Tag: ಲಹರಿ ಮ್ಯೂಸಿಕ್

  • ಸುದೀಪ್ ಅಳಿಯನ ‘ಜಿಮ್ಮಿ’ ಚಿತ್ರದ ಕ್ಯಾರೆಕ್ಟರ್ ಗ್ಲಿಂಪ್ಸ್ ಮೇಕಿಂಗ್ ವಿಡಿಯೋ ರಿಲೀಸ್

    ಸುದೀಪ್ ಅಳಿಯನ ‘ಜಿಮ್ಮಿ’ ಚಿತ್ರದ ಕ್ಯಾರೆಕ್ಟರ್ ಗ್ಲಿಂಪ್ಸ್ ಮೇಕಿಂಗ್ ವಿಡಿಯೋ ರಿಲೀಸ್

    ಕಿಚ್ಚ ಸುದೀಪ್ (Sudeep) ಅವರ ಸಹೋದರಿಯ ಮಗ ಸಂಚಿತ್ ನಟಿಸಿ, ನಿರ್ದೇಶನ ಮಾಡುತ್ತಿರುವ ಜಿಮ್ಮಿ (Jimmy) ಸಿನಿಮಾದ ಕ್ಯಾರೆಕ್ಟರ್ (Character Glimpses) ಗ್ಲಿಂಪ್ಸ್ ಮೇಕಿಂಗ್ ವಿಡಿಯೋ ಇಂದು ರಿಲೀಸ್ ಆಗಿದೆ. ವಿಡಿಯೋ ತುಣುಕೊಂದನ್ನು ಲಹರಿ ಮ್ಯೂಸಿಕ್ (Lahari Music) ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ಸಂಚಿತ್ ಚೆನ್ನಾಗಿ ಕಾಣಿಸಿಕೊಂಡಿದ್ದಾರೆ. ಪಕ್ಕಾ ತಯಾರಿ ಮಾಡಿಕೊಂಡೇ ಈ ಸಿನಿಮಾ ಮಾಡುತ್ತಿರುವುದು ಆ ವಿಡಿಯೋದಿಂದ ಗೊತ್ತಾಗುತ್ತದೆ.

    ಶೂಟಿಂಗ್ ಸಮಯದಲ್ಲಿ ತಾತ, ಅಜ್ಜಿ, ತಾಯಿ ಮತ್ತು ಸುದೀಪ್ ಮಗಳು ಕೂಡ ಹಾಜರಿದ್ದು, ಸಂಚಿತ್ ಗೆ ಪ್ರೋತ್ಸಾಹಿಸುತ್ತಿರುವ ವಿವರಗಳು ಕೂಡ ವಿಡಿಯೋದಲ್ಲಿ ಲಭ್ಯವಿದೆ. ಸಾಹಸ ಸನ್ನಿವೇಶವೊಂದನ್ನು ಚಿತ್ರೀಕರಿಸುವ ದೃಶ್ಯ ಕೂಡ ವಿಡಿಯೋದಲ್ಲಿದೆ. ಸಖತ್ತಾಗಿರುವ ಲೈಟಿಂಗ್ ಮತ್ತು ಡೈರೆಕ್ಷನ್ ಅನ್ನು ಅದು ಒಳಗೊಂಡಿದೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

    ಸಕಲ ತಯಾರಿಯೊಂದಿಗೆ ಸಂಚಿತ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ವಿಶೇಷ ಅಂದ್ರೆ ತಾವು ನಟಿಸುವ ಚೊಚ್ಚಲ ಚಿತ್ರವನ್ನು ತಾವೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಜೊತೆ ಕೆ.ಪಿ ಶ್ರೀಕಾಂತ್, ಮನೋಹರ್ ನಾಯ್ಡು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

    ತಮ್ಮ ಮೊದಲ ಸಿನಿಮಾದಲ್ಲೇ ನಟನೆಯ ಜೊತೆ ನಿರ್ದೇಶನ (Direction) ಕೂಡ ಸಂಚಿತ್ ಮಾಡ್ತಿದ್ದಾರೆ. ಮೂಲಕ ಚಿತ್ರರಂಗಕ್ಕೆ ಯುವನಟ ಸಂಚಿತ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಇದೊಂದು ಕ್ರೈಂ ಡ್ರಾಮಾ ಆಧರಿಸಿದ ಸಿನಿಮಾವಾಗಿದ್ದು, ತಂದೆಮಗನ ಬಾಂಧವ್ಯವನ್ನು ಸಾರುವ ಕಥೆಯನ್ನು ಚಿತ್ರದ ಮೂಲಕ ತೋರಿಸಲಿದ್ದಾರೆ.

     

    ಲಹರಿ ಸಂಸ್ಥೆಯ (Lahari Films) ಮನೋಹರ್ ನಾಯ್ಡು, ವೀನಸ್ ಮೂವಿಸ್ ಕೆ. ಪಿ ಶ್ರೀಕಾಂತ್ ಈಗಾಗಲೇ 2 ಸಿನಿಮಾ ನಿರ್ಮಿಸ್ತಿದ್ದಾರೆ. ಉಪೇಂದ್ರ ನಟನೆಯಯುಐಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇನ್ನು ಸೆಟ್ಟೇರಿ ನಿಂತೇ ಹೋಗಿದ್ದ ವಿನಯ್ ರಾಜ್ಕುಮಾರ್ ನಟನೆಯಗ್ರಾಮಾಯಣಮರುಜೀವ ಕೊಟ್ಟಿದ್ದಾರೆ. ನಂತರ ಸಂಚಿತ್ ನಟನೆಯ ಚಿತ್ರಕ್ಕೆ ಜೋಡಿ ಬಂಡವಾಳ ಹೂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Special- ‘ಆಸ್ಕರ್’ ಬೆನ್ನಲ್ಲೇ ಮತ್ತೆ 50 ಲಕ್ಷ ಜನ ‘ನಾಟು ನಾಟು’ ವೀಡಿಯೋ ನೋಡಿದ್ರು

    Special- ‘ಆಸ್ಕರ್’ ಬೆನ್ನಲ್ಲೇ ಮತ್ತೆ 50 ಲಕ್ಷ ಜನ ‘ನಾಟು ನಾಟು’ ವೀಡಿಯೋ ನೋಡಿದ್ರು

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ‘ಆರ್.ಆರ್.ಆರ್’ (R.R.R) ಸಿನಿಮಾದ ‘ನಾಟು ನಾಟು’ (Natu Natu) ಹಾಡಿಗೆ ಆಸ್ಕರ್ (Oscar) ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಈ ಹಾಡನ್ನು ನೋಡಿದವರ ಸಂಖ್ಯೆ 50 ಲಕ್ಷ ದಾಟಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶಿಗರು ಕೂಡ ಈ ಹಾಡನ್ನು ಹುಡುಕಿ ವೀಕ್ಷಿಸಿದ್ದಾರೆ. ಕಳೆದ ನಲವತ್ತೆಂಟು ಗಂಟೆಯಲ್ಲಿ 55 ಲಕ್ಷಕ್ಕೂ ಹೆಚ್ಚು ಜನರು ಈ ಹಾಡನ್ನು ವೀಕ್ಷಿಸಿದ್ದರೆ, 24 ಗಂಟೆಯಲ್ಲಿ 35 ಲಕ್ಷಕ್ಕೂ ಹೆಚ್ಚು ಜನರು ಈ ಹಾಡನ್ನು ಕಣ್ತುಂಬಿಕೊಂಡಿದ್ದಾರೆ.

    ನಿನ್ನೆ ಬೆಳಗ್ಗೆ (ಮಾರ್ಚ್ 13) ಲಹರಿ ಚಾನೆಲ್ (Lahari Music) ನಲ್ಲಿ 125 ಮಿಲಿಯನ್ ವೀಕ್ಷಣೆ ಇತ್ತು. ಈಗಿನವರೆಗೆ 128 ಮಿಲಿಯನ್ ಆಗಿದೆ. ಈ ಕುರಿತು ಮಾಹಿತಿಯನ್ನು ಹಂಚಿಕೊಂಡ ಲಹರಿ ಸಂಸ್ಥೆಯ ವೇಲು, ‘ನಾಟು ನಾಟು ಹಾಡು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿದೆ. ಟಿ ಸೀರಿಸ್ ಮತ್ತು ಲಹರಿ ಮ್ಯೂಸಿಕ್ ಎರಡರಲ್ಲೂ ಹಾಡನ್ನು ವೀಕ್ಷಿಸಬಹುದಾಗಿದೆ. ಅತೀ ಹೆಚ್ಚು ತೆಲುಗಿನಲ್ಲೇ ಈ ಹಾಡನ್ನು ನೋಡಿದ್ದಾರೆ. ಗ್ಲೋಡನ್ ಗ್ಲೋಬ್ ಪ್ರಶಸ್ತಿ ಬಂದಾಗಲೂ ಹೆಚ್ಚಿನ ಸಂಖ್ಯೆಯಲ್ಲಿ ಈ ಹಾಡನ್ನು ವೀಕ್ಷಿಸಿದ್ದರು. ಆಸ್ಕರ್ ಬಂದ ನಂತರವೂ ನೋಡಿದ್ದಾರೆ’ ಎನ್ನುತ್ತಾರೆ. ಇದನ್ನೂ ಓದಿ: ಪುನೀತ್ ಜನ್ಮ ದಿನದಂದು ಓಟಿಟಿಯಲ್ಲಿ ‘ಗಂಧದ ಗುಡಿ’

    ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಪಡೆಯುವ ಮೂಲಕ ಜಗತ್ತಿನಾದ್ಯಂತ ಸುದ್ದಿ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲೂ ಅದು ಟ್ರೆಂಡ್ ಸೃಷ್ಟಿಸಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಸಿನಿಮಾದ ಗೀತೆ ಇದಾಗಿದ್ದು,  ಎಂ.ಎಂ.ಕೀರವಾಣಿ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದೆ. ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಈ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದರೆ, ಈ ಹಾಡಿನ ಮ್ಯೂಸಿಕ್ ಹಕ್ಕನ್ನು ಕನ್ನಡದ ಹೆಮ್ಮೆಯ ಲಹರಿ ಸಂಸ್ಥೆ ಪಡೆದುಕೊಂಡಿದೆ.

    ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ರಿಲೀಸ್ ಆಗಿದ್ದು, ಮೂಲ ಚಿತ್ರಸಾಹಿತ್ಯವನ್ನು ಚಂದ್ರಬೋಸ್ ಬರೆದಿದ್ದಾರೆ. ಕಲಾಭೈರವ ಹಾಗೂ ಸಿಪ್ಲಿಗಂಜ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ಮೂಡಿ ಬಂದಿದೆ. ಇಂತಹ ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯು ಸಂದಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ ಹಾಗೂ ಕಾಲಭೈರವ ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

  • Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?

    Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?

    ನಾಟು ನಾಟು (Natu Natu) ಹಾಡು ಆಸ್ಕರ್ (Oscar) ಪ್ರಶಸ್ತಿ ಪಡೆಯುವ ಮೂಲಕ ಜಗತ್ತಿನಾದ್ಯಂತ ಸುದ್ದಿ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲೂ ಅದು ಟ್ರೆಂಡ್ ಸೃಷ್ಟಿಸಿದೆ. ರಾಜಮೌಳಿ (Rajamouli) ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಸಿನಿಮಾದ ಗೀತೆ ಇದಾಗಿದ್ದು,  ಎಂ.ಎಂ.ಕೀರವಾಣಿ (MM Keeravani) ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದೆ. ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಈ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದರೆ, ಈ ಹಾಡಿನ ಮ್ಯೂಸಿಕ್ ಹಕ್ಕನ್ನು ಕನ್ನಡದ ಹೆಮ್ಮೆಯ ಲಹರಿ (Lahari Music) ಸಂಸ್ಥೆ ಪಡೆದುಕೊಂಡಿದೆ.

    ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ರಿಲೀಸ್ ಆಗಿದ್ದು, ಮೂಲ ಚಿತ್ರಸಾಹಿತ್ಯವನ್ನು ಚಂದ್ರಬೋಸ್ ಬರೆದಿದ್ದಾರೆ. ಕಲಾಭೈರವ ಹಾಗೂ ಸಿಪ್ಲಿಗಂಜ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ಮೂಡಿ ಬಂದಿದೆ. ಇಂತಹ ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯು ಸಂದಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ (Sipliganja) ಹಾಗೂ ಕಾಲಭೈರವ (Kalabhairava) ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

    ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯದ್ದೇ ಸದ್ದು. ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ಕೋರಿದ್ದಾರೆ. ಅದರಲ್ಲೂ ತೆಲುಗು ಸಿನಿಮಾ ರಂಗದಲ್ಲಿ ಹಬ್ಬದ ವಾತಾವರಣವೇ ಕಂಡು ಬಂದಿದೆ.

    ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

    ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

  • ರಾಗಿಣಿ ದ್ವಿವೇದಿ ನಟನೆಯ `ಸೋನೆಯಾ’ ಆಲ್ಬಂ ಸಾಂಗ್ ಔಟ್

    ರಾಗಿಣಿ ದ್ವಿವೇದಿ ನಟನೆಯ `ಸೋನೆಯಾ’ ಆಲ್ಬಂ ಸಾಂಗ್ ಔಟ್

    ಸ್ಯಾಂಡಲ್‌ವುಡ್‌ನ (Sandalwood) ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ (Ragini Dwivedi) ಈಗ ಸೋನೆಯಾ (Soneyeah Album Song) ಆಗಿ ಮಿಂಚಿದ್ದಾರೆ. ಹೊಸ ಆಲ್ಬಂ ಸಾಂಗ್‌ಗೆ ರಾಗಿಣಿ ಸೊಂಟ ಬಳುಕಿಸಿರುವ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ.

    ಚಂದನವನದ ಬ್ಯುಸಿ ನಟಿಯಾಗಿರುವ ರಾಗಿಣಿ ದ್ವಿವೇದಿ ಗ್ಯಾಪ್‌ಲೊಂದು ಆಲ್ಬಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಾಗಿಣಿ ಅವರ ಸೌಂದರ್ಯ ವರ್ಣನೆ ಮಾಡುವಂತಹ ಸೋನೆಯಾ ಹಾಡು ಸೊಗಸಾಗಿದೆ. ಬಾಲಿವುಡ್ ರೇಂಜ್‌ನಲ್ಲಿ ಈ ಸಾಂಗ್ ಔಟ್‌ಪುಟ್ ಬಂದಿದೆ.

    ರಾಗಿಣಿ ಅವರ ಸೌಂದರ್ಯ ಗುಣಗಾನ ಮಾಡುವಂತಹ ಹಾಡು ಇದಾಗಿದ್ದು, ಸಿಂಪಲ್ ಪದಗಳು ಒಳಗೊಂಡಿರುವ ಕನ್ನಡದ ರ‍್ಯಾಪ್ ಸಾಂಗ್ ಇದಾಗಿದೆ. ಗಾಯಕ ಕ್ವೀಕ್ ಮತ್ತು ಮಾರ್ಟಿನ್ ಯೋ ನಟಿಸಿ, ಲಿರಿಕ್ಸ್ ಜೊತೆಗೆ ಹಾಡಿಗೆ ಕೂಡ ಧ್ವನಿಯಾಗಿದ್ದಾರೆ. ಈ ಚೆಂದದ ಆಲ್ಬಂ ಸಾಂಗ್ ಅನ್ನ ಶ್ರೀಕಾಂತ್ ಕೆಪಿ (Srikanth Kp) ನಿರ್ಮಾಣ ಮಾಡಿದ್ದು, ಲಹರಿ ಮ್ಯೂಸಿಕ್‌ನಲ್ಲಿ (Lahari Music) ರಿಲೀಸ್ ಆಗಿದೆ. ಇದನ್ನೂ ಓದಿ: ವಿಶೇಷ ಫೋಟೋ ಶೇರ್‌ ಮಾಡಿ ತಮನ್ನಾ ಜೊತೆಗಿನ ಪ್ರೀತಿ ಅಧಿಕೃತಗೊಳಿಸಿದ ವಿಜಯ್ ವರ್ಮಾ

     

    View this post on Instagram

     

    A post shared by MRT Music (@mrtmusicofficial)

    `ಕ್ಲಬ್‌ನಲ್ಲಿ ನೋಡಿದ ಮೇಲೆ ಸುಸ್ತಾಗಿ ಆಗಿ ಹೋದೆ. ಜೀನ್ಸ್ ಹಾಕಿ ಬಂದಿದ್ದೆ ಮಸ್ತಾಗಿ ಹೋದೆ’ ಎಂದು ಮೂಡಿ ಬಂದ ಸೋನೆಯಾ ಹಾಡಿನಲ್ಲಿ ರಾಗಿಣಿ ಮುದ್ದಾಗಿ ಕಾಣಿಸಿದ್ದಾರೆ. ಬಳಕುವ ಬಳ್ಳಿಯಂತೆ ಮೈ ಚಳಿ ಬಿಟ್ಟಿ ಕುಣಿದಿದ್ದಾರೆ. ಕನ್ನಡ ಮತ್ತು ಪಂಜಾಬಿ ಭಾಷೆಯನ್ನು ಹಾಡಿನಲ್ಲಿ ಬಳಕೆ ಮಾಡಲಾಗಿದೆ. ಇನ್ನೂ ನಟಿ ರಾಗಿಣಿಯ ಸೋನೆಯಾ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಸಾಂಗ್ ಎಲ್ಲೆಡೆ ಸದ್ದು ಮಾಡ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಲಹರಿ ಮ್ಯೂಸಿಕ್ ಸಂಸ್ಥೆಗೆ ಮತ್ತೊಂದು ಗರಿ: ಅಂಗ ಸಂಸ್ಥೆ ಎಂಆರ್‌ಟಿ ಆಡಿಯೋ ಸಂಸ್ಥೆಗೆ ಗೋಲ್ಡ್ ಅವಾರ್ಡ್

    ಲಹರಿ ಮ್ಯೂಸಿಕ್ ಸಂಸ್ಥೆಗೆ ಮತ್ತೊಂದು ಗರಿ: ಅಂಗ ಸಂಸ್ಥೆ ಎಂಆರ್‌ಟಿ ಆಡಿಯೋ ಸಂಸ್ಥೆಗೆ ಗೋಲ್ಡ್ ಅವಾರ್ಡ್

    ಬೆಂಗಳೂರು: ಪ್ರಶಸ್ತಿಗಳು ಸುಮ್ಮನೆ ಹುಡುಕಿಕೊಂಡು ಬರೋದಿಲ್ಲ. ಅದಕ್ಕೆ ಪ್ರಾಮಾಣಿಕತೆ, ಪರಿಶ್ರಮಬೇಕು. ಅದಕ್ಕೆ ಲಹರಿ ಮ್ಯೂಸಿಕ್ ಸಂಸ್ಥೆಗೆ ಪ್ರಶಸ್ತಿ ಹುಡುಕಿಕೊಂಡು ಬಂದಿದೆ.

    ಈ ವರ್ಷ ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಡೈಮಂಡ್ ಅವಾರ್ಡ್ ಬಂದಿದೆ. ಅದಷ್ಟೇ ಅಲ್ಲ, ಸಂಸ್ಥೆ ನಿರ್ಮಾಣ ಮಾಡಿದ ಆಲ್ಬಂ ಸಾಂಗ್‍ಗೆ ಗ್ರ್ಯಾಮಿ ಅವಾರ್ಡ್ ಬಂದಿತು. ಈಗ ಲಹರಿ ಸಂಸ್ಥೆಯ ಮತ್ತೊಂದು ಅಂಗ ಸಂಸ್ಥೆ ಎಂಆರ್‌ಟಿ ಮ್ಯೂಸಿಕ್‍ಗೆ ಗೋಲ್ಡ್ ಅವಾರ್ಡ್ ಕೂಡ ಲಭಿಸಿದೆ. ಇದನ್ನೂ ಓದಿ: ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ 108 ಸಿಬ್ಬಂದಿ 

    ಈ ಕುರಿತು ಲಹರಿ ವೇಲು ಖುಷಿಯನ್ನು ಹಂಚಿಕೊಂಡಿದ್ದು, ವಿಶೇಷವೆಂದರೆ ಇದು ಶುರುವಾಗಿ ಕೇವಲ ಆರು ತಿಂಗಳಾಗಿದೆ. ಅದಾಗಲೇ ಈ ಅವಾರ್ಡ್ ಲಭಿಸಿದೆ. ಇದು ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ. ಸಂಗೀತ ಸಂಸ್ಥೆಯ ಎಲ್ಲ ಹಾಡುಗಳು ಸೇರಿದಂತೆ ಅಣ್ಣಾವ್ರ ಹಾಡು, ಅಂಬರೀಷ್ ಮತ್ತು ವಿಷ್ಣುವರ್ಧನ್ ಸಿನಿಮಾಗಳ ಗೀತೆಗಳು ಮತ್ತು ಕೆಜಿಎಫ್ 2 ಹಿಂದಿ ಭಾಷೆಯ ಹಾಡುಗಳನ್ನು ಮೊದಲ ಸಲ ಉತ್ತರ ಭಾರತ ಮಾರುಕಟ್ಟೆಯನ್ನು ನಾವೇಕೆ ಪ್ರವೇಶ ಮಾಡಬಾರದು ಎಂದು ಅಲ್ಲಿಯೂ ಕಾಲಿಟ್ಟು, ಅಲ್ಲೂ ಸಹ ಆಡಿಯೋ ಸೂಪರ್ ಹಿಟ್ ಆಗಿದೆ. ಹಾಗಾಗಿ ಗೋಲ್ಡ್ ಅವಾರ್ಡ್‍ಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

    ಎಂಆರ್‌ಟಿ ಮ್ಯೂಸಿಕ್ ಲಹರಿ ಸಂಸ್ಥೆಯ ಅಂಗ ಸಂಸ್ಥೆ. ಕೇವಲ ಆರು ತಿಂಗಳಲ್ಲಿ ಬಂದಿರೋದು ದಾಖಲೆ. ಮುಂದಿನ ದಿನಗಳಲ್ಲಿ ಎಂಆರ್‌ಟಿ ಸಂಸ್ಥೆಗೆ ಆದಷ್ಟು ಬೇಗ ಡೈಮಂಡ್ ಅವಾರ್ಡ್ ಬರುವಂತೆಯೇ ಶ್ರಮ ವಹಿಸುತ್ತೇವೆ ಎನ್ನುವ ಲಹರಿ ವೇಲು, ಈ ಪ್ರಶಸ್ತಿಗೆ ಕಾರಣರಾದ ಎಲ್ಲರಿಗೂ ನಾನು ಚಿರಋಣಿ. ಪ್ರಮುಖವಾಗಿ ಕಲಾ ಪ್ರೇಮಿಗಳು, ಸಿನಿಮಾ ನಿರ್ದೇಶಕರು, ನಿರ್ಮಾಪಕರು ಹಾಗೂ ಮಾಧ್ಯಮಗಳಿಗೆ ಧನ್ಯವಾದಗಳು ಎಂದಿದ್ದಾರೆ. ಇದನ್ನೂ ಓದಿ:  ಹೋಟೆಲ್‍ಗಳಿಗೆ ನಿಗದಿತ ವಿದ್ಯುತ್ ಶುಲ್ಕ ವಿನಾಯಿತಿ: ಬೆಸ್ಕಾಂ ಭರವಸೆ 

  • ಉಪೇಂದ್ರ ನಿರ್ದೇಶನದ ಹೊಸ ಚಿತ್ರಕ್ಕೆ ಜೂ.3 ರಂದು ಮುಹೂರ್ತ

    ಉಪೇಂದ್ರ ನಿರ್ದೇಶನದ ಹೊಸ ಚಿತ್ರಕ್ಕೆ ಜೂ.3 ರಂದು ಮುಹೂರ್ತ

    ಪ್ಪಿ 2 ಸಿನಿಮಾದ ನಂತರ ನಟ, ನಿರ್ದೇಶಕ ಉಪೇಂದ್ರ ಕೈಗೆತ್ತಿಕೊಂಡಿರುವ ಹೊಸ ಸಿನಿಮಾದ ಅಪ್ ಡೇಟ್ ಸಿಕ್ಕಿದೆ. ಈಗಾಗಲೇ ಹೊಸ ಸಿನಿಮಾದ ಟೈಟಲ್ ಮತ್ತು ಫಸ್ಟ್ ಲುಕ್ ರಿಲೀಸ್ ಮಾಡಿ, ಜನರ ತಲೆಗೆ ಹುಳು ಬಿಟ್ಟಿರುವ ಉಪೇಂದ್ರ ಅವರು ತಮ್ಮ ನಿರ್ದೇಶನದ ಹೊಸ ಸಿನಿಮಾದ ಮುಹೂರ್ತವನ್ನು ಜೂ.3ಕ್ಕೆ ಫಿಕ್ಸ್ ಮಾಡಿದ್ದಾರೆ. ಇದನ್ನೂ ಓದಿ : ‘ಧಾಕಡ್’ ಸೋಲಿಗೆ ಕಂಗೆಟ್ಟ ಕಂಗನಾ ರಣಾವತ್ : ವೀಕೆಂಡ್ ನಲ್ಲೂ ವೀಕ್ ಕಲೆಕ್ಷನ್

    ಈ ಹಿಂದೆ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿ, ಅದರಲ್ಲಿ ಟೈಟಲ್ ಕೂಡ ಅನಾವರಣಗೊಳಿಸಿದ್ದರು. ಅದರಲ್ಲಿ ಒಂದು ಟೈಟಲ್ ಕೂಡ ಬರೆದಿದ್ದರು. ಆದರೆ, ಆ ಟೈಟಲ್ ಏನು ಎನ್ನುವುದೇ ಒಂದು ನಿಗೂಢ ಚಿತ್ರಕಥೆಯಂತಿತ್ತು. ಈ ಹೊಸ ಸಿನಿಮಾದ ಟೈಟಲ್, ಕುದುರೆ ಲಾಳ ಎನ್ನಬೇಕೆ? ಮೂರು ನಾಮ ಎಂದು ತಿಳಿದುಕೊಳ್ಳಬೇಕೆ? ಅಥವಾ ಉಗುರಿನ ಮೇಲೆ ಮತದಾನದ ಇಂಕು ಹತ್ತಿರವ ಗುರುತು ಎಂದು ಕರೆಯಬೇಕೋ? ನಾವು ಏನು ಅಂದುಕೊಳ್ಳುತ್ತೆವೆಯೋ ಅದೇ ಸಿನಿಮಾದ ಟೈಟಲ್ ಎನ್ನುವಂತೆ ಶೀರ್ಷಿಕೆ ಇಟ್ಟಿದ್ದರು. ಇದನ್ನೂ ಓದಿ : ಶೀಘ್ರದಲ್ಲೇ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಸಿನಿಮಾ ಶುರು : ಯೋಗರಾಜ್ ಭಟ್ ನಿರ್ದೇಶಕ

    ಈಗಾಗಲೇ ಈ ಹೊಸ ಸಿನಿಮಾಗಾಗಿ ಒಂದಿಷ್ಟು ಆಡಿಷನ್ ಕೂಡ ನಡೆಸಿದ್ದು,  ಪಾತ್ರಗಳ ಆಯ್ಕೆಯನ್ನೂ ಮಾಡಿದ್ದಾರೆ. ಚಿಕ್ಕವರಿಂದ ವಯಸ್ಸಾದ ವ್ಯಕ್ತಿಗಳು ಈ ಸಿನಿಮಾಗಾಗಿ ಬೇಕಾಗಿದ್ದರಿಂದ ಹದಿನೈದು ದಿನಗಳ ಕಾಲ ಆಡಿಷನ್ ಮಾಡಿದ್ದಾರಂತೆ ನಿರ್ದೇಶಕರು. ನಟನೆಯ ಚಿತ್ರ ನಿರ್ದೇಶನವನ್ನೂ ಉಪೇಂದ್ರ ಅವರೇ ಮಾಡುತ್ತಿದ್ದು, ನಾಯಕಿ ಯಾರು ಎನ್ನುವುದು ಇನ್ನೂ ಬಹಿರಂಗವಾಗಿಲ್ಲ. ಈಗಾಗಲೇ ನಾಯಕಿಯ ಆಯ್ಕೆ ಕೂಡ ಆಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ವೀಲ್‍ಚೇರ್ ರೋಮಿಯೋಗೆ ಮಯೂರಿ ಜೂಲಿಯಟ್ – ‘ಆ’ ಸವಾಲಿನ ಪಾತ್ರ ಒಪ್ಪಿಕೊಂಡಿದ್ದರ ಹಿಂದಿದೆ ಒಂದು ಕಥಾನಕ!

    ಲಹರಿ ಸಂಸ್ಥೆ ಮತ್ತು ಕೆ.ಪಿ.ಶ್ರೀಕಾಂತ್ ಈ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದು, ಕನ್ನಡ, ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಹೀಗೆ ಏಳು ಭಾಷೆಗಳಲ್ಲಿ ಈ ಚಿತ್ರ ಮೂಡಿ ಬರಲಿದೆ.

  • ಸದ್ಯವೇ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರ: ಲಹರಿ ವೇಲು

    ಸದ್ಯವೇ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರ: ಲಹರಿ ವೇಲು

    ಹರಿ ಮ್ಯೂಸಿಕ್ ಮೂಲಕ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ ಡಿವೈನ್ ಟೈಡ್ಸ್ ಆಲ್ಬಂಗೆ ಸಂಗೀತ ಕ್ಷೇತ್ರದ ಮೇರು ಪ್ರಶಸ್ತಿಯಾದ ಗ್ರ್ಯಾಮಿ ಸಹ ಬಂದಿದೆ. ರಿಕ್ಕಿ ಕೇಜ್ ಅವರಿಗೆ ಈ ಪ್ರಶಸ್ತಿ ಸಂದಿದೆ. ಈ ಎರಡು ಸಂತಸವನ್ನು ಹಂಚಿಕೊಳ್ಳಲು ಲಹರಿ ವೇಲು ಪತ್ರಿಕಾಗೋಷ್ಠಿ ಆಯೋಜಿಸಿದ್ದರು.

    ಕೇವಲ ಐನ್ನೂರು ರೂಪಾಯಿ ಬಂಡವಾಳದಿಂದ ನಮ್ಮ ಅಣ್ಣ ಮನೋಹರ ನಾಯ್ಡು ಅವರು ಈ ಸಂಸ್ಥೆಯನ್ನು ಆರಂಭಿಸಿದರು. ಈಗ ನಮ್ಮ ಸಂಸ್ಥೆ ಈ ಮಟ್ಟಕ್ಕೆ ಬರಲು ನಿಮ್ಮೆಲ್ಲರ ಹಾರೈಕೆ ಕಾರಣ. ಇದೇ ಮೊದಲ ಬಾರಿಗೆ ನಮ್ಮ ಸಂಸ್ಥೆ ಮೂಲಕ ಬಿಡುಗಡೆಯಾದ ‘ಡಿವೈನ್ ಟೈಡ್ಸ್’ ಆಲ್ಬಂಗೆ ಸಂಗೀತ ನೀಡಿದ್ದಕ್ಕಾಗಿ ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ಬಂದಿದೆ. ಈ ಗೌರವಕ್ಕೆ ಪಾತ್ರರಾದ ರಿಕ್ಕಿಕೇಜ್ ಅವರನ್ನು ಅಭಿನಂದಿಸುತ್ತೇನೆ. ಈ ಪ್ರಶಸ್ತಿ ಸಮಾರಂಭಕ್ಕೆ ನಾನು ವೀಸಾ ಸಿಗದ ಕಾರಣದಿಂದ ಹೋಗಿರಲಿಲ್ಲ. ನನ್ನ ಅಣ್ಣನ ಮಗ ಚಂದ್ರು, ರಿಕ್ಕಿಕೇಜ್ ಅವರ ಜೊತೆಗೆ ಹೋಗಿದ್ದರು. ನಾವೆಲ್ಲರೂ ಮನೆಯಿಂದಲೇ ನೋಡಿ ಸಂತಸಪಟ್ಟೆವು. ಸದ್ಯದಲ್ಲೇ ರಿಕ್ಕಿಕೇಜ್ ಅವರ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರವೊಂದನ್ನು ನಮ್ಮ ಸಂಸ್ಥೆ ಮೂಲಕ ನಿರ್ಮಿಸುವ ತಯಾರಿ ನಡೆಯುತ್ತಿದೆ ಎಂದು ಲಹರಿ ವೇಲು ತಿಳಿಸಿದರು.

    ನನಗೆ ಎರಡನೇ ಬಾರಿ ಈ ಪ್ರಶಸ್ತಿ ಬಂದಿರುವುದು ಸಂತೋಷ ತಂದಿದೆ. ಪ್ಯಾಂಡಮಿಕ್ ಸಮಯದಲ್ಲಿ ಈ ಆಲ್ಬಂ ನಿರ್ಮಾಣವಾಯಿತು. ಅನೇಕ ಕಲಾವಿದರನ್ನು ಜೂಮ್ ಕಾಲ್ ಹಾಗೂ ಮೆಸೇಜ್‍ಗಳ ಮೂಲಕ ಸಂಪರ್ಕ ಮಾಡಿದ್ದೆ. ನೂರೈವತ್ತಕ್ಕೂ ಅಧಿಕ ಕಲಾವಿದರು ಹಾಗೂ ತಂತ್ರಜ್ಞರು ಈ ಹಾಡಿಗೆ ಕೆಲಸ ಮಾಡಿದ್ದಾರೆ. ಅದರಲ್ಲಿ ಅರವತ್ತಕ್ಕೂ ಅಧಿಕರು ಭಾರತದವರು. ಮಿಕ್ಕವರು ಹೊರ ದೇಶದವರು. ಇಲ್ಲಿನ ವಾರಿಜಾಶ್ರೀ, ಅರುಣ್ ಕುಮಾರ್, ಸುಮಾ ರಾಣಿ, ಚೈತ್ರ ಮುಂತಾದ ಕಲಾವಿದರು ಈ ಆಲ್ಬಂ ನಲ್ಲಿದ್ದಾರೆ. ನಾನು ಕನ್ನಡದಲ್ಲಿ ಆಕ್ಸಿಡೆಂಟ್, ವೆಂಕಟ ಇನ್ ಸಂಕಟ ಹಾಗೂ ಕ್ರೇಜಿ ಕುಟುಂಬ ಚಿತ್ರಗಳಿಗೆ ಸಂಗೀತ ನೀಡಿದ್ದೇನೆ. ಆ ಮೂರು ಸಿನಿಮಾಗಳ ನಾಯಕ ರಮೇಶ್ ಅರವಿಂದ್ ಅವರೆ. ರಮೇಶ್ ನನ್ನ ಆತ್ಮೀಯ ಸ್ನೇಹಿತರು. ನನಗೆ ಸಿನಿಮಾಗಿಂತ ವಿಭಿನ್ನ ಆಲ್ಬಂಗಳನ್ನು ಮಾಡುವುದರಲ್ಲೇ ಆಸಕ್ತಿ ಹೆಚ್ಚು ಎಂದು ರಿಕ್ಕಿಕೇಜ್ ತಿಳಿಸಿದ್ದಾರೆ.

    ಪ್ರಶಸ್ತಿ ಪಡೆಯಲು ಲಹರಿ ಸಂಸ್ಥೆಯ ಚಂದ್ರು ಅವರೊಂದಿಗೆ ಹೋದ ಸಂದರ್ಭವನ್ನು ನೆನಪಿಸಿಕೊಂಡರು. ಹಾಗೂ ಮುಂದೆ ಸಹ ಲಹರಿ ಸಂಸ್ಥೆಯವರೊಂದಿಗೆ ಇರುವುದಾಗಿ ಹೇಳಿದರು.

    ಇಷ್ಟು ಎತ್ತರಕ್ಕೆ ಬೆಳೆದಿದ್ದರೂ ರಿಕ್ಕಿಕೇಜ್, ನಮ್ಮ ಸಂಸ್ಥೆಯ ಕಾರ್ಯಗಳಿಗೆ ಕೈ ಜೋಡಿಸಿರುವುದು ನಿಜಕ್ಕೂ ಹೆಮ್ಮೆ. ಅವರು ನಮ್ಮೊಂದಿಗೆ ಯಾವುದೇ ಅಗ್ರಿಮೆಂಟ್ ಸಹ ಮಾಡಿಕೊಂಡಿಲ್ಲ. ಲಹರಿ ಸಂಸ್ಥೆಯ ಚಂದ್ರು ಅವರು ಮಾತನಾಡಿ, ಇದೇ ಅವರ ಪ್ರೀತಿಗೆ ಸಾಕ್ಷಿ ಎಂದರು. ರಿಕ್ಕಿಕೇಜ್ ಅವರೊಂದಿಗೆ ಹದಿನೈದು ವರ್ಷಗಳಿಂದ ಜೊತೆಗಿರುವ ವಾಡಿಯಲ್ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ಲಹರಿ ಸಂಸ್ಥೆ ಹೊರ ತಂದ ರಿಕ್ಕಿ ಕೇಜ್‌ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮ ನಿರ್ದೇಶನ

    ಲಹರಿ ಸಂಸ್ಥೆ ಹೊರ ತಂದ ರಿಕ್ಕಿ ಕೇಜ್‌ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮ ನಿರ್ದೇಶನ

    ಬೆಂಗಳೂರು: ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ರಿಕ್ಕಿ ಕೇಜ್ ಹೊಸ ಸಾಧನೆಯನ್ನು ಮಾಡಿದ್ದಾರೆ.

    ರಿಕ್ಕಿ ಕೇಜ್ ಮತ್ತು ಅಮೆರಿಕಾದ ರಾಕ್ ಲೆಜೆಂಡ್ ಸ್ಟೀವರ್ಟ್ ಕೋಪ್ಲೆಂಡ್ ಜಂಟಿಯಾಗಿ ಸಂಯೋಜಿಸಿ, ಹಾಡಿರುವ ಡಿವೈನ್ ಟೈಡ್ಸ್ (ದೈವಿಕ ಅಲೆಗಳು) ಆಲ್ಬಂ ವಿಶ್ವದ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಗೆ ಉತ್ತಮ ನ್ಯೂ ಏಜ್ ಆಲ್ಬಂ ವಿಭಾಗದಲ್ಲಿ ನಾಮ ನಿರ್ದೇಶನಗೊಂಡಿದೆ. ಇದನ್ನೂ ಓದಿ: Adheera is back in action – ಕೆಜಿಎಫ್ 2ಗೆ ವಾಯ್ಸ್ ಕೊಟ್ಟ ಸಂಜಯ್ ದತ್

    ಎಂಟು ಹಾಡುಗಳನ್ನು ಒಳಗೊಂಡಿರುವ ಡಿವೈನ್ ಟೈಡ್ಸ್ ಆಲ್ಬಂ ಅನ್ನು ಕನ್ನಡದ ಹೆಮ್ಮೆಯ ಆಡಿಯೋ ಸಂಸ್ಥೆ ಲಹರಿ ಸಂಸ್ಥೆ ಹೊರತಂದಿದೆ. 2022ರ ಜನವರಿ 31ರಂದು ಪ್ರಶಸ್ತಿ ಘೋಷಣೆಯಾಗಲಿದೆ. ಈ ಹಿಂದೆ ಅಂದ್ರೆ 2015ರಲ್ಲಿ ವಿಂಡ್ಸ್ ಆಫ್ ಸಂಸಾರ ಆಲ್ಬಂಗೆ ಇದೇ ವಿಭಾಗದಲ್ಲಿ ರಿಕ್ಕಿ ಕೇಜ್ ಗ್ರ್ಯಾಮಿ ಪ್ರಶಸ್ತಿ ಗೆದ್ದಿದ್ದರು. ಇದು ಕೂಡ ಭಕ್ತಿಗೆ ಸಂಬಂಧಿಸಿದ್ದಾಗಿತ್ತು.

  • ಲಹರಿ ಮ್ಯೂಸಿಕ್ ಪಾಲಾಯ್ತು ಕೆಜಿಎಫ್ 2 ಆಡಿಯೋ ರೈಟ್ಸ್

    ಲಹರಿ ಮ್ಯೂಸಿಕ್ ಪಾಲಾಯ್ತು ಕೆಜಿಎಫ್ 2 ಆಡಿಯೋ ರೈಟ್ಸ್

    ಬೆಂಗಳೂರು: ಭಾರತೀಯ ಸಿನಿಮಾದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್-2ರ ಎಲ್ಲ ಹಾಡುಗಳ ಹಕ್ಕನ್ನು ಲಹರಿ ಸಂಸ್ಥೆ ತನ್ನದಾಗಿಸಿಕೊಂಡಿದೆ. ಲಹರಿ ಚಿತ್ರದ ಎಲ್ಲ ಹಾಡುಗಳನ್ನು ಭಾರೀ ಮೊತ್ತಕ್ಕೆ ಲಹರಿ ಸಂಸ್ಥೆ ಖರೀದಿಸಿದೆ.

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-2 ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಐದು ಭಾಷೆಯ ಎಲ್ಲ ಹಾಡುಗಳು ಲಹರಿ ಸಂಸ್ಥೆಯ ಲೈಬ್ರರಿ ಸೇರಿಕೊಂಡಿವೆ. ಕೆಜಿಎಫ್-2 ಚಿತ್ರದಲ್ಲಿ ಒಟ್ಟು ಆರು ಹಾಡುಗಳಿವೆ. ಈ ಹಿಂದೆ ಕೆಜಿಎಫ್ ಚಾಪ್ಟರ್-1ರ ಹಾಡುಗಳ ಹಕ್ಕನ್ನು ಲಹರಿ ಸಂಸ್ಥೆಯೇ ಖರೀದಿಸಿತ್ತು. ಕೆಲವೇ ದಿನಗಳಲ್ಲಿ ಕೆಜಿಎಫ್ ಹಾಡುಗಳ ಮಾರುಕಟ್ಟೆಗೆ ಬರಲಿವೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ:ದಾಖಲೆಗಳ ಧೂಳೆಬ್ಬಿಸಿದ ಕೆಜಿಎಫ್-2 – ‘ರಣಬೇಟೆಗಾರ’ನ ಅಬ್ಬರಕ್ಕೆ ಯೂಟ್ಯೂಬ್ ದಾಖಲೆಗಳೆಲ್ಲ ಉಡೀಸ್

    ಇದೇ ಜುಲೈ 16ರಂದು ಕೆಜಿಎಫ್ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಆದ್ರೆ ಕೊರೊನಾ ಎರಡನೇ ಅಲೆ ಹಿನ್ನೆಲೆ ಚಿತ್ರಮಂದಿರಗಳು ಸ್ತಬ್ಧಗೊಂಡಿವೆ. ಕರ್ನಾಟಕದಲ್ಲಿ ಅನ್‍ಲಾಕ್ ಪ್ರಕ್ರಿಯೆ ಆರಂಭವಾದ್ರೂ ಥಿಯೇಟರ್ ಗಳಿಗೆ ಇನ್ನೂ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಕೆಲ ದಿನಗಳ ಹಿಂದೆ ಅಭಿಮಾನಿಗಳು ಆದಷ್ಟು ಬೇಗ ಚಿತ್ರವನ್ನು ರಿಲೀಸ್ ಮಾಡಬೇಕೆಂದು ಸೋಶಿಯಲ್ ಮೀಡಿಯಾ ಮೂಲಕ ಒತ್ತಾಯಿಸಿದ್ದರು. ಇದನ್ನೂ ಓದಿ: ಬಾಹುಬಲಿ ದಾಖಲೆ ಬ್ರೇಕ್ ಮಾಡಿದ ಕೆಜಿಎಫ್-2 -ಎಲ್ಲಾ ಸಿನಿಮಾಗಳ ದಾಖಲೆಗಳು ಉಡೀಸ್

  • ‘ಕಿರಿಕ್ ಪಾರ್ಟಿ’ ವರ್ಸಸ್ ಲಹರಿ ಆಡಿಯೋ ಸಂಸ್ಥೆ ಫೈಟ್ ಸುಖಾಂತ್ಯ

    ‘ಕಿರಿಕ್ ಪಾರ್ಟಿ’ ವರ್ಸಸ್ ಲಹರಿ ಆಡಿಯೋ ಸಂಸ್ಥೆ ಫೈಟ್ ಸುಖಾಂತ್ಯ

    – ರಕ್ಷಿತ್ ಶೆಟ್ಟಿ, ಲಹರಿ ಮಧ್ಯೆ ಚಿಗುರಿದ ಸ್ನೇಹ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ರಕ್ಷಿತ್ ಶೆಟ್ಟಿ, ಲಹರಿ ವೇಲು, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಒಂದಾಗಿದ್ದಾರೆ. ತಮ್ಮ ನಡುವಿನ ಎಲ್ಲ ಕಿರಿಕ್‍ಗಳನ್ನು ಬದಿಗಿಟ್ಟು ಸ್ನೇಹದ ಹಸ್ತ ಚಾಚಿದ್ದಾರೆ.

    ಒಂದು ಘಟನೆ, ಹಲವು ದೃಷ್ಟಿಕೋನಗಳು. ದೃಷ್ಟಿಕೋನಗಳನ್ನು ಹಂಚಿಕೊಂಡು, ಅರ್ಥ ಮಾಡಿಕೊಂಡಾಗ ನಾವು ಮನುಷ್ಯರಾಗಿ ಒಗ್ಗೂಡುತ್ತೇವೆ. ಪ್ರೀತಿ ಮತ್ತು ಪರಸ್ಪರ ಗೌರವಗಳಲ್ಲಿ ಎಲ್ಲವೂ ಸೇರಿಕೊಳ್ಳಲೇಬೇಕು. ಅದೇ ಬೆಳವಣಿಗೆಯ ನಿಜವಾದ ಲಕ್ಷಣ ಎಂದು ರಕ್ಷಿತ್ ಶೆಟ್ಟಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ.

    ಫೋಟೋ ನೋಡಿದ ಅನೇಕರು ಈ ಮೂವರಿಗೂ ಶುಭ ಹಾರೈಸಿದ್ದಾರೆ. ನೆಟ್ಟಿಗರು ಹಲವು ಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ತಮ್ಮ ನಡುವಿನ ಕಿರಿಕ್ ಮರೆತು ಒಂದಾಗಿರುವ ಈ ಸೆಲೆಬ್ರಿಟಿಗಳನ್ನು ಕಂಡು ಸ್ಯಾಂಡಲ್‍ವುಡ್ ಮಂದಿ ಖುಷಿಪಟ್ಟಿದ್ದಾರೆ.

    ನಡೆದಿದ್ದೇನು..?
    ಕನ್ನಡ ಚಿತ್ರರಂಗದಲ್ಲಿ ನಟ ರಕ್ಷಿತ್ ಶೆಟ್ಟಿ ಮತ್ತು ಲಹರಿ ಮ್ಯೂಸಿಕ್ ಸಂಸ್ಥೆ ನಡುವೆ ಉಂಟಾಗಿದ್ದ ಕಿರಿಕ್ ಬಗ್ಗೆ ಎಲ್ಲರಿಗೂ ತಿಳಿದಿದೆ. ತಮ್ಮ ಸಂಸ್ಥೆಗೆ ಸೇರಿದ ಸಂಗೀತವನ್ನು ಕಿರಿಕ್ ಪಾರ್ಟಿ ಚಿತ್ರತಂಡ ಕೃತಿಚೌರ್ಯ ಮಾಡಿದೆ ಎಂದು ಆರೋಪಿಸಿ ಲಹರಿ ಸಂಸ್ಥೆಯ ವೇಲು ಅವರು ಕೋರ್ಟ್ ಮೆಟ್ಟಿಲೇರಿದ್ದರು. ಆ ಬಗ್ಗೆ ಹಲವು ಬಾರಿ ವಿಚಾರಣೆ ನಡೆದಿತ್ತು. ಲಹರಿ ವೇಲು ಮತ್ತು ರಕ್ಷಿತ್ ಶೆಟ್ಟಿ ಸಾರ್ವಜನಿಕವಾಗಿಯೇ ಆರೋಪ ಮತ್ತು ಪ್ರತ್ಯಾರೋಪ ಮಾಡಿಕೊಂಡಿದ್ದರು.

    ಕಿರಿಕ್ ಪಾರ್ಟಿ ಚಿತ್ರದ ಹೇ ಹೂ ಆರ್ ಯೂ ಹಾಡಿನಲ್ಲಿ ಶಾಂತಿ ಕ್ರಾಂತಿ ಚಿತ್ರದ ‘ಮಧ್ಯರಾತ್ರೀಲಿ’ ಹಾಡಿನ ಟ್ಯೂನ್ ಅನ್ನು ಬಳಸಿಕೊಳ್ಳಲಾಗಿತ್ತು. ನಮ್ಮ ಅನುಮತಿ ಇಲ್ಲದೇ ಹಾಡಿನ ಟ್ಯೂನ್ ಕದ್ದಿದ್ದಾರೆ ಅಂತ ಲಹರಿ ಸಂಸ್ಥೆ ಆರೋಪಿಸಿತ್ತು. ನಾವು ರವಿಚಂದ್ರನ್ ಅವರಿಗೆ ಟ್ರಿಬ್ಯೂಟ್ ಮಾಡಲು ಆ ರೀತಿ ಟ್ಯೂನ್ ಮಾಡಿದ್ವಿ ಅಂದಿದ್ದ ಕಿರಿಕ್ ಪಾರ್ಟಿ ಟೀಮ್ ಹೇಳಿಕೊಂಡಿತ್ತು. ಇದನ್ನೂ ಓದಿ:  ಸಂಚಾರಿ ವಿಜಯ್‍ಗೆ ಅಮೆರಿಕದ ಥಿಯೇಟರ್ ನಿಂದ ಗೌರವ

    ಪ್ರಕರಣ ಸಂಬಂಧ ಕೆಲ ದಿನಗಳ ಹಿಂದೆ ಕೋರ್ಟ್ ನಿಂದ ಜಾಮೀನು ರಹಿತ ವಾರೆಂಟ್ ಜಾರಿ ಆಗಿತ್ತು. ವಾರಂಟ್ ಹಿನ್ನಲೆ 9ನೇ ಎಸಿಎಂಸಿ ಕೋರ್ಟ್ ಮುಂದೆ ಹಾಜರಾಗಿದ್ದ ರಕ್ಷಿತ್ ಶೆಟ್ಟಿ 10,000 ರೂಪಾಯಿ ಶ್ಯೂರಿಟಿ ನೀಡಿ ಜಾಮೀನು ಪಡೆದಿದ್ದರು. ‘ಕಿರಿಕ್ ಪಾರ್ಟಿ’ ವರ್ಸಸ್ ಲಹರಿ ಆಡಿಯೋ ಸಂಸ್ಥೆ ಫೈಟ್ ನಡೆಯುತ್ತಿತ್ತು. ಈ ವೇಳೆ ಕಾಪಿರೈಟ್ ವಿಚಾರಕ್ಕೆ ಕೋರ್ಟ್ ಮೆಟ್ಟಿಲೇರಿದ್ದ ಕಿರಿಕ್ ಪಾರ್ಟಿ ವಿವಾದವನ್ನು ಲಹರಿ ವೇಲು ಅವರ ಜೊತೆ ಕೂತು ರಕ್ಷಿತ್ ಶೆಟ್ಟಿ ಮಾತನಾಡಿ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ.