Tag: ಲಾಕಪ್ ಡೆತ್

  • ಕಳ್ಳತನ ಪ್ರಕರಣದ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ – ಕುಟುಂಬಸ್ಥರಿಂದ ಲಾಕಪ್ ಡೆತ್ ಶಂಕೆ

    ಕಳ್ಳತನ ಪ್ರಕರಣದ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ – ಕುಟುಂಬಸ್ಥರಿಂದ ಲಾಕಪ್ ಡೆತ್ ಶಂಕೆ

    ರಾಮನಗರ: ದೇವಸ್ಥಾನದಲ್ಲಿ ಕಳವು ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಎಂಕೆ ದೊಡ್ಡಿ (MK Doddi) ಪೊಲೀಸ್ ಠಾಣೆಯಲ್ಲಿ ನಡೆದಿದೆ.

    ಮದ್ದೂರು (Maddur) ತಾಲೂಕಿನ ದುಂಡನಹಳ್ಳಿ ಗ್ರಾಮದ ರಮೇಶ್ ಸಾವನ್ನಪ್ಪಿದ ವ್ಯಕ್ತಿ. ಎಂಕೆ ದೊಡ್ಡಿ ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಮೇಶ್ ಶವ ಪತ್ತೆಯಾಗಿದೆ. ಶವವನ್ನ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಶ್ರೀನಿವಾಸ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ – ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ

    ಚನ್ನಪಟ್ಟಣ ತಾಲೂಕಿನ ಬೊಮ್ಮನಾಯಕನಹಳ್ಳಿ ದೇವಸ್ಥಾನದ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಎಂಕೆ ದೊಡ್ಡಿ ಪೊಲೀಸರು, ರಮೇಶ್, ಮಂಜು ಹಾಗೂ ಕೋಲಾರದ ಅನಿಲ್ ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು. ಇಂದು ಬೆಳಿಗ್ಗೆ ಶೌಚಾಲಯಕ್ಕೆಂದು ಹೋಗಿದ್ದ ರಮೇಶ್, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ – 25,000 ಅಮೆರಿಕನ್ ಡಾಲರ್‌ಗೆ ಬೇಡಿಕೆ

    ಇನ್ನೂ ರಮೇಶ್ ಸಾವು ಲಾಕಪ್ ಡೆತ್ (Lockup Death) ಎಂದು ಕುಟುಂಬಸ್ಥರು ಆರೋಪಿಸಿದ್ದು, ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆ ಎದರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ನ್ಯಾಯ ಸಿಗುವವರೆಗೂ ಶವ ಸ್ವೀಕರಿಸುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಇದನ್ನೂ ಓದಿ: ಒಳಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಸ್ವಾಗತಾರ್ಹ: ಮುಖ್ಯಮಂತ್ರಿ ಚಂದ್ರು

  • ಬ್ರಹ್ಮಾವರ ಲಾಕಪ್ ಡೆತ್ ಕೇಸ್ ಕೇರಳ ಸಿಎಂ ಅಂಗಳಕ್ಕೆ

    ಬ್ರಹ್ಮಾವರ ಲಾಕಪ್ ಡೆತ್ ಕೇಸ್ ಕೇರಳ ಸಿಎಂ ಅಂಗಳಕ್ಕೆ

    ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ (Brahmavar Police Station) ನಡೆದ ಲಾಕಪ್ ಡೆತ್ (Lockup Death) ಪ್ರಕರಣ ಕೇರಳ ಸಿಎಂ ಅಂಗಳಕ್ಕೆ ತಲುಪಿದೆ. ಬಿಜು ಮೋನು ಸಾವಿನ ಬಗ್ಗೆ ಸಂಶಯ ಇದೆ ಎಂದು ಮೃತ ಕುಟುಂಬ ಗಂಭೀರ ಆರೋಪ ಮಾಡಿದೆ. ಬೆಂಗಳೂರಿನ ಸಿಐಡಿ ಇನ್ಸ್‌ಪೆಕ್ಟರ್‌ಗೆ ಪತ್ರ ಬರೆದು ಸಮಗ್ರ ತನಿಖೆ ನಡೆಸಿ ನ್ಯಾಯ ಕೊಡಿ ಎಂದು ಮನವಿ ಮಾಡಿದೆ.

    ನವೆಂಬರ್ 9 ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದಲ್ಲಿ ಕೇರಳ ಮೂಲದ ಬಿಜು ಮೋನು ಮೃತಪಟ್ಟಿದ್ದ. ಮದ್ಯಪಾನ ಮಾಡಿ ಮಹಿಳೆಗೆ ಕಿರುಕುಳ ಕೊಟ್ಟ ಆರೋಪಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕುಸಿದುಬಿದ್ದು ಸಾವು ಎಂದು ಆರಂಭದಲ್ಲಿ ಭಾವಿಸಲಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿ ಬರುವ ಮೊದಲೇ ಕುಟುಂಬ ಗಂಭೀರ ಆರೋಪ ಮಾಡಿದೆ. ಆರೋಪಿ ಮೈ ಮೇಲೆ ಪೊಲೀಸ್ ಏಟಿನ ಗಂಭೀರ ಗಾಯಗಳ ಗುರುತು ಇತ್ತು. ಲಾಠಿ ಮತ್ತು ಶೂಗಳಿಂದ ಹಲ್ಲೆ ಮಾಡಲಾಗಿತ್ತು ಎಂಬ ಅರ್ಥದಲ್ಲಿ ಕುಟುಂಬ ದೂರಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರೀ ಮಳೆ – 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಚೆನ್ನೈ ಜಲಾವೃತ

     

    ಮೊಣಕಾಲಿನ ಕೆಳಗೆ ಲಾಠಿ ಏಟಿನ ರೀತಿಯ ಗಾಯದ ಗುರುತು ಇದೆ. ಲಾಕಪ್ ಡೆತ್ ಪ್ರಕರಣವನ್ನು ಅಸಹಜ ಸಾವು ಎಂದು ಪೊಲೀಸರು ಬಿಂಬಿಸಲು ಪ್ರಯತ್ನ ಪಟ್ಟಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸರ ವಿರುದ್ಧ ಬಿಜು ಮೋನು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದು ಮಾತ್ರವಲ್ಲ, ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ (Pinarayi Vijayan) ಈ ಬಗ್ಗೆ ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನೀವು ಗೆದ್ದಾಗ ಮಾತ್ರ ಇವಿಎಂ ತಿರುಚಿರಲ್ವಾ? – ಬ್ಯಾಲೆಟ್‌ ಪೇಪರ್‌ ಮತದಾನ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೃತ ಬಿಜು ಮೋನು ಸಹೋದರ ಬಿನು ಯೋಹನ್ನಾನ್ ಈ ಕುರಿತು ಮಾತನಾಡಿದ್ದು, ನಾವು ಮೃತದೇಹ ನೋಡದಂತೆ ಪೊಲೀಸರು ಶವಗಾರದಲ್ಲಿ ಲೈಟ್ ಆಫ್ ಮಾಡಿದ್ದರು. ಮೊಬೈಲ್ ಬೆಳಕಿನಲ್ಲಿ ನೋಡಿದಾಗ ಮೊಣಕಾಲಿನ ಕೆಳಗೆ ಬಹಳಷ್ಟು ಗಾಯದ ಗುರುತುಗಳಿತ್ತು. ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಮತಿ ಮೇರೆಗೆ ಮೃತದೇಹ ಪರಿಶೀಲಿಸಲಾಗಿತ್ತು. ದೇಹದಲ್ಲಿ ಸಾಕಷ್ಟು ಗಾಯದ ಗುರುತುಗಳು ಕಂಡು ಬಂದಿದ್ದವು. ನನ್ನ ಸಹೋದರನನ್ನು ಪೊಲೀಸರು ಕಾನೂನು ಪ್ರಕಾರವಾಗಿ ವಶಕ್ಕೆ ಪಡೆದ ಬಗ್ಗೆ ಅನುಮಾನವಿದೆ. ಮಹಿಳೆಯೋರ್ವಳ ದೂರಿನ ಹಿನ್ನೆಲೆಯಲ್ಲಿ ನನ್ನ ಸಹೋದರನನ್ನು ಬಂಧಿಸಲಾಗಿದೆ ಎಂದಿದ್ದರು. ದೂರು ಕೊಟ್ಟ ಮಹಿಳೆ ಯಾರು? ಅವರು ಕೊಟ್ಟ ದೂರಿನ ಕಾಪಿ ಬಗ್ಗೆ ಮಾಹಿತಿ ನೀಡಿಲ್ಲ. ಇವೆಲ್ಲವನ್ನೂ ನಾವು ಕೇರಳ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇವೆ. ಅಸಹಜ ಸಾವು ಎಂದು ಕೇರಳ ಮುಖ್ಯಮಂತ್ರಿಗೆ ದೂರು ನೀಡಿದ್ದೇವೆ. ಬ್ರಹ್ಮಾವರ ಪೊಲೀಸರ ಮೇಲೆ ತುಂಬಾ ಅನುಮಾನವಿದೆ. ಸಿಐಡಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದೇವೆ. ನಮಗೆ ತುಂಬಾ ಮಂದಿ ಕರೆ ಮಾಡಿ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದರು. ಈ ಬಗ್ಗೆಯೂ ನಾವು ಸಿಐಡಿಗೆ ಮಾಹಿತಿ ನೀಡಿದ್ದೇವೆ. ನಮಗೆ ನ್ಯಾಯ ಬೇಕು, ಪೊಲೀಸರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ರಾಮನಗರ| ಆಯುಧಪೂಜೆಯಲ್ಲಿ ರೌಡಿಶೀಟರ್‌ಗಳನ್ನು ಸನ್ಮಾನಿಸಿದ ಪೊಲೀಸರು

    ಮರಣೋತ್ತರ ಪರೀಕ್ಷೆ ವರದಿ ಇನ್ನು ಪೊಲೀಸರ ಕೈ ಸೇರಿಲ್ಲ. ಪ್ಯಾಥಾಲಜಿ ರಿಪೋರ್ಟ್ಗಾಗಿ ಕಾಯುತ್ತಿದ್ದಾರೆ. ವೈದ್ಯಕೀಯ ವರದಿ ಬಂದ ಮೇಲಷ್ಟೇ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದ ಬಿಜೆಪಿಯನ್ನೇ ಜನ ಬದಲಾಯಿಸಿದರು : ಡಿಕೆಶಿ

  • ಪೊಲೀಸ್ ಠಾಣೆಯಲ್ಲೇ ಆರೋಪಿ ಸಾವು ಕೇಸ್ – ಸಬ್ ಇನ್‌ಸ್ಪೆಕ್ಟರ್, ಹೆಡ್ ಕಾನ್‌ಸ್ಟೇಬಲ್ ಅಮಾನತು

    ಪೊಲೀಸ್ ಠಾಣೆಯಲ್ಲೇ ಆರೋಪಿ ಸಾವು ಕೇಸ್ – ಸಬ್ ಇನ್‌ಸ್ಪೆಕ್ಟರ್, ಹೆಡ್ ಕಾನ್‌ಸ್ಟೇಬಲ್ ಅಮಾನತು

    ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲೇ ಆರೋಪಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್‌ಸ್ಪೆಕ್ಟರ್ ಹಾಗೂ ಹೆಡ್ ಕಾನ್‌ಸ್ಟೇಬಲ್ ಅಮಾನತು ಮಾಡಲಾಗಿದೆ.

    ಪೊಲೀಸ್ ಉಪನಿರೀಕ್ಷಕ ಮಧು ಮತ್ತು ಪ್ರಭಾರ ಠಾಣಾಧಿಕಾರಿ ಸುಜಾತ ಅಮಾನತುಗೊಂಡಿದ್ದಾರೆ. ಆರೋಪಿಗಳನ್ನು ಬಂಧಿಸುವಾಗ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಸರಿಯಾಗಿ ಪಾಲಿಸಿಲ್ಲ. ಬಂಧಿಸುವಾಗ ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಅಮಾನತು ಮಾಡಿದ್ದಾರೆ. ಇದನ್ನೂ ಓದಿ: ಉಡುಪಿ| ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು

    ನ.10 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ ಬಿಜು ಮೋಹನ್ (44) ಪೊಲೀಸ್ ಠಾಣೆಯಲ್ಲಿ ಸಾವನ್ನಪ್ಪಿದ್ದ. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಆರೋಪಿ ಸಾವಿಗೀಡಾಗಿದ್ದ.

    ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ. ಮದ್ಯಪಾನ ಮಾಡಿ ಮಹಿಳೆಯನ್ನು ಚುಡಾಯಿಸಿದ್ದ ಆರೋಪದ ಮೇಲೆ ಆತನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದರು. ಇದನ್ನೂ ಓದಿ: ನಕಲಿ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್‌ 7 ದಿನ ಪೊಲೀಸ್‌ ಕಸ್ಟಡಿಗೆ

  • ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ: ಹೆಚ್‌ಡಿಕೆ

    ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ: ಹೆಚ್‌ಡಿಕೆ

    ಬೆಂಗಳೂರು: ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಆರೋಪ ಮಾಡಿದ್ದಾರೆ.

    ಚನ್ನಗಿರಿಯಲ್ಲಿ (Channagiri) ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರಕ್ಕೆ, ಈ ಸರ್ಕಾರದ ಅಧಿಕಾರಿಗಳಿಗೆ ಯಾರು ಗೌರವ ಕೊಡುವ ವಾತಾವರಣ ಇಲ್ಲ. ಯಾವ ಪೊಲೀಸ್ ಅಧಿಕಾರಿಗಳಿಗೂ ಈ ರಾಜ್ಯದಲ್ಲಿ ಗೌರವವಿಲ್ಲ. ಈ ಸರ್ಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಆ ರೀತಿ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಕಾನೂನು ಕುಸಿತವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ವರ್ಷದ ಹಿಂದೆ ಮೋದಿ ತಂಗಿದ್ದ ಮೈಸೂರು ಹೋಟೆಲ್ ಬಿಲ್ 80 ಲಕ್ಷ ಬಾಕಿ!

    ಪೊಲೀಸ್ ಇಲಾಖೆ ಕಠಿಣವಾಗಿ ತೀರ್ಮಾನ ಮಾಡದೇ ಇರುವ ರೀತಿ ವಾತಾವರಣ ಸೃಷ್ಟಿ ಈ ಸರ್ಕಾರ ಮಾಡಿದೆ. ಇದು ಸರ್ಕಾರದ ಸ್ವಯಂ ಜವಾಬ್ದಾರಿ. ಇದು ಅವರೇ ಮಾಡಿಕೊಂಡಿರುವ ಕೆಲಸ. ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲಿ ವಿಶ್ವಾಸ ಇಲ್ಲ. ಜನರಲ್ಲೂ ವಿಶ್ವಾಸ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚನ್ನಗಿರಿ ಪ್ರಕರಣ ಲಾಕಪ್ ಡೆತ್ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು: ಸಿದ್ದರಾಮಯ್ಯ

  • ಚನ್ನಗಿರಿ ಪ್ರಕರಣ ಲಾಕಪ್ ಡೆತ್ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು: ಸಿದ್ದರಾಮಯ್ಯ

    ಚನ್ನಗಿರಿ ಪ್ರಕರಣ ಲಾಕಪ್ ಡೆತ್ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು: ಸಿದ್ದರಾಮಯ್ಯ

    ಮೈಸೂರು: ಚನ್ನಗಿರಿ (Channagiri) ಲಾಕಪ್ ಡೆತ್ (Lockup Death) ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದು, ಅದು ಲಾಕಪ್ ಡೆತ್ ಅಲ್ಲ. ಅವನಿಗೆ ಮೂರ್ಛೆ ರೋಗ ಇತ್ತು. ಆ ರೋಗದಿಂದ ಆತ ಮೃತಪಟ್ಟಿದ್ದಾನೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಈ ಕುರಿತು ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ಎಫ್‌ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆದೇಶ ಮಾಡಿದ್ದೇನೆ. ಆದರೆ ಇದು ಲಾಕಪ್ ಡೆತ್ ಅಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ ಎಂದರು. ಇದನ್ನೂ ಓದಿ: ಯತೀಂದ್ರ ಸಿದ್ದರಾಮಯ್ಯಗೆ ಪರಿಷತ್ ಸ್ಥಾನಕ್ಕಾಗಿ ಒಪ್ಪಂದ ಆಗಿತ್ತು: ರಹಸ್ಯ ಬಹಿರಂಗಪಡಿಸಿದ ಸತೀಶ್ ಜಾರಕಿಹೊಳಿ

    ರಾಕೇಶ್ ಸಿದ್ದರಾಮಯ್ಯ ವಿಚಾರದ ಕುರಿತು ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ. ಈಗ ಆ ವಿಚಾರವನ್ನು ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮೂರ್ಖತನ. ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್ ವಿಚಾರಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪ್ರಬುದ್ಧಾ ಹತ್ಯೆಯನ್ನು ಆತ್ಮಹತ್ಯೆ ಅಂತಾ ಬಿಂಬಿಸಲು ಪ್ಲಾನ್- ಕುತ್ತಿಗೆ, ಕೈಯಲ್ಲಿದ್ದ ಕಲೆಗಳನ್ನೇ ಬಂಡವಾಳ ಮಾಡಿಕೊಂಡಿದ್ದ ಅಪ್ರಾಪ್ತ

    ಇನ್ನು ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ವಿಚಾರದ ಕುರಿತು ಸರ್ಕಾರದಿಂದ ಕೇಂದ್ರಕ್ಕೆ ತಡವಾಗಿ ಪತ್ರ ಬಂತು ಎಂಬ ಕೇಂದ್ರ ಸಚಿವರ ಹೇಳಿಕೆ ಕುರಿತು ಮಾತನಾಡಿ, ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಅಷ್ಟೇ. ನಾನು 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಪತ್ರ ಬರೆದರೂ ನನಗೆ ಉತ್ತರ ಬಂದಿಲ್ಲ. ಒಂದು ವೇಳೆ ನಾನು ಪತ್ರ ಬರೆದದ್ದು ತಡವೇ ಅಂದುಕೊಳ್ಳಿ. ಈಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಹೇಳಿ. ಸುಮ್ಮನೇ ಕಾಲ ಕಳೆಯುವುದನ್ನು ಬಿಡಬೇಕು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ- ಆರೋಪಿ ಅಪ್ರಾಪ್ತನ ಅಜ್ಜ ಅರೆಸ್ಟ್‌

    ರೇಪ್‌ಗಿಂತ ಅದರ ವೀಡಿಯೋ ಹಂಚಿದ್ದು ದೊಡ್ಡ ಅಪರಾಧ ಎಂಬ ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರೇಪ್‌ಗಿಂತ ವೀಡಿಯೋ ಹಂಚಿದ್ದು ದೊಡ್ಡ ಅಪರಾಧ ಅಂಥ ಯಾವ ಕಾನೂನಿನಲ್ಲಿದೆ ಹೇಳಿ? ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ದರಾ? ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ? ಅಥವಾ ಇವರೇ ಬರೆದುಕೊಂಡ ಕಾನೂನಿನಲ್ಲಿ ಇದೆಯಾ ಹೇಳಿ. ನಾನು ಹಾಗಂತ ವೀಡಿಯೋ ವಿತರಣೆ ಸಮರ್ಥನೆ ಮಾಡುತ್ತಿಲ್ಲ. ಆದರೆ ರೇಪ್‌ಗಿಂತ ವೀಡಿಯೋ ಹಂಚಿದ್ದು ಮಹಾ ಅಪರಾಧ ಎನ್ನುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಚನ್ನಗಿರಿಯಲ್ಲಿ ಲಾಕಪ್ ಡೆತ್ ಆರೋಪ- ಕುಟುಂಬಸ್ಥರಿಂದ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ

  • ಚನ್ನಗಿರಿಯಲ್ಲಿ ಲಾಕಪ್ ಡೆತ್ ಆರೋಪ- ಕುಟುಂಬಸ್ಥರಿಂದ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ

    ಚನ್ನಗಿರಿಯಲ್ಲಿ ಲಾಕಪ್ ಡೆತ್ ಆರೋಪ- ಕುಟುಂಬಸ್ಥರಿಂದ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ

    – ಪೊಲೀಸ್ ಜೀಪ್ ಧ್ವಂಸ, ಸಿಬ್ಬಂದಿಗೆ ಗಾಯ

    ದಾವಣಗೆರೆ: ಲಾಕಪ್ ಡೆತ್ (Lockup Death) ಆರೋಪದ ಹಿನ್ನೆಲೆಯಲ್ಲಿ ಮೃತ ಆರೋಪಿಯ ಕುಟುಂಬಸ್ಥರು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ (Stone Pelting) ನಡೆಸಿದ ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿಯಲ್ಲಿ (Channagiri) ನಡೆದಿದೆ.

    ಮಟ್ಕಾ ಆಡಿಸುತ್ತಿದ್ದ ಆದಿಲ್ ಎಂಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದ್ದಕ್ಕಿದ್ದಂತೆ ಆರೋಪಿಗೆ ಬಿಪಿ ಲೋ ಆದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆರೋಪಿ ಆದಿಲ್ ಮೃತಪಟ್ಟಿದ್ದಾನೆ. ಪೊಲೀಸರ ಕಸ್ಟಡಿಯಲ್ಲಿ ಇರುವಾಗಲೇ ಆದಿಲ್ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಕುಟುಂಬಸ್ಥರು ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಭೂಮಿ ಮೇಲಿನ ಸ್ವರ್ಗ ಸೇಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿಗರಿಗೆ ನಿಷೇಧ

    ಬಳಿಕ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕುಟುಂಬಸ್ಥರು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಅಲ್ಲದೇ ಪೊಲೀಸ್ ಜೀಪನ್ನು ಧ್ವಂಸಗೊಳಿಸಿ, ಪಲ್ಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಕೂಡಾ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂನ ಒಳಹರಿವಿನಲ್ಲಿ ಹೆಚ್ಚಳ

    ಇನ್ನು ಈ ಕುರಿತು ಎಸ್ಪಿ ಉಮಾ ಪ್ರಶಾಂತ್ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ್ದು, ಶುಕ್ರವಾರ ಪೊಲೀಸರು ಆದಿಲ್ ಎಂಬ ವ್ಯಕ್ತಿಯನ್ನು ಕರೆತಂದಿದ್ದರು. ಬಳಿಕ ಆತ ಕುಸಿದು ಬಿದ್ದ ಹಿನ್ನೆಲೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆಸ್ಪತ್ರೆಯಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ನಮ್ಮ ಪೊಲೀಸ್ ಠಾಣೆಯಲ್ಲಿ 6 ರಿಂದ 7 ನಿಮಿಷ ಕೂಡ ಇರಲಿಲ್ಲ. ಕುಟುಂಬಸ್ಥರು ಲಾಕಪ್ ಡೆತ್ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ಕೂಡ ಸಿಸಿ ಕ್ಯಾಮೆರಾ ಇದೆ. ಎಲ್ಲಾ ಪರಿಶೀಲನೆ ಮಾಡಲಾಗುತ್ತಿದೆ. ಪ್ರಾಮಾಣಿಕ ತನಿಖೆ ಮಾಡುತ್ತೇವೆ. ಮೃತರ ತಂದೆ ದೂರು ಕೊಟ್ಟಿದ್ದಾರೆ, ತನಿಖೆ ಆಗುತ್ತಿದೆ ಎಂದರು. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ- ಇಬ್ಬರು ಪೊಲೀಸ್‌ ಅಧಿಕಾರಿಗಳ ಅಮಾನತು

    ಈಗಾಗಲೇ ಮೃತದೇಹವನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಗಂಭೀರ ಪ್ರಕರಣ ಆದ ಹಿನ್ನೆಲೆ ನ್ಯಾಯಾಧೀಶರ ಸಮ್ಮುಖದಲ್ಲಿ ಶವ ಪರೀಕ್ಷೆ ಮಾಡಲಾಗುವುದು. ಈ ವಿಚಾರವಾಗಿ ಮೂರು ಪ್ರಕರಣ ದಾಖಲಾಗಿದೆ. 7 ಪೊಲೀಸ್ ವಾಹನ ಹಾಗೂ 11 ಜನ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ವಿಚಾರವಾಗಿ ಮೂರು ಪ್ರಕರಣ ಮತ್ತು ಮೃತನ ತಂದೆ ನೀಡಿದ ಒಂದು ಪ್ರಕರಣ ಸೇರಿ ಒಟ್ಟು ನಾಲ್ಕು ಪ್ರಕರಣ ದಾಖಲಾಗಿವೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. 144 ಸೆಕ್ಷನ್ ಹಾಕಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಇಂದು ಭಾರೀ ಮಳೆ ಸಾಧ್ಯತೆ- ಕೇರಳದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

  • ಲಾಕಪ್‌ ಡೆತ್‌ ಪ್ರಕರಣ; ಪಿಎಸ್‌ಐ ಸೇರಿ ಮೂವರು ಪೊಲೀಸ್‌ ಸಿಬ್ಬಂದಿ ವಿರುದ್ಧ ಎಫ್‌ಐಆರ್‌

    ಲಾಕಪ್‌ ಡೆತ್‌ ಪ್ರಕರಣ; ಪಿಎಸ್‌ಐ ಸೇರಿ ಮೂವರು ಪೊಲೀಸ್‌ ಸಿಬ್ಬಂದಿ ವಿರುದ್ಧ ಎಫ್‌ಐಆರ್‌

    ಕೋಲಾರ: ವಿಚಾರಣೆಗೆಂದು ಕರೆತಂದು ಪೊಲೀಸರ ಸುಪರ್ದಿಯಲ್ಲಿದ್ದ ಕಳವು ಪ್ರಕರಣದ ಶಂಕಿತ ಅರೋಪಿ ಲಾಕಪ್ ಡೆತ್ (Lockup Death) ಆದ ಹಿನ್ನೆಲೆ ಪಿಎಸ್‌ಐ ಹಾಗೂ ಇಬ್ಬರು ಪೊಲೀಸ್ ಪೇದೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.

    ಕೋಲಾರ (Kolara) ಜಿಲ್ಲೆಯ ಮುಳಬಾಗಿಲು ನಂಗಲಿ ಪೊಲೀಸ್ ಠಾಣೆ ಪಿಎಸ್‌ಐ ಹಾಗೂ ಇಬ್ಬರು ಪೊಲೀಸ್ ಪೇದೆಗಳ ವಿರುದ್ದ ಎಫ್‌ಐಅರ್ ದಾಖಲಾಗಿದೆ. ಕಳವು ಪ್ರಕರಣದಲ್ಲಿ ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಮುನಿರಾಜು ಹಾಗೂ ಬಾಲಾಜಿ ಎಂಬವವರನ್ನ ವಿಚಾರಣೆಗೆಂದು ಕರೆ ತಂದಿದ್ದ ವೇಳೆ ಮುನಿರಾಜು ಮೃತಪಟ್ಟಿದ್ದ. ಇದನ್ನೂ ಓದಿ: ಬೆಂಗ್ಳೂರಿನಲ್ಲೂ ಆತಂಕ ಹುಟ್ಟಿಸಿದ ಚೀನಾದ ಹೊಸ ವೈರಸ್ – BBMP ಫುಲ್ ಅಲರ್ಟ್!

    ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ಅರೋಪಿಗಳನ್ನ ವಿಚಾರಣೆ ಮಾಡಿ ಕರ್ತವ್ಯ ಲೋಪ ಎಸಗಿದ್ದಾರೆಂದು ಮುಳಬಾಗಿಲು ಡಿವೈಎಪ್‌ಪಿ ನಂದ ಕುಮಾರ್ ವರದಿ ಆಧರಿಸಿ, ಪಿಎಸ್‌ಐ ಪ್ರದೀಪ್ ಸಿಂಗ್, ಪೊಲೀಸ್ ಪೇದೆಗಳಾದ ಮಂಜುನಾಥ್, ಮಹಾಂತೇಶ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

    ಸೆಪ್ಟೆಂಬರ್ 17 ರಂದು ಮುನಿರಾಜು ಹಾಗೂ ಬಾಲಾಜಿ ಎಂಬ ಇಬ್ಬರನ್ನು ಕರೆತಂದಿದ್ದರು. ಅಕ್ಟೋಬರ್ 1 ರಂದು ಮುನಿರಾಜು ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ, 15 ದಿನಗಳ ಕಾಲ ಪೊಲೀಸ್ ಠಾಣೆ, ಬೇರೆ ಬೇರೆ ಸ್ಥಳಗಳಲ್ಲಿರಿಸಿ ವಿಚಾರಣೆ ವೇಳೆ ಮುನಿರಾಜು ಮೃತಪಟ್ಟಿದ್ದ. ಪರಿಣಾಮ ಪಿಎಸ್‌ಐ ಸೇರಿ ಇಬ್ಬರು ಪೊಲೀಸ್ ಪೇದೆಗಳ ವಿರುದ್ಧ ಪ್ರಕರಣ ದಾಖಲಾದ ಕಾರಣ ಇವರನ್ನು ಕೋಲಾರ ಎಸ್ಪಿ ನಾರಾಯಣ ಅಮಾನತು ಮಾಡಿದ್ದಾರೆ. ಇದನ್ನೂ ಓದಿ: 1 ವರ್ಷದ ಬಳಿಕ ರೇಣುಕಾಚಾರ್ಯ ಅಣ್ಣನ ಮಗ ಸಾವು ಪ್ರಕರಣ ಮುಕ್ತಾಯ; ಅಪಘಾತದಿಂದಲೇ ಸಾವು ಎಂದು ವರದಿ

  • ಅಪ್ಪ-ಮಗನನ್ನು ಹಿಂಸಿಸಿ ಕೊಂದ ತಮಿಳುನಾಡಿನ ನಾಲ್ವರು ಪೊಲೀಸ್ ಅರೆಸ್ಟ್

    ಅಪ್ಪ-ಮಗನನ್ನು ಹಿಂಸಿಸಿ ಕೊಂದ ತಮಿಳುನಾಡಿನ ನಾಲ್ವರು ಪೊಲೀಸ್ ಅರೆಸ್ಟ್

    ಚೆನ್ನೈ: ಅಪ್ಪ-ಮಗನನ್ನು ಹಿಂಸಿಸಿ ಕೊಂದ ತಮಿಳುನಾಡಿನ ನಾಲ್ವರು ಪೊಲೀಸರನ್ನು ಸಿಬಿ-ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

    ಲಾಕ್‍ಡೌನ್ ಉಲ್ಲಂಘನೆ ಮಾಡಿದ್ದಾರೆ ಎಂಬ ಕ್ಷುಲಕ ಕಾರಣಕ್ಕೆ ಅಪ್ಪ-ಮತ್ತು ಮಗನ್ನು ಠಾಣೆಗೆ ಎಳೆತಂದ ಪೊಲೀಸರು ಸಾಯುವವರೆಗೂ ಹಲ್ಲೆ ಮಾಡಿದ್ದರು. ಈ ಹಲ್ಲೆ ಮಾಡಿದ ಇನ್ಸ್ ಪೆಕ್ಟರ್ ಶ್ರೀಧರ್, ಸಬ್ ಇನ್ಸ್ ಪೆಕ್ಟರ್ ಗಳಾದ ರಘು ಗಣೇಶ್ ಮತ್ತು ಬಾಲಕೃಷ್ಣನ್ ಹಾಗೂ ಕಾನ್‍ಸ್ಟೆಬಲ್ ಮುರುಗನ್ ಅವರನ್ನು ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

    ಲಾಕ್‍ಡೌನ್ ಅವದಿಗೂ ಮೀರಿ ಮೊಬೈಲ್ ಶಾಪ್ ಓಪನ್ ಮಾಡಿದ್ದಾರೆ ಎಂಬ ಕಾರಣಕ್ಕೆ ಠಾಣೆಗೆ ಅಪ್ಪ ಜಯರಾಜ್ ಮತ್ತು ಮಗ ಬೆನಿಕ್ಸ್ ಅನ್ನು ಕರೆತಂದಿದ್ದ ಪೊಲೀಸರು, ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಪರಿಣಾಮ ಇಬ್ಬರು ಸಾವನ್ನಪ್ಪಿದ್ದರು. ಪೊಲೀಸರ ಈ ಕ್ರೂರ ಕೃತ್ಯಕ್ಕೆ ಇಡೀ ದೇಶದಲ್ಲೇ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ನಟ ಕಮಲ್ ಹಾಸನ್ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಡ ಕೂಡ ಹಾಕಿದ್ದರು.

    ಇದರ ಜೊತೆಗೆ ಜೂನ್ 19ರಂದು ಘಟನೆ ನಡೆದಾಗ ಸಾಥನ್‍ಕುಲಂ ಪೊಲೀಸ್ ಠಾಣೆ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಕೂಡ ಮಾಡಲಾಗಿದೆ. ಇದರಿಂದ ಅನುಮಾನಗೊಂಡ ಮದ್ರಾಸ್ ಹೈಕೋರ್ಟ್ ಸರಿಯಾಗಿ ತನಿಖೆ ಮಾಡುವಂತೆ ಜೊತೆಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿತ್ತು. ಈಗ ಸಿಐಡಿ ತಂಡ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅರೆಸ್ಟ್ ಮಾಡಿ ತನಿಖೆ ಮಾಡುತ್ತಿದೆ.

    ಜೂನ್ 19ರಂದು ಮೊಬೈಲ್ ಅಂಗಡಿಯನ್ನು ನೀಡಿರುವ ಅವಧಿಗೂ ಹೆಚ್ಚು ಕಾಲ ತೆರೆದಿದ್ದಾರೆ ಎಂದು, ಜಯರಾಜ್ ಮತ್ತು ಜೆ ಬೆನಿಕ್ಸ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಈ ವೇಳೆ ಅವರನ್ನು ಕೋರ್ಟಿಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಮ್ಯಾಜಿಸ್ಟ್ರೇಟ್ ಬಿ ಸರವಣ ಅವರನ್ನು ವಿಚಾರಣೆ ಮಾಡುವಂತೆ ಅದೇಶ ಮಾಡಿದ್ದರು. ಈ ವೇಳೆ ಅವರನ್ನು ಠಾಣೆಗೆ ಕರೆದುಕೊಂಡು ಬಂದ ಪೊಲೀಸರು ಅಪ್ಪ-ಮಗನ ಮೇಲೆ ಹಲ್ಲೆ ಮಾಡಿದ್ದರು.

    ಪೊಲೀಸರ ಏಟನ್ನು ತಡೆಯಲಾಗದ ಬೆನಿಕ್ಸ್ ಅಲ್ಲೇ ಕುಸಿದು ಬಿದ್ದಿದ್ದರು, ಅವರನ್ನು ಜೂನ್ 22ರ ಸಂಜೆ ಕೋವಿಲ್ಪಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಂದೇ ರಾತ್ರಿ ಆತ ಮೃತಪಟ್ಟಿದ್ದ. ಇದಾದ ನಂತರ ಅವರ ತಂದೆ ಜಯರಾಜ್ ಕೂಡ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಜೂನ್ 23ರ ಬೆಳಗ್ಗೆ ಅದೇ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಅವರು ಕೂಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

    ಡಿಎಂಕೆ ಪಕ್ಷದ ಸಂಸದ ಕನಿಮೋಜಿ ಅವರು ಈ ವಿಚಾರವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್.ಎಚ್.ಆರ್.ಸಿ) ಪತ್ರ ಬರೆದಿದ್ದು ಇದರಲ್ಲಿ, ಪೊಲೀಸ್ ಅಧಿಕಾರಿಗಳು ಬೆನ್ನಿಕ್ಸ್ ಅವರ ಗುದದ್ವಾರಕ್ಕೆ ಲಾಠಿ ಹಾಕಿದ್ದಾರೆ. ಈ ವೇಳೆ ರಕ್ತಸ್ರಾವ ಉಂಟಾಗಿ ಅವರು ಸಾವನ್ನಪ್ಪಿದ್ದಾರೆ ಮತ್ತು ಪೊಲೀಸ್ ಅಧಿಕಾರಿಗಳು ಜಯರಾಜ್ ಅವರನ್ನು ಮಾರಣಾಂತಿಕವಾಗಿ ಥಳಿಸಿದ್ದಾರೆ. ಪೊಲೀಸರು ಶೂಳಿಂದ ಜಯರಾಜ್ ಅವರ ಎದೆಗೆ ಮೇಲೆ ಅನೇಕ ಬಾರಿ ಒದ್ದಿರುವ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ಹೇಳಿದ್ದರು.

  • ತಮಿಳುನಾಡಿನಲ್ಲಿ ಲಾಕಪ್ ಡೆತ್ – ಪೊಲೀಸರ ಮೇಲಿಲ್ಲ ಎಫ್‍ಐಆರ್

    ತಮಿಳುನಾಡಿನಲ್ಲಿ ಲಾಕಪ್ ಡೆತ್ – ಪೊಲೀಸರ ಮೇಲಿಲ್ಲ ಎಫ್‍ಐಆರ್

    – ಠಾಣೆಯೊಳಗೆ ಅಪ್ಪ-ಮಗನನ್ನು ಸಾಯೊವರೆಗೂ ಹಿಂಸಿಸಿದ್ರು

    ಚೆನ್ನೈ: ತಮಿಳುನಾಡಿನಲ್ಲಿ ಠಾಣೆಯೊಳಗೆ ಅಪ್ಪ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಅವರನ್ನು ಹಿಂಸಿಸಿ ಸಾಯುವಂತೆ ಮಾಡಿದ ಪೊಲೀಸರ ವಿರುದ್ಧ ಇನ್ನೂ ಎಫ್‍ಐಆರ್ ದಾಖಲಾಗದೆ ಇರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಬಹಳ ಆಕ್ರೋಶ ವ್ಯಕ್ತವಾಗಿದೆ.

    ಕೇವಲ ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಜಯರಾಜ್ (59) ಮತ್ತು ಅವರ ಪುತ್ರ ಜೆ ಬೆನಿಕ್ಸ್ (31) ಅವರನ್ನು ಠಾಣೆಗೆ ಕರೆದುಕೊಂಡು ಬಂದ ತಮಿಳುನಾಡಿನ ಸಾಥಕುಲಂ ಪೊಲೀಸರು, ಅವರನ್ನು ಲಾಕ್‍ಪ್‍ಗೆ ಹಾಕಿ ಹಲ್ಲೆ ಮಾಡಿದ್ದರಿಂದಲೇ ಇಬ್ಬರು ಸಾವನ್ನಪ್ಪಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

    ಜೂನ್ 22ರಂದು ಮೊಬೈಲ್ ಅಂಗಡಿಯನ್ನು ನೀಡಿರುವ ಅವಧಿಗೂ ಹೆಚ್ಚು ಕಾಲ ತೆರೆದಿದ್ದಾರೆ ಎಂದು, ಜಯರಾಜ್ ಮತ್ತು ಜೆ ಬೆನಿಕ್ಸ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಈ ವೇಳೆ ಅವರನ್ನು ಕೋರ್ಟಿಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಮ್ಯಾಜಿಸ್ಟ್ರೇಟ್ ಬಿ ಸರವಣ ಅವರನ್ನು ವಿಚಾರಣೆ ಮಾಡುವಂತೆ ಅದೇಶ ಮಾಡಿದ್ದರು. ಈ ವೇಳೆ ಅವರನ್ನು ಠಾಣೆಗೆ ಕರೆದುಕೊಂಡು ಬಂದ ಪೊಲೀಸರು ಅಪ್ಪ-ಮಗನ ಮೇಲೆ ಹಲ್ಲೆ ಮಾಡಿದ್ದರು.

    ಪೊಲೀಸರ ಏಟನ್ನು ತಡೆಯಲಾಗದ ಬೆನಿಕ್ಸ್ ಅಲ್ಲೇ ಕುಸಿದು ಬಿದ್ದಿದ್ದ, ಆತನನ್ನು ಜೂನ್ 22ರ ಸಂಜೆ ಕೋವಿಲ್ಪಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಂದೇ ರಾತ್ರಿ ಆತ ಮೃತಪಟ್ಟಿದ್ದ. ಇದಾದ ನಂತರ ಅವರ ತಂದೆ ಜಯರಾಜ್ ಕೂಡ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಜೂನ್ 23ರ ಬೆಳಗ್ಗೆ ಅದೇ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಅವರು ಕೂಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

    ಈ ವಿಚಾರ ಹೊರಗೆ ಬರುತ್ತಿದ್ದಂತೆ ದೇಶದಲ್ಲೆಡೆ ಪೊಲೀಸರ ಕ್ರೂರ ಕೆಲಸದ ವಿರುದ್ಧ ಆಕ್ರೋಶ ಭುಗಿಲೆದ್ದಿತ್ತು. ಆಗ ಇದನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ ಪೊಲೀಸ್ ಇಲಾಖೆ ಅವರೇ ಬೇಕೆಂದೆ ಪೊಲೀಸ್ ಠಾಣೆಯಲ್ಲಿ ಬಿದ್ದು ಗಾಯಮಾಡಿಕೊಂಡರು. ಇದರಲ್ಲಿ ನಮ್ಮದು ಏನೂ ತಪ್ಪಿಲ್ಲ ಎಂದು ಹೇಳಿತ್ತು. ಜೊತೆಗೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಆದರೆ ಅವರ ವಿರುದ್ಧ ಎಫ್‍ಐಆರ್ ದಾಖಲು ಮಾಡಬೇಕು ಎಂದು ಜನರ ಆಗ್ರಹಿಸಿದ್ದರು.

    ಈಗ ಬೆನಿಕ್ಸ್ ಮತ್ತು ಜಯರಾಜ್ ಅವರ ಮರಣೋತ್ತರ ವರದಿ ಬಂದಿದ್ದು, ಅವರನ್ನು ಹಿಂಸಿಸಿ ಕೊಲ್ಲಲಾಗಿದೆ ಎಂದು ವರದಿಯಾಗಿದೆ. ಆದರೆ ಇನ್ನೂ ಪೊಲೀಸ್ ಅಧಿಕಾರಿಗಳ ಮೇಲೆ ಎಫ್‍ಐಆರ್ ದಾಖಲಾಗದೆ ಇರುವುದು ವಿಪರ್ಯಾಸ. ಇದರೆಲ್ಲದ ನಡುವೆ ಮೃತ ಕುಟುಂಬ ನಮಗೆ ನ್ಯಾಯ ಸಿಗುವವರೆಗೂ ನಾವು ಮೃತದೇಹಗಳನ್ನು ಪಡೆದುಕೊಳ್ಳುವುದಿಲ್ಲ ಎಂದು ಹೇಳಿದೆ. ನಮಗೆ ನ್ಯಾಯ ಕೊಡಿಸುವುದಾಗಿ ನ್ಯಾಯಾಧೀಶರು ಮಾತು ಕೊಟ್ಟರೇ ಮೃತದೇಹವನ್ನು ಪಡೆಯುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

    ಡಿಎಂಕೆ ಪಕ್ಷದ ಸಂಸದ ಕನಿಮೋಜಿ ಅವರು ಈ ವಿಚಾರವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್‍.ಎಚ್‍.ಆರ್.ಸಿ) ಪತ್ರ ಬರೆದಿದ್ದು ಇದರಲ್ಲಿ, ಪೊಲೀಸ್ ಅಧಿಕಾರಿಗಳು ಬೆನ್ನಿಕ್ಸ್ ಅವರ ಗುದದ್ವಾರಕ್ಕೆ ಲಾಠಿ ಹಾಕಿದ್ದಾರೆ. ಈ ವೇಳೆ ರಕ್ತಸ್ರಾವ ಉಂಟಾಗಿ ಅವರು ಸಾವನ್ನಪ್ಪಿದ್ದಾರೆ ಮತ್ತು ಪೊಲೀಸ್ ಅಧಿಕಾರಿಗಳು ಜಯರಾಜ್ ಅವರನ್ನು ಮಾರಣಾಂತಿಕವಾಗಿ ಥಳಿಸಿದ್ದಾರೆ. ಪೊಲೀಸರು ಶೂಳಿಂದ ಜಯರಾಜ್ ಅವರ ಎದೆಗೆ ಮೇಲೆ ಅನೇಕ ಬಾರಿ ಒದ್ದಿರುವ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

  • ಲಾಕಪ್ ಡೆತ್: ಕೇಸ್ ಯಶಸ್ವಿಯಾಗಿ ಮುಚ್ಚಿಹಾಕಿದ್ರಾ ಶಿವಮೊಗ್ಗ ಪೊಲೀಸರು?

    ಲಾಕಪ್ ಡೆತ್: ಕೇಸ್ ಯಶಸ್ವಿಯಾಗಿ ಮುಚ್ಚಿಹಾಕಿದ್ರಾ ಶಿವಮೊಗ್ಗ ಪೊಲೀಸರು?

    ಶಿವಮೊಗ್ಗ: ಪೊಲೀಸ್ ವಶದಲ್ಲಿ ವ್ಯಕ್ತಿಯ ಸಾವಿನ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ. ಈ ಪ್ರಕರಣದಲ್ಲಿ ಸ್ವತಃ ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ ಅವರೇ ಮುಖ್ಯಪಾತ್ರವಹಿಸಿರುವುದು ಆತಂಕಕಾರಿಯಾಗಿದೆ.

    ಓಸಿ-ಮಟ್ಕಾ ದಂಧೆ ಮಾಡುತ್ತಿದ್ದಾರೆ ಎಂದು ಹೊಳೆಹೊನ್ನೂರು ಠಾಣೆ ಪೊಲೀಸರು ನಿನ್ನೆ ಆಗರದಹಳ್ಳಿಯ ಬಾಲೇಶ್ ಎಂಬವರನ್ನು ಕರೆದುಕೊಂಡು ಬಂದಿದ್ದರು. ಹೊಳೆಹೊನ್ನೂರಿನಿಂದ ಶಿವಮೊಗ್ಗ ಡಿಆರ್ ಮೈದಾನದಲ್ಲಿರುವ ಪೊಲೀಸ್ ಸಭಾ ಭವನಕ್ಕೆ ಕರೆದುಕೊಂಡು ಬಂದಿದ್ದರು. ಇಲ್ಲಿರುವ ಸಭಾ ಭವನದಲ್ಲಿ ಎಸ್‍ಪಿ ಡಾ.ಅಶ್ವಿನಿ ಅವರ ಸಮ್ಮುಖದಲ್ಲೇ ಬಾಲೇಶ್ ಹಾಗೂ ಇನ್ನಿತರರನ್ನು ಒಟ್ಟಿಗೆ ಸೇರಿಸಿ ಹಿಗ್ಗಾಮುಗ್ಗ ಥಳಿಸಿದ್ದರು. ಈ ಸಂದರ್ಭದಲ್ಲಿ ಬಾಲೇಶ್ ಮೃತಪಟ್ಟಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    ತಕ್ಷಣವೇ ಪೊಲೀಸ್ ಜೀಪಿನಲ್ಲೇ ಬಾಲೇಶ್ ಶವನ್ನು ಮೆಗಾನ್ ಆಸ್ಪತ್ರೆಗೆ ಸಾಗಿಸಿದ್ದರು. ಬಳಿಕ ಮೃತನ ಕುಟುಂಬಸ್ಥರಿಗೆ ಕರೆ ಮಾಡಿ ಆಸ್ಪತ್ರೆಗೆ ಬರಲು ಸೂಚಿಸಿದ್ದರು. ರಾತ್ರಿ ಪೊಲೀಸರ ದೌರ್ಜನ್ಯದಿಂದಲೇ ಬಾಲೇಶ್ ಮೃತಪಟ್ಟಿದ್ದಾರೆ ಎಂದು ಸಂಬಂಧಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

    ತಡ ರಾತ್ರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅವರ ಸಂಬಂಧಿಗಳ ಮನವೊಲಿಸಿ, ಇದು ಹೃದಯಾಘಾತದಿಂದ ಆದ ಸಾವು ಎಂದು ಬಿಂಬಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕಾಗಿ ಬಾಲೇಶ್ ಕುಟುಂಬದವರಿಗೆ ಅಪಾರ ಪ್ರಮಾಣದ ಹಣ ನೀಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

    ಈ ಬಗ್ಗೆ ಮೊದಲು ಮಾಹಿತಿ ನೀಡಲು ನಿರಾಕರಿಸಿದ ಎಸ್‍ಪಿ ಅಶ್ವಿನಿ, ನಂತರ ಪೂರ್ವ ವಲಯ ಐಜಿ ಅವರಿಗೆ ದೂರು ಹೋದ ನಂತರ ಮಾಧ್ಯಮಗಳ ಮುಂದೆ ಬಂದರು. ಆದರೆ, ಮಾಧ್ಯಮಗಳ ಯಾವುದೇ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದೆ ಚುಟುಕಾಗಿ ಸುದ್ದಿಗೋಷ್ಠಿ ಮುಗಿಸಿದ್ದಾರೆ.

    ಉತ್ತರ ಸಿಗದ ಪ್ರಶ್ನೆಗಳು
    1) ಬಾಲೇಶ್ ಶವವನ್ನು ಪೊಲೀಸ್ ಜೀಪಿನಲ್ಲೇ ಮೆಗಾನ್ ಆಸ್ಪತ್ರೆಗೆ ತಂದಿದ್ದು ಹೇಗೆ?
    2) ಕೈಮರ ಗ್ರಾಮದ ಬಳಿ ಹೃದಯಾಘಾತದಿಂದ ಕುಸಿದಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ, ಅಲ್ಲಿಂದ ಇಲ್ಲಿಗೆ ಪೊಲೀಸ್ ಜೀಪಿನಲ್ಲಿ ತಂದಿದ್ದು ಹೇಗೆ?
    3) ಬಾಲೇಶ್ ಅವರ ಜೊತೆಯಲ್ಲಿ ಕರೆತಂದಿದ್ದ ಇನ್ನೂ ಐವರು ಯಾರು? ಅವರು ಎಲ್ಲಿದ್ದಾರೆ?
    4) ಈ ವಿಷಯವಾಗಿ ವಿಚಾರಣೆ ನಡೆಸುವುದಾಗಿ ಎಸ್ಪಿ ಹೇಳಿದ್ದಾರೆ. ಎಸ್ಪಿ ಸಮ್ಮುಖದಲ್ಲೇ ನಡೆದಿರುವ ಘಟನೆಗೆ ವಿಚಾರಣೆಯನ್ನು ಯಾವ ಹಂತದ ಅಧಿಕಾರಿ ನಡೆಸುತ್ತಾರೆ?