ಹಾಸನ: ಬಟ್ಟೆ ಆಫರ್‌ಗೆ (Cloth Offer) ಮುಗಿಬಿದ್ದ ಜನರನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಲಾಠಿ ಪ್ರಹಾರ (Lathi Charge) ನಡೆಸಿದ ಘಟನೆ ಹಾಸನ (Hassan) ನಗರದ ಉದಯಗಿರಿ (Udayagiri) ಬಡಾವಣೆಯಲ್ಲಿ ನಡೆದಿದೆ.
ಅರುಣ್ ಅಡ್ಡ ಮೆನ್ಸ್ ವೇರ್‌ನವರು ಈ ಬಿಗ್ ಆಫರ್ ನೀಡಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಖರೀದಿಗೆ ನೂಕುನುಗ್ಗಲು ಉಂಟಾದ ಹಿನ್ನೆಲೆ ಪೊಲೀಸರು ಖರೀದಿಗೆ ಬಂದಿದ್ದ ಯುವಕರಿಗೆ ಲಾಠಿ ರುಚಿ ತೋರಿಸಿದ್ದಾರೆ. ಲಾಠಿ ಚಾರ್ಜ್ ನಡೆಸಿದ ಪರಿಣಾಮ ಯುವಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸುಧಾಮೂರ್ತಿಗೆ ಕರೆ ಮಾಡಿ ವಂಚನೆಗೆ ಯತ್ನಿಸಿದ್ದ ಸೈಬರ್ ಕಳ್ಳರು!
ಬೆಂಗಳೂರು: ಮಂಡ್ಯ (Mandya) ಕೆರಗೋಡು(Keragodu) ಗ್ರಾಮದಲ್ಲಿ ಹನುಮ ಧ್ವಜ ತೆರವು ವೇಳೆ ಲಾಠಿಚಾರ್ಜ್ (Lathi Charge) ಮಾಡಿದನ್ನು ಪ್ರಶ್ನಿಸಿ ಗ್ರಾಮಸ್ಥರು ಈಗ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
ಹನುಮ ಧ್ವಜ ತೆರವಿಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದಾಗ ಗಲಾಟೆ ನಡೆದು ಪೊಲೀರು ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್ ಕೂಡ ಮಾಡಿದ್ದರು.
ಪೊಲೀಸರು ಲಾಠಿ ಚಾರ್ಜ್ ಮಾಡಿದ ಬಗ್ಗೆ ಕಾನೂನು ಹೋರಾಟ ನಡೆಸಲು ಹೈಕೋರ್ಟ್ ವಕೀಲ ವಿವೇಕ್ ರೆಡ್ಡಿ ಅವರನ್ನು ಗ್ರಾಮಸ್ಥರು ಸಂಪರ್ಕಿಸಿದ್ದಾರೆ. ಆಗಿರುವ ಅನ್ಯಾದ ವಿರುದ್ಧ ಕಾನೂನು ಹೋರಾಟ ನಡೆಸಲು ಕಾನೂನಾತ್ಮಕವಾಗಿ ಸಹಕರಿಸುವಂತೆ ವಿವೇಕ್ ಸುಬ್ಬಾರೆಡ್ಡಿ ಬಳಿ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಗದಗ ಕಟೌಟ್ ದುರಂತ: ಗಾಯಾಳುಗಳ ಕುಟುಂಬಕ್ಕೆ ಯಶ್ 1 ಲಕ್ಷ ಪರಿಹಾರ
ಕೆರಗೋಡು ಗ್ರಾಮದ ಮುಖಂಡ ಮಹೇಶ್ ಅವರ ಜೊತೆ ಗ್ರಾಮಸ್ಥರು ವಕೀಲರನ್ನು ಭೇಟಿಯಾಗಿ ಅಂದು ಏನೇನು ನಡೆಯಿತು ಎನ್ನುವುದರ ಕುರಿತು ವಿವರಣೆ ನೀಡಿದ್ದಾರೆ. ಸರ್ಕಾರ ಮತ್ತು ಜಿಲ್ಲಾಡಳಿತ ಏಕಪಕ್ಷೀಯವಾಗಿ ನಡೆದುಕೊಳ್ಳುತ್ತಿದೆ. ಈ ಕಾರಣಕ್ಕೆ ಕಾನೂನು ಹೋರಾಟದ ಮಾಡೋ ಮೂಲಕ ನಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಳ್ಳಲು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಕೆರೆಗೋಡು ಗ್ರಾಮಸ್ಥರ ಮನವಿಗೆ ವಿವೇಕ್ ಸುಬ್ಬಾರೆಡ್ಡಿ ಸ್ಪಂದಿಸಿದ್ದು ಕಾನೂನು ಹೋರಾಟಕ್ಕೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಎಬಿವಿಪಿ ಮತ್ತು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ವಿದ್ಯಾರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ರಾಯಚೂರಿನಲ್ಲಿ ಅಂಬೇಡ್ಕರ್ ಅವರಿಗೆ ಅವಮಾನವಾದ ಹಿನ್ನೆಲೆ ಬೆಂಗಳೂರು ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದರೆ ಇತ್ತ ಮಾಕ್ರ್ಸ್ ಕಾರ್ಡ್, ಫಲಿತಾಂಶ ತಡವಾಗಿ ಬರುತ್ತಿರುವ ಹಿನ್ನೆಲೆ ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ.
