Tag: ಲಷ್ಕರ್‌ ತೈಬಾ

  • ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

    ಮೂವರು ಶಂಕಿತ ಉಗ್ರರ ಬಂಧನ ಕೇಸ್‌ – ಬೆಂಗ್ಳೂರಲ್ಲಿ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಉಗ್ರ ನಾಸೀರ್

    – ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದಲ್ಲೂ ನಾಸೀರ್‌ ಕೈವಾಡ
    – ಶಂಕಿತರಿಗೆ ಸಿಮ್‌ ಕಾರ್ಡ್‌ ನೀಡಿದ್ದ ಆರೋಪ; ಏರ್‌ಟೆಲ್‌ ಮಾಜಿ ಉದ್ಯೋಗಿಗೆ ನೋಟಿಸ್‌

    ಬೆಂಗಳೂರು: ಜೈಲಿನಿಂದಲೇ ಕರ್ನಾಟಕ ಸೇರಿ ದೇಶದ ವಿವಿಧೆಡೆ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು (Bengaluru) ಮತ್ತು ಕೋಲಾರದ (Kolara) 5 ಕಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ (NIA) ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಿಎಆರ್‌ ಪೊಲೀಸ್‌ ಅಧಿಕಾರಿ ಸೇರಿ ಮೂವರು ಶಂಕಿತ ಉಗ್ರರರನ್ನ ಬಂಧಿಸಿದೆ.

    ಶಂಕಿತ ಉಗ್ರರನ್ನು ಇಂದು ಕೋರ್ಟ್‌ಗೆ ಹಾಜರುಪಡಿಸಿರುವ ಎನ್‌ಐಎ ಅಧಿಕಾರಿಗಳ ತಂಡ, 14 ದಿನಗಳ ಕಾಲ ಕಸ್ಟಡಿಗೆ ಪಡೆಯಲು ಮುಂದಾಗಿದೆ. ಈ ಮಧ್ಯೆ ಉಗ್ರ ಟಿ.ನಾಸೀರ್ ಕುರಿತು ಹಲವು ಸ್ಫೋಟಕ ವಿಚಾರಗಳನ್ನು ಬಯಲಿಗೆಳೆದಿದೆ. ಇದನ್ನೂ ಓದಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ- ಬೆಂಗಳೂರಿನಿಂದ ಕಲಬುರಗಿಗೆ ಕರೆತಂದು ಪ್ರಾಣಸ್ನೇಹಿತನ ಹತ್ಯೆ

    ಜೈಲಿನಲ್ಲಿದ್ದುಕೊಂಡೇ ಉಗ್ರ ಕೃತ್ಯಕ್ಕೆ ಸಂಚು
    2023ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೇಡ್‌ಗಳು ಪತ್ತೆಯಾಗಿದ್ದವು. ಜೀವಂತ ಗ್ರೆನೇಡನ್ನು ತರಲು ಟಿ.ನಾಸೀರ್ ಸೂಚಿಸಿದ್ದ. ಜುನೈದ್ ಮೂಲಕ ಇದನ್ನು ತರಿಸಿದ್ದ. ಬಳಿಕ ನಾಸೀರ್‌ನನ್ನು ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸಿತ್ತು. ಈಗಾಗಲೇ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ನಾಸೀರ್‌ ಜೈಲಿನಲ್ಲಿದ್ದಾನೆ. ಭಯೋತ್ಪಾದನೆ ಬಗ್ಗೆ ಯುವಜನರ ಮೈಂಡ್‌ ವಾಶ್‌ ಮಾಡೋದ್ರಲ್ಲಿ ನಿಸ್ಸೀಮನಾಗಿದ್ದ ನಾಸೀರ್‌, ಹಲವು ಯುವಜನರನ್ನ ಉಗ್ರ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾನೆ ಎಂದೂ ಸಹ ಎನ್‌ಐಎ ತನಿಖೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ

    ಅಲ್ಲದೇ ಜೈಲಿನಲ್ಲಿದ್ದುಕೊಂಡೇ ಉಗ್ರ ಚಟುವಟಿಕೆಗಳ ಬಗ್ಗೆ ಪ್ಲ್ಯಾನ್‌ ಮಾಡಿದ್ದ. 2008ರ ಸರಣಿ ಬಾಂಬ್ ಸ್ಫೋಟ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ, ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ, ರಾಮೇಶ್ವರಂ ಕೆಫೆ ಬ್ಲಾಸ್ಟ್ ಸೇರಿ ಹಲವು ಪ್ರಕರಣಗಳಲ್ಲಿ ನಾಸೀರ್‌ ಕೈವಾಡ ಇದೆ. ಅಷ್ಟೇ ಅಲ್ಲ ಬೆಂಗಳೂರಿನಲ್ಲಿ ದೊಡ್ಡಮಟ್ಟದ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್‌ ಮಾಡಿದ್ದ ಅನ್ನೋದು ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ.

    ಇನ್ನೂ ಉಗ್ರ ಕೃತ್ಯಕ್ಕೆ ನಾಸೀರ್‌ ಜುನೈದ್, ಮೊಹಮ್ಮದ್ ಹರ್ಷದ್ ಖಾನ್, ಸುಹೈಲ್, ಫೈಜಲ್, ಜಾಹಿದ್ ತಬ್ರೇಜ್, ಮುದಾಸಿರ್ ಎಂಬ ಯುವಕರ ತಂಡವನ್ನೂ ರೆಡಿ ಮಾಡಿದ್ದ. ಆದ್ರೆ ಜೀವಂತ ಗ್ರೆನೇಡ್‌ಗಳು, ಪಿಸ್ತೂಲ್‌ಗಳು, ಸ್ಫೋಟಕ ವಸ್ತುಗಳ ಸಮೇತ ತಂಡ ಸಿಕ್ಕಿಬಿದ್ದಿತ್ತು. ಈ ಐವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಳಿಕ ಎನ್‌ಐಎ ಈ ಪ್ರಕರಣದ ಹೊಣೆ ವಹಿಸಿಕೊಂಡಿತು. ಸದ್ಯ ಮೂವರನ್ನು ಬಂಧಿಸಿರುವ ಎನ್‌ಐಎ, ಬಂಧಿತರಿಂದ ಒಂದಷ್ಟು ಹಣ, ಸಂವಹನಕ್ಕೆ ಬಳಸುತ್ತಿದ್ದ ವಾಕಿಟಾಕಿ ಸೇರಿ ಹಲವು ವಸ್ತುಗಳು ವಶಕ್ಕೆ ಪಡೆದುಕೊಂಡಿದೆ. ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ FIR – ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡ ಬಳಿಕ ಪೊಲೀಸರ ಕ್ರಮ

    ಏರ್‌ಟೆಲ್‌ ಮಾಜಿ ಉದ್ಯೋಗಿಗೆ ನೋಟಿಸ್‌
    ಇನ್ನೂ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ತಾಲ್ಲೂಕು ಭಟ್ರಹಳ್ಳಿ ಗ್ರಾಮದ ಸತೀಶ್ ಗೌಡ ಎಂಬಾತನಿಗೆ ಎನ್‌ಐಎ ನೋಟಿಸ್‌ ನೀಡಿದೆ. ಶಂಕಿತರಿಗೆ ಸಿಮ್‌ ಕಾರ್ಡ್‌ ನೀಡಿದ ಆರೋಪದ ಮೇಲೆ ಸತೀಶ್‌ ಗೌಡಗೆ ನೋಟಿಸ್‌ ನೀಡಲಾಗಿದೆ. ಸತೀಶ್‌ ಮನೆಯಲ್ಲಿ ಇಲ್ಲದ ಕಾರಣ ಕಾರಣ ಕುಟುಂಬಸ್ಥರಿಗೆ ನೋಟೀಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಅಧಿಕಾರಿಗಳು. ಮೂರು ವರ್ಷಗಳ ಹಿಂದೆ ಸತೀಶ್‌ಗೌಡ ಏರ್‌ಟೆಲ್‌ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಈ ಕೆಲಸ ಮಾಡಿರುವುದಾಗಿ ಸಂಶಯ ವ್ಯಕ್ತವಾಗಿದೆ.

  • ಪರಪ್ಪನ ಅಗ್ರಹಾರ ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರು ಶಂಕಿತ ಉಗ್ರರ ಬಂಧನ

    ಪರಪ್ಪನ ಅಗ್ರಹಾರ ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರು ಶಂಕಿತ ಉಗ್ರರ ಬಂಧನ

    * ಬೆಂಗಳೂರು, ಕೋಲಾರದಲ್ಲಿ ಎನ್‌ಐಎ ಬೇಟೆ
    * 2023ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೇಡ್‌ ಪತ್ತೆ ಪ್ರಕರಣದಲ್ಲಿ ನಡೆದಿತ್ತು ಶೋಧ

    ಬೆಂಗಳೂರು: ಎಲ್‌ಇಟಿ ಭಯೋತ್ಪಾದಕ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಕೋಲಾರದಲ್ಲಿ ಕಾರ್ಯಾಚರಣೆ ನಡೆಸಿದ ಎನ್‌ಐಎ, ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರನ್ನು ಬಂಧಿಸಿದೆ.

    ಬೆಂಗಳೂರಿನ ಪರಪ್ಪನ ಅಗ್ರಹಾರದ ಮನೋವೈದ್ಯ ಡಾ. ನಾಗರಾಜ್, ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಚಾನ್ ಪಾಷಾ ಮತ್ತು ತಲೆಮರೆಸಿಕೊಂಡಿರುವ ಆರೋಪಿಯ ತಾಯಿ ಅನೀಸ್ ಫಾತಿಮಾರನ್ನು ಬಂಧಿಸಲಾಗಿದೆ. ಶೋಧನಾ ಸಮಯದಲ್ಲಿ, ಬಂಧಿತ ಆರೋಪಿಗಳು ಮತ್ತು ಇತರ ಶಂಕಿತರ ಮನೆಗಳಿಂದ ವಿವಿಧ ಡಿಜಿಟಲ್ ಸಾಧನಗಳು, ನಗದು, ಚಿನ್ನ ಮತ್ತು ಅಪರಾಧ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

    2023 ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೈಡ್‌ಗಳು ಪತ್ತೆಯಾಗಿದ್ದವು. ಜೀವಂತ ಗ್ರೆನೇಡನ್ನು ತರಲು ಟಿ.ನಾಸೀರ್ ಸೂಚಿಸಿದ್ದ. ಜುನೈದ್ ಮೂಲಕ ಇದನ್ನು ತರಿಸಿದ್ದ. ಬಳಿಕ ನಾಸೀರ್‌ನನ್ನು ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸಿತ್ತು. ಈಗಾಗಲೇ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ನಾಸೀರ್‌ ಜೈಲಿನಲ್ಲಿದ್ದಾನೆ.

    ಕೋರ್ಟ್‌ಗಳಲ್ಲಿ ಹಣ ಎಕ್ಸ್‌ಚೇಂಜ್ ಮಾಡಲು‌ ಎಎಸ್‌ಐ ಚಾನ್‌ ಪಾಷಾ ಸಹಾಯ ಮಾಡಿದ್ದ. ನಾಸೀರ್ ವೈದ್ಯರಿಂದ ಮೊಬೈಲ್‌ ಪಡೆಯುತ್ತಿದ್ದ. ಜೀವಂತ ಗ್ರೆನೇಡ್‌ ಕೇಸ್‌ನಲ್ಲಿ ಜುನೈದ್‌ ಎಸ್ಕೇಪ್‌ ಆಗಿದ್ದಾನೆ.

  • ಮನೆಯ ಒಳಗಡೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಲಷ್ಕರ್‌ ಉಗ್ರನಿಗೆ ಗುಂಡೇಟು!

    ಮನೆಯ ಒಳಗಡೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಲಷ್ಕರ್‌ ಉಗ್ರನಿಗೆ ಗುಂಡೇಟು!

    ಇಸ್ಲಾಮಾಬಾದ್‌: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (LeT) ಸಹ-ಸಂಸ್ಥಾಪಕ, ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಹಫೀಜ್‌ ಸಯೀದ್ ಆಪ್ತ ಅಮೀರ್ ಹಮ್ಜಾ (Amir Hamza) ಲಾಹೋರ್‌ನಲ್ಲಿರುವ ನಿವಾಸದಲ್ಲೇ ಗಂಭೀರ ಗಾಯಗೊಂಡಿದ್ದಾನೆ.

    ಎಲ್‌ಇಟಿಯ 17 ಸ್ಥಾಪಕ ಸದಸ್ಯರಲ್ಲಿ ಒಬ್ಬನಾದ 66 ವರ್ಷದ ಹಮ್ಜಾಗೆ ಮನೆಯಲ್ಲಿ ಇರುವಾಗಲೇ ಗಾಯವಾಗಿದ್ದು, ಈಗ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI) ಭದ್ರತೆಯಲ್ಲಿ  ಲಾಹೋರ್‌ನಲ್ಲಿರುವ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪಾಕ್ ಮತ್ತೆ ಸವಾಲು ಹಾಕಿದ್ರೆ, ನಾವು ಮಾತಿನಿಂದಲ್ಲ.. ಬೆಂಕಿ, ರಾಷ್ಟ್ರದ ದೃಢ ಸಂಕಲ್ಪದೊಂದಿಗೆ ಪ್ರತಿಕ್ರಿಯಿಸ್ತೇವೆ – ಮುದಿತ್ ಮಹಾಜನ್

    ಗಂಭೀರವಾಗಿ ಗಾಯಗೊಂಡಿದ್ದು ಹೇಗೆ ಎನ್ನುವ ಪ್ರಶ್ನೆಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ಮನೆ ಒಳಗಡೆ ಅಪರಿಚಿತ ವ್ಯಕ್ತಿ ಪ್ರವೇಶಿಸಿ ಗುಂಡಿನ ದಾಳಿ ನಡೆಸಿದ್ದರಿಂದ ಗಂಭೀರವಾಗಿ ಗಾಯಗೊಂಡಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದೆ.

    ಆಸ್ಪತ್ರೆಗೆ ದಾಖಲಾದ ನಂತರ ಹಮ್ಜಾಗೆ ಚಿಕಿತ್ಸೆ ನೀಡುತ್ತಿರುವ ವಿಡಿಯೋ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ಬಿಳಿ ಉಡುಪಿನ ಮೇಲೆ ರಕ್ತದ ಕಲೆಗಳು ಇರುವುದನ್ನು ಗಮನಿಸಬಹುದು. ಇದನ್ನೂ ಓದಿ: ಕೇಂದ್ರ ಗುಪ್ತಚರ ಇಲಾಖೆ ಮುಖ್ಯಸ್ಥರ ಅವಧಿ 1 ವರ್ಷ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

    ಪ್ರಚೋದನಕಾರಿ ಭಾಷಣಕ್ಕೆ ಹೆಸರುವಾಸಿಯಾಗಿರುವ ಅಮೀರ್ ಹಮ್ಜಾ ಎಲ್‌ಇಟಿ ಮುಖವಾಣಿಯ ಸಂಪಾದಕನಾಗಿಯೂ ಕೆಲಸ ಮಾಡಿದ್ದ. ಈತ ಎಲ್‌ಇಟಿಯ ಕೇಂದ್ರ ಸಮಿತಿಯಲ್ಲಿ ಸೇವೆ ಸಲ್ಲಿಸಿದ್ದ. ಬಂಧಿತ ಉಗ್ರರ ಬಿಡುಗಡೆಗಾಗಿ ನಿಧಿಸಂಗ್ರಹಣೆ, ನೇಮಕಾತಿ ಮತ್ತು ಮಾತುಕತೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದ.

    ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗುಜ್ರಾನ್‌ವಾಲಾ ಮೂಲದ ಹಮ್ಜಾನನ್ನು ಆಗಸ್ಟ್ 2012 ರಲ್ಲಿ ಅಮೆರಿಕ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿದೆ.

    2005ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಲಷ್ಕರ್-ಎ-ತೊಯ್ದಾ ಭಯೋತ್ಪಾದಕ ರಜವುಲ್ಲಾ ನಿಜಾಮಿ ಅಲಿಯಾಸ್ ಅಬು ಸೈಯುಲ್ಲಾನನ್ನು ಪಾಕಿಸ್ತಾನದ ಸಿಂದ್ ಪ್ರಾಂತ್ಯದಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಭಾನುವಾರ ಹತ್ಯೆ ಮಾಡಿದ್ದರು.