Tag: ಲಾರಿ ಡಿಕ್ಕಿ

  • ನಿಂತ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ – ಓರ್ವ ಸಾವು

    ನಿಂತ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ – ಓರ್ವ ಸಾವು

    ಬಾಗಲಕೋಟೆ: ನಿಂತ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

    ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದಲ್ಲಿ ನಿಂತ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಲಾರಿ ಚಾಲಕ ಶಂಕ್ರಯ್ಯ ಪೂಜಾರ್(35) ಗುಡೂರು ಮೃತಪಟ್ಟಿದ್ದಾರೆ. ಇದನ್ನೂ ಓದಿ:  ಪಾಸಿಟಿವಿಟಿ ರೇಟ್ ಶೇ.0.57- 836 ಹೊಸ ಕೊರೊನಾ ಕೇಸ್, 15 ಸಾವು

    ಈ ಲಾರಿ ಇಳಕಲ್ ನಿಂದ ಮಾರ್ಬಲ್ಸ್ ಹೊತ್ತು ಬಾಗಲಕೋಟೆ ಕಡಗೆ ಬರ್ತಿತ್ತು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಾಗಲಕೋಟೆಯ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮೃತನಾಗಿರುವುದು ಚಾಲಕನೊ ಅಥವಾ ಕ್ಲೀನರ್ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

  • ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ಕ್ಷಣಾರ್ಧದಲ್ಲಿ ತಪ್ಪಿತು ಭಾರೀ ಅನಾಹುತ

    ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ಕ್ಷಣಾರ್ಧದಲ್ಲಿ ತಪ್ಪಿತು ಭಾರೀ ಅನಾಹುತ

    ಬಾಗಲಕೋಟೆ: ನಗರದ ಮುಚಖಂಡಿ ಕ್ರಾಸ್‍ನಲ್ಲಿ ಲಾರಿಯೊಂದು ಶಾಲಾ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸು ಟಂಟಂಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಇದ್ದ ಶಾಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಬೆಳಂಬೆಳಗ್ಗೆ ನಗರದ ವಿದ್ಯಾಗಿರಿಯ ಲಯನ್ಸ್ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳು ಇದ್ದ ಶಾಲಾ ಬಸ್ಸಿಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸು ಪಕ್ಕದಲ್ಲಿ ಚಲಿಸುತ್ತಿದ್ದ ಟಂಟಂಗೆ ಡಿಕ್ಕಿ ಹೊಡೆದಿದೆ. ತಕ್ಷಣ ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತದಿಂದ ವಿದ್ಯಾರ್ಥಿಗಳು ಪಾರಾಗಿದ್ದಾರೆ.

    ಘಟನಾ ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಸುರಕ್ಷಿತವಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಲಾರಿ ಹರಿದು ಹೂವಿನ ವ್ಯಾಪಾರಿ ಸ್ಥಳದಲ್ಲೇ ದುರ್ಮರಣ

    ಲಾರಿ ಹರಿದು ಹೂವಿನ ವ್ಯಾಪಾರಿ ಸ್ಥಳದಲ್ಲೇ ದುರ್ಮರಣ

    ಕಾರವಾರ: ಲಾರಿಯೊಂದು ಹೂವಿನ ವ್ಯಾಪಾರಿ ಮೇಲೆ ಹರಿದ ಪರಿಣಾಮ ವ್ಯಾಪಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

    ಈ ಅಪಘಾತ ಉತ್ತರಕನ್ನಡ ಜಿಲ್ಲೆಯ ಕುಮಟಾ ರಾಷ್ಟ್ರೀಯ ಹೆದ್ದಾರಿ 66ರ ಮೂರೂರು ಕ್ರಾಸ್ ಬಳಿ ನಡೆದಿದೆ. ಮೃತ ಹೂವಿನ ವ್ಯಾಪಾರಿಯನ್ನು ಫಾರುಖ್ ಶೇಖ್ ಎಂದು ಗುರುತಿಸಲಾಗಿದ್ದು, ಯಾದಗಿರಿ ಮೂಲದವರು ಎಂದು ತಿಳಿದು ಬಂದಿದೆ.

    ಹೂ ವ್ಯಾಪಾರ ಮಾಡಲೆಂದು ಯಾದಗಿರಿಯಿಂದ ಬಂದಿದ್ದ ಮೃತ ಫಾರುಖ್ ಅವರು ರಸ್ತೆ ಬದಿಯಲ್ಲಿ ನಿಂತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿಯಾಗಿ ಬಿದ್ದಿದ್ದಾರೆ. ಈ ವೇಳೆ ಲಾರಿ ಫಾರುಖ್ ಮೇಲೆ ಹರಿದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

    ಘಟನೆಯ ಬಳಿಕ ಲಾರಿ ಚಾಲಕ ಗುಜರಾತ್ ಮೂಲದ ಹಿಮತ್ ಸಿಂಹ ಚೌಹಾಣ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಲಾರಿಯಲ್ಲಿದ್ದ ಹೀಮಾತಾಜ್ ಠಾಕೂರ್, ತನುಜ್ ಠಾಕೂರ್ ಗಾಯಗಳಾಗಿದ್ದು, ಸದ್ಯ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಲಾರಿ ಅಂಕೋಲಾ ಮಾರ್ಗದಿಂದ ಹೊನ್ನಾವರ ಕಡೆಗೆ ಸಾಗುತ್ತಿತ್ತು ಎಂದು ತಿಳಿದುಬಂದಿದೆ. ಈ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಡಿವೈಡರ್‍ಗೆ ಡಿಕ್ಕಿ ಹೊಡೆದು ಲಾರಿಗೆ ಬೆಂಕಿ- ಇಬ್ಬರ ಸಜೀವ ದಹನ

    ಡಿವೈಡರ್‍ಗೆ ಡಿಕ್ಕಿ ಹೊಡೆದು ಲಾರಿಗೆ ಬೆಂಕಿ- ಇಬ್ಬರ ಸಜೀವ ದಹನ

    ವಿಜಯಪುರ: ರಾಷ್ಟ್ರೀಯ ಹೆದ್ದಾರಿಯ ರಸ್ತೆ ಡಿವೈಡರ್ ಗೆ ಲಾರಿ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಚಾಲಕ ಮತ್ತು ಕ್ಲೀನರ್ ಸಜೀವ ದಹನವಾದ ಘಟನೆ ವಿಜಯಪುರದಲ್ಲಿ ನಡೆದಿದೆ.

    ಕಬ್ಬಿಣ ತುಂಬಿದ ಲಾರಿ ಮಹಾರಾಷ್ಟ್ರದಿಂದ ವಿಜಯಪುರ ಮಾರ್ಗವಾಗಿ ತೆರಳುವಾಗ ವಿಜಯಪುರದ ಹಿಟ್ನಳ್ಳಿ ಗ್ರಾಮದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 50 ರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಲಾರಿ ಡಿವೈಡರ್‍ಗೆ ಗುದ್ದಿದ ರಭಸಕ್ಕೆ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಾರಿ ಚಾಲಕ ಮತ್ತು ಕ್ಲೀನರ್ ಇಬ್ಬರು ಸಜೀವ ದಹನವಾಗಿದ್ದಾರೆ. ಆದ್ರೆ ಮೃತಪಟ್ಟವರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

    ಲಾರಿ ಸಂಪೂರ್ಣ ಸುಟ್ಟು ಹೋಗಿದ್ದು, ಗ್ರಾಮೀಣ ಪೊಲಿಸರು ಪ್ರಕರಣ ದಾಖಲಿಸಿಕೊಂಡು ಲಾರಿ ತೆರವು ಕಾರ್ಯಾಚರಣೆ ಮುಂದುವರೆಸಿದ್ದಾರೆ.

    https://www.youtube.com/watch?v=K-blT7Qhn5E&feature=youtu.be