ಪ್ರತಿಭಟನೆ ವೇಳೆ ಎಬಿವಿಪಿ ವಿದ್ಯಾರ್ಥಿಗಳೊಂದಿಗೆ ಸಂಶೋಧನಾ ವಿದ್ಯಾರ್ಥಿಗಳು ವಾಗ್ವಾದ ಇಳಿದಿದ್ದು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ವಿಚಾರವೇ ದೊಡ್ಡದು. ದೇಶಕ್ಕಾಗಿ ನೀವು ಬರುವುದಿಲ್ಲ ಮಾಕ್ರ್ಸ್ ಕಾರ್ಡ್, ಫಲಿತಾಂಶ ತಡವಾಗುವುದು ಇದೆಲ್ಲ ಮಾಮೂಲಿಯಾಗಿದೆ. ಇವತ್ತು ನಮ್ಮ ಪ್ರತಿಭಟನೆ ಇದೆ. ನೀವು ನಾಳೆ ಬನ್ನಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಫುಟ್‍ಪಾತ್ ಮೇಲೆ ಕಾರು ಚಾಲನೆ – ಅಪ್ರಾಪ್ತನ ಹುಚ್ಚಾಟಕ್ಕೆ ನಾಲ್ವರು ಬಲಿ
ಗಲಾಟೆ ವೇಳೆ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಸಂಶೋಧನಾ ವಿವಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳು, ಮನ ಬಂದಂತೆ ತಮ್ಮ ಸ್ನೇಹಿತರನ್ನ ಹಾಸ್ಟೆಲ್‍ನಲ್ಲಿ ಉಳಿಸಿಕೊಳ್ಳುತ್ತಿದ್ದರು. ಇದರಿಂದ ಉಳಿದ ವಿದ್ಯಾರ್ಥಿಗಳಿಗೂ ಸಮಸ್ಯೆಯಾಗುತ್ತಿತ್ತು. ಕೆಲ ಸಂಶೋಧನಾ ವಿದ್ಯಾರ್ಥಿಗಳು ಇದನ್ನು ಪ್ರಶ್ನೆ ಮಾಡಿದರೆ ನೀವು ಜೂನಿಯರಗಳು ಅಂತ ದರ್ಪ ಮಾಡುತ್ತಿದ್ದಾರೆ ಎಂದು ಎಬಿವಿಪಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಮಂಗಳೂರು: ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಬರುವ 4 ತಾಲೂಕಿನಲ್ಲಿ ತಕ್ಷಣದಿಂದ ಡಿಸೆಂಬರ್ 17ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮಂಗಳವಾರ ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಪಿಎಫ್‍ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆದಿತ್ತು. ಇದರ ಬೆನ್ನಲ್ಲೇ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಅವರು ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನಾದ್ಯಂದ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ನಮಗೂ ಸಂಬಂಧವಿಲ್ಲ: ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಪಿಎಫ್ ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡರು ಸುದ್ದಿಗೋಷ್ಠಿ ನಡೆಸಿದ್ದಾರೆ.
A call for statewide protest has been made for tomorrow (Dec 15) condemning police brutality and the high-handedness of men in khaki uniform.
ಪಿಎಫ್‍ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್ ಮಾತನಾಡಿ, ಉಪ್ಪಿನಂಗಡಿ ತಲವಾರು ದಾಳಿಗೂ ನಿನ್ನೆ ಬಂಧಿಸಿದವರಿಗೂ ಸಂಬಂಧವಿಲ್ಲ. ಆದರೆ ಪ್ರಕರಣದ ಆರೋಪಿಗಳನ್ನು ಕರೆದುಕೊಂಡು ಬನ್ನಿ ಎಂದು ಹೇಳಿ ನಮ್ಮ ಪ್ರಮುಖರನ್ನು ಬಂಧಿಸಿದ್ದಾರೆ. ನಮ್ಮ ಮುಖಂಡರು ಠಾಣೆಯ ಒಳಗೆ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡುತ್ತಿದ್ದರು. ಆದರೆ ಹೊರಗೆ ಏಕಾಏಕಿ ನಮ್ಮ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: ಯುವತಿಯ ಒಂದು ದೂರಿಗೆ 1 ಸಾವಿರ ಪೊಲೀಸರು ತನಿಖೆ ಮಾಡಿದ್ರು!
ರಾತ್ರಿ ವೇಳೆ ಬೀದಿ ದೀಪಗಳನ್ನು ಆರಿಸಿ ನಮ್ಮ ಕಾರ್ಯಕರ್ತರ ಮೇಲೆ ಲಾಠಿ ಬೀಸಿದ್ದಾರೆ. ಕ್ಯಾಮೆರಾಗಳಲ್ಲಿ ಲಾಠಿ ಬೀಸಿದ ದೃಶ್ಯಗಳು ಸೆರೆಯಾಗಬಾರದು ಎಂದು ಹೀಗೆ ಮಾಡಿದ್ದಾರೆ. ಬಂಟ್ವಾಳ ಎಸ್‌ಐ ಪ್ರಸನ್ನರಿಗೆ ಚೂರಿ ಇರಿತ ಆಗಿದೆ ಅಂತ ಸುದ್ದಿ ಹಬ್ಬಿಸಿದ್ದಾರೆ. ಚೂರಿ ಇರಿತ ಆಗಿದ್ದರೆ ಅವರಿಗೆ ಎಲ್ಲಿ ಗಾಯವಾಗಿದೆ ಅಂತ ತೋರಿಸಲಿ. ಯಾವ ಪೊಲೀಸ್ ಅಧಿಕಾರಿಗೂ ಗಾಯ ಆಗಿಲ್ಲ. ಆದರೆ ಕಥೆ ಕಟ್ಟುತ್ತಿದ್ದಾರೆ ಎಂದು ದೂರಿದರು.
ಪೊಲೀಸ್ ಠಾಣೆಯ ಸುತ್ತ ಸಿಸಿ ಕ್ಯಾಮೆರಾ ಇದೆ. ಅದರ ವಿಡಿಯೋ ಬಹಿರಂಗಪಡಿಸಬೇಕು. ಪ್ರತಿಭಟನೆ ಮಾಡುತ್ತಿದ್ದವರು ಉದ್ವಿಗ್ನತೆ ಸೃಷ್ಟಿಸಿದ್ದರೆ ಅದರ ಸಿಸಿ ಟಿವಿ ಬಹಿರಂಗ ಪಡಿಸಲಿ. ಈ ವಿಚಾರದಲ್ಲಿ ತಪ್ಪಿತಸ್ಥ ಅಧಿಕಾರಿಗಳ ಮತ್ತು ಸಿಬ್ಬಂದಿಯ ತಲೆ ತಂಡವಾಗಬೇಕು. ನಮ್ಮ ಒಬ್ಬ ಧರ್ಮ ಗುರುವಿನ ತಲೆಗೆ ಹೊಡೆದಿದ್ದಾರೆ. ಇದು ಲಾಠಿಯಲ್ಲಿ ಹೊಡೆದಿಲ್ಲ. ಇದು ಬೇರೆ ಆಯುಧದಿಂದ ಹೊಡೆದಿರುವುದು. ಹೀಗಾಗಿ ನಾವು ಸರ್ವ ಜನರನ್ನು ಸೇರಿಸಿ ಡಿಸೆಂಬರ್ 17ರ ಶುಕ್ರವಾರ ಎಸ್‌ಪಿ ಕಚೇರಿ ಚಲೋ ನಡೆಸುತ್ತೇವೆ. ಎಲ್ಲರೂ ಒಟ್ಟಾಗಿ ಶುಕ್ರವಾರ ಬೃಹತ್ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು.
ರಾಂಚಿ: ಜಾರ್ಖಂಡ್ ಅಕಾಡೆಮಿಕ್ ಕೌನ್ಸಿಲ್ ಘೋಷಿಸಿದ 10ನೇ ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಮರು ಪರಿಶೀಲನೆ ನಡೆಸುವಂತರೆ ಒತ್ತಾಯಿಸಿದ ವಿದ್ಯಾರ್ಥಿನಿಯರ ಮೇಲೆ ಪೊಲೀಸರು ನಡೆಸಿದ್ದ ಲಾಠಿ ಚಾರ್ಜ್ ಕುರಿತಂತೆ ತನಿಖೆ ನಡೆಸಿ ಎಂದು ಶಿಕ್ಷಣ ಸಚಿವ ಜಾಗರಣಾಥ್ ಮಹತೋ ಆದೇಶಿಸಿದ್ದಾರೆ.
ಆಗಸ್ಟ್ 6ರಂದು ರಾಜ್ಯ ಸಚಿವ ಬನ್ನ ಗುಪ್ತಾ ಅವರ ಎದುರಿಗೆ ಪ್ರತಿಭಟನೆ ನಡೆಸಲು ಧನ್ಭಾದ್ ಕಲೆಕ್ಟರೇಟ್‍ನಲ್ಲಿ ವಿದ್ಯಾರ್ಥಿನಿಯರು ಜಮಾಯಿಸಿದ್ದರು. ಈ ವೇಳೆ ಗುಪ್ತಾರವರು ಸಭೆ ನಡೆಸುತ್ತಿದ್ದಾಗ ಪ್ರತಿಭಟನಾ ನಿರತ ವಿದ್ಯಾರ್ಥಿನಿಯರು ಗೇಟ್ ಬಳಿ ಬಲವಂತವಾಗಿ ಬಂದಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಲು ಮುಂದಾಗಿದ್ದಾರೆ.
#WATCH | Jharkhand: Police lathi-charged girl students at Dhanbad collectorate where they gathered to protest before State Minister Banna Gupta on July 6. The protesting girls forced their way to gate of a hall where Gupta was chairing a meeting, prompting police to use force pic.twitter.com/EXwnWb02Co
ಈ ಬಗ್ಗೆ ಜಾಗರಣಾಥ್ ಮಹತೋ, ಮರು ಮೌಲ್ಯಮಾಪನ ಪರಿಶೀಲಿಸಬಹುದು. ಪರೀಕ್ಷೆಯಲ್ಲಿ ವಿಫಲವಾದ ಯಾವುದೇ ವಿದ್ಯಾರ್ಥಿಗಳು, ಮತ್ತೊಮ್ಮೆ ಪರೀಕ್ಷೆಯನ್ನು ಸ್ವೀಕರಿಸಬಹುದು. ಸದ್ಯ ಲಾಠಿ ಚಾರ್ಚ್ ಕುರಿತಂತೆ ತನಿಖೆ ನಡೆಸಲು ಧನ್ಬಾದ್ ಡಿಸಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
There’s a well-established procedure for reassessment. If any unsuccessful student wants to pass the exam, he/she should approach the grievance cell. As far as the lathi-charge is concerned, the (Dhanbad) DC has constituted an enquiry: Jharkhand Education Minister Jagarnath Mahto pic.twitter.com/lTYFkK5Qhy
ಮತ್ತೊಂದೆಡೆ ಬಿಜೆಪಿ ಜಾರ್ಖಂಡ್ ಟ್ವಿಟ್ಟರ್‍ನಲ್ಲಿ, ಜಾರ್ಖಂಡ್‍ನ ದಬ್ಬಾಳಿಕೆ ಸರ್ಕಾರ ಜನರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ನಿನ್ನೆ ಧನ್ಭಾದ್‍ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ನಾಚಿಕೆಗೇಡಿನ ಕೆಲಸವಾಗಿದೆ. ಜನರು ಶೀಘ್ರವೇ ಅವರಿಗೆ ಉತ್ತರಿಸಲಿದ್ದಾರೆ ಟ್ವೀಟ್ ಮಾಡಿದೆ. ಇದನ್ನೂ ಓದಿ:ನೀರಜ್ ಚೋಪ್ರಾಗೆ ಸಿನಿಮಾ ಆಫರ್ ನೀಡಿದ ಅಕ್ಷಯ್ ಕುಮಾರ್
ಬೆಂಗಳೂರು: ಕೊರೊನಾದಿಂದ ಲಾಕ್‍ಡೌನ್ ಘೋಷಿಸಿದ್ದರು ರಸ್ತೆಗಳಿದವರ ಮೇಲೆ ಬಲ ಪ್ರಯೋಗ ಮಾಡಿದ್ದರಿಂದ ಜನರು ಪೊಲೀಸರ ಮೇಲೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್‍ರವರು ಸಾರ್ವಜನಿಕರ ಮೇಲೆ ಪೊಲೀಸರು ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಸೂಚಿಸಿದ್ದಾರೆ.
ಈ ಬಗ್ಗೆ ಕಮಲ್ ಪಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಒಂದು ವೇಳೆ ಸಾರ್ವಜನಿಕರು ಲಾಕ್‍ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಎಂಬ ಸೂಚನೆ ನೀಡಲಾಗಿದೆ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ಕೊರೊನ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ ಎಂದು ಮನವಿ ಮಾಡುವ ಮೂಲಕ ಟ್ವೀಟ್ ಮಾಡಿದ್ದಾರೆ.
ಒಂದು ವೇಳೆ ಸಾರ್ವಜನಿಕರು ಲಾಕ್ ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ @BlrCityPolice ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಎಂಬ ಸೂಚನೆ ನೀಡಲಾಗಿದೆ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ಕೊರೊನ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ.
(1/2)
ಅಷ್ಟೇ ಅಲ್ಲದೆ, ಲಾಕ್ ಡೌನ್ ಜಾರಿಯಾಗಿರುವ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಒಪ್ಪಿಗೆ ನೀಡಲಾದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಥವಾ ಕೆಲಸದ ಸ್ಥಳಕ್ಕೆ ಪ್ರಯಾಣಿಸುವ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಾದಲ್ಲಿ ಡಿಸಿಪಿ ಇಂಟಲಿಜೆನ್ಸ್ ಶ್ರೀ.ಸಂತೋಷ್ ಬಾಬು ಅವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-22942354 ಎಂದು ಸಲಹೆ ನೀಡಿದ್ದಾರೆ.
ಲಾಕ್ ಡೌನ್ ಜಾರಿಯಾಗಿರುವ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಒಪ್ಪಿಗೆ ನೀಡಲಾದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಥವಾ ಕೆಲಸದ ಸ್ಥಳಕ್ಕೆ ಪ್ರಯಾಣಿಸುವ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಾದಲ್ಲಿ ಡಿಸಿಪಿ ಇಂಟಲಿಜೆನ್ಸ್ ಶ್ರೀ.ಸಂತೋಷ್ ಬಾಬು ಅವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-22942354
ಮಂಗಳೂರು: ದೇಶದೆಲ್ಲೆಡೆ ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಬಿಸಿ ರಾಜ್ಯದ ಕರಾವಳಿಗೂ ತಟ್ಟಿದೆ. ಮಸೂದೆಯನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಮಂಗಳೂರಿನಲ್ಲಿ ರಸ್ತೆ ತಡೆ ಯತ್ನ ನಡೆದಿದ್ದು ಪೊಲೀಸರು ವಿದ್ಯಾರ್ಥಿಗಳು ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ.
ನಗರದ ಬಲ್ಮಠ ಜಂಕ್ಷನ್ ನಲ್ಲಿ ಬಲವಂತವಾಗಿ ರಸ್ತೆ ಬ್ಲಾಕ್ ಮಾಡಲು ಯತ್ನಿಸಿದ ವಿದ್ಯಾರ್ಥಿಗಳು ಹಾಗೂ ಯುವಕರ ಪ್ರತಿಭಟನೆಯನ್ನು ಪೊಲೀಸರು ತಡೆಯಲು ಯತ್ನಿಸಿದರು. ಈ ವೇಳೆ ರಸ್ತೆಯಲ್ಲೇ ಮಲಗಿ ಪೊಲೀಸರು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪೊಲೀಸರು ಬಂಧಿಸಲು ಮುಂದಾದಾಗ ಪೊಲೀಸರ ಕಾರ್ಯಾಚರಣೆಗೆ ಅಡ್ಡಿ ಪಡಿಸಿದ್ದಾರೆ.
ಪ್ರತಿಭಟನಾಕಾರರು ರಸ್ತೆಯನ್ನು ಬಿಟ್ಟು ಮೇಲೆ ಏಳದೆ ಸಂಚಾರಕ್ಕೆ ತೊಂದರೆ ಮಾಡಿದ ಹಿನ್ನಲೆಯ ಕೊನೆಗೆ ಲಾಠಿಚಾರ್ಜ್ ಮಾಡುತ್ತಲೇ ರಸ್ತೆಗಂಟಿ ಕುಳಿತಿದ್ದ ಯುವಕರನ್ನು ಎತ್ತಿ ಪೊಲೀಸ್ ವಾಹನಕ್ಕೆ ತುಂಬಿಸಿದ್ದಾರೆ. ಯುವಕರು ಘೋಷಣೆ ಕೂಗುತ್ತಲೇ ಪೊಲೀಸರ ಜೊತೆ ಜಟಾಪಟಿ ನಡೆಸಿದ್ದಾರೆ. 50ರಷ್ಟು ಯುವಕರನ್ನು ಬಂಧಿಸಿದ್ದು ಸ್ಥಳದಲ್ಲಿದ್ದ ಇತರೇ ಮುಸ್ಲಿಂ ಯುವಕರು ಪೊಲೀಸರನ್ನು ಸುತ್ತುವರಿದಿದ್ದಲ್ಲದೆ ಪೊಲೀಸರ ಕ್ರಮವನ್ನು ಪ್ರಶ್ನೆ ಮಾಡಲಾರಂಭಿಸಿದ್ದಾರೆ.
ಪೊಲೀಸರು ಸಾಕಷ್ಟು ಸಂಖ್ಯೆಯಲ್ಲಿದ್ದರಿಂದ ಉದ್ರಿಕ್ತ ಗುಂಪನ್ನು ಚದುರಿಸಿದ್ದಾರೆ. ಪ್ರತಿಭಟನಾಕಾರರು ಹಿಡಿದಿದ್ದ ಭಿತ್ತಿಪತ್ರ, ಪತಾಕೆಗಳನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನೆ ಮಾಡಲು ಅವಕಾಶ ಇಲ್ಲದಿದ್ದರೂ ಪ್ರತಿಭಟನಾಕಾರರು ಯಾವುದೇ ಅನುಮತಿ ಪಡೆಯದೆ ಪ್ರತಿಭಟಿಸಿ ಸಂಚಾರಕ್ಕೆ ಸಮಸ್ಯೆ ಮಾಡಿದ್ದು ಪೊಲೀಸರ ಆಕ್ರೋಶಕ್ಕೆ ಕಾರಣವಾಗಿತ್ತು.
ರಾಂಚಿ: ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಿದ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಜಾರ್ಖಂಡ್ ರಾಜ್ಯ ಸರ್ಕಾರ ಲಾಠಿ ಚಾರ್ಜ್ ಮಾಡಿಸಿದೆ.
ಜಾರ್ಖಂಡ್‍ನ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ರಘುಬರ್ ದಾಸ್ ಅವರ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ನಂತರ ಸಿಎಂ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದಾರೆ ಅದ್ದರಿಂದ ಪೊಲೀಸರು ಮಹಿಳೆಯರು ಎಂಬುದನ್ನು ನೋಡದೆ ಮನಬಂದಂತೆ ಲಾಠಿ ಚಾರ್ಜ್ ಮಾಡಿದ್ದಾರೆ.
यह video आपको विचलित कर सकता है, पर यह झारखंड सरकार की सच्चाई है। राँची में आंगनवाड़ी सेवीकाओं पर झारखंड सरकार ने अपनी ताक़त दिखाई। इनका गुनाह यह था कि यह अपना मानदेय बढ़ाने की माँग पिछले 40 दिवसों से लगातार सरकार से कर रही थी। pic.twitter.com/XGor3dnSVS
ಜಾರ್ಖಂಡ್ ಪೊಲೀಸರು ಮಹಿಳೆಯರ ಮೇಲೆ ಲಾಠಿ ಚಾರ್ಜ್ ಮಾಡುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋದಲ್ಲಿ ಉನ್ನತ ಅಧಿಕಾರಿಯೊಬ್ಬರು ಮಹಿಳೆಯರಿಗೆ ಲಾಠಿಯಲ್ಲಿ ಮನಬಂದಂತೆ ಥಳಿಸುತ್ತಿರುವುದು ಕಂಡು ಬಂದಿದೆ. ಈ ಲಾಠಿ ಚಾರ್ಜ್‍ನಲ್ಲಿ ಹಲವಾರು ಮಹಿಳೆಯರಿಗೆ ಗಾಯವಾಗಿದ್ದು, ಒಂದು ಮಹಿಳೆಯ ಕೈ ಮುರಿದು ಹೋಗಿದೆ.
ಈ ವಿಡಿಯೋವನ್ನು ಕಾಂಗ್ರೆಸ್‍ನ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ರಾಂಚಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಜಾರ್ಖಂಡ್ ಸರ್ಕಾರ ತನ್ನ ಶಕ್ತಿಯನ್ನು ಪ್ರದರ್ಶನ ಮಾಡಿದೆ. ಕಳೆದ 40 ದಿನಗಳಿಂದ ತಮ್ಮ ಕೆಲಸವನ್ನು ಶಾಶ್ವತಗೊಳಿಸಿ ಎಂದು ಒತ್ತಾಯ ಮಾಡಿದ್ದಕ್ಕೆ ಸರ್ಕಾರ ನೀಡಿರುವ ಉತ್ತರವಿದು ಎಂದು ಬರೆದುಕೊಂಡಿದ್ದಾರೆ.
भाजपा राज में हक़ मांगना गुनाह है। झारखंड में आंगनबाड़ी कार्यकर्ताओं पर लाठियां बरसाना भाजपा सरकार की तानाशाही और नृशंस प्रवृत्ति को दर्शाता है। इन महिलाओं पर पड़ी एक-एक लाठी भाजपा हुकूमत के अंत का कारण बनेगी। pic.twitter.com/UTmBek15qP
ಈ ಕೃತ್ಯವನ್ನು ಖಂಡಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ನಮ್ಮ ಬೇಡಿಕೆಗೆ ಹೋರಾಡುವುದು ಬಿಜೆಪಿ ಸರ್ಕಾರದಲ್ಲಿ ಅಪರಾಧವಾಗಿದೆ. ಜಾರ್ಖಂಡ್‍ನಲ್ಲಿ ಅಂಗನವಾಡಿ ಕಾರ್ಯಕರ್ತರ ಮೇಲೆ ಮಾಡಿರುವ ಲಾಠಿ ಚಾರ್ಜ್ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಮಹಿಳೆಯರ ಮೇಲೆ ಲಾಠಿ ಚಾರ್ಜ್ ಮಾಡಿರುವ ಬಿಜೆಪಿ ಆಡಳಿತ ಇದರಿಂದಲೇ ಅಂತ್ಯವಾಗಲಿದೆ ಎಂದು ಬಿಜೆಪಿ ಮೇಲೆ ಟ್ವೀಟ್ ದಾಳಿ ಮಾಡಿದೆ.
ಗದಗ: ನೆರೆ ಸಂತ್ರಸ್ತರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆಯೊಂದು ಗದಗದಲ್ಲಿ ನಡೆದಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಯ ಬಳಿಕ ಇಂದು ಗದಗದ ಕೊಣ್ಣೂರಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಆಗಮಿಸಿದ್ದರು. ಪ್ರಾಕೃತಿಕ ವಿಕೋಪದಿಂದಾದ ಪ್ರದೇಶಗಳನ್ನು ವೀಕ್ಷಿಸಿ, ಸಿಎಂ ಅವರು ತೆರಳುತ್ತಿದ್ದಂತೆಯೇ ಸಂತ್ರಸ್ತರು ಅವರ ಕಾರಿನ ಬಳಿ ಬಂದು ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಈ ವೇಳೆ ಪೊಲೀಸರು ಸಂತ್ರಸ್ತರ ಮೇಲೆ ಲಾಠಿ ಚಾರ್ಜ್ ಮಾಡುವ ಮೂಲಕ ಕ್ರೌರ್ಯ ಮೆರೆದಿದ್ದಾರೆ.
4 ದಿನದಿಂದ ಮನೆ ಮಠ ಕಳೆದುಕೊಂಡು ಜನ ತತ್ತರಿಸಿ ಹೋಗಿದ್ದು, ಮಾನವೀಯತೆ ತೋರಬೇಕಾದ ಪೊಲೀಸರು ಮುಖ್ಯಮಂತ್ರಿಗಳ ಎದುರಲ್ಲೇ ಈ ರೀತಿ ವರ್ತನೆ ತೋರಿರುವುದು ವಿಷಾದನೀಯವಾಗಿದೆ. ಪೊಲೀಸರ ಈ ವರ್ತನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರವಾಹದಿಂದ ಕಂಗೆಟ್ಟಿದ್ದ ಜನರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ಇದೇನಾ ನಿಮ್ಮ ಜನಮೆಚ್ಚಿದ ಆಡಳಿತ ಎಂದು ಜನ ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದಾರೆ.
ನವದೆಹಲಿ: ಟೆಂಪೋ ಚಾಲಕನ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ದೆಹಲಿಯ ಮುಖರ್ಜಿನಗರದಲ್ಲಿ ನಡೆದ ಅಪಘಾತದ ನಂತರ ಟೆಂಪೋ ಚಾಲಕ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಜಗಳ ತಾರಕ್ಕೇರಿದ ಪರಿಣಾಮ ಓರ್ವ ಅಧಿಕಾರಿ ಗಾಯಗೊಂಡಿದ್ದಾರೆ. ಈಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ವಿಡಿಯೋದಲ್ಲಿ ಹರಿತವಾದ ಆಯುಧವನ್ನು ಹಿಡಿದಿದ್ದ ವ್ಯಕ್ತಿಯನ್ನು ಪೊಲೀಸರು ಲಾಠಿಯಿಂದ ಥಳಿಸುತ್ತಿರುವುದು ಕಂಡು ಬಂದಿದೆ. ಅಲ್ಲದೆ ತಂದೆಯನ್ನು ಸಂಭಾಳಿಸಲು ಪ್ರಯತ್ನಿಸುತ್ತಿದ್ದ ಚಾಲಕನ ಮಗನ ಮೇಲೆ ಕೂಡ ಪೊಲೀಸರು ದೌರ್ಜನ್ಯವೆಸಗಿದ್ದಾರೆ. ಆದರೆ ಚಾಲಕ ರಸ್ತೆಯಲ್ಲಿ ಗಾಡಿಯನ್ನು ಬಹಳ ಅಪಾಯಾಕಾರಿ ರೀತಿಯಲ್ಲಿ ಚಲಾಯಿಸುತ್ತಿದ್ದ ಮತ್ತು ಪೊಲೀಸ್ ಅಧಿಕಾರಿಯ ತಲೆಗೆ ಆಯುಧದಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಕ್ಷಣವೇ ಈ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಚಾಲಕ ಧರಿಸಿದ್ದ ರುಮಾಲಿನ ಕಾರಣದಿಂದ ಹಲ್ಲೆಗೊಳಗಾಗಿದ್ದು ಎಂದು ಬಿಜೆಪಿ ಶಾಸಕ ಮನ್‍ಜೀಂದ್ರನ್ ಸಿಂಗ್ ಆರೋಪಿಸಿದ್ದಾರೆ. ಅಲ್ಲದೆ ಕೆಲ ನಾಯಕರು ಮುಖರ್ಜಿನಗರದ ಪೊಲೀಸ್ ಠಾಣೆಯ ಎದುರು ರಾತ್ರಿಯ ತನಕ ಪ್ರತಿಭಟನೆ ನಡೆಸಿದ್ದಾರೆ. ವರದಿಗಳ ಪ್ರಕಾರ ಸಿಂಗ್ ದೌರ್ಜನ್ಯವೆಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
ಖಾಸಗಿ ವಾಹಿನಿಯ ಮಾಹಿತಿಯ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.