Tag: ಲಾಲ್ ಸಿಂಗ್ ಚಡ್ಡಾ

  • ಕರೀನಾ ಕಪೂರ್- ಆಮೀರ್ ಖಾನ್ ಫನ್ನಿ ವಿಡಿಯೋ ವೈರಲ್

    ಕರೀನಾ ಕಪೂರ್- ಆಮೀರ್ ಖಾನ್ ಫನ್ನಿ ವಿಡಿಯೋ ವೈರಲ್

    ಬಾಲಿವುಡ್‌ನಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಕರೀನಾ ಕಪೂರ್ ಮತ್ತು ಆಮೀರ್ ಖಾನ್ ಜೋಡಿ ಮೋಡಿ ಮಾಡಿದ್ದಾರೆ. ʻಲಾಲ್ ಸಿಂಗ್ ಚಡ್ಡಾʼ ಸಿನಿಮಾಗಾಗಿ ಮತ್ತೆ ಒಂದಾಗಿರೋ ಈ ಜೋಡಿ, ಫನ್ನಿ ವಿಡಿಯೋ ಮೂಲಕ ಸಿನಿಪ್ರಿಯರ ಗಮನ ಸೆಳೆದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸುತ್ತಿದೆ.

    ಹಲವಾರು ವಿಚಾರಗಳಿಂದ ಅಟ್ರಾಕ್ಟ್ ಮಾಡ್ತಿರೋ `ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಇದೇ ಆಗಸ್ಟ್ 11ಕ್ಕೆ ತೆರೆಗೆ ಅಪ್ಪಳಿಸುತ್ತಿದೆ. ಚಿತ್ರದ ಪ್ರಚಾರದಲ್ಲಿ ಬ್ಯುಸಿಯಿರೋ ಕರೀನಾ ಕಪೂರ್ ಮತ್ತು ಆಮೀರ್ ಖಾನ್ ಜೋಡಿ ಈಗ ಡಿಫಪರೆಂಟ್ ಆಗಿ ಸಿನಿಮಾ ಪ್ರಚಾರ ಮಾಡ್ತಿದ್ದಾರೆ. ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ. ಜತೆಗೆ ಸೋಷಿಯಲ್ ಮೀಡಿಯಾದಲ್ಲಿ ಹೊಸ ಫಿಲ್ಟರ್‌ನ್ನು ಕೂಡ ಪರಿಚಯ ಮಾಡಲಾಗಿದೆ. ಅದಕ್ಕಾಗಿ ʻಲಾಲ್ ಸಿಂಗ್ ಚಡ್ಡಾʼ ಜೋಡಿ ಒಟ್ಟಿಗೆ ವಿಡಿಯೋ ಮಾಡಿ ಇಂಟರ್‌ನೆಟ್‌ನಲ್ಲಿ ಹರಿಬಿಟ್ಟಿದ್ದಾರೆ.

    ಕರೀನಾ ಮತ್ತು ಆಮೀರ್ ಹೊಸ ಫಿಲ್ಟರ್‌ನಲ್ಲಿ ಫನ್ನಿಯಾಗಿ ವಿಡಿಯೋ ಮಾಡಿ ಸಿನಿರಸಿಕರ ಗಮನ ಸೆಳೆದಿದ್ದಾರೆ. ನನ್ನ ಹೀರೋ ಜತೆ ಫೆದರ್ ಚಾಲೆಂಜ್ ಎಂದು ಕ್ಯಾಪ್ಷನ್ ಕೊಟ್ಟು ಕರೀನಾ ಫನ್ನಿ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅನೇಕ ಸೆಲೆಬ್ರೆಟಿಗಳು ಈ ಹೊಸ ಫಿಲ್ಟರ್‌ನ್ನು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ʻಲಾಲ್ ಸಿಂಗ್ ಚಡ್ಡಾʼ ಪ್ರಚಾರ ಶುರುವಾಗಿದೆ. ಇದನ್ನೂ ಓದಿ: ಜಾನ್ವಿ ಕಪೂರ್ ಡ್ಯಾನ್ಸ್‌ಗೆ ಫ್ಯಾನ್ಸ್ ಫಿದಾ: ಶ್ರೀದೇವಿಗೆ ಹೋಲಿಸಿದ ಅಭಿಮಾನಿಗಳು

    ಹಾಲಿವುಡ್‌ನ ಫಾರೆಸ್ಟ್ ಗಂಪ್ ಚಿತ್ರದ ಹಿಂದಿ ರಿಮೇಕ್ ಆಗಿ `ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಮೂಡಿ ಬಂದಿದೆ. ಆಮೀರ್ ಖಾನ್ ನಾಯಕಿಯಾಗಿ ಕರೀನಾ ನಟಿಸಿದ್ದಾರೆ. ಚಿತ್ರದ ಸ್ಪೆಷಲ್ ರೋಲ್‌ನಲ್ಲಿ ಟಾಲಿವುಡ್ ನಟ ನಾಗಚೈತನ್ಯ ಕಾಣಿಸಿಕೊಂಡಿದ್ದಾರೆ. ಇನ್ನು ಆಗಸ್ಟ್ 11ಕ್ಕೆ ಸಿನಿಮಾ ತೆರೆಕಾಣಲಿದೆ. ಚಿತ್ರವನ್ನ ಪ್ರೇಕ್ಷಕ ಪ್ರಭುಗಳು ಅಪ್ಪಿ ಒಪ್ಪಿಕೊಳ್ತಾರಾ ಅಂತಾ ಕಾದುನೋಡಬೇಕಿದೆ.

  • ಕರೀನಾ, ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್

    ಕರೀನಾ, ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್

    ಮುಂಬೈ: ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಮತ್ತು ಅವರ ಸ್ನೇಹಿತೆ ಅಮೃತಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಬ್ರಾಹನ್‍ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಈ ಕುರಿತು ಅಧಿಕೃತ ಮಾಹಿತಿಯನ್ನು ನೀಡಿದೆ.

    ಕರೀನಾ ಕಪೂರ್ ಖಾನ್ ಮತ್ತು ಅಮೃತಾ ಅರೋರಾ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಇಬ್ಬರೂ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಹಲವಾರು ಪಾರ್ಟಿಗಳಲ್ಲಿ ಭಾಗವಹಿಸಿದ್ದರು. ಇಬ್ಬರು ನಟಿಯರ ಸಂಪರ್ಕಕ್ಕೆ ಬಂದವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗುವಂತೆ ಬಿಎಂಸಿ ಆದೇಶಿಸಿದೆ. ಇದನ್ನೂ ಓದಿ: ‘ಕಭಿ ಖುಷಿ ಕಭಿ ಗಮ್’ ಸೀನ್ ರೀ ಕ್ರಿಯೇಟ್ ಮಾಡಿದ ಆಲಿಯಾ-ರಣವೀರ್

    ಕರೀನಾ ಮತ್ತು ಅಮೃತಾ ಈ ಕುರಿತು ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಆದರೆ ಈ ಸುದ್ದಿ ತಿಳಿದ ಅವರ ಅಭಿಮಾನಿಗಳು ಅಮೃತಾ ಮತ್ತು ಕರೀನಾ ಇಬ್ಬರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.

    ಕರೀನಾ ಮತ್ತು ಅಮೃತಾ ಇತ್ತೀಚೆಗೆ ಮುಂಬೈನಲ್ಲಿರುವ ರಿಯಾ ಕಪೂರ್ ಅವರ ಮನೆಯಲ್ಲಿ ಪಾರ್ಟಿಯನ್ನು ಮಾಡಿದ್ದರು. ಈ ವೇಳೆ ಈ ನಟಿಯರು ಕ್ಯಾಮೆರಾಗೆ ಪೋಸ್ ಸಹ ನೀಡಿದ್ದರು. ಅವರೊಂದಿಗೆ ಮಲೈಕಾ ಅರೋರಾ, ಪೂನಂ ದಮಾನಿಯಾ ಮತ್ತು ಮಸಾಬಾ ಗುಪ್ತಾ ಸಹ ಇದ್ದರು.

    ಪ್ರಸ್ತುತ ಕರೀನಾ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಪೋಸ್ಟ್-ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದು, ಅಮೀರ್ ಖಾನ್ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಅದವೈತ್ ಚಂದನ್ ನಿರ್ದೇಶನ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಉಸ್ತುವಾರಿ ಬದಲಾಗದಿದ್ದರೆ ಜನವರಿಯಲ್ಲಿ ಸತ್ಯಾಗ್ರಹ ಆರಂಭಿಸುತ್ತೇನೆ: ಸೋಮಶೇಖರ್ ರೆಡ್ಡಿ

  • ಥಿಯೇಟರ್‌ಗಳಲ್ಲಿ ನಾವು ರಾಜಿಯಾಗಲ್ಲ: ಅಮೀರ್‌ಗೆ ಯಶ್ ಉತ್ತರ

    ಥಿಯೇಟರ್‌ಗಳಲ್ಲಿ ನಾವು ರಾಜಿಯಾಗಲ್ಲ: ಅಮೀರ್‌ಗೆ ಯಶ್ ಉತ್ತರ

    ಬೆಂಗಳೂರು: ಥಿಯೇಟರ್‌ಗಳಲ್ಲಿ ನಾವು ರಾಜೀಯಾಗುವುದಿಲ್ಲ ಎಂದು ರಾಕಿಂಗ್ ಸ್ಟಾರ್ ಯಶ್ ಬಾಲಿವುಡ್ ನಟ ಅಮೀರ್ ಖಾನ್ ಗೆ ಉತ್ತರಿಸಿದ್ದಾರೆ.

    ಕೆಜಿಎಫ್ ಚಾಪ್ಟರ್-2 ರಿಲೀಸ್ ದಿನವೇ `ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಸಹ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆ ಅಮೀರ್ ಖಾನ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಯಶ್ ಅವರನ್ನು ಟೆಕ್ಸ್ಟ್ ಮೆಸೇಜ್ ನಲ್ಲಿ ಕ್ಷಮೆ ಕೇಳಿಕೊಂಡಿದ್ದರು.

    ಅದಕ್ಕೆ ಪ್ರತಿಕ್ರಿಯಿಸಿದ ಯಶ್, ಅಮೀರ್ ಜೀ ನಿಮ್ಮ ಅನಿವಾರ್ಯತೆ ನಮಗೆ ಅರ್ಥವಾಗುತ್ತೆ. ಪರವಾಗಿಲ್ಲ ನೀವೂ ಅಂದೇ ಸಿನಿಮಾವನ್ನು ರಿಲೀಸ್ ಮಾಡಬಹುದು. ನೀವು ಬಾಲಿವುಡ್‍ಗೆ ಹಿರಿಯರು. ನಿಮ್ಮ ಕೋರಿಕೆಯನ್ನು ತಿರಸ್ಕರಿಸಲಾಗದು. ಆದರೆ ಥಿಯೇಟರ್‍ಗಳಲ್ಲಿ ನಾವು ರಾಜಿಯಾಗುವುದಿಲ್ಲ. ನಮ್ಮ ನಿರ್ಮಾಪಕರಿಗೂ ಕಷ್ಟವಾಗಬಾರದಲ್ಲವೇ? ನಮ್ಮ ಹಂಚಿಕೆದಾರರ ಜೊತೆ ಈ ಬಗ್ಗೆ ಒಂದು ಸಲ ಮಾತನಾಡುತ್ತೇನೆ. ನಿಮ್ಮ ಬೆಂಬಲಕ್ಕೆ ನಾನಿರುತ್ತೇನೆ. ನೀವು ಸಹಕರಿಸಿ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಯಶ್‌, ಪ್ರಶಾಂತ್‌ ನೀಲ್‌ ಬಳಿ ಕ್ಷಮೆ ಕೇಳಿದ ಅಮೀರ್‌ ಖಾನ್‌

    ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅಮೀರ್ ನಾನು ಬೇರೆಯವರನ್ನು ಅತಿಕ್ರಮಿಸಿಕೊಳ್ಳುತ್ತಿದ್ದೇನೆ ಎಂಬ ಭಾವನೆ ಸೃಷ್ಟಿ ಆಗುವುದನ್ನು ದ್ವೇಷಿಸ್ತೇನೆ. ಆದರೆ ನಾನು ಮೊದಲ ಬಾರಿಗೆ ಸಿಖ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕಾರಣ ಏಪ್ರಿಲ್ 14ರಂದು ಬೈಸಾಖಿ ದಿನ ಸಿನಿಮಾ ರಿಲೀಸ್ ಮಾಡುವುದು ಸೂಕ್ತ ಎಂದು ಭಾವಿಸಿದ್ದೆ. ಹೀಗಾಗಿ ನಾನು ಕೆಜಿಎಫ್ ನಿರ್ಮಾಪಕ, ನಿರ್ದೇಶಕ ಮತ್ತು ಯಶ್ ಅವರಲ್ಲಿ ಕ್ಷಮೆ ಕೇಳಿದ್ದೇನೆ ಎಂದಿದ್ದರು.

    ಬೈಸಾಖಿ ದಿನ ನನ್ನ ಸಿನಿಮಾ ಬಿಡುಗಡೆಯಾದರೆ ಸೂಕ್ತ ಎಂದು ಅವರಿಗೆ ತಿಳಿಸಿದೆ. ಅವರು ನನ್ನ ಅಭಿಪ್ರಾಯವನ್ನು ಒಪ್ಪಿಕೊಂಡರು. ಅವರ ಸಿನಿಮಾ ರಿಲೀಸ್ ಇದ್ದರೂ ಅದೇ ನೀವು ಸಿನಿಮಾ ಬಿಡುಗಡೆ ಮಾಡಿ ಎಂದು ನನಗೆ ಹೇಳಿದರು. ಅವರ ಸ್ಪಂದನೆ ನನಗೆ ಇಷ್ಟ ಆಯಿತು. ನನ್ನ ಯೋಚನೆಗೆ ಯಶ್ ತುಂಬಾನೇ ಬೆಂಬಲವಾಗಿ ನಿಂತರು ಎಂದು ಅಮೀರ್ ಹೇಳಿಕೊಂಡಿದ್ದರು. ಇದನ್ನೂ ಓದಿ:  ಅಭಿಮಾನಿಯಿಂದ ಅಪ್ಪುಗೆ ಅಯ್ಯಪ್ಪನ ದರ್ಶನ

  • ಕೆಜಿಎಫ್ 2, ಲಾಲ್ ಸಿಂಗ್ ಚಡ್ಡಾ ಒಂದೇ ದಿನ ರಿಲೀಸ್

    ಕೆಜಿಎಫ್ 2, ಲಾಲ್ ಸಿಂಗ್ ಚಡ್ಡಾ ಒಂದೇ ದಿನ ರಿಲೀಸ್

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹು ನೀರಿಕ್ಷತ ಸಿನಿಮಾ ಕೆಜಿಎಫ್ 2 ಹಾಗೂ ಬಾಲಿವುಡ್ ನಟ ಅಮೀರ್ ಖಾನ್ ಅವರ ಲಾಲ್ ಸಿಂಗ್ ಚಡ್ಡಾ ಸಿನಿಮಾ ಒಂದೇ ದಿನ ತೆರೆ ಮೇಲೆ ಬರುತ್ತವೆ ಎನ್ನುವ ಮೂಲಕವಾಗಿ ಸುದ್ದಿಯಾಗಿದೆ.

    ಕೆಜಿಎಫ್ 2 ಚಿತ್ರ ಮತ್ತು ಲಾಲ್ ಸಿಂಗ್ ಚಡ್ಡಾ ಚಿತ್ರಗಳು ಒಂದೇ ದಿನ ಬಿಡುಗಡೆ ಆಗುತ್ತಿದ್ದು, ಎರಡೂ ಚಿತ್ರಗಳ ನಡುವೆ ಪೈ ಪೋಟಿ ಆಗುವುದು ನಿಸ್ಛಯವಾಗಿದೆ. ಕೆಜಿಎಫ್ 2, ಲಾಲ್ ಸಿಂಗ್ ಚಡ್ಡಾ ಸಿನಿಮಾ ರಿಲೀಸ್ ಆಗಲಿರುವುದು ವಿಶೇಷ. ಮುಂದಿನ ವರ್ಷ ಏಪ್ರಿಲ್ 14 ರಂದು ತೆರೆ ಮೇಲೆ ಬರುವುದಾಗಿ 2 ಸಿನಿಮಾ ತಂಡಗಳು ಘೋಷಿಸಿದೆ. ಇದನ್ನೂ ಓದಿ: ಕಾರವಾರ ಕಡಲತೀರದಲ್ಲಿ ಅಪರೂಪದ ಗ್ರೀನ್ ಸೀ ಆಮೆ ಕಳೇಬರ ಪತ್ತೆ

    ದೊಡ್ಡ ಸ್ಟಾರ್ ನಟರ ಚಿತ್ರಗಳು ಒಟ್ಟಿಗೆ ಬಿಡುಗಡೆ ಆಗುವುದು ದೊಡ್ಡ ವಿಷಯವೇನಲ್ಲ. ಕೆಲವೊಮ್ಮೆ ಜೊತೆ ಜೊತೆಯಲ್ಲೇ ಬಿಡುಗಡೆ ಆದ ಎರಡು ದೊಡ್ಡ ಚಿತ್ರಗಳೂ ದೊಡ್ಡ ಹಿಟ್ ಆದ ಉದಾಹರಣೆಗಳೂ ಸಾಕಷ್ಟಿವೆ. ಸಿನಿಮಾ ಅಭಿಮಾನಗಳು ಯಾರ ಕೈ ಹಿಡಿಯಲಿದ್ದಾರೆ ಎನ್ನುವದು ಮಾತ್ರ ಮುಂದಿನ ವರ್ಷ ಏಪ್ರಿಲ್ 14 ರಂದು ತಿಳಿಯಲಿದೆ.

    ಕರೀನಾ ಕಪೂರ್ ಅವರು ತಮ್ಮ ಸಿನಿಮಾ ಲಾಲ್ ಸಿಂಗ್ ಚಡ್ಡಾ ಚಿತ್ರದ ಹೊಸ ರಿಲೀಸ್ ದಿನಾಂಕವನ್ನು ಖುಷಿಯಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಈ ಹೊಸ ಪೋಸ್ಟರ್ ಸಹ ಶೇರ್ ಮಾಡಿದ್ದಾರೆ. ಅಮೀರ್ ಖಾನ್ ಅಭಿನಯದ ಈ ಚಿತ್ರ ಬಿಡುಗಡೆ ಆದಾಗ ಉತ್ತರ ಭಾರತದ ಮಾರುಕಟ್ಟೆಗಳಲ್ಲಿ ಪ್ರಮುಖ ಥಿಯೇಟರ್‌ಗಳಿಗೆ ಬರುತ್ತದೆ. ದೊಡ್ಡ ಮಟ್ಟದಲ್ಲಿ ಸುದ್ದಿಯಾದ ಕೆಜಿಎಫ್ ಸಿನಿಮಾ ಕೂಡಾ ಅಂದೇ ತೆರೆ ಮೇಲೆ ಬರಲಿದೆ.

  • ಓಟಿಟಿ ಪ್ರವೇಶಿಸಲು ಸಿದ್ಧರಾದ ನಾಗಚೈತನ್ಯ

    ಓಟಿಟಿ ಪ್ರವೇಶಿಸಲು ಸಿದ್ಧರಾದ ನಾಗಚೈತನ್ಯ

    ಚೆನ್ನೈ: ಟಾಲಿವುಡ್ ನಟ ನಾಗಚೈತನ್ಯ ಓಟಿಟಿ ಕ್ಷೇತ್ರವನ್ನು ಪ್ರವೇಶಿಸಲು ಸಿದ್ಧರಾಗಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.

    ನಾಗಚೈತನ್ಯ ಓಟಿಟಿಯ ವೆಬ್ ಸರಣಿಯಾದ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಲಿದ್ದು, ಈ ವೆಬ್ ಸರಣಿಗೆ ವಿಕ್ರಮ್ ಕೆ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರ ಮುಂದಿನ ವರ್ಷ ಏಪ್ರಿಲ್ ನಲ್ಲಿ ಬಿಡುಗಡೆಯಾಗಲಿದ್ದು, ಈ ಚಿತ್ರದಲ್ಲಿ ನಾಗ ಚೈತನ್ಯ ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಜೊತೆಗೆ ಕಾಣಿಸಿಕೊಂಡಿದ್ದಾರೆ. ಓಟಿಟಿಯಲ್ಲಿ ಇದು ನಾಗಚೈತನ್ಯ ಚೊಚ್ಚಲ ಸಿನಿಮಾವಾಗಿದೆ.

    ಈ ಸರಣಿಯು ಥ್ರಿಲ್ಲರ್ ಆಗಿದ್ದು, ನಾಗಾಚೈತನ್ಯಗೆ ಜೋಡಿಯಾಗಿ ತಮಿಳು ನಟಿ ಪ್ರಿಯಾ ಭವಾನಿ ಶಂಕರ್ ಕಾಣಿಸಿಕೊಳ್ಳಲಿದ್ದಾರೆ. ಈ ಸರಣಿಯಲ್ಲಿ ದಕ್ಷಿಣದ ಹಲವಾರು ಪ್ರಮುಖ ನಟರು ಸಹ ನಟಿಸಲಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಗೆಲ್ಲುವವರೆಗೂ ರಾಜ್ಯ ವಿಧಾನಸಭೆಗೆ ಕಾಲಿಡಲ್ಲ: ಎನ್.ಚಂದ್ರಬಾಬು ನಾಯ್ಡು ಪ್ರತಿಜ್ಞೆ

    ನಾಗಾರ್ಜುನ ಅಕ್ಕಿನೇನಿ ಮತ್ತು ಅವರ ಮಗ ನಾಗ ಚೈತನ್ಯ ಮುಂಬರುವ ‘ಬಂಗಾರರಾಜು’ ಚಿತ್ರದಲ್ಲಿ ಮತ್ತೆ ಒಟ್ಟಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ನಾಗಾರ್ಜುನ ಅವರ ಬ್ಲಾಕ್‍ಬಸ್ಟರ್ ಚಿತ್ರ ‘ಸೊಗ್ಗಾಡೆ ಚಿನ್ನಿ ನಯನ’ದ ಮುಂದುವರಿದ ಭಾಗವಾಗಿ ಈ ಚಿತ್ರವನ್ನು ಮಾಡುತ್ತಿದ್ದು, ಕಲ್ಯಾಣ್ ಕೃಷ್ಣ ನಿರ್ದೇಶಿಸಿದ್ದಾರೆ. ‘ಝೀ ಸ್ಟುಡಿಯೋಸ್’ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ.

    ನಾಗಾರ್ಜುನ ಅವರ ಜೊತೆ ಹಿರಿಯ ನಟಿ ರಮ್ಯಾ ಕೃಷ್ಣ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದು, ‘ಉಪ್ಪೇನ’ ಖ್ಯಾತಿಯ ಕೃತಿ ಶೆಟ್ಟಿ ಈ ಸಿನಿಮಾದಲ್ಲಿ ನಾಗ ಚೈತನ್ಯ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ನಾಗಾರ್ಜುನ ಮತ್ತು ನಾಗ ಚೈತನ್ಯ ಮನಂ, ಪ್ರೇಮಂ ಚಿತ್ರಗಳ ನಂತರ ‘ಬಂಗಾರರಾಜು’ ಸಿನಿಮಾ ಮೂಲಕ ಮತ್ತೊಮ್ಮೆ ತೆರೆ ಹಂಚಿಕೊಳ್ಳಲಿದ್ದು, ಅಕ್ಕಿನೇನಿ ಅಭಿಮಾನಿಗಳ ಪಾಲಿಗೆ ಇದು ವಿಶೇಷ ಸಿನಿಮಾವಾಗಿದೆ. ಈ ಚಿತ್ರಕ್ಕಾಗಿ ಇವರ ಅಭಿಮಾನಿಗಳು ಕಾಯುತ್ತಿದ್ದಾರೆ. ಇದನ್ನೂ ಓದಿ: ಹೆಸರುವಾಸಿಯಾಗಿದ್ದ ಕೇರಳದ ಟೀ ಮಾರಾಟಗಾರ ನಿಧನ

  • 2022ರ ಪ್ರೇಮಿಗಳ ದಿನ ಬರಲಿದೆ ‘ಲಾಲ್ ಸಿಂಗ್ ಚಡ್ಡಾ’

    2022ರ ಪ್ರೇಮಿಗಳ ದಿನ ಬರಲಿದೆ ‘ಲಾಲ್ ಸಿಂಗ್ ಚಡ್ಡಾ’

    ಮುಂಬೈ: ಪ್ರೇಮಿಗಳ ದಿನದಂದು ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ರಿಲೀಸ್ ಮಾಡುವುದಾಗಿ ಎಂದು ಅಮೀರ್ ಖಾನ್ ಪ್ರೊಡಕ್ಷನ್ಸ್ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದೆ.

    ಅಮೀರ್ ಖಾನ್ ಪ್ರೊಡಕ್ಷನ್ಸ್ ಇನ್‍ಸ್ಟಾಗ್ರಾಮ್ ನಲ್ಲಿ, ಅಕ್ಟೋಬರ್ 22 ರಿಂದ ಚಿತ್ರಮಂದಿರಗಳನ್ನು ಮತ್ತೆ ತೆರೆಯಲು ಆಡಳಿತವು ಅವಕಾಶ ನೀಡಿದೆ. ಈ ಕೊರೊನಾ ಸಾಂಕ್ರಾಮಿಕ ರೋಗದ ಪರಿಣಾಮವಾಗಿ ನಮ್ಮ ಸಿನಿಮಾ ರಿಲೀಸ್ ಮಾಡಲು ವಿಳಂಬವಾಗಿದೆ. ನಮ್ಮ ‘ಲಾಲ್ ಸಿಂಗ್ ಚಡ್ಡಾ’ ಈ ಕ್ರಿಸ್‍ಮಸ್‍ನಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗುವುದಿಲ್ಲ. 2022ರ ಫೆ.14 ರಂದು ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತೆ ಎಂದು ಬರೆದು ಪೋಸ್ಟ್ ಮಾಡಿದೆ. ಇದನ್ನೂ ಓದಿ: ಬಾಕ್ಸ್ ಆಫೀಸ್‍ನಲ್ಲಿ ಬಿಗ್ ಫೈಟ್ – ಒಂದೇ ದಿನ ಸ್ಯಾಂಡಲ್‍ವುಡ್‍ನ 2 ಸಿನಿಮಾ ರಿಲೀಸ್

    ಅಮೀರ್ ಖಾನ್ ಪ್ರೊಡಕ್ಷನ್ಸ್ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ರಣವೀರ್ ಸಿಂಗ್ ಇನ್‍ಸ್ಟಾಗ್ರಾಮ್ ನಲ್ಲಿ, ’83’ ಸಿನಿಮಾ ಈ ಕ್ರಿಸ್‍ಮಸ್‍ನಲ್ಲಿ ಚಿತ್ರಮಂದಿರಕ್ಕೆ ಬರಲಿದೆ. ಈ ಸಿನಿಮಾ ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಇವರ ಅಭಿಮಾನಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ.

    ರಣವೀರ್ ನಟನೆಯ ’83’ ಸಿನಿಮಾ ಈ ಜೂನ್‍ನಲ್ಲೇ ಬಿಡುಗಡೆಯಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ತಡವಾಗಿತ್ತು. ಅದು ಅಲ್ಲದೇ ದೊಡ್ಡ ಬಾಲಿವುಡ್ ಎಷ್ಟೋ ಸಿನಿಮಾಗಳು ಓಟಿಟಿ ಪ್ಲಾಟ್‍ಫಾರ್ಮ್‍ಗಳಲ್ಲಿ ಬಿಡುಗಡೆಯಾಯಿತು. ಅದರಲ್ಲಿ ’83’ ಸಿನಿಮಾ ಸಹ ಒಂದಾಗಬೇಕಿತ್ತು. ಆದರೆ ಚಿತ್ರತಂಡ ಲಾಕ್‍ಡೌನ್ ನಂತರ ಚಿತ್ರಮಂದಿರಗಳಲ್ಲೇ ಸಿನಿಮಾ ಬಿಡುಗಡೆ ಮಾಡುವುದಾಗಿ ತಯಾರಕರು ಅಧಿಕೃತವಾಗಿ ಘೋಷಿಸಿದ್ದರು. ಇಂದು ಆ ಮಾತಿನಂತೆ ಬಿಡುಗಡೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಿಕಿನಿ ತೊಟ್ಟು ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿರುವ ಹೆಬ್ಬುಲಿ ಬೆಡಗಿ

     

    View this post on Instagram

     

    A post shared by Ranveer Singh (@ranveersingh)

    ’83’ ಸಿನಿಮಾಗೆ ಕಬೀರ್ ಖಾನ್ ಆಕ್ಷನ್ ಕಟ್ ಹೇಳುತ್ತಿದ್ದು, ಕ್ರಿಕೆಟರ್ ಕಪಿಲ್ ದೇವ್ ದಂತ ಕಥೆಯನ್ನು ಆಧರಿಸಿ ಈ ಚಿತ್ರವನ್ನು ಮಾಡಲಾಗುತ್ತಿದೆ. ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್ ಕಾಣಿಸಿಕೊಳ್ಳುತ್ತಿದ್ದು, ಇದು 1983 ರ ಭಾರತದ ಐತಿಹಾಸಿಕ ವಿಶ್ವಕಪ್ ಗೆಲುವಿನ ಕಥೆಯನ್ನು ಆಧರಿಸಿದೆ. ಕಪಿಲ್ ದೇವ್ ಅವರ ಪತ್ನಿ ರೋಮಿ ಪಾತ್ರದಲ್ಲಿ ರಣವೀರ್ ಪತ್ನಿ ದೀಪಿಕಾ ಪಡುಕೋಣೆ ಕಾಣಿಸಿಕೊಳ್ಳಲಿದ್ದಾರೆ.

  • ಅಮೀರ್‌ಗಾಗಿ ‘ಬಚ್ಚನ್ ಪಾಂಡೆ’ ರಿಲೀಸ್ ಡೇಟ್ ಮುಂದೂಡಿದ ಅಕ್ಷಯ್

    ಅಮೀರ್‌ಗಾಗಿ ‘ಬಚ್ಚನ್ ಪಾಂಡೆ’ ರಿಲೀಸ್ ಡೇಟ್ ಮುಂದೂಡಿದ ಅಕ್ಷಯ್

    ಮುಂಬೈ: ಒಂದು ಕಾಲದಲ್ಲಿ ಬಾಲಿವುಡ್ ಆಳುತ್ತಿದ್ದ ಖಾನ್‍ಗಳಲ್ಲಿ ಅಮೀರ್ ಖಾನ್ ಕೂಡ ಒಬ್ಬರು. ಹಿಂದೆ ಯಾವುದೇ ಪ್ರಚಾರವಿಲ್ಲದಿದ್ದರೂ ಬಿಟೌನ್‍ನಲ್ಲಿ ಖಾನ್‍ಗಳ ಸಿನಿಮಾಗಳು ಓಡುತ್ತಿದ್ದವು. ಆದ್ರೆ ಈಗ ಬಿಟೌನ್‍ನಲ್ಲಿ ಖಾನ್‍ಗಳ ಹವಾ ಕೊಂಚ ಕಡಿಮೆಯಾಗಿದ್ದು, ಸಿನಿಮಾ ಯಶಸ್ಸಿಗಾಗಿ ಬೇರೆ ನಟರ ಸಹಾಯ ಕೇಳುವಂತಾಗಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಅಮೀರ್ ಖಾನ್ ಮನವಿ ಮಾಡಿದಕ್ಕೆ ಆ್ಯಕ್ಷನ್ ಕಿಂಗ್ ಅಕ್ಷಯ್ ಕುಮಾರ್ ತಮ್ಮ ಸಿನಿಮಾದ ಬಿಡುಗಡೆ ದಿನಾಂಕವನ್ನೇ ಮುಂದೂಡಿದ್ದಾರೆ.

    ಹೌದು, ಇತ್ತೀಚೆಗೆ ಬಾಲಿವುಡ್‍ನಲ್ಲಿ ಹೆಚ್ಚಾಗುತ್ತಿರುವ ಸ್ಪರ್ಧೆಗೆ ಅಮೀರ್ ತಲೆಕೆಡಿಸಿಕೊಂಡಿದ್ದಾರೆ. ಹೊಸ ವಿಷಯ, ಕ್ರಿಯೇಟಿವ್ ಎಲಿಮೆಂಟ್ ಇರುವ ಸಿನಿಮಾಗಳು ಸದ್ಯ ಬಿಟೌನ್ ಅಂಗಳದಲ್ಲಿ ಸದ್ದು ಮಾಡುತ್ತಿವೆ. ಅದರಲ್ಲೂ ಅಕ್ಷಯ್ ಕುಮಾರ್ ಅವರು ಆರಿಸಿಕೊಳ್ಳುತ್ತಿರುವ ಹೊಸ ಪಾತ್ರಗಳು, ಸಿನಿಮಾ ವಿಷಯ ಎಲ್ಲರ ಮನ ಗೆಲ್ಲುತ್ತಿದೆ. ಹೀಗಾಗಿ ಅಕ್ಷಯ್ ಅವರ ಬಳಿ ಅಮೀರ್ ಒಂದು ಮನವಿ ಮಾಡಿಕೊಂಡಿದ್ದರು. ಈ ವರ್ಷದ ಕ್ರಿಸ್ಮಸ್‍ನಲ್ಲಿ ಅಮೀರ್ ಖಾನ್‍ರ ಬಹುನಿರೀಕ್ಷಿತ ಸಿನಿಮಾ ‘ಲಾಲ್ ಸಿಂಗ್ ಚಡ್ಡಾ’ ಬಿಡುಗಡೆ ಮಾಡಲು ಸಿನಿಮಾ ತಂಡ ತಯಾರಿ ನಡೆಸುತ್ತಿದೆ. ಆದ್ರೆ ಅದೇ ಸಮಯಕ್ಕೆ ಅಕ್ಷಯ್ ಅವರ ‘ಬಚ್ಚನ್ ಪಾಂಡೆ’ ಸಿನಿಮಾದ ಬಿಡುಗಡೆ ದಿನಾಂಕ ಕೂಡ ನಿಗದಿಯಾಗಿತ್ತು.

    https://www.instagram.com/p/B70Ce7LH0Ye/

    ಅಕ್ಷಯ್ ಅವರ ಸಿನಿಮಾ ಬಿಡುಗಡೆಯಾದರೆ ಎಲ್ಲಿ ತಮ್ಮ ಸಿನಿಮಾ ಓಡುವುದಿಲ್ಲವೋ ಎಂದು ಅಮೀರ್ ತಲೆಕೆಡಿಸಿಕೊಂಡಿದ್ದರು. ಹೀಗಾಗಿ ‘ಬಚ್ಚನ್ ಪಾಂಡೆ’ ಸಿನಿಮಾ ಬಿಡುಗಡೆ ಬಗ್ಗೆ ಅಕ್ಷಯ್ ಹಾಗೂ ನಿರ್ದೇಶಕ ಸಾಜಿದ್ ನಾಡಿಯಾದ್‍ವಾಲಾ ಅವರೊಂದಿಗೆ ಅಮೀರ್ ಮಾತನಾಡಿದ್ದರು. ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿದ್ದರು. ಅಮೀರ್ ಅವರ ಮನವಿಯನ್ನು ಗೌರವಿಸಿರುವ ಅಕ್ಷಯ್ ತಮ್ಮ ಸಿನಿಮಾದ ಹೊಸ ಲುಕ್ ಬಿಡುಗಡೆ ಮಾಡಿ ಬಚ್ಚನ್ ಪಾಂಡೆ ಯಾವಾಗ ಬಿಡುಗಡೆ ಆಗುತ್ತೆ ಎನ್ನುವುದನ್ನು ರಿವೀಲ್ ಮಾಡಿದ್ದಾರೆ.

    ಈ ಸಿನಿರಂಗದಲ್ಲಿ ಎಲ್ಲರೂ ಸ್ನೇಹಿತರು ಎಂದು ಹೊಸ ಲುಕ್ ಹಾಗೂ ‘ಬಚ್ಚನ್ ಪಾಂಡೆ’ ಸಿನಿಮಾ ಬಿಡುಗಡೆ ದಿನಾಂಕವನ್ನು ಅಕ್ಷಯ್ ಪ್ರಕಟಿಸಿದ್ದಾರೆ. ‘ಬಚ್ಚನ್ ಪಾಂಡೆ’ ಸಿನಿಮಾ ಈ ವರ್ಷಾಂತ್ಯದ ಬದಲು 2021 ಜನವರಿ 22ಕ್ಕೆ ತೆರೆ ಕಾಣಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಹೊಸ ಪೋಸ್ಟರ್‌ನಲ್ಲಿ ಅಕ್ಷಯ್‍ರ ರಗಡ್ ಲುಕ್‍ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಈ ಟ್ವೀಟ್ ನೋಡಿದ ಬಳಿಕ ಅಮೀರ್ ಅಕ್ಷಯ್ ಹಾಗೂ ಸಾಜಿದ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಕೆಲವೊಮ್ಮೆ ಒಂದೇ ಒಂದು ಮಾತುಕತೆ ಸಾಕು, ಎಲ್ಲ ಸರಿಹೋಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಅಮೀರ್ ಅಭಿನಯದ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಇದೇ ವರ್ಷ ಡಿಸೆಂಬರ್‌ನಲ್ಲಿ ಕ್ರಿಸ್ಮಸ್‍ಗೆ ಬಿಡುಗಡೆ ಆಗಲಿದೆ. ಹಾಲಿವುಡ್‍ನಲ್ಲಿ ಟಾಮ್ ಹ್ಯಾಂಕ್ಸ್ ಅಭಿನಯದ ‘ಫಾರೆಸ್ಟ್ ಗಂಪ್’ ಚಿತ್ರದ ರಿಮೇಕ್ ಇದಾಗಿದ್ದು, ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ.