Tag: ಲಷ್ಕರ್

  • ಎನ್‌ಕೌಂಟರ್‌ಗೆ ಲಷ್ಕರ್‌ ಟಾಪ್‌ ಉಗ್ರ ಬಲಿ

    ಎನ್‌ಕೌಂಟರ್‌ಗೆ ಲಷ್ಕರ್‌ ಟಾಪ್‌ ಉಗ್ರ ಬಲಿ

    ಶ್ರೀನಗರ: ಪಹಲ್ಗಾಮ್‌ ದಾಳಿಯ ನಂತರ ಉಗ್ರರನ್ನು ಮಟ್ಟ ಹಾಕುವ ಕಾರ್ಯಾಚರಣೆ ತೀವ್ರಗೊಂಡಿದ್ದು ಜಮ್ಮು ಕಾಶ್ಮೀರದ (Jammu Kashmir) ಬಂಡಿಪೋರಾದಲ್ಲಿ ಲಷ್ಕರ್-ಎ-ತೈಬಾ (Lashkar-e-Taiba) ಟಾಪ್‌ ಕಮಾಂಡರ್‌ನನ್ನು (Top Commander) ಭದ್ರತಾ ಪಡೆಗಳು ಹತ್ಯೆ ಮಾಡಿವೆ.

    ಅಲ್ತಾಫ್ ಲಲ್ಲಿ ಟಾಪ್‌ ಕಮಾಂಡರ್‌ ಆಗಿದ್ದು ಉಗ್ರ ಕೃತ್ಯಗಳಿಗೆ ಸಹಕಾರ ನೀಡುತ್ತಿದ್ದ. ಅರಣ್ಯದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ ಬೆಳಗ್ಗೆ ಜಂಟಿ ಕಾರ್ಯಾಚರಣೆ ನಡೆಯಿತು. ಈ ಎನ್‌ಕೌಂಟರ್‌ನಲ್ಲಿ ಅಲ್ತಾಫ್‌ ಲಲ್ಲಿ ಹತ್ಯೆಯಾಗಿದ್ದಾನೆ.  ಇದನ್ನೂ ಓದಿ: ಮಂಗಳೂರಲ್ಲಿ ಪಹಲ್ಗಾಮ್ ದಾಳಿ ಸಮರ್ಥಿಸಿಕೊಂಡ ದುಷ್ಟ – ಪೊಲೀಸರಿಂದ ಕಿಡಿಗೇಡಿಗಾಗಿ ಹುಡುಕಾಟ

     

    ಈ ಕಾರ್ಯಾಚರಣೆ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶ್ರೀನಗರಕ್ಕೆ ಇಂದು ಆಗಮಿಸಿದ್ದು ಅವರಿಗೆ ಕಾರ್ಯಾಚರಣೆಯ ವಿವರ ನೀಡಲಾಯಿತು.

    ಗುರುವಾರ ಬಿಹಾರದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಹಲ್ಗಾಮ್‌ ದಾಳಿ ಮಾಡಿದವರು ಮತ್ತು ದಾಳಿಯ ಹಿಂದೆ ಇರುವವರು ಊಹೆ ಮಾಡದ ರೀತಿ ನಾವು ಪ್ರತಿಕ್ರಿಯೆ ನೀಡುತ್ತೇವೆ ಎಂದು ಗುಡುಗಿದ್ದರು.

  • ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿ

    ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿ

    ಇಸ್ಲಾಮಾಬಾದ್‌: ಭಾರತಕ್ಕೆ (India) ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ಉಗ್ರ ಪಾಕಿಸ್ತಾನದ (Pakistan) ಕರಾಚಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ.

    ನಿಷೇಧಿತ ಲಷ್ಕರ್‌-ಇ-ತೊಯ್ಬಾ (Lashkar-e-Taiba) ಸಂಘಟನೆಯ ಸ್ಥಾಪಕ ಸದಸ್ಯ ಉಗ್ರ ಖೈಸರ್ ಫಾರೂಕ್ (Qaiser Farooq) ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ.

    ಕರಾಚಿಯ ಬೀದಿಯಲ್ಲಿ ಇತರ ವ್ಯಕ್ತಿಗಳ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಫಾರೂಕ್‌ ಮೇಲೆ ದಾಳಿ ನಡೆದಿದೆ. ಈತ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್‌ ಸಯೀದ್‌ನ (Hafiz Saeed) ಆಪ್ತ ಸಹಾಯಕನಾಗಿದ್ದ. ಇದನ್ನೂ ಓದಿ: ಭಾರತಕ್ಕೆ ಬೇಕಿದ್ದ ಮೋಸ್ಟ್‌ ವಾಂಟೆಡ್‌ ಖಲಿಸ್ತಾನಿ ಉಗ್ರ ಗುಂಡಿನ ದಾಳಿಗೆ ಬಲಿ

    ಮಂಗಳವಾರ ಹಫೀಜ್‌ ಸಯೀದ್‌ ಪುತ್ರ ಕಮಾಲುದ್ದೀನ್ ಸಯೀದ್‌ನನ್ನು ಅಪಹರಣ ಮಾಡಲಾಗಿತ್ತು. ಪೇಶಾವರದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕಮಾಲುದ್ದೀನ್ ಸಯೀದ್‌ನನ್ನು ಅಪಹರಣ ಮಾಡಿದ್ದರು. ಇಲ್ಲಿಯವರೆಗೆ ಕಮಾಲುದ್ದೀನ್‌ ಸಯೀದ್‌ ಎಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಆತನನ್ನು ಹತ್ಯೆ ಮಾಡಲಾಗಿದೆ ಎಂಬ ವಿಚಾರ ಚರ್ಚೆ ಆಗುತ್ತಿದೆ.

    ಮುಂಬೈ ದಾಳಿ:
    2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ (LeT) ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು.

    ಛತ್ರಪತಿ ಶಿವಾಜಿ ಟರ್ಮಿನಸ್ (CST) ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬುದ್ಗಾಮ್ ಕೋರ್ಟ್‌ ಸಂಕೀರ್ಣದ  ಬಳಿ  ಎನ್‌ಕೌಂಟರ್‌ – ಇಬ್ಬರು ಉಗ್ರರ ಹತ್ಯೆ

    ಬುದ್ಗಾಮ್ ಕೋರ್ಟ್‌ ಸಂಕೀರ್ಣದ ಬಳಿ ಎನ್‌ಕೌಂಟರ್‌ – ಇಬ್ಬರು ಉಗ್ರರ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu-Kashmir) ಬುದ್ಗಾಮ್ ಜಿಲ್ಲೆಯ ನ್ಯಾಯಾಲಯ ಸಂಕೀರ್ಣದ ಬಳಿ ನಡೆದ ಎನ್‌ಕೌಂಟರ್‌ನಲ್ಲಿ (Encounter) ಇಬ್ಬರು ಲಷ್ಕರ್-ಎ-ತೊಯ್ಬಾ (Lashkar-e-Toiba) ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

    ಬಡ್ಗಾಮ್ ಮೂಲಕ ಭಯೋತ್ಪಾದಕರ ಚಲನೆಯ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಸೇನೆ ಮತ್ತು ಪೊಲೀಸರು ಜಂಟಿಯಾಗಿ ನ್ಯಾಯಾಲಯದ ಸಂಕೀರ್ಣದ ಬಳಿ ಒಂದು ಶಂಕಿತ ವಾಹನವನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ.

    ಈ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿ ಇಬ್ಬರು ಉಗ್ರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು  ತಿಳಿಸಿದ್ದಾರೆ. ಇದನ್ನೂ ಓದಿ: ಇಂಗ್ಲಿಷ್‌ ಪದವೀಧರೆ ಈಗ ಚಾಯ್‌ವಾಲಿ – ಯುವತಿ ಭವಿಷ್ಯದ ಕನಸಿಗೆ ಜನರ ಮೆಚ್ಚುಗೆ

    ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಮಾತನಾಡಿ, ಹತ್ಯೆಗೀಡಾದ ಉಗ್ರರು ನಿಷೇಧಿತ ಲಷ್ಕರ್-ಎ-ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದರು. ಅವರನ್ನು ಪುಲ್ವಾಮಾ ಜಿಲ್ಲೆಯ ಅರ್ಬಾಜ್ ಮಿರ್ ಮತ್ತು ಶಾಹಿದ್ ಶೇಖ್ ಎಂದು ಗುರುತಿಸಲಾಗಿದೆ. ಮಗಮ್ ಪ್ರದೇಶದಲ್ಲಿ ಕಳೆದ ವಾರ ನಡೆದ ಶೋಧ ಕಾರ್ಯಾಚರಣೆಯಿಂದ ಇಬ್ಬರೂ ಭಯೋತ್ಪಾದಕರು ತಪ್ಪಿಸಿಕೊಂಡಿದ್ದರು ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಲಷ್ಕರ್ ಉಗ್ರ ಅಬು ದುಜಾನಾ ನನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಲಷ್ಕರ್ ಉಗ್ರ ಅಬು ದುಜಾನಾ ನನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಬಳಿಯ ಹಕ್ರೀಪುರದಲ್ಲಿ ಇಂದು ಬೆಳಿಗ್ಗೆ ನಡೆದ ಎನ್‍ಕೌಂಟರ್‍ನಲ್ಲಿ ಲಷ್ಕರ್ ಸಂಘಟನೆಯ ಉಗ್ರ ಅಬು ದುಜಾನಾ ಹಾಗೂ ಆತನ ಸಹಚರನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

    ಆರಿಫ್ ಲಲಿಹಾರಿ ಹಾಗೂ ಮತ್ತಿಬ್ಬರು ಉಗ್ರರ ಜೊತೆ ದುಜಾನಾ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ. ಇಂದು ಮುಂಜಾನೆ 3 ಗಂಟೆ ವೇಳೆಗೆ ಭದ್ರತಾ ಪಡೆ ಮನೆಯನ್ನ ಸುತ್ತುವರಿದಿತ್ತು. ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಸೇನೆಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು. ಸೇನೆ ಕಾರ್ಯಾಚರಣೆ ನಡೆಸಲು ಬಂದ ವೇಳೆ ಉಗ್ರರು ಗುಂಡಿನ ದಾಳಿ ಆರಂಭಿಸಿದ್ರು. ನಂತರ ಭದ್ರತಾ ಪಡೆ ಪ್ರತಿ ದಾಳಿ ನಡೆಸಿ ಉಗ್ರರನ್ನು ಹತ್ಯೆ ಮಾಡಿದೆ.

    ಪಾಕಿಸ್ತಾನದಲ್ಲಿ ಜನಿಸಿದ ದುಜಾನಾ ಕಾಶ್ಮೀರ ಕಣಿವೆಯಲ್ಲಿ ಲಷ್ಕರ್ ಕಮಾಂಡರ್ ಆಗಿದ್ದ. ಆದ್ರೆ ಕೆಲವು ತಿಂಗಳ ಹಿಂದೆ ಸಂಘಟನೆಯಲ್ಲಿ ಜಗಳವಾಗಿ ಆತನನ್ನು ಕೆಳಗಿಳಿಸಲಾಗಿತ್ತು.

    ಭದ್ರತಾ ಪಡೆ ಹಾಗೂ ಸಾರ್ವಜನಿಕರ ಮೇಲಿನ ದಾಳಿಗೆ ಸಂಬಂಧಿಸಿದಂತೆ ಸುಮಾರು 30ಕ್ಕೂ ಹೆಚ್ಚು ಪ್ರಕರಣಗಳಲ್ಲಿ ದುಜಾನಾ ಬೇಕಾಗಿದ್ದ. ಆತನ ತಲೆಗೆ 15 ಲಕ್ಷ ರೂ. ಬಹುಮಾನ ಕೂಡ ಘೋಷಿಸಲಾಗಿತ್ತು.

    ಸದ್ಯಕ್ಕೆ ಕಾರ್ಯಾಚರಣೆ ಮುಗಿದಿದ್ದು, ಉಗ್ರರ ಮೃತದೇಹಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.