Tag: ಲಾರೆನ್ಸ್ ಬಿಷ್ಣೋಯ್

  • ಕೆನಡಾದಲ್ಲಿ ಉದ್ಯಮಿ ಹತ್ಯೆ, ಗಾಯಕನ ಮನೆಗೆ ಬೆಂಕಿಯಿಟ್ಟ ಬಿಷ್ಣೋಯ್‌ ಗ್ಯಾಂಗ್‌

    ಕೆನಡಾದಲ್ಲಿ ಉದ್ಯಮಿ ಹತ್ಯೆ, ಗಾಯಕನ ಮನೆಗೆ ಬೆಂಕಿಯಿಟ್ಟ ಬಿಷ್ಣೋಯ್‌ ಗ್ಯಾಂಗ್‌

    ಒಟ್ಟಾವಾ: ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೆನಡಾದಲ್ಲಿ ದಾಳಿ ನಡೆಸಿದೆ. ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿಯೊಬ್ಬರ ಹತ್ಯೆ ಮತ್ತು ಪಂಜಾಬಿ ಗಾಯಕನ ಮನೆಯ ಮೇಲೆ ಗುಂಡು ಹಾರಿಸಿದ ಹೊಣೆಯನ್ನು ಈ ಗ್ಯಾಂಗ್ ಹೊತ್ತುಕೊಂಡಿದೆ.

    ರಾಜಸ್ಥಾನದ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾನನ್ನು ಅಮೆರಿಕದಲ್ಲಿ ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಎರಡು ದಾಳಿಗಳು ನಡೆದಿವೆ. ಬಿಷ್ಣೋಯ್ ಗ್ಯಾಂಗ್ ಸದಸ್ಯ ಗೋಲ್ಡಿ ಧಿಲ್ಲೋನ್, ಭಾರತೀಯ ಮೂಲದ ಕೈಗಾರಿಕೋದ್ಯಮಿ ದರ್ಶನ್ ಸಿಂಗ್ ಸಹಸಿ ಅವರ ಹತ್ಯೆಯ ಹಿಂದೆ ಈ ಗುಂಪಿನ ಕೈವಾಡವಿದೆ ಎಂದು ಹೇಳಿದ್ದಾರೆ.

    68 ವರ್ಷದ ದರ್ಶನ್‌ ಸಿಂಗ್ ದೊಡ್ಡ ಮಾದಕವಸ್ತು ವ್ಯವಹಾರದಲ್ಲಿ ಭಾಗಿಯಾಗಿದ್ದರು. ಈ ಗ್ಯಾಂಗ್ ಅವರಿಂದ ಹಣಕ್ಕೆ ಬೇಡಿಕೆ ಇಟ್ಟಿತ್ತು. ಹಣ ಸಿಗದ ಕಾರಣ, ಗ್ಯಾಂಗ್ ಆತನನ್ನು ಹತ್ಯೆ ಮಾಡಿದೆ ಎನ್ನಲಾಗಿದೆ.

    ಸೋಮವಾರ ಬೆಳಗ್ಗೆ ಬ್ರಿಟಿಷ್ ಕೊಲಂಬಿಯಾದ ಅಬಾಟ್ಸ್‌ಫೋರ್ಡ್‌ನಲ್ಲಿರುವ ಅವರ ಮನೆಯ ಹೊರಗೆ ಉದ್ಯಮಿಯನ್ನು ಗುಂಡಿಕ್ಕಿ ಕೊಲ್ಲಲಾಯಿತು. ಸಿಂಗ್‌ ಹೊರಗೆ ಬರುವುದನ್ನೇ ಕಾದು ನಂತರ ಹತ್ಯೆ ಮಾಡಲಾಗಿದೆ.

    ಪೊಲೀಸರು ಸ್ಥಳಕ್ಕೆ ಬಂದಾಗ ಉದ್ಯಮಿ ಗಂಭೀರ ಸ್ಥಿತಿಯಲ್ಲಿದ್ದರು. ದರ್ಶನ್‌ ಸಿಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  • ಭದ್ರತೆಗೆ ಹೊಸ ಬುಲೆಟ್‌ ಪ್ರೂಫ್‌ ಕಾರು ಖರೀದಿಸಿದ ಸಲ್ಮಾನ್ ಖಾನ್

    ಭದ್ರತೆಗೆ ಹೊಸ ಬುಲೆಟ್‌ ಪ್ರೂಫ್‌ ಕಾರು ಖರೀದಿಸಿದ ಸಲ್ಮಾನ್ ಖಾನ್

    ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಹೊಸ ಕಾರನ್ನ ಖರೀದಿಸಿದ್ದಾರೆ. ಅವರು ಬಳಿ ಸಾಕಷ್ಟು ಐಶಾರಾಮಿ ಕಾರ್‌ಗಳಿದ್ದರೂ ಹೊಸ ಕಾರು ಖರೀದಿಸಲು ಕಾರಣ ಭದ್ರತಾ ಕಾಳಜಿ. ಹೀಗಾಗಿ ಮರ್ಸಿಡೀಸ್ (Mercedes) ಮೇಬ್ಯಾಕ್ ಜಿಎಸ್‌ಎಲ್ 600 ಎಸ್‌ಯುವಿ ಕಾರನ್ನ ಬ್ಯಾಡ್‌ಬಾಯ್ ಇದೀಗ ಖರೀದಿಸಿದ್ದಾರೆ.

    ಇದು ಕಪ್ಪು ಬಣ್ಣದ ವಾಹನವಾಗಿದ್ದು ಸಂಪೂರ್ಣ ಬುಲೆಟ್‌ಪ್ರೂಫ್ (Bulletproof) ಆಗಿದೆ. ಇದರ ಬೆಲೆ 3.4 ಕೋಟಿ ರೂ. ನಿಂದ ಆರಂಭವಾಗುತ್ತದೆ. ಕಾರಿನ ಒಳಗಡೆ ತನಗೆ ಬೇಕಾದಂತೆ ವಿನ್ಯಾಸ ಮಾಡಿದ್ದರಿಂದ ಬೆಲೆ ಮತ್ತಷ್ಟು ಹೆಚ್ಚಾಗಲಿದೆ.

    ಕೃಷ್ಣಮೃಗ ಭೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್‌ನಿಂದ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇದೆ. ಹಲವು ಬಾರಿ ಅವರ ಮನೆ ಮೇಲೂ ಗುಂಡಿನ ದಾಳಿ ಆಗಿತ್ತು. ಕ್ರಮೇಣವಾಗಿ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಲೇ ಇರುತ್ತದೆ. ಹೀಗಾಗಿ ಸಲ್ಮಾನ್ ಖಾನ್‌ಗೆ ಸರ್ಕಾರದಿಂದಲೇ ವೈ+ ಭದ್ರತೆಯನ್ನು ನೀಡಲಾಗಿದೆ. ಇದನ್ನೂ ಓದಿ: ವಿಜಯ್ ಜೊತೆ ಲವ್ ವದಂತಿಗೆ ತ್ರಿಷಾ ಕೆಂಡ – ಹೊಲಸು ಮನಸ್ಥಿತಿಯ ಜನ ಎಂದ ನಟಿ

    ಈ ನಡುವೆಯೂ ಇನ್ನೂ ಹೆಚ್ಚಿನ ಭದ್ರತೆಗಾಗಿ ಸಲ್ಮಾನ್ ಖಾನ್ ಹೊಸ ಕಾರ್‌ನ್ನು ಖರೀದಿಸಿದ್ದು ಇಂದು ಗುಂಡು ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ.

    ಸದ್ಯ ಜೈಲಲ್ಲಿರುವ ಲಾರೆನ್ಸ್ ಬಿಷ್ಣೋಯ್ ಜೈಲಲ್ಲಿದ್ದುಕೊಂಡೇ ತನ್ನ ಗ್ಯಾಂಗ್ ಮೂಲಕ ಸಲ್ಮಾನ್ ಖಾನ್ ಮೇಲೆ ಕಣ್ಣಿಟ್ಟಿದ್ದಾನೆ. ಸಲ್ಮಾನ್ ಖಾನ್‌ರನ್ನ ಹೊಡೆದುಹಾಕ್ತೀವಿ ಎಂದು ಬಿಷ್ಣೋಯ್ ಗ್ಯಾಂಗ್ ಹಲವು ಬಾರಿ ಬಹಿರಂಗವಾಗೇ ಹೇಳಿಕೊಂಡಿದೆ. ಹೀಗಾಗಿ ಮನೆಯಿಂದ ಸಲ್ಮಾನ್ ಖಾನ್ ಹೊರಟರೆ ಅವರಿಗೆ ವೈ+ ಭದ್ರತೆ ಕೊಡಲಾಗಿದ್ದು, ಮನೆ ಮುಂದೆಯೂ ಅತಿ ಹೆಚ್ಚಿನ ಭದ್ರತೆ ನೀಡಲಾಗಿದೆ.

    ಸಲ್ಮಾನ್ ಖಾನ್ ಸೆಲೆಬ್ರಿಟಿ ಆಗಿರುವುದರಿಂದ ಅವರ ಕಾರು ಗುರುತು, ನಂಬರ್ ಹಾಗೂ ಬಣ್ಣ ತಿಳಿದಿರುವುದು ಸಾಮಾನ್ಯ. ಹೀಗಾಗೇ ಗುರುತು ಪತ್ತೆಯಾಗದಿರಲು ಸಲ್ಮಾನ್ ಖಾನ್ ಹಲವು ಬಾರಿ ಕಾರು ಬದಲಿರುಸುತ್ತಿರುತ್ತಾರೆ. ಹೀಗಾಗಿ ಭದ್ರತಾ ಕಾಳಜಿಯಿಂದ ಹೊಸ ಕಾರನ್ನು ಸಲ್ಮಾನ್ ಖಾನ್ ಖರೀದಿಸಿದ್ದಾರೆ.

  • ಪಂಜಾಬ್‌ ಬಿಜೆಪಿ ನಾಯಕನ ಮನೆಯಲ್ಲಿ ಸ್ಫೋಟ ಕೇಸ್‌ – ಬಂಧಿತ ಆರೋಪಿಗೆ ಲಾರೆನ್ಸ್‌ ಬಿಷ್ಣೋಯ್‌ ಲಿಂಕ್‌

    ಪಂಜಾಬ್‌ ಬಿಜೆಪಿ ನಾಯಕನ ಮನೆಯಲ್ಲಿ ಸ್ಫೋಟ ಕೇಸ್‌ – ಬಂಧಿತ ಆರೋಪಿಗೆ ಲಾರೆನ್ಸ್‌ ಬಿಷ್ಣೋಯ್‌ ಲಿಂಕ್‌

    ಚಂಡೀಗಢ: ಪಂಜಾಬ್‌ನ (Punjab Blasts) ಜಲಂಧರ್‌ನಲ್ಲಿರುವ ಬಿಜೆಪಿ ನಾಯಕನ ಮನೆ ಮೇಲೆ ನಡೆದ ಗ್ರೆನೇಡ್‌ ದಾಳಿ ಸಂಚುಕೋರನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ (Lawrence Bishnoi) ಲಿಂಕ್‌ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಗ್ರೆನೇಡ್ ದಾಳಿಯ ಸಂಚುಕೋರ ಜೀಶನ್ ಅಖ್ತರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಆಪ್ತ ಸಹಚರ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಬೇಕಾಗಿರುವ ಆರೋಪಿ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ – ಸಿಎನ್‌ಜಿ ಆಟೋಗಳಿಗೆ ಬ್ರೇಕ್, ಇವಿಗೆ ಮಾತ್ರ ಆದ್ಯತೆ?

    ಪಾಕಿಸ್ತಾನದ ಐಎಸ್‌ಐ ಪಂಜಾಬ್‌ನಲ್ಲಿ ಧಾರ್ಮಿಕ ಸಾಮರಸ್ಯವನ್ನು ಕದಡಲು ಸಂಚು ರೂಪಿಸಿದೆ. ಬಿಜೆಪಿ ನಾಯಕನ ವಿರುದ್ಧದ ದಾಳಿಯನ್ನು ಗಡಿಯಾಚೆಯಿಂದ ಯೋಜಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

    ಮಾಜಿ ಸಚಿವ ಮತ್ತು ಮಾಜಿ ರಾಜ್ಯ ಬಿಜೆಪಿ ಮುಖ್ಯಸ್ಥರೂ ಆಗಿದ್ದ ಕಾಲಿಯಾ ಅವರ ಮನೆಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಸ್ಫೋಟದಲ್ಲಿ ಗೋಡೆಗೆ ಹಾನಿಯಾಗಿತ್ತು. ಅವರ ಮನೆ ಮತ್ತು ವಾಹನಗಳ ಗಾಜಿನ ಕಿಟಕಿಗಳು ಪುಡಿಪುಡಿಯಾಗಿದ್ದವು. ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಆ ಸಮಯದಲ್ಲಿ ಬಿಜೆಪಿ ಮುಖಂಡರೂ ಮನೆಯಲ್ಲಿದ್ದರು. ಇದನ್ನೂ ಓದಿ: ರಾಜ್ಯಪಾಲರ ನಡೆ ಅಸಾಂವಿಧಾನಿಕ, ಕಾನೂನಿನ ಉಲ್ಲಂಘನೆ – ತಮಿಳುನಾಡು ಗವರ್ನರ್‌ ವಿರುದ್ಧ ಸುಪ್ರೀಂ ಆದೇಶ

    ಗ್ರೆನೇಡ್ ಎಸೆದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ದಾಳಿಗೆ ಬಳಸಲಾದ ಇ-ರಿಕ್ಷಾವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

  • ಎಲ್ಲವೂ ದೇವರಿಗೆ ಬಿಟ್ಟಿದ್ದು: ಕೊನೆಗೂ ಲಾರೆನ್ಸ್‌ ಬಿಷ್ಣೋಯ್‌ ಬೆದರಿಕೆ ಬಗ್ಗೆ ಸಲ್ಮಾನ್‌ ಮಾತು

    ಎಲ್ಲವೂ ದೇವರಿಗೆ ಬಿಟ್ಟಿದ್ದು: ಕೊನೆಗೂ ಲಾರೆನ್ಸ್‌ ಬಿಷ್ಣೋಯ್‌ ಬೆದರಿಕೆ ಬಗ್ಗೆ ಸಲ್ಮಾನ್‌ ಮಾತು

    ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಸದ್ಯ ‘ಸಿಕಂದರ್’ (Sikandar) ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ವೇಳೆ, ಲಾರೆನ್ಸ್ ಬಿಷ್ಣೋಯ್ ಬೆದರಿಕೆಯ ಬಗ್ಗೆ ಸಲ್ಮಾನ್ ಮೌನ ಮುರಿದಿದ್ದಾರೆ. ಎಷ್ಟು ವರ್ಷ ದೇವರು ಬರೆದಿದ್ದಾನೋ ಅಷ್ಟು ವರ್ಷ ಬದುಕುತ್ತೇನೆ. ನನ್ನ ಭವಿಷ್ಯ ದೇವರ ಕೈಯಲ್ಲಿದೆ ಎಂದಿದ್ದಾರೆ. ಇದನ್ನೂ ಓದಿ:ಗೌತಮಿ ದಂಪತಿ ಜೊತೆ ಕುಟುಂಬ ಸಮೇತ ಉಗ್ರಂ ಮಂಜು ಟೆಂಪಲ್ ರನ್

    ಪ್ರಚಾರ ಕಾರ್ಯದಲ್ಲಿ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್ ಬಗ್ಗೆ ಮಾತನಾಡಿದ ಸಲ್ಮಾನ್ ಖಾನ್, ನನಗೆ ಅದಷ್ಟೇ ಭದ್ರತೆ ಇದ್ದರೂ ಕೆಲವೊಂದು ಸಮಯದಲ್ಲಿ ನನ್ನನ್ನು ರಕ್ಷಿಸುವುದು ಸುಲಭದ ಮಾತಲ್ಲ, ನನ್ನ ಭವಿಷ್ಯ ದೇವರ ಕೈಯಲ್ಲಿದೆ. ಎಲ್ಲವೂ ದೇವರಿಗೆ ಬಿಟ್ಟಿದ್ದೇನೆ. ಎಲ್ಲಿಯವರೆಗೆ ಜೀವ ಇರುತ್ತದೋ, ಅಲ್ಲಿಯವರೆಗೆ ಮಾತ್ರ ಈ ಬದುಕು ಅಷ್ಟೇ ಎಂದಿದ್ದಾರೆ. ಇದನ್ನೂ ಓದಿ:ತಾಯಿ ಚಾಮುಂಡೇಶ್ವರಿ ದೇವಿ ಭಕ್ತರಿಗೆ ಕ್ಷಮೆ ಕೋರಿದ ‌’ಬಿಗ್‌ ಬಾಸ್’ ರಕ್ಷಕ್ ಬುಲೆಟ್

    ಒಟ್ನಲ್ಲಿ ತಮಗೆ ರಕ್ಷಣೆ ಅದೆಷ್ಟು ಮುಖ್ಯ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಪ್ರತಿದಿನ ಭದ್ರತೆಯೊಂದಿಗೆ ಓಡಾಡುವುದು, ದಿನಚರಿ ಕೆಲಸಗಳಿಗೆ ಹಾಗೂ ಜನರೊಂದಿಗೆ ತಿರುಗಾಡುವುದು ಕೂಡ ಕಷ್ಟ ಎಂದು ಮುಕ್ತವಾಗಿ ಸಲ್ಮಾನ್‌ ಮಾತನಾಡಿದ್ದಾರೆ.

    ಅಂದಹಾಗೆ, ರಶ್ಮಿಕಾ ಮಂದಣ್ಣ (Rashmika Mandanna) ಜೊತೆಗಿನ ಸಲ್ಮಾನ್ ‘ಸಿಕಂದರ್’ ಸಿನಿಮಾ ಇದೇ ಮಾ.30ರಂದು ರಿಲೀಸ್ ಆಗ್ತಿದೆ. ಈ ಚಿತ್ರವನ್ನು ಎ.ಆರ್ ಮುರುಗದಾಸ್ ನಿರ್ದೇಶನ ಮಾಡಿದ್ದಾರೆ.

  • ಬಾಬಾ ಸಿದ್ದಿಕಿ ಹತ್ಯೆ ಕೇಸ್‌ – 4,590 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಮುಂಬೈ ಪೊಲೀಸ್

    ಬಾಬಾ ಸಿದ್ದಿಕಿ ಹತ್ಯೆ ಕೇಸ್‌ – 4,590 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಮುಂಬೈ ಪೊಲೀಸ್

    ಮುಂಬೈ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣದ ಸಂಬಂಧ ಮುಂಬೈ ಪೊಲೀಸರ ತನಿಖಾ ತಂಡ ವಿಶೇಷ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ನ್ಯಾಯಾಲಯಕ್ಕೆ ಸೋಮವಾರ 4,590 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದೆ.

    ತನಿಖೆ ಪೂರ್ಣಗೊಳಿಸಿದ ಮುಂಬೈ ಪೊಲೀಸರ ತಂಡ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌, ಆತನ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಸೇರಿದಂತೆ ಒಟ್ಟು 26 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಇದನ್ನೂ ಓದಿ: ಮಕ್ಕಳಲ್ಲೇ ಪತ್ತೆಯಾದ ವೈರಸ್ – ಹೆಚ್‌ಎಂಪಿವಿ ಹಾನಿಕಾರಕವಲ್ಲ, ಭಯ ಪಡದಿರಿ… ನಿರ್ಲಕ್ಷ್ಯವೂ ಮಾಡದಿರಿ.!

    ಶುಭಂ ಲೋಂಕರ್, ಯಾಸಿನ್ ಸಿದ್ದಿಕ್ ಮತ್ತು ಅನ್ಮೋಲ್ ಬಿಷ್ಣೋಯ್ ಪ್ರಕರಣದ ಮಾಸ್ಟರ್‌ ಮೈಂಡ್‌ಗಳೆಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಮುಂಬೈನಲ್ಲಿ ತಮ್ಮ ಪ್ರಾಬಲ್ಯ ಸ್ಥಾಪಿಸಲು ಬಿಷ್ಣೋಯ್ ಗ್ಯಾಂಗ್ ಹತ್ಯೆಗೆ ಸಂಚು ರೂಪಿಸಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಎಸ್ಟೇಟ್ ಮ್ಯಾನೇಜರ್ ಮೇಲೆ ಅಕ್ರಮ ಬಾಂಗ್ಲಾ ವಲಸಿಗರಿಂದ ಕಲ್ಲು ತೂರಾಟ

    2024ರ ಅಕ್ಟೋಬರ್‌ 12 ರಂದು, ಮುಂಬೈನ ಬಾಂದ್ರಾದಲ್ಲಿರುವ ಪುತ್ರ ಶಾಸಕ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಬಾಬಾ ಸಿದ್ದಿಕಿ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು. ಸಿದ್ದಿಕಿ ಹತ್ಯೆಗೆ 9.9 ಎಂಎಂ ಪಿಸ್ತೂಲ್‌ ಬಳಸಲಾಗಿತ್ತು, ಒಟ್ಟು 6 ಸುತ್ತುಗಳಲ್ಲಿ ಗುಂಡು ಹಾರಿಸಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯುಪಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಬಳಿಕ ಪ್ರಕರಣದ ತನಿಖೆನ್ನು ಮುಂಬೈ ಪೊಲೀಸರು ಕೈಗೆತ್ತಿಕೊಂಡಿದ್ದರು

    ವಿಚಾರಣೆ ವೇಳೆ ಆರೋಪಿ ಶಿವಕುಮಾರ್‌, ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಜೊತೆ ಸಂಬಂಧ ಇದೆ. ಲಾರೆನ್ಸ್ ಬಿಷ್ಣೋಯ್‌ನ ಸಹೋದರ ಅನ್ಮೋಲ್ ಬಿಷ್ಣೋಯ್‌ನ ಸೂಚನೆಯ ಮೇರೆಗೆ ಕೊಲೆ ಮಾಡಲಾಗಿದೆ. ಲಾರೆನ್ಸ್‌ನ ಆಪ್ತ ಸಹಾಯಕನಾಗಿದ್ದ ಶುಭಂ ಲೋಂಕರ್ ಎಂಬುವವನು ಅನ್ಮೋಲ್ ಬಿಷ್ಣೋಯ್ ಜೊತೆಗೆ ಸಂಪರ್ಕ ಸಾಧಿಸಲು ಸಕರಿಸಿದ್ದ ಎಂಬುದಾಗಿಯೂ ಒಪ್ಪಿಕೊಂಡಿದ್ದನು.

  • ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಅಮೆರಿಕದಲ್ಲಿ ಅರೆಸ್ಟ್‌

    ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಅಮೆರಿಕದಲ್ಲಿ ಅರೆಸ್ಟ್‌

    ವಾಷಿಂಗ್ಟನ್‌: ಜೈಲಿನಲ್ಲಿದ್ದರೂ ಜಾಗತಿಕ ಮಟ್ಟದಲ್ಲಿ ಕ್ರಿಮಿನಲ್ ಚಟುವಟಿಕೆ ನಡೆಸುತ್ತಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ (Lawrence Bishnoi) ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್‌ನನ್ನು (Anmol Bishnoi) ಅಮೆರಿಕದಲ್ಲಿ (America) ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    2022 ರಲ್ಲಿ ನಡೆದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ, ಕಳೆದ ತಿಂಗಳು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆ ಕೇಸ್‌, ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿ ಸೇರಿದಂತೆ ಹಲವು ಪ್ರಮುಖ ಪ್ರಕರಣಗಳಲ್ಲಿ ಅನ್ಮೋಲ್ ಬೇಕಾಗಿದ್ದಾನೆ. ಗುರುವಾರ ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

    ಈ ತಿಂಗಳ ಆರಂಭದಲ್ಲಿ ಮುಂಬೈ ಪೊಲೀಸರ (Mumbai Police) ಅಪರಾಧ ವಿಭಾಗವು ಅನ್ಮೋಲ್‌ನನ್ನು ಯುಎಸ್‌ನಿಂದ ಮರಳಿ ಕರೆತರಲು ಹಸ್ತಾಂತರ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಆತನ ಬಂಧನಕ್ಕೆ ಮಹಾರಾಷ್ಟ್ರದ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಸಹ ಜಾರಿ ಮಾಡಿದೆ. ಜಾಗತಿಕ ಕಾನೂನು ಜಾರಿ ಸಂಸ್ಥೆ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಸಹ ಜಾರಿ ಮಾಡಿದೆ.

    ಪಂಜಾಬ್‌ನ ಫಾಜಿಲ್ಕಾ ಮೂಲದ ಅನ್ಮೋಲ್ ಬಿಷ್ಣೋಯ್, ನಕಲಿ ಪಾಸ್‌ಪೋರ್ಟ್‌ ಬಳಸಿ ಭಾರತದಿಂದ ಪಲಾಯನ ಮಾಡಿದ ನಂತರ ಕೆನಡಾದಲ್ಲಿದ್ದ ಎಂದು ಈ ಹಿಂದೆ ನಂಬಲಾಗಿತ್ತು. ಆತ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಖಲಿಸಿದ ಎರಡು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ. ಎನ್‌ಐಎ ಆತನನ್ನು ಮೋಸ್ಟ್ ವಾಂಟೆಡ್ ಪಟ್ಟಿಗೆ ಸೇರಿಸಿದ್ದು, ಆತನ ಬಂಧನಕ್ಕೆ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು.

    ಸಿಧು ಮೂಸೆವಾಲಾ ಹತ್ಯೆ ಹಿಂದಿದ್ದ ಅನ್ಮೋಲ್‌
    18 ಪ್ರಕರಣಗಳಲ್ಲಿ ಆರೋಪಿ ಆಗಿರುವ ಅನ್ಮೋಲ್‌ ಸಿಧು ಮೂಸೆವಾಲಾ ಹತ್ಯೆ ಕೇಸ್‌ನಲ್ಲೂ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಈತ ಮೂಸೆವಾಲಾ ಹತ್ಯೆಗೆ ಆಮದು ಮಾಡಿಕೊಂಡ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡಿದ್ದ. ಅಲ್ಲದೇ ಬಾಬಾ ಸಿದ್ದಿಕಿ ಹತ್ಯೆಗೆ ಬಳಸಲಾಗಿದ್ದ ಟರ್ಕಿ ನಿರ್ಮಿತ ಟಿಟಾಸ್‌ ಪಿಸ್ತೂಲ್‌ ಮತ್ತು ಗ್ಲೋಕ್‌ ಬಂದೂಕು ಒದಗಿಸಿದ್ದು ಇವನೇ ಎಂಬ ಆರೋಪ ಇದೆ.

  • ಬಿಷ್ಣೋಯ್‌ ಗ್ಯಾಂಗ್‌ ಹಿಟ್‌ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್‌ ಕೊಲೆ ಆರೋಪಿ ಅಫ್ತಾಬ್‌

    ಬಿಷ್ಣೋಯ್‌ ಗ್ಯಾಂಗ್‌ ಹಿಟ್‌ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್‌ ಕೊಲೆ ಆರೋಪಿ ಅಫ್ತಾಬ್‌

    ನವದೆಹಲಿ: 2022 ರಲ್ಲಿ ತನ್ನ ಲಿವ್ ಇನ್ ಪಾಲುದಾರ ಶ್ರದ್ಧಾ ವಾಕರ್ (Shraddha Walkar) ಅವರನ್ನು ಕೊಲೆ ಮಾಡಿದ ಆರೋಪಿ ಅಫ್ತಾಬ್ ಪೂನಾವಾಲಾ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ (Lawrence Bishnoi Gang) ಹಿಟ್ ಲಿಸ್ಟ್‌ನಲ್ಲಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳು ಹೇಳಿವೆ. ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರ ಹತ್ಯೆಯ ತನಿಖೆಯ ಸಮಯದಲ್ಲಿ ಈ ಮಾಹಿತಿ ಹೊರ ಬಂದಿದೆ.

    ಸದ್ಯ ತಿಹಾರ್ ಜೈಲಿನಲ್ಲಿರುವ ಆರೋಪಿ ಅಫ್ತಾಬ್ ಪೂನಾವಾಲಾ (Aftab Poonawalla) ಕೊಠಡಿಯ ಸುತ್ತ ಭದ್ರತೆಯನ್ನು ಹೆಚ್ಚಿಸಿದೆ ಎಂದು ವರದಿಯಾಗಿದೆ. ಆದರೆ ಮುಂಬೈ ಪೊಲೀಸರಿಂದ ತಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಪತ್ನಿಯ ಜೊತೆಗಿನ ಸಮ್ಮತಿಯ ಲೈಂಗಿಕ ಕ್ರಿಯೆ ಅತ್ಯಾಚಾರಕ್ಕೆ ಸಮ – ಬಾಂಬೆ ಹೈಕೋರ್ಟ್

    ದೆಹಲಿಯಲ್ಲಿ 27 ವರ್ಷದ ಶ್ರದ್ಧಾ ವಾಕರ್ ಅವರನ್ನು ಕತ್ತು ಹಿಸುಕಿ, ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅಫ್ತಾಬ್ ಪೂನಾವಾಲಾ ಕೊಲೆ ಮಾಡಿದ್ದ. ಶ್ರದ್ಧಾ ಮದುವೆಯಾಗುವಂತೆ ಒತ್ತಡ ಹೇರಿದ ನಂತರ ಆರೋಪಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ಭಯಾನಕ ಘಟನೆಯು ದೇಶಾದ್ಯಂತ ಆಘಾತ ಮೂಡಿಸಿತ್ತು.

    ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂಲಗಳ ಪ್ರಕಾರ, ಬಿಷ್ಣೋಯ್ ಗ್ಯಾಂಗ್ ತನ್ನ ಅಪರಾಧ ಚಟುವಟಿಕೆಗಳ ಭಾಗವಾಗಿ ಹಲವಾರು ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡಿದೆ. ಇದು ಸೇಡು ಮತ್ತು ಪೈಪೋಟಿಯಿಂದ ಪ್ರೇರೇಪಿಸಲ್ಪಟ್ಟಿದೆ. ಅವರ ಪ್ರಾಥಮಿಕ ಗುರಿಗಳಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಸೇರಿದ್ದಾರೆ. ಇದನ್ನೂ ಓದಿ: ಡೆಹ್ರಾಡೂನ್‌ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ವಿದ್ಯಾರ್ಥಿಗಳು ಬಲಿ

    ಇನ್ನು ಅಫ್ತಾಬ್ ಜೊತೆಗೆ ಹಿಟ್ ಲಿಸ್ಟ್‌ನಲ್ಲಿರುವ ಇತರರಲ್ಲಿ ಬಿಷ್ಣೋಯ್ ಗ್ಯಾಂಗ್‌ನಿಂದ ಹತ್ಯೆಗೀಡಾದ ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಅವರ ಮ್ಯಾನೇಜರ್ ಶಗನ್‌ಪ್ರೀತ್ ಸಿಂಗ್ ಸೇರಿದ್ದಾರೆ. ಪ್ರಸ್ತುತ ಗುರುಗ್ರಾಮ್‌ನಲ್ಲಿ ಜೈಲಿನಲ್ಲಿರುವ ದರೋಡೆಕೋರ ಕೌಶಲ್ ಚೌಧರಿ ಮತ್ತು ಪ್ರತಿಸ್ಪರ್ಧಿ ದರೋಡೆಕೋರ ಅಮಿತ್ ದಾಗರ್ ಕೂಡ ಬಿಷ್ಣೋಯಿ ತನ್ನ ಶತ್ರುಗಳ ಲಿಸ್ಟ್‌ನಲ್ಲಿ ಇಟ್ಟುಕೊಂಡಿದೆ.

  • ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್‌ – ಬಿಷ್ಣೋಯ್‌ ಗ್ಯಾಂಗ್‌ ಜೊತೆ ನಂಟು ಸಾಬೀತು!

    ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್‌ – ಬಿಷ್ಣೋಯ್‌ ಗ್ಯಾಂಗ್‌ ಜೊತೆ ನಂಟು ಸಾಬೀತು!

    – ನೇಪಾಳಕ್ಕೆ ಎಸ್ಕೇಪ್‌ ಆಗಲು ಪ್ಲ್ಯಾನ್‌ ಮಾಡಿದ್ದ ಆರೋಪಿ

    ಲಕ್ನೋ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣ ಪ್ರಮುಖ ಆರೋಪಿ ಹಾಗೂ ಆರೋಪಿಗೆ ಆಶ್ರಯ ನೀಡಿದ್ದ ಇತರ ನಾಲ್ವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿವಕುಮಾರ್‌ (Shivakumar) ಎಂದು ಗುರುತಿಸಲಾಗಿದೆ.

    ಸಿದ್ದಿಕಿ ಹತ್ಯೆ ಬಳಿಕ ಪರಾರಿಯಾಗಿದ್ದ ಪ್ರಮುಖ ಆರೋಪಿ ನೇಪಾಳಕ್ಕೆ (Nepal) ಪಲಾಯನ ಮಾಡಲು ಪ್ಲ್ಯಾನ್‌ ಮಾಡಿಕೊಂಡಿದ್ದ. ಅಷ್ಟರಲ್ಲಿ ಪ್ರಕರಣದ ತನಿಖೆ ನಡೆಸುತ್ತಿದ್ದ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (UP STF) ಹಾಗೂ ಮುಂಬೈ ಅಪರಾಧ ವಿಭಾಗದ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

    ಅ.12 ರಂದು, ಬಾಂದ್ರಾದಲ್ಲಿರುವ ಪುತ್ರ ಶಾಸಕ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಸಿದ್ದಿಕಿ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿತ್ತು. ಸಿದ್ದಿಕಿ ಹತ್ಯೆಗೆ 9.9 ಎಂಎಂ ಪಿಸ್ತೂಲ್‌ ಬಳಸಲಾಗಿತ್ತು, ಒಟ್ಟು 6 ಸುತ್ತುಗಳಲ್ಲಿ ಗುಂಡು ಹಾರಿಸಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಯುಪಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಭಾನುವಾರ ಪ್ರಮುಖ ಆರೋಪಿ ಹಾಗೂ ಆರೋಪಿ ನೇಪಾಳಕ್ಕೆ ಪರಾರಿಯಾಗಲು ಸಹಕರಿಸಿದ್ದ ಇತರ ನಾಲ್ವರನ್ನು ಬಂಧಿಸಲಾಗಿದೆ.

    ಬಳಿಕ ವಿಚಾರಣೆ ವೇಳೆ ಆರೋಪಿ ಶಿವಕುಮಾರ್‌ ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ ಜೊತೆ ಸಂಬಂಧ ಇದೆ. ಲಾರೆನ್ಸ್ ಬಿಷ್ಣೋಯ್‌ನ ಸಹೋದರ ಅನ್ಮೋಲ್ ಬಿಷ್ಣೋಯ್‌ನ ಸೂಚನೆಯ ಮೇರೆಗೆ ಕೊಲೆ ಮಾಡಲಾಗಿದೆ. ಲಾರೆನ್ಸ್‌ನ ಆಪ್ತ ಸಹಾಯಕನಾಗಿದ್ದ ಶುಭಂ ಲೋಂಕರ್ ಎಂಬುವವನು ಅನ್ಮೋಲ್ ಬಿಷ್ಣೋಯ್ ಜೊತೆಗೆ ಸಂಪರ್ಕ ಸಾಧಿಸಲು ಸಕರಿಸಿದ್ದ ಎಂಬುದಾಗಿಯೂ ಒಪ್ಪಿಕೊಂಡಿದ್ದಾನೆ. ಬಾಬಾ ಸಿದ್ದಿಕಿ ಹತ್ಯೆ ನಡೆದ ಒಂದು ದಿನದ ನಂತರ ಗ್ಯಾಂಗ್‌ನ ಸದಸ್ಯರೊಬ್ಬರು ಹತ್ಯೆ ಹೊಣೆ ಹೊತ್ತುಕೊಂಡಿದ್ದರು.

    ಬಾಬಾ ಸಿದ್ದಿಕಿ ಹತ್ಯೆಯ ಆರೋಪಿಗಳಾದ ಮೂವರು ಶೂಟರ್‌ಗಳು ಮುಂಬೈನ ಕುರ್ಲಾ ಪ್ರದೇಶದಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು. ಈ ವೇಳೆ ಯೂಟ್ಯೂಬ್‌ನಲ್ಲಿ ಟ್ಯುಟೋರಿಯಲ್‌ ವೀಡಿಯೊಗಳನ್ನು ನೋಡಿ ಬಂದೂಕುಗಳನ್ನು ಹೇಗೆ ಬಳಸಬೇಕೆಂದು ಕಲಿತಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಆರೋಪಿಗಳು ಸುಮಾರು 4 ವಾರಗಳ ಕಾಲ ಅಂತಹ ವೀಡಿಯೊಗಳನ್ನು ವೀಕ್ಷಿಸಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿತ್ತು.

  • ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ – ಬಿಷ್ಣೋಯ್‌ ಗ್ಯಾಂಗ್‌ನಿಂದ 5 ಕೋಟಿಗೆ ಬೇಡಿಕೆ

    ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ – ಬಿಷ್ಣೋಯ್‌ ಗ್ಯಾಂಗ್‌ನಿಂದ 5 ಕೋಟಿಗೆ ಬೇಡಿಕೆ

    ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ (Salman Khan) ಮತ್ತೊಂದು ಜೀವ ಬೆದರಿಕೆ ಕರೆ ಬಂದಿದೆ. ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನಿಂದ ಮುಂಬೈ ಪೊಲೀಸರಿಗೆ ಕೊಲೆ ಬೆದರಿಕೆಯ ಸಂದೇಶ ಬಂದಿದೆ.

    ಗುರುವಾರ ರಾತ್ರಿ ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಂದೇಶ ಕಳುಹಿಸಿದವರು ನಟನಿಗೆ ಬೆದರಿಕೆ ಹಾಕಿ 5 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಇದನ್ನು ಬಿಷ್ಣೋಯ್ ಗ್ಯಾಂಗ್ ಪರವಾಗಿ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಇದಲ್ಲದೆ, ವ್ಯಕ್ತಿಯು ‘ಮೈ ಸಿಕಂದರ್ ಹೂನ್’ ಹಾಡಿನ ಗೀತರಚನೆಕಾರನಿಗೂ ಬೆದರಿಕೆ ಹಾಕಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

    ಸಂಚಾರ ಅಧಿಕಾರಿಗಳ ದೂರಿನ ಮೇರೆಗೆ ವರ್ಲಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಕಳೆದ ಕೆಲವು ವಾರಗಳಲ್ಲಿ, ಟ್ರಾಫಿಕ್ ಪೊಲೀಸ್ ಸಹಾಯವಾಣಿಗೆ ಸಲ್ಮಾನ್ ಖಾನ್‌ಗೆ ಹಲವು ಬೆದರಿಕೆ ಸಂದೇಶಗಳು ಬಂದಿವೆ. ಈ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಖಾನ್‌ಗೆ ಜೀವ ಬೆದರಿಕೆ ಇತ್ತು.

    ಕೊಲೆ ಯತ್ನ ಮತ್ತು ಸುಲಿಗೆ ಸೇರಿದಂತೆ ಪ್ರಕರಣಗಳಲ್ಲಿ ಬಿಷ್ಣೋಯ್ ಸ್ವತಃ ಅಹಮದಾಬಾದ್‌ನ ಸಾಬರಮತಿ ಜೈಲಿನಲ್ಲಿದ್ದರೆ, ಆತನ ತಂಡದ ಶಂಕಿತ ಸದಸ್ಯರು ಏಪ್ರಿಲ್‌ನಲ್ಲಿ ನಟನ ಬಾಂದ್ರಾ ಮನೆಯ ಹೊರಗೆ ಗುಂಡು ಹಾರಿಸಿದ್ದು.

  • Mumbai | ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ ಸಹೋದರನನ್ನು ಭಾರತಕ್ಕೆ ಕರೆತರಲು ತಯಾರಿ ಶುರು

    Mumbai | ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ ಸಹೋದರನನ್ನು ಭಾರತಕ್ಕೆ ಕರೆತರಲು ತಯಾರಿ ಶುರು

    – ಸಿದ್ದಿಕಿ ಹತ್ಯೆಗೆ ಟರ್ಕಿ ನಿರ್ಮಿತ ಟಿಟಾಸ್‌ ಪಿಸ್ತೂಲ್‌ ಪೂರೈಸಿದ್ದ ಅನ್ಮೋಲ್‌

    ಮುಂಬೈ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಹಾಗೂ ನಟ ಸಲ್ಮಾನ್‌ ಖಾನ್‌ ಅವರ ಬಾಂದ್ರಾ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್ ಬಿಷ್ಣೋಯ್‌ನನ್ನ (Anmol Bishnoi) ಅಮೆರಿಕದಿಂದ ಕರೆತರಲು ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ (Mumbai Crime Branch) ವಿಭಾಗವು ಹಸ್ತಾಂತರ ಪ್ರಕ್ರಿಯೆ ಪ್ರಾರಂಭಿಸಿದೆ.

    ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (MCOCA) ಪ್ರಕರಣಗಳ ವಿಶೇಷ ನ್ಯಾಯಾಲಯವು ಅನ್ಮೋಲ್ ಬಿಷ್ಣೋಯ್ ಬಂಧನಕ್ಕೆ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಆದ್ರೆ ಔಪಚಾರಿಕವಾಗಿ ಪ್ರಕ್ರಿಯೆ ಪೂರ್ಣಗೊಳಿಸಲು ನ್ಯಾಯಾಲಯದ ಕೆಲವು ದಾಖಲೆಗಳಿಗಾಗಿ ನಾವು ಕಾಯುತ್ತಿದ್ದೇವೆ. ನಂತರ ಮುಂದಿನ ಕ್ರಮಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮುಂಬೈ ಪೊಲೀಸ್ ಮೂಲಗಳು ತಿಳಿಸಿವೆ.

    ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಖಲಿಸಿದ ಎರಡು ಪ್ರಕರಣಗಳು ಮತ್ತು ಇತರ 18 ಪ್ರಕರಣಗಳಲ್ಲಿ ಕ್ರಿಮಿನಲ್‌ ಆರೋಪ ಎದುರಿಸುತ್ತಿದ್ದಾನೆ. ಇತ್ತೀಚೆಗಷ್ಟೇ ಎನ್‌ಐಎ ಅನ್ಮೋಲ್ ಬಿಷ್ಣೋಯ್ ಬಂಧನಕ್ಕೆ ಸಹಕಾರಿಯಾಗುವ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು. ಇದನ್ನೂ ಓದಿ: ಸ್ನೇಹಿತ ಅಂತ ನಂಬಿ ಮೊಬೈಲ್‌ ಕೊಟ್ಟ ಮಹಿಳೆ – ಆಕೆಯ ಬೆತ್ತಲೆ ವೀಡಿಯೋ ರೆಕಾರ್ಡ್‌ ಮಾಡಿ ಬ್ಲ್ಯಾಕ್‌ಮೇಲ್‌

    ಮುಂಬೈ ಪೊಲೀಸ್‌ ಮೂಲಗಳ ಪ್ರಕಾರ, ಅನ್ಮೋಲ್‌ ಬಿಷ್ಣೋಯ್‌ ಅಮೆರಿಕದಲ್ಲಿ ಇರುವುದಾಗಿ ತನಿಖಾ ಏಜೆನ್ಸಿ ಅಧಿಕಾರಿಗಳು ಭಾರತೀಯ ಅಧಿಕಾರಿಗಳಿಗೆ ಖಚಿತಪಡಿಸಿದ್ದಾರೆ. ಈ ನಡುವೆ ಅನ್ಮೋಲ್‌ ಕೆನಡಾದಲ್ಲಿ ನೆಲೆಸಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: US Election 2024 | ಮತ ಎಣಿಕೆ ಯಾವಾಗ? ಸಂಖ್ಯೆ 270ಕ್ಕೆ ಯಾಕೆ ಮಹತ್ವ?

    ಸಿಧು ಮೂಸೆವಾಲಾ ಹತ್ಯೆ ಹಿಂದಿದ್ದ ಅನ್ಮೋಲ್‌:
    18 ಪ್ರಕರಣಗಳಲ್ಲಿ ಆರೋಪಿ ಆಗಿರುವ ಅನ್ಮೋಲ್‌ ಸಿಧು ಮೂಸೆವಾಲಾ ಹತ್ಯೆ ಕೇಸ್‌ನಲ್ಲೂ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಈತ ಮೂಸೆವಾಲಾ ಹತ್ಯೆಗೆ ಆಮದು ಮಾಡಿಕೊಂಡ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡಿದ್ದ. ಅಲ್ಲದೇ ಬಾಬಾ ಸಿದ್ದಿಕಿ ಹತ್ಯೆಗೆ ಬಳಸಲಾಗಿದ್ದ ಟರ್ಕಿ ನಿರ್ಮಿತ ಟಿಟಾಸ್‌ ಪಿಸ್ತೂಲ್‌ ಮತ್ತು ಗ್ಲೋಕ್‌ ಬಂದೂಕು ಒದಗಿಸಿದ್ದೂ ಇವನೇ ಎಂಬ ಆರೋಪ ಇದೆ.