೆಟ್ಟೇರಿದ ದಿನದಿಂದ ಸ್ಯಾಂಡಲ್ ವುಡ್ ಅಂಗಳದಲ್ಲಿ ಸಿನಿ ಪ್ರೇಕ್ಷಕರ ಗಮನ ಸೆಳೆಯುತ್ತಲೇ ಇದೆ. ಸಿಲಿಕಾನ್ ಸಿಟಿಯಲ್ಲಿ ಮೊದಲ ಹಾಗೂ ಎರಡನೇ ಶೆಡ್ಯೂಲ್ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮಲ್ಪೆಯ ಪಡುಕರೆಯಲ್ಲಿ ಮೂರನೇ ಹಂತದ ಚಿತ್ರೀಕರಣದಲ್ಲಿ ತೊಡಗಿದೆ. ‘ಲವ್ ಲಿ’ ಚಿತ್ರೀಕರಣಕ್ಕೆಂದೇ ಪಡುಕರೆಯ ಕಡಲ ತೀರದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಕೇವಲ 25 ದಿನದಲ್ಲಿ ಈ ಮನೆ ನಿರ್ಮಾಣ ಮಾಡಲಾಗಿದ್ದು, ಕಳೆದ  ಹತ್ತು  ದಿನಗಳಿಂದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ವಸಿಷ್ಠ ಸಿಂಹ, ಸಾಧುಕೋಕಿಲ, ನಾಯಕಿ ಸ್ಟೆಫಿ ಪಟೇಲ್ ಸೇರಿದಂತೆ ಹಲವರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

    ನಟ ವಸಿಷ್ಠ ಸಿಂಹ ಮಾತನಾಡಿ ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾ. ರೌಡಿಸಂ ಕಥಾಹಂದರ ಕೂಡ ಇದೆ. ನೈಜ ಘಟನೆಯಿಂದ ಸ್ಪೂರ್ತಿ ಪಡೆದು ಅದನ್ನು ಸಿನಿಮೀಯ ರೀತಿಯಲ್ಲಿ ಹೇಳ ಹೊರಟಿದ್ದೇವೆ. ಎಂಟರಿಂದ ಹತ್ತು ಭಾವನೆಗಳನ್ನು ಒಮ್ಮೆಲೆ ಕ್ಯಾರಿ ಮಾಡುವ ಅವಕಾಶ ಈ ಚಿತ್ರದಲ್ಲಿ ಸಿಕ್ಕಿದೆ. ಪಾತ್ರಕ್ಕೆ ಜೀವ ತುಂಬುವ ಕೆಲಸ ನಡೆಯುತ್ತಿದೆ. ಈ ಸಿನಿಮಾ ಸಿನಿ ಪ್ರಿಯರ ಮನಸ್ಸು ಗೆಲ್ಲುವುದರಲ್ಲಿ ಮರು ಮಾತಿಲ್ಲ ಎಂದು ತಿಳಿಸಿದ್ರು. ಇದನ್ನೂ ಓದಿ: ಮಾಜಿ ಸಚಿವ ನಾರಾ ಲೋಕೇಶ್ ಭೇಟಿಯಾದ ನಟ ಯಶ್

    ನಿರ್ದೇಶಕ ಚೇತನ್ ಕೇಶವ್ ಮಾತನಾಡಿ 7 ದಿನಗಳ ಚಿತ್ರೀಕರಣ ನಡೆಸಿದ್ರೆ ಶೇಕಡಾ 80ರಷ್ಟು ಚಿತ್ರೀಕರಣ ಪೂರ್ಣಗೊಳ್ಳಲಿದೆ. ಲಂಡನ್ ನಲ್ಲೂ ಚಿತ್ರೀಕರಣ ಮಾಡಬೇಕಿದೆ. ಜನವರಿ ಮೊದಲ ವಾರದಲ್ಲಿ ಚಿತ್ರತಂಡ ಲಂಡನ್ ಗೆ ತೆರಳಲಿದೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ‘ಲವ್ ಲಿ’ ಚಿತ್ರವನ್ನು ಚೇತನ್ ಕೇಶವ್ ನಿರ್ದೇಶನ ಮಾಡುತ್ತಿದ್ದು, ವಸಿಷ್ಠ ಸಿಂಹಗೆ ನಾಯಕಿಯಾಗಿ ಜಾರ್ಕಂಡ್ ಮೂಲದ ಸ್ಟೆಫಿ ಪಟೇಲ್ ನಟಿಸುತ್ತಿದ್ದಾರೆ. ಸುಬ್ಬಲಕ್ಷ್ಮಿ ಸಂಸಾರ ಸೀರಿಯಲ್ ಖ್ಯಾತಿಯ ಸಮೀಕ್ಷಾ ಚಿತ್ರದಲ್ಲಿ ಪ್ರಮುಖ ರೋಲ್ ನಲ್ಲಿ ಮಿಂಚಲಿದ್ದಾರೆ. ಮಾಸ್ಟರ್ ಆನಂದ್ ಪುತ್ರಿ ವಂಶಿಕಾ, ಸಾಧುಕೋಕಿಲ, ದತ್ತಣ್ಣ, ಮಾಳವಿಕಾ, ಶೋಭ್ ರಾಜ್, ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ. ಲವ್ ಲಿ ಚಿತ್ರವನ್ನು ರವೀಂದ್ರ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ‘ಲವ್ ಲಿ’ ಸಿನಿಮಾದ ಶೂಟಿಂಗ್ ನಲ್ಲಿ ಮತ್ತೆ ಬ್ಯುಸಿಯಾದ ವಸಿಷ್ಠ ಸಿಂಹ

    ‘ಲವ್ ಲಿ’ ಸಿನಿಮಾದ ಶೂಟಿಂಗ್ ನಲ್ಲಿ ಮತ್ತೆ ಬ್ಯುಸಿಯಾದ ವಸಿಷ್ಠ ಸಿಂಹ

    ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ (Vasishtha Simha) ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ‘ಲವ್ ಲಿ’ (Love Li). ವಸಿಷ್ಠ  ಸಿಂಹ ಅಭಿಮಾನಿ ಬಳಗ ಕೂಡ ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಚಿತ್ರದ ಪೋಸ್ಟರ್ ಗಳಲ್ಲಿ ವಸಿಷ್ಠ ಲುಕ್ ಸಖತ್ ಇಂಪ್ರೆಸ್ ಮಾಡಿದ್ದು ‘ಲವ್ ಲಿ’ ಸಿನಿಮಾ ಅಪ್ಡೇಟ್ ಗಳೂ ನಿರೀಕ್ಷೆ ಹೆಚ್ಚಿಸಿವೆ.  ಲವ್ ಲಿ ಚಿತ್ರೀಕರಣ ಕೂಡ ಭರದಿಂದ ಸಾಗುತ್ತಿದ್ದು ಮೊದಲ ಶೆಡ್ಯೂಲ್ ಯಶಸ್ವಿಯಾಗಿ ಮುಗಿಸಿರುವ ಚಿತ್ರತಂಡ ಸೆಕೆಂಡ್ ಶೆಡ್ಯೂಲ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ.

    ನಾಗರಭಾವಿಯ ಕಿಂಗ್ಸ್ ಕ್ಲಬ್ ನಲ್ಲಿ ‘ಲವ್ ಲಿ’ ಚಿತ್ರದ ಸೆಕೆಂಡ್ ಶೆಡ್ಯೂಲ್ ಚಿತ್ರೀಕರಣ ನಡೆಯುತ್ತಿದೆ. ಇಲ್ಲಿನ ಕಿಂಗ್ಸ್ ಕ್ಲಬ್ ನಲ್ಲಿ ಆಫೀಸ್ ಸೆಟ್ ನಿರ್ಮಾಣ ಮಾಡಲಾಗಿದ್ದು ವಸಿಷ್ಠ ಸಿಂಹ, ಸಾಧುಕೋಕಿಲ (Sadhu Kokila), ನಟಿ ಸಮೀಕ್ಷಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.  ಚಿತ್ರವನ್ನು ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಇದನ್ನೂ ಓದಿ:ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

    ‘ಲವ್ ಲಿ’ ಚಿತ್ರಕ್ಕೆ ಚೇತನ್ ಕೇಶವ್ (Chetan Keshav) ನಿರ್ದೇಶನವಿದೆ. ಇದೊಂದು ಕಮರ್ಷಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು, ರೌಡಿಸಂ ಕಥಾಹಂದರವೂ ಚಿತ್ರದಲ್ಲಿದೆ. ವಸಿಷ್ಠ ಸಿಂಹನಿಗೆ ನಾಯಕಿಯಾಗಿ ಜಾರ್ಕಂಡ್ ಮೂಲದ ಸ್ಟೆಫಿ ಪಟೇಲ್ (Steffy Patel) ನಟಿಸುತ್ತಿದ್ದು, ಕೊರಿಯನ್ ವೆಬ್ ಸೀರೀಸ್, ತಮಿಳು, ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್ ಗೆ ಇದು ಮೊದಲ ಕನ್ನಡ ಸಿನಿಮಾ. ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಕೂಡ ಲವ್ ಲಿ ಚಿತ್ರತಂಡ ಸೇರಿಕೊಂಡಿದ್ದು, ಸುಬ್ಬಲಕ್ಷ್ಮಿ ಸಂಸಾರ ಸೀರಿಯಲ್ ಖ್ಯಾತಿಯ ಸಮೀಕ್ಷಾ ಲವ್ ಲಿ ಚಿತ್ರದಲ್ಲಿ ಪ್ರಮುಖ ರೋಲ್ ನಲ್ಲಿ ಮಿಂಚಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಲವ್ ಲಿ ಸಿನಿಮಾಗಾಗಿ ಕನ್ನಡಕ್ಕೆ ಬಂದ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್

    ಲವ್ ಲಿ ಸಿನಿಮಾಗಾಗಿ ಕನ್ನಡಕ್ಕೆ ಬಂದ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್

    ಸ್ಯಾಂಡಲ್ ವುಡ್  ಟ್ಯಾಲೆಂಟೆಡ್ ನಟ ವಸಿಷ್ಠ ಸಿಂಹ. ನಟನೆ ಅಂತ ಬಂದ್ರೆ ರೋಸ್ ಹಿಡಿದು ಹೀರೋ ಆಗೋಕು ರೆಡಿ, ಲಾಂಗ್ ಹಿಡಿದು ವಿಲನ್ ಆಗೋಕೂ ಸೈ, ಅಷ್ಟೇ ಅಲ್ಲ ಗಾಯನಕ್ಕೂ ಸೈ ಎನಿಸಿಕೊಂಡಿರುವ ಕಂಚಿನ ಕಂಠದ ನಟ. ಶಿವಣ್ಣನ ಜೊತೆ ಟಗರು ನಲ್ಲಿ ಚಿಟ್ಟೆಯಾಗಿ ಮಿಂಚಿದ ವಸಿಷ್ಠ ಸಿಂಹ ಸ್ಟೈಲಿಶ್ ಲುಕ್ ನಲ್ಲಿ ‘ಲವ್ ಲಿ’ ಯಾಗಿ ಕಾಣಿಸಿಕೊಳ್ಳುತ್ತಿರೋದು ನಿಮಗೆಲ್ಲ ಗೊತ್ತೇ ಇದೆ. ವಸಿಷ್ಠ ನಾಯಕ ನಟನಾಗಿ ನಟಿಸುತ್ತಿರುವ ‘ಲವ್ ಲಿ’ ಸೆಟ್ಟೇರಿ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್, ಅಪ್ ಡೇಟ್ ಗಳು ಕೂಡ ಗಮನ ಸೆಳೆಯುತ್ತಿವೆ.

    ಈ ಚಿತ್ರಕ್ಕೆ ವಸಿಷ್ಠ ಸಿಂಹ ಜೊತೆ ತೆರೆ ಹಂಚಿಕೊಳ್ಳುವರ್ಯಾರು ಎಂಬ ಕುತೂಹಲ ಎಲ್ಲರಲ್ಲಿತ್ತು. ಆ ಕುತೂಹಲಕ್ಕೀಗ ಬ್ರೇಕ್ ಬಿದ್ದಿದೆ. ವಸಿಷ್ಠ ಸಿಂಹನಿಗೆ ನಾಯಕಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ಆಯ್ಕೆಯಾಗಿದ್ದಾರೆ.  ಹಿಂದಿ, ಕೊರಿಯನ್, ತಮಿಳು ಭಾಷೆಗಳ ಸಿನಿಮಾ ಮತ್ತು ವೆಬ್ ಸಿರೀಸ್ ಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್ ಗೆ ಇದು ಮೊದಲ ಕನ್ನಡ ಸಿನಿಮಾ. ಈಗಾಗಲೇ ಸ್ಟೆಫಿ ಪಟೇಲ್ ‘ಲವ್ ಲಿ’ ಚಿತ್ರತಂಡ ಸೇರಿಕೊಂಡಿದ್ದು ಜುಲೈ 19ರಿಂದ ಚಿತ್ರದ ಸೆಕೆಂಡ್ ಶೆಡ್ಯೂಲ್ ಆರಂಭವಾಗಲಿದೆ. ವಸಿಷ್ಠ ಸಿಂಹ ಹಾಗೂ ಸ್ಟೆಫಿ ಕಾಂಬಿನೇಶನ್ ಒಳಗೊಂಡ ಪೋಸ್ಟರ್ ಜುಲೈ 21ರಂದು ಚಿತ್ರತಂಡ ರಿವೀಲ್ ಮಾಡಲಿದೆ.

    ‘ಲವ್ ಲಿ’ ಚಿತ್ರಕ್ಕೆ ಚೇತನ್ ಕೇಶವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು, ರೌಡಿಸಂ ಕಥಾಹಂದರವೂ ಚಿತ್ರದಲ್ಲಿದೆ. ಚಿತ್ರವನ್ನು  ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಹರೀಶ್ ಕೊಮ್ಮೆ ಸಂಕಲನ, ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ‘ಲವ್ ಲಿ’ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ವಸಿಷ್ಠ ಸಿಂಹನಿಗೆ ‘Love..ಲಿ’ ಅಂದ ಮಲೆನಾಡ ಬೆಡಗಿ

    ವಸಿಷ್ಠ ಸಿಂಹನಿಗೆ ‘Love..ಲಿ’ ಅಂದ ಮಲೆನಾಡ ಬೆಡಗಿ

    ನ್ನಡ ಚಿತ್ರರಂಗದ ಪ್ರತಿಭಾನ್ವಿತ ನಾಯಕಿ ಮಲೆನಾಡ ಬೆಡಗಿ ಸಮೀಕ್ಷಾ ಈಗ ಬೆಳ್ಳಿತೆರೆ ಮೇಲೆ ದಿಬ್ಬಣ ಹೋಗ್ತಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಿನಿಮಾ ಜೇಮ್ಸ್ ನಲ್ಲಿ ಜಗಮಗಿಸಿದ್ದ ಸಮೀಕ್ಷಾ ಈಗ ಚಿಟ್ಟೆಯೊಟ್ಟಿಗೆ ಮಿಂಚಲು ಸಜ್ಜಾಗಿದ್ದಾರೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ

    ಚಿಟ್ಟೆಯ ‘Love…ಲಿ’ ಸಿನಿಮಾದಲ್ಲಿ ಸಮೀಕ್ಷಾ ವಸಿಷ್ಠ ಸಿಂಹ ನಾಯಕನಾಗಿ ಬಣ್ಣ ಹಚ್ಚಿರುವ ಮತ್ತೊಂದು‌ ಬಹುನಿರೀಕ್ಷಿತ ಸಿನಿಮಾ love..ಲಿ ಇತ್ತೀಚೆಗಷ್ಟೇ ಸಿನಿಮಾದ ಮುಹೂರ್ತ ನೆರವೇರಿದ್ದು, ಈಗ ಚಿತ್ರತಂಡ ಪಾತ್ರವೊಂದನ್ನು ಪರಿಚಯಿಸ್ತಿದೆ. ಗಣೇಶ್ ಹಾಗೂ ಭಾವನಾ ನಟನೆಯ 99 ಸಿನಿಮಾ, ಫ್ಯಾನ್, ಜೇಮ್ಸ್ ಸಿನಿಮಾದಲ್ಲಿ ಅಭಿನಯಿಸಿದ್ದ ಸಮೀಕ್ಷಾ ಈಗ love…ಲಿ ಸಿನಿಮಾದಲ್ಲಿ ಬಣ್ಣ ಹಚ್ಚಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. Love..ಲಿ ಸಿನಿಮಾದಲ್ಲಿ‌ ಸಮೀಕ್ಷಾ ಕಾರ್ಪೋರೇಟ್ ಹುಡ್ಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ : ಸುದೀಪ್ ಸರಣಿ ಟ್ವಿಟ್ ಗೆ ತಪ್ಪಾಗಿ ತಿಳ್ಕೊಂಡಿದ್ದೆ ಎಂದ ಅಜಯ್ ದೇವಗನ್

    ಅಂದಹಾಗೇ love..ಲಿ ಸಿನಿಮಾ ರೋಮ್ಯಾಂಟಿಕ್,ಲವ್ ಸ್ಟೋರಿ ಸಿನಿಮಾವಾಗಿದ್ದು, ಚೇತನ್ ಕೇಶವ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಎಂ ಆರ್ ರವೀಂದ್ರ ಕುಮಾರ್ ನಿರ್ಮಾಣ, ಅನೂಪ್ ಸೀಳಿನ್ ಸಂಗೀತ, ಅಶ್ವಿನ್ ಕೆನೆಡಿ ಛಾಯಾಗ್ರಹಣ ಸಿನಿಮಾಕ್ಕಿದೆ